ಮನೆಯೂಟಕ್ಕೆ ಅವಕಾಶ ನೀಡುವಂತೆ ದರ್ಶನ್ ಮಾಡಿದ್ದ ಮನವಿಯನ್ನು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ತಿರಸ್ಕರಿಸಿದ್ದಾರೆ. ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಅವಕಾಶ ಕೋರಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ನಾವದಗಿ ಮನವಿ ಪುರಸ್ಕರಿಸಿದ ಕೋರ್ಟ್ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ದರ್ಶನ್ ಆರೋಗ್ಯ ಸ್ಥಿರವಾಗಿದೆ. ದರ್ಶನ್ ಅವರಿಗೆ ಮನೆಯೂಟ, ಹಾಸಿಗೆ, ಬಟ್ಟೆ ನೀಡಲು ಸಾಧ್ಯವಿಲ್ಲ. ಆರೋಪಿ ದರ್ಶನ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮನೆಯೂಟ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದು ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಮನೆಯೂಟ ನಿರಾಕರಿಸಿ ಆದೇಶ ಹೊರಡಿಸಿದ್ದರು.
ಬೆಂಗಳೂರು: ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ನಟ ದರ್ಶನ್ (Darshan) ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ (High Court) ನಡೆಯಲಿದೆ.
ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ (High Court) ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು.
ಮ್ಯಾಜಿಸ್ಟ್ರೇಟ್ ಕೋರ್ಟ್ ಹೇಳಿದ್ದೇನು?
ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.
ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ (Health) ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಬೇರೇನೂ ಹೇಳಿಲ್ಲ. ಪ್ರೋಟಿನ್ ಡಯಟ್ ಕೊಡಬೇಕೆಂದು ವೈದ್ಯರು ಹೇಳಿಲ್ಲ.
ವಿಶೇಷ ಡಯಟ್ ಆಹಾರ ನೀಡಬೇಕಾದ್ರೆ ಜೈಲು ವೈದ್ಯರ ಒಪ್ಪಿಗೆ ಬೇಕಾಗುತ್ತದೆ. ದರ್ಶನ್ ವಿಚಾರದಲ್ಲಿ ವೈದ್ಯರು ವಿಶೇಷ ಆಹಾರಕ್ಕೆ ಶಿಫಾರಸು ಮಾಡಿಲ್ಲ. ದರ್ಶನ್ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಬೆಡ್ ರೆಸ್ಟ್ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ಬೇರೆ ಸಮಸ್ಯೆಗಳಿಲ್ಲ.
ವ್ಯಕ್ತಿ ಸಮಾಜದ ಉನ್ನತ ಸ್ಥಾನದಲ್ಲಿದ್ದರೂ ಜೈಲಿನಲ್ಲಿ ತಾರತಮ್ಯ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲರೂ ಸಮಾನರೇ. ಜಾತಿ ಧರ್ಮ ಅಸ್ತಿ ಅಂತಸ್ತು ಲೆಕ್ಕಕ್ಕೆ ಬರುವುದಿಲ್ಲ.
ಬೆಂಗಳೂರು: ಗೆಳತಿ ಪವಿತ್ರಾಗೌಡಗೆ (Pavithra Gowda) ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಜೈಲು ಸೇರಿರುವ ನಟ ದರ್ಶನ್‌ಗೆ (Darshan) ಜೈಲೂಟ ಫಿಕ್ಸ್ ಆಗಿದೆ.
ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ (Maagsitrate Court) ವಜಾಗೊಳಿಸಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಅರ್ಜಿ ವಜಾ ಬೆನ್ನಲ್ಲೇ ಜುಲೈ 29 ರಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ.
ಕೋರ್ಟ್ ಹೇಳಿದ್ದೇನು?
ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.
ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ.