Tag: Home work

  • ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    – ವಿದ್ಯಾರ್ಥಿ ಕೈಗೆ ಬಿತ್ತು 6 ಸ್ಟಿಚ್

    ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಹೋಂ ವರ್ಕ್ (Home Work) ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ.

    ಈ ಘಟನೆ ಮೂರು ದಿನಗಳ ಹಿಂದೆ ನಗರದ ಖಾಸಗಿ ಶಾಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್‍ಗೆ ಹೋಂ ವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿ ಕೈಗೆ ರಾಡ್‍ನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

    ಇತ್ತ ವಿದ್ಯಾರ್ಥಿ ಕೈಗೆ ಗಂಭೀರ ಗಾಯಗಳಾಗಿದ್ದು, ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫರ್ದಿನ್ ಕೈಗೆ ಆರು ಹೊಲಿಗೆ ಹಾಕಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ, ಅಸೈನ್ಮೆಂಟ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾನೆ.

    ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ ಮಾಡುವ ಆರೋಪವೂ ಕೇಳಿಬಂದಿದೆ.

  • ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ನವದೆಹಲಿ: ಆನ್‌ಲೈನ್ ತರಗತಿ ವೇಳೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿ ಸರ್ಕಾರಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕರು ಹೋಂ ವರ್ಕ್‌ಗಳನ್ನು ಹಂಚಿಕೊಳ್ಳಲು ವಿದ್ಯಾರ್ಥಿಗಳಿಗಾಗಿ ಮಾಡಿದ್ದ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಹೋಂ ವರ್ಕ್‌ ಬದಲಾಗಿ ಅಶ್ಲೀಲ ವೀಡಿಯೋ ಹಂಚಿಕೊಂಡಿದ್ದಾನೆ. ಇದನ್ನೂ ಓದಿ: 1.30 ಲಕ್ಷಕ್ಕೆ ಮಾರಾಟವಾಗಿದ್ದ ಬಾಲಕ – ಚಿಕ್ಕಮ್ಮ ಅರೆಸ್ಟ್

    ಈ ಕುರಿತು ಶಾಲೆ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಬಾಲಾಪರಾಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿಯನ್ನು ಬಾಲಮಂದಿರದಲ್ಲಿರಿಸಿ ಕೌನ್ಸೆಲಿಂಗ್ ನೀಡಲಾಗಿದೆ ಎಂದು ಡಿಸಿಪಿ (ಈಶಾನ್ಯ ಜಿಲ್ಲೆ) ಸಂಜಯ್‌ಕುಮಾರ್ ಸೇನ್ ಒಪ್ಪಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

    ಕೆಲ ದಿನಗಳ ಹಿಂದೆ ವಿದ್ಯಾರ್ಥಿಯೊಬ್ಬ ಆಕ್ಷೇಪಾರ್ಹ ವೀಡಿಯೋ ಕ್ಲಿಪ್ಪಿಂಗ್ ಹಾಕಿದಾಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರು ಒತ್ತಾಯಿಸಿದ್ದರು. ಅಂತಹ ಚಿತ್ರಗಳು ಅಥವಾ ವೀಡಿಯೋಗಳನ್ನು ವಾಟ್ಸಾಪ್ ಗ್ರೂಪ್‌ಗಳಿಗೆ ಹಾಕದಂತೆ ವಿದ್ಯಾರ್ಥಿಗಳಿಗೆ ಮನವಿಯನ್ನೂ ಮಾಡಲಾಗಿತ್ತೆಂದು ಪ್ರಾಂಶುಪಾಲರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    Live Tv

  • ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್

    ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್

    ಗಾಂಧೀನಗರ: ಹೋಂ ವರ್ಕ್ ಮಾಡಿಕೊಂಡು ಬಾರದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಟೀಚರ್ ಬಳೆ ತೊಡಿಸಿದ ಘಟನೆ ಗುಜರಾತ್ ನ ಮೆಹ್ಶಾನ ಜಿಲ್ಲೆಯ ಖೆರಲು ತಾಲೂಕಿನಲ್ಲಿ ನಡೆದಿದೆ.

    ಸರ್ಕಾರಿ ಪ್ರಾಥಮಿಕ ಶಾಲೆಯ ಟೀಚರ್ ಮನಭಾಯ್ ಪ್ರಜಾಪತಿ ಮೇಲೆ ಈ ಆರೋಪ ಕೇಳಿಬಂದಿದೆ. 6 ನೇ ತರಗತಿಯ ಮೂವರು ವಿದ್ಯಾರ್ಥಿಗಳು ಟೀಚರ್ ಕೊಟ್ಟ ಮನೆ ಕೆಲಸವನ್ನು ಸಂಪೂರ್ಣ ಮಾಡದೇ ಶಾಲೆಗೆ ಬಂದಿದ್ದಾರೆ.

    ತರಗತಿಗೆ ಬಂದ ಟೀಚರ್ ಎಲ್ಲರ ಹೋಂ ವರ್ಕ್ ಗಮನಿಸಿದ್ದಾರೆ. ಈ ವೇಳೆ ಮೂವರು ಟೀಚರ್ ಕೊಟ್ಟ ಕೆಲಸವನ್ನು ಸಂಪೂರ್ಣ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಟೀಚರ್, ಬಳೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯನ್ನು ಕರೆದು ಕೈಯಲಿದ್ದ ಬಳೆಯನ್ನು ಬಿಚ್ಚಿಕೊಡುವಂತೆ ಕೇಳಿದ್ದಾರೆ. ಹಾಗೆಯೇ ವಿದ್ಯಾರ್ಥಿನಿ ಕೂಡ ಬಳೆ ಬಿಚ್ಚಿ ಕೊಟ್ಟಿದ್ದಾಳೆ. ನಂತರ ಟೀಚರ್ ಮೂವರೂ ವಿದ್ಯಾರ್ಥಿಗಳ ಕೈಗೆ ಬಳೆಗಳನ್ನು ತೊಡಿಸಿದ್ದಾರೆ.

    ಬಳೆ ತೊಡಿಸಿದ್ದ ಪರಿಣಾಮ ವಿದ್ಯಾರ್ಥಿಗಳು ನಾಚಿಕೆಯಿಂದ ಶುಕ್ರವಾರ ಹಾಗೂ ಶನಿವಾರ ಶಾಲೆಗೆ ಗೈರಾಗಿದ್ದಾರೆ. ಹೀಗಾಗಿ ಇದರಿಂದ ಗಾಬರಿಯಾದ ಮೂವರ ಪೋಷಕರು ಶನಿವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನಡೆದ ಘಟನೆಯನ್ನು ವಿವರಿಸಿದ್ದಾರೆ.

    ಸದ್ಯ ಘಟನೆ ಸಂಬಂಧ ಟೀಚರ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇಂದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನೂ ಶಾಲೆಗೆ ಕರೆಸಿರುವುದಾಗಿ ಶಿಕ್ಷಣಾಧಿಕಾರಿ ಸ್ಮಿತಾ ಪಟೇಲ್ ತಿಳಿಸಿದ್ದಾರೆ.

    ಘಟನೆ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಶಿಕ್ಷಕಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಇಂದಿನಿಂದ ಮೂವರು ವಿದ್ಯಾರ್ಥಿಗಳು ಕೂಡ ಶಾಲೆಗೆ ಬಂದಿದ್ದಾರೆ ಎಂದು ತಾಲೂಕು ಶಿಕ್ಷಣಾಧಿಕಾರಿ ಕಲ್ಪನಾ ಚೌಧರಿ ಹೇಳಿದ್ದಾರೆ.

  • ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಚೆನ್ನೈ: ಪಠ್ಯ ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳಾಗಲಿ, ತುಂಬಿದ ಕಂಟೈನರ್ ಗಳಾಗಲಿ ಅಲ್ಲ ಎಂದು ಹೇಳುವ ಮೂಲಕ ಮದ್ರಾಸ್ ಹೈ ಕೋರ್ಟ್ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದೆ.

    ಮಕ್ಕಳ ಕೈ ಚೀಲದ ಹೊರೆಯನ್ನು ಕಡಿಮೆ ಮಾಡುವಂತೆ ಹಾಗೂ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡದಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ತನ್ನ ಮಧ್ಯಂತರ ತೀರ್ಪಿನಲ್ಲಿ ಸೂಚಿಸಿದೆ.

    ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳ ಆದೇಶಗಳನ್ನು ಉಲ್ಲೇಖ ಮಾಡುತ್ತಾ ನ್ಯಾಯಮೂರ್ತಿ ಕಿರುಬಾಕರನ್ ಕೈ ಚೀಲದ ತೂಕ ಮಕ್ಕಳ ತೂಕದ 10% ಮೀರಿರಬಾರದು. ಈ ಸಂಬಂಧ “ಮಕ್ಕಳ ಶಾಲಾ ಬ್ಯಾಗ್ ನೀತಿ” ಗೆ ಸಂಬಂಧಿಸಿದಂತೆ ಮಾನದಂಡಗಳನ್ನು ರೂಪಿಸುವಂತೆ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.

    ವಕೀಲ ಎಂ ಪುರುಷೋತ್ತಮನ್ ಅವರು ಎನ್‍ಸಿಇಆರ್ ಟಿ ಸಿದ್ಧಪಡಿಸಿದ ಪಠ್ಯ ಮತ್ತು ಎನ್‍ಸಿಇಆರ್ ಟಿ ಮುದ್ರಿಸಿದ ಪುಸ್ತಕಗಳನ್ನು ಮಾತ್ರ ಖರೀದಿಸುವಂತೆ ಸಿಬಿಎಸ್‍ಇ ಶಾಲೆಗಳಿಗೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ನೀಡಿದೆ.

    ಎನ್‍ಸಿಇಆರ್ ಟಿ ಪಠ್ಯ ಕ್ರಮ ಮತ್ತು ಬುಕ್ ಗಳನ್ನು ಕಡ್ಡಾಯ ಗೊಳಿಸುವಂತೆ ಕೇಂದ್ರಿಯ ಶಿಕ್ಷಣ ಮಂಡಳಿ (ಸಿಬಿಎಸ್‍ಇ) ಹಾಗೂ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಕೋರ್ಟ್ ಸೂಚಿಸಿದೆ.

    1 ಮತ್ತು 2 ನೇ ತರಗತಿಗೆ ಭಾಷೆ ಮತ್ತು ಗಣಿತ ವಿಷಯಗಳು ಮಾತ್ರ ಇರಬೇಕು. ತರಗತಿ 3 ರಿಂದ 5 ನೇ ತರಗತಿ ವರೆಗೆ ಪರಿಸರ ಅಧ್ಯಯನ ಮತ್ತು ಗಣಿತ ವಿಷಯಗಳನ್ನು ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ ಬೋಧಿಸಬೇಕು. ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡುವ ಹಾಗೆ ಇಲ್ಲ ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.

    ವೈದ್ಯರು ಹೇಳುವಂತೆ 5 ರಿಂದ 6 ವರ್ಷದ ಮಕ್ಕಳಿಗೆ ಕನಿಷ್ಠ 11 ಗಂಟೆ ನಿದ್ದೆ ಬೇಕು. ಬೆಳಗ್ಗೆ ಶಾಲೆಗೆ ಮುಂಚೆ ಹೋಗಿದ್ದರೆ ಬೇಗ ಮಲಗಬೇಕು. ಹೋಮ್ ವರ್ಕ್ ಮಕ್ಕಳ ನಿದ್ದೆಯ ಸಮಯವನ್ನು ತೆಗೆದುಕೊಳ್ಳುತ್ತಿದೆ ಎಂದು ತನ್ನ ಆದೇಶದಲ್ಲಿ ವೈದ್ಯಕೀಯ ತಜ್ಞರ ಹೇಳಿಕೆಗಳನ್ನು ಜಡ್ಜ್ ಉಲ್ಲೇಖಿಸಿದರು.

    1 ನೇ ತರಗತಿ ಪಠ್ಯ ಕ್ರಮದಲ್ಲಿ ವ್ಯಾಕರಣ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳು ಇರುವುದು ಆಶ್ಚರ್ಯ ಮತ್ತು ಅತಂಕ ತರಿಸುವಂತದ್ದು. 5 ವರ್ಷದ ಮಗು ಹೇಗೆ ಈ ವಿಷಯಗಳನ್ನು ಗ್ರಹಿಸಬಹುದು ಎಂದು ಪ್ರಶ್ನೆ ಮಾಡಿದ್ದಾರೆ. ಸಿಬಿಎಸ್‍ಇ ಶಾಲೆಗಳು ಅಪ್ರಸ್ತುತ ವಿಷಯಗಳನ್ನು ಬೋಧಿಸಿ ಮಕ್ಕಳನ್ನು ಒತ್ತಡದಲ್ಲಿ ಸಿಲುಕಿಸುತ್ತಿದೆ ಎಂದು ಅಭಿಪ್ರಾಯಪಟ್ಟು ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದರು.