Tag: Hospitality

  • ಬ್ಯಾಂಕಿಂಗ್ ಸಂಬಂಧಿತ ಸಮಸ್ಯೆ ಬಗ್ಗೆ ಚರ್ಚಿಸಿದ ನಿರ್ಮಲಾ ಸೀತಾರಾಮನ್

    ಬ್ಯಾಂಕಿಂಗ್ ಸಂಬಂಧಿತ ಸಮಸ್ಯೆ ಬಗ್ಗೆ ಚರ್ಚಿಸಿದ ನಿರ್ಮಲಾ ಸೀತಾರಾಮನ್

    ನವದೆಹಲಿ: ಪ್ರಯಾಣ, ಪ್ರವಾಸೋದ್ಯಮ ಹಾಗೂ ಆತಿಥ್ಯ ವ್ಯವಹಾರಗಳ ಮೇಲೆ ಕೋವಿಡ್-19 ಪ್ರಭಾವವನ್ನು ಅನುಸರಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.

    ಕೋವಿಡ್-19 ಹಾವಳಿಯಿಂದ ಅನೇಕ ಆತಿಥ್ಯ ಕ್ಷೇತ್ರಗಳಿಗೆ ಭಾರೀ ಹೊಡೆತ ಉಂಟಾಗಿದೆ. ಪ್ರವಾಸೋದ್ಯಮ ಹಾಗೂ ಆತಿಥ್ಯ ಉದ್ಯಮದ ಮೇಲಿನ ಪರಿಣಾಮ ಹೆಚ್ಚು ಆಳವಾಗಿರುವುದರಿಂದ ಈ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯಮಕ್ಕೆ ಆರ್ಥಿಕ ನೆರವು ನೀಡುವಂತೆ ಚರ್ಚೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಕೇಂದ್ರ ಬಜೆಟ್ 2022-23ರಲ್ಲಿ ಹಣಕಾಸು ಸಚಿವೆ ಆತಿಥ್ಯ ಕ್ಷೇತ್ರಕ್ಕೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್(ಇಸಿಎಲ್‍ಜಿಎಸ್) ಅಡಿಯಲ್ಲಿ ಹೆಚ್ಚುವರಿ 50 ಸಾವಿರ ರೂ. ವಿಂಡೋವನ್ನು ತೆರೆಯುವ ಯೋಜನೆಯನ್ನು ಘೋಷಿಸಲಾಗಿದೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್, ಹಣಕಾಸು ಕಾರ್ಯದರ್ಶಿ ಟಿ.ವಿ ಸೋಮನಾಥನ್, ಹಣಕಾಸು ಸೇವೆ, ಆರ್ಥಿಕ ವ್ಯವಹಾರ ಹಾಗೂ ಕಂದಾಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ತಾಯಿ ಶವವನ್ನು ಹೆಗಲ ಮೇಲೆ ಹೊತ್ತೊಯ್ದ ಮಗ- ಬಳ್ಳಾರಿಯಲ್ಲೊಂದು ಮನಕಲಕುವ ಘಟನೆ

    ತಾಯಿ ಶವವನ್ನು ಹೆಗಲ ಮೇಲೆ ಹೊತ್ತೊಯ್ದ ಮಗ- ಬಳ್ಳಾರಿಯಲ್ಲೊಂದು ಮನಕಲಕುವ ಘಟನೆ

    ಹೊಸಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದೆ ತನ್ನ ಪೋಷಕರಿಬ್ಬರೂ ಒಂದೇ ದಿನ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬ, ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರತಿಭಟನಾರ್ಥವಾಗಿ ತಾಯಿ ಶವವನ್ನು ಹೆಗಲ ಮೆಲೇಯೇ ಹೊತ್ತು ಹೊರನಡೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರಗಳು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೂಲತಃ ಬಳ್ಳಾರಿ ತಾಲೂಕಿನ ಕೊರ್ಲಗುಂದಿಯ ಮಾರೆಪ್ಪ (76) ಹಾಗೂ ಅವರ ಪತ್ನಿ ತಿಪ್ಪಮ್ಮ (70) ಅವರನ್ನು ಭಾನುವಾರ ಬೆಳಗ್ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ಮಾರೆಪ್ಪ ಮೃತಪಟ್ಟರೆ, ರಾತ್ರಿ ತಿಪ್ಪಮ್ಮ ಮೃತಪಟ್ಟಿದ್ದಾರೆ. ಹೀಗಾಗಿ ಸರಿಯಾಗಿ ಚಿಕಿತ್ಸೆ ನೀಡದೇ ಇರುವುದರಿಂದಲೇ ತನ್ನ ತಂದೆ-ತಾಯಿ ಮೃತ ಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಮೃತ ದಂಪತಿಯ ಮಗ ರವಿ, ವೈದ್ಯರಿಗೂ ತಿಳಿಸದೆ, ಸ್ಟ್ರೆಚರ್ ನೆರವೂ ಕೇಳದೆ ತನ್ನ ತಾಯಿಯ ಶವವನ್ನು ಹೊತ್ತು ಹೊರ ನಡೆದಿದ್ದಾರೆ.

    ಘಟನೆ ಬಗ್ಗೆ ಪ್ರತಿಕ್ರಿಯಿಸಿದ ರವಿ ಅವರ ಹಿರಿಯ ಸಹೋದರ ತಿರುಪತಿ, ಬೆಳಿಗ್ಗೆಯೇ ಆಸ್ಪತ್ರೆಗೆ ದಾಖಲಿಸಿದ್ದರೂ ಅಲ್ಲಿಯ ಸಿಬ್ಬಂದಿ ಸಂಜೆವರೆಗೂ ವೃಥಾ ಕಾಲಹರಣ ಮಾಡಿದ್ದರು. ಅಪ್ಪನ ಶವವನ್ನು ಸಾಗಿಸುವ ಸಿದ್ಧತೆಯಲ್ಲಿದ್ದಾಗಲೇ ರಾತ್ರಿ ತಾಯಿಯೂ ತೀರಿಕೊಂಡರು. ಅಲ್ಲಿನ ಸಿಬ್ಬಂದಿ ಸ್ಟ್ರೆಚರ್, ಆಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಿಕೊಡಲಿಲ್ಲ. ಇದರಿಂದ ಬೇಸತ್ತ ನನ್ನ ತಮ್ಮ, ತಾನೇ ಶವ ಹೊತ್ತು ಸಾಗಿಸಿದ ಎಂದು ಹೇಳಿದರು. ಹೊಸಪೇಟೆ ತಾಲೂಕಿನ ಗಾಳೆಮ್ಮನ ಗುಡಿ ಗ್ರಾಮದಲ್ಲಿ ಸೋಮವಾರ ಸಂಜೆ ಇಬ್ಬರದ್ದೂ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಅವರು ತಿಳಿಸಿದರು.

    ಈ ಘಟನೆಯಲ್ಲಿ ವೈದ್ಯರಲ್ಲಿ ಮಾನವೀಯತೆಯೇ ಮರೆತು ಹೋಗಿದ್ದು, ಚಿಕಿತ್ಸೆ ನೀಡಲು ನಿರ್ಲಕ್ಷ್ಯವಹಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಅಗ್ರಹಿಸಿದ್ದಾರೆ.

    https://www.youtube.com/watch?v=zIOOhuEd6fE