Tag: Holy Dip

  • ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

    ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

    – ಮೋದಿ ಇದೇ ದಿನ ಆಯ್ಕೆ ಮಾಡಿಕೊಂಡಿದ್ದು ಏಕೆ?

    ಪ್ರಯಾಗ್‌ರಾಜ್‌: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪುಣ್ಯ ಸ್ನಾನ (Holy Bath) ಮಾಡಿದ್ದಾರೆ.

    ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ನ (Prayag Raj) ತ್ರಿವೇಣಿ ಸಂಗಮ್‌ಘಾಟ್‌ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ.

    ಇದಾದ ಬಳಿಕ ತಟದಲ್ಲಿ ನಿಂತು ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಒಳಿತಾಗಿ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

    ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ ದಿನದಂದು ಪ್ರಧಾನಿಗಳು ಪುಣ್ಯಸ್ನಾನ ಮಾಡಿದ್ದಾರೆ. ಇದಾದ ಬಳಿಕ ಇಲ್ಲಿನ ಸಂತರೊಂದಿಗೆ ಚರ್ಚಿಸಲಿರುವ ಮೋದಿ 12 ಗಂಟೆ ಸುಮಾರಿಗೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Sweden shooting | ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ – 10 ಮಂದಿ ಸಾವು

    ಇಂದೇ ಪ್ರಧಾನಿಗಳ ಪುಣ್ಯಸ್ನಾನ ಏಕೆ?:
    ಇಂದು ರಥಸಪ್ತಮಿಯ ದಿನವಾಗಿದೆ. ರಥ ಸಪ್ತಮಿ ಹಬ್ಬವನ್ನು ರೈತರಿಗೆ ಸುಗ್ಗಿಯ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ದಿನದಿಂದಲೇ ಬೇಸಿಗೆಯೂ ಪ್ರಾರಂಭವಾಗುತ್ತದೆ. ಈ ದಿನವನ್ನು ದಾನ – ಧರ್ಮ ಮಾಡುವುದಕ್ಕೆ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಈ ದಿನದಂದು ದಾನ ಮಾಡುವುದರಿಂದ ಹಿಂದೆ ಮಾಡಿದ ಎಲ್ಲಾ ಪಾಪಗಳು ಮತ್ತು ರೋಗಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಈ ದಿನ ಸೂರ್ಯೋದಯಕ್ಕೆ ಮೊದಲು ಸ್ನಾನ ಮಾಡುವ ಸಂಪ್ರದಾಯವಿದೆ. ಈ ದಿನದಂದು ಪವಿತ್ರ ನದಿಯಲ್ಲಿ ಸ್ನಾನ ಮಾಡುವುದರಿಂದ ದೇಹದ ಎಲ್ಲಾ ರೋಗಗಳು, ವಿಶೇಷವಾಗಿ ಚರ್ಮಕ್ಕೆ ಸಂಬಂಧಿಸಿದಂತಹ ರೋಗಗಳು ಗುಣವಾಗುತ್ತವೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ರಥ ಸಪ್ತಮಿಯನ್ನು ಆರೋಗ್ಯ ಸಪ್ತಮಿ ಎಂದೂ ಕರೆಯುತ್ತಾರೆ. ಹಾಗಾಗಿಯದೇ ಮೋದಿ ದೇಶಕ್ಕೆ ಒಳಿತಾಗಲಿ ಎನ್ನುವ ಉದ್ದೇಶದಿಂದ ಪುಣ್ಯಸ್ನಾನ ಮಾಡಿದ್ದಾರೆ ಎಂದು ಜೋತಿಷಿಗಳು ಹೇಳುತ್ತಾರೆ.

  • ವಸಂತ ಪಂಚಮಿ ಪುಣ್ಯಸ್ನಾನ ಇಂದು; ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ

    ವಸಂತ ಪಂಚಮಿ ಪುಣ್ಯಸ್ನಾನ ಇಂದು; ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ

    – ಮುಂಜಾನೆ 4 ಗಂಟೆ ಹೊತ್ತಿಗೆ ಪವಿತ್ರ ಸ್ನಾನ ಮಾಡಿದ 16 ಲಕ್ಷ ಭಕ್ತರು

    ಪ್ರಯಾಗ್‌ರಾಜ್: ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭಮೇಳಕ್ಕೆ ಫೆ.3ರ ಸೋಮವಾರ ಮತ್ತೊಂದು ಸುತ್ತಿನಲ್ಲಿ ಕೋಟ್ಯಂತರ ಭಕ್ತರು ಹರಿದುಬರುತ್ತಿದ್ದಾರೆ. ಇಂದು ವಸಂತ ಪಂಚಮಿಯ ಪವಿತ್ರ ದಿನವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತರು ಮೂರನೇ ಅಮೃತ ಪುಣ್ಯಸ್ನಾನ ಮಾಡಿದ್ದಾರೆ.

    ಕುಂಭಮೇಳದಲ್ಲಿ ಬೆಳಗಿನ ಜಾವವೇ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಬೂದಿ ಹಚ್ಚಿದ ನಾಗ ಸಾಧುಗಳು ಸ್ನಾನ ಮಾಡಿದರು. ನಂತರ ಇತರ ಭಕ್ತರು ಸ್ನಾನ ಮಾಡುವುದರೊಂದಿಗೆ ಆಚರಣೆ ಪ್ರಾರಂಭವಾಯಿತು. ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಸ್ನಾನ ಮಾಡಿದವರ ಸಂಖ್ಯೆ ಇದುವರೆಗೂ 35 ಕೋಟಿಯಷ್ಟಾಗಿದೆ.

    ಮುಂಜಾನೆ 4 ಗಂಟೆ ಹೊತ್ತಿಗೆ 16 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಇಂದು ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ. ಇತ್ತೀಚೆಗೆ ಕುಂಭಮೇಳದಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ 30 ಜನರು ಸಾವನ್ನಪ್ಪಿದ್ದರು. ಈ ದುರಂತ ಮತ್ತೆ ಸಂಭವಿಸಬಾರದು ಎಂದು ಜನಸಂದಣಿ ನಿರ್ವಹಿಸಲು ಹೆಚ್ಚಿನ ಸಂಖೈಯಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

    ಕುಂಭಮೇಳದಲ್ಲಿ ನಡೆಯುವ ಪವಿತ್ರ ಶಾಹಿಸ್ನಾನದಲ್ಲಿ ವಸಂತ ಪಂಚಮಿ ಪ್ರಮುಖವಾಗಿದೆ. ಫೆ.12 ರಂದು ಮಹಾ ಪೂರ್ಣಿಮೆ ಮತ್ತು ಫೆ.26 ರಂದು ಮಹಾ ಶಿವರಾತ್ರಿ ದಿನ ಕೊನೆ ಪುಣ್ಯ ಸ್ನಾನ ನೆರವೇರಲಿದೆ.