Tag: Honegal by-election

  • ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

    ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

    ಹಾವೇರಿ: ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಅನ್ಯಪಕ್ಷಗಳ ನಾಯಕರ ಬಗ್ಗೆ ಏಕೆ ಅವಹೇಳನ ಮಾಡುತ್ತಿದ್ದಾರೆ ಎಂಬುದನ್ನು ನೀವು ವಿಮರ್ಶೆ ಮಾಡಬೇಕು. ಜನರ ಬಳಿ ಮತ ಕೇಳಲು ಅವರು ಸಾಧನೆಯನ್ನೇ ಮಾಡಿಲ್ಲ. ಜನರ ನೋವು ಮರೆಸಲು ಮಾಧ್ಯಮಗಳ ಮೂಲಕ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನೀವು ಯಾಕೆ ಸುಮ್ಮನಿದ್ದೀರಿ ಎಂದು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದೀರಿ. ನಾವು ಚುನಾವಣೆ ಮುಗಿಯಲಿ ಎಂದು ತಾಳ್ಮೆ ವಹಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ಹಾನಗಲ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರಚಾರ ಮಾಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕಾಂಗ್ರೆಸ್ ಪಕ್ಷದ ಸೈನ್ಯವೇ ಇದೆ. ಇದು ಕೇವಲ ಚುನಾವಣೆ ವಿಚಾರ ಮಾತ್ರವಲ್ಲ. ರಾಹುಲ್ ಗಾಂಧಿ ಕುಟುಂಬದ ತ್ಯಾಗದ ಮುಂದೆ ಇಡೀ ಬಿಜೆಪಿ ಪಕ್ಷ ಶೇ.1ರಷ್ಟು ಸಮಕ್ಕೂ ನಿಲ್ಲುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ

    ನಮ್ಮ ಪಕ್ಷ ಬದುಕಿದೆ. ಈ ದೇಶದ ಇತಿಹಾಸದ ಪಕ್ಷ ನಮ್ಮದಾಗಿದೆ. ನಮಗೂ ಕೇಸರಿ ಬಣ್ಣದ ಮೇಲೆ ಗೌರವವಿದೆ. ಅದು ನಮ್ಮ ರಾಷ್ಟ್ರಧ್ವಜದ ಭಾಗ. ಚುನಾವಣೆ ಮುಗಿದ ಮೇಲೆ ಈ ವಿಚಾರವಾಗಿ ನಾವು ಮಾತಾಡುತ್ತೇವೆ. ಈ ಮಾನಸಿಕ ಅಸ್ವಸ್ಥರಿಗೆ ಯಾವ ರೀತಿ ಉತ್ತರ ಕೊಡಬೇಕೋ ಅದಕ್ಕೂ ಸಮಯ ನಿಗದಿ ಮಾಡುತ್ತೇವೆ. ಚುನಾವಣೆ ಸಮಯದಲ್ಲಿ ಜನರ ನೋವು, ಬದುಕಿನ ಬಗ್ಗೆ ಮಾತನಾಡಲಿ. ಪ್ರತಿ ವ್ಯಕ್ತಿಯ ಬದುಕಿನಲ್ಲಿ ಬಿಜೆಪಿ ಏನಾದರೂ ಬದಲಾವಣೆ ತಂದಿದೆಯಾ?, ಇಲ್ಲವೇ? ಎಂಬುದಷ್ಟೇ ನಮ್ಮ ಪ್ರಶ್ನೆ. ಇದಕ್ಕೆ ಅವರು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

    ಬಿಜೆಪಿ ನಾಯಕರು ಚುನಾವಣೆ ಎದುರಿಸಲಿ. ಜನರು ಇದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ. ನೊಂದ ಜನ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲಿದ್ದಾರೆ. ಇದು ಮುಖ್ಯಮಂತ್ರಿಗಳ ಜಿಲ್ಲೆಯ ಕ್ಷೇತ್ರವಾಗಿದ್ದು, ಅವರಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಜನರ ಸಮಸ್ಯೆಗಳ ವಿಚಾರ ಮರೆಮಾಚಲು ವೈಯಕ್ತಿಕ ಟೀಕೆಗೆ ನಿಂತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ಲೂ ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ: ಅಶ್ವಥ್ ನಾರಾಯಣ

  • ಹಾನಗಲ್ ಉಪಚುನಾವಣೆ: ಕಾಂಗ್ರೆಸ್‍ನಲ್ಲೂ ಫೈನಲ್ ಆಗಿಲ್ಲ ಅಭ್ಯರ್ಥಿ ಹೆಸರು

    ಹಾನಗಲ್ ಉಪಚುನಾವಣೆ: ಕಾಂಗ್ರೆಸ್‍ನಲ್ಲೂ ಫೈನಲ್ ಆಗಿಲ್ಲ ಅಭ್ಯರ್ಥಿ ಹೆಸರು

    ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳು ಪ್ರಯತ್ನ ಮುಂದುವರಿಸಿದ್ದಾರೆ. ಇನ್ನೂ ಕಾಂಗ್ರೆಸ್ ಅಧಿಕೃತವಾಗಿ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಹೈಕಮಾಂಡ್‍ಗೆ ವಿಧಾನಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಮತ್ತು ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಹೆಸರುಗಳನ್ನು ರವಾನೆ ಮಾಡಲಾಗಿದೆ.

    ಮಾನೆ ಮತ್ತು ಮನೋಹರ್ ತಹಶೀಲ್ದಾರ್ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಧಾನ ಮಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ಸಂಧಾನ ಮಾಡಿ, ಒಬ್ಬರಿಗೆ ಟಿಕೆಟ್, ಮತ್ತೊಬ್ಬರಿಗೆ ಪರ್ಯಾಯ ಸ್ಥಾನ ನೀಡುತ್ತೇವೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ದೊರೆತರೂ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಡಿಕೆಶಿ ಮತ್ತು ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:  ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಮುನ್ನಡೆ

    ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆಗೆ ಕಾಂಗ್ರೆಸ್ ಟಿಕೆಟ್ ಎನ್ನುತ್ತಿದ್ದರೂ ಇನ್ನೂ ಅಧಿಕೃತವಾಗಿ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ. ಒಟ್ಟಿನಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಟಿಕೆಟ್ ಯಾರಿಗೆ ನೀಡುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.