Tag: holiday

  • ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

    ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

    ಬಳ್ಳಾರಿ: ಸರಣಿ ರಜೆ ಹಿನ್ನೆಲೆ ದಕ್ಷಿಣ ಕಾಶಿ, ವಿಶ್ವವಿಖ್ಯಾತ ಹಂಪಿಗೆ (Hampi) ಪ್ರವಾಸಿಗರ (Tourist) ದಂಡು ಹರಿದು ಬಂದಿದೆ.

    ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಿಶ್ವಪ್ರಸಿದ್ಧ ಹಂಪಿ ಕಳೆದೆರಡು ದಿನಗಳಿಂದ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ವಿಜಯ-ವಿಠ್ಠಲ ದೇಗುಲ, ಕಲ್ಲಿನ ತೇರು ಹಾಗೂ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಸಹಸ್ರಾರು ಪ್ರವಾಸಿಗರು ಸೇರಿದ ಕಾರಣ ಹೆಚ್ಚಿನ ಜನದಟ್ಟಣೆಯಿಂದ ಹಲವೆಡೆ ಟ್ರಾಫಿಕ್ (Traffic) ಕಿರಿಕಿರಿ ಉಂಟಾಗಿತ್ತು.ಇದನ್ನೂ ಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

    ಹಂಪಿಯ ಸ್ಮಾರಕಗಳ ಬಳಿ ಜನಸಾಗರವೇ ಹರಿದು ಬಂದಿದರೂ ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪ್ರವಾಸಿಗರು ಪರದಾಡಿದರು. ಇತ್ತ ಸರಣಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಜನಸಂದಣೆ ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು.

  • ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ – ಸೋಮವಾರ ಶಾಲೆಗಳಿಗೆ ರಜೆ ಘೋಷಣೆ

    ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ – ಸೋಮವಾರ ಶಾಲೆಗಳಿಗೆ ರಜೆ ಘೋಷಣೆ

    ಚಿಕ್ಕಮಗಳೂರು: ಕಾಫಿನಾಡ ಮಲೆನಾಡ ಭಾಗದಲ್ಲಿ ಭಾರೀ ಗಾಳಿ-ಮಳೆ (Rain) ಮುಂದುವರಿದ ಹಿನ್ನೆಲೆ ಮಲೆನಾಡು ಭಾಗದ ಶಾಲೆಗಳಿಗೆ ಸೋಮವಾರ ರಜೆ (Holiday) ಘೋಷಿಸಲಾಗಿದೆ.

    ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ಆದೇಶ ಹೊರಡಿಸಿದ್ದಾರೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗೆ ನಾಳೆ ಒಂದು ದಿನ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಸಾಲು ಸಾಲು ರಜೆ – ಸೋಮವಾರ ಬೆಳಿಗ್ಗೆ 5ರಿಂದ್ಲೇ ಯೆಲ್ಲೋ ಮೆಟ್ರೋ ಆರಂಭ

    ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ

  • ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರೆದಿದೆ. ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ (Rain) ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಶನಿವಾರ) ರಜೆ (Holiday) ಘೋಷಿಸಲಾಗಿದೆ.

    ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ ತಾಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಗಳಾದ ಆವುತಿ, ಜಾಗರ, ವಸ್ತಾರೆ, ಖಾಂಡ್ಯದ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – ಇಂದಿನಿಂದ ಎಸ್‌ಐಟಿ ತನಿಖೆ ಆರಂಭ

    ಇನ್ನು ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಶುಕ್ರವಾರ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ 173ರಲ್ಲಿ ರಸ್ತೆಗುರುಳಿದ ಪರಿಣಾಮ ಎರಡು ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡಿದ್ದಾರೆ. ಮಳೆ ಮಧ್ಯೆ ಮರ ತೆರವು ಕಾರ್ಯಾಚರಣೆಗೆ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಪರದಾಡಿದ್ದಾರೆ. ಬಳಿಕ ಪೊಲೀಸರು ಕಾರು-ಬೈಕ್ ಹೋಗಲು ಅನುವು ಮಾಡಿಕೊಟ್ಟು ಮರ ತೆರವು ಮಾಡಿದ ಬಳಿಕ ಲಾರಿ ಹಾಗೂ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

  • ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಭಾರೀ ಮಳೆ ಸಾಧ್ಯತೆ – ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ

    ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಭಾರೀ ಮಳೆ ಸಾಧ್ಯತೆ – ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ

    – ಕೊಡಗಿನಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ (Rain) ಸಾಧ್ಯತೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರ (ಜು.25) ರಜೆ (Holiday) ಘೋಷಿಸಲಾಗಿದೆ.

    ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    AI Generated Image

    ಕೊಡಗು (Kodagu) ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಾಳೆ (ಶುಕ್ರವಾರ) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ಜ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: NFSA ಲಾಭಾರ್ಥಿಗಳ ಮಿತಿ ಹೆಚ್ಚಿಸುವಂತೆ ಕರ್ನಾಟಕ ಸರ್ಕಾರ ಮನವಿ

    ಈ ನಡುವೆ ಜಿಲ್ಲೆಯಲ್ಲಿ ಮಳೆ ಅರ್ಭಟ ಹೆಚ್ಚಾಗುತ್ತಿದ್ದು, ಬೆಟ್ಟಗುಡ್ಡ ಹಾಗೂ ನದಿ ಪಾತ್ರದ ಜನರಲ್ಲಿ ಮತ್ತೆ ಅತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆ ನಾಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!

  • ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು  ರಜೆ ಘೋಷಣೆ

    ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿಯಲ್ಲಿ ಮಳೆ (Rain) ಹೆಚ್ಚಿರುವ ಹಿನ್ನಲೆ 5 ತಾಲೂಕಿನ ಶಾಲೆಗಳಿಗೆ (School) ಇಂದು (ಜು.17) ರಜೆ ಘೋಷಣೆ ಮಾಡಲಾಗಿದೆ.

    ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ (Holiday) ಘೋಷಣೆ ಮಾಡಿದ್ದಾರೆ.

    ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

  • ಹೃದಯಾಘಾತವಲ್ಲ ಟ್ರ್ಯಾಕ್ಟರ್ ಅಪಘಾತದಲ್ಲಿ ಹಾಸನದ ಯೋಧ ಸಾವು

    ಹೃದಯಾಘಾತವಲ್ಲ ಟ್ರ್ಯಾಕ್ಟರ್ ಅಪಘಾತದಲ್ಲಿ ಹಾಸನದ ಯೋಧ ಸಾವು

    ಹಾಸನ: ರಜೆಯ (Holiday) ಮೇಲೆ ಬಂದಿದ್ದ ಯೋಧ ಟ್ರ್ಯಾಕ್ಟರ್ ಅಪಘಾತದಲ್ಲಿ (Tractor Accident) ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ, ಕೆಂಬಾಳು ಗ್ರಾಮದಲ್ಲಿ ನಡೆದಿದೆ.

    ಲೋಹಿತ್ ಅಲಿಯಾಸ್ ಪುಚ್ಚಿ (38) ಮೃತಪಟ್ಟ ಸೈನಿಕ. ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಲೋಹಿತ್ ನಿನ್ನೆ ಟ್ರ್ಯಾಕ್ಟರ್‌ನಲ್ಲಿ ಜಮೀನಿನ ಬಳಿಗೆ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದಿತ್ತು. ಇದನ್ನೂ ಓದಿ: ಹಾಸನ| ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್‌, ಸರ್ಕಾರಿ ನೌಕರ ಹೃದಯಾಘಾತಕ್ಕೆ ಬಲಿ

    ಗಂಭೀರವಾಗಿ ಗಾಯಗೊಂಡಿದ್ದ ಲೋಹಿತ್‌ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕಳೆದ 18 ವರ್ಷಗಳಿಂದ ಸೈನಿಕರಾಗಿ ಸಲ್ಲಿಸುತ್ತಿರುವ ಲೋಹಿತ್ ಏಳು ವರ್ಷದ ಹಿಂದೆ ಮದುವೆಯಾಗಿದ್ದು ಮೂರು ವರ್ಷದ ಹೆಣ್ಣು ಮಗುವಿತ್ತು. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

    ಜುಲೈ 3 ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಲೋಹಿತ್ ಮರಳಬೇಕಿತ್ತು. ಆದರೆ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬಸ್ಥರಲ್ಲಿ ಆಕ್ರಂದ ಮುಗಿಲು ಮುಟ್ಟುವಂತೆ ಮಾಡಿದೆ. ಇಂದು ಬೆಳಗ್ಗೆ ಲೋಹಿತ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಕುಟುಂಬಸ್ಥರು ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಖಚಿತ ಪಡಿಸಿದ್ದಾರೆ.

  • ಕೊಡಗಿನಲ್ಲಿ ಮುಂದುವರಿದ ಮಳೆಯಾರ್ಭಟ – ಶಾಲಾ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

    ಕೊಡಗಿನಲ್ಲಿ ಮುಂದುವರಿದ ಮಳೆಯಾರ್ಭಟ – ಶಾಲಾ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

    ಕೊಡಗು: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ (ಜೂ.28) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಆದೇಶಿಸಿದ್ದಾರೆ.

    ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. 80 ವರ್ಷಗಳ ಬಳಿಕ ಜೂನ್ ತಿಂಗಳಲ್ಲಿ ಕೆಆರ್‌ಎಸ್ (KRS) ಭರ್ತಿ ಆಗುತ್ತಿದ್ದು, ಸೋಮವಾರ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ಗೆ 50,000 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಹಾರಂಗಿ ಹಾಗೂ ಹೇಮಾವತಿ ಡ್ಯಾಮ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ.ಇದನ್ನೂ ಓದಿ: ಪತ್ನಿಯನ್ನು ಕೊಂದು ಬಸ್‌ನಲ್ಲಿ ಪಾರ್ಸೆಲ್‌ – 20 ವರ್ಷ ತಲೆಮರೆಸಿಕೊಂಡಿದ್ದವನಿಗೆ ಜೀವಾವಧಿ ಶಿಕ್ಷೆ

    ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗ್ತಿದೆ. ಘಟಪ್ರಭಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ. ಘಟಪ್ರಭಾ ನದಿ ಸೇರಿ ಬೆಳಗಾವಿ ಜಿಲ್ಲೆಯ ಸಪ್ತ ನದಿ ತೀರಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ವಿಠ್ಠಲ ದೇವಸ್ಥಾನ ಜಲಾವೃತಗೊಂಡಿದೆ. ಹಾವೇರಿಯಲ್ಲಿ ವರದಾ ತುಂಬಿ ಹರಿಯುತ್ತಿದೆ. ಸವಣೂರು ತಾ.ಕಳಸೂರು ಗ್ರಾಮದ ಬಳಿ ಇರೋ ಬ್ರಿಜ್ಡ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿದೆ.

    ಹಾಸನದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಸಕಲೇಶಪುರ ತಾಲೂಕಿನ ಐಗೂರು ಗ್ರಾಮದಲ್ಲಿ 300ಕ್ಕೂ ಹೆಚ್ಚು ಎಕರೆ ಪ್ರದೇಶದ ರೈತರ ಜಮೀನುಗಳು ಮುಳುಗಡೆಯಾಗಿದೆ. ಮತ್ತೊಂದೆಡೆ ಐಗೂರು ಗ್ರಾಮದ ಸೇತುವೆ ಕುಸಿದು ಬೀಳುವ ಹಂತ ತಲುಪಿದೆ.ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಸರಿಯಾದ ಕ್ರಮ ಜರುಗಿಸದಕ್ಕೆ ಸಿಎಂ, ಪರಂ ಅಸಮಾಧಾನ

  • ರಾಜ್ಯದಲ್ಲಿ ವರುಣಾರ್ಭಟ – ಬೆಳಗಾವಿ, ಚಿಕ್ಕಮಗಳೂರು, ಕೊಡಗಿನ ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ರಾಜ್ಯದಲ್ಲಿ ವರುಣಾರ್ಭಟ – ಬೆಳಗಾವಿ, ಚಿಕ್ಕಮಗಳೂರು, ಕೊಡಗಿನ ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಬೆಳಗಾವಿ/ಚಿಕ್ಕಮಗಳೂರು/ಮಡಿಕೇರಿ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಬೆಳಗಾವಿಯಲ್ಲಿ ಮಳೆಯಬ್ಬರ ಮುಂದುವರಿದ ಹಿನ್ನೆಲೆ ನಾಳೆ (ಜೂ.36) ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

    ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆ ಹಿನ್ನೆಲೆ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಾಳೆ (ಜೂ.36) ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ (ಜೂ.26) ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ಇದನ್ನೂ ಓದಿ: ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

  • ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

    ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

    ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು (Rain), ರೆಡ್ ಅಲರ್ಟ್ ಘೋಷಣೆಯಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ (School), ಪಿಯುಸಿ (College), ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಉಡುಪಿ (Udupi) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 8 ತಾಲೂಕುಗಳ ಶಾಲೆಗಳಿಗೆ ಜೂ.17 ರಂದು ರಜೆ

    ಜಿಲ್ಲೆಯ ಹಲವೆಡೆ ನದಿಗಳು ತುಂಬಿ ಹರಿಯುತ್ತಿದ್ದು, ಬೈಂದೂರಿನ (Baindoor) ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೆಲವು ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ

    ಇನ್ನು ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗಿದ್ದು, ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿದಿದೆ. ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಆನಗಳ್ಳಿ, ಹಳಗೇರಿ, ಬಿಜೂರಿ ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ. ಒಟ್ಟಾರೆಯಾಗಿ ವರುಣಾರ್ಭಟಕ್ಕೆ ಜಿಲ್ಲೆಯಾದ್ಯಂತ ಜನ ಜೀವನ ಅಸ್ತವ್ಯಸ್ತವಾಗಿದೆ.

  • ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ

    ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ

    ಮಂಗಳೂರು/ ಉಡುಪಿ: ಸೋಮವಾರ ಭಾರೀ ಮಳೆಯಾಗಲಿರುವ (Heavy Rain) ಹಿನ್ನೆಲೆಯಲ್ಲಿ ದ‌ಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 5 ತಾಲೂಕುಗಳಿಗೆ ಮತ್ತು ಉಡುಪಿ (Udupi) ಜಿಲ್ಲೆಯ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ

    ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಮತ್ತು ಮೂಡಬಿದ್ರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಪ್ರಕಟಿಸಿದ್ದಾರೆ.


    ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಿದ್ದಾರೆ.