Tag: Hitler

  • ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ

    ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ

    ಹಾಸನ: ದಬ್ಬಾಳಿಕೆ ರಾಜಕಾರಣ ಒಪ್ಪಲ್ಲ, ಹಿಟ್ಲರ್ ಸಂಸ್ಕೃತಿಯನ್ನು ಹಾಸನದ ಜನರು ಒಪ್ಪುವುದಿಲ್ಲ. ಜೆಡಿಎಸ್(JDS) ಕಾರ್ಯಕರ್ತರ ಸಭೆಗೆ ಪೊಲೀಸ್ ಪ್ರೊಟೆಕ್ಷನ್ ಕೇಳುವ ಸ್ಥಿತಿಗೆ ರೇವಣ್ಣ ಬಂದಿದ್ದಾರೆ ಎಂದರೆ, ಅವರ ಪರಿಸ್ಥಿತಿ ರಾಜಕೀಯವಾಗಿ ಯಾವ ಮಟ್ಟಕ್ಕೆ ಹೋಗಿದೆ ಎಂಬುದನ್ನು ಊಹೆ ಮಾಡಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ(HD Revanna) ಅವರ ವಿರುದ್ಧ ಶಾಸಕ ಪ್ರೀತಂ ಗೌಡ(Preetham Gowda) ವಾಗ್ದಾಳಿ ನಡೆಸಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರನ್ನು ಒಂದು ಸಭೆಯಲ್ಲಿ ರೌಡಿಶೀಟರ್ ಎಂದರು. ಇನ್ನೊಂದು ಸಭೆಯಲ್ಲಿ ಕುಡುಕರು ಎಂದರು. ನಾನು ಬೇರೆ ಪಕ್ಷದ ಕಾರ್ಯಕರ್ತರ ಬಗ್ಗೆ ಮಾತನಾಡುವುದೇ ಇಲ್ಲ. ಆದರೆ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆಯೇ ಆ ತರಹ ಮಾತನಾಡಿದ್ದಾರೆ ಎಂದರು.

    ಜೆಡಿಎಸ್ ಕಾರ್ಯಕರ್ತರ ಸಭೆಗೆ ಪೊಲೀಸ್ ಪ್ರೊಟೆಕ್ಷನ್ ಕೇಳುವ ಸ್ಥಿತಿಗೆ ರೇವಣ್ಣ ಅವರು ಬಂದಿದ್ದಾರೆ ಅಂತ ಹೇಳಿದರೆ, ರೇವಣ್ಣ ಅವರ ಪರಿಸ್ಥಿತಿ ರಾಜಕೀಯವಾಗಿ ಏನಾಗಿದೆ ಅಂತ ಕ್ಷಣಕ್ಕೆ ಊಹೆ ಮಾಡಿ. ನಾನು ನಮ್ಮ ಕಾರ್ಯಕರ್ತರ ಸಭೆ ನಡೆಸಬೇಕಾದರೆ ಪೊಲೀಸರನ್ನು ಕರೆಯುವುದೇ ಇಲ್ಲ. ಗೌಪ್ಯವಾಗಿ ಸಭೆ ಮಾಡುತ್ತೇನೆ. ಅವರ ಕಾರ್ಯಕರ್ತರ ಜೊತೆ ಅವರು ಮಾತನಾಡಲು ಪೊಲೀಸ್ ಪ್ರೊಟೆಕ್ಷನ್ ಬೇಕು ಎಂದರೆ, ಅವರ ಪರಿಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ ಎಂದು ಕುಟುಕಿದರು. ಇದ್ನನೂ ಓದಿ: ಗಣಪತಿ ಡಿಜೆ – ನಿಮ್ಮ ಪುಂಗಿ ಇಲ್ಲಿ ನಡಿಯೋದಿಲ್ಲ, ನೀವು ಪುಂಗಿ ಊದಿದ್ರೆ, ನಾವು ನಮ್ಮ ಪುಂಗಿ ಊದುತ್ತೇವೆ: ಇನ್ಸ್‌ಪೆಕ್ಟರ್‌ ಅವಾಜ್

    ನನ್ನ ಸಭೆಗೆ ನಾನು ಯಾವತ್ತೂ ಪೊಲೀಸರನ್ನು ಕರೆಯುವುದಿಲ್ಲ. ನನ್ನ ಕಾರ್ಯಕರ್ತರ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಕಾರ್ಯಕರ್ತರನ್ನು ನಾವು ಯಾವತ್ತೂ ಕುಡುಕರು, ರೌಡಿಶೀಟರ್ ಅಂತ ಕರೆಯುವುದಿಲ್ಲ. ಸಭೆಯಿಂದ ಎದ್ದು ಹೋಗಿ ಅಂತ ಹೇಳೋದಿಲ್ಲ ಎಂದು ತಿಳಿಸಿದರು.

    ನಮ್ಮ ಐಡಿಯಾಲಜಿಯನ್ನು ಹಾಸನದ ಜನರು ಒಪ್ಪಿದ್ದಾರೆ. ಅವರ ಐಡಿಯಾಲಜಿಯನ್ನು ಹಾಸನದ ಜನ ಒಪ್ಪುವುದಿಲ್ಲ. ಅವರ ಐಡಿಯಾಲಜಿ ಎಂದರೆ ಕಾರ್ಯಕರ್ತರನ್ನು ಎದ್ದು ಹೋಗಿ ಎನ್ನುವುದು, ಕುಡುಕರು, ರೌಡಿಶೀಟರ್ ಎನ್ನುವುದು. ಆ ಐಡಿಯಾಲಜಿಯನ್ನು, ದಬ್ಬಾಳಿಕೆ ರಾಜಕಾರಣವನ್ನು, ಹಿಟ್ಲರ್ ಸಂಸ್ಕೃತಿಯನ್ನು ಹಾಸನದ ಜನ ಒಪ್ಪುವುದಿಲ್ಲ. ಇಲ್ಲಿ ಏನೇ ಇದ್ದರೂ ಗೌರವ ಕೊಟ್ಟು ಗೌರವ ತೆಗೆದುಕೊಳ್ಳುವುದು ಎಂದು ಟೀಕಿಸಿದರು.

    ಸಾಮಾನ್ಯ ಕಾರ್ಯಕರ್ತರನ್ನೂ ನಾನು ಅಣ್ಣ ಎಂದೇ ಮಾತನಾಡಿಸುತ್ತೇನೆ, ಹೋಗಿ ಬನ್ನಿ ಎನ್ನುತ್ತೇನೆ. ನಾನು ಯಾರಿಗೂ ಇಲ್ಲಿಯವರೆಗೆ ಏಕವಚನದಲ್ಲಿ ಮಾತನಾಡಿಸಿಲ್ಲ. ಇನ್ನು ಎದ್ದು ಹೋಗಿ ಎನ್ನುವುದು ದೂರದ ಪ್ರಶ್ನೆ. ಇದೇ ಪ್ರೀತಂ ಗೌಡನಿಗೂ ಮಾನ್ಯ ರೇವಣ್ಣ ಅವರಿಗೂ ಇರುವ ವ್ಯತ್ಯಾಸ ಎಂದು ಹೇಳಿದರು.

    ಹಾಸನದ ಜನರು ಮಾತ್ರ ಕೂಲಿ ಕಾರ್ಮಿಕರಾಗಿ ಇರಬೇಕು, ಇವರು ಮಾತ್ರ ಕಾರಿನಲ್ಲಿ ಓಡಾಡಬೇಕು. ರೈತರ ಭೂಮಿಗೆ ಬೆಲೆ ಬಂದರೆ ಕಾರಿನಲ್ಲಿ ಓಡಾಡುತ್ತಾರೆ. ಇವರು ಮಾತ್ರ ಕಾರಿನಲ್ಲಿ ಓಡಾಡಬೇಕಾ? ನಿಮ್ಮ ಕಾರ್ಯಕರ್ತರೇ ನಿಮ್ಮನ್ನು ತಿರಸ್ಕಾರ ಮಾಡಿದ್ದಾರೆ, ನಾವು ಕಾರ್ಯಕರ್ತರನ್ನು ದೇವರು ಎಂದು ಕರೆಯುತ್ತೇವೆ. 45 ವರ್ಷ ರಾಜಕೀಯ ಮಾಡಿರುವವರು 5 ವರ್ಷ ರಾಜಕೀಯ ಮಾಡಿರೋ ಪ್ರೀತಂ ಗೌಡನ ಬಗ್ಗೆ ಯಾಕೆ ಇಷ್ಟು ತಲೆ ಕೆಡಿಸಿಕೊಳ್ಳುತ್ತಾರೆ? ಆರಾಮಾಗಿ ಇರಲು ಹೇಳಿ ಎಂದು ವ್ಯಂಗ್ಯವಾಡಿದರು. ಇದ್ನನೂ ಓದಿ: ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    Live Tv
    [brid partner=56869869 player=32851 video=960834 autoplay=true]

  • ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ

    ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ

    ಮಾಸ್ಕೋ: ರಷ್ಯಾದ ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೋನ ವಿವಾದಿತ ಹೇಳಿಕೆಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕ್ಷಮೆ ಕೋರಿದ್ದಾರೆ.

    ನಫ್ತಾಲಿ ಬೆನೆಟ್ ಉಕ್ರೇನ್ ಮೇಲಿನ ತಮ್ಮ ಕಾರ್ಯಾಚರಣೆ ಕುರಿತು ವಿವರಿಸುವ ಸಂದರ್ಭ ಹಿಟ್ಲರ್ ಯಹೂದಿ ಪರಂಪರೆಯನ್ನು ಹೊಂದಿದ್ದ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ಸಂಬಂಧ ಹದಗೆಡಬಾರದೆಂದು ಪುಟಿನ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ಸರ್ಗೇಯ್ ಲಾವ್ರೋ ಸಂದರ್ಶನವೊಂದರಲ್ಲಿ ಯುದ್ಧದ ಬಗ್ಗೆ ರಷ್ಯಾದ ನಿಲುವನ್ನು ವಿವರಿಸುತ್ತಿರುವಾಗ ಹಿಟ್ಲರ್‌ನಲ್ಲಿ ಯಹೂದಿಗಳ ರಕ್ತವಿತ್ತು ಎಂದು ವಿವಾದಿತ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಇಸ್ರೇಲ್ ಸೇರಿದಂತೆ ಹಲವಾರು ಪಾಶ್ಚಿಮಾತ್ಯ ದೇಶಗಳು ಲಾವ್ರೋ ಹೇಳಿಕೆಯನ್ನು ಖಂಡಿಸಿದ್ದವು. ಇದನ್ನೂ ಓದಿ: ಟ್ವಿಟ್ಟರ್‌ಗೆ ಎಲಾನ್‌ ಮಸ್ಕ್‌ ತಾತ್ಕಾಲಿಕ CEO?

    ಇಸ್ರೇಲ್ ತನ್ನ 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆನೆಟ್ ಹಾಗೂ ಪುಟಿನ್ ನಡುವೆ ಮಾತುಕತೆ ನಡೆದಿದ್ದು, ಈ ವೇಳೆ ಪುಟಿನ್ ಕ್ಷಮೆ ಕೋರಿದ್ದಾರೆ. ರಷ್ಯಾ ಹಾಗೂ ಇಸ್ರೇಲ್ ಉತ್ತಮ ಸಂಬಂಧ ಹೊಂದಿದ್ದು, ಬೆನೆಟ್ ಮಾಸ್ಕೋ ಪ್ರವಾಸದಲ್ಲಿ ಉಕ್ರೇನ್ ಮೇಲಿನ ಯುದ್ಧವನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

  • ಫೋಟೋಶಾಪ್ ಫೋಟೋ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಮ್ಯಾ

    ಫೋಟೋಶಾಪ್ ಫೋಟೋ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಮ್ಯಾ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ, ಫೋಟೋ ಶಾಪ್ ಮಾಡಿದ್ದಫೋಟೋವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಪ್ರಯತ್ನಿಸಿದ್ದು, ಆದರೆ ನೈಜ ಫೋಟೋವನ್ನು ಟ್ವೀಟ್ ಮಾಡುವ ಮೂಲಕ ನೆಟ್ಟಿಗರು ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

    ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಆದರೆ ಈ ಫೋಟೋದಲ್ಲಿ ಹಿಟ್ಲರ್ ಅವರ ಫೋಟೋವನ್ನು ಫೋಟೋಶಾಪ್ ಮಾಡಲಾಗಿದೆ. ಮಗುವಿನೊಂದಿಗೆ ಇರುವ ಹಿಟ್ಲರ್ ಫೋಟೋವನ್ನು ಮಗುವಿನ ಕಿವಿ ಹಿಂಡುವಂತೆ ಫೋಟೋಶಾಪ್ ಮಾಡಲಾಗಿದೆ. ಇದೇ ರೀತಿ ಮೋದಿ ಅವರ ಪುಟ್ಟ ಬಾಲಕನೊಂದಿಗೆ ಇರುವ ಫೋಟೋಗೆ ಹೋಲಿಕೆ ಮಾಡಿ ನಿಮ್ಮ ಅಭಿಪ್ರಾಯ ಏನು ಎಂದು ಪ್ರಶ್ನಿಸಿ ರಮ್ಯಾ ಟ್ವೀಟ್ ಮಾಡಿದ್ದಾರೆ.

    ರಮ್ಯಾ ಅವರ ಟ್ವೀಟ್‍ಗೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ಹಲವು ಮಂದಿ ಹಿಟ್ಲರ್ ಮಗುವಿನೊಂದಿಗೆ ಇರುವ ಆಸಲಿ ಫೋಟೋ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಫೋಟೋಶಾಪ್ ಮಾಡಿದ ಫೋಟೋವನ್ನು ನೀವು ಟ್ವೀಟ್ ಮಾಡಿದ್ದು, ಆಸಲಿ ಫೋಟೋ ಇಲ್ಲಿದೆ ನೋಡಿ ಎಂದಿದ್ದಾರೆ. ಅಲ್ಲದೇ ಅಪ್ಪು ಎಂಬವರು ರಾಜೀವ್ ಗಾಂಧಿ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಇರುವ ಫೋಟೋವನ್ನು ಹಿಟ್ಲರ್‍ಗೆ ಹೋಲಿಕೆ ಮಾಡಿ ತಿರುಗೇಟು ನೀಡಿದ್ದಾರೆ.

    ಇದೇ ವೇಳೆ ಹಲವರು ರಮ್ಯಾ ಅವರು ವೋಟ್ ಮಾಡದ ಬಗ್ಗೆ ಪ್ರಸ್ತಾಪ ಮಾಡಿ ಕಾಲೆಳೆದಿದ್ದು, ಮೊದಲು ನೀವು ವೋಟ್ ಮಾಡಿ ಮೇಡಂ. ಆ ಬಳಿಕ ಇತರರಿಗೆ ಬುದ್ಧಿ ಹೇಳಿ ಎಂದು ಬರೆದು ತರಾಟೆಗೆ ತೆಗೆದುಕೊಂಡಿದ್ದಾರೆ.

    https://twitter.com/17_appu/status/1122759483891994624

  • ಇಂದಿರಾ ಗಾಂಧಿಯವರನ್ನು ಹಿಟ್ಲರ್ ಗೆ ಹೋಲಿಸಿದ ಅರುಣ್ ಜೇಟ್ಲಿ

    ಇಂದಿರಾ ಗಾಂಧಿಯವರನ್ನು ಹಿಟ್ಲರ್ ಗೆ ಹೋಲಿಸಿದ ಅರುಣ್ ಜೇಟ್ಲಿ

    ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ಸಾಂವಿಧಾನಿಕ ಸರ್ವಾಧಿಕಾರವಾಗಿ ನಿರ್ಮಿಸಿ ಜರ್ಮನಿಯ ಹಿಟ್ಲರ್ ನಂತೆ ಅಧಿಕಾರ ಸಾಧಿಸಿದ್ದರು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.

    1975ರ ಜೂನ್ 25ರಂದು ತುರ್ತು ಪರಿಸ್ಥಿತಿಯ ದಿನಗಳನ್ನು ತಮ್ಮ ಫೇಸ್‍ಬುಕ್ ನಲ್ಲಿ ಸುಧೀರ್ಘವಾಗಿ ಮೂರು ಭಾಗಗಳಲ್ಲಿ ಪ್ರಕಟಿಸುತ್ತಿರುವ ಅವರು ಮೊದಲನೇ ಭಾಗವನ್ನು ಭಾನುವಾರ ಹಾಗೂ ಎರಡನೇ ಭಾಗವನ್ನು ಸೋಮವಾರ ಪ್ರಕಟಗೊಳಿಸಿದ್ದಾರೆ. ಮೂರನೇ ಭಾಗ ಪ್ರಕಟವಾಗಬೇಕಾಗಿದ್ದು, ಇದರಲ್ಲಿನ ಪ್ರಮುಖ ಅಂಶಗಳನ್ನು ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಇಂದಿರಾ ಗಾಂಧಿ ಮತ್ತು ಹಿಟ್ಲರ್ ಸಂವಿಧಾನವನ್ನು ರದ್ದುಗೊಳಿಸಲಿಲ್ಲ. ಅವರು ಪ್ರಜಾಪ್ರಭುತ್ವವನ್ನು ಸರ್ವಾಧಿಕಾರವನ್ನಾಗಿ ರೂಪಿಸಲು ಸಂವಿಧಾನವನ್ನೇ ಬಳಸಿಕೊಂಡಿದ್ದರು ಎಂದು ಉಲ್ಲೇಖಿಸಿದ್ದಾರೆ.

    1975ರ ಜೂನ್ 25ರಂದು ಪ್ರತಿಪಕ್ಷಗಳು ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಸಂಚು ಹೂಡಿವೆ ಎಂದು ವಾದಮಾಡಿ, ಸಂವಿಧಾನದ ವಿಧಿ 352ರ ಅಡಿಯಲ್ಲಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಇದು ಹಿಟ್ಲರ್ ಧೋರಣೆಯ ಅನುಕರಣೆಯಾಗಿತ್ತು. ಹಿಟ್ಲರ್ ತನ್ನ ಅಧಿಕಾರದಲ್ಲಿ ಸಂಸತ್‍ನ ಬಹುತೇಕ ಪ್ರತಿಪಕ್ಷ ನಾಯಕರನ್ನು ಬಂಧಿಸಿ, ಕಡಿಮೆ ಸಂಖ್ಯಾಬಲ ಹೊಂದಿದ್ದ ಸರ್ಕಾರವನ್ನು 2/3 ಬಹುಮತದ ಸರ್ಕಾರವನ್ನಾಗಿ ಪರಿವರ್ತಿಸಿದ್ದು ಇದೇ ರೀತಿ ಇಂದಿರಾ ಗಾಂಧಿಯವರು ಸಂಚು ರೂಪಿಸಿದ್ದರು ಎಂದು ತಮ್ಮ ಬರಹದಲ್ಲಿ ಹೇಳಿಕೊಂಡಿದ್ದಾರೆ.

    ಕಾನೂನಿನಲ್ಲಿ ಬದಲಾವಣೆ ಮಾಡುವ ಮೂಲಕ ಅಮಾನ್ಯ ಚುನಾವಣೆಯನ್ನು ಮಾನ್ಯ ಮಾಡುವುದಕ್ಕೋಸ್ಕರ ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದರು. ಭಾರತವನ್ನು ವಂಶಾಡಳಿತಕ್ಕೆ ಒಳಪಡಿಸಲು ಇಂದಿರಾ ಗಾಂಧಿ ಮುಂದಾಗಿದ್ದರು ಎಂದು ಬರೆದುಕೊಂಡಿದ್ದಾರೆ.

    ತುರ್ತು ಪರಿಸ್ಥಿತಿಯ ವಿರುದ್ಧ ಮೊದಲ ಸತ್ಯಾಗ್ರಹ ನಡೆಸಿದ್ದನ್ನು ನೆನಪಿಸಿಕೊಂಡ ಅವರು 1975ರ ಜೂನ್ 26ರಂದು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪ್ರತಿಭಟನೆಯ ನೇತೃತ್ವವಹಿಸಿಕ್ಕೆ ನನ್ನನ್ನು ತಿಹಾರ್ ಜೈಲಿಗೆ ಅಟ್ಟಿದ್ದರು ಎಂದು ಅವರು ಜ್ಞಾಪಿಸಿಕೊಂಡಿದ್ದಾರೆ.