Tag: Home minister

  • ನನಗೆ ಗೃಹ ಖಾತೆ ಕೊಟ್ಟು ನೋಡಿ, ಎಲ್ಲರಿಗೂ ಬುದ್ಧಿ ಕಲಿಸ್ತೀನಿ: ಯತ್ನಾಳ್

    ನನಗೆ ಗೃಹ ಖಾತೆ ಕೊಟ್ಟು ನೋಡಿ, ಎಲ್ಲರಿಗೂ ಬುದ್ಧಿ ಕಲಿಸ್ತೀನಿ: ಯತ್ನಾಳ್

    ವಿಜಯಪುರ: ಈಗಿನ ಗೃಹ ಸಚಿವರಿಗೆ ಫಾರೆಸ್ಟ್ ಅಥವಾ ಕಂದಾಯ ಖಾತೆ ಕೊಡಿ. ನನಗೆ ಗೃಹ ಖಾತೆ ಕೊಟ್ಟು ನೋಡಿ ಮಂಗಳೂರಿನಲ್ಲಿ ಗಲಾಟೆ ಮಾಡಿದವರಿಗೆ ತಕ್ಕ ಪಾಠ ಕಲಿಸ್ತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

    ವಿಜಯಪುರ ನಗರದ ರಂಗಮಂದಿರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಘಟನೆಯ ಬಗ್ಗೆ ಈಗಿನ ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಈಗಿರುವ ಗೃಹ ಸಚಿವರು ಉತ್ತಮವಾಗಿದ್ದಾರೆ, ಗೃಹ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಆದರೂ ಅವರಿಗೆ ಫಾರೆಸ್ಟ್ ಅಥವಾ ಕಂದಾಯ ಖಾತೆ ಕೊಡಿ ನನಗೆ ಗೃಹ ಸಚಿವ ಸ್ಥಾನ ಕೊಟ್ಟು ನೋಡಿ ಎಂದರು. ಇದನ್ನೂ ಓದಿ: ರಾತ್ರಿ ಬಂದು ಮಸಿ ಹಚ್ಚೋ ಅಯೋಗ್ಯರಿಗೆ ಗೃಹ ಸಚಿವರು ಏನು ಮಾಡ್ಬೇಕು: ಯತ್ನಾಳ್

    ನನಗೆ ಗೃಹ ಖಾತೆ ಕೊಟ್ಟರೆ ಎಲ್ಲರಿಗೂ ಹೇಗೆ ಉತ್ತರ ಕೊಡುತ್ತೇನೆ ನೋಡಿ. ಈಗಿನ ಗೃಹ ಸಚಿವರಿಗೆ ಫಾರೆಸ್ಟ್ ಅಥವಾ  ಕಂದಾಯ ಖಾತೆ ಕೊಡಿ. ನನಗೆ ಗೃಹ ಖಾತೆ ಕೊಟ್ಟು ನೋಡಿ ಪುಂಡರನ್ನು ಹೆಡೆಮುರಿ ಕಟ್ಟುತ್ತೇನೆ. ಪೊಲೀಸರ ಮೇಲೆ ದಾಳಿ ಮಾಡಿದರೆ ಸುಮ್ಮನಿರಬೇಕಾ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

  • ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಬೆಂಗಳೂರು: ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಬಗ್ಗೆ ನನಗೆ ಗೌರವ ಇದೆ. ಮೊನ್ನೆ ಗೋ ಕಳ್ಳರನ್ನು ಹಿಡಿಯಲು ಹೋದವರ ಮೇಲೆಯೇ ಕಾರು ಹತ್ತಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬದುಕುಳಿದಿರುವುದು ಪವಾಡ. ಈ ಘಟನೆಯಿಂದ ನನಗೆ ಬೇಸರವಾಗಿದೆ. ಪೊಲೀಸರ ಮೇಲೆ ನನಗೆ ಗೌರವ ಇದೆ. ಎಲ್ಲಾ ಪೊಲೀಸರು ಒಂದೇ ರೀತಿ ಇರುವುದಿಲ್ಲ. ಕರ್ನಾಟಕದಲ್ಲಿ ದಕ್ಷ ಪೊಲೀಸರೂ ಇದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಸಿಕ್ತು ಐಸ್‍ಕ್ರೀಂ ಕಪ್, ಸ್ಪೂನ್ ಸೇರಿ 77 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ!

    ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸುಪಾರಿ ಪ್ರಕರಣ ಕುರಿತು ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾವ ಶಾಸಕರಿಗೂ ಹಾಗೆ ಆಗಬಾರದು. ಮುಖವಾಡ ಕಳಚುವಂತೆ ಮಾಡುತ್ತೇವೆ. ಪೊಲೀಸ್‌ ಕಾಯಿದೆ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಶಾಸಕ ವಿಶ್ವನಾಥ್ ಅವರಿಗೆ ಎಲ್ಲಾ ಭದ್ರತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಸೇನೆ ಕೆಲಸಕ್ಕಾಗಿ ನಕಲಿ ದಾಖಲೆ- 9 ಜನರ ಬಂಧನ

    araga jnanendra

    ಓಮಿಕ್ರಾನ್‌ ಕುರಿತು ಮಾತನಾಡಿದ ಅವರು, ಹೊಸ ವೈರಸ್ ಬಗ್ಗೆ ಆಗುವುದು ಬೇಡ ಎಚ್ಚರಿಕೆ ಬೇಕು. ಗೈಡ್‌ಲೈನ್ ಏನ್ ಬರುತ್ತೋ, ಅದಕ್ಕೆ ನಮ್ಮ ಇಲಾಖೆ ಸಹಕಾರ ನೀಡುತ್ತದೆ. ಇದು ಸಾವು, ಬದುಕಿನ ಪ್ರಶ್ನೆ. ಪೊಲೀಸರು ಏನೆಲ್ಲಾ ಮಾಡಬೇಕು ಎಂದು ನಾವು ಸೂಚಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

     

  • ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಅಲ್ಲ, ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವ: ಕಿಮ್ಮನೆ ರತ್ನಾಕರ್

    ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಅಲ್ಲ, ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವ: ಕಿಮ್ಮನೆ ರತ್ನಾಕರ್

    ಶಿವಮೊಗ್ಗ: ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಲ್ಲ, ಬದಲಿಗೆ ಜ್ಞಾನೇಂದ್ರ ಅವರು ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾದಾಗ ನಾನು ಸಹ ಅವರಿಗೆ ಶುಭ ಹಾರೈಸಿದ್ದೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅನುಭವಿಗಳು ಗೃಹ ಸಚಿವರಾಗಲು ಸಮರ್ಥರಿದ್ದಾರೆ ಅಂದುಕೊಂಡಿದ್ದೆ. ಆದರೆ ಮೈಸೂರಿನಲ್ಲಿ ನಡೆದ ರೇಪ್ ಪ್ರಕರಣದಲ್ಲಿಯೇ ಅವರ ಬಂಡವಾಳ ಗೊತ್ತಾಯ್ತು. ಗೃಹ ಸಚಿವ ಜ್ಞಾನೇಂದ್ರ ಅವರು ನೀಡಬೇಕಾದ ಹೇಳಿಕೆಯನ್ನು ಮುಖ್ಯಮಂತ್ರಿಗಳು, ಆರೋಗ್ಯ ಸಚಿವ ಡಾ.ಸುಧಾಕರ್ ಅವರು ನೀಡಿದರು ಎಂದರು. ಇದನ್ನೂ ಓದಿ: ಪರಿಷತ್‌ ಚುನಾವಣೆ- ಕಾಂಗ್ರೆಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

    ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ಗೃಹ ಸಚಿವರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳನ್ನು ಹೆದರಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ. ಆದರೆ ಗೃಹ ಸಚಿವರು ಮಾತ್ರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ವಿನಾಃ ಕಾರಣ ಕ್ರಿಮಿನಲ್ ಕೇಸ್ ಹಾಕಿಸುತ್ತಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು.

  • ಪುಲ್ವಾಮಾದಲ್ಲಿ CRPF ಯೋಧರೊಟ್ಟಿಗೆ ರಾತ್ರಿ ಕಳೆದ ಗೃಹ ಸಚಿವ ಅಮಿತ್ ಶಾ

    ಪುಲ್ವಾಮಾದಲ್ಲಿ CRPF ಯೋಧರೊಟ್ಟಿಗೆ ರಾತ್ರಿ ಕಳೆದ ಗೃಹ ಸಚಿವ ಅಮಿತ್ ಶಾ

    ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಭೇಟಿ ನೀಡಿದ್ದು, ಸೋಮವಾರ ರಾತ್ರಿ CRPF ಯೋಧರೊಂದಿಗೆ ಊಟ ಸವಿದರು.

    2019ರ ಫೆಬ್ರವರಿಯಲ್ಲಿ ಪಾಕಿಸ್ತಾನ ಪ್ರಾಯೋಜಿತವಾಗಿ ನಡೆದ ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು. ಆ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಅಲ್ಲದೇ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಮೂರು ದಿನಗಳ ಭೇಟಿ ಅವಧಿಯನ್ನು ವಿಸ್ತರಿಸಿಕೊಂಡಿದ್ದಾರೆ.

    ಇದೇ ವೇಳೆ ಮಾತನಾಡಿದ ಅಮಿತ್ ಶಾ ಅವರು, ಪ್ರಧಾನಿ ಮೋದಿ ಅವರ ಸರ್ಕಾರ ಭಯೋತ್ಪಾದನೆಗೆ ಶೂನ್ಯ ಸಹಿಷ್ಣು ನೀತಿಯನ್ನು ಅನುಸರಿಸುತ್ತದೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಇಲ್ಲಿನ ಶಾಂತಿ, ಕಾನೂನು ಸುವ್ಯವಸ್ಥೆ ಅಷ್ಟೇನು ತೃಪ್ತಿದಾಯಕವಾಗಿಲ್ಲ ಎಂದು ಅಭಿಪ್ರಾಯಪಟ್ಟರು.

    ಇದನ್ನೂ ಓದಿ: ಕುಮಾರಸ್ವಾಮಿಯನ್ನು ಆನೆಯನ್ನಾಗಿ ಮಾಡಿದ್ದು ನಾವು: ಜಮೀರ್

    ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮೊಂದಿಗೆ ಒಂದು ದಿನ ಉಳಿಯುತ್ತೇನೆ. ನಮ್ಮ ಜೀವಿತಾವಧಿಯಲ್ಲಿ ಪ್ರಧಾನಿ ಮೋದಿ ಅವರ ಆಶಯದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸಲು ಶ್ರಮಿಸಬೇಕು ಎಂದು ಸಹ ಅಮಿತ್ ಶಾ ತಿಳಿಸಿದ್ದಾರೆ.

    ಕಾಶ್ಮೀರದಲ್ಲಿ ಕಲ್ಲು ತೂರಾಟದಂತಹ ಘಟನಾವಳಿಗಳು ಹೆಚ್ಚಾಗಿ ನಡೆಯುತ್ತಿದ್ದವು. ಈಗ ಆ ಪ್ರಮಾಣ ಕಡಿಮೆಯಾಗಿದೆ. ಆದರೆ ಈ ಬಗ್ಗೆ ನಾವು ತೃಪ್ತರಾಗುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಎಚ್ಚರಿಸಿದ್ದಾರೆ.

    ಇದನ್ನೂ ಓದಿ: ಟವೆಲ್‍ನಲ್ಲಿ ಯಾವುದೇ ಗ್ಲಿಸರಿನ್ ಇಲ್ಲ, ನಮ್ದು ಭಾವನಾತ್ಮಕ ಕುಟುಂಬ: ಹೆಚ್‍ಡಿಕೆ

    370ನೇ ವಿಧಿಯನ್ನು ಹಿಂತೆಗೆದುಕೊಂಡ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರಕ್ತಪಾತವಾಗಿಲ್ಲ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

  • ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

    ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

    ಬೆಂಗಳೂರು: ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮುನ್ನ ಸ್ಥಳದಲ್ಲಿರುವ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.

    ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ, ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

    ಇನ್ನು ಮುಂದೆ ಯಾವುದೇ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ನೋ ಪಾರ್ಕಿಂಗ್ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯವರು ವಾಚಾಳಿತನ ಬಿಡಬೇಕು: ಆರ್ ಅಶೋಕ್

    ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

  • ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

    ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

    ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು.

    ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಎಲ್ಲಾ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳೆಲ್ಲರೂ ಕೂಲಿಕಾರ್ಮಿಕರು!

    ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ

    ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ

    ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಜೊತೆ ನಿನ್ನೆಯಿಂದಲೂ ನಿರಂತರ ಸಂಪರ್ಕದಲ್ಲಿದ್ದು, ಕಾಲಹರಣ ಮಾಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಗೃಹಸಚಿವರು ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಸಂಬಂಧ ಪ್ರತಿಕ್ರಿಯಿಸಿ, ನಾನು ಕೆಪಿಎನಲ್ಲಿ ಕಾಲಹರಣ ಮಾಡುತ್ತಿಲ್ಲ. ನಾನು ಸಭೆಯನ್ನು ಮಾಡುತ್ತಿದ್ದೇನೆ. ನಿನ್ನೆ ಬಂದ ತಕ್ಷಣ ಪೊಲೀಸ್ ಅಧಿಕಾರಿಗಳ ಜೊತೆ ಒಂದಷ್ಟು ಮಾಹಿತಿಗಳನ್ನು ತೆಗೆದುಕೊಂಡಿದ್ದೇನೆ. ಬೆಳಗ್ಗೆಯೂ ಸಹ ಪ್ರಕರಣ ಸಂಬಂಧ ಮಾತನಾಡಿದ್ದೇನೆ. ಪೊಲೀಸರ ಜೊತೆ ಇನ್ನೂ ಎರಡು ಸುತ್ತಿನ ಮಾತುಕತೆ ಆಗಬೇಕು. ಆ ನಂತರ ನಾನು ಈ ಪ್ರಕರಣ ವಿವಿರ ನೀಡುತ್ತೇನೆ. ಮೈಸೂರಿನಲ್ಲಿ ಇಂದು ಪೊಲೀಸರ ಜೊತೆ ಎರಡು ಸಭೆಗಳನ್ನು ಮಾಡುತ್ತೇನೆ ಎಂದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

    ಪೊಲೀಸ್ ಅವರಿಗೆ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಒಳ್ಳೆಯ ತರಬೇತಿ ನೀಡುತ್ತಿದ್ದಾರೆ. ಒಬ್ಬ ಸಬ್ ಇನ್ಸ್‍ಪೆಕ್ಟರ್‍ಗೆ ಹೇಗೆ ತರಬೇತಿ ನೀಡುತ್ತಾರೆ ಎಂದು ತಿಳಿದುಕೊಂಡೆ. ಸಮಾಜಕ್ಕೆ ಒಬ್ಬ ಯೋಗ್ಯ ಪೊಲೀಸ್ ಅಧಿಕಾರಿಯನ್ನು ನೀಡಲು ಏನೆಲ್ಲಾ ಮಾಡುತ್ತಾರೆ ಎನ್ನುವುದು ತಿಳಿಯಿತು. ಇವರಿಂದ ನೆಮ್ಮದಿಯ ಜೀವನವನ್ನು ಮಾಡಬಹುದು. ನಾನು ವಿದ್ಯಾರ್ಥಿ ಆಗಿದ್ದಾಗ ಎನ್‍ಸಿಸಿಯಲ್ಲಿ ಭಾಗವಹಿಸಿದ್ದೆ. ಆಗ ಶೂಟ್ ಮಾಡಿ ಬಹುಮಾನ ಎಲ್ಲವನ್ನೂ ಪಡೆದುಕೊಂಡಿದ್ದೇನೆ. ಸೈನಿಕರ ಕ್ಯಾಂಪ್‍ನಲ್ಲೂ ನಾನು ಭಾಗವಹಿಸಿದ್ದೇನೆ. ಒಂದು ಗುಂಡು ಮಿಸ್ ಆಗದೇ ಶೂಟ್ ಮಾಡುವುದು ಮುಖ್ಯವಾಗುತ್ತದೆ. ಪೊಲೀಸರು ಅವರನ್ನು ರಕ್ಷಣೆ ಮಾಡಿಕೊಂಡು ಸಮಾಜವನ್ನು ರಕ್ಷಣೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

    ಆರೋಪವೇನು..?
    ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ನಿನ್ನೆ ಮೈಸೂರೊಗೆ ಭೇಟಿ ಕೊಟ್ಟ ಗೃಹ ಸಚಿವರು ಈವರೆಗೂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿಲ್ಲ. ಬದಲಾಗಿ ಪೊಲೀಸ್ ಅಕಾಡೆಮಿ ವೀಕ್ಷಣೆಯಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದೆ. ಗಂಭೀರ ಪ್ರಕರಣ ನಡೆದರು ಇನ್ನೂ ಸಭೆಯನ್ನೇ ನಡೆಸಿಲ್ಲ. ದೇಶ ವ್ಯಾಪಿ ಗ್ಯಾಂಗ್ ರೇಪ್ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಆದರೂ ಇದೂವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಮೊದಲಿಗೆ ಮಾಡಬೇಕಾಗಿದ್ದ ಕೆಲಸ ಬಿಟ್ಟು ಅಕಾಡೆಮಿ ವೀಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಕಿಡಿಕಾರಿದ್ದಾರೆ.

  • ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

    ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

    ಮೈಸೂರು: ಸಂತ್ರಸ್ತೆ ತನಿಖೆಗೆ ಸ್ಪಂದಿಸಬೇಕು. ಆದರೆ ಅವರು ನಮ್ಮೊಂದಿಗೆ ಸ್ಪಂದಿಸುತ್ತಿಲ್ಲ ಎಂಬುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ.

    ಮೈಸೂರಿನಲ್ಲಿರುವ ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯ ರಕ್ಷಣೆ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇನೆ. ಆದರೆ ಅವರು ತನಿಖೆಗೆ ಪೊಲೀಸರೊಂದಿಗೆ ಸಹಕರಿಸಬೇಕು. ಪೊಲೀಸರು ಎಲ್ಲಾ ಆಯಾಮದಿಂದ ಕೇಸ್ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆ ನಾನು ಯಾರ ಜೊತೆನೂ ಮಾತನಾಡುವುದಿಲ್ಲ ಎಂದಿದ್ದಾರೆ. ಯುವತಿ ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಸಂತ್ರಸ್ತೆ ಪೋಷಕರು ಕೂಡ ಯಾರೊಂದಿಗೂ ಮಾತನಾಡುವುದಿಲ್ಲ ಎಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – ಘಟನೆಯ ಬಗ್ಗೆ ಬಿಚ್ಚಿಟ್ಟ ಸಂತ್ರಸ್ತೆಯ ಸ್ನೇಹಿತ

    ಪೊಲೀಸರು ಶೇ.100 ಅಲರ್ಟ್ ಆಗಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಗೃಹಮಂತ್ರಿಗಳು ಜಿಲ್ಲೆಗೆ ಬಂದಿದ್ದಾರೆ. ಅವರು ಎಲ್ಲಾ ಅಧಿಕಾರಿಗಳ ಸಭೆಯನ್ನು ಮಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

    ವಿರೋಧ ಪಕ್ಷದವರು ನಮ್ಮನ್ನು, ಪೊಲೀಸರನ್ನು ವಿರೋಧ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಇರುವುದೇ ವಿರೋಧ ಮಾಡೋಕೆ. ಗೃಹ ಸಚಿವರು ಹಿರಿಯರಿದ್ದಾರೆ. ಪ್ರಕರಣದ ಗಂಭೀರತೆಯನ್ನು ಅವರು ಪರಿಗಣಿಸಿದ್ದಾರೆ. ಎಲ್ಲಾ ಮಾಹಿತಿ ಪಡೆದುಕೊಂಡು ಬಂದಿದ್ದಾರೆ. ಇವತ್ತು ಸಂಜೆ 4 ಗಂಟೆ ವರೆಗೆ ಜಿಲ್ಲೆಯಲ್ಲಿ ಇರುತ್ತಾರೆ. ಎಲ್ಲವನ್ನು ಅವರೇ ತಿಳಿಸುತ್ತಾರೆ. ನಾನು ಅವರಿಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ಅದಕ್ಕಾಗಿ ಅವರನ್ನು ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

  • ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

    ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

    ಬೆಂಗಳೂರು: ನಾನು ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಅರಗ ಜ್ಞಾನೇಂದ್ರ ಕ್ಷಮೆಯಾಚಿಸಿದ್ದಾರೆ.

    ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂದ ಬೇಜವಾಬ್ದಾರಿ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಅವರು, ನಾನು ಅವಳನ್ನು ನನ್ನ ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ. ಹೀಗಾಗಿ ನಾನು ಆತಂಕದಿಂದ ಆ ಮಾತನ್ನು ಹೇಳಿದ್ದೇನೆ. ನಾನು ಆ ಮಾತನ್ನು ವಾಪಸ್ ಪಡೆದುಕೊಳ್ಳುತ್ತೇನೆ. ಅಲ್ಲದೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಕಾಂಗ್ರೆಸ್ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿಯೂ ಇಂತಹ ಒಂದು ಗಂಭೀರವಾದ ಪ್ರಕರಣ ನಡೆದಿದೆ. ಇದರ ಬಗ್ಗೆ ನಾನು ಹೆಚ್ಚು ಹೇಳಲು ಇಷ್ಟ ಪಡುವುದಿಲ್ಲ. ಯಾಕಂದ್ರೆ ಗೃಹ ಇಲಾಖೆ ನಿಭಾಯಿಸಿದ ಅನೇಕ ಹಿರಿಯರು ಇದ್ದಾರೆ. ಹೀಗಾಗಿ ಅವರು ಕೂಡ ಸ್ಪಷ್ಟಪಡಿಸಬಹುದು ಎಂದು ನಾನು ಅಂದುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್

    ಮೈಸೂರು ಗ್ಯಾಂಗ್ ರೇಪ್ ಪ್ರಕರಣದಿಂದಾಗಿ ರಾಜ್ಯದ ಮಾನ ಹರಾಜಾಗ್ತಿದೆ. ಆದರೆ ಮತಿಗೇಡಿ ರಾಜಕಾರಣಿಗಳು ಮತಿಹೀನರಾಗಿ ಮಾತಾಡ್ತಿದ್ದಾರೆ. ಅದರಲ್ಲೂ ಬಿಜೆಪಿ ಸಚಿವರು ಗಂಭೀರತೆ ಇಲ್ಲದಂತೆ ಮಾತಾಡ್ತಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಜ್ಞಾನಿಯ ರೀತಿ ಮಾತನಾಡಿದ್ದಾರೆ. ಕಾಡಿ-ಬೇಡಿ, ಒತ್ತಡ-ಬೆದರಿಕೆ ಹಾಕಿ ಸಚಿವಗಿರೋ ಜ್ಞಾನೇಂದ್ರ ಅವರಿಗೆ ಸಿಕ್ಕಿರೋ ಗೃಹ ಇಲಾಖೆ ಬಗ್ಗೆ ಜ್ಞಾನವೇ ಇಲ್ಲದಂತೆ ವರ್ತಿಸ್ತಿದ್ದಾರೆ. ಗೃಹ ಸಚಿವರಾದ ಮೇಲೆ ಪೊಲೀಸರು ನಿದ್ದೆ ಮಾಡೋಕೇ ಬಿಡ್ತಿಲ್ಲ ಅಂತ ಹೇಳಿ ವಿವಾದಕ್ಕೀಡಾಗಿದ್ದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಮೈಸೂರು ಗ್ಯಾಂಗ್‍ರೇಪ್ ವಿಚಾರವಾಗಿ ಪರಪ್ಪನ ಅಗ್ರಹಾರದ ಬಳಿ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ರೇಪ್ ಆಗಿರೋದು ಮೈಸೂರಲ್ಲ, ಆದರೆ ಕಾಂಗ್ರೆಸ್‍ನವರು ನನ್ನ, ಗೃಹ ಸಚಿವರನ್ನ ರೇಪ್ ಮಾಡೋ ಪ್ರಯತ್ನ ಮಾಡ್ತಿದ್ದಾರೆ. ಘಟನೆ ಅಮಾನುಷ. ಯಾರೂ ರಾಜಕೀಯ ಮಾಡಬಾರದು. ಜೊತೆಗೆ ಯುವಕ-ಯುವತಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಹೋಗಬೇಡಿ ಅಂತ ತಡೆಯೋದಕ್ಕೂ ಆಗೋದಿಲ್ಲ. ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ ಎಂದು ಹೇಳಿದ್ದರು. ಗೃಹ ಸಚಿವರ ಹೇಳಿಕೆಗೆ ಸಿಎಂ ಬೊಮ್ಮಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಸಿಎಂ ಸೂಚಿಸಿದ್ದ ಬಳಿಕ ಅರಗ ಜ್ಞಾನೇಂದ್ರ ಕ್ಷಮೆ ಯಾಚಿಸಿದ್ದಾರೆ.

  • ರೇಪ್ ಬಿಟ್ಟು ಕಿರುಕುಳ  ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ಮೈಸೂರು: ಅತ್ಯಾಚಾರ ನಡೆದ್ರೂ ಐಪಿಸಿ ಸೆಕ್ಷನ್ 376ರ ಅಡಿ ಯಾಕೆ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿ.ಎಸ್ ಉಗ್ರಪ್ಪ, ತಿಂಗಳಲ್ಲಿ ಮೈಸೂರಿನಲ್ಲಿ ಒಂದು ಶೂಟೌಟ್ ಆಗಿದೆ. ಮೂರು ಮರ್ಡರ್ ಗಳಾಗಿವೆ, ಮೂರು ದರೋಡೆ, 16 ಕಳ್ಳತನಗಳಾಗಿವೆ. ಸರಸ್ವತಿಪುರಂನಲ್ಲಿ ಇವತ್ತು ಬಾಲಕಿ ಅತ್ಯಾಚಾರ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅತ್ಯಾಚಾರ ನಡೆದ್ರೂ 376ರ ಅಡಿ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ? ಹಿಂದೆ ವಿಬ್ ಗಯಾರ್ ಶಾಲೆಯಲ್ಲಿ ಪ್ರಕರಣ ಆಗಿತ್ತು ಆಗ ನೀವು ಏನಂತ ಬಾಯಿ ಬಡಿದುಕೊಳ್ತಿದ್ರಿ. ಈಗ ಮೈಸೂರಿನ ಹೊಣೆ ಯಾರು ಹೊರಬೇಕು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅಮಾನವೀಯವಾದುದು. ದೆಹಲಿಯ ನಿರ್ಭಯಾ ಕೇಸ್ ರೀತಿಯಲ್ಲಿ, ತೆಲಂಗಾಣದ ರೆಡ್ಡಿ ಕೇಸ್ ರೀತಿಯಲ್ಲಿ ಹೀನ ಕೃತ್ಯವಿದು. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್‍ನಲ್ಲಿ ಯುವತಿ ಮತ್ತು ಅಕೆಯ ಸ್ನೇಹಿತ ಮಾತನಾಡುತ್ತಿರುತ್ತಾರೆ. ಅಲ್ಲಿಂದ ಯುವತಿ ಎಳೆದೋಯ್ದು ಕೃತ್ಯವೆಸಗಿದ್ದಾರೆ. ಸಂಜೆ 7:30 ರಿಂದ 10:30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ, ಗಾಯಗಳಾಗಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ. ಘಟನೆ ನಡೆದು 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ ನಂತರ ಹಾಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು ಆಗ ನೀವು ಏನು ಮಾಡಿದ್ದಿರಿ ಇದರ ಬಗ್ಗೆ ನೀವು ಉತ್ತರಿಸಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್