Tag: home qurantine

  • ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ

    ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ

    ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ.

    ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ ಮಾಡೋದಾಗಿ ಡಿಸಿ ನಕುಲ್ ಮಾಹಿತಿ ನೀಡಿದ್ದಾರೆ.

    ಜೊತೆಗೆ ಮನೆಯಲ್ಲಿ ಎಲ್ಲರೂ ಆರಾಮಾಗಿ ಇದ್ದಾರೆ. ವಿನಾಕಾರಣ ಗೊಂದಲ ಮಾಡಬೇಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮಹಾರಾಷ್ಟ್ರದಿಂದ ಬಂದವ್ರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಮಹಾರಾಷ್ಟ್ರದಿಂದ ಬಂದವ್ರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ

    ಬೆಂಗಳೂರು: ಮಹಾರಾಷ್ಟ್ರದಿಂದ ಬಂದವರಿಗೆ ಕೊನೆಗೂ ಹೋಂ ಕ್ವಾರಂಟೈನ್ ರದ್ದು ಮಾಡಲಾಗಿದೆ.

    ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ಸ್ಫೋಟವಾಗಿದ್ರೂ ಸಾಂಸ್ಥಿಕ ಕ್ವಾರಂಟೈನ್ ರದ್ದು ಮಾಡಿ ಹೋಂ ಕ್ವಾರಂಟೈನ್ ಮಾಡುವ ನಿರ್ಧಾರವನ್ನು ಸಚಿವರು ಪ್ರಕಟಿಸಿದ್ದರು. ಸರ್ಕಾರದ ಈ ನಡೆ ವಿರೋಧಿಸಿ ಪಬ್ಲಿಕ್ ಟಿವಿ ನಿರಂತರ ಸುದ್ದಿ ಪ್ರಸಾರ ಮಾಡಿತ್ತು.

    ಕೊನೆಗೂ ಪಬ್ಲಿಕ್ ಆಗ್ರಹಕ್ಕೆ ಮಣಿದು ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ಬದಲು 7 ದಿನ ಸಾಂಸ್ಥಿಕ ಕ್ವಾರಂಟೈನ್ ನಿರ್ಧಾರ ಪ್ರಕಟಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು ಇಲ್ಲ. ಬದಲಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.

    ಐಸಿಎಂಆರ್ ಸೂಚಿತ ಲ್ಯಾಬ್‍ನಲ್ಲಿ ಕೋವಿಡ್ ಟೆಸ್ಟ್ ನೆಗೆಟಿವ್ ಬಂದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಇಲ್ಲ. 2 ದಿನಗಳ ಹಿಂದಿನ ಲ್ಯಾಬ್ ವರದಿ ಇದ್ದಲ್ಲಿ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ರದ್ದು ಮಾಡಲಾಗುವುದು. ಬೇರೆ ರಾಜ್ಯದಿಂದ ಬಂದವರಿಗೆ ಮಾತ್ರ 14 ದಿನ ಹೋಂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ.

  • ಸಾಂಸ್ಥಿಕ ಕ್ವಾರಂಟೈನ್ ಸಡಿಲ ಮಾಡಿ ಹೋಂಕ್ವಾರಂಟೈನ್ ಮಾಡುವ ಬಗ್ಗೆ ಚಿಂತನೆ: ಸುಧಾಕರ್

    ಸಾಂಸ್ಥಿಕ ಕ್ವಾರಂಟೈನ್ ಸಡಿಲ ಮಾಡಿ ಹೋಂಕ್ವಾರಂಟೈನ್ ಮಾಡುವ ಬಗ್ಗೆ ಚಿಂತನೆ: ಸುಧಾಕರ್

    ಹಾಸನ: ರಾಜ್ಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಸಡಿಲ ಮಾಡಿ ಮನೆಯಲ್ಲೇ ಕ್ವಾರಂಟೈನ್ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬಂದವರನ್ನು ಕಡ್ಡಾಯವಾಗಿ 7 ದಿನ ಕ್ವಾರಂಟೈನ್ ಮಾಡಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಂ ಕ್ವಾರಂಟೈನ್‍ನಲ್ಲಿ ಇರುವವರ ಬಗ್ಗೆ ನಿಗಾವಹಿಸಲಾಗಿದ್ದು ಸೀಲ್ ಕೂಡ ಹಾಕಲಾಗಿರುತ್ತದೆ. ಕ್ವಾರಂಟೈನ್ ಇರುವವರಿಗೆ ತಂತ್ರಜ್ಞಾನದಿಂದ ಕೂಡಿದ ವಾಚ್ ಹಾಕಿ 10 ರಿಂದ 20 ಲಕ್ಷ ಜನರವರೆಗೂ ನಿಗಾ ಇಡಬಹುದಾಗಿದೆ ಎಂದರು.

    ಮನೆಯಿಂದ ನೂರು ಮೀಟರ್ ಮುಂದೆ ಹೋದರೂ ಇದರಿಂದ ನಮಗೆ ಗೊತ್ತಾಗುತ್ತೆ. 14 ದಿ ಆದ ನಂತರ ದೇಹದಲ್ಲಿ ಕೊರೊನಾ ವಿರುದ್ಧ ಹೋರಾಟ ಶಕ್ತಿ ವೃದ್ಧಿ ಆಗುತ್ತೆ. ಅವರ ದೇಹದಲ್ಲಿ ರೋಗಾಣು ಜೀವಂತ ಆಗಿದೆಯಾ ಎಂಬುದನ್ನು ಪರಿಶೀಲನೆ ಮಾಡಬೇಕು. ಅಪರೂಪದ ಪ್ರಕರಣಗಳಲ್ಲಿ 25 ದಿನಗಳ ನಂತರವೂ ಪಾಸಿಟಿವ್ ಬಂದ ಉದಾಹರಣೆಗಳಿವೆ ಎಂದು ಹೇಳಿದ್ರು.

    ಇದೇ ವೇಳೆ ಹಾಸನ ಜಿಲ್ಲೆಯ ಶಾಸಕರು ಮಹಾರಾಷ್ಟ್ರದಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್‍ನಲ್ಲಿ ಇಡಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ರು. ಬೇರೆ ರಾಜ್ಯದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಿದ್ರು ಕೂಡ ಮಹಾರಾಷ್ಟ್ರದಿಂದ ಇಡೀ ರಾಜ್ಯದಲ್ಲಿ ಯಾವುದೇ ಭಾಗಕ್ಕೆ ಬಂದರೂ ಪ್ರತ್ಯೇಕವಾಗಿ 7 ದಿನಕ್ಕೆ ಬದಲಾಗಿ 14 ದಿನಕ್ಕೆ ಕ್ವಾರಂಟೈನ್ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ರು.

  • ಕ್ವಾರಂಟೈನ್ ಆಗಿದ್ದ ಶಾಲೆಯಲ್ಲೇ ಯುವಕ ಆತ್ಮಹತ್ಯೆ

    ಕ್ವಾರಂಟೈನ್ ಆಗಿದ್ದ ಶಾಲೆಯಲ್ಲೇ ಯುವಕ ಆತ್ಮಹತ್ಯೆ

    ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ.

    ಮುಂಬೈನಿಂದ ಬುಧವಾರ ಬಂದಿದ್ದ ಯುವಕನನ್ನು ಕ್ವಾರೆಂಟೈನ್ ಮಾಡಲಾಗಿತ್ತು. ಆದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಕಡಂದಲೆ ಶಾಲೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

    ಕೊರೊನಾದಿಂದ ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಮ್ಮ ಊರಿನಲ್ಲಿ ಕ್ವಾರಂಟೈನ್ ಬೇಡ- ಗ್ರಾಮಸ್ಥರಿಂದ ಪ್ರತಿಭಟನೆ

    ನಮ್ಮ ಊರಿನಲ್ಲಿ ಕ್ವಾರಂಟೈನ್ ಬೇಡ- ಗ್ರಾಮಸ್ಥರಿಂದ ಪ್ರತಿಭಟನೆ

    ಕೊಪ್ಪಳ: ನಮ್ಮ ಊರಿನಲ್ಲಿ ಕ್ವಾರಂಟೈನ್ ಮಾಡೋದು ಬೇಡ ಎಂದು ಗ್ರಾಮಸ್ಥರು ಮಧ್ಯರಾತ್ರಿ ಧರಣಿ ಕುಳಿತ ಘಟನೆಯೊಂದು ಕೊಪ್ಪಳದ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಕ್ವಾರೆಟೆಂನ್‍ಗೆ ಜಿಲ್ಲಾಡಳಿತ ಸಿದ್ಧತೆ ಮಾಡುತ್ತಿತ್ತು. ಈ ವಿಚಾರ ಅರಿತ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶಂಕಿತರನ್ನು ಕಾಲೇಜಿನಲ್ಲಿ ಕ್ವಾರಂಟೈನ್ ಮಾಡುವುದು ಬೇಡ ಎಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಮಧ್ಯಸ್ಥಿಕೆ ವಹಿಸಲು ಮುಂದಾದರೂ ಗ್ರಾಮಸ್ಥರು ಮಾತ್ರ ತಮ್ಮ ಹಠ ಬಿಡಲಿಲ್ಲ.

    ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದ ಗ್ರಾಮಸ್ಥರು, ನಮ್ಮ ಊರಿಗೆ ಯಾವುದೇ ಕ್ವಾರೆಂಟನ್ ಸಿದ್ಧತೆ ಬೇಡ. ಕ್ವಾರೆಂಟೈನ್ ನಿಂದ ಕೊರೊನಾ ಸೋಂಕು ನಮ್ಮ ಊರಿಗೆ ಬರಬಹುದು ಎಂಬ ಆತಂಕ ಹೊರಹಾಕಿದ್ದಾರೆ. ಗ್ರಾಮಸ್ಥರ ಈ ಆತಂಕ ಜಿಲ್ಲಾಡಳಿತಕ್ಕೆ ತೆಲೆನೋವಾಗಿದ್ದು, ಸ್ಥಳಕ್ಕೆ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರ ಭೇಟಿ ನೀಡಿ ಈ ಗ್ರಾಮದಲ್ಲಿ ಕ್ವಾರಂಟೈನ್ ಮಾಡಿಸದಂತೆ ಭರವಸೆ ನೀಡಿದರು. ಶಾಸಕರ ಭರವಸೆಯ ನಂತರ ಜನ ತಮ್ಮ ತಮ್ಮ ಮನೆಗೆ ತೆರಳಿದರು.