Tag: Hostel Youth

  • ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    ಚಂಡೀಗಢ: ಬರ್ತ್‍ಡೇ ಪಾರ್ಟಿ ಮಾಡಲು ಹಣಕ್ಕಾಗಿ ಪ್ರಾರಂಭವಾದ ಜಗಳ ಒಬ್ಬನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಜಲಂಧರ್‌ನಲ್ಲಿ ನಡೆದಿದೆ.

    ನಡೆದಿದ್ದೇನು?
    ಜಲಂಧರ್‌ನ ಹಾಸ್ಟೆಲ್‍ವೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬಕ್ಕೆ ತಯಾರಿ ಮಾಡಿಕೊಳ್ಳಲಾಗಿತ್ತು. ಇತರ ಸ್ನೇಹಿತರ ಬಳಿ ಹಣವನ್ನು ಸಂಗ್ರಹ ಮಾಡಲಾಗುತ್ತಿತ್ತು. ಇಬ್ಬರು ವಿದ್ಯಾರ್ಥಿಗಳ ನಡುವೆ ಗೊಂದಲ ಉಂಟಾಗಿ ಜಗಳ ಪ್ರಾರಂಭವಾಗಿದೆ. ಈ ವೇಳೆ ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಪರಿಣಾಮ ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವನ ಸ್ಥಿತಿಯೂ ಚಿಂತಾಜನಕವಾಗಿದೆ. ಇದನ್ನೂ ಓದಿ:  ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ 

    ಯಾರಿದು?
    ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಿಶನ್ ಕುಮಾರ್ ಯಾದವ್ ಮತ್ತು ಅಮನ್ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಇವರಿಬ್ಬರು ಬಿಹಾರದವರಾಗಿದ್ದು, ಬಿಎಸ್‍ಸಿ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು.

    Jalandhar: 2 Students Fall Off Hostel Building During Fight Over Bday Party Contribution; 1 Dead, Other Critical

    ಎಡಿಸಿಪಿ ಜಸ್ಕಿರಂಜಿತ್ ಎಸ್ ತೇಜಾ ಈ ಕುರಿತು ಮಾತನಾಡಿದ್ದು, ಬರ್ತ್‍ಡೇ ಪಾರ್ಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಈ ವೇಳೆ ಮಹಡಿ ಮೇಲಿನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದಿದ್ದಾರೆ. ಒಬ್ಬ ಮೃತಪಟ್ಟರೆ, ಇನ್ನೊಬ್ಬ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಗೆ ದಾಖಲಾಗಿರುವ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

    Live Tv