ಹಾಸನ: ನಗರದಲ್ಲಿ (Hassan) ಹೋಳಿ (Holi) ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.
ಹಾಸನ ನಗರದ ಜಿಲ್ಲಾಸ್ಪತ್ರೆ ಬಳಿ ಮಾ.8 ರಂದು ಈ ಘಟನೆ ನಡೆದಿದೆ. ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಿಎಂ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಹೋಳಿ ಸಂಭ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಯುವಕ ಪ್ರಜ್ವಲ್ ಎಂಬಾತನ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.
ಗಾಯಗೊಂಡ ಪ್ರಜ್ವಲ್ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಸುದ್ದಿ ತಿಳಿದು ಪ್ರಜ್ವಲ್‌ನನ್ನು ನೋಡಲು ಆಸ್ಪತ್ರೆಗೆ ಚನ್ನರಾಯಪಟ್ಟಣ ಮೂಲದ ಚಂದನ್ ಕುಮಾರ್ ಆಗಮಿಸಿದ್ದ. ಈ ವೇಳೆ ಅದೇ ಪುಂಡರ ಗುಂಪು ಆತನ ಮೇಲೂ ಹಲ್ಲೆ ಮಾಡಿದೆ. ಚಂದನ್ ಕೆಳಗೆ ಬಿದ್ದರೂ ಬಿಡದೆ ಅರೆಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಬಾಯಿಗೆ ಬಂದಂತೆ ನಿಂದಿಸಿ ಕಾಲಿನಿಂದ ಒದ್ದಿದ್ದಾರೆ. ಚಂದನ್ ಸಹ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.
ಚಂದನ್ ದೂರು ಆಧರಿಸಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಲ್ಲೆಗೊಳಗಾದ ಯುವಕರು ಹೋಳಿ ಆಚರಣೆ ಸಲುವಾಗಿ ಚನ್ನರಾಯಪಟ್ಟಣದಿಂದ ಆಗಮಿಸಿದ್ದರು ಎನ್ನಲಾಗಿದೆ. ಚನ್ನರಾಯಪಟ್ಟಣ ಮೂಲದ ಲೋಹಿತ್ ಹಾಗೂ ಆತನ ಸ್ನೇಹಿತರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಯಾವ ಕಾರಣಕ್ಕೆ ಈ ಹೊಡೆದಾಟ ನಡೆದಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ.
ಲಕ್ನೋ: ಹೋಳಿ (Holi) ಹಬ್ಬದ ಸಮಯದಲ್ಲಿ ಮುಸ್ಲಿಮರು ಮನೆಯೊಳಗೆ ಇರಬೇಕು ಎಂದು ಸೂಚಿಸಿದ್ದ ಸಂಭಾಲ್ ಪೊಲೀಸ್ ಅಧಿಕಾರಿಯನ್ನು ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬೆಂಬಲಿಸಿದ್ದಾರೆ.
ಈ ವರ್ಷದ ಹೋಳಿ ಹಬ್ಬ ಮಾ.14ರ ಶುಕ್ರವಾರ ಬರುತ್ತದೆ. ಅದೇ ದಿನ ರಂಜಾನ್ ತಿಂಗಳಿನ ಮುಸ್ಲಿಮರ ಪ್ರಾರ್ಥನೆ ಸಹ ಇದೆ. ಹೋಳಿ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ ಆದರೆ ಶುಕ್ರವಾರ (ನಮಾಜ್‌ಗಾಗಿ) ಒಂದು ವರ್ಷದಲ್ಲಿ 52 ಬಾರಿ ಬರುತ್ತದೆ. ಹೋಳಿ ಆಚರಣೆಗಳು ಕಡಿಮೆಯಾಗುವವರೆಗೆ ಮನೆಯೊಳಗೆ ಇರಬೇಕೆಂದು ನಾನು ಸಲಹೆ ನೀಡುತ್ತೇನೆ ಎಂದು ಶಾಂತಿ ಸಮಿತಿ ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಅನುಜ್ ಚೌಧರಿ ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್, ಹಬ್ಬಗಳ ಸಮಯದಲ್ಲಿ ನಾವು ಪರಸ್ಪರರ ಭಾವನೆಗಳನ್ನು ಗೌರವಿಸಬೇಕು. ಪ್ರತಿ ಶುಕ್ರವಾರ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಆದರೆ ಹೋಳಿ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ನಮಾಜ್ ವಿಳಂಬ ಮಾಡಬಹುದು. ನಮಾಜ್‌ಗಾಗಿ ಮಸೀದಿಗೆ ಹೋಗುವುದು ಕಡ್ಡಾಯವಲ್ಲ ಎಂದು ಅವರು ಹೇಳಿದ್ದಾರೆ.
ಇನ್ನೂ ಹೋಳಿ ದಿನ ಶುಕ್ರವಾರದ ನಮಾಜ್‌ನ್ನು ಮಧ್ಯಾಹ್ನ 2 ಗಂಟೆಯ ನಂತರ ನಡೆಸಲು ನಿರ್ಧರಿಸಿದ್ದಕ್ಕಾಗಿ ಧಾರ್ಮಿಕ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಉತ್ತರ ಪ್ರದೇಶದ ವಿರೋಧ ಪಕ್ಷ ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಸಂಭಾಲ್ ಪೊಲೀಸ್ ಅಧಿಕಾರಿಯ ಹೇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸರ್ಕಾರದ ಅಧಿಕಾರಿಗಳು ಬಿಜೆಪಿಯ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಸಂಸದ ಮತ್ತು ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರು ಸಂಭಾಲ್‌ನಲ್ಲಿ ಗಲಭೆಯನ್ನು ರೂಪಿಸಿದವರು ಚೌಧರಿ, ಹಿಂಸಾಚಾರದ ಸಮಯದಲ್ಲಿ ಜನರನ್ನು ಪ್ರಚೋದಿಸಿದ ಪೊಲೀಸರಿಂದ ನೀವು ಏನನ್ನು ನಿರೀಕ್ಷಿಸುತ್ತೀರಿ? ಆಡಳಿತ ಬದಲಾದಾಗಲೆಲ್ಲಾ ಅಂತಹವರು ಜೈಲಿನಲ್ಲಿರುತ್ತಾರೆ ಎಂದು ಎಚ್ಚರಿಸಿದ್ದಾರೆ.
ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಅವರಿಂದಲೂ ಡಿಎಸ್ಪಿ ಟೀಕೆಗೆ ಗುರಿಯಾಗಿದ್ದು, ಯಾವುದೇ ಅಧಿಕಾರಿ ತಮ್ಮ ಅಥವಾ ಎಸ್ಪಿ ಅನುಮತಿಯಿಲ್ಲದೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತದ ಪ್ರಮುಖ ಆದ್ಯತೆ ಶಾಂತಿಯನ್ನು ಕಾಪಾಡುವುದು. ಯಾವುದೇ ಅಧಿಕಾರಿ ಯಾವುದೇ ಗುಂಪಿನ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದ್ದಾರೆ.
ನಟಿ ಆಕಾಂಕ್ಷಾ ಪುರಿ ತಮ್ಮ ಇನ್ಸ್ಟಾದಲ್ಲಿ ಅರೆಬೆತ್ತಲೆಯ ಫೋಟೋ ಹಂಚಿಕೊಂಡಿದ್ದಾರೆ. ಟಾಪ್ ಲೆಸ್ (Topless) ಆಗಿ ಹೋಳಿ ಆಡಿರುವಂತಹ ಫೋಟೋ ಹಂಚಿಕೊಂಡು, ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಫೋಟೋಗೆ ಪರ ಮತ್ತು ವಿರೋಧದ ಕಾಮೆಂಟ್ ಗಳು ಹರಿದು ಬಂದಿವೆ. ಸದಾ ವಿವಾದದ ಮೂಲಕವೇ ಸದ್ದು ಮಾಡುವ ನಟಿ ಈಕೆ.
ಈ ಹಿಂದೆ ಹಿಂದಿ (Hindi) ಓಟಿಟಿಯಲ್ಲಿ (OTT) ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಶೋನಲ್ಲಿ ನಟಿ ಆಕಾಂಕ್ಷಾ ಪುರಿ ಮತ್ತು ಮಾಡೆಲ್ ಜದ್ ಹದೀದ್ (Jad Hadid) ಲಿಪ್ ಲಾಕ್ ಮಾಡಿಕೊಂಡ ವಿಚಾರ ಭಾರೀ ಸದ್ದು ಮಾಡಿತ್ತು. ಮೂವತ್ತು ಸೆಕೆಂಡ್ ಗಳ ಕಾಲ ಇಬ್ಬರೂ ಲಿಪ್ ಲಾಕ್ (Lip Lock) ಮಾಡಿಕೊಂಡಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು. ನಂತರ ಈ ವಿಚಾರವಾಗಿ ಸಲ್ಮಾನ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು. ಇದೊಂದು ಫ್ಯಾಮಿಲಿ ಶೋ ಎಲ್ಲೆ ಮೀರದಂತೆ ನಡೆದುಕೊಳ್ಳಿ ಎಂದು ಕಿವಿಮಾತು ಹೇಳಿದ್ದರು.
ಲಿಪ್ ಲಾಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಗ್ ಬಾಸ್ (Bigg Boss) ಮನೆಯಿಂದ ಆಕಾಂಕ್ಷಾ ಪುರಿ (Akanksha Puri) ಹೊರ ಬಂದಿದ್ದರು. ದೊಡ್ಮನೆಯಲ್ಲಿ ಚೆನ್ನಾಗಿ ಆಟ ಆಡದೇ ಇರುವ ಕಾರಣಕ್ಕಾಗಿ ಅವರನ್ನು ಎಲಿಮಿನೇಟ್ ಮಾಡಲಾಗಿತ್ತು. ಬಿಗ್ ಬಾಸ್ ಮನೆಯಿಂದ ಆಕಾಂಕ್ಷಾ ಆಚೆ ಬರುತ್ತಿದ್ದಂತೆಯೇ ಲಿಪ್ ಲಾಪ್ ಬಗ್ಗೆಯೇ ಮಾಧ್ಯಮಗಳು ಪ್ರಶ್ನೆ ಮಾಡಿದ್ದವು. ಅವತ್ತು ಬೋಲ್ಡ್ ಆಗಿಯೇ ಉತ್ತರ ಕೊಟ್ಟಿದ್ದರು ನಟಿ.
ಮಾಧ್ಯಮಗಳೊಂದಿಗೆ ಮಾತನಾಡಿದ್ದ ಆಕಾಂಕ್ಷಾ, ‘ಲಿಪ್ ಲಾಕ್ ಮಾಡಿಕೊಂಡಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ. ಅದೊಂದು ಟಾಸ್ಕ್ ಆಗಿತ್ತು. ಅದನ್ನು ಟಾಸ್ಕ್ ಅಂದುಕೊಂಡೆ ನಾನು ಅದಕ್ಕೆ ಸಮ್ಮತಿಸಿದ್ದೆ ಮತ್ತು ಮಾಡಿದ್ದೆ. ಈ ಕುರಿತು ಯಾವುದೇ ಬೇಸರ ನನಗಿಲ್ಲ’ ಎಂದಿದ್ದು ಅಚ್ಚರಿ ಮೂಡಿಸಿದ್ದರು.
ಲಿಪ್ ಲಾಕ್ ಮಾಡಬೇಕು ಎನ್ನುವುದು ಟಾಸ್ಕ್ ಅಲ್ಲದೇ ಇದ್ದರೂ, ಮನೆಯಲ್ಲಿದ್ದವರು ಪ್ರಚೋದಿಸಿದರು ಎನ್ನುವ ಕಾರಣಕ್ಕಾಗಿ ನಡೆದ ಘಟನೆ ಅದಾಗಿದ್ದರೂ ಆಕಾಂಕ್ಷಾ ಮಾತ್ರ ಅದೊಂದು ಟಾಸ್ಕ್ ಎಂದು ಸಮರ್ಥಿಸಿದ್ದರು. ಆ ಟಾಸ್ಕ್ ಅನ್ನು ನಾನು ಮಾಡಲೇಬೇಕಿತ್ತು ಎಂದು ಹೇಳಿಕೊಂಡಿದ್ದರು.
ನಿನ್ನೆಯಷ್ಟೇ ಹೋಳಿ ಹಬ್ಬ ಮುಗಿದಿದೆ. ಸಾಮಾನ್ಯರಂತೆ ಸೆಲೆಬ್ರಿಟಿಗಳು ಕೂಡ ತಮ್ಮಿಷ್ಟದ ಜಾಗದಲ್ಲಿ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ಮನೆಯಲ್ಲಿ ಅಥವಾ ರೆಸಾರ್ಟ್ ನಲ್ಲಿ ಬಣ್ಣದೋಕುಳಿ ಆಡಿದ್ದರೆ, ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಮಾತ್ರ ಸಮುದ್ರ ತೀರದಲ್ಲಿ ಹೋಳಿ ಆಡಿ, ಆ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಅನೇಕರು ಆ ವಿಡಿಯೋಗೆ ಮೆಚ್ಚಿಕೊಂಡಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಮಾತ್ರವಲ್ಲ, ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ತಮ್ಮ ಕೆಲಸದ ನಡುವೆಯೇ ಹೋಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಈ ಬಾರಿ ನಮ್ಮೆಲ್ಲರಿಗೂ ಕೆಲಸದ ನಡುವೆಯೇ ಹೋಳಿ. ಆದರೆ ನೀವೆಲ್ಲರೂ ಸುರಕ್ಷಿತವಾಗಿ ಹೋಳಿ ಆಡುತ್ತಾ ಎಂಜಾಯ್ ಮಾಡುತ್ತಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಇಲ್ಲಿಂದ ನಾವು ನಿಮಗೆ ಹೋಳಿ ಹಬ್ಬದ ಶುಭಾಶಯ ತಿಳಿಸುತ್ತೇವೆ ಎಂದು ತಮ್ಮ ತಂಡದ ಜೊತೆ ಇರುವ ಫೋಟೋವನ್ನ ರಶ್ಮಿಕಾ ಮಂದಣ್ಣ ಅವರು ಶೇರ್ ಮಾಡಿಕೊಂಡಿದ್ದಾರೆ.
‘ಗೂಗ್ಲಿ’ ನಟಿ ಕೃತಿ ಕರಬಂಧ (Kriti Kharabanda) ಅವರು ಮದುವೆಯ ಬಳಿಕ ಪತಿ ಪುಲ್ಕಿತ್ ಸಾಮ್ರಾಟ್ ಜೊತೆ ರೊಮ್ಯಾಂಟಿಕ್ ಆಗಿ ಹೋಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ- ಪ್ರಿಯಾಂಕಾ (Priyanka Upendra) ದಂಪತಿ ಮನೆಯಲ್ಲಿ ಅದ್ಧೂರಿಯಾಗಿ ಹೋಳಿ ಸೆಲೆಬ್ರೇಶನ್ ಮಾಡಿದ್ದಾರೆ. ಉಪ್ಪಿ ಮನೆಯಲ್ಲಿ ತಾರೆಯರ ದಂಡೇ ಸೇರಿದೆ. ನಿರಂಜನ್, ಶರಣ್ಯಾ ಶೆಟ್ಟಿ, ಗುರುಕಿರಣ್ ದಂಪತಿ, ಪೂಜಾ ಲೋಕೇಶ್, ಗ್ರೀಷ್ಮಾ ಸೃಜನ್ ಲೋಕೇಶ್, ಶಿಲ್ಪಾ ಗಣೇಶ್ ಸೇರಿದಂತೆ ಅನೇಕರು ಭಾಗಿಯಾಗಿ ಸಂಭ್ರಮಿಸಿದ್ದಾರೆ.
ಚಂದನವನದ ನಟಿ ಸುಧಾರಾಣಿ (Sudharani) ಹೋಳಿ ಹಬ್ಬವನ್ನು ಡ್ಯಾನ್ಸ್ ಮಾಡುವ ಮೂಲಕ ಸೆಲೆಬ್ರೇಟ್ ಮಾಡಿದ್ದಾರೆ. ಕಲರ್ ಕಲರ್ ಎಂಬ ಹಾಡಿಗೆ ಜಬರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ನಟಿಯ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಬಾಲಿವುಡ್‌ನ ಲವ್ ಬರ್ಡ್ಸ್ ಕಿಯಾರಾ ಅಡ್ವಾಣಿ- ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಜೋಡಿ ಕೂಡ ಹೋಳಿ ಹಬ್ಬವನ್ನು ಕಲರ್‌ಫುಲ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ.
ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ (Rajashekhar) ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ‘ಬ್ಯಾಕ್ ಬೆಂಚರ್ಸ್’ (Back Benchers) ಚಿತ್ರದಿಂದ ಹೋಳಿ ಹಬ್ಬಕ್ಕಾಗಿ ಸುಮಧುರ ಹಾಡೊಂದು (Song) ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದಿರುವ ಈ ಹಾಡನ್ನು ಭಾರತದ ಹೆಸರಾಂತ ಗಾಯಕ ಶಂಕರ್ ಮಹದೇವನ್ ಹಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಹೋಳಿಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಬ್ಯಾಕ್ ಬೆಂಚರ್ಸ್ ಚಿತ್ರ ನಮ್ಮ ಕಾಲೇಜು ದಿನಗಳನ್ನು ನೆನಪಿಸುತ್ತದೆ. ಈ ಚಿತ್ರದಲ್ಲಿ ಬಹುತೇಕ ಹೊಸಪ್ರತಿಭೆಗಳು ಅಭಿನಯಿಸಿದ್ದಾರೆ. ಆಡಿಷನ್ ಮೂಲಕ ಆಯ್ಕೆಯಾದ ಈ ಕಲಾವಿದರಿಗೆ ಸುಮಾರು ಒಂದು ವರ್ಷಗಳ ಕಾಲ ವರ್ಕ್ ಶಾಪ್ ನಡೆಸಿ ಆನಂತರ ಚಿತ್ರೀಕರಣ ಮಾಡಲಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಬಿ.ಆರ್ ರಾಜಶೇಖರ್ ತಿಳಿಸಿದ್ದಾರೆ.
ಮನೊಹರ್ ಜೋಶಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ರಂಜನ್ ನರಸಿಂಹಮೂರ್ತಿ, ಜಿತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳಿಕರ್, ಮಾನ್ಯ ಗೌಡ, ಕುಂಕುಮ್, ಅನುಷ ಸುರೇಶ್ ಮುಂತಾದವರಿದ್ದಾರೆ.
– ಗಯಾಳುಗಳು ಶೀಘ್ರ ಗುಣಮುಖರಾಗಲಿ: ಪ್ರಾರ್ಥಿಸಿದ ಅಮಿತ್ ಶಾ
ಚಂಡೀಗಢ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ (Mahakaleswar Temple) ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಅರ್ಚಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಳಿ ಹಬ್ಬದ ಪ್ರಯುಕ್ತ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಹೋಳಿ ಆಚರಿಸಲು ಗುಲಾಲ್ ಎಸೆಯಲಾಗುತ್ತಿತ್ತು. ಈ ವೇಳೆ ಕೆಲ ಗುಲಾಲ್, ಕರ್ಪೂರವನ್ನು ಹೊಂದಿದ್ದ ಪೂಜೆಯ ತಾಲಿಯ ಮೇಲೆ ಬಿದ್ದವು. ಕರ್ಪೂರ ನೆಲದ ಮೇಲೆ ಬಿದ್ದು ಬೆಂಕಿ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ!
उज्जैन के श्री महाकाल मंदिर में आग लगने की घटना के संबंध में मुख्यमंत्री श्री @DrMohanYadav51 जी से बात कर जानकारी ली। स्थानीय प्रशासन घायलों को सहायता व उपचार उपलब्ध करवा रहा है। मैं बाबा महाकाल से घायलों के शीघ्र स्वस्थ होने की कामना करता हूँ।
— Amit Shah (Modi Ka Parivar) (@AmitShah) March 25, 2024
14 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಕೆಲವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ಇಂದೋರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಮೃಣಾಲ್ ಮೀನಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅನುಕೂಲ್ ಜೈನ್ ಅವರು ತನಿಖೆ ನಡೆಸಿ ವರದಿ ನೀಡುತ್ತಾರೆ. ಮೂರು ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.
ಘಟನೆ ದುರದೃಷ್ಟಕರ. ಆದರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೆಲವು ಅರ್ಚಕರು ಗಾಯಗೊಂಡಿದ್ದಾರೆ. ಅವರನ್ನು ಇಂದೋರ್ ಮತ್ತು ಉಜ್ಜಯಿನಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾನು ಅಲ್ಲಿಗೆ ಹೋಗುತ್ತಿದ್ದೇನೆ. ನಾನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಘಟನೆ ಸಂಬಂಧ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ಥಳೀಯ ಆಡಳಿತವು ಗಾಯಾಳುಗಳಿಗೆ ನೆರವು ಮತ್ತು ಚಿಕಿತ್ಸೆ ನೀಡುತ್ತಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಬಾಬಾ ಮಹಾಕಾಳನಲ್ಲಿ ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕೈತಪ್ಪಿದ ಟಿಕೆಟ್ – ಕೀಟನಾಶಕ ಸೇವಿಸಿ ತಮಿಳುನಾಡಿನ ಸಂಸದ ಆತ್ಮಹತ್ಯೆಗೆ ಯತ್ನ
ಬಣ್ಣಗಳ ಹಬ್ಬ ಹೋಳಿ (Holi) ಅಂದರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಒಬ್ಬರ ಮೇಲೊಬ್ಬರು ಬಣ್ಣಗಳನ್ನು ಎರಚಿ ಈ ಹಬ್ಬವನ್ನು ಸಂಭ್ರಮಿಸುತ್ತಾರೆ. ಬಣ್ಣಗಳೊಂದಿಗೆ ಸಂಬಂಧಗಳನ್ನು ಬೆಸೆಯುವ ಹಬ್ಬ ಇದಾಗಿದೆ. ಹೋಳಿ ಹಬ್ಬವನ್ನು ಹಿಂದೂ ತಿಂಗಳ ಫಾಲ್ಗುಣದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಹೋಳಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುವುದು ಮಾತ್ರವಲ್ಲದೇ ವಿಶಿಷ್ಠವಾಗಿ ಆಚರಿಸಲಾಗುತ್ತದೆ. ಹೋಳಿ ಕೇವಲ ಹಬ್ಬ ಮಾತ್ರವಲ್ಲದೇ ವಸಂತ ಮಾಸದ ಆಗಮನವನ್ನೂ ಸೂಚಿಸುತ್ತದೆ.
ಪುರಾಣದ ಕಥೆ ಏನು?
ದಕ್ಷಿಣ ಭಾರತದಲ್ಲಿ ವಿಭಿನ್ನ ಆಚರಣೆಯ ಮೂಲಕ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ಕಾಮದೇವನ ಕಥೆಯು ಬೆಸೆದುಕೊಂಡಿದೆ. ಶಿವನ ಮೂರನೇ ಕಣ್ಣಿನಿಂದ ಬಂದ ಬೆಂಕಿಯಿಂದ ಕಾಮದೇವ ಆಹುತಿಯಾದನು. ಜಗತ್ತನ್ನು ಉಳಿಸಲು ಶಿವನ ಕಣ್ಣಿನ ಬೆಂಕಿಗೆ ತಾನೇ ಆಹುತಿಯಾಗುವುದರ ಮೂಲಕ ಕಾಮದೇವ ತ್ಯಾಗ ಮಾಡಿದ ಎಂದು ಹೇಳಲಾಗುತ್ತದೆ. ಈ ಸನ್ನಿವೇಶದ ಹಿನ್ನೆಲೆ ಹೋಳಿ ಹಬ್ಬವನ್ನು ಆಚರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಕಾಮ ದೇವನ ಪ್ರತಿರೂಪವನ್ನು ಸುಡುವ ಆಚರಣೆಯ ಮೂಲಕ ಹೋಳಿ ಆಚರಣೆ ಮಾಡುತ್ತಾರೆ.
ಹೋಳಿ ಹಬ್ಬದ ಹಿಂದೆ ಅನೇಕ ಕಥೆ ಹಾಗೂ ಉಪಕಥೆಗಳು ಬೆಸೆದುಕೊಂಡಿವೆ. ಅದರಲ್ಲಿ ಪ್ರಹ್ಲಾದನ ಕಥೆಯೂ ಸೇರಿಕೊಂಡಿದೆ. ಪ್ರಹ್ಲಾದ ಹುಟ್ಟಿನಿಂದಲೇ ಮಹಾನ್ ವಿಷ್ಣುವಿನ ಭಕ್ತನಾಗಿದ್ದ. ನಿತ್ಯವೂ ವಿಷ್ಣು ದೇವರ ಆರಾಧನೆ ಹಾಗೂ ಪೂಜೆ ಮಾಡುವುದರ ಮೂಲಕವೇ ಜ್ಞಾನವನ್ನು ಪಡೆದುಕೊಳ್ಳುತ್ತಿದ್ದ. ಆದರೆ ಅವನ ತಂದೆ ಹಿರಣ್ಯ ಕಶಿಪು ಬಹಳ ಅಹಂಕಾರಿ ಮತ್ತು ಕ್ರೂರ ರಾಜನಾಗಿದ್ದ. ಅವನು ತಾನೇ ದೈವಶಕ್ತಿಗಿಂತ ಶ್ರೇಷ್ಠ, ತನ್ನನ್ನೇ ಎಲ್ಲರೂ ಆರಾಧಿಸಬೇಕು ಎಂದು ತನ್ನ ಪ್ರಜೆಗೆ ಆದೇಶ ಹೊರಡಿಸಿದ್ದ. ಆದರೆ ಅವನ ಮಗ ಪ್ರಹ್ಲಾದ ಮಾತ್ರ ತಂದೆಯನ್ನು ಆರಾಧಿಸದೆ ವಿಷ್ಣು ದೇವರ ಆರಾಧನೆಯನ್ನು ಮಾಡುತ್ತಿದ್ದ. ಅದನ್ನು ಸಹಿಸದ ಹಿರಣ್ಯ ಕಶಿಪು ಮಗನಿಗೆ ಸರಿಯಾಗಿ ಪಾಠ ಕಲಿಸಬೇಕು, ಅವನ ಚಿಂತನೆಗಳನ್ನು ಬದಲಿಸಬೇಕು ಎಂದು ಬಯಸಿದ. ಅದರಂತೆಯೇ ಸಾಕಷ್ಟು ಕ್ರಮದಲ್ಲಿ ಅವನಿಗೆ ವಿಷ್ಣು ಆರಾಧನೆ ಮಾಡದಂತೆ ಹೇಳಿದನು. ಆದರೆ ವಿಷ್ಣುವಿನ ಪರಮ ಭಕ್ತನಾದ ಪ್ರಹ್ಲಾದ ವಿಷ್ಣುವಿನ ಆರಾಧನೆಯನ್ನು ಬಿಟ್ಟರೆ ಬೇರಾವ ವ್ಯಕ್ತಿಯ ಆರಾಧನೆಯನ್ನು ಮಾಡೆನು ಎಂದು ಹೇಳಿದನು.
ಪುಟ್ಟ ಹುಡುಗನಾದ ಈ ಪ್ರಹ್ಲಾದನಿಗೆ ಇನ್ಯಾವ ಬಗೆಯಲ್ಲೂ ಬುದ್ಧಿ ಹೇಳಲು ಸಾಧ್ಯವಿಲ್ಲ. ಏನಿದ್ದರೂ ಅವನನ್ನು ಸಾಯಿಸುವುದೊಂದೇ ಮಾರ್ಗ ಎಂದುಕೊಂಡ. ಅಂತೆಯೇ ಪ್ರಹ್ಲಾದನನ್ನು ಸಾಯಿಸಲು ಹಿರಣ್ಯ ಕಶಿಪು ಸಾಕಷ್ಟು ವಿಧಾನವನ್ನು ಅನುಸರಿಸಿದ. ಆದರೆ ಯಾವುದೂ ಫಲಕಾರಿಯಾಗಲಿಲ್ಲ. ಅವುಗಳನ್ನು ಕಂಡ ಹಿರಣ್ಯ ಕಶಿಪು ಅತ್ಯಂತ ಕೋಪಗೊಂಡ. ನಂತರ ತನ್ನ ತಂಗಿಯಾದ ಹೋಲಿಕಾಳನ್ನು ಕರೆಸಿದ. ಹೋಲಿಕಾ ತನ್ನ ತೊಡೆಯ ಮೇಲೆ ಯಾರು ಕುಳಿತುಕೊಳ್ಳುತ್ತಾರೋ ಅವರು ಸುಟ್ಟು ಹೋಗಬೇಕು ಎನ್ನುವ ವರವನ್ನು ಪಡೆದುಕೊಂಡಿದ್ದಳು. ಹಾಗಾಗಿ ಪ್ರಹ್ಲಾದನನ್ನು ಅವಳ ತೊಡೆಯ ಮೇಲೆ ಕುಳ್ಳಿರಿಸಿಕೊಳ್ಳಲು ಹಿರಣ್ಯ ಕಶಿಪು ಹೇಳಿದನು. ಅಣ್ಣನ ಮಾತಿನಂತೆ ಹೋಲಿಕಾ ಪ್ರಹ್ಲಾದನನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡಳು. ಆ ಸಮಯದಲ್ಲಿ ಪ್ರಹ್ಲಾದನು ಹರಿಯನ್ನು ಧ್ಯಾನಿಸುತ್ತಲೇ ಕುಳಿತನು. ಆ ಸಮಯದಲ್ಲಿ ಹೋಲಿಕಾ ಬೆಂಕಿಯಲ್ಲಿ ಸುಟ್ಟು ಹೋದಳು. ಪ್ರಹ್ಲಾದನು ಬೆಂಕಿಯಿಂದ ಹೊರ ಬಂದನು. ಈ ಹಿನ್ನೆಲೆಯಲ್ಲಿಯೇ ಹೋಳಿಯ ಹಬ್ಬವನ್ನು ಆಚರಿಸಲಾಯಿತು ಎಂದು ಹೇಳಲಾಗುವುದು.
ಹೀಗೆ ದೇಶದ ವಿವಿಧೆಡೆ ಹೋಳಿ ಹಬ್ಬಕ್ಕೆ ಸಂಬಂಧಿಸಿದ ಅನೇಕ ಕಥೆಗಳಿವೆ. ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ. ಅವುಗಳಲ್ಲಿ ಪ್ರಮುಖವಾಗಿ ಆಚರಿಸುವ ಕೆಲವು ರಾಜ್ಯಗಳ ಬಗ್ಗೆ ಈ ಕೆಳಗೆ ವಿವರಿಸಲಾಗಿದೆ.
ಬಿಹಾರ:
ಬಿಹಾರದಲ್ಲಿ ಜನರು ಹೋಳಿ ಹಬ್ಬಕ್ಕೂ ಒಂದು ವಾರ ಮುಂಚಿತವಾಗಿ ತಮ್ಮ ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಹೋಳಿ ಹಬ್ಬದ ಮೊದಲ ದಿನದಂದು ಬಣ್ಣದ ಥಾಲಿಗಳು ಮತ್ತು ಬಣ್ಣ ತುಂಬಿದ ಮಡಿಕೆಯನ್ನು ಜೋಡಿಸಲಾಗುತ್ತದೆ. ಬಿಹಾರದ ಹೋಳಿ ಆಚರಣೆಗಳು ಹಲವಾರು ದಿನಗಳವರೆಗೆ ಇರುತ್ತದೆ. ಹೋಳಿ ಆಚರಣೆ ಸಂದರ್ಭದಲ್ಲಿ ಜನರು ‘ಫಾಗುವಾ’ ಎಂಬ ಸಾಂಪ್ರದಾಯಿಕ ಜಾನಪದ ಹಾಡುಗಳನ್ನು ಹಾಡುತ್ತಾರೆ. ‘ಹೋಲಿಕಾ ದಹನ್’ ಹೋಳಿ ಆಚರಣೆಯ ಮಹತ್ವದ ಭಾಗವಾಗಿದೆ.
ಉತ್ತರ ಪ್ರದೇಶ:
ಹೋಳಿ ಹಬ್ಬದ ಸಂದರ್ಭದಲ್ಲಿ ಮಥುರಾ ಮತ್ತು ವೃಂದಾವನದಲ್ಲಿ ನಾನಾರೀತಿಯ ಜಾನಪದ ಹಾಡು ಹಾಗೂ ನೃತ್ಯಗಳನ್ನು ಏರ್ಪಡಿಸಲಾಗುತ್ತದೆ. ಅಲ್ಲದೇ ಹೋಲಿಕಾ ಪ್ರತಿಕೃತಿ ದಹಿಸಲಾಗುತ್ತದೆ. ಹೋಳಿ ಹಬ್ಬದಂದು ಜನರು ಬೆಂಕಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಉತ್ತಮ ಫಸಲುಗಾಗಿ ಪ್ರಾರ್ಥಿಸುತ್ತಾರೆ. ಈ ದಿನವನ್ನು ‘ಪುನೋ’ ಎಂದೂ ಕರೆಯುತ್ತಾರೆ. ಅವರು ಕೃತಜ್ಞತೆಯನ್ನು ಸಲ್ಲಿಸಲು ತೆಂಗಿನಕಾಯಿ ಮತ್ತು ಹೂವುಗಳ ಜೊತೆಗೆ ಸುಗ್ಗಿಯ ಕಾಳು ಮತ್ತು ಕಾಂಡಗಳನ್ನು ಅರ್ಪಿಸುತ್ತಾರೆ. ಬಳಿಕ ಸುಟ್ಟ ತೆಂಗಿನಕಾಯಿಯನ್ನು ಮನೆಗೆ ಪ್ರಸಾದವಾಗಿ ತೆಗೆದುಕೊಂಡು ಹೋಗುತ್ತಾರೆ. ಇಲ್ಲಿನ ಜನರು ಹೋಳಿ ಹಬ್ಬದ ದಿನ ‘ಗುಲಾಲ್’ ಎಂಬ ಮೆರವಣಿಗೆಯಲ್ಲಿ ಪಾಲ್ಗೊಂಡು ಪರಸ್ಪರ ಬಣ್ಣಗಳನ್ನು ಎರಚಿ ಸಂಭ್ರಮಿಸುತ್ತಾರೆ. ಲತ್ಮಾರ್ ಹೋಳಿ ಈ ಹಬ್ಬಕ್ಕೆ ಇರುವ ಇನ್ನೊಂದು ಹೆಸರು.
ಬಂಗಾಳ:
ಬಂಗಾಳದಲ್ಲಿ ಹೋಳಿಯನ್ನು ‘ಡೋಲ್ ಜಾತ್ರೆ’ ಅಥವಾ ‘ಡೋಲ್ ಪೂರ್ಣಿಮಾ’ ಎಂದು ಕರೆಯಲಾಗುತ್ತದೆ. ಹೋಳಿಯಂದು ಇಲ್ಲಿನ ಜನರು ಹಳದಿ ಬಟ್ಟೆಗಳನ್ನು ಧರಿಸಿ ಜಾತ್ರೆಗೆ ಹಾಜರಾಗುತ್ತಾರೆ. ಇದು ಶಾಂತಿಯುತ ಸಮಾರಂಭವಾಗಿದೆ. ಇದನ್ನು ಮಹಾಪ್ರಭು ಚೈತನ್ಯರ ಜನ್ಮದಿನವೆಂದು ಆಚರಿಸಲಾಗುತ್ತದೆ. ಜನರು ಶ್ರೀಕೃಷ್ಣ ಮತ್ತು ರಾಧೆಯ ವಿಗ್ರಹವನ್ನು ಅಲಂಕರಿಸುತ್ತಾರೆ ಮತ್ತು ಸುಂದರವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಅದನ್ನು ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ಹೋಳಿ ಆಚರಿಸುತ್ತಾರೆ.
ಒಡಿಶಾ:
ಒಡಿಶಾದ ಜನರು ಜಗನ್ನಾಥ ದೇವರನ್ನು ಪೂಜಿಸುವ ಮೂಲಕ ಹೋಳಿ ಆಚರಿಸುತ್ತಾರೆ ಮತ್ತು ಈ ದಿನ ಒಡಿಶಾದ ಪುರಿ ದೇವಸ್ಥಾನಕ್ಕೆ ಜನರು ಭೇಟಿ ನೀಡುತ್ತಾರೆ. ಅಲಂಕರಿಸಿದ ಪಲ್ಲಕ್ಕಿಯಲ್ಲಿ ಜಗನ್ನಾಥನ ವಿಗ್ರಹವನ್ನು ಇರಿಸಲಾಗುತ್ತದೆ ಮತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಈ ಸಂದರ್ಭ ದಂಡಿ ಖೇಲಾ ಮುಂತಾದ ಆಟಗಳನ್ನು ಆಡುತ್ತಾರೆ. ರಾತ್ರಿಯ ವೇಳೆ ಜಗನ್ನಾಥನ ವಿಗ್ರಹವನ್ನು ಇರಿಸಲು ವಿಶೇಷ ಡೇರೆಗಳು, ಜೂಲನ್ ಮಂಟಪಗಳನ್ನು ಸ್ಥಾಪಿಸುತ್ತಾರೆ.
ಈಶಾನ್ಯ ಭಾರತ:
18ನೇ ಶತಮಾನದಲ್ಲಿ ವೈಷ್ಣವರೊಂದಿಗೆ ಪ್ರಾರಂಭವಾದ ಹೋಳಿಯನ್ನು ಮಣಿಪುರದಲ್ಲಿ ಆರು ದಿನಗಳ ಕಾಲ ಆಚರಿಸಲಾಗುತ್ತದೆ. ಹೋಳಿ ಹಬ್ಬದ ಸಂದರ್ಭದಲ್ಲಿ ಇಲ್ಲಿ ʼಯೋಸಾಂಗ್ʼ ಎಂಬ ಮತ್ತೊಂದು ಹಳೆಯ ಹಬ್ಬವನ್ನು ಆಚರಿಸಲಾಗುತ್ತದೆ. ಮಣ್ಣಿನ ಮತ್ತು ಮಣ್ಣಿನ ಹುಲ್ಲಿನ ಗುಡಿಸಲು ಮಾಡಿ ಸಂಜೆ ಸುಡಲಾಗುತ್ತದೆ. ಮಣಿಪುರದಲ್ಲಿ ಹುಡುಗರು ತಮ್ಮೊಂದಿಗೆ ಹೋಳಿ ಆಡಲು ಹುಡುಗಿಯರಿಗೆ ಹಣ ನೀಡಬೇಕು. ದೇವಾಲಯಗಳಲ್ಲಿ ನೃತ್ಯಗಳು, ಭಕ್ತಿಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಭಕ್ತರು ಬಿಳಿ ಉಡುಪುಗಳು ಮತ್ತು ಹಳದಿ ಪೇಟಗಳನ್ನು ಧರಿಸಿ ದೇವಸ್ಥಾನದ ಮುಂದೆ ಬಣ್ಣಗಳನ್ನು ಆಡುತ್ತಾರೆ. ಕೊನೆಯ ದಿನ ಇಂಫಾಲದ ಬಳಿಯ ಕೃಷ್ಣ ದೇವಸ್ಥಾನದಲ್ಲಿ ಮೆರವಣಿಗೆ ಇರುತ್ತದೆ.
ವಾಯುವ್ಯ ಭಾರತದ ಇತರ ಬುಡಕಟ್ಟುಗಳು ಈ ವಸಂತ ಹಬ್ಬವನ್ನು ಆಚರಿಸಲು ತಮ್ಮದೇ ಆದ ವಿಧಾನಗಳನ್ನು ಹೊಂದಿವೆ. ಅವರು ಹೋಳಿಯ ಮುನ್ನಾದಿನದಂದು ಬೆಂಕಿಯನ್ನು ಹಚ್ಚುತ್ತಾರೆ ಮತ್ತು ದೇವಿಯನ್ನು ಪೂಜಿಸುತ್ತಾರೆ. ಬುಡಕಟ್ಟು ಜನರು ಹೋಳಿ ಆಚರಣೆ ವೇಳೆ ಕೆಸುಡೋ ಮತ್ತು ಮಾವಿನ ವಸಂತ ಹೂವುಗಳು ಮತ್ತು ಧಾನ್ಯಗಳನ್ನು ಅರ್ಪಿಸುತ್ತಾರೆ.
ಹಿಮಾಚಲ ಪ್ರದೇಶ:
ಹಿಮಾಚಲ ಪ್ರದೇಶದಲ್ಲಿ ಯಮುನಾ ನದಿಯ ದಡದಲ್ಲಿರುವ ಸಿರ್ಮೌರ್ ಜಿಲ್ಲೆಯ ಪಾಂಟಾ-ಸಾಹಿಬ್‌ನಲ್ಲಿ ಸಾವಿರಾರು ಜನರು ಸೇರುತ್ತಾರೆ. ಇಲ್ಲಿನ ಜನರು ಬಣ್ಣಗಳನ್ನು ಆಡುವುದರಲ್ಲಿ ಹೆಚ್ಚು ಉತ್ಸುಕರಾಗಿರುತ್ತಾರೆ. ಕುಲುವಿನಲ್ಲಿ ಆಕರ್ಷಕ ಐಸ್ ಹೋಳಿ ಆಡಲಾಗುತ್ತದೆ. ಜನರು ಬಣ್ಣ ಮತ್ತು ಹಿಮವನ್ನು ಬೆರೆಸುವ ಮೂಲಕ ವರ್ಣರಂಜಿತ ಸ್ನೋಬಾಲ್‌ಗಳನ್ನು ಮಾಡಿ ಒಬ್ಬರಮೇಲೋಬ್ಬರು ಎಸೆಯುತ್ತಾರೆ.
ಪಂಜಾಬ್:
ಹೋಲಾ ಮೊಹಲ್ಲಾ ಪಂಜಾಬ್‌ನ ಸಿಖ್ ಸಮುದಾಯದಲ್ಲಿ ವಾರ್ಷಿಕ ಹಬ್ಬವಾಗಿದೆ. ಇದನ್ನು ಗುರು ಗೋಬಿಂದ್ ಸಿಂಗ್ ಪ್ರಾರಂಭಿಸಿದರು. ಇದು ಪಂಜಾಬ್‌ನ ಅನಂತಪುರ ಸಾಹಿಬ್‌ನಲ್ಲಿ ಹೋಳಿ ಹಬ್ಬದ ಎರಡನೇ ದಿನದಂದು ಪ್ರಾರಂಭವಾಗುತ್ತದೆ. ಇದು ಮೂರು ದಿನಗಳ ಹಬ್ಬವಾಗಿದ್ದು, ಎರಡು ಓಡುವ ಕುದುರೆಗಳ ಮೇಲೆ ನಿಲ್ಲುವುದು, ಬೇರ್‌ಬ್ಯಾಕ್ ಕುದುರೆ ಸವಾರಿ, ಅಣಕು ಕಾದಾಟಗಳು ಮತ್ತು ಟೆಂಟ್ ಪೆಗ್ಗಿಂಗ್ ಅನ್ನು ಇದು ಒಳಗೊಂಡಿದೆ. ಶ್ರೀ ಗುರು ಗ್ರಂಥ ಸಾಹಿಬ್ ಅವರ ಉಪಸ್ಥಿತಿಯಲ್ಲಿ ಕೀರ್ತನೆ ಮತ್ತು ಧಾರ್ಮಿಕ ಉಪನ್ಯಾಸಗಳನ್ನು ಸಹ ದರ್ಬಾರ್‌ಗಳಲ್ಲಿ ಏರ್ಪಡಿಸಲಾಗುತ್ತದೆ. ಕೊನೆಯ ದಿನ ತಖ್ತ್ ಕೇಶ್ಗಢ ಸಾಹಿಬ್‌ನಿಂದ ಪಂಜ್ ಪ್ಯಾರಸ್ ನೇತೃತ್ವದಲ್ಲಿ ಮೆರವಣಿಗೆ ನಡೆಯುತ್ತದೆ.
ಲಕ್ನೋ: ಹೋಳಿ ಸಂಭ್ರಮಾಚರಣೆ (Holi) ವೇಳೆ ಮುಸ್ಲಿಂ ಮಹಿಳೆಗೆ (Muslim Women) ಕಿರುಕುಳ ನೀಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ (Uttar Pradesh) ಬಿಜ್ನೋರ್‌ನ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಮುಸ್ಲಿಂ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಥಳದಲ್ಲೇ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದ ಗುಂಪೊಂದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದಿದ್ದಾರೆ. ಅಲ್ಲದೇ ಪೈಪ್ ಮೂಲಕ ಮಹಿಳೆ ಮೇಲೆ ನೀರು ಹಾರಿಸಿದ್ದಾರೆ. ಇದಕ್ಕೆ ಮಹಿಳೆ ವಿರೋಧಿಸಿದರೂ ಗುಂಪು ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ಮುಸ್ಲಿಂ ಮಹಿಳೆ ಮುಖಕ್ಕೆ ಬಲವಂತವಾಗಿ ಬಣ್ಣ ಬಳಿದಿದ್ದಾರೆ. ಈ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಇಳಿದ ಜಾಗಕ್ಕೆ ‘ಶಿವ ಶಕ್ತಿ’ ಎಂದು ನಾಮಕರಣ – ಐಎಯು ಅನುಮೋದನೆ
ಮಹಿಳೆ ಇದಕ್ಕೆ ವಿರೋಧಿಸಿದ್ದಕ್ಕೆ, ‘ಇದು 70 ವರ್ಷಗಳ ಹಿಂದಿನ ಸಂಪ್ರದಾಯ’ ಎಂದು ಗುಂಪು ಹೇಳಿದೆ. ಕೊನೆಗೆ ಗುಂಪಿನಿಂದ ತಪ್ಪಿಸಿಕೊಳ್ಳಲು ಮುಸ್ಲಿಂ ವ್ಯಕ್ತಿ ವೇಗವಾಗಿ ಬೈಕ್ ಚಲಾಯಿಸುತ್ತಾರೆ. ಅವರ ಮುಂದೆ ಹೋಗುತ್ತಿದ್ದಂತೆ, ಹುಡುಗರ ಗುಂಪು ಧಾರ್ಮಿಕ ಘೋಷಣೆ ಕೂಗಿರುವ ದೃಶ್ಯವೂ ವೀಡಿಯೋದಲ್ಲಿದೆ.
ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್, ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಧಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ವೈರಲ್ ವಿಡಿಯೋವನ್ನು ಸ್ಕ್ಯಾನ್ ಮಾಡಿ ಅದರಲ್ಲಿ ಭಾಗಿಯಾದವರನ್ನು ಗುರುತಿಸಿದ್ದಾರೆ. ಇದನ್ನೂ ಓದಿ: ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ
ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಮತ್ತು ಹಲ್ಲೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ಅನಿರುದ್ಧ್ ಎಂಬಾತನನ್ನು ಬಂಧಿಸಿದ್ದು, ಮೂವರು ಬಾಲಾಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಹೋಳಿ (Holi) ಹಬ್ಬದ ಪ್ರಯುಕ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಲಡಾಖ್‌ನ (Ladakh) ಲೇಹ್‌ಗೆ (Leh) ತೆರಳಿ ಭಾನುವಾರ ಸೈನಿಕರೊಂದಿಗೆ (Soldiers) ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು.
ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ (Siachen) ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. ಭೇಟಿ ಅಸಾಧ್ಯವಾದ ಹಿನ್ನೆಲೆ ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ
ಈ ಸಂದರ್ಭದಲ್ಲಿ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್ ಸಾಮಾನ್ಯ ಪ್ರದೇಶವಲ್ಲ. ಇದು ಭಾರತದ ಸಾರ್ವಭೌಮತ್ವ ಮತ್ತು ನಿರ್ಣಯದ ಸಂಕೇತ. ಇದು ನಮ್ಮ ರಾಷ್ಟ್ರೀಯ ನಿರ್ಣಯವನ್ನು ಪ್ರತಿನಿಧಿಸುತ್ತದೆ ಎಂದರು. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್ – ಆದೇಶದಲ್ಲಿ ಏನಿದೆ?
ನಿಮ್ಮನ್ನು, ನಿಮ್ಮ ಮಕ್ಕಳನ್ನು, ನಿಮ್ಮ ಹೆತ್ತವರನ್ನು, ಕುಟುಂಬವನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಅದಕ್ಕೆ ನಾವು ಯಾವಾಗಲೂ ಸಿದ್ಧರಿದ್ದೇವೆ. ನಾನು ನಿಮಗೆ ಏನನ್ನೂ ಹೇಳಬೇಕಿಲ್ಲ. ನೀವು ನಿಮ್ಮ ದೇಹ ಮತ್ತು ಮನಸ್ಸನ್ನು ಅರ್ಪಿಸಿ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೀರಿ. ನಮ್ಮ ಸರ್ಕಾರವೂ ಸಶಸ್ತ್ರಪಡೆಗಳ ಸುಧಾರಣೆಗಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಗ್ರನಾಗಲು ಐಸಿಸ್ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ
ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ (Kidnap) ಮಾಡಿ ಹಲ್ಲೆ (Attack) ಮಾಡಿರುವ ಘಟನೆ ಕೋಲಾರದ (Kolar) ಬೆಳಮಾರನಹಳ್ಳಿಯಲ್ಲಿ ನಡೆದಿದೆ.
ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಎಂಜಿನಿಯರ್ (Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಇದನ್ನೂ ಓದಿ: 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್
ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ.
ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಳಿಕ ಬೇಕರಿ ಬಳಿ ಕರೆಸಿಕೊಂಡ ಡಿಎನ್‌ಡಿ ಮಧು, ತನ್ನ ಸಹಚರರೊಂದಿಗೆ ಮಧುವನ್ನು ಕಾರಿನಲ್ಲಿ ಕೂರಿಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿದ್ದಾರೆ. ನಂತರ ದಾನಹಳ್ಳಿ ಮತ್ತು ವಿಶ್ವನಾಥಪುರ ಗ್ರಾಮದ ಮಧ್ಯೆ ಇರುವ ನೀಲಗಿರಿ ತೋಪಿನಲ್ಲಿ ಇಳಿಸಿ ಅಲ್ಲಿಯೇ ಇದ್ದ ನೀಲಗಿರಿ ರೆಂಬೆಗಳಿಂದ ಚೆನ್ನಾಗಿ ಥಳಿಸಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಹಾಕಿಕೊಂಡು ಬಂದಿದ್ದಾರೆ. ಬಳಿಕ ಶೆಡ್‌ವೊಂದರಲ್ಲಿ ಮಧುವನ್ನು ಕೂಡಿ ಹಾಕಿ ಅರೆಬೆತ್ತಲೆಗೊಳಿಸಿ ಮರದ ತುಂಡುಗಳಿಂದ ಮತ್ತು ಟ್ಯೂಬ್‌ಗಳಿಂದ ಹೊಡೆದು ಅಮಾನವೀಯ ಕೃತ್ಯವೆಸಗಿದ್ದಾರೆ. ಸುಮಾರು ಎರಡು ದಿನಗಳವರೆಗೆ ಮಧು ಅವರನ್ನು ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೇ ಮಧು ಕೈಯಾರೆ ಅವರ ಮನೆಗೆ ಪೋನ್ ಮಾಡಿಸಿ ನಾನು ಧರ್ಮಸ್ಥಳ (Dharmasthala) ಹೋಗುತ್ತಿದ್ದು, ಎರಡು ದಿನಗಳ ಕಾಲ ಮನೆಗೆ ಬರುವುದಿಲ್ಲವೆಂದು ಹೇಳಿಸಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!
ಹಲ್ಲೆಯಿಂದಾಗಿ ಮಾರಣಾಂತಿಕವಾಗಿ ಗಾಯಗೊಂಡ ಮಧುವನ್ನು ಇದೇ ಕಿರಾತಕರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದು ಪೊಲೀಸ್ ಕೇಸ್ ಮಾಡಬೇಕು ಎಂದು ವೈದ್ಯರು ಹೇಳಿದಾಗ ಆತನಿಗೆ ಚಿಕಿತ್ಸೆ ಕೊಡಿಸಿ ಮಾ.19 ರಂದು ಗ್ರಾಮದ ಹೊರವಲಯದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ಕುಟುಂಬದವರನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ತೀವ್ರ ಗಾಯಗೊಂಡ ಮಧು ಮನೆಗೆ ಬಂದಾಗ ಅವರ ಪೋಷಕರು ಕೂಡಲೇ ಆತನನು ಆಸ್ಪತ್ರೆಗೆ ದಾಖಲಿಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮಧು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ
ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಈ ಕೃತ್ಯಕ್ಕೆ ಕಾರಣರಾದ ಅನುಪ್ರಿಯಾ ಮತ್ತು ಮತ್ತಿಬ್ಬರನ್ನು ಪೊಲೀಸರು ಬಂದಿಸಿದ್ದು, ಪ್ರಮುಖ ಆರೋಪಿ ಡಿಎನ್‌ಡಿ ಮಧು ಪರಾರಿಯಾಗಿದ್ದಾನೆ. ಒಟ್ಟು 15ಕ್ಕೂ ಹೆಚ್ಚು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಆ ಕಳ್ಳಿ ಕೋಟಿ ರೂಪಾಯಿ ಮನೆಯ ಒಡತಿ