Tag: hmt

  • ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

    ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

    ಬೆಂಗಳೂರು: 14 ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಹೆಚ್‌ಎಂಟಿ (Hindustan Machine Tools) ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐಎಎಸ್, ಐಎಫ್‌ಎಸ್ ಮತ್ತು ಇಬ್ಬರು ಹಾಲಿ ಐಎಫ್‌ಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಈ ಭೂಮಿ ಪರಭಾರೆ ಆಗಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಸಚಿವ ಸಂಪುಟದ ಅನುಮತಿ ಇಲ್ಲದೆ, ಹೆಚ್‌ಎಂಟಿ ಅರಣ್ಯ ಭೂಮಿ ಡಿನೋಟಿಫಿಕೇಷನ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಿ 7 ತಿಂಗಳಾದರೂ ಇನ್ನೂ ಏಕೆ ಕ್ರಮ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದರು. ಹೆಚ್‌ಎಂಟಿ ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ, ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಎಲೆಕ್ಟ್ರಿಕ್‌ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – 4 ಸ್ಕೂಟರ್ ಬೆಂಕಿಗಾಹುತಿ

    ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್. ಗೋಕುಲ್ ತಾವು ಬೇಲಿಕೇರಿ ಪ್ರಕರಣದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಶಿಕ್ಷೆ ಆಗುವಂತೆ ಮಾಡಿದ ಕಾರಣ ತಮ್ಮನ್ನು ಬಲಿ ಪಶು ಮಾಡಲಾಗುತ್ತಿದೆ ಎಂದು ತಿಳಿಸಿ, ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ಬಲಿಪಶು ಮಾಡುತ್ತಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಂಡ್ರೆ, ಇದು ಸರ್ಕಾರದ ವಿರುದ್ಧ ಮಾಡಿರುವ ಸಂಪೂರ್ಣ ಸುಳ್ಳು ಆರೋಪ ಎಂದರು. ಇದನ್ನೂ ಓದಿ: ‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್

    2024ರ ಸೆ. 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳುಹಿಸಿ, ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಸೂಚನೆ ನೀಡಿದ 1 ತಿಂಗಳ ನಂತರ ಅ. 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್.ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ. ಇದು ಕೂಡ ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದು ಹೇಳಿದರು.

    ಹೆಚ್‌ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿದ್ದು, ಅಲ್ಲಿ ಇಂದಿಗೂ 280 ಎಕ್ರೆಯಷ್ಟು ನೆಡುತೋಪು ಇದೆ. ಅದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೆ ಏಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

    ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಚಿವ ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ. ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020 ಆ. 25ರಂದು ಉನ್ನತ ಮಟ್ಟದ ಸಭೆಯಲ್ಲಿ `1980ರ ಪೂರ್ವದಲ್ಲಿ ವಿವಿಧ/ಸರ್ಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್‌ನ ಪ್ರಸ್ತಾವನೆಯನ್ನು ಕ್ಯಾಬಿನೆಟ್ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ 4 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು ಎಂದರು. ಇದನ್ನೂ ಓದಿ: ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ

    ಈಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐಎಎಸ್ ಅಧಿಕಾರಿ ಮತ್ತು ಐಎಫ್‌ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಿಎಂಗೆ ಕಡತ ಸಲ್ಲಿಸಿರುವುದಾಗಿ ಹೇಳಿದರು.

    ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐಎ ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

    ಬೃಹತ್ ಉದ್ಯಾನ ನಿರ್ಮಾಣ
    ಹೆಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಉತ್ತರ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಮುಂದಿನ ಪೀಳಿಗೆಗೆ ಶ್ವಾಸತಾಣ(ಲಂಗ್ಸ್ ಸ್ಪೇಸ್) ಉಳಿಸುವುದು ನಮ್ಮ ಗುರಿಯಾಗಿದೆ. ಈ ಅಂಶವನ್ನು ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕುವ ಪೂರ್ವದಲ್ಲೇ ತಾವು ಸ್ಪಷ್ಟಪಡಿಸಿರುವುದಾಗಿ ಹೇಳಿದರು.

  • ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ – ಹೆಚ್‌.ಕೆ ಪಾಟೀಲ್

    ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ – ಹೆಚ್‌.ಕೆ ಪಾಟೀಲ್

    ಬೆಂಗಳೂರು: ಹೆಚ್‌ಎಂಟಿ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು(Forest Land) ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್‌ (HK Patil) ತಿಳಿಸಿದ್ದಾರೆ.

    ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್‌ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಹೆಚ್‌ಎಂಟಿ ಕಂಪನಿ (HMT Company) ಕೆಲವು ಅರಣ್ಯ ಭಾಗವನ್ನು ಬೇರೆ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಸುಮಾರು 160 ಎಕರೆ ಭೂಮಿಯನ್ನು 375 ಕೋಟಿ ರೂ.ಗೆ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಮಾರಾಟ ಸಂದರ್ಭದಲ್ಲಿ ಅರಣ್ಯ ಇಲಾಖೆ, ಅರಣ್ಯ ಸಚಿವರು ಯಾರಿಂದಲೂ ಅನುಮತಿ ಪಡೆದಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    180 ಎಕರೆ ಅರಣ್ಯ ಭೂಮಿಯನ್ನು ಇದೀಗ ಮಾರಾಟ ಮಾಡಲು ಹೊರಟಿದ್ದಾರೆ. ಅಲ್ಲದೇ ಮೊದಲೇ 160 ಎಕರೆ ಮಾರಾಟ ಆಗಿದ್ದು, ಅದೂ ಅರಣ್ಯ ಭೂಮಿ ಡಿನೋಟೀಫೈ ಆಗಿಲ್ಲ. ಆದಾಗ್ಯೂ ಮಾರಾಟ ಮಾಡಿರುವುದು ಕಂಡುಬಂದಿದೆ. ಈ ಪ್ರಶ್ನಾರ್ಹ ಭೂಮಿಯನ್ನು ಡಿನೋಟಿಫೈ ಮಾಡುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. 2015ರಲ್ಲಿ ಸಮಸ್ಯೆ ಬಗೆಹರಿಸಲು ಉನ್ನತ ಮಟ್ಟದ ಸಮಿತಿ ಕೂಡ ರಚಿಸಲಾಗಿತ್ತು. ಅರಣ್ಯ ಭೂಮಿ ಡಿನೋಟಿಫೈ ಮಾಡಿದರೆ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

    ಡಿನೋಟಿಫೈ ಮಾಡಿದ್ರೆ ಬೆಂಗಳೂರಿನ ಶ್ವಾಸಕೋಶದ ಸ್ಥಳ ಕಳೆದುಕೊಳ್ಳುತ್ತದೆ. ಗೆಚ್‌ಎಂಟಿಗೆ ಅರಣ್ಯ ಭೂಮಿ ನೀಡಿದ್ದ ಉದ್ದೇಶ ಈಡೇರಿಲ್ಲ. ಹಾಗಾಗಿ ಅರಣ್ಯ ಭೂಮಿಯನ್ನು ಹಿಂಪಡೆಯುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: 2ನೇ ಹೆಂಡ್ತಿ ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯ – ಮೊದಲ ಹೆಂಡ್ತಿಯನ್ನೇ ಹತ್ಯೆಗೈದ ಗಂಡ

  • ಕೋರ್ಟ್ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ – ಹೆಚ್‌ಎಂಟಿ ಭೂಮಿ ವಶಕ್ಕೆ ಹೆಚ್‌ಡಿಕೆ ಕಿಡಿ

    ಕೋರ್ಟ್ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ – ಹೆಚ್‌ಎಂಟಿ ಭೂಮಿ ವಶಕ್ಕೆ ಹೆಚ್‌ಡಿಕೆ ಕಿಡಿ

    -ಶ್ರೀನಿವಾಸಪುರದ ಮಾಜಿ ಸ್ಪೀಕರ್ ಅರಣ್ಯ ಭೂಮಿ ಒತ್ತುವರಿ ಪ್ರಸ್ತಾಪಿಸಿ ಟಾಂಗ್

    ಬೆಂಗಳೂರು: ಕೋರ್ಟ್ ಕೊಟ್ಟಿರುವ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್‌ಎಂಟಿ ಕಂಪನಿಗೆ (HMT Company) ಸೇರಿದ ಐದು ಎಕರೆ ಜಮೀನನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ವಶಕ್ಕೆ ಪಡೆದುಕೊಂಡಿದ್ದಕ್ಕೆ ನಾವು ಕಾನೂನು ಹೋರಾಟ ಮಾಡುತ್ತೇವೆ. ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗುವುದು ಖಚಿತ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: Photo Gallery | ಹೆಚ್‌.ಡಿ.ದೇವೇಗೌಡರ ಭೇಟಿಯಾದ ಉಪರಾಷ್ಟ್ರಪತಿ – ಪುತ್ರ ಹೆಚ್‌ಡಿಕೆ ಹೆಗಲ ಮೇಲೆ ಕೈಹಾಕಿ ಫೋಟೋಗೆ ದೊಡ್ಡಗೌಡ್ರು ಪೋಸ್‌

    ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ. ಈ ಕುರಿತು ಸಚಿವ ಈಶ್ವರ್ ಖಂಡ್ರೆಯವರು (Eshwar Khandre) ಮೊದಲು ನೋಡಬೇಕು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಲೂಟಿ ಹೊಡೆದಿರುವುದನ್ನು ನೋಡಿ, ಎಷ್ಟು ಎಕರೆ ಲೂಟಿ ಆಗಿದೆ? ತಿಳಿದುಕೊಳ್ಳಿ. ಶುಕ್ರವಾರ (ಅ.25) ಐದು ಎಕರೆ ಭೂಮಿಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಸಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಹೆಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಆಗ್ರಹಿಸಿದರು.ಇದನ್ನೂ ಓದಿ: ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಕೆಶಿ

  • ಪುತ್ರ ನಿಖಿಲ್‌ಗೆ ಹೆಚ್‌ಎಮ್‌ಟಿ ವಾಚ್ ಗಿಫ್ಟ್ ನೀಡಿದ ಹೆಚ್‌ಡಿಕೆ

    ಪುತ್ರ ನಿಖಿಲ್‌ಗೆ ಹೆಚ್‌ಎಮ್‌ಟಿ ವಾಚ್ ಗಿಫ್ಟ್ ನೀಡಿದ ಹೆಚ್‌ಡಿಕೆ

    ಬೆಂಗಳೂರು: ಹೆಚ್‌ಎಮ್‌ಟಿ (HMT) ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಇಂದು ಹೆಚ್‌ಎಮ್‌ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ ಪುತ್ರ ನಿಖಿಲ್‌ಗೆ ಸ್ವತಃ ಕುಮಾರಸ್ವಾಮಿ ಹೆಚ್‌ಎಮ್‌ಟಿ ವಾಚ್ ಖರೀದಿ ಮಾಡಿ ಹಬ್ಬದ ಉಡುಗೊರೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಹೆಚ್‌ಎಮ್‌ಟಿ ವಾಚ್ (HMT Watch) ಕುರಿತು ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ, ಜನರು ಹೆಚ್‌ಎಮ್‌ಟಿ ವಾಚ್ ಬಳಕೆ ಮಾಡುವಂತೆ ಕರೆ ನೀಡಿದ್ದಾರೆ. ಹೆಚ್‌ಎಮ್‌ಟಿ ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು.ಇದನ್ನೂ ಓದಿ: ಗಣೇಶನ ವಿಸರ್ಜನೆ ಮಾಹಿತಿಗೆ ಬಿಬಿಎಂಪಿಯಿಂದ ಕ್ಯೂಆರ್‌ ಕೋಡ್ ಪ್ಲ್ಯಾನ್‌

    ನಮ್ಮ ತಲೆಮಾರಿನ ಯುವಜನರಿಗೆ ಹೆಚ್‌ಎಮ್‌ಟಿ ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು ಹೆಚ್‌ಎಮ್‌ಟಿ ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದ್ದಾರೆ. ಈ ಸಂದರ್ಭದಲ್ಲಿ ಹೆಚ್‌ಎಮ್‌ಟಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಕೊಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

    ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ ಹೆಚ್‌ಎಮ್‌ಟಿ ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು ಹೆಚ್‌ಎಮ್‌ಟಿ ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿಕೊಳ್ಳಿ. ನಮ್ಮ ಹೆಚ್‌ಎಮ್‌ಟಿ ನಮ್ಮ ಹೆಮ್ಮೆ ಎಂದು ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.ಇದನ್ನೂ ಓದಿ: ‘ಮಿಸ್ಟರ್ ಬಚ್ಚನ್’ ಸೋತಿದ್ದಕ್ಕೆ 4 ಕೋಟಿ ಸಂಭಾವನೆ ಹಿಂದಿರುಗಿಸಿದ ರವಿತೇಜ

  • HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

    HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

    ಬೆಂಗಳೂರು : ಹೆಚ್‌ಎಂಟಿ ಜಾಗವನ್ನು (HMT Land) ಅರಣ್ಯ ಭೂಮಿ (Forest Land) ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ (HD Kumaraswamy) ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಹೆಚ್‌ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್‌ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡದ ಸುಮಾರು 290 ಎಕರೆ ಜಾಗವನ್ನು  ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದು ಅರಣ್ಯ ಇಲಾಖೆಯ ಜಾಗ ಎಂದು ವಶಪಡಿಸಿಕೊಳ್ಳಬೇಕು ಎಂದು ಈಶ್ವರ್‌ ಖಂಡ್ರೆ ಅವರು ಅಧಿಕಾರಿಗಳಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಮೇಲಿನ ದ್ವೇಷಕ್ಕೆ ಹೀಗೆ ಮಾಡುವುದು ಸರಿಯಲ್ಲ ಅಂತ ಕಿಡಿಕಾರಿದರು.

    ಹೆಚ್‌ಎಂಟಿಗೆ ಈ ಜಮೀನನ್ನು ಸರ್ಕಾರ ಪುಕ್ಕಟ್ಟೆಯಾಗಿ ಕೊಟ್ಟಿಲ್ಲ. ಇದಕ್ಕೆ ಹಣ ಪಡೆದಿದೆ. ಇದಲ್ಲದೆ ಅರಣ್ಯ ಇಲಾಖೆ ಕೂಡಾ ಹಿಂದೆ ಜಮೀನು ಖರೀದಿಗೆ ಒಪ್ಪಿಗೆ ಕೊಟ್ಟಿತ್ತು. ಈಗ ಯಾಕೆ ಏಕಾಏಕಿಯಾಗಿ ಖಾಲಿ ಜಾಗ ವಶಪಡಿಸಿಕೊಳ್ಳಲು ಮುಂದಾಗಿದ್ದೀರಿ? ಯಾರಿಗೆ ಹಂಚಲು ಈ ಆದೇಶ ಮಾಡಿದ್ದೀರಾ ಅಂತ ಈಶ್ವರ್ ಖಂಡ್ರೆಗೆ ಪ್ರಶ್ನೆ ಮಾಡಿದರು.

    1963 ರಲ್ಲಿ ಖರೀದಿ ವೇಳೆ ಆದ ಎಲ್ಲಾ ದಾಖಲಾತಿಗಳು ಹೆಚ್‌ಎಂಟಿ ಬಳಿ ಇವೆ. ಎಚ್‌ಎಂಟಿ, ಇಸ್ರೋದವರು NOC ಕೇಳಿದ್ರೆ ಕೊಡುತ್ತಿಲ್ಲ. ಆದರೆ ಖಾಸಗಿ ಸಂಸ್ಥೆ ಪ್ರೆಸ್ಟೀಜ್ ಕಂಪನಿ ಕೇಳಿದ ಕೂಡಲೇ ಎನ್‌ಒಸಿ ಕೊಡುತ್ತಾರೆ. ‌ ಇದರಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುವವರ ಕೈವಾಡ ಇದೆಯಾ ಅಂತ ಪರೋಕ್ಷವಾಗಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕಿಡಿಕಾರಿದರು.

    ಕುಮಾರಸ್ವಾಮಿ ಮೇಲೆ ಇರುವ ದ್ವೇಷಕ್ಕೆ ರಾಜ್ಯವನ್ನು ಈಶ್ವರ್ ಖಂಡ್ರೆ ಹಾಳು ಮಾಡಿಕೊಳ್ಳೋದು ಬೇಡ. ನನಗೆ ಲಾಟರಿ ಸಿಸ್ಟಮ್ ನಲ್ಲಿ ದೇವರು ಅಧಿಕಾರ ಕೊಟ್ಟಿದ್ದಾರೆ. ಇದರಲ್ಲಿ ನಾಲ್ಕು ಒಳ್ಳೆ ಕೆಲಸ ಮಾಡಬೇಕು ಅಂತ ಇದ್ದೇನೆ. ಇದರಲ್ಲಿ ರಾಜಕೀಯ ಮಾಡಬೇಡಿ. ಹೆಚ್‌ಎಂಟಿ ಜಾಗ ಧರ್ಮಕ್ಕೆ ಕೊಟ್ಟಿಲ್ಲ. ಈಶ್ವರ್ ಖಂಡ್ರೆ ಎಲ್ಲಾ ದಾಖಲಾತಿ ತರಿಸಿಕೊಂಡು ಓದಬೇಕು ಅಂತ ಕಿಡಿಕಾರಿದರು. ಇದನ್ನೂ ಓದಿ: Tungabhadra Dam| ಗೇಟ್‌ ಕೊಚ್ಚಿ ಹೋದ ಪ್ರಕರಣದ ತನಿಖೆಯಾಗಲಿ: ಹೆಚ್‌ಡಿಕೆ ಆಗ್ರಹ

    ಹೆಚ್‌ಎಂಟಿ ಸೇರಿ ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ. ಇದಕ್ಕೆ ನೀವು ರಾಜಕೀಯ ಮಾಡುವುದು ಬೇಡ ಅಂತ ಕಿಡಿಕಾರಿದರು. ಯಾವುದೇ ಕಾರಣಕ್ಕೂ ಹೆಚ್‌ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಅಂತ ಈಶ್ವರ್ ಖಂಡ್ರೆಗೆ ಸವಾಲ್ ಹಾಕಿದರು.

     

  • ಹರ್ಯಾಣದ ಹೆಚ್‍ಎಮ್‍ಟಿ ಕಾರ್ಖಾನೆಗೆ ಹೆಚ್‍ಡಿಕೆ ಭೇಟಿ

    ಹರ್ಯಾಣದ ಹೆಚ್‍ಎಮ್‍ಟಿ ಕಾರ್ಖಾನೆಗೆ ಹೆಚ್‍ಡಿಕೆ ಭೇಟಿ

    ನವದೆಹಲಿ: ಹರ್ಯಾಣದ (Haryana) ಪಿಂಜೋರ್‌ನಲ್ಲಿರುವ ಹಿಂದೂಸ್ತಾನ್ ಮಷೀನ್ & ಟೂಲ್ಸ್ (HMT) ಕಾರ್ಖಾನೆಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ನವದೆಹಲಿಯಿಂದ ಮಧ್ಯಾಹ್ನದ ನಂತರ ಕಾರ್ಖಾನೆಗೆ ಭೇಟಿ ನೀಡಿದ ಅವರು, ಇಡೀ ಕಾರ್ಖಾನೆಯನ್ನು ಒಂದು ಸುತ್ತು ಹಾಕಿ ಉತ್ಪಾದನಾ ಚಟುವಟಿಕೆ ವೀಕ್ಷಿಸಿದರು. ಯಂತ್ರಗಳ ಕಾರ್ಯಾಚರಣೆ ವೇಳೆಯಲ್ಲೇ ಉತ್ಪಾದನೆ ಕ್ಷಮತೆಯನ್ನು ಖುದ್ದು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು. ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ಮಾಹಿತಿ ಕೇಳಿ ತಿಳಿದುಕೊಂಡರು.

    ಕಾರ್ಖಾನೆ ವೀಕ್ಷಣೆ ನಂತರ ಉನ್ನತ ಅಧಿಕಾರಿಗಳ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು. ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಕಾರ್ಖಾನೆ ಹೊಂದಿರುವ ಆಸ್ತಿಗಳು, ಆಸ್ತಿಗಳಿಗೆ ಸಂಬಂಧಪಟ್ಟ ಕೋರ್ಟ್ ವ್ಯಾಜ್ಯಗಳು, ಉದ್ಯೋಗಿಗಳ ಬಿಕ್ಕಟ್ಟುಗಳು ಇತ್ಯಾದಿ ಅಂಶಗಳ ಬಗ್ಗೆ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾರ್ಖಾನೆಯ ಈಗಿನ ಪರಿಸ್ಥಿತಿಯ ಕಳವಳದ ಬಗ್ಗೆ ಸಚಿವರು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಾರ್ಖಾನೆಯ ವಹಿವಾಟು, ಲಾಭ, ಸಾಲ, ಬಾಕಿ ಸೇರಿದಂತೆ ಹಣಕಾಸು ಸ್ಥಿತಿಗತಿಗಳ ಬಗ್ಗೆ ಅಂಕಿ ಅಂಶಗಳನ್ನು ಪಡೆದುಕೊಂಡರು. ಕಾರ್ಖಾನೆಯ ನೌಕರರ ಬಳಿ ಮಾತುಕತೆ, ಕಾರ್ಮಿಕರ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಿದರು. ಸಾರ್ವಜನಿಕ ಸ್ವಾಮ್ಯದ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ಹೊಣೆ ಎಲ್ಲರ ಹೊಣೆ. ಎಲ್ಲರೂ ಬದ್ಧತೆ, ಕ್ಷಮತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳು, ಕಾರ್ಮಿಕರಿಗೆ ಕಿವಿಮಾತು ಹೇಳಿದರು. ಅಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಭಾರತದ ಪರಿಕಲ್ಪನೆಯಡಿ ಕೆಲಸ ಮಾಡೋಣ ಎಂದರು.

  • ಜೆಡಿಎಸ್ ಅಭಿಮಾನಿಯಿಂದ ದೇವರಿಗೆ ವಿನೂತನ ಕೋರಿಕೆ!

    ಜೆಡಿಎಸ್ ಅಭಿಮಾನಿಯಿಂದ ದೇವರಿಗೆ ವಿನೂತನ ಕೋರಿಕೆ!

    ಬೆಂಗಳೂರು: ಜೆಡಿಎಸ್ ಅಭಿಮಾನಿಯೊಬ್ಬ ನಿಖಿಲ್ ಗೆಲುವಿಗಾಗಿ ದೇವರಿಗೆ ವಿನೂತನವಾಗಿ ಕೋರಿಕೆ ಸಲ್ಲಿಕೆ ಮಾಡಿದ ಘಟನೆ ನಡೆದಿದೆ.

    ಶನಿವಾರ ನಡೆದ ಮಾಗಡಿ ಸಾವನದುರ್ಗದ ಪ್ರತಿಷ್ಠಿತ ನರಸಿಂಹಸ್ವಾಮಿ ತೇರಿನ ಸಮಯದಲ್ಲಿ ಈ ದೃಶ್ಯ ಕಂಡು ಬಂದಿದೆ ನಿಖಿಲ್ ಗೆಲ್ಲಪ್ಪ, ಹ್ಯಾಪಿ ಬರ್ತ್ ಡೇ ದೇವೇಗೌಡರೇ ಹಾಗೂ ಎಚ್ ಎಮ್ ಟಿ ವಿನ್ ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವರ ತೇರಿಗೆ ಕೋರಿಕೆ ಸಲ್ಲಿಸಿದ್ದಾರೆ.

    ಬಾಳೆಹಣ್ಣಿನ ಮೇಲೆ ತಮ್ಮ ಮನದಿಂಗಿತ ಬರೆದು ತೇರಿನ ಮೇಲೆ ಎಸೆಯೋದು ವಾಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ನಿಖಿಲ್ ಗೆಲುವಿಗಾಗಿ ಈ ಮೂಲಕ ಪ್ರಾರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಲಕ್ಷ್ಮೀ ವೆಂಕಟೇಶ್ವರ ಜಾತ್ರೆ ನಡೆದಿದ್ದು, ರಥೋತ್ಸವ ವೇಳೆ ತೇರಿಗೆ ಬಾಳೆಹಣ್ಣು ಮತ್ತು ಖರ್ಜೂರ ಎಸೆಯುವಾಗ ಯುವಕರು `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಘೋಷಣೆ ಕೂಗಿದ್ದರು. ಒಬ್ಬರು ನಿಖಿಲ್ ಎಲ್ಲಿದ್ದೀಯಪ್ಪ ಎಂದು ಕೂಗಿದರೆ ಆತನಿಗೆ ಉತ್ತರಿಸುವಂತೆ ಅನೇಕ ಯುವಕರು `ಅಪ್ಪ ರಾಮದುರ್ಗ ಜಾತ್ರೆಯಲ್ಲಿ ಇದ್ದೀನಿ ಅಪ್ಪ’ ಎಂದು ಹೇಳಿದ್ದರು. ಯುವಕರು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.