Tag: Home Quarantine

  • ವಿದೇಶಗಳಿಂದ ವಾಪಸ್ಸಾಗುವ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್‌ ಕಡ್ಡಾಯ

    ವಿದೇಶಗಳಿಂದ ವಾಪಸ್ಸಾಗುವ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್‌ ಕಡ್ಡಾಯ

    ನವದೆಹಲಿ: ದೇಶದಲ್ಲಿ ಕೋವಿಡ್‌ ಮೂರನೇ ಅಲೆ ವ್ಯಾಪಕವಾಗಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ವಿದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸುವವರಿಗೆ ಒಂದು ವಾರ ಹೋಂ ಕ್ವಾರಂಟೈನ್‌ ಕಡ್ಡಾಯ. ಅಲ್ಲದೇ ಕ್ವಾರಂಟೈನ್‌ ಆದ 6ನೇ ದಿನಕ್ಕೆ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

    ಅತ್ಯಂತ ಅಪಾಯದ ದೇಶಗಳ ಪಟ್ಟಿ 19ಕ್ಕೆ ಏರಿದೆ. ಡಿಸೆಂಬರ್‌ ತಿಂಗಳಲ್ಲೇ ಈ ಪಟ್ಟಿಗೆ 9 ದೇಶಗಳು ಸೇರಿಕೊಂಡಿವೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಬಿಗಿ ನಿಯಮಗಳನ್ನು ರೂಪಿಸಲಾಗಿದೆ. ಇದನ್ನೂ ಓದಿ: ಸೆಲ್ಫ್ ಕೋವಿಡ್ ಟೆಸ್ಟಿಂಗ್ ಮಾಡಿಕೊಳ್ಳುವವರಿಗೆ ಮಾರ್ಗಸೂಚಿ ನೀಡಬೇಕು: ಡಾ.ವಿಶಾಲ್ ರಾವ್

    ಹೊರದೇಶಗಳಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್‌ ಆಗಬೇಕು. ಕೊನೆ ದಿನದಲ್ಲಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಿಸಬೇಕು. ಅದರಲ್ಲಿ ಪಾಸಿಟಿವ್‌ ಬಂದರೆ ಅಂತಹವರನ್ನು ಐಸೊಲೇಷನ್‌ ಮಾಡಲಾಗುವುದು. ಅವರ ಮಾದರಿಯನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಎಂದು ತಿಳಿಸಿದೆ.

    ಸೋಂಕಿತ ಪ್ರಯಾಣಿಕನ ಅಕ್ಕಪಕ್ಕ ಕುಳಿತವರು ಹಾಗೂ ಸಿಬ್ಬಂದಿಯನ್ನು ಸಂಪರ್ಕಿತರು ಎಂದೇ ಪರಿಗಣಿಸಲಾಗುವುದು. ಒಂದು ವೇಳೆ ಪ್ರಯಾಣಿಕರ ವರದಿ ನೆಗೆಟಿವ್‌ ಬಂದರೆ ಮುಂದಿನ ಒಂದು ವಾರ ತಮ್ಮ ಆರೋಗ್ಯದ ಮೇಲೆ ಸ್ವಯಂ ನಿಗಾ ವಹಿಸಬೇಕು ಎಂದು ನಿಯಮದಲ್ಲಿ ಹೇಳಿದೆ. ಇದನ್ನೂ ಓದಿ: 700 ಕುರಿಗಳಿಂದ ವ್ಯಾಕ್ಸಿನ್ ಸಂದೇಶ- ಮೆಚ್ಚಿದ ನೆಟ್ಟಿಗರು

    ತಪಾಸಣೆ ವೇಳೆ ರೋಗಲಕ್ಷಣಗಳು ಕಂಡುಬರುವ ಪ್ರಯಾಣಿಕರನ್ನು ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುವುದು. ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದರೆ ಸಂಪರ್ಕಿತರನ್ನು ಗುರುತಿಸಲಾಗುವುದು ಎಂದು ಹೇಳಿದೆ.

    ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ಹೊಸ ಪ್ರಕರಣಗಳು ದೃಢಪಟ್ಟಿವೆ. ಶೇಕವಾರು ಪ್ರಮಾಣ ಶೇ.28ಕ್ಕೇರಿದೆ.

  • ಹೋಮ್ ಕ್ವಾರಂಟೈನ್‍ನಿಂದಾಗಿಯೇ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚುತ್ತಿದೆ: ಸೋಮಣ್ಣ

    ಹೋಮ್ ಕ್ವಾರಂಟೈನ್‍ನಿಂದಾಗಿಯೇ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚುತ್ತಿದೆ: ಸೋಮಣ್ಣ

    ಮಡಿಕೇರಿ: ಹೋಮ್ ಕ್ವಾರಂಟೈನ್ ನಿಂದಾಗಿಯೇ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ಅತಂಕ ವ್ಯಕ್ತಪಡಿಸಿದ್ದಾರೆ.

    ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನೂ ಹೆಚ್ಚಳವಾಗುತ್ತಿದ್ದು, ಡೆತ್ ರೇಟ್ ಸಹ ಜಾಸ್ತಿ ಆಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ನಲ್ಲಿರುವವರನ್ನು ಮುಲಾಜಿಲ್ಲದೆ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಿ ಎಂದು ನಗರದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಚಿವ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.

    ಹೋಮ್ ಕ್ವಾರಂಟೈನ್ ನಿಂದ ಜಿಲ್ಲೆಯಲ್ಲಿ ಸಾವುಗಳು ಸಂಭವಿಸುತ್ತಿವೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಸಚಿವರ ಗಮನ ಸೇಳೆದರು. ಹೀಗಾಗಿ ಯಾರೇ ಹೋಮ್ ಕ್ವಾರಂಟೈನ್ ನಲ್ಲಿ ಇದ್ದರೂ ಅವರನ್ನು ಮನೆಯಲ್ಲಿ ಇರಿಸದೇ ಕೋವಿಡ್ ಕೇರ್ ಸೆಂಟರ್ ಗಳಿಗೆ ಕರೆ ತರಬೇಕು, ಯಾರ ಒತ್ತಡಕ್ಕೂ ಒಳಗಾಗಬರದು. ಈ ರೀತಿಯಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಸಿಎಂ ಗಮನಕ್ಕೆ ತಂದು ಕೊಡಗು ಜಿಲ್ಲೆಯನ್ನು ಮತ್ತೆ ಒಂದುವಾರ ಲಾಕ್‍ಡೌನ್ ಮಾಡಲು ಮನವಿ ಮಾಡಿದೇವೆ ಎಂದು ಸಚಿವ ಸೋಮಣ್ಣ ತಿಳಿಸಿದರು.

  • ಕೊಡಗಿನಲ್ಲಿ ಪಾಸಿಟಿವ್, ಕೇರಳದಲ್ಲಿ ನೆಗೆಟಿವ್ – ಮದ್ವೆಯಾದ ದಿನವೇ ವಧು ಕ್ವಾರಂಟೈನ್

    ಕೊಡಗಿನಲ್ಲಿ ಪಾಸಿಟಿವ್, ಕೇರಳದಲ್ಲಿ ನೆಗೆಟಿವ್ – ಮದ್ವೆಯಾದ ದಿನವೇ ವಧು ಕ್ವಾರಂಟೈನ್

    ಮಡಿಕೇರಿ: ಕೊರೊನಾದಿಂದ ಮದುವೆಯಾದ ದಿನವೇ ವಧು ಹೋಮ್ ಕ್ವಾರಂಟೈನ್ ಆಗಿದ್ದಾರೆ. ತವರು ಕೊಡಗಿನ ವರದಿಯಲ್ಲಿ ಪಾಸಿಟಿವ್ ಬಂದ್ರೆ, ಪತಿಯ ಊರಿನಲ್ಲಿ ನೆಗೆಟಿವ್ ಬಂದಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ಸುಂಟಿಕೊಪ್ಪ ಸಮೀಪದ ಕೆದಕಲ್ ನಿವಾಸಿ ರಾಜನ್ ಪುತ್ರಿ ಸಿಮ್ನಾ ಮದುವೆ ಕೇರಳದ ಕಣ್ಣೂರಿನ ಯುವಕನ ಜೊತೆ ಏಪ್ರಿಲ್ 25ರಂದು ನಿಗದಿಯಾಗಿತ್ತು. ಕೊರೊನಾ ಮಾರ್ಗಸೂಚಿ ಹಿನ್ನೆಲೆ ವಧು-ವರ ಏಪ್ರಿಲ್ 23ರಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಎರಡು ದಿನವಾದ್ರೂ ವರದಿ ಬಾರದಿದ್ದಾಗ ಏನು ಆಗದೆಂಬ ನಂಬಿಕೆಯಲ್ಲಿ ಕುಟುಂಬಸ್ಥರು ಮದುವೆ ಮಾಡಿದ್ದರು.

    ಮದುವೆಯಾಗಿ ಪತಿ ಮನೆ ಸೇರುತ್ತಿದ್ದಂತೆ ಮೊಬೈಲ್ ಗೆ ಕೊರೊನಾ ಪಾಸಿಟಿವ್ ಇರೋದರ ಮೆಸೇಜ್ ಬಂದಿದೆ. ಹೀಗಾಗಿ ವರನ ಕುಟುಂಬಸ್ಥರು ವಧುವನ್ನ ಪ್ರತ್ಯೇಕ ಕೋಣೆಯಲ್ಲಿರಿಸಿದ್ದರು. ಕೇರಳದಲ್ಲಿ ವಧುವನ್ನ ಮತ್ತೊಮ್ಮೆ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ವರದಿ ನೆಗೆಟಿವ್ ಬಂದಿದೆ.

    ಕೇರಳದಲ್ಲಿ ವರದಿ ನೆಗಟಿವ್ ಬಂದಾಗ ರಾಜನ್ ಕುಟುಂಬಸ್ಥರು ಸ್ಥಳೀಯ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ. ನಮ್ಮಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಕೇರಳದಲ್ಲಿ ಯಾವ ಪರೀಕ್ಷೆ ಮಾಡಿದ್ದಾರೆ ಎಂಬುದರ ಬಗ್ಗೆ ಗೊತ್ತಿಲ್ಲ. ನಾವು ತಪ್ಪು ರಿಪೋರ್ಟ್ ನೀಡಿದ್ದೇವೆ ಅಂತ ಹೇಳೋದು ಸರಿಯಲ್ಲ. ಕೆಲವರಿಗೆ ಲಕ್ಷಣಗಳು ಇರತ್ತೆ, ಕೆಲವರಿಗೆ ಇರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಕೊರೊನಾ

    ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಕೊರೊನಾ

    ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ಕುರಿತು ಟ್ವಿಟ್ಟರ್‍ ನಲ್ಲಿ ತಿಳಿಸಿರುವ ಜಮೀರ್ ಅಹ್ಮದ್, ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ. ಇದೀಗ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ವೈದ್ಯರ ಸಲಹೆಯ ಮೇರೆಗೆ ಹೋ ಕ್ವಾರಂಟೈನ್‍ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೂಡ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

  • ಕತ್ರಿನಾ ಕೈಫ್‍ಗೆ ಕೊರೊನಾ ಪಾಸಿಟಿವ್ – ಮನೆಯಲ್ಲೇ ಕ್ವಾರಂಟೈನ್

    ಕತ್ರಿನಾ ಕೈಫ್‍ಗೆ ಕೊರೊನಾ ಪಾಸಿಟಿವ್ – ಮನೆಯಲ್ಲೇ ಕ್ವಾರಂಟೈನ್

    ಮುಂಬೈ: ಬಾಲಿವುಡ್‍ನ ಸ್ಟಾರ್ ನಟಿ ಕತ್ರಿನಾ ಕೈಫ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ದೃಢಪಟ್ಟಂತೆ ಕತ್ರಿನಾ ಅವರ ಮನೆಯಲ್ಲೇ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ನಾನು ಕೊರೊನಾ ಟೆಸ್ಟ್ ಮಾಡಿಸಿದ್ದೇನೆ. ಈ ವೇಳೆ ನನಗೆ ಕೊರೊನಾ ಪಾಸಿಟಿವ್ ಆಗಿದೆ. ಹಾಗಾಗಿ ನಾನು ಹೋಂ ಕ್ವಾರಂಟೈನ್ ಒಳಗಾಗಿದ್ದೇನೆ ಹಾಗೂ ನನಗೆ ವೈದ್ಯರು ತಿಳಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದ್ದೇನೆ. ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕತ್ರಿನಾ ಬರೆದುಕೊಂಡಿದ್ದಾರೆ.

    ಹಾಗೆ ನನ್ನೊಂದಿಗೆ ಯಾರೆಲ್ಲ ಸಂಪರ್ಕ ಮಾಡಿದ್ದೀರಿ ಅವರೆಲ್ಲರೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ. ನಿಮ್ಮ ಪ್ರೀತಿ ಹಾಗೂ ಆರ್ಶೀವಾದ ಹೀಗೆ ನನ್ನೊಂದಿಗಿರಲಿ. ಎಲ್ಲರೂ ಜಾಗರೂಕತೆಯಿಂದ ಇರಿ ಎಂದು ತಿಳಿಸಿದ್ದಾರೆ.

    ಕೆಲದಿನಗಳ ಹಿಂದೆ ಕತ್ರಿನಾ ಕೈಫ್ ಅವರ ಗೆಳೆಯ ವಿಕ್ಕಿ ಕೌಷಲ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದೀಗ ಕತ್ರಿನಾ ಅವರಿಗೆ ಕೊರೊನಾ ದೃಢಪಟ್ಟಿದೆ. ದೇಶದಲ್ಲಿ ಪ್ರಾರಂಭವಾಗಿರುವ 2ನೇ ಹಂತದ ಕೊರೊನಾ ಅಟ್ಟಹಾಸ, ಬಾಲಿವುಡ್‍ಗೆ ಭಾರೀ ಹೊಡೆತ ನೀಡಿದೆ. ಹಲವು ನಟ-ನಟಿಯರಿಗೆ ಕೊರೊನಾ ವಕ್ಕರಿಸಿಕೊಂಡಿದೆ. ಕೆಲದಿನಗಳ ಹಿಂದೆ, ಬಾಲಿವುಡ್‍ನಟ ಅಕ್ಷಯ್ ಕುಮಾರ್, ಅಮೀರ್ ಖಾನ್ ಹಾಗೂ ಇತರರಿಗೆ ಕೊರೊನಾ ದೃಢಪಟ್ಟಿತ್ತು. ಇದರಿಂದಾಗಿ ಬಾಲಿವುಡ್‍ನ ಹಲವು ಸಿನಿಮಾಗಳ ಚಿತ್ರೀಕರಣಕ್ಕೆ ಹೊಡೆತ ಬಿದ್ದಂತಾಗಿದೆ.

  • ಸಿಎಂಗಾಗಿ ಹೋಮ್‌ ಕ್ವಾರಂಟೈನ್‌ ನಿಯಮ ಬದಲಾಗುತ್ತಾ?

    ಸಿಎಂಗಾಗಿ ಹೋಮ್‌ ಕ್ವಾರಂಟೈನ್‌ ನಿಯಮ ಬದಲಾಗುತ್ತಾ?

    ಬೆಂಗಳೂರು: ಕೋವಿಡ್‌ ಸೋಂಕಿತರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೋಂ ಕ್ವಾರಂಟೈನ್‌ ನಿಯಮ ಬದಲಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಬಿಬಿಎಂಪಿ, ಆರೋಗ್ಯ ಇಲಾಖಾ ಅಧಿಕಾರಿಗಳು ಇಂದು ಸಿಎಂ ಕಚೇರಿ ಮತ್ತು ಮನೆಯ ಮುಂದೆ ಆ. 2 ರಿಂದ 16 ರವರೆಗೂ ಪ್ರವೇಶ ನಿರಾಕರಣೆ ಮಾಡಿ ಪೋಸ್ಟರ್‌ ಅಂಟಿಸಿದ್ದಾರೆ. ಆಗಸ್ಟ್ 16 ರವರೆಗೂ ಸಿಎಂ ಬಿಎಸ್ ಯಡಿಯೂರಪ್ಪ ಹೋಂ ಕ್ವಾರಂಟೈನ್ ಹಿನ್ನೆಲೆಯಲ್ಲಿ ಯಾರಿಗೂ ಪ್ರವೇಶವಿಲ್ಲ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

    ಯಡಿಯೂರಪ್ಪನವರು ಈಗ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವ ಕಾರಣ ನಗೆಟಿವ್‌ ಬಂದ ಬಳಿಕ ಬಿಡುಗಡೆಯಾಗಲಿದ್ದಾರೆ. ಡಿಸ್ಚಾರ್ಜ್ ನಂತರ ಸಿಎಂ ಬಿಎಸ್ ಯಡಿಯೂರಪ್ಪ ಹೋಮ್‌ ಕ್ವಾರಂಟೈನ್‌ ಆಗಲಿದ್ದಾರೆ.

    ಹೋಮ್‌ ಕ್ವಾರಂಟೈನ್‌ ಆಗಲಿರುವ ಸಿಎಂಗಾಗಿ ಕೋವಿಡ್‌ 19 ಮಾರ್ಗಸೂಚಿ ಬದಲಾಗುತ್ತಾ ಎಂಬ ಪ್ರಶ್ನೆ ಏಳಲು ಕಾರಣ ಸ್ವಾತಂತ್ರ್ರ್ಯ ದಿನಾಚರಣೆ. ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ಪ್ರತಿ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿಗಳ ಭಾಷಣ ಇದ್ದರೆ ಗಣರಾಜ್ಯೋತ್ಸವ ದಿನದಂದು ರಾಜ್ಯಪಾಲರು ಭಾಷಣ ಮಾಡುತ್ತಾರೆ. ಆದರೆ ಈ ಬಾರಿ ಯಾರು ಭಾಷಣ ಮಾಡುತ್ತಾರೆ ಎಂಬ ಪ್ರಶ್ನೆ ಎದ್ದಿದೆ.

    ಆಗಸ್ಟ್‌ 16ರವರೆಗೆ ಹೋಂ ಕ್ವಾರಂಟೈನ್‌ ವಿಧಿಸಲಾಗಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಮನೆಯಿಂದ ತೆರಳಿ ಭಾಷಣ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಭಾಷಣ ಮಾಡಿದರೆ ಕೋವಿಡ್‌ 19 ಮಾರ್ಗಸೂಚಿ ಉಲ್ಲಂಘನೆಯಾಗುತ್ತದೆ.

    ಭಾಷಣ ಮಾಡಲೇಬೇಕಾದ ಕಾರಣ ಸಿಎಂ ಚಂದನ/ ಆನ್‌ಲೈನ್‌ ಮೂಲಕವೂ ಭಾಷಣ ಮಾಡಬಹುದು. ಆದರೆ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣವನ್ನು ಯಾರು ಮಾಡುತ್ತಾರೆ ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ.

    ಸರ್ಕಾರದಲ್ಲಿ ಒಬ್ಬರೇ ಉಪಮುಖ್ಯಮಂತ್ರಿ ಇದ್ದಿದ್ದರೆ ಯಾವುದೇ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಈ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಲ್ಲಿ ಮೂವರು ಶಾಸಕರಿಗೆ ಉಪಮುಖ್ಯಮಂತ್ರಿ ಪಟ್ಟವನ್ನು ನೀಡಲಾಗಿದೆ. ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಆಗಸ್ಟ್‌ 15ರಂದು ಯಾರು ಭಾಷಣ ಮಾಡಬೇಕು? ಯಾರು ಧ್ವಜಾರೋಹಣ ಮಾಡಬೇಕು ಎಂಬ ವಿಚಾರದ ಬಗ್ಗೆ ಈಗ ಸರ್ಕಾರದ ಮಟ್ಟದಲ್ಲಿ ಚರ್ಚೆ ಆರಂಭಗೊಂಡಿದೆ.

  • ಸಿಎಂಗೆ ಕೊರೊನಾ – 8 ಮಂದಿ ಸೆಲ್ಫ್‌ ಕ್ವಾರಂಟೈನ್‌

    ಸಿಎಂಗೆ ಕೊರೊನಾ – 8 ಮಂದಿ ಸೆಲ್ಫ್‌ ಕ್ವಾರಂಟೈನ್‌

    ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ 8 ಮಂದಿ ಸೆಲ್ಫ್‌ ಕಾರಂಟೈನ್‌ ಆಗಿದ್ದಾರೆ.

    ಇದುವರೆಗೆ‌ 5 ಜನ ಸಚಿವರು, ಒಬ್ಬರು ಮಾಜಿ ಶಾಸಕ, ನಗರ ಪೊಲೀಸ್‌ ಆಯುಕ್ತ ಮತ್ತು ಪುತ್ರ ವಿಜಯೇಂದ್ರ ಕ್ವಾರಂಟೈನ್‌ ಆಗಿದ್ದಾರೆ.

    ಯಾರೆಲ್ಲ ಕ್ವಾರಂಟೈನ್?
    ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಸಚಿವ ಆರ್ ಅಶೋಕ್, ಮುಜರಾಯಿ ಖಾತೆಯ ಸಚಿವ ಶ್ರೀನಿವಾಸ ಪೂಜಾರಿ, ನಗರಾಭಿವೃದ್ಧಿ ‌ಸಚಿವ ಭೈರತಿ ಬಸವರಾಜ್, ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತ ಕೆಸಿ. ಕಮಲ್‌ ಪಂತ್‌, ಮಾಜಿ ಶಾಸಕ ಜೀವರಾಜ್‌, ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸೆಲ್ಫ್‌ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

  • ರ‍್ಯಾಪಿಡ್ ಟೆಸ್ಟ್ ನೆಗೆಟಿವ್, ಸ್ವ್ಯಾಬ್ ಟೆಸ್ಟ್ ಪಾಸಿಟಿವ್ – 60ಕ್ಕೂ ಹೆಚ್ಚು ಮಂದಿ ಹೋಂ ಕ್ವಾರಂಟೈನ್

    ರ‍್ಯಾಪಿಡ್ ಟೆಸ್ಟ್ ನೆಗೆಟಿವ್, ಸ್ವ್ಯಾಬ್ ಟೆಸ್ಟ್ ಪಾಸಿಟಿವ್ – 60ಕ್ಕೂ ಹೆಚ್ಚು ಮಂದಿ ಹೋಂ ಕ್ವಾರಂಟೈನ್

    – ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿ ಎಡವಟ್ಟು ಮಾಡಿದ ಆರೋಗ್ಯ ಇಲಾಖೆ

    ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ವರದಿ ಬರುವ ಮುನ್ನವೆ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿದೆ.

    ಮೃತ ವ್ಯಕ್ತಿಯ ಶವ ಪಡೆದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿ ಮೇಲೆ ಮೃತವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 60ಕ್ಕೂ ಹೆಚ್ಚು ಮಂದಿಯಲ್ಲಿ ಆತಂಕ ಶುರುವಾಗಿದೆ. ಯಳಂದೂರು ಬಳೇಪೇಟೆ ವರ್ಷದ ವೃದ್ಧರೊಬ್ಬರಿಗೆ ಗ್ಯಾಂಗ್ರಿನ್ ಆಗಿತ್ತು. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಲು ಬಂದಾಗ ಅವರಿಗೆ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿತ್ತು. ವರದಿ ನೆಗೆಟಿವ್ ಬಂದಿತ್ತು. ನಂತರ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು.

    ಆದರೆ ಅವರಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದಿದ್ದರಿಂದ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುಂಚಯೇ ಅವರು ಮೃತಪಟ್ಟಿದ್ದರು. ಈ ವೇಳೆ ಎಡವಟ್ಟು ಮಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಬರುವವರೆಗೂ ಕಾಯದೆ ಮೃತ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಶವವನ್ನು ಯಳಂದೂರಿಗೆ ತೆಗೆದುಕೊಂಡು ಹೋದ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇದೇ ವೇಳೆ ವರದಿ ಬಂದಿದ್ದು ಮೃತವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.

    ಈ ವಿಷಯ ತಿಳಿಯುವುದರೊಳಗೆ ಅಂತ್ಯಕ್ರಿಯೆ ಪೂರ್ಣ ಗೊಂಡಿತ್ತು. ಕೊರೊನಾ ಪಾಸಿಟಿವ್ ಸುದ್ದಿ ಕೇಳಿ ಮೃತನ ಕುಟುಂಬಸ್ಥರಲ್ಲಿ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರಲ್ಲಿ ಆತಂಕ ಶುರುವಾಗಿದೆ. ಇದೀಗ ಆರೋಗ್ಯ ಇಲಾಖೆ ಯಳಂದೂರಿನ ಬಳೇಪೇಟೆ ಪ್ರದೇಶಕ್ಕೆ ಸೋಂಕುನಿವಾರಕ ದ್ರಾವಣ ಸಿಂಪಡಿಸಿ ಸೀಲ್‍ಡೌನ್ ಮಾಡಿದ್ದಾರೆ. ಜೊತೆಗೆ ಇಲ್ಲಿನ ನಿವಾಸಿಗಳ ಕೊರೊನಾ ಟೆಸ್ಟ್ ಗೆ ಮುಂದಾಗಿದೆ.

  • ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌

    ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌

    ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

    ಭಾಸ್ಕರ್‌ ‌ ರಾವ್‌ ಕಾರು ಚಾಲಕ ಕೋವಿಡ್‌ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್‌ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಭಾಸ್ಕರ್‌ ರಾವ್‌, ಚಾಲಕನಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಹೋಂ ಕ್ವಾರಂಟೈನ್‌ ಆಗಲಿದ್ದೇನೆ. 3 ತಿಂಗಳ ನಂತರ ಐದನೇ ಬಾರಿಗೆ ಸೋಮವಾರ ಮತ್ತೆ ಪರೀಕ್ಷೆಗೆ ಒಳಗಗಾಗಲಿದ್ದೇನೆ. ಹಲವಾರು ಪಾಸಿಟಿವ್‌ ಪ್ರಕರಣ ಹೊಂದಿದವರ ಜೊತೆ ಸಂವಹನ ಮಾಡಿದ್ದೇನೆ. ನಿಮ್ಮ ಶುಭ ಹಾರೈಕೆಗಳಿಂದ ಪಾಸಿಟಿವ್‌ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ.

     

    ಕಳೆದ ವಾರ ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದರು.

    ತಮ್ಮ ಆರೋಗ್ಯ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದ ಅವರು, ಕಚೇರಿಯ ಸಿಬ್ಬಂದಿಯಲ್ಲಿ ರೋನಾ ಪತ್ತೆಯಾಗಿದೆ. ಹೀಗಾಗಿ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆಂದು ಎಂದು ತಿಳಿಸಿದ್ದರು.

  • ‘ಮಾಸ್ಕ್ ಹಾಕಲ್ಲ, ಮನೆ ಒಳಗೂ ಇರಲ್ಲ, ಏನ್‌ ಮಾಡ್ತೀರೋ ಮಾಡ್ಕೊಳ್ಳಿʼ – ಹೋಂ ಕ್ವಾರಂಟೈನ್‌ ವ್ಯಕ್ತಿಯಿಂದ ಕಿರಿಕ್‌

    ‘ಮಾಸ್ಕ್ ಹಾಕಲ್ಲ, ಮನೆ ಒಳಗೂ ಇರಲ್ಲ, ಏನ್‌ ಮಾಡ್ತೀರೋ ಮಾಡ್ಕೊಳ್ಳಿʼ – ಹೋಂ ಕ್ವಾರಂಟೈನ್‌ ವ್ಯಕ್ತಿಯಿಂದ ಕಿರಿಕ್‌

    ಬೆಂಗಳೂರು: ಕೋವಿಡ್‌ 19 ನಿಯಮ ಉಲ್ಲಂಘನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹೋಮ್‌ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ.

    ಕೆಂಗೇರಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ನಿವಾಸಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿತ್ತು. ಆ  ನಿವಾಸಿಯನ್ನು ಕೋವಿಡ್‌ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಜೊತೆಗಿದ್ದ ವ್ಯಕ್ತಿಯನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿತ್ತು.

    ಆತನ ಮನೆಗೆ ಬಿಬಿಎಂಪಿ ಸಿಬ್ಬಂದಿ ಬಂದು ಕ್ವಾರಂಟೈನ್‌ ನೋಟಿಸ್‌ ಅಂಟಿಸಿ ಹೋಗಿದ್ದರು. ಆದರೆ ಕ್ವಾರಂಟೈನ್‌ನಲ್ಲಿದ್ದ ಈ ವ್ಯಕ್ತಿ ಎಂದಿನಂತೆ ವಾಕಿಂಗ್ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಮಾಸ್ಕ್ ಧರಿಸದೇ ಅಪಾರ್ಟ್ ಮೆಂಟ್ ತುಂಬಾ ಓಡಾಟ ಮಾಡಿದ್ದಾನೆ.

    ಓಡಾಟ ಮಾಡುವುದನ್ನು ಕಂಡು ನಿವಾಸಿಗಳು ಆತನನ್ನು ಪ್ರಶ್ನಿಸಿದ್ದಕ್ಕೆ, “ನಾನ್ ಮಾಸ್ಕ್ ಹಾಕಲ್ಲ. ಮನೆ ಒಳಗೂ ಇರಲ್ಲ, ಅದೇನ್ ಮಾಡ್ಕೋತಿರೋ ಮಾಡ್ಕೊಳ್ಳಿ” ಎಂದು ಕಿರಿಕ್‌ ಮಾಡಿದ್ದಾನೆ. ಅಷ್ಟೇ ಅಲ್ಲದೇ “ಬೇಕಾದ್ರೆ ಪೊಲೀಸರಿಗೆ ದೂರು ನೀಡಿ. ನಾನು ಹಿಂಗೆ ಇರ್ತೀನಿ” ಎಂದಿದ್ದಾನೆ. ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ವೇಳೆ ನಿವಾಸಿಯೊಬ್ಬರು ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    1.51 ಲಕ್ಷ ಮಂದಿಯಿಂದ ಉಲ್ಲಂಘನೆ
    ಸಿಲಿಕಾನ್‌ ಸಿಟಿಯಲ್ಲಿ ಕೊರೊನಾ ರಾಕೆಟ್‌ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕ್ವಾರಂಟೈನ್‌ಗಳು ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ. ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಬರೋಬ್ಬರಿ 1.51 ಲಕ್ಷ ಮಂದಿ ಕ್ವಾರಂಟೈನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೋವಿಡ್‌ 19 ಸೋಂಕಿತರ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಆದರೆ ಕರ್ನಾಟಕದಲ್ಲಿ 2.25 ಲಕ್ಷ ಮಂದಿ ಈ ನಿಯಮವನ್ನು ಉಲ್ಲಂಘಿಸಿ ಸುತ್ತಾಟ ಮಾಡಿದ್ದಾರೆ.

    ಈ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು 1.51 ಲಕ್ಷ ಮಂದಿ ಸುತ್ತಾಟ ಮಾಡಿದ್ದಾರೆ. ನಿಯಮ ಉಲ್ಲಂಘಿಸಿದವರಿಗೆ ಸರ್ಕಾರ ಎಚ್ಚರಿಕೆ ನೀಡಿದೆ. ಈಗಾಗಲೇ 1,645 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಹೋಮ್‌ ಕ್ವಾರಂಟೈನ್‌ ಉಲ್ಲಂಘಿಸಿದ 2,205 ಮಂದಿಯನ್ನ ಸಾಂಸ್ಥಿಕ ಕ್ವಾರಂಟೈನ್‌ ಒಳಪಡಿಸಲಾಗಿದೆ.

    ಕ್ವಾರಂಟೈನಿಗಳ ಕೈಗೆ ಸೀಲ್, ಮನೆಗೆ ಭಿತ್ತಿಪತ್ರ ಅಂಟಿಸಲಾಗುತ್ತದೆ. ಅವರ ಚಟುವಟಿಕೆ, ಚಲನವಲನಗಳ ಮೇಲೆ ಅಕ್ಕಪಕ್ಕದವರು ನಿಗಾ ಇಡಬೇಕು. ಅವರು ಮನೆಯಿಂದ ಹೊರಬಂದರೆ ಪೊಲೀಸರಿಗೆ ಮಾಹಿತಿ ಕೊಡಬೇಕು. ಆಗ ಮಾತ್ರ ಕೊರೊನಾ ಹಬ್ಬುವುದನ್ನು ತಪ್ಪಿಸಬಹುದು. ಹೋಮ್‌ ಕ್ವಾರಂಟೈನ್‌ ನಿಯಮವನ್ನು ಪದೇ ಪದೇ ಉಲ್ಲಂಘಿಸಿ ಸ್ಥಳೀಯರು ದೂರು ನೀಡಿದರೆ ಸ್ಥಳಕ್ಕೆ ಪೊಲೀಸರು ಬಂದು ವ್ಯಕ್ತಿಯನ್ನು ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಾರೆ.