Tag: home demolished

  • ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಸ್‌ ಚಾಲಕನ ಮನೆ ಧ್ವಂಸ

    ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಸ್‌ ಚಾಲಕನ ಮನೆ ಧ್ವಂಸ

    ಭೋಪಾಲ್: ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

    ಭೋಪಾಲ್‌ನ ಶಾಹಪುರ ಪ್ರದೇಶದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮ ಕಾರ್ಯಾಚರಣೆ ನಡೆದಿದೆ. ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿದ್ದರಿಂದ ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ

    ಕಳೆದ ಗುರುವಾರ ಭೋಪಾಲ್‌ನಲ್ಲಿ ಈ ಘಟನೆ ನಡೆದಾಗ ಬಸ್ ಚಾಲಕನ ಜೊತೆಗೆ ವಾಹನದೊಳಗೆ ಮಹಿಳಾ ಅಟೆಂಡರ್‌ ಕೂಡ ಇದ್ದರು ಎಂದು ಬಾಲಕಿ ಪೋಷಕರು ತಿಳಿಸಿದ್ದು, ಅಟೆಂಡರ್‌ ಕೂಡ ಬಂಧನಕ್ಕೊಳಗಾಗಿದ್ದಾರೆ. ಐಪಿಸಿ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಭೋಪಾಲ್‌ನ ಪ್ರಮುಖ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಗು ಬಸ್‌ನಲ್ಲಿ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ. ಇದನ್ನೂ ಓದಿ: ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಘಟನೆಯ ಕುರಿತು ಮೂರು ದಿನಗಳಲ್ಲಿ ವಿವರವಾದ ವರದಿ ನೀಡುವಂತೆ ಕೇಳಿದೆ. ಈ ಕುರಿತು ತನಿಖೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ.

    Live Tv
    [brid partner=56869869 player=32851 video=960834 autoplay=true]