Tag: homeless people

  • ಕೆನಡಾದಲ್ಲಿ ಸಾಮೂಹಿಕ ಗುಂಡಿನ ದಾಳಿ: ಹಲವರ ಸಾವು

    ಕೆನಡಾದಲ್ಲಿ ಸಾಮೂಹಿಕ ಗುಂಡಿನ ದಾಳಿ: ಹಲವರ ಸಾವು

    ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಸೋಮವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಹಲವು ಜನ ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

    ಬ್ರಿಟಿಷ್ ಕೊಲಂಬಿಯಾದ ಲಾಂಗ್ಲಿ ನಗರದಲ್ಲಿ ಗುಂಡಿನ ದಾಳಿ ಪ್ರಾರಂಭವಾಗುತ್ತಲೇ ಪೊಲೀಸರು ತುರ್ತು ಎಚ್ಚರಿಕೆಯನ್ನು ನೀಡಿದ್ದರು. ಘಟನೆಯ ಪ್ರದೇಶದಿಂದ ಜಾಗರೂಕರಾಗಿರಲು ಹಾಗೂ ದೂರವಿರಲು ನಿವಾಸಿಗಳನ್ನು ಕೇಳಿಕೊಂಡಿದ್ದರು. ಆದರೆ ಇಂದಿನ ಗುಂಡಿನ ದಾಳಿಯಿಂದಾಗಿ ಹಲವು ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 939 ಮಂದಿ ಕೊರೊನಾ ಸೋಂಕು – ಓರ್ವ ಸಾವು

    ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ವಕ್ತಾರರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ನಿರ್ದಿಷ್ಟವಾಗಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿಲ್ಲ. ವರದಿಗಳ ಪ್ರಕಾರ ನಿರಾಶ್ರಿತರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನು ನಡೆಸಲಾಗಿದೆ. ಶಂಕಿತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಮುಫ್ತಿ ಅಪಮಾನ- ಖರ್ಗೆಗೆ ಆಸನ ನಿಗದಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ

    Live Tv
    [brid partner=56869869 player=32851 video=960834 autoplay=true]

  • ಕೊಡಗು ನಿರಾಶ್ರಿತರಿಗೆ ತಿಂಗಳಿಗೆ 10 ಸಾವಿರ ರೂ. ಸಹಾಯಧನ – ಯು.ಟಿ.ಖಾದರ್

    ಕೊಡಗು ನಿರಾಶ್ರಿತರಿಗೆ ತಿಂಗಳಿಗೆ 10 ಸಾವಿರ ರೂ. ಸಹಾಯಧನ – ಯು.ಟಿ.ಖಾದರ್

    ಬೆಂಗಳೂರು: ಕೊಡಗು ನಿರಾಶ್ರಿತರಿಗೆ ಟೆಂಟ್ ನಿರ್ಮಾಣ ಮಾಡಿಕೊಡುವ ಪ್ರಸ್ತಾವನೆ ಕೈ ಬಿಡಲಾಗಿದ್ದು, ಮನೆ ನಿರ್ಮಿಸುವವರೆಗೆ ಪ್ರತಿ ತಿಂಗಳು ಕುಟುಂಬಕ್ಕೆ 10 ಸಾವಿರ ರೂ. ಪರಿಹಾರ ಧನ ನೀಡಲಾಗುತ್ತದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ 700-800 ಕುಟುಂಬಗಳು ಆಶ್ರಯ ಕಳೆದುಕೊಂಡಿದ್ದು, ಅವರನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ತಿಳಿಸುವ ಸ್ಥಳಗಳಲ್ಲಿ ತಲಾ 6 ಲಕ್ಷ ರೂ. ವೆಚ್ಚದಲ್ಲಿ ನಿರಾಶ್ರಿತರಿಗೆ ಮಾದರಿ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂದರು.

    ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ಪಡೆದು ಸೂಕ್ತ ಸಮಯದಲ್ಲಿ ದಾಖಲಾತಿ ಸಲ್ಲಿಸಿರಲಿಲ್ಲ ಹಾಗೂ ಹಣ ಪಾವತಿಸಿಲ್ಲ. ಹೀಗಾಗಿ 72,370 ಫಲಾನುಭವಿಗಳಿಗೆ ಮಂಜೂರಾತಿಯನ್ನು ತಡೆಹಿಡಿಯಲಾಗಿದೆ. 19 ಸಾವಿರ ಮಂದಿ ದಾಖಲೆಗಳನ್ನು ಸಲ್ಲಿಸಿದ್ದರೆ, ಸುಮಾರು 32 ಸಾವಿರ ಫಲಾನುಭವಿಗಳು ದಾಖಲೆಗಳನ್ನು ಸಲ್ಲಿಸಿಲ್ಲ. ಇಲ್ಲಿಯವರೆಗೆ ದಾಖಲೆಗಳನ್ನು ಸಲ್ಲಿಸದ ಫಲಾನುಭವಿಗಳಿಗೆ ಅಕ್ಟೋಬರ್ 15ರ ವರಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಅವರು ಗ್ರಾಮ ಪಂಚಾಯ್ತಿ ಪಿಡಿಓಗಳ ಮೂಲಕವೇ ದಾಖಲೆಗಳನ್ನು ಅಪ್‍ಲೋಡ್ ಮಾಡಿಸಬೇಕು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv