Tag: Hosanagar

  • ಹೊಸನಗರ | ತೆಪ್ಪ ಮಗುಚಿ ಯುವಕ ನೀರುಪಾಲು – 40 ಅಡಿ ಆಳದಲ್ಲಿ ಮೃತದೇಹ ಪತ್ತೆ

    ಹೊಸನಗರ | ತೆಪ್ಪ ಮಗುಚಿ ಯುವಕ ನೀರುಪಾಲು – 40 ಅಡಿ ಆಳದಲ್ಲಿ ಮೃತದೇಹ ಪತ್ತೆ

    –  ತೆಪ್ಪದಲ್ಲಿದ್ದ ಇಬ್ಬರು ಯುವಕರು ಪಾರು

    ಶಿವಮೊಗ್ಗ: ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಹೊಸನಗರದ (Hosanagar) ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ನಡೆದಿದೆ.

    ಮೃತನನ್ನು ಪೂರ್ಣೇಶ್ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಪೂರ್ಣೇಶ್ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆ

    ಈ ಕುರಿತು ಮಾತನಾಡಿದ ಮುಳುಗು ತಜ್ಞ ಈಶ್ವರ್ ಮಲ್ಪೆ, 40 ಅಡಿ ಆಳದ ನೀರಿನಲ್ಲಿ ಈ ಯುವಕನ ಮೃತದೇಹ ದೊರೆತಿದೆ. ದೋಣಿ ತೆಪ್ಪದಲ್ಲಿ ಸಾಗುವಾಗ ಲೈಫ್ ಜಾಕೆಟ್ ಇಟ್ಟುಕೊಳ್ಳುವಂತೆ ಅವರು ಸ್ಥಳೀಯರಲ್ಲಿ ಮನವಿಮಾಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಇಷ್ಟಾದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಕಿಡಿಕಾರಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರು, ಬೈಕ್‌ ಮುಖಾಮುಖಿ ಡಿಕ್ಕಿ – ಮದುವೆ ನಿಶ್ಚಯವಾಗಿದ್ದ ಜೋಡಿ ದುರ್ಮರಣ

  • ಶಿವಮೊಗ್ಗ | ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು – ವಿಡಿಯೋ ವೈರಲ್‌

    ಶಿವಮೊಗ್ಗ | ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು – ವಿಡಿಯೋ ವೈರಲ್‌

    ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ (Abbi Falls) ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರುಪಾಲಾಗಿದ್ದಾನೆ.

    ಮೃತನನ್ನು ಬೆಂಗಳೂರಿನ (Bengaluru) ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

    ಫಾಲ್ಸ್‌ನಲ್ಲಿ ರಮೇಶ್‌ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ ರಮೇಶ್‌ ಬಂಡೆ ಮೇಲೆ ಕುಳಿತಿರುತ್ತಾರೆ. ವಿಡಿಯೋದ ಆರಂಭದಲ್ಲಿ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಸಂಭ್ರಮಿಸುತ್ತಾರೆ. ನಂತರ ತಾನು ಕುಳಿತಿದ್ದ ಬಂಡೆಯಿಂದ ಕೆಳಗಿಳಿಯುತ್ತಾರೆ. ಈ ವೇಳೆ, ನೀರಿನ ರಭಸಕ್ಕೆ ರಮೇಶ್‌ ತೇಲಿ ಹೋಗಿದ್ದಾರೆ. ಕೊಚ್ಚಿಹೋಗುತ್ತಿದ್ದಂತೆ ಸ್ನೇಹಿತರು ಕೂಗಿಕೊಳ್ಳುವುದು ವಿಡಿಯೋ ರೆಕಾರ್ಡ್‌ ಆಗಿದೆ.

    ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದೆ. ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶಿವಮೊಗ್ಗ | ಅಭಿವೃದ್ಧಿ ಕಾರ್ಯ ಸಹಿಸದೆ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಶಿವಮೊಗ್ಗ | ಅಭಿವೃದ್ಧಿ ಕಾರ್ಯ ಸಹಿಸದೆ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಶಿವಮೊಗ್ಗ: ಗ್ರಾಮ ಪಂಚಾಯ್ತಿ (Gram Panchayat) ಸದಸ್ಯನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಹೊಸನಗರ (Hosanagar) ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

    ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಹಳೆಯ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯ ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ದೇವರಾಜ್ ಎಂಬಾತ ವಿಶ್ವನಾಥ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವಿಶ್ವನಾಥ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಾಗೋಡಿ ವಿಶ್ವನಾಥ್‌ ಕಾಂಗ್ರೆಸ್‌ ಬೆಂಬಲಿತನಾಗಿದ್ದು, ಹಲ್ಲೆ ನಡೆಸಿದ ದೇವರಾಜ್  ಬಿಜೆಪಿ ಬೆಂಬಲಿತನಾಗಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

  • ಕೀಟನಾಶಕ ಸೇವಿಸಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – ಕಾರಣ ನಿಗೂಢ

    ಕೀಟನಾಶಕ ಸೇವಿಸಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – ಕಾರಣ ನಿಗೂಢ

    ಶಿವಮೊಗ್ಗ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ಗುರುತಿಸಲಾಗಿದೆ. ಕಳೆದ ಅ.15 ರಂದು ಅನುದೀಪ್ ಕೀಟನಾಶಕ ಸೇವಿಸಿದ್ದ. ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆತೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು (ಮಂಗಳವಾರ) ಆತ ಮೃತಪಟ್ಟಿದ್ದಾನೆ.

    ವಿದ್ಯಾರ್ಥಿಯ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ – 7 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ – 7 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಶಿವಮೊಗ್ಗ: ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, 7 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

    ಜಿಲ್ಲೆಯ ಹೊಸನಗರ (Hosanagar) ತಾಲೂಕಿನ ಚಿಕ್ಕಪೇಟೆ (Chikkapete) ನಗರದಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಹೆಜ್ಜೇನು ದಾಳಿ ನಡೆಸಿದೆ.ಇದನ್ನೂ ಓದಿ:ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ವಿವಿಐಪಿ ಪ್ರದೇಶದಲ್ಲಿ ಶವವಾಗಿ ಪತ್ತೆ

    ಭಾಷಾ, ಪತ್ನಿ ಅಸ್ಮಾ, ಮಕ್ಕಳಾದ ಆರೀಫ್, ಅನೀಫ್, ಭಾಷಾ ಪಕ್ಕದ ಮನೆ ನಿವಾಸಿ ಯಾಸೀನ್, ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್, ಬಾಬಾ ಸಾಬ್ ಮೇಲೆ ದಾಳಿ ನಡೆಸಿದೆ. ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

    ಅದೇ ದಿನ ಮತ್ತೇ ಹೆಜ್ಜೇನು ದಾಳಿ ನಡೆಸಿದ್ದು, ಭಾಷಾ ಪುತ್ರ ಆರೀಫ್ ಮೇಲೆ ಮತ್ತೆ ದಾಳಿಸಿದೆ. ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಇದನ್ನೂ ಓದಿ: ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – 9 ಮಂದಿಗೆ ಗಾಯ

  • ನಾಯಿಯಿಂದ ಕಚ್ಚಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮಹಿಳೆ ಸಾವು

    ನಾಯಿಯಿಂದ ಕಚ್ಚಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮಹಿಳೆ ಸಾವು

    ಶಿವಮೊಗ್ಗ: ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸನಗರ (Hosanagar) ಪಟ್ಟಣದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಹೊಸನಗರ ತಾಲೂಕಿನ ಗೇರುಪುರ (Gerupura) ಮೂಲದ ಸಂಗೀತ (38) ಎಂದು ಗುರುತಿಸಲಾಗಿದೆ. ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಸಂಗೀತ ಅವರು ಜುಲೈ 14 ರಂದು ನಾಯಿ ಕಡಿತಕ್ಕೊಳಗಾಗಿದ್ದರು. ಹೊಸನಗರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.ಇದನ್ನೂ ಓದಿ: ವಿಮೆ ಹಣ ದೋಚಲು ಅಮಾಯಕ ವ್ಯಕ್ತಿಯ ಮರ್ಡರ್ ಮಿಸ್ಟ್ರಿ- ಹಾಸನದಲ್ಲಿ ನಟೋರಿಯಸ್ ದಂಪತಿ ಅರೆಸ್ಟ್

    ಹೆಚ್ಚಿನ ಚಿಕಿತ್ಸೆಗಾಗಿ ಸಂಗೀತ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ (Meggan Hospital) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಗೀತ ಆ.23ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಇದನ್ನೂ ಓದಿ: ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಕೃತ್ಯ, ಇದೊಂದು ಪೂರ್ವಯೋಜಿತ ಪ್ಲ್ಯಾನ್- ಸುನೀಲ್ ಕುಮಾರ್

  • ಭಾರೀ ಮಳೆಗೆ ಕೊಚ್ಚಿ ಹೋಯ್ತು ರಸ್ತೆ: ಶಿವಮೊಗ್ಗ-ಹೊಸನಗರ-ಕೊಲ್ಲೂರು ಮಾರ್ಗ ಬಂದ್

    ಭಾರೀ ಮಳೆಗೆ ಕೊಚ್ಚಿ ಹೋಯ್ತು ರಸ್ತೆ: ಶಿವಮೊಗ್ಗ-ಹೊಸನಗರ-ಕೊಲ್ಲೂರು ಮಾರ್ಗ ಬಂದ್

    ಶಿವಮೊಗ್ಗ/ರಾಯಚೂರು: ಶಿವಮೊಗ್ಗ ಜಿಲ್ಲೆಯಲ್ಲೀ ಭಾರೀ ಮಳೆಯಾಗುತ್ತಿದ್ದು ಹೊಸನಗರ ತಾಲೂಕಿನಲ್ಲಿ ಕಳೆದ 24 ತಾಸಿನಲ್ಲಿ 146 ಮಿಲಿ ಮೀಟರ್ ಮಳೆಯಾಗ್ತಿದೆ. ಶಿವಮೊಗ್ಗ-ಹೊಸನಗರ-ಕೊಲ್ಲೂರು ಮಾರ್ಗ ಬಂದ್ ಆಗಿದೆ.

     

    ಹೊಸನಗರ ತಾಲೂಕು ಕೋಡುರು ಬಳಿ ಮಳೆ ನೀರಿನ ರಭಸಕ್ಕೆ ಸೇತುವ ಕಾಮಗಾರಿಗಾಗಿ ಮಾಡಿದ್ದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದೆ. ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚರಿಸುತ್ತಿದೆ.

    ರಾಯಚೂರು: ರಾಯಚೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರೈತರ ಮುಖದಲ್ಲಿ ಮಂದಹಾಸ ಮೂಡಿದ್ರೆ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರ ದುಸ್ತರವಾಗಿದೆ.

    ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಗೆ ನಗರದ ರೈಲ್ವೇ ಒಳಸೇತುವೆಗೆ ನೀರು ನುಗ್ಗಿದ್ದು ವಾಹನ ಸವಾರರು ಪರದಾಟುತ್ತಿದ್ದಾರೆ. ಮೋಡ ಕವಿದ ವಾತಾವರಣ ಮುಂದುವರೆದಿದ್ದು ಮಳೆ ಮುಂದುವರೆಯುವ ಲಕ್ಷಣಗಳಿವೆ.