Tag: hole

  • ಅಜ್ಜಿ ಮನೆಗೆ ಬಂದಿದ್ದ ಬಾಲಕಿ ಕಾಮಗಾರಿಗೆ ಅಗೆದ ಗುಂಡಿಯಲ್ಲಿ ಬಿದ್ದು ಸಾವು

    ಅಜ್ಜಿ ಮನೆಗೆ ಬಂದಿದ್ದ ಬಾಲಕಿ ಕಾಮಗಾರಿಗೆ ಅಗೆದ ಗುಂಡಿಯಲ್ಲಿ ಬಿದ್ದು ಸಾವು

    ಕೊಪ್ಪಳ: ಜಲಜೀವನ್ ಮಿಶನ್ ಪೈಪಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯಲ್ಲಿ ಬಾಲಕಿಯೊಬ್ಬಳು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.

    ಮೂಲತಃ ಕೊಪ್ಪಳ ತಾಲೂಕಿನ ಶಿವಪುರ ನಿವಾಸಿಯಾಗಿರುವ ಅನುಪಮ (13) ಮೃತ ಬಾಲಕಿ. ಕಳೆದ ಒಂದು ತಿಂಗಳ ಹಿಂದೆ ಈ ಗುಂಡಿಯನ್ನು ಅಗೆಯಲಾಗಿತ್ತು. ಅಗೆದಿದ್ದ ಗುಂಡಿಯ ಹತ್ತಿರ ಬಾಲಕಿಯು ಆಟವಾಡಲು ತೆರಳಿದ್ದ ವೇಳೆ ಅವಳು ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ. ಗುಂಡಿಯನ್ನು ಅಗೆದು ಮುಚ್ಚದೆ ಇರುವುದೇ ಈ ದುರಂತಕ್ಕೆ ಕಾರಣವಾಗಿದೆ. ಇದನ್ನೂ ಓದಿ: ತಂದೆ ಎನ್ನುವುದನ್ನು ನೋಡದೆ ಕೇವಲ 900 ರೂ. ಆಸೆಗೆ ಕೊಂದೇ ಬಿಟ್ಟ!

    ಅನುಪಮ ಗುಂಡಿಯಲ್ಲಿ ಬಿದ್ದ ಕಾರಣ ಅವಳ ಉಸಿರು ಗಟ್ಟಿತ್ತು. ಆಸ್ಪತ್ರೆಗೆ ಸಾಗಿಸುವ ರಸ್ತೆ ಮಧ್ಯೆಯೇ ಬಾಲಕಿಯು ಸಾವನ್ನಪ್ಪಿದ್ದಾಳೆ. ಅನು ಸಾವಿಗೆ ಕಾಮಗಾರಿಯ ಗುತ್ತಿಗೆದಾರನೇ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಅಜ್ಜಿ ಮನೆಗೆ ಬಂದಿದ್ದ ಆ ಪುಟ್ಟ ಬಾಲಕಿಯು ಗುಂಡಿಗೆ ಬಿದ್ದು ಸಾವನ್ನಪಿದ್ದಾಳೆ.

    ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ಮೂರು ಕಣ್ಣು, 4 ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರು ಜನನ

    ರಾಯ್ಪುರ: ಹಸುವೊಂದು ಮೂರು ಕಣ್ಣು ಮತ್ತು ನಾಲ್ಕು ಮೂಗಿನ ರಂಧ್ರ ಹೊಂದಿರುವ ವಿಚಿತ್ರ ಕರುವಿಗೆ ಜನ್ಮ ನೀಡಿರುವ ಘಟನೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.

    ಸದ್ಯ ಮೂರು ಕಣ್ಣಿನ್ನು ಹೊಂದಿರುವ ಕರುವನ್ನು ನೋಡಲು ದೂರದ ಊರುಗಳಿಂದ ಜನ ಜಮಾಯಿಸುತ್ತಿದ್ದು, ಎಲ್ಲರೂ ಕರುವಿಗೆ ಹೂವಿನ ಮಾಲೆ ಹಾಕಿ, ಕಾಣಿಕೆ ರೂಪದಲ್ಲಿ ಹಣವನ್ನು ಅರ್ಪಿಸಿ ಮಹಾದೇವನ ರೂಪವೆಂದು ಪೂಜಿಸುತ್ತಿದ್ದಾರೆ. ಮತ್ತೊಂದೆಡೆ ಪಶು ವೈದ್ಯರು ಕರು ಸರಿಯಾಗಿ ಬೆಳವಣಿಗೆಯಾಗದ ಕಾರಣ ಹೀಗೆ ಜನಿಸಿದೆ ಎನ್ನುತ್ತಿದ್ದಾರೆ.  ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ

    ಜನವರಿ 14 ರಂದು ಸಂಜೆ 7 ಗಂಟೆ ಸುಮಾರಿಗೆ ಹಸು ಕರುವಿಗೆ ಜನ್ಮ ನೀಡಿದ್ದು, ಅಂದು ಮಕರ ಸಂಕ್ರಾಂತಿ ಹಬ್ಬದವಾಗಿದ್ದರಿಂದ ಕರುವಿನ ಜನನದ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚಾಗಿದೆ. 3 ಕಣ್ಣಿನ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದು, ಗ್ರಾಮಸ್ಥರು ದೀಪ ಹಚ್ಚಿ, ತೆಂಗಿನಕಾಯಿ ಒಡೆದು ಕರು ಮಹಾದೇವನ ರೂಪ ತಾಳಿದೆ ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ರೈತ ಹೆಮಂತ್ ಚಂದೇಲ್ ಅವರು ಕೃಷಿ ಕೆಲಸದ ಜೊತೆಗೆ ಹಸು ಸಾಕಣೆಯಲ್ಲಿ ತೊಡಗಿಸಿಕೊಂಡಿದ್ದು, ಜರ್ಸಿ ಹಸುವನ್ನು ಸಾಕಿದ್ದಾರೆ. ಸಂಕ್ರಾತಿ ಹಬ್ಬದಂದು ಹಸು ಕರುವಿಗೆ ಜನ್ಮ ನೀಡಿದ್ದು, ಎರಡು ಕಣ್ಣುಗಳ ಮಧ್ಯೆ ಹಸುವಿನ ಹಣೆಯ ಮೇಲೆ ಮತ್ತೊಂದು ಕಣ್ಣಿದೆ. ವಿಶೇಷವೆಂದರೆ ಈ ಹಸು ಎರಡು ಮೂಗಿನ ರಂಧ್ರಗಳ ಬದಲಿಗೆ 4 ರಂಧ್ರಗಳನ್ನು ಹೊಂದಿದೆ ಹಾಗೂ ಅದರ ಬಾಲ ಜಡೆಯ ಮಾದರಿ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

  • ಮಳೆ ನೀರಿನಲ್ಲಿ ಮುಳುಗಿ ಮೂವರ ಬಾಲಕರು ಸಾವು

    ಮಳೆ ನೀರಿನಲ್ಲಿ ಮುಳುಗಿ ಮೂವರ ಬಾಲಕರು ಸಾವು

    ಹಾವೇರಿ: ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಬಾಲಕರ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಎರಡನೇ ನಂಬರ್ ಶಾಲೆಯಲ್ಲಿ ನಡೆದಿದೆ.

    ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಗಳು ತುಂಬಿದ್ದವು. ಈ ಗುಂಡಿಗೆ ಬಿದ್ದು ಬಾಲಕರಾದ ಅಜ್ಮಲ್ (8) ಅಕ್ಮಲ್ (9) ಮತ್ತು ಜಾಫರ್ (12) ಮೃತಪಟ್ಟಿದ್ದಾರೆ.

    ಈ ಮೂವರ ಮಕ್ಕಳು ಶಾಲೆಯ ಮೈದಾನದಲ್ಲಿ ಆಡಲು ಹೋಗಿದ್ದಾರೆ. ಮಳೆಗೆ ಗುಂಡಿ ತುಂಬಿದ್ದ ಕಾರಣ ಮಕ್ಕಳ ಕಾಣಿಸಿಲ್ಲ. ಆಡುತ್ತಲೇ ಮಕ್ಕಳು 10 ಅಡಿ ಆಳದ ಗುಂಡಿಗೆ ಬಿದ್ದಿದ್ದಾರೆ. ಮಕ್ಕಳ ಬಿದ್ದ ಸಮಯದಲ್ಲಿ ಯಾರೂ ಸ್ಥಳದಲ್ಲಿ ಇಲ್ಲದ ಕಾರಣ ಮಕ್ಕಳನ್ನು ಬದುಕಿಸಲು ಆಗಿಲ್ಲ. ಹೀಗಾಗಿ ಮೂವರು ಬಾಲಕರು ಮೃತಪಟ್ಟಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

    ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸಿ ನೀರಿನಿಂದ ಮನೆಯೊಳಗೆ ಭೂಮಿ ಕುಸಿತ – ಗ್ರಾಮದ ನೆಮ್ಮದಿ ಕಸಿದುಕೊಂಡ ಗುಂಡಿಗಳು

    ಬಸಿ ನೀರಿನಿಂದ ಮನೆಯೊಳಗೆ ಭೂಮಿ ಕುಸಿತ – ಗ್ರಾಮದ ನೆಮ್ಮದಿ ಕಸಿದುಕೊಂಡ ಗುಂಡಿಗಳು

    ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮಕ್ಕೆ ಅದ್ಯಾವ ಶಾಪ ತಗುಲಿದೆಯೋ ಗೊತ್ತಿಲ್ಲ. ರಾತ್ರಿಯಾದ್ರೆ ಸಾಕು ಜನ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯವೇ ಇಲ್ಲ. ಅದ್ಯಾವಾಗ ಭೂಮಿ ಬಾಯಿ ತೆರೆದು ಯಾರನ್ನು ಬಲಿ ಪಡೆಯುತ್ತೋ ಅನ್ನೋ ಭಯ ಗ್ರಾಮಸ್ಥರನ್ನ ಕಾಡುತ್ತಿದೆ. ಗ್ರಾಮದಲ್ಲಿನ ಅಗೆವುಗಳ (ಕಣಜ) ಕುಸಿತದಿಂದ ಜನ ಕಂಗೆಟ್ಟು ಹೋಗಿದ್ದಾರೆ.

    ಇಲ್ಲಿ ಯಾವುದೇ ಮನೆಗೆ ಹೋದರೂ ಆತಂಕದಲ್ಲಿರುವ ಜನರೇ ಕಾಣಸಿಗುತ್ತಾರೆ. ಗ್ರಾಮ ಅರ್ಧದಷ್ಟು ಮನೆಗಳು ಬಾಯಿತೆರೆದು ಮನೆಯ ಸಾಮಾನುಗಳನ್ನೆಲ್ಲಾ ನುಂಗಿ ಹಾಕಿವೆ. ಗ್ರಾಮದಲ್ಲಿನ 500 ಮನೆಗಳಲ್ಲಿ 300ಕ್ಕೂ ಅಧಿಕ ಮನೆಗಳಲ್ಲಿ ಏಕಾಏಕಿ ಕೋಣೆಗಳಲ್ಲಿ ಕುಸಿತವಾಗಿವೆ. ಕಳೆದ ಹತ್ತು ವರ್ಷಗಳಿಂದ ಮನೆಗಳು ಕುಸಿಯುತ್ತಿದ್ದು ಈ ಬಾರಿ ಸುರಿದ ನಿರಂತರ ಮಳೆಯಿಂದಾಗಿ ಸುಮಾರು 20 ಮನೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಬಾಯ್ತೆರೆದ ಭೂಮಿಯೊಳಗೆ ಮಂಚ, ಪಾತ್ರೆ ಪಗಡೆಗಳು ಹಾಗೂ ದವಸ ಧಾನ್ಯಗಳು ಮುಚ್ಚಿಹೋಗಿವೆ.

    ಹಿಂದೆ ಹಿರಿಯರು ದವಸ ಧಾನ್ಯಗಳನ್ನ ಸಂಗ್ರಹಿಸಿಡಲು ಮನೆ ತಲೆಬಾಗಿಲು ಮುಂದೆ, ಕೋಣೆಯೊಳಗೆ, ಮನೆಯ ಅಂಗಳದಲ್ಲಿ ನಿರ್ಮಿಸಿದ್ದ ಅಗೆವುಗಳು ಈಗ ಕುಸಿಯುತ್ತಿವೆ. ಅಗೆವುಗಳನ್ನ ಮಣ್ಣಿನಿಂದ ಸಂಪೂರ್ಣ ಮುಚ್ಚಿದ್ದರೂ ಗ್ರಾಮದಲ್ಲಿ ಮಳೆ ನೀರಿನ ಬಸಿ ಹಾಗೂ ನೀರಾವರಿಯಿಂದಾಗಿ ಅಗೆವುಗಳು ಕುಸಿಯುತ್ತಿವೆ. ಇದರಿಂದ ಮನೆಯೊಳಗೆ 18 ರಿಂದ 20 ಅಡಿ ಆಳದ ದೊಡ್ಡ ಗುಂಡಿಗಳು ಬೀಳುತ್ತಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಗ್ರಾಮ ತಗ್ಗು ಪ್ರದೇಶದಲ್ಲಿದ್ದು ಮಳೆಗಾಲದಲ್ಲಿ ಪ್ರತಿ ವರ್ಷ ಇಲ್ಲಿನ ಮನೆಗಳಲ್ಲಿನ ಅಗೆವುಗಳು ಕುಸಿಯುತ್ತಿವೆ. ಗ್ರಾಮದಲ್ಲಿ ಸಾಕಷ್ಟು ಮನೆಗಳು ಕುಸಿದು ಬಿದ್ದಿವೆ. ಪ್ರತಿದಿನ ಪ್ರತಿಕ್ಷಣ ಜನ ಉಸಿರು ಬಿಗಿ ಹಿಡಿದೇ ಬದುಕಬೇಕಾದ ಪರಸ್ಥಿತಿಯಿದೆ. ಹೀಗಾಗಿ ಗ್ರಾಮವನ್ನ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸುತ್ತಲೇ ಇದ್ದಾರೆ. ಆದ್ರೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ. ಮಳೆ ನಿಂತು ಒಂದು ವಾರ ಕಳೆದರೂ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಮುಂದೆ ಯಾವುದೇ ದೊಡ್ಡ ಅನಾಹುತ ಸಂಭವಿಸುವುದರೊಳಗೆ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. ಕುಸಿದ ಮನೆಗಳಲ್ಲೇ ಬದುಕು ನಡೆಸಿರುವ ಗ್ರಾಮಸ್ಥರು ಸರ್ಕಾರ ನಮಗೆ ಶಾಶ್ವತ ಪರಿಹಾರ ಒದಗಿಸಬೇಕು ಅಂತ ಮನವಿ ಮಾಡಿದ್ದಾರೆ.

  • ಶಾಲಾ ಆವರಣದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

    ಶಾಲಾ ಆವರಣದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

    ಬಾಗಲಕೋಟೆ: ಶಾಲಾ ಆವರಣದಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದಿದೆ.

    8 ವರ್ಷದ ಗಣೇಶ್ ನಡಕಟ್ಟಿ ಸಾವಿಗೀಡಾದ ಬಾಲಕ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಟವಾಡಲು ಹೋಗಿದ್ದ ವೇಳೆ, ಕೊಠಡಿ ನಿರ್ಮಾಣಕ್ಕಾಗಿ ತೋಡಿದ್ದ ಗುಂಡಿಯಲ್ಲಿ ನೀರು ತುಂಬಿತ್ತು. ಆಟವಾಡುವ ವೇಳೆ ಗಣೇಶ್ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ.

    ಮಳೆಯಾದ ಪರಿಣಾಮ ಕೊಠಡಿ ನಿರ್ಮಾಣಕ್ಕೆ ತೆಗೆಸಿದ್ದ ಗುಂಡಿಗಳಲ್ಲಿ ಮಳೆ ನೀರು ಶೇಖರಣೆಯಾಗಿತ್ತು. ಈ ಹಿಂದೆಯೂ ಕೆಲ ಬಾಲಕರು ಗುಂಡಿಯಲ್ಲಿ ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಶಾಲಾ ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರಕ್ಕಾಗಿ ಆಗ್ರಹ ಮಾಡಿದ್ದಾರೆ. ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಮೆಸ್ಕಾಂ ತೋಡಿದ್ದ ಹಳ್ಳಕ್ಕೆ ಬಿದ್ದು ನರಳಾಡಿದ ದನಕರು

    ಮೆಸ್ಕಾಂ ತೋಡಿದ್ದ ಹಳ್ಳಕ್ಕೆ ಬಿದ್ದು ನರಳಾಡಿದ ದನಕರು

    ಚಿಕ್ಕಮಗಳೂರು: ವಿದ್ಯುತ್ ಇಲಾಖೆ ತೋಡಿದ್ದ ಗುಂಡಿಗೆ ಐದಾರು ದನಕರುಗಳು ಬಿದ್ದು ಇಡೀ ರಾತ್ರಿ ನರಳಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್‍ನಲ್ಲಿ ನಡೆದಿದೆ.

    ಚಿಕ್ಕಮಗಳೂರಿನ ಸುಭಾಷ್ ನಗರದಲ್ಲಿ ಮೆಸ್ಕಾಂ ಸಿಬ್ಬಂದಿ ಸುಮಾರು 10-15 ಅಡಿ ಆಳದ 20 ಗುಂಡಿಗಳನ್ನ ತೋಡಿದ್ದರು. ಆದರೆ ಅದರ ಸುತ್ತಲೂ ಯಾವುದೇ ಬೇಲಿಯನ್ನೂ ಹಾಕಿರಲಿಲ್ಲ. ಸೋಮವಾರ ಸಂಜೆ ಮೇವು ಮೇಯ್ದುಕೊಂಡು ಬಂದ ಆರು ದನಕರುಗಳು ಆ ಗುಂಡಿಯಲ್ಲಿ ಬಿದ್ದಿದೆ. ಇಡೀ ರಾತ್ರಿ ಅಲ್ಲೇ ಗೋಳಿಟ್ಟಿವೆ. ಬೆಳಗ್ಗೆ ಗುಂಡಿಯಿಂದ ದನಕರುಗಳು ಕೂಗುತ್ತಿದ್ದ ಸದ್ದನ್ನು ಕೇಳಿ ಸ್ಥಳೀಯರು ಹಗ್ಗದ ಸಹಾಯದಿಂದ ಹಸುಗಳನ್ನ ಮೇಲೆತ್ತಿದ್ದಾರೆ.

    ಘಟನೆ ನಡೆದ ಸ್ಥಳದ ಪಕ್ಕದಲ್ಲೇ ಅಂಗನವಾಡಿಯೂ ಇದೆ. ಆದರೆ ಗುಂಡಿಯನ್ನು ತೋಡಿಟ್ಟು ಮೆಸ್ಕಾಂ ಅಧಿಕಾರಿ ಸುಮ್ಮನಿದ್ದಾರೆ. ಅಪಾಯವನ್ನ ಬಾಯ್ತೆರೆದು ಕುಳಿತುರುವ ಗುಂಡಿಗಳ ಸುತ್ತಲೂ ಇಲಾಖೆ ಯಾವುದೇ ಬಂದೋಬಸ್ತ್ ಕೂಡ ಮಾಡಿಲ್ಲ. ಇಂದು ದನಕರುಗಳು ಬಿದ್ದಿವೆ. ನಾಳೆ ಪುಟ್ಟ ಪುಟ್ಟ ಮಕ್ಕಳು ಬಿದ್ದು ಹೆಚ್ಚುಕಮ್ಮಿಯಾದರೆ ಏನು ಗತಿ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಇಲಾಖೆ ಗುಂಡಿಯ ಸುತ್ತಲೂ ಬೇಲಿ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.