Tag: Hotel

  • ದೇಹ ಮನೆಯವರಿಗೆ ನೀಡಬೇಡಿ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    ದೇಹ ಮನೆಯವರಿಗೆ ನೀಡಬೇಡಿ ಎಂದು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

    ಲಕ್ನೋ: ಕಾಲ್ ಸೆಂಟರ್‌ನಲ್ಲಿ (Call centre) ಕೆಲಸ ಮಾಡುತ್ತಿದ್ದ ಕಾನ್ಪುರದ ವ್ಯಕ್ತಿಯೊಬ್ಬ ಹೋಟೆಲ್‍ನಲ್ಲಿ (Hotel) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರಪ್ರದೇಶದ ನಾಕಾ ಹಿಂದೋಲಾ ಪ್ರದೇಶದಲ್ಲಿ ನಡೆದಿದೆ.

    ಮೃತರನ್ನು ಆಶಿಶ್ ಕುಮಾರ್ (28) ಎಂದು ಗುರುತಿಸಲಾಗಿದೆ. ಆಶಿಶ್ ಹೋಟೆಲ್‍ವೊಂದರಲ್ಲಿ ತಂಗಿದ್ದ. ಆತ ಒಂದು ದಿನ ಕಳೆದರೂ ರೂಮ್‍ನಿಂದಹೊರಗೆ ಬಾರದಿದ್ದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಪಾಸಣೆಗೆಂದು ಹೋಗಿದ್ದಾರೆ. ನಂತರ ರೂಮ್‍ನ ಬಾಗಿಲನ್ನು ತಟ್ಟಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅದಾದ ಬಳಿಕ ಕಿಟಕಿಯಿಂದ ನೋಡಿದಾಗ ಆಶಿಶ್ ನೇಣು ಬಿಗಿದುಕೊಂಡಿರುವುದು ಕಂಡಿದೆ. ಘಟನೆಗೆ ಸಂಬಂಧಿಸಿ ಹೋಟೆಲ್‍ನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    crime

    ಸ್ಥಳಕ್ಕಾಗಮಿಸಿದ ಪೊಲೀಸರು, ಆಶೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಆಶಿಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆತ ತನ್ನ ದೇಹವನ್ನು ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ಹಸ್ತಾಂತರಿಸಬೇಕೇ ಹೊರತು ತನ್ನ ಕುಟುಂಬಕ್ಕಲ್ಲ (Family) ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪತ್ನಿಯನ್ನು ಉಳಿಸೋ ಬದ್ಲು ವೀಡಿಯೋ ಮಾಡಿಕೊಂಡ ಪತಿ

    POLICE JEEP

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಶೀಶ್ ತನ್ನ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಬೇಡ ಎನ್ನುವುದಕ್ಕೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಜಗಳ ಬಿಡಿಸಲು ಹೋದ ವ್ಯಕ್ತಿಯೇ ಕುಸಿದು ಬಿದ್ದು ಸಾವು

    ಜಗಳ ಬಿಡಿಸಲು ಹೋದ ವ್ಯಕ್ತಿಯೇ ಕುಸಿದು ಬಿದ್ದು ಸಾವು

    ಧಾರವಾಡ: ಇಬ್ಬರ ಜಗಳದಲ್ಲಿ (Conflict) ಮೂರನೇ ವ್ಯಕ್ತಿ ಬಲಿಯಾದ ಘಟನೆ ಧಾರವಾಡ (Dharwad) ಹೊಸ ಬಸ್ ನಿಲ್ದಾಣದ ಎದುರಿನ ಹೋಟೆಲ್‌ನಲ್ಲಿ ನಡೆದಿದೆ.

    ಶ್ರೀಸಾಯಿ ಎಂಬ ಹೋಟೆಲ್‌ನಲ್ಲಿ (Hotel) ಈ ಘಟನೆ ನಡೆದಿದೆ.  ರಾಮಲಿಂಗಪ್ಪ ಎಂಬಾತ ಜಗಳ ಬಿಡಿಸಲು ಬಂದು ಜೀವ ಕಳೆದುಕೊಂಡ ವ್ಯಕ್ತಿ. ರಾಮಲಿಂಗಪ್ಪನ ಏಟು ತಿಂದ ಕೆಲವೇ ಕ್ಷಣಗಳಲ್ಲಿ ಹಠಾತ್ತನೇ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪರಸ್ಪರ ಕಿತ್ತಾಡಿ ಮಕ್ಕಳೊಂದಿಗೆ ಬಾವಿಗೆ ಜಿಗಿದ ಓರಗಿತ್ತಿಯರು – ಗರ್ಭಿಣಿ ಸಾವು

    ಹೋಟೆಲ್‌ಗೆ ಬಂದಿದ್ದ ಎರಡು ಗುಂಪುಗಳ ಮಧ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ರಾಮಲಿಂಗಪ್ಪ ಜಗಳ ಬಿಡಿಸಲು ಹೋಗಿದ್ದ. ಈ ವೇಳೆ ರಾಮಲಿಂಗಪ್ಪ ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಒಂದು ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ನಡೆದು ಕೆಲವು ಕ್ಷಣಗಳ ನಂತರ ಕುಸಿದು ಬಿದ್ದ ರಾಮಲಿಂಗಪ್ಪ, ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಸದ್ಯ ಉಪನಗರ ಠಾಣೆ ಪೊಲೀಸರು ಘಟನೆ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ಹೋಟೆಲ್‌ ಮಾಲೀಕರಿಗೆ ಗುಡ್‌ನ್ಯೂಸ್‌ – ಮಧ್ಯರಾತ್ರಿ 1 ಗಂಟೆವರೆಗೂ ಹೋಟೆಲ್‌ ತೆರೆಯಲು ಅನುಮತಿ

    ಬೆಂಗಳೂರು ಹೋಟೆಲ್‌ ಮಾಲೀಕರಿಗೆ ಗುಡ್‌ನ್ಯೂಸ್‌ – ಮಧ್ಯರಾತ್ರಿ 1 ಗಂಟೆವರೆಗೂ ಹೋಟೆಲ್‌ ತೆರೆಯಲು ಅನುಮತಿ

    ಬೆಂಗಳೂರು: ನಗರದ ಹೋಟೆಲ್‌ (Bengaluru Hotels) ಮಾಲೀಕರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಇನ್ಮೇಲೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ.

    ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ 1 ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ದಾಖಲೆ ಮಳೆ – 92 ವಾರ್ಡ್‍ಗಳಲ್ಲಿ ವರುಣಾರ್ಭಟ

    ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್‌ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ದರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ ಒಂದು ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಹೋಟೆಲ್ ರೂಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಶವ ಪತ್ತೆ

    ಹೋಟೆಲ್ ರೂಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಶವ ಪತ್ತೆ

    ಮುಂಬೈ: 30 ವರ್ಷದ ಮಾಡೆಲ್ ಒಬ್ಬರು ಹೋಟೆಲ್ ರೂಮ್‍ನ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮುಂಬೈನ (Mumbai) ಸಬರ್ಬನ್ ಅಂಧೇರಿ ಪ್ರದೇಶದ ವರ್ಸೋವಾದಲ್ಲಿ (Suburban Andheri area) ನಡೆದಿದೆ.

    ಘಟನಾ ಸ್ಥಳದಲ್ಲಿ ಸಿಕ್ಕ ಡೆತ್‍ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಡೆತ್ ನೋಟ್‍ನಲ್ಲಿ ಮಹಿಳೆ ತಾನು ಖುಷಿಯಾಗಿಲ್ಲ, ನನಗೆ ಶಾಂತಿ ಬೇಕು ಎಂದು ಬರೆದಿದ್ದಾರೆ. ಮೃತ ಮಾಡೆಲ್ ಅನ್ನು ಲೋಖಂಡವಾಲಾ ಪ್ರದೇಶದ ಯಮುನಾ ನಗರ ಸೊಸೈಟಿಯ (Yamuna Nagar Society) ನಿವಾಸಿ ಆಕಾಂಕ್ಷಾ ಮೋಹನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೋಟೆಲ್‍ಗೆ ಭೇಟಿ ನೀಡಿ ಊಟಕ್ಕೆ ಆರ್ಡರ್ ಮಾಡಿದ್ದರು. ನಂತರ ಕೋಣೆಯೊಳಗೆ ಹೋಗಿ ಬಾಗಿಲನ್ನು ಲಾಕ್ ಮಾಡಿಕೊಂಡಿದ್ದರು. ಆದರೆ ಮರುದಿನ ಸಪ್ಲಯರ್ ಕೋಣೆಯ ಬಾಗಿಲನ್ನು ಎಷ್ಟೇ ಸಲ ತಟ್ಟಿದರೂ, ಮರು ಉತ್ತರ ನೀಡಲಿಲ್ಲ. ಹೀಗಾಗಿ ಹೋಟೆಲ್ ಮ್ಯಾನೇಜರ್‌ಗೆ ವಿಷಯ ತಿಳಿಸಿದ್ದಾರೆ. ಕೊನೆಗೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಇದನ್ನೂ ಓದಿ: ಪಾದಯಾತ್ರೆ ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ: ಸೋಮಣ್ಣ ವ್ಯಂಗ್ಯ

    POLICE JEEP

    ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಮಾಡೆಲ್ ದೇಹ ರೂಮ್‍ನ ಸೀಲಿಂಗ್ ಫ್ಯಾನ್‍ನಲ್ಲಿ ನೇತಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಆಕಾಂಕ್ಷಾ ಬರೆದಿರುವ ಡೆತ್ ನೋಟ್‍ನಲ್ಲಿ ‘ನನ್ನನ್ನು ಕ್ಷಮಿಸಿ’. ನನ್ನ ಸಾವಿಗೆ ಯಾರು ಕೂಡ ಕಾರಣರಲ್ಲ. ನಾನು ಸಂತೋಷವಾಗಿಲ್ಲ. ನನಗೆ ಶಾಂತಿ ಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್‌ ಶಿಕ್ಷಣ ಕೇಂದ್ರದಲ್ಲಿ ಬಾಂಬ್‌ ಸ್ಫೋಟ – 19 ಮಂದಿ ದುರ್ಮರಣ

    ಘಟನಾ ಸ್ಥಳದಲ್ಲಿ ಸಿಕ್ಕ ಸೂಸೈಡ್ ನೋಟ್ ಮತ್ತು ಮರಣೋತ್ತರ ಪರೀಕ್ಷೆಯ ವರದಿಯನ್ನು ವಶಪಡಿಸಿಕೊಂಡ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೋಟೆಲ್‍ನಲ್ಲಿ ಬೇರೊಬ್ಬಳ ಜೊತೆಗೆ ಚಕ್ಕಂದ – ರೆಡ್‍ಹ್ಯಾಂಡ್ ಆಗಿ ಸಿಕ್ಕ ಪತಿಗೆ ಚಪ್ಪಲಿಯಿಂದ ಗ್ರಹಚಾರ ಬಿಡಿಸಿದ್ಲು

    ಹೋಟೆಲ್‍ನಲ್ಲಿ ಬೇರೊಬ್ಬಳ ಜೊತೆಗೆ ಚಕ್ಕಂದ – ರೆಡ್‍ಹ್ಯಾಂಡ್ ಆಗಿ ಸಿಕ್ಕ ಪತಿಗೆ ಚಪ್ಪಲಿಯಿಂದ ಗ್ರಹಚಾರ ಬಿಡಿಸಿದ್ಲು

    ಲಕ್ನೋ: ಆಗ್ರಾದ(Agra) ಹೋಟೆಲ್ ಒಂದರಲ್ಲಿ ಗೆಳತಿಯ ಜೊತೆಗೆ ಸರಸದಲ್ಲಿ ಮುಳುಗಿದ್ದ ಪತಿರಾಯನಿಗೆ ಚಪ್ಪಲಿಯಲ್ಲಿ (Slipper) ಹೊಡೆಯುವ ಮೂಲಕ ಪತ್ನಿ ಗ್ರಹಚಾರ ಬಿಡಿಸಿದ್ದಾಳೆ. ಇದೀಗ ಈ ಗಲಾಟೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಠಾಣಾ ಹರಿ ಪರ್ವತ (Thana Hari Parvata) ಪ್ರದೇಶದ ಹೋಟೆಲ್‍ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಗೆಳತಿಯೊಂದಿಗೆ ಹೋಟೆಲ್‍ಗೆ ತಲುಪಿದ್ದಾನೆ. ಈ ವಿಚಾರ ತಿಳಿದ ಪತ್ನಿ ಮತ್ತು ಆಕೆಯ ಸಹೋದರ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ನಂತರ ಹೋಟೆಲ್ ಕೊಠಡಿಯಲ್ಲಿ (Hotel Room) ರೆಡ್ ಹ್ಯಾಂಡ್ ಆಗಿ ಗೆಳತಿ ಜೊತೆಗೆ ಸಿಕ್ಕ ಪರಿ ಜೊತೆಗೆ ಗಲಾಟೆ ಶುರು ಮಾಡಿದ್ದಾಳೆ. ಈ ಘಟನೆಯ ಸಂಪೂರ್ಣ ವೀಡಿಯೋವನ್ನು ಮಹಿಳೆಯ ಸಹೋದರ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ವೀಡಿಯೋದಲ್ಲಿ ಚಪ್ಪಲಿಯಿಂದ ಪತ್ನಿ ತನ್ನ ಪತಿ ಮತ್ತು ಆಕೆಯ ಗೆಳತಿಗೆ ಥಳಿಸಿದ್ದಾಳೆ.

    ವೀಡಿಯೋದಲ್ಲಿ ಮಹಿಳೆ ಇಬ್ಬರಿಗೂ ಕಪಾಳಮೋಕ್ಷ ಮಾಡಿ, ತನ್ನ ಚಪ್ಪಲಿಯಲ್ಲಿ ಒಟ್ಟಿಗೆ ಥಳಿಸಿದ್ದಾಳೆ. ಈ ವೇಳೆ ವ್ಯಕ್ತಿ ಕ್ಷಮಿಸು ಎಂದು ಬೇಡಿಕೊಳ್ಳುತ್ತಿರುತ್ತಾನೆ. ಆದರೆ ರೊಚ್ಚಿಗೆದ್ದ ಮಹಿಳೆ ಆತನನ್ನ ಬಿಡದಂತೆ ಹಿಗ್ಗಾಮುಗ್ಗಾ ಹೊಡೆದು, ಪೊಲೀಸರಿಗೆ ಕರೆ ಮಾಡಿ ಎಂದು ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್ ಸರ್ವರ್ ಡೌನ್ – ಫೋಟೋ, ವೀಡಿಯೋ ಅಪ್‍ಲೋಡ್ ಮಾಡಲಾಗದೇ ಜನರ ಪರದಾಟ

    ಮಹಿಳೆಯ ಪತಿ ನರ್ಸಿಂಗ್ ಹೋಂನಲ್ಲಿ (Nursing Home) ಕೆಲಸ ಮಾಡುತ್ತಿದ್ದಾನೆ. ಅತನಿಗೆ 16 ವರ್ಷದ ಮಗಳು ಹಾಗೂ 9 ವರ್ಷದ ಮಗನಿದ್ದಾನೆ. ಗಂಡನ ಈ ಚಾಳಿ ಮಕ್ಕಳಿಬ್ಬರಿಗೂ ತಿಳಿದಿದೆ. ಗಂಡನ ಈ ಕೃತ್ಯಗಳಿಂದ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಮುಂದೆ ತನ್ನ ಮಕ್ಕಳಿಗೂ ಇದೇ ಚಾಳಿ ಎಲ್ಲಿ ಬರುತ್ತದೆಯೋ ಎಂದು ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಹಿಗ್ಗಾಮುಗ್ಗ ಬಾರಿಸಿದ್ದಾಳೆ. ಇದನ್ನೂ ಓದಿ: NIA ಮಿಡ್‌ನೈಟ್ ಆಪರೇಷನ್- ಬೆಂಗ್ಳೂರಿನಲ್ಲಿ ಶಂಕಿತ ಉಗ್ರ ಯಾಸಿರ್ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ

    ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ

    ಲಕ್ನೋ: ಉತ್ತರ ಪ್ರದೇಶದ(Uttar Pradesh) ಲಕ್ನೋದಲ್ಲಿ(Lucknow) ಹೊಟೇಲ್ ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರ ಆದೇಶದ ಮೇರೆಗೆ 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

    ಘಟನೆ ಬಗ್ಗೆ ನಿರ್ಲಕ್ಷ್ಯ ವಹಿಸಿದಕ್ಕಾಗಿ ಹಾಗೂ ಅಕ್ರಮ ನಡೆಸಿದ ಆರೋಪದ ಮೇಲೆ 5 ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮಾತ್ರವಲ್ಲದೇ 4 ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಲಕ್ನೋ ಪೊಲೀಸ್ ಕಮಿಷನರ್ ಎಸ್‌ಬಿ ಶಿರಾಡ್ಕರ್ ಹಾಗೂ ಕಮಿಷನರ್ ರೋಷನ್ ಜೇಕಬ್ ಅವರನ್ನೊಳಗೊಂಡ ದ್ವಿಸದಸ್ಯ ತನಿಖಾ ಸಮಿತಿ ಈ ಬಗ್ಗೆ ವರದಿ ಸಲ್ಲಿಸಿದ ಬಳಿಕ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

    ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರದ ವಕ್ತಾರರು, ಲಕ್ನೋವಿನ ಹೋಟೆಲ್ ಲೆವಾನಾದಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಕಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ತನಿಖಾ ವರದಿಯನ್ನು ಸ್ವಿಕರಿಸಿದ ಬಳಿಕ ಆದಿತ್ಯನಾಥ್ ಅವರು ಈ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ‘ಕುದುರೆ ವ್ಯಾಪಾರ’ ಆರೋಪ – ಕಾಂಗ್ರೆಸ್ ಶಾಸಕ, ಬಿಜೆಪಿ ನಾಯಕಿಯ ಹಾದಿಬೀದಿ ರಂಪಾಟ

    ಮುಖ್ಯಮಂತ್ರಿಗಳ ಸೂಚನೆಯಂತೆ ಗೃಹ ಇಲಾಖೆ, ಇಂಧನ ಇಲಾಖೆ, ನೇಮಕಾತಿ ಇಲಾಖೆ, ಲಕ್ನೋ ಅಭಿವೃದ್ಧಿ ಪ್ರಾಧಿಕಾರ(ಎಲ್‌ಡಿಎ) ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

    ಲಕ್ನೋದ ಹಜರತ್‌ಗಂಜ್ ಪ್ರದೇಶದ ಹೋಟೆಲ್ ಲೆವಾನಾದಲ್ಲಿ ಸೋಮವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡು ಹುಡುಗಿಯನ್ನು ಮದುವೆಯಾಗಲು ರಾಹುಲ್ ಸಿದ್ಧವಂತೆ!

    Live Tv
    [brid partner=56869869 player=32851 video=960834 autoplay=true]

  • ಮುಂಬೈನ 5 ಸ್ಟಾರ್ ಹೋಟೆಲ್‍ಗೆ ಬಾಂಬ್ ಬೆದರಿಕೆ- ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ

    ಮುಂಬೈನ 5 ಸ್ಟಾರ್ ಹೋಟೆಲ್‍ಗೆ ಬಾಂಬ್ ಬೆದರಿಕೆ- ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ

    ಮುಂಬೈ: ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಲಲಿತ್ ಹೋಟೆಲ್ (5ಸ್ಟಾರ್ ಹೋಟೆಲ್)ಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದು, ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.

    ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್ ಅವರಿಗೆ ಕರೆ ಮಾಡಿ, ಲಲಿತ್ ಹೋಟೆಲ್‍ನ 4 ಕಡೆ ಬಾಂಬ್‍ಗಳನ್ನು ಇಡಲಾಗಿದೆ. ಇದನ್ನು ನಿಷ್ಕ್ರಿಯಗೊಳಿಸಬೇಕಾದರೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾನೆ. ಘಟನೆ ಸಂಬಂಧಿಸಿ ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 5 ದಿನಗಳಲ್ಲಿ ನಡೆದ ಇದು 3ನೇ ಘಟನೆಯಾಗಿದೆ.

    ಇತ್ತೀಚೆಗಷ್ಟೇ ಪಾಕಿಸ್ತಾನಿ ಸಂಖ್ಯೆಯಿಂದ 26/11ರ ಮುಂಬೈ ತಾಜ್ ಹೋಟೆಲ್ ಮೇಲೆ ದಾಳಿ ಮಾದರಿ ರೀತಿಯೇ ಭಯೋತ್ಪಾದಕ ದಾಳಿಯ ನಡೆಸುವುದಾಗಿ ನಗರ ಪೊಲೀಸರಿಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು 3 ತಂಡಗಳನ್ನು ರಚಿಸಿ ತನಿಖೆ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಹಬ್ಬಕ್ಕೂ ಮುನ್ನ ಎಕೆ 47 ಒಳಗೊಂಡ ದೋಣಿ ಪತ್ತೆ – ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

    crime

    ಮತ್ತೊಂದು ಘಟನೆಯಲ್ಲಿ ರಾಯಗಢದ ಹರಿಹರೇಶ್ವರ ಬೀಚ್ ಬಳಿ ಬೋಟ್ ಪತ್ತೆ ಆಗಿತ್ತು. ಅದರಲ್ಲಿ ಅನೇಕ ಮದ್ದುಗುಂಡುಗಳು ಹಾಗೂ 3 ಎಕೆ 47 ರೈಫೆಲ್‍ಗಳಿದ್ದವು. ಈ ಎಲ್ಲಾ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆ ಪ್ರದೇಶವನ್ನು ಹೈಅಲರ್ಟ್ ಎಂದು ಘೋಷಿಸಿದ್ದರು. ಇದನ್ನೂ ಓದಿ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

    Live Tv
    [brid partner=56869869 player=32851 video=960834 autoplay=true]

  • ಹೋಟೆಲ್, ರೆಸ್ಟೋರೆಂಟ್‍ಗಳು ಸೇವಾ ಶುಲ್ಕ ವಿಧಿಸಬಹುದು: ದೆಹಲಿ ಹೈಕೋರ್ಟ್

    ಹೋಟೆಲ್, ರೆಸ್ಟೋರೆಂಟ್‍ಗಳು ಸೇವಾ ಶುಲ್ಕ ವಿಧಿಸಬಹುದು: ದೆಹಲಿ ಹೈಕೋರ್ಟ್

    ನವದೆಹಲಿ: ಮುಂದಿನ ವಿಚಾರಣೆವರೆಗೂ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳು ಸೇವಾ ಶುಲ್ಕ ವಿಧಿಸುವುದನ್ನು ಮುಂದುವರಿಸಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರೆಸ್ಟೋರೆಂಟ್ ಸಂಸ್ಥೆಗಳಿಗೆ ನೋಟಿಸ್ ನೀಡಿ ಈ ಮಹತ್ವದ ಸೂಚನೆ ನೀಡಿದೆ.

    ಕಳೆದ ಜೂನ್‍ನಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯವು, ಬಿಲ್‍ಗಳಲ್ಲಿ ಸೇವಾ ಶುಲ್ಕವನ್ನು ಕಡ್ಡಾಯವಾಗಿ ವಿಧಿಸುವುದನ್ನು ನಿಲ್ಲಿಸುವಂತೆ ಹೋಟೆಲ್, ರೆಸ್ಟೋರೆಂಟ್ ಸಂಘಗಳಿಗೆ ಸೂಚಿಸಿತ್ತು. ಇದು ಕಾನೂನುಬಾಹಿರ ಚಟುವಟಿಕೆ ಎಂದಿದ್ದ ಇಲಾಖೆ ಈ ಪದ್ಧತಿಯನ್ನು ಕೊನೆಗೊಳಿಸಲು ಕಾನೂನು ಚೌಕಟ್ಟನ್ನು ಹೊರತರುವುದಾಗಿಯೂ ಹೇಳಿತ್ತು. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    ಈ ಆದೇಶವನ್ನು ಪ್ರಶ್ನೆ ಮಾಡಿ, ರೆಸ್ಟೋರೆಂಟ್ ಮತ್ತು ಹೋಟೆಲ್ ಮಾಲೀಕರು ದೆಹಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಸರ್ಕಾರ ನಿರ್ಧಾರವನ್ನು ತಡೆ ಹಿಡಿದಿತ್ತು. ಸದ್ಯ ಈ ಆದೇಶವನ್ನು ಪ್ರಶ್ನೆ ಮಾಡಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು (CCPA) ಮೇಲ್ಮನವಿ ಅರ್ಜಿ ಸಲ್ಲಿಸಿದೆ.

    ನ್ಯಾಯಾಲಯವು ಮುಂದಿನ 10 ದಿನಗಳಲ್ಲಿ ಪ್ರಕರಣದ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಹೋಟೆಲ್ ರೆಸ್ಟೋರೆಂಟ್ ಸಂಘಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲಿವರೆಗೂ ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ವಿಧಿಸಬಹುದು ಎಂದು ಕೋರ್ಟ್ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ತನ್ನ ಹೆಸರಲ್ಲಿ ಹೋಟೆಲ್ ರಿಜಿಸ್ಟರ್ ಮಾಡಿಲ್ಲ ಅಂತಾ ಅಪ್ಪ-ಅಮ್ಮನ ತಲೆಗೆ ಗುಂಡಿಕ್ಕಿ ಕೊಂದ

    ತನ್ನ ಹೆಸರಲ್ಲಿ ಹೋಟೆಲ್ ರಿಜಿಸ್ಟರ್ ಮಾಡಿಲ್ಲ ಅಂತಾ ಅಪ್ಪ-ಅಮ್ಮನ ತಲೆಗೆ ಗುಂಡಿಕ್ಕಿ ಕೊಂದ

    ಚಂಡೀಗಢ: ತನ್ನ ಹೆಸರಿಗೆ ಹೋಟೆಲ್ ನೋಂದಾಯಿಸಲು ನಿರಾಕರಿಸಿದಕ್ಕೆ ಪೋಷಕರನ್ನೇ ವ್ಯಕ್ತಿಯೋರ್ವ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಹರಿಯಾಣದ ಜಜ್ಜರ್‍ನಲ್ಲಿ ನಡೆದಿದೆ.

    ಘಟನೆ ಸಂಬಂಧ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಧಾವಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ತಂದೆಯನ್ನು ಹೋಟೆಲ್ ನಡೆಸುತ್ತಿದ್ದ ಚಂದ್ರಭಾನ್ (58) ಎಂದು ಗುರುತಿಸಲಾಗಿದೆ.

    crime

    ಆರೋಪಿ ಪುತ್ರ ತರುಣ್ ಹೋಟೆಲ್ ಅನ್ನು ತನ್ನ ಹೆಸರಿಗೆ ನೋಂದಾಯಿಸುವಂತೆ ತಂದೆಗೆ ಒತ್ತಾಯಿಸುತ್ತಿದ್ದ. ಆದರೆ ಇದಕ್ಕೆ ಚಂದ್ರಭಾನ್ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ತರುಣ್ ಶನಿವಾರ ಬೆಳಗ್ಗೆ ಕೋಣೆಯಲ್ಲಿ ಮಲಗಿದ್ದ ತಾಯಿ ಮತ್ತು ತಂದೆಯನ್ನು ಗುಂಡಿಕ್ಕಿ ಕೊಂದಿದ್ದಾನೆ.  ಇದನ್ನೂ ಓದಿ: ಬಿಎಸ್‍ವೈ ಕಂಡು ಕಣ್ಣೀರು ಹಾಕಿದ ರೇಣುಕಾಚಾರ್ಯ

    ಗುಂಡಿನ ಸದ್ದು ಕೇಳಿ ತರುಣ್ ಪತ್ನಿ ಕೆಳಗೆ ಬಂದು ನೋಡಿದಾಗ ತನ್ನ ಅತ್ತೆ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ನೋಡಿದ್ದಾರೆ. ನಂತರ ಈ ಬಗ್ಗೆ ಪೊಲೀಸರಿಗೆ ಮಹಿಳೆ ಮಾಹಿತಿ ನೀಡಿದ್ದಾರೆ. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಇದನ್ನೂ ಓದಿ: ದೇಶದಲ್ಲಿ 4 ಕೋಟಿಗೂ ಅಧಿಕ ಜನ ಮೊದಲ ಡೋಸ್ ಲಸಿಕೆ ಪಡೆದಿಲ್ಲ!

    Live Tv
    [brid partner=56869869 player=32851 video=960834 autoplay=true]

  • ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

    ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

    ಹುಬ್ಬಳ್ಳಿ: ವಾಸ್ತು ಗುರು ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್ ನಲ್ಲಿ ಇಂದು ಮತ್ತೆ ಪೂಜೆ ನಡೆದಿದೆ.

    ಮಂಗಳವಾರ ಮತ್ತು ಇಂದು ಹೋಮ, ಹವನ, ಯಜ್ಞಗಳನ್ನು ಶಾಸ್ತ್ರಿಗಳು ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಉಣಕಲ್ ಕೆರೆಯ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಅಗೋರ, ಹೋಮ, ಉದಕ ಶಾಂತಿ, ಸುದರ್ಶನ ಹೋಮ,ಗೋ ಪೂಜೆ, ಅಕಲಾ ಪೂಜೆ ನೆರವೇರಿಸುತ್ತಿದ್ದಾರೆ.

    ಕೊಲೆ ನಡೆದ ಸ್ಥಳದಲ್ಲೇ ಮತ್ತೆ ಮತ್ತೆ ಪೂಜೆ ಪುನಸ್ಕಾರಗಳನ್ನು ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ ಮಾಡುತ್ತಿದ್ದಾರೆ. ಸರಳ ವಾಸ್ತು ಖ್ಯಾತ ತಜ್ಞ ಮೃತಪಟ್ಟಿದ್ದನ್ನು ಅಪಶಕುನ ಎಂದುಕೊಂಡರೇ ಹೋಟೆಲ್ ಮಾಲೀಕರು ಈ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದಬಂದಿದೆ. ಇದನ್ನೂ ಓದಿ: 5 ಎಕ್ರೆ ಜಾಗಕ್ಕೆ ಕಿರಿಕ್ – ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್

    ಜುಲೈ 8ರಂದು ಹುಬ್ಬಳ್ಳಿ ಖ್ಯಾತ ಪುರೋಹಿತರನ್ನು ಕರೆಯಿಸಿ ಗುರೂಜಿ ಕೊನೆಯುಸಿರೆಳೆದ ಸ್ಥಳದಲ್ಲೇ ಸುದರ್ಶನ ಹೋಮ ಮಾಡಿಸಿದ್ದರು. ಇಬ್ಬರು ಪುರೋಹಿತರು ಆಗಮಿಸಿ ಪೂಜೆಯನ್ನು ನೆರವೇರಿಸಿಕೊಟ್ಟಿದ್ದರು. ಭಯ ದೂರಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಹೋಮ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿತ್ತು. ಇದನ್ನೂ ಓದಿ: ವಾಸ್ತುಗುರೂಜಿ ಕೊಲೆ ಬಗ್ಗೆ ಹಂತಕರ ತಪ್ಪೊಪ್ಪಿಗೆ – ಸಂಧಾನ ನೆಪದಲ್ಲಿ ದಾಖಲೆ ಜೊತೆ ಚಾಕು ತಂದು ಹತ್ಯೆ

    Live Tv
    [brid partner=56869869 player=32851 video=960834 autoplay=true]