Tag: Hostel Food

  • ಹಾಸ್ಟೆಲ್ ಊಟದ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಿನ್ಸಿಪಲ್, ವಾರ್ಡನ್ ಅಮಾನತು

    ಹಾಸ್ಟೆಲ್ ಊಟದ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಿನ್ಸಿಪಲ್, ವಾರ್ಡನ್ ಅಮಾನತು

    ಬೀದರ್: ಜಿಲ್ಲೆಯ ಔರಾದ್ (Aurad) ತಾಲೂಕಿನ ಸಂತಪೂರ್ (Santhapur) ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಹಾಗೂ ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ.

    ವಸತಿ ಶಾಲೆಯ ಪ್ರಿನ್ಸಿಪಲ್ ಭಗವಂತ ಕಾಂಬ್ಳೆ ಹಾಗೂ ವಾರ್ಡನ್ ಶಿವಕುಮಾರ್ ವೈಜಪ್ಪ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ

    ಊಟದಲ್ಲಿ ಹುಳ ಬಿದ್ದಿದ್ದನ್ನು ಹಾಗೂ ಮೆನು ಚಾರ್ಟ್ ಪ್ರಕಾರ ಊಟ ನೀಡದಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಲ್ ಹಾಗೂ ವಾರ್ಡನ್ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಕರ್ತವ್ಯಲೋಪ ಎಸಗಿದ್ದವರ ವಿರುದ್ಧ ವರದಿ ಸಲ್ಲಿಸಲಾಗಿದೆ.

    ಇನ್ನು ಅಮಾನತಿನಿಂದ ತೆರವಾಗಿರುವ ಹುದ್ದೆಗಳಿಗೆ ಪ್ರಭಾರಿ ಪ್ರಾಂಶುಪಾಲರನ್ನಾಗಿ ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಉಪಪ್ರಾಂಶುಪಾಲ ರವೀಂದ್ರ ಚಟ್ನಳ್ಳಿ ಹಾಗೂ ಮೇಲ್ವಿಚಾರಕರನ್ನಾಗಿ ವಸತಿ ಶಾಲೆಯ ಕಂಪ್ಯೂಟರ್ ಶಿಕ್ಷಕ ದಯಾನಂದ ಅವರನ್ನು ನೇಮಿಸಲಾಗಿದೆ.ಇದನ್ನೂ ಓದಿ: Waqf: 150 ಕೋಟಿ ಆಫರ್| ವಿಜಯೇಂದ್ರ ಮೇಲಿನ ಸಿದ್ದರಾಮಯ್ಯ ಆರೋಪ ಸುಳ್ಳು: ಅನ್ವರ್ ಮಾಣಿಪ್ಪಾಡಿ

  • ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥ – ಇಬ್ಬರು ಗಂಭೀರ

    ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥ – ಇಬ್ಬರು ಗಂಭೀರ

    ಚಿತ್ರದುರ್ಗ: ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.

    ರಾತ್ರಿ ಹಾಸ್ಟೆಲ್‌ನಲ್ಲಿ ಅನ್ನ – ಸಾಂಬಾರ್ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 35 ವಿದ್ಯಾರ್ಥಿಗಳು ರಾತ್ರಿ ಊಟ ಮಾಡಿದ್ದರು. ಅವರಲ್ಲಿ 13 ಮಂದಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿ ತಲುಪಿದ್ದಾರೆ. ಅವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು ವರುಣಾ ರಹಸ್ಯ – ಸಿದ್ದುಗೆ ಗುಟ್ಟು ಬಿಟ್ಟುಕೊಟ್ಟಿದ್ರು ಬಿಎಸ್‍ವೈ

    ಸದ್ಯ ವಿದ್ಯಾರ್ಥಿಗಳಿಗೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]