Tag: Hospital. Modi

  •  PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು

     PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು

    ನವದೆಹಲಿ: ಪಿಎಂ ಕೇರ್ಸ್‍ಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ ವ್ಯಕ್ತಿಯ ತಾಯಿಗೆ ಇಂದು ಬೆಡ್ ಸಿಗದೆ ಸಾವನ್ನಪ್ಪಿರುವ ಕರುಣಾಜನಕ ಘಟನೆ ಅಹಮದಾಬಾದ್‍ನಲ್ಲಿ ನಡೆದಿದೆ.

    ಅಹ್ಮದಾಬಾದ್‍ನ ವಿಜಯ್ ಪರಿಕ್ ಪಿಎಂ ಕೇರ್ಸ್‍ಗೆ 2.51 ಲಕ್ಷ ದೇಣಿಗೆ ನೀಡಿದ್ದೇನೆ. ಆದರೂ, ಸಾಯುತ್ತಿರುವ ನನ್ನ ತಾಯಿಗೆ ಆಕ್ಸಿಜನ್ ಬೆಡ್ ದೊರಕಲಿಲ್ಲ. ಮುಂದೆ ಬರುತ್ತಿರುವ 3ನೇ ಕೊರೊನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಇನ್ನೆಷ್ಟು ಹಣವನ್ನು ದೇಣಿಗೆಯಾಗಿ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ ಎಂದು ವ್ಯಕ್ತಿ ನೊಂದು ಹೇಳಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಪಿಎಂ ಕೇರ್ಸ್‍ಗೆ 2.51 ಲಕ್ಷ ದೇಣಿಗೆ ನೀಡಿದ್ದೇನೆ. ಆದರೂ, ಸಾಯುತ್ತಿರುವ ನನ್ನ ತಾಯಿಗೆ ಆಕ್ಸಿಜನ್ ಬೆಡ್ ದೊರಕಲಿಲ್ಲ. ಇನ್ನು ಮುಂದೆ ಬರುತ್ತಿರುವ 3ನೇ ಕೊರೋನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಎಷ್ಟು ಹೆಚ್ಚುವರಿ ಹಣವನ್ನು ದೇಣಿಗೆಯಾಗಿ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ, ಈ ಸೋಂಕಿನಿಂದ ನಾನು ಮತ್ತಷ್ಟು ಕುಟುಂಬ ಸದಸ್ಯರನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ತನ್ನ ನೋವನ್ನು ದಾಖಲಿಸಿದ್ದಾರೆ. ಈಗಾಗಲೇ ಆತನ ತಾಯಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಟ್ವೀಟ್ ಸಹ ಇದೀಗ ಭಾರೀ ವೈರಲ್ ಆಗುತ್ತಿದೆ.

    ಟ್ವೀಟ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್‍ನಾಥ್ ಸಿಂಗ್, ಸ್ಮೃತಿ ಇರಾನಿ, ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ.