Tag: hospitalized

  • ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು

    ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು

    ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್‌ನ (Reserve Bank of India) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ನ.26) ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

    ಕಾರ್ಯನಿಮಿತ್ತವಾಗಿ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೋಮವಾರ (ನ.25) ಚೆನ್ನೈಗೆ ಭೇಟಿ ನೀಡಿದ್ದರು. ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಇಂದು (ನ.26) ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ನಿನ್ನೆ ಎದೆಯುರಿಯಿಂದ ಬಳಲಿದ ಪರಿಣಾಮ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದ್ದು. ಅವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.ಇದನ್ನೂ ಓದಿ: ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ

  • ಬೆಸ್ಕಾಂ, ಪಾಲಿಕೆಯ ನಿರ್ಲಕ್ಷ್ಯ- ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕನ ಸ್ಥಿತಿ ಗಂಭೀರ!

    ಬೆಸ್ಕಾಂ, ಪಾಲಿಕೆಯ ನಿರ್ಲಕ್ಷ್ಯ- ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕನ ಸ್ಥಿತಿ ಗಂಭೀರ!

    ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ನಡೆದಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

    ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಲಿಖಿತ್(14) ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿದ್ದು, ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.

    ಮನೆ ಬಳಿ ಸ್ನೇಹಿತರೊಡನೆ ಲಿಖಿತ್ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

    ಮತ್ತಿಕೆರೆಯ ನಿವಾಸಿ ರಮಾದೇವಿ ಹಾಗೂ ಅಂಬರೀಶ್ ದಂಪತಿಗೆ ಲಿಖಿತ್ ಒಬ್ಬನೆ ಪುತ್ರನಾಗಿದ್ದು, 9 ನೇ ತರಗತಿ ಓದುತ್ತಿದ್ದನು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಮೇಲೆ ಕೇಬಲ್ ವಯರ್ ಜೊತೆಗೆ, ವಿದ್ಯುತ್ ತಂತಿ ಕೂಡ ನೆಲಕ್ಕೆ ಬಿದ್ದಿತ್ತು. ಇದನ್ನು ಯಾರು ಗಮನಿಸದ ಕಾರಣ ಈ ಅವಘಡ ಸಂಭವಿಸಿದೆ.

    ವಿದ್ಯುತ್ ಅವಘಡ ಸಂಭವಿಸಿದ ಜಾಗದಲ್ಲಿ 1 ಗಂಟೆಯಿಂದ ವಿದ್ಯುತ್ ಕಡಿತಗೊಂಡಿದೆ. ಅಲ್ಲದೆ ಘಟನೆಯಿಂದ ಸ್ಥಳದ ಸುತ್ತಮುತ್ತಲ 10 ಕ್ಕೂ ಹೆಚ್ಚು ಮನೆಗಳ ಮೀಟರ್ ಸುಟ್ಟುಹೋಗಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನ್ನಲ್ಲಾ ಎಂದು ಸಾರ್ವಜನಿಕರು ಬೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಹಿಂದೆ ಕೂಡ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ಈ ಘಟನೆ ಮಾಸುವ ಮುನ್ನವೇ ಏ. 26ರ ಸಂಜೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನ 7ನೇ ಕ್ರಾಸ್‍ನಲ್ಲಿ 9 ವರ್ಷದ ಸಾಯಿ ಚರಣ್ ಇಂತದ್ದೇ ಘಟನೆಯೊಂದರಲ್ಲಿ ಗಂಭೀರ ಗಾಯಗೊಂಡಿದ್ದನು.

    ಸಾಯಿ ಚರಣ್ ಸಂಜೆ ಸ್ನೇಹಿತರೊಂದಿಗೆ ಬಾಲ್ ಆಟ ಆಡುತ್ತಿದ್ದನು. ಈ ವೇಳೆ ವಿದ್ಯುತ್ ಕಂಬದ ಹತ್ತಿರ ಹೋದಾಗ ಕಂಬದಿಂದ ಜೋತು ಬಿದ್ದಿದ್ದ ತಂತಿಯಿಂದ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು.

  • ಸಿನಿಮಾ ಸ್ಟೈಲ್‍ನಲ್ಲಿ ಗಜರಾಜನಿಗೆ ಮುತ್ತು ಕೊಡಲು ಹೋಗಿ ಆಸ್ಪತ್ರೆ ಸೇರಿದ!

    ಸಿನಿಮಾ ಸ್ಟೈಲ್‍ನಲ್ಲಿ ಗಜರಾಜನಿಗೆ ಮುತ್ತು ಕೊಡಲು ಹೋಗಿ ಆಸ್ಪತ್ರೆ ಸೇರಿದ!

    ಕೋಲಾರ: ರಾಕಿಂಗ್ ಸ್ಟಾರ್ ಯಶ್ ಗಜಕೇಸರಿ ಸಿನಿಮಾದಲ್ಲಿ ಆನೆಗೆ ಮುತ್ತುಕೊಟ್ಟ ಹಾಗೆ ಕಾಡಾನೆಯೊಂದಕ್ಕೆ ಯುವಕನೊಬ್ಬ ಮುತ್ತಿಡಲು ಹೋಗಿ ಆಸ್ಪತ್ರೆ ಪಾಲಾದ ಘಟನೆ ಜಿಲ್ಲೆಯ ಮಾಲೂರಿನ ಅರಳೇರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮಕ್ಕೆ ನುಗ್ಗಿದ್ದ ಕಾಡಾನೆ ಹಿಂಡನ್ನು ಹಿಂಬಾಲಿಸಿ ಸಿನಿಮಾ ಸ್ಟೈಲ್ ಆನೆಗೆ ಮುತ್ತು ಕೂಡಲು ಅರಳೇರಿ ಗ್ರಾಮದ ನಿವಾಸಿ ರಾಜು ಹೋಗಿದ್ದಾನೆ. ಹಾಗೆಯೇ ಆನೆಗೆ ಮುತ್ತು ಕೊಡುತ್ತೇನೆ ಎಂದು ಸಾರ್ವಜನಿಕರಿಗೆ ರಾಜು ಸವಾಲು ಕೂಡ ಹಾಕಿದ್ದ. ಆದ್ರೆ ಏನೋ ಮಾಡಲು ಹೋಗಿ ಅದೇನೋ ಆಯ್ತು ಎನ್ನುವ ರೀತಿ ಮುತ್ತು ಕೊಡಲು ಹೋಗಿದ್ದವನಿಗೆ ಆನೆ ದಂತದಿಂದ ತಿವಿದು ತೀವ್ರ ಗಾಯಗೊಳಿಸಿದೆ.

    ಇಂದು ಬೆಳಗ್ಗೆಯಿಂದ ಏಳು ಆನೆಗಳ ಹಿಂಡು ಗ್ರಾಮದ ಬಳಿ ಬೀಡು ಬಿಟ್ಟಿತ್ತು. ಗ್ರಾಮಸ್ಥರು ಈ ಆನೆಗಳ ಹಿಂಡು ಕಂಡು ಆತಂಕಕ್ಕಿಡಾಗಿದ್ದರು. ಆದ್ರೆ ಈ ವೇಳೆ ಆನೆಗೆ ಮುತ್ತು ಕೊಡುತ್ತೇನೆ ರಾಜು ಗ್ರಾಮಸ್ಥರಿಗೆ ಸವಾಲು ಹಾಕಿ ಹೋಗಿದ್ದಾನೆ. “ನೀವೆಲ್ಲ ನಿಂತುಕೊಂಡು ನೋಡ್ತಿದ್ದೀರಿ, ನೋಡಿ ನಾನು ಏನು ಮಾಡ್ತೀನಿ” ಅಂತ ಕಾಡಾನೆ ಹಿಂಡಿನ ಬಳಿ ರಾಜು ತೆರಳಿದ್ದಾನೆ. ಮುತ್ತು ಕೊಡಲು ಬಂದ ರಾಜುಗೆ ಆನೆ ತನ್ನ ವರಸೆಯನ್ನು ತೋರಿಸಿದ್ದು, ತನ್ನ ಬಳಿ ಬಂದಾಗ ದಂತದಿಂದ ಆತನ ತಲೆ ಭಾಗಕ್ಕೆ ತಿವಿದು ಹಲ್ಲೆ ನಡೆಸಿದೆ.

    ಆನೆ ತಿವಿದ ಹಿನ್ನಲೆ ರಾಜು ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾನೆ. ಬಳಿಕ ರಾಜುನನ್ನು ಕೋಲಾರ ಅಸ್ಪತ್ರೆಗೆ ಗ್ರಾಮಸ್ಥರು ದಾಖಲಿಸಿದ್ದಾರೆ. ಇನ್ನೂ ಕೂಡ ಗ್ರಾಮದ ನೀಲಗಿರಿ ತೋಪಿನಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

  • ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿ ಆಸ್ಪತ್ರೆ ಸೇರಿದ!

    ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿ ಆಸ್ಪತ್ರೆ ಸೇರಿದ!

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಕಂಠ ಪೂರ್ತಿ ಕುಡಿದು ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ನಶೆಯಲ್ಲಿ ಹಾವು ಹಿಡಿಯಲು ಹೋಗಿ ಆಸ್ಪತ್ರೆ ಪಾಲಾದ ಘಟನೆ ನೆಲಮಂಗಲ ಪಟ್ಟಣದ ವಿಶ್ವೇಶ್ವರಪುರದಲ್ಲಿ ನಡೆದಿದೆ.

    ವಿಶ್ವೇಶ್ವರಪುರದ ನಿವಾಸಿ ಗೋವಿಂದರಾಜು(35) ಹಾವಿನಿಂದ ಕಚ್ಚಿಸಿಕೊಂಡಿದ್ದಾನೆ. ಪೇಂಟರ್ ಕೆಲಸ ಮಾಡುತ್ತಿದ್ದ ಗೋವಿಂದರಾಜು ಸೋಮವಾರ ರಾತ್ರಿ ಕುಡಿದು ಮನೆಗೆ ಬಂದಿದ್ದನು. ಈ ವೇಳೆ ಮನೆಗೆ ನುಗ್ಗಿದ್ದ ನಾಗರ ಹಾವನ್ನು ಹಿಡಿಯಲು ಮುಂದಾಗಿದ್ದಾನೆ. ಮೊದಲೇ ಕುಡಿದ ನಶೆಯಲ್ಲಿದ್ದ ಗೋವಿಂದರಾಜು ಹಾವನ್ನು ಹಿಡಿಯಲು ಹೋಗಿ ಅದರಿಂದ ಕಚ್ಚಿಸಿಕೊಂಡಿದ್ದಾನೆ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗೋವಿಂದರಾಜು ಮನೆಯ ಬೀರಿನ ಹಿಂದೆ ನಾಗರ ಹಾವೊಂದು ಅವಿತುಕೊಂಡಿತ್ತು. ಕುಡಿದು ಮನೆಗೆ ಬಂದಾಗ ಅವಿತಿದ್ದ ಹಾವನ್ನು ಹಿಡಿಯವ ಸಾಹಸಕ್ಕೆ ಗೋವಿಂದರಾಜು ಕೈಹಾಕಿ, ಕೈಬೆರಳಿಗೆ ಹಾವಿನಿಂದ ಕಚ್ಚಿಸಿಕೊಂಡಿದ್ದಾನೆ. ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನೆಲಮಂಗಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕಳ್ಳಬಟ್ಟಿ ಸಾರಾಯಿ ಸೇವಿಸಿ 80 ಮಂದಿ ದುರ್ಮರಣ- 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಕಳ್ಳಬಟ್ಟಿ ಸಾರಾಯಿ ಸೇವಿಸಿ 80 ಮಂದಿ ದುರ್ಮರಣ- 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಗುವಾಹಟಿ: ಕಳ್ಳಬಟ್ಟಿ ಸಾರಾಯಿ ಸೇವಿಸಿ 80 ಮಂದಿ ಟೀ ಎಸ್ಟೇಟ್ ಕಾರ್ಮಿಕರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ದುರ್ಘಟನೆ ಪೂರ್ವ ಅಸ್ಸಾಂನ ಗೊಲ್ಘಾಟ್ ಹಾಗೂ ಜೊರ್ಹಟ್ ಜಿಲ್ಲೆಯಲ್ಲಿ ನಡೆದಿದೆ.

    ಗುರುವಾರ ರಾತ್ರಿ ಸಲ್ಮರಾ ಟೀ ಎಸ್ಟೇಟ್‍ನಲ್ಲಿ ಕಾರ್ಮಿಕರು ಕಳ್ಳಬಟ್ಟಿ ಸಾರಾಯಿ ಸೇವಿಸಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಸ್ಥಳೀಯ ಸ್ವಾಹಿದ್ ಕುಶಾಲ್ ಕೊನ್ವಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇವರೆಗೆ ಚಿಕಿತ್ಸೆ ಫಲಕಾರಿಯಾಗದೇ 80 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

    ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿರುವ ಅಸ್ವಸ್ಥ ಕಾರ್ಮಿಕರಿಗೆ ಚಿಕಿತ್ಸೆ ನೀಡಲು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳ ವೈದ್ಯರು ಕೂಡ ಆಗಮಿಸುತ್ತಿದ್ದಾರೆ. ಈ ಕುರಿತು ಅಸ್ಸಾಂ ಆರೋಗ್ಯ ಸಚಿವರು ಪ್ರತಿಕ್ರಿಯಿಸಿ, ಆಸ್ಪತ್ರೆಯಿಂದ ಪ್ರತಿ 10 ನಿಮಿಷಕ್ಕೊಮ್ಮೆ ನಾವು ಅಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ, ಅಸ್ಸಾಂನ ಗುವಾಹಟಿಯಲ್ಲಿಯಾದ ದುರಂತದಿಂದ ಬೇಸರವಾಗಿದೆ. ಮೃತರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಬೇಗನೇ ಚೇತರಿಸಿಕೊಳ್ಳಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಸದ್ಯ ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ವೇಳೆ ಗೊಲ್ಘಾಟ್‍ನ ದ್ರೌಪದಿ ಓರನ್ (65) ಹಾಗೂ ಆಕೆಯ ಮಗ ಸಂಜು ಓರಾನ್ ಮನೆಯಲ್ಲಿ ಕಳ್ಳಬಟ್ಟಿಯನ್ನು ತಯಾರಿಸಲಾಗಿತ್ತು. ಅಲ್ಲದೆ ಈ ಘಟನೆಯಲ್ಲಿ ತಾಯಿ, ಮಗ ಇಬ್ಬರೂ ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜೋರ್ಹಟ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ಮಿಕರಲ್ಲಿ 9 ಮಂದಿ ಮಹಿಳೆಯರು ಹಾಗೂ 11 ಮಂದಿ ಪುರುಷರು ಸಾವನ್ನಪ್ಪಿದ್ದಾರೆ. ಟೀ ಎಸ್ಟೇಟ್‍ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಅವರ ವಾರದ ಸಂಬಳ ದೊರಕಿತ್ತು ಆದರಿಂದ ಅವರು ಮದ್ಯಪಾನ ಮಾಡಿದ್ದಾರೆ. ಆಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv