ಭಾನುವಾರ (ಅ.20) ಕೊಪ್ಪಳದ ಲಾಡ್ಜ್ವೊಂದಕ್ಕೆ ಹಾಮೇಶ್ ಬಂದಿದ್ದರು. ಈ ವೇಳೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
– ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್
ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ (Hostel Warden) ಯುಮ್ಕೆನ್ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.
ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್ ಬಿಂಗೆಪ್, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ
ಕೇಸ್ ಬೆಳಕಿಗೆ ಬಂದಿದ್ದು ಯಾವಾಗ?
2022ರ ನವೆಂಬರ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್ ವಾರ್ಡನ್ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.
ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್‌ಶೀಟ್ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ
ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್‌ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್‌ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.
ಹಾಸ್ಟೆಲೊಂದರಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿರುವ ಪ್ರಕರಣವೊಂದು ಇತ್ತೀಚಿಗೆ ಕೇಳಿ ಬಂದಿತ್ತು. ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಮಾನತು ಮಾಡುವಂತೆ ಶಿಫಾರಸ್ಸು ಮಾಡಿ ವರದಿ ನೀಡಿದ್ದರು.
ವರದಿ ಆಧರಿಸಿ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಾರ್ಡನ್ ಚಂದ್ರಶೇಖರ್ ಅವರನ್ನು ಅಮಾನತು ಮಾಡುವಂತೆ ಜಿ.ಪಂಚಾಯತ್ ಸಿಇಓ ಪೂರ್ಣಿಮಾ (CEO Poornima) ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಾರ್ಡನ್ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.ಇದನ್ನೂ ಓದಿ: ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ ಕೆಲಸ ಮಾಡಲ್ಲ: ಅಭಿಮಾನಿಗಳ ಬಗ್ಗೆ ಕಿಚ್ಚನ ಅಕ್ಕರೆಯ ಮಾತು
ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಈಚನಾಳದಲ್ಲಿ ಹಾಸ್ಟೆಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ.
ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಪರಿಶೀಲನೆಗೆ ಅಧಿಕಾರಿಗಳ ಜೊತೆ ಬಂದಿದ್ದ ಕರಡಕಲ್ ಬಾಲಕರ ವಸತಿನಿಲಯದ ಕಿರಿಯ ವಾರ್ಡನ್ ಶರಣಪ್ಪ ಜೊತೆ ಖ್ಯಾತೆ ತೆಗೆದು ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಹಲ್ಲೆ ಮಾಡಿದ್ದ. ವೀಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ಹಲ್ಲೆ ಮಾಡಿದ್ದ ಯುವಕ, ವಾರ್ಡನ್‌ನ ಗಾಯಗೊಳಿಸಿದ್ದ. ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ‘ಶಿವಶಕ್ತಿ’: ಹೆಸರಿಟ್ಟ ಮೋದಿ
ಎರಡು ದಿನ ಬಳಿಕ ಆರೋಪಿಯನ್ನ ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪಿಯನ್ನ ಕೂಡಲೇ ಬಂಧಿಸುವಂತೆ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ, ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತ್ತು. ಆರೋಪಿ ಮಲ್ಲರೆಡ್ಡಪ್ಪ ಸಹ ಲಿಂಗಸುಗೂರು ಠಾಣೆಯಲ್ಲಿ ಕಿರಿಯ ವಾರ್ಡನ್ ಶರಣಪ್ಪ ವಿರುದ್ಧ ಪ್ರತಿದೂರು ದಾಖಲಿಸಿದ್ದಾನೆ.
ವಿಜಯಪುರ: ಖಾಸಗಿ ವ್ಯಕ್ತಿ ಜೊತೆಗೆ ವಾರ್ಡನ್ ಹಾಸ್ಟೆಲಿನಲ್ಲೇ ಸಲಿಂಗ ಕಾಮಕ್ರಿಯೆ ನಡೆಸಿದ ಘಟನೆ ವಿಜಯಪುರದ ಇಂಡಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ನಡೆದಿದೆ.
ಬಾಪು ಚವ್ಹಾಣ ಲೈಂಗಿಕ ಕ್ರಿಯೆ ನಡೆಸಿದ ವಾರ್ಡನ್. ಬಾಪು ಚವ್ಹಾಣ ಖಾಸಗಿ ವ್ಯಕ್ತಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದು, ಈ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದೇ ರೀತಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿಗಳಿಗೂ ಲೈಂಗಿಕ ಕಿರುಕುಳ ನಡೆಸಿರುವ ಆರೋಪ ಕೇಳಿ ಬಂದಿದೆ. ಸದ್ಯ ವಾರ್ಡನ್ ಮೇಲೆ ಸೂಕ್ತ ಕ್ರಮಕ್ಕೆ ನೊಂದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ನೊಂದ ವಿದ್ಯಾರ್ಥಿ, ವಾರ್ಡನ್ ರಾತ್ರಿ ಸುಮಾರು 1 ಗಂಟೆಗೆ ನಮ್ಮನ್ನು ರೂಂಗೆ ಕರೆದುಕೊಂಡು ಹೋಗುತ್ತಾನೆ. ನಮ್ಮ ನಿದ್ದೆಯನ್ನು ಹಾಳು ಮಾಡಿ ಆತನ ರೂಂ ಬಾಗಿಲು ಹಾಕಿ ಲೈಟ್ ಆಫ್ ಮಾಡುತ್ತಾನೆ. ಬಳಿಕ ನಮ್ಮ ದೇಹಕ್ಕೆ ಎಣ್ಣೆ ಹಚ್ಚಿ ಅಸಭ್ಯವಾಗಿ ವರ್ತಿಸುತ್ತಾನೆ. ಹೀಗಾಗಿ ಆತನಿಗೆ ಇಲ್ಲಿ ಕೆಲಸ ಮಾಡುವ ಅವಕಾಶವನ್ನು ನೀಡಬಾರದು ಎಂದು ತೋಡಿಕೊಂಡಿದ್ದಾನೆ.
ಈ ಸಂಬಂಧ ಹಾಸ್ಟೇಲ್ ವಾರ್ಡನ್ ಬಿ.ಸಿ.ಚವ್ಹಾಣ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಇಚ್ಛೆಯಿಂದ ಗಾಯವನ್ನುಂಟು ಮಾಡುವುದು) ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕೆಲವು ಸ್ಥಳೀಯ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತಿದ್ದ ಹಾಸ್ಟೆಲ್ ವಾರ್ಡನ್‍ರೊಬ್ಬರು ಹೆಚ್ಚು ಮದ್ಯಪಾನ ಮಾಡಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯ ಹೊರವಲಯ ಆನೇಕಲ್‍ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಹಾಸ್ಟೆಲ್ ವಾರ್ಡನ್ ಆಗಿದ್ದ ದೇವೇಂದ್ರಪ್ಪ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‍ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ತಿಳಿದಿದ್ದ ಕೆಲವು ಸ್ಥಳೀಯ ಪರ್ತಕರ್ತರು ದೇವೇಂದ್ರಪ್ಪಗೆ ಧಮ್ಕಿ ಹಾಕುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಭ್ರಷ್ಟಾಚಾರ ನಡೆಸಿದ್ದಾರೆಂದು ಹಣಕ್ಕಾಗಿ ಮನೆಯ ಬಳಿ ಹೋಗಿ ದೇವೇಂದ್ರಪ್ಪಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಹಣ ನೀಡದಿದ್ದರೆ ಲೋಕಾಯುಕ್ತಗೆ ಪತ್ರ ಬರೆದು ಕೆಲಸದಿಂದ ವಜಾ ಮಾಡಿಸುತ್ತೇವೆಂದು ಧಮ್ಕಿ ಹಾಕುತ್ತಿದ್ದರು.
ಹದಿನೈದು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್ ಆಗಿ ಆನೇಕಲ್ ತಾಲೂಕಿನಲ್ಲಿ ದೇವೇಂದ್ರಪ್ಪ ಕೆಲಸ ನಿರ್ವಹಿಸುತ್ತಿದ್ದರು. ಈ ಕಿರುಕುಳದ ಬಗ್ಗೆ ದೇವೇಂದ್ರಪ್ಪ ಸ್ನೇಹಿತರು ಹಾಗು ಪತ್ನಿಯ ಬಳಿ ಹೇಳಿಕೊಂಡಿದ್ದರು. ಅಷ್ಟೇ ಅಲ್ಲದೆ ಪ್ರತಿದಿನ ಪತ್ರಕರ್ತರು ನೀಡುತ್ತಿದ್ದ ಕಿರುಕುಳಕ್ಕೆ ನೊಂದಿದ್ದ ವಾರ್ಡನ್ ಹೆಚ್ಚು ಮದ್ಯ ಸೇವಿಸಿ ಕೊನೆ ಉಸಿರೆಳೆದಿದ್ದಾರೆ.
ಸ್ಥಳೀಯ ಪತ್ರಕರ್ತರ ಕಿರುಕುಳದಿಂದ ನೊಂದು ಸಾವನ್ನಪ್ಪಿದ್ದಾರೆಂದು ಹಾಸ್ಟೆಲ್‍ನ ಹಳೆಯ ವಿದ್ಯಾರ್ಥಿಗಳು ಹಾಗೂ ಸ್ನೇಹಿತರಿಂದ ಆರೋಪ ಕೇಳಿಬರುತ್ತಿದೆ. ಹಾಗೆಯೇ ದೇವೇಂದ್ರಪ್ಪ ಅವರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ ಕುಟುಂಬದವರು, ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಮೇಲಾಧಿಕಾರಿಗಳು ಹಾಗೂ ಪೋಲಿಸ್ ಇಲಾಖೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜೈಪುರ: ಸರ್ಕಾರಿ ಹಾಸ್ಟೆಲ್‍ನ ಇಬ್ಬರು ವಿದ್ಯಾರ್ಥಿನಿಯರಿಗೆ ವಾರ್ಡನ್, ಆಕೆಯ ಪತಿ ಮತ್ತು ಆತನ ಸ್ನೇಹಿತರು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಹಾಸ್ಟೆಲ್ ವಾರ್ಡನ್ ಹಾಸ್ಟೆಲ್‍ನಲ್ಲಿದ್ದ 12ನೇ ತರಗತಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಅಲ್ಲಿ ಆಕೆಯ ಪತಿ ಮತ್ತು ಆತನ ಸ್ನೇಹಿತರು ಸೇರಿಕೊಂಡು ಕೆಲವು ದಿನಗಳವರೆಗೂ ಹುಡುಗಿಯರ ಮೇಲೆ ಅತ್ಯಾಚಾರ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಸ್‍ಪಿ ಮಹೇಶ್ ತ್ರಿಪಾಠಿ ಹೇಳಿದ್ದಾರೆ.
ಮಿಗ್ ಕಮಾಂಡರ್ ಅಭಿನಂದನ್ ಅವರು ಪಾಕಿಸ್ತಾನದಿಂದ ಭಾರತಕ್ಕೆ ವಾಪಸ್ ಬಂದಿದ್ದರಿಂದ ಮಕ್ಕಳಿಗೆ ಸಿಹಿ ಹಂಚಲು ಶಾಲೆಯ ಪ್ರಿನ್ಸಿಪಾಲ್ ಸುಖಿ ರಾಮ್ ಹೋಗಿದ್ದರು. ಈ ವೇಳೆ ತಮಗೆ ಹಾಸ್ಟೆಲ್ ವಾರ್ಡನ್, ಪತಿ ಮತ್ತು ಇತರರು ಕೆಲವು ದಿನಗಳವರೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪತ್ರ ಬರೆದು ಕೊಟ್ಟಿದ್ದಾರೆ. ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಿನ್ಸಿಪಾಲ್ ಸಹಾಯದಿಂದ ಹುಡುಗಿಯರು ಶನಿವಾರ ಕಿಶನ್‍ಗಢ ಬಾಸ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಪತಿ ನೀಲ್ ಕಮಲ್ ಮತ್ತು ಇನ್ನೊಬ್ಬನನ್ನು ರಮೇಶ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಕುರಿತು ತನಿಖೆ ನಡೆಸಲು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪೊಲೀಸರು ಸಂತ್ರಸ್ತೆಯರ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ. ಇತ್ತ ಶಾಲಾ ಅಧಿಕಾರಿಗಳು ಹಾಸ್ಟೆಲ್ ವಾರ್ಡನ್ ಅನ್ನು ಅಮಾನತುಗೊಳಿಸಿದ್ದಾರೆ.
ಭೋಪಾಲ್: ಹಾಸ್ಟೆಲ್ ಕಾರಿಡಾರ್ ನಲ್ಲಿ ಬಳಸಿ ಬಿಸಾಡಿದ ಸ್ಯಾನಿಟರಿ ನ್ಯಾಪ್ಕಿನ್ ಪತ್ತೆಯಾಗಿದ್ದಕ್ಕೆ ಮಹಿಳಾ ವಾರ್ಡನ್ ಹಾಸ್ಟೆಲ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಸಾಗರ್ ನಲ್ಲಿರುವ ಡಾ.ಎಚ್.ಎಸ್.ಗೌರ್ ಸೆಂಟ್ರಲ್ ಯೂನಿವರ್ಸಿಟಿ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಉಪಕುಲಪತಿ ಪ್ರೊಫೆಸರ್ ಆರ್.ಪಿ ತಿವಾರಿ ಅವರಲ್ಲಿ ವಾರ್ಡನ್ ವಿರುದ್ಧ ದೂರು ನೀಡಿದ್ದಾರೆ. ಈಗ ವಿವಿ ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದೆ.
ಭಾನುವಾರ ಹಾಸ್ಟೆಲ್ ನ ಕಾರಿಡಾರ್ ನ ವಾಶ್‍ರೂಮ್ ಬಳಿ ನ್ಯಾಪ್ಕಿನ್ ಸಿಕ್ಕಿದೆ. ಇದರಿಂದ ಅಲ್ಲಿ ಯಾರು ನ್ಯಾಪ್ಕಿನ್ ಎಸೆದವರು ಎಂದು ಪತ್ತೆ ಮಾಡಲು ಮಹಿಳಾ ವಾರ್ಡನ್ ಮುಂದಾಗಿದ್ದಾರೆ. ಆಗ ಯಾರಿಗೆ ಋತುಸ್ರಾವ ಆಗಿದೆ ಎಂದು ಪರಿಶೀಲಿಸಲು ವಿದ್ಯಾರ್ಥಿನಿಯರನ್ನು ಒಬ್ಬೊರಂತೆ ಕರೆದು ವಿವಸ್ತ್ರಗೊಳಿಸಿದ್ದಾರೆ.
ಈ ಘಟನೆ ನಡೆದ ನಂತರ ಸುಮಾರು 40 ವಿದ್ಯಾರ್ಥಿನಿಯರು ಈ ಬಗ್ಗೆ ವಿಸಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವಾರ್ಡನ್ ಜೊತೆ ಮಾತನಾಡಿದ್ದೇವೆ. ಆದರೆ ವಾರ್ಡನ್ ಈ ಆರೋಪವನ್ನು ನಿರಾಕರಿಸುತ್ತಿದ್ದು, ತನಗೆ ಈ ಬಗ್ಗೆ ಮಾಹಿತಿಯೇ ತಿಳಿದಿಲ್ಲ ಅಂತಾ ಹೇಳಿದ್ದಾರೆ. ಇನ್ನು ಮೂರು ದಿನದೊಳಗೆ ಸಮಿತಿಯು ವಿಚಾರಣೆ ನಡೆಸಿ ವರದಿ ಸಲ್ಲಿಸುತ್ತದೆ. ನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರೊ. ತಿವಾರಿ ಹೇಳಿದ್ದಾರೆ.
ಹಾಸ್ಟೆಲ್ ನ ಉಸ್ತುವಾರಿ ಸಂಧ್ಯಾ ಪಟೇಲ್, ಯಾವುದೇ ವಿದ್ಯಾರ್ಥಿಯನ್ನೂ ಪರಿಶೀಲನೆ ಮಾಡಿಲ್ಲ ಎಂದು ಹೇಳಿದ್ದಾರೆ. ಹಾಸ್ಟೆಲ್ ವಾರ್ಡನ್ ಚಂಡಾ ಬೈನ್ ಕೂಡ ನನಗೆ ಈ ಘಟನೆ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಆದರೆ ಪರಿಶೀಲನೆಯ ನಂತರ 40 ವಿದ್ಯಾರ್ಥಿನಿಯರು ದೂರು ನೀಡಲು ವಿಸಿ ಮನೆಗೆ ಹೋಗಿದ್ದರು.