Tag: Holenarasipura Police

  • ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ

    ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ

    ಹಾಸನ: ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನ ಗಂಗೂರು (Ganguru) ಗ್ರಾಮದಲ್ಲಿ ನಡೆದಿದೆ.

    ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಯುವಕ ಅರೆಸ್ಟ್

    ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮನೆಯ ಗೋಡೆ ನೆಗೆದು, ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್

    ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

    ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮೋಹನ್ ಮಲಗಿದ್ದ. ಬಳಿಕ ಅಪ್ಪ ಹಾಗೂ ಅಣ್ಣನನ್ನ ಕೊಲೆ ಮಾಡಿದ್ದೇನೆ. ನನಗೂ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಇದರಿಂದ ಗಾಬರಿಗೊಂಡ ಸಹೋದರಿ ಊರಿಗೆ ಬಂದಿದ್ದರು.

    ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ (Holenarasipura Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದೆ. ಸೂರಜ್‌ ರೇವಣ್ಣ (Suraj Revanna) ಪರವಾಗಿ ಸಂತ್ರಸನ ವಿರುದ್ಧ ದೂರು ನೀಡಿದ್ದ ದೂರುದಾರನೇ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarasipura City Police) ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ಜೂನ್‌ 21ರಂದು ದೂರು ನೀಡಿದ್ದರು. ಶಿವಕುಮಾರ್‌ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್‌ (Shivakumar) ಫೋನ್‌ ಸಹ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.

    ಶಿವಕುಮಾರ್‌ ನೀಡಿದ ದೂರಿನಲ್ಲಿ ಏನಿತ್ತು?
    ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ.

    ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು.

    ಜೂನ್‌ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.

    ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.