Tag: HKPatil

  • 4 ಕಾರ್ಯಾಧ್ಯಕ್ಷ ಸ್ಥಾನ ಬೇಡ- ಸಿಎಲ್‍ಪಿ, ವಿಪಕ್ಷ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಸಿದ್ದುಗೆ ಹೆಚ್‍ಕೆಪಿ ಗುದ್ದು

    4 ಕಾರ್ಯಾಧ್ಯಕ್ಷ ಸ್ಥಾನ ಬೇಡ- ಸಿಎಲ್‍ಪಿ, ವಿಪಕ್ಷ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಸಿದ್ದುಗೆ ಹೆಚ್‍ಕೆಪಿ ಗುದ್ದು

    ಬೆಂಗಳೂರು: ಕೆಪಿಸಿಸಿಯಲ್ಲಿ ಕಾರ್ಯಾಧ್ಯಕ್ಷ ಸ್ಥಾನ ಗಲಾಟೆ ಜೋರಾಗಿದೆ. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತು ಪರಮೇಶ್ವರ್ ಬಹಿರಂಗ ವಿರೋಧದ ಬಳಿಕ ಈಗ ಮತ್ತೊಬ್ಬ ಕಾಂಗ್ರೆಸ್ ನಾಯಕ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್.ಕೆ ಪಾಟೀಲ್ 4 ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ಮತ್ತು ವಿಪಕ್ಷ ನಾಯಕನ ಸ್ಥಾನವೂ ಪ್ರತ್ಯೇಕವಾಗಲಿ ಅಂತ ಬಹಿರಂಗವಾಗಿ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಅವಶ್ಯಕತೆ ಇಲ್ಲ. ಯಾಕೆ ನಾಲ್ಕು ಕಾರ್ಯಾಧ್ಯಕ್ಷ ಬೇಕು ಅಂತಿದ್ದಾರೋ ಗೊತ್ತಿಲ್ಲ. ಈಗ ಇರೋ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರಿಸಲಿ. 4 ಕಾರ್ಯಾಧ್ಯಕ್ಷ ಸ್ಥಾನ ಬೇಡವೇ ಬೇಡ ಅಂತ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟರು.

    ಇನ್ನು ಸಿಎಲ್‍ಪಿ ಮತ್ತು ವಿಪಕ್ಷ ಸ್ಥಾನ ಪ್ರತ್ಯೇಕವಾಗಲಿ ಅಂತ ಮತ್ತೆ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು. ಸಮ್ಮಿಶ್ರ ಸರ್ಕಾರ ಇದ್ದಾಗ ಹುದ್ದೆಗಳು ಪ್ರತ್ಯೇಕವಾಗಿತ್ತು. ಕೇಂದ್ರದಲ್ಲಿ ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಹಲವರಿಗೆ ಹುದ್ದೆ ಹಂಚಿಕೆ ಆಗಿತ್ತು. ಮಹಾರಾಷ್ಟ್ರದಲ್ಲೂ ಹಿಂದೆ ಸಿಎಲ್‍ಪಿ ಮತ್ತು ವಿಪಕ್ಷ ಸ್ಥಾನ ಹಂಚಿಕೆ ಆಗಿತ್ತು. ಹೀಗಾಗಿ ಮಹಾರಾಷ್ಟ್ರ ಮತ್ತು ಯುಪಿಎ ಮಾದರಿಯಲ್ಲಿಯೇ ರಾಜ್ಯದಲ್ಲೂ ಸ್ಥಾನ ಆಗಲಿ ಅಂತ ಸಲಹೆ ನೀಡಿದ್ದಾರೆ.

    ಇದೇ ವೇಳೆ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಅಲ್ಲ. ಆದಷ್ಟು ಬೇಗ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೇಮಕ ಮಾಡಲಿ ಅಂತ ಹೈಕಮಾಂಡ್‍ಗೆ ಮನವಿ ಮಾಡಿದ್ರು.