ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ರುದ್ರಪ್ಪ ಲಮಾಣಿ (Rudrappa Lamani) ಅವರು ಆಸ್ಪತ್ರೆಯಲ್ಲಿರುವ ಆರೋಗ್ಯ ಸೇವೆಗೆ ಪ್ರಶಂಸೆ ವ್ಯಕ್ತಪಡಿಸಿದರು.
ವೈದ್ಯರ (Doctors) ಉತ್ತಮ ಸೇವೆ ಪರಿಣಾಮ ರೋಗಿಗಳು (Patients) ಇದೇ ಆಸ್ಪತ್ರೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು 50 ಬೆಡ್ ಶೀಟ್‌ಗಳಿಗೆ ಒತ್ತಾಯಿಸಿದ್ದರು. ಕೋರಿಕೆ ಪರಿಗಣಿಸಿರುವ ಸರ್ಕಾರ 60 ಬೆಡ್ ಶೀಟ್ ಒದಗಿಸಲು ಒಪ್ಪಿದೆ. ಹಾವೇರಿ ನಗರದಲ್ಲಿ ಎರಡು ಕಡೆ ನಮ್ಮ ಕ್ಲಿನಿಕ್ ಆರಂಭಿಸಿದ್ದರಿಂದ ಜಿಲ್ಲಾಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಿದೆ ಎಂದು ರುದ್ರಪ್ಪ ಲಮಾಣಿ ಹೇಳಿದರು. ಇದನ್ನೂ ಓದಿ: ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿರುವ 16ನೇ ಬಜೆಟ್‌ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ (Kodagu Hospitals) ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ.
ಈ ಬಾರಿ ಬಜೆಟ್‌ನಲ್ಲಿ (Karnataka Budget 2025) ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಘೋಷಿಸಲಾಗಿದೆ. ಈ ಪೈಕಿ ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುವುದು, ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಪರವಾದ ಅತ್ಯುತ್ತಮ ದಾಖಲೆಯ ಬಜೆಟ್ – ಕೆ.ಹೆಚ್ ಮುನಿಯಪ್ಪ
ಅಲ್ಲದೇ ಗೋಣಿಕೋಪ್ಪ, ವಿರಾಜಪೇಟೆ ಮಡಿಕೇರಿ ರಸ್ತೆ ಮತ್ತು ಸೇತುವೆ ಅಭಿವೃದ್ಧಿಗೆ 20 ಕೋಟಿ ರೂ. ವೆಚ್ಚದಲ್ಲಿ ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿ ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: Karnataka Budget 2025: ಯಾವ ಇಲಾಖೆಗೆ ಎಷ್ಟು ಹಣ ಹಂಚಿಕೆ?
2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ 20 ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಸಂಸ್ಕರಿಸಲು ನೆರವಾಗುವಂತೆ ಲ್ಯಾಂಪ್ಸ್ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ 5 ಲಕ್ಷ ರೂ. ಸಹಾಯಧನ ನೀಡಲಾಗುವುದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಈ ವರ್ಷ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ
ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Sharanprakash Patil) ಅವರು ವೈದ್ಯಾಧಿಕಾರಿಗಳೊಂದಿಗೆ ಇಂದು (ಮಂಗಳವಾರ) ಸಭೆ ನಡೆಸಿದರು.
ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಭೆ ನಡೆಸಿದ ಅವರು, ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತೆ ಹೆಚ್ಚಿಸುವ ಬಗ್ಗೆ ಸಮಾಲೋಚಿಸಿದರು.
ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಮೂಲಕ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ. “ಮಹಿಳಾ ವೈದ್ಯರ ಸುರಕ್ಷತೆಗೆ ನಾವು ಬದ್ಧ. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸಲಾಗುವುದು” ಎಂದರು.
ಸಭೆಯ ನಂತರ ಮಾತನಾಡಿ, ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿದಂತೆ ಬೀದಿ ದೀಪಗಳು, ಸಿಸಿಟಿವಿ ಕ್ಯಾಮೆರಾಗಳ ಹೆಚ್ಚಳ ಮುಂತಾದ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡುತ್ತಿದ್ದೇವೆ. ಈ ಕ್ರಮಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿರಲಿವೆ,” ಎಂದು ತಿಳಿಸಿದರು.
ಇಂದು ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಭಾಂಗಣದಲ್ಲಿ ವೈದ್ಯಕೀಯ ಸಂಸ್ಥೆಗಳಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಕುರಿತು ಸಭೆ ನಡೆಸಿದೆ.
ಕೋಲ್ಕತ್ತಾದಲ್ಲಿ ಇತ್ತೀಚೆಗೆ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ… pic.twitter.com/aepG4H0hhD
— Dr. Sharan Prakash Patil (@S_PrakashPatil) August 27, 2024
ಪಿಓಎಸ್‍ಹೆಚ್ (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ನಿಷೇಧ ಮತ್ತು ಪರಿಹಾರ) ಕಾಯಿದೆಯಡಿ ಸ್ಥಾಪಿಸಲಾದ ಆಂತರಿಕ ದೂರುಗಳ ಸಮಿತಿಯ ಪ್ರಾಮುಖ್ಯತೆಯನ್ನು ವಿವರಿಸಿದ ಸಚಿವರು, “ಈ ಸಮಿತಿಗಳ ಎದುರು ಮಹಿಳೆಯರು ಹೇಳಿಕೊಳ್ಳುವ ಎಲ್ಲಾ ಸಮಸ್ಯೆಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲಾಗುತ್ತದೆ,” ಎಂದರು.
“ಲೈಂಗಿಕ ದೌರ್ಜನ್ಯದಂಥ ಅಪರಾಧಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಮ್ಮ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ ಸುಜಾತಾ ರಾಥೋಡ್, ಬಿಎಂಸಿಮತ್ತುಆರ್‍ಐನ ಡೀನ್ ಮತ್ತು ನಿರ್ದೇಶಕ ಡಾ ರಮೇಶ್ ಕೃಷ್ಣ, ಬಿಎಂಸಿಮತ್ತುಆರ್‌ಐನ ಪ್ರಾಂಶುಪಾಲರಾದ ಡಾ ಅಸಿಮಾ ಬಾನ್ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರು, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ (Kolkata Doctor Rape and Murder) ಖಂಡಿಸಿ ಶನಿವಾರ (ಆ.17) ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು (OPD Service) ಸ್ಥಗಿತಗೊಳ್ಳಲಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಿಂದ (Indian Medical Association) ಬಂದ್‌ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯ ಘಟಕ ಬಂದ್‌ಗೆ ಬೆಂಬಲ ನೀಡಿದ್ದು, ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ
ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಶ್ರೀನಿವಾಸ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ ಆರು ಗಂಟೆಯವರೆಗೂ ಓಪಿಡಿ ಸೇವೆ ಇರೋದಿಲ್ಲ. 24 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ ಬಂದ್ ಆಗಲಿದೆ. ಎಮರ್ಜೆನ್ಸಿ ಪೇಷೆಂಟ್‌ಗಳಿಗೆ ಮಾತ್ರ ಟ್ರೀಟ್‌ಮೆಂಟ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ ಸಾಧ್ಯತೆ
ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಭಾನುವಾರ ಬೆಳಗ್ಗೆ ಆರು ಗಂಟೆಯವರೆಗೂ ಪ್ರತಿಭಟನೆ ಮಾಡುತ್ತಿದ್ದೇವೆ. ಎಮರ್ಜೆನ್ಸಿ ರೋಗಿಗಳಿಗೆ ಯಾವುದೇ ತೊಂದರೆ ಆಗಲ್ಲ. ಓಪಿಡಿ ಸೇವೆ ಮಾತ್ರ ಬಂದ್ ಮಾಡುತ್ತಿದ್ದೇವೆ. ಒಬ್ಬ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ. ರಾತ್ರಿ ಡ್ಯುಟಿ ವೇಳೆ ಈ ಥರ ಆಗುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನಲ್ಲಿ 30 ಸಾವಿರ ಮಂದಿ ಇದ್ದಾರೆ. ಒಂದೂವರೆ ಲಕ್ಷ ವೈದ್ಯರು ಇದ್ದಾರೆ. ಎಲ್ಲರಿಗೂ ರಿಕ್ವೆಸ್ಟ್ ಮಾಡಿಕೊಂಡಿದ್ದೇವೆ. ಫನಾ, ಪೀಡಿಯಾಟ್ರಿಕ್ ಅಸೋಸಿಯೇಶನ್ ಕೂಡ ಸೇರುತ್ತಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಚೇರಿ ಬಳಿ ಎಲ್ಲಾ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ
ಇನ್ನು ನಾಳಿನ ವೈದ್ಯರ ಪ್ರತಿಭಟನೆಗೆ ಸಚಿವ ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಪ್ರತಿಭಟನೆ ಉದ್ದೇಶ ಒಳ್ಳೆದಿದೆ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮೊನ್ನೆ ಪ್ರಿನ್ಸಿಪಲ್ ಸೆಕ್ರೆಟರಿಯ ಬಳಿ ಮಾತನಾಡಿದ್ದೇನೆ. ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ. ಪ್ರತಿಭಟನೆ ಆಗಲಿ, ಅವರ ಅಭಿಪ್ರಾಯ ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ತೊಂದರೆಯಾಗದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಅಸೋಸಿಯೇಶನ್ ಜೊತೆ ನಾನು ಸಭೆ ಕರೆದಿದ್ದೇನೆ. ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತವರು ಮನೆಗೆ ಹಣ ಕಳಿಸಿ ರಾಬರಿ ನಾಟಕವಾಡಿದ್ದ ಪಿಎಸ್‌ಐ ಪತ್ನಿಯ ಮೇಲೆ ಕೇಸ್
ಪ್ರತಿಭಟನೆಗೆ ಯಾರೆಲ್ಲ ಬೆಂಬಲ?
*ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ
*ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್
*ಮಕ್ಕಳ ವೈದ್ಯರ ಅಸೋಸಿಯೇಶನ್
*ಆರ್ಥೋಪಿಡಿಕ್ ಅಸೋಸಿಯೇಶನ್
*ಮೆಡಿಕಲ್ ಕಾಲೇಜು ವೈದ್ಯರ ಅಸೋಸಿಯೇಶನ್
– ಮೈಸೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ಭ್ರೂಣ ಹತ್ಯೆ ಜಾಲ
– ಭ್ರೂಣ ಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲ ಎಂದು ವಾಗ್ದಾಳಿ
ಕೊಪ್ಪಳ: ಇತ್ತೀಚೆಗೆ ಆಸ್ಪತ್ರೆಗಳು ಗರ್ಭಪಾತ ಮಾಡಿಸಿಕೊಳ್ಳಲು ಬರುವ ಮಹಿಳೆಯರ ಸ್ಥಿತಿ ನೋಡಿ ದರ ಫಿಕ್ಸ್ ಮಾಡುತ್ತಿವೆ. ಮದುವೆಯಾಗಿ ಹೆಣ್ಣು ಭ್ರೂಣ ಹತ್ಯೆಗೆ (Foeticide) ಬರುವ ಮಹಿಳೆಯರಿಗೆ ಒಂದು ದರವಾದರೆ, ಮದುವೆ ಆಗದೇ ಗರ್ಭ ಧರಿಸಿ ಬರುವವರಿಗೆ ಬೇರೆ ದರ ಪಡೆದು ಗರ್ಭಪಾತ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ (Hemalatha Nayak) ಗಂಭೀರ ಆರೋಪ ಮಾಡಿದ್ದಾರೆ.
ಕೊಪ್ಪಳದ (Koppala) ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗರ್ಭಪಾತ ಮಾಡಿಸಿಕೊಳ್ಳಲು ಬರುವ ಮಹಿಳೆಯರ ಸ್ಥಿತಿ ನೋಡಿಕೊಂಡು, ಆಸ್ಪತ್ರೆಗಳು ಬೆಲೆ ನಿರ್ಧಾರ ಮಾಡುತ್ತವೆ. ಮದುವೆಯಾಗಿ ಹೆಣ್ಣು ಭ್ರೂಣ ಹತ್ಯೆಗೆ ಬರುವ ಮಹಿಳೆಯರಿಗೆ ಒಂದು ದರವಾದರೆ, ಮದುವೆ ಆಗದೇ ಗರ್ಭ ಧರಿಸಿದವರಿಗೆ ಒಂದು ದರ ಪಡೆದು ಗರ್ಭಪಾತ ಮಾಡಲಾಗುತ್ತಿದೆ. ಇಂದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಹಾಗೂ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಿಡಿ ಕಾರಿದ್ದಾರೆ.
ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಯೋಜನೆ (Guarantee Scheme) ಮೂಲಕ ಹಣ ನೀಡುತ್ತಿರುವ ರಾಜ್ಯ ಸರ್ಕಾರ, ಹೆಣ್ಣು ಭ್ರೂಣ ಹತ್ಯೆ ತಡೆಯುವ ಹಾಗೂ ವಿವಿಧ ಕಾರಣಕ್ಕೆ ಹತ್ಯೆ ಆಗುತ್ತಿರುವ ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ನೀಡುತ್ತಿಲ್ಲ. ಗರ್ಭಪಾತಕ್ಕೆ ಕನಿಷ್ಠ 25,000 ರೂ.ನಿಂದ 1 ಲಕ್ಷ ರೂ. ವರೆಗೆ ಹಣ ಪೀಕುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಆಗಿವೆದೆ ಎಂದು ತನಿಖಾ ವರದಿಗಳು ಹೇಳುತ್ತಿವೆ. ಇನ್ನೂ ಗೊತ್ತಾಗದಂತೆ ಅದೆಷ್ಟು ಭ್ರೂಣಗಳನ್ನ ಹೊಸಕಿ ಹಾಕಿದ್ದಾರೆ ಎಂಬುದನ್ನು ಊಹೆ ಮಾಡಲು ಸಾಧ್ಯವಾಗುತ್ತಿಲ್ಲ. ಇಂಥ ಪ್ರಕರಣ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಂತೂ ಹಣಕ್ಕಾಗಿ ವೈದ್ಯರು ಕ್ರೂರ ಕೃತ್ಯಕ್ಕೆ ಇಳಿದಿದ್ದಾರೆ. ಇತ್ತೀಚೆಗೆ ಹೊಸಕೋಟೆ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿಯೂ ಇಂತಹ ಪ್ರಕರಣ ಬೆಳಕಿಗೆ ಬಂದಿವೆ. ಈ ಎಲ್ಲ ಪ್ರಕಣಗಳನ್ನು ರಾಜ್ಯ ಸರ್ಕಾರ ನೆಪಮಾತ್ರಕ್ಕೆ ಎನ್ನುವಂತೆ ಸಿಐಡಿ ತನಿಖೆಗೆ ವಹಿಸಿದೆ. ಆದರೆ, ತನಿಖೆಯಲ್ಲಿ ಕಾರ್ಯ ಯಾವುದೇ ಪ್ರಗತಿ ಕಂಡಿಲ್ಲ. ಸರ್ಕಾರದ ಭಾಗವಾಗಿರುವವರೇ ಇಂತಹ ಹೀನ ಕೃತ್ಯಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಗಾಂಧಿನಗರ: ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತವೆಯೋ, ಅಲ್ಲಿಂದ ಮೋದಿ ಗ್ಯಾರಂಟಿ (Modi Guarantee) ಪ್ರಾರಂಭವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಯ ನೀಡಿದರು.
ಗುಜರಾತ್ (Gujarat) ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಅವರಿಂದು ರಾಜ್‌ಕೋಟ್, ಪಂಜಾಬ್‌ನ ಬಟಿಂಡಾ, ಉತ್ತರ ಪ್ರದೇಶದ ರಾಯ್‌ಬರೇಲಿ, ಪಶ್ಚಿಮ ಬಂಗಾಳದ ಕಲ್ಯಾಣಿ ಮತ್ತು ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 11,500 ಕೋಟಿ ರೂ. ವೆಚ್ಚದ 200ಕ್ಕೂ ಹೆಚ್ಚು ಆರೋಗ್ಯ ರಕ್ಷಣೆ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದರು. ಅಲ್ಲದೇ 48,000 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ದೇಶಕ್ಕೆ ಸಮರ್ಪಿಸಿದರು. ಬಳಿಕ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಕಳೆದ 6-7 ದಶಕಗಳಲ್ಲಿ ನಡೆದಿದ್ದಕ್ಕಿಂತ ಹಲವು ಪಟ್ಟು ವೇಗವಾಗಿ ನಮ್ಮ ಸರ್ಕಾರದ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಎಲ್ಲಿ ಇತರರ ಗ್ಯಾರಂಟಿಗಳು ಕೊನೆಗೊಳ್ಳುತ್ತವೆಯೋ ಅಲ್ಲಿಂದ ಮೋದಿ ಗ್ಯಾರಂಟಿ ಪ್ರಾರಂಭವಾಗುತ್ತದೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ
ಸ್ವಾತಂತ್ರ್ಯಾ ನಂತರ 50 ವರ್ಷಗಳ ವರೆಗೆ ದೇಶದಲ್ಲಿ ಒಂದೇ ಒಂದು AIIMS ಆಸ್ಪತ್ರೆ ಇತ್ತು. ಸ್ವಾತಂತ್ರ್ಯಾ ನಂತರ 7 ದಶಕಗಳಲ್ಲಿ 7 ಏಮ್ಸ್ ಆಸ್ಪತ್ರೆಗಳಿಗೆ ಅನುಮೋದನೆ ನೀಡಿದ್ದರೂ ಹಿಂದಿನ ಸರ್ಕಾರಗಳು ಅವುಗಳನ್ನು ಪೂರ್ಣಗೊಳಿಸಿಲ್ಲ. ಕೆಲವರಂತೂ ತಮ್ಮ ರಾಜ್ಯಗಳಿಗೆ ಏಮ್ಸ್ ಆಸ್ಪತ್ರೆ ಪಡೆಯುವಷ್ಟರಲ್ಲಿ ಸುಸ್ತಾಗುತ್ತಿದ್ದರು. ಆದ್ರೆ ನಮ್ಮ ಸರ್ಕಾರ ಕಳೆದ 10 ವರ್ಷಗಳಲ್ಲಿ 10 ಏಮ್ಸ್ ಆಸ್ಪತ್ರೆಗಳ ಸ್ಥಾಪನೆಗೆ ಕ್ರಮ ಕೈಗೊಂಡಿದೆ. ಈ ಅವಧಿಯಲ್ಲಿ ಏಮ್ಸ್ ಹೊರತುಪಡಿಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳೂ ಒಂದರ ಹಿಂದೆ ಒಂದರಂತೆ ತಲೆ ಎತ್ತುತ್ತಿವೆ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಶ್ಲಾಘಿಸಿದರು.
ಆರೋಗ್ಯ ಸಂಪದ್ಭರಿತ ದೇಶವಾಗಬೇಕು: ಭಾರತ ಬೆಳೆಯುತ್ತಿರುವ ಆರ್ಥಿಕತೆಯೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದ ಟಾಪ್-5 ದೇಶಗಳಲ್ಲಿಯೂ ಒಂದಾಗಬೇಕು. ಅಭಿವೃದ್ಧಿ ಹೊಂದಿದ ಭಾರತದಲ್ಲಿ ಆರೋಗ್ಯ ಸೌಲಭ್ಯಗಳ ಮಟ್ಟ ಹೇಗಿರುತ್ತದೆ ಎಂಬುದನ್ನು ನಾವು ಈಗ ನೋಡುತ್ತಿದ್ದೇವೆ. ಅದಕ್ಕಾಗಿ ಗ್ರಾಮೀಣ ಪ್ರದೇಶಗಳಿಗೂ ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿಸ್ತರಿಸಿದ್ದೇವೆ. ಹಿಂದೆ ಇದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು 309 ರಿಂದ 706ಕ್ಕೆ ಕೊಂಡೊಯ್ಯಲಾಗಿದೆ. ಎಂಬಿಬಿಎಸ್ ಮತ್ತು ಮೆಡಿಕಲ್ ಪಿಜಿ ಸೀಟುಗಳ ಸಂಖ್ಯೆ 50,000 ದಿಂದ 1 ಲಕ್ಷಕ್ಕೆ ಹೆಚ್ಚಿದೆ ಎಂದು ಶ್ಲಾಘಿಸಿದರು.
ಬೆಂಗಳೂರು: ಕಳೆದ ಜನವರಿ 31ರಂದು ಜಯದೇವ ಆಸ್ಪತ್ರೆ ನಿರ್ದೇಶಕರ ಸ್ಥಾನದಿಂದ ನಿವೃತ್ತಿ ಹೊಂದಿದ್ದ ಡಾ.ಸಿ.ಎನ್ ಮಂಜುನಾಥ್ ಅವರ ಹೆಗಲಿಗೆ ಮತ್ತೊಂದು ಮಹತ್ತರ ಜವಾಬ್ದಾರಿಗೆ ಚಿಂತನೆ ನಡೆದಿದ್ದು, ಅದಕ್ಕೆ ಡಾ.ಮಂಜುನಾಥ್ (Dr. CN Manjunath) ಸಹ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಹೌದು. ಜಯದೇವ ಆಸ್ಪತ್ರೆಯ (Jayadeva Hospital) ತಮ್ಮ ಸುಧೀರ್ಘ 16 ವರ್ಷಗಳ ಸೇವೆಯಿಂದ ನಿವೃತ್ತಿಯಾಗಿದ್ದ ಡಾ.ಸಿ.ಎನ್ ಮಂಜುನಾಥ್ ಅವರಿಗೆ ಮತ್ತೊಂದು ಮಹತ್ತರ ಜವಾಬ್ದಾರಿ ತೆಗೆದುಕೊಳ್ಳುವಂತೆ ಒತ್ತಡ ಹೆಚ್ಚಾಗಿದ್ದು, ಪ್ರತಿಷ್ಠಿತ ಆಸ್ಪತ್ರೆಗಳ ಒಕ್ಕೂಟದ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುವಂತೆ ಕೂಗು ಕೇಳಿಬಂದಿದೆ.
ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ, ಕಿಮ್ಸ್ ಆಸ್ಪತ್ರೆಗಳು ಮತ್ತು ಒಕ್ಕಲಿಗರ ಸಂಘದ ಪ್ರತಿಷ್ಠಿತ ವೈದ್ಯಕೀಯ ಮಹಾವಿದ್ಯಾಲಯಗಳ ಮೇಲುಸ್ತುವಾರಿ ತೆಗೆದುಕೊಳ್ಳುವಂತೆ ಒಕ್ಕಲಿಗರ ಸಂಘ ಡಾ.ಸಿ.ಎನ್ ಮಂಜುನಾಥ್ ಅವರಿಗೆ ಮನವಿ ಮಾಡಿದೆ. ಈ ಸಂಬಂಧ ಜನವರಿ 31 ರಂದು ಸಭೆ ಮಾಡಿದ್ದ ಸಂಘ, ತನ್ನ ಕಾರ್ಯಕಾರಿ ಸಮಿತಿಯ ಸದಸ್ಯರ ಸಭೆಯಲ್ಲಿ 35 ನಿರ್ದೇಶಕರ ಒಮ್ಮತದ ನಿರ್ಧಾರದೊಂದಿಗೆ ಮಂಜುನಾಥ್‌ರನ್ನ ಉಸ್ತುವಾರಿಯಾಗಿ ನೇಮಕ ಮಾಡಲು ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ ಒಕ್ಕಲಿಗರ ಸಂಘ ಕೂಡ ಅಧ್ಯಕ್ಷರ ನೇತೃತ್ವದಲ್ಲಿ ಡಾ.ಮಂಜುನಾಥ್‌ಗೆ ಮನವಿ ಸಲ್ಲಿಸಿದೆ.
ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯ, ಕೆಂಪೇಗೌಡ ಆಸ್ಪತ್ರೆ, ವೈದ್ಯಕೀಯ ವಿದ್ಯಾಲಯಗಳು, ಕಿಮ್ಸ್ಗೆ ಒಳಪಟ್ಟ ಆಸ್ಪತ್ರೆಗಳು ಹಾಗೂ ಹೊಸದಾಗಿ ಆರಂಭವಾಗುವ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳ ಸಂಪೂರ್ಣ ಜವಬ್ದಾರಿ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದು, ಮಂಜುನಾಥ್ ಅವರೂ ಸಹ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘಧ ಅಧ್ಯಕ್ಷ ಹನುಮಂತರಾಯಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ನಿರ್ವಹಿಸಲಾಗದೆ ಕೇಂದ್ರದ ಅನುದಾನ ಬಂದಿಲ್ಲ ಅಂತಿದ್ದಾರೆ ಕಾಂಗ್ರೆಸ್‌ನವ್ರು: ಜೋಶಿ ಆರೋಪ
ಈ ಬಗ್ಗೆ ಡಾ.ಸಿ.ಎನ್ ಮಂಜುನಾಥ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸಂಘ ಈಗಾಗಲೇ ಮನವಿ ಮಾಡಿದೆ. ಆದರೆ ಸದ್ಯಕ್ಕೆ ನಾನು ಸಲಹೆಗಾರನಾಗಿ ಇರುತ್ತೇನೆ ಎಂದು ತಿಳಿಸಿದ್ದೇನೆ. ಈ ಜವಾಬ್ದಾರಿ ತೆಗೆದುಕೊಳ್ಳುವ ಸಂಬಂಧ ನಿರ್ಧಾರ ಮಾಡಲು ಸಮಯಾವಕಾಶ ಕೇಳಿದ್ದೇನೆ. ಯೋಜಿಸಿ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ
– ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆ ಮೀಸಲಿಡುವಂತೆ ಸೂಚನೆ
– ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ
– 60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಲಸಿಕೆ ಪಡೆಯುವಂತೆ ಸಲಹೆ
– ಕೋವಿಡ್ ನಿಂದ ಸಾವಾಗಿಲ್ಲ – ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್ ರೂಪಾಂತರಿ JN.1 (JN.1) ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Sharanprakash Patil) ಸಲಹೆ ನೀಡಿದರು.
ಮಂಗಳವಾರ ಬೆಂಗಳೂರಿನ (Bengaluru) ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ, ಆಹ್ವಾನ ಬರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ – ಕಾಂಗ್ರೆಸ್ ಸಚಿವ
ರೂಪಾಂತರಿ ಜೆಎನ್.1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಹೇಳಿದ್ದಾರೆ. ಆದರೂ ಇದರ ಬಗ್ಗೆ ಮೈ ಮರೆಯದೇ, ಕೆಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
60 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಪಡೆಯಿರಿ:
ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಕೋವಿಡ್ ಮೊದಲ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಯಾವ ಲಸಿಕೆಯನ್ನು (ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್) ನೀಡಲಾಗಿತ್ತೋ ಅದೇ ಲಸಿಕೆ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.
JN.1 ಬಹುಬೇಗ ಹರಡುತ್ತದೆ:
ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್.1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದು. ಜನದಟ್ಟಣೆ ಮತ್ತಿತರ ಕಡೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಉತ್ತಮ. ಆದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕೆಂಬ ಆದೇಶ ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ನೀಡಿದರು.
ಇದೇ ವೇಳೆ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಸಧ್ಯಕ್ಕೆ ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್
ಕೋವಿಡ್‍ನಿಂದ ಸಾವಾಗಿಲ್ಲ:
ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಅವರು ವಿವಿಧ ಆರೋಗ್ಯಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ-ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ, ಶ್ರೀರಾಮನ ಗುಣ ಇದೆಯಾ? – ಸಿ.ಟಿ ರವಿ ವ್ಯಂಗ್ಯ
ಮುಖ್ಯಾಂಶಗಳು
ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆಗಳನ್ನ ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವೈದ್ಯಕೀಯ ಕಾಲೇಜಿನಲ್ಲಿ 18,141 ಹಾಸಿಗೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಲಭ್ಯವಿವೆ.
ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರಿ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ತೆಗೆದುಕೊಂಡಿದ್ದೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅದರಂತೆ ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್ ಫ್ಲೂ-ಲಸಿಕೆಯನ್ನು ಪಡೆಯಬೇಕು.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮರ್ಥ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ.
ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ.
ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.
30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರು, ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.
ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ (Foeticide) ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು (Bengaluru Baiyappanahalli Police) ಬಂಧಿಸಿದ್ದಾರೆ.
ಐವರು ವೈದ್ಯರು (Doctors) ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಬಂಧಿತ ಆರೋಪಿಗಳು.
ಬಳಿಕ ತನಿಖೆ (Investigation) ಮುಂದುವರಿಸಿದ ಪೊಲೀಸರು ಕೃತ್ಯದ ಹಿಂದಿದ್ದ ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ (Corona Case) ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ (Health Department) ಫುಲ್ ಅಲರ್ಟ್ ಆಗಿದೆ.
ಕಳೆದ 24 ಗಂಟೆಯಲ್ಲಿ 1,805 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, 6 ಮಂದಿ ಬಲಿಯಾಗಿದ್ದಾರೆ. 134 ದಿನಗಳ ಬಳಿಕ ಇದೇ ಮೊದಲ ಬಾರಿ ಸಕ್ರೀಯ ಕೇಸ್‌ಗಳ ಸಂಖ್ಯೆ 10 ಸಾವಿರ ದಾಟಿದೆ. ಪ್ರತಿದಿನ ಪಾಸಿಟಿವಿಟಿ ಪ್ರಮಾಣ ಶೇ.3.19ಕ್ಕೆ ಹೆಚ್ಚಿದೆ. ಇದನ್ನೂ ಓದಿ: ಕಿಡ್ನಿ ಸೋಂಕು – ನಮೀಬಿಯಾದಿಂದ ತಂದಿದ್ದ 8ರಲ್ಲಿ ಒಂದು ಚಿರತೆ ಸಾವು
ಇದರಿಂದ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,47,05,952 ಮಂದಿಗೆ ಸೋಂಕು ತಲುಪಿದ್ದು, ಅವರಲ್ಲಿ 4,41,64,815 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೇ 6 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ. 10,300 ಸಕ್ರೀಯ ಸೋಂಕು ಪ್ರಕರಣಗಳಿರುವುದು ಕಂಡುಬಂದಿದೆ.
ಈ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯದ (Health Ministry) ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲಾ ರಾಜ್ಯಗಳ ಪ್ರತಿನಿಧಿಗಳ ಜೊತೆ ವರ್ಚುವಲ್ ಸಭೆ ನಡೆಸಿ, ಸೋಂಕು ನಿಯಂತ್ರಣಕ್ಕೆ ಹಲವು ಸಲಹೆ ಸೂಚನೆ ನೀಡಿದ್ದಾರೆ. ಮಾಸ್ಕ್ ಧರಿಸಲು ಹಾಗೂ ಟೆಸ್ಟಿಂಗ್ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್
ಮುಂದಿನ ತಿಂಗಳ ಮೊದಲ ವಾರ ದೇಶದ ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್‌ಡ್ರಿಲ್ (ಅಣುಕು ಕಾರ್ಯಾಚರಣೆ) ನಡೆಸಲು ತೀರ್ಮಾನಿಸಿದೆ. ಭಾನುವಾರ ದೆಹಲಿ ಆಸ್ಪತ್ರೆಯಲ್ಲೂ ಮಾರ್ಕ್ ಡ್ರಿಲ್ ನಡೆಸಲಾಗಿದೆ.