ರಾಯಚೂರು: ನಗರದಲ್ಲಿ ರಾತ್ರೋರಾತ್ರಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ ಬಣ್ಣಗಳ ಬಳಕೆ, ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಿದೆ.
ನಗರದ ಸ್ಟೇಷನ್ ರಸ್ತೆ, ಮಂತ್ರಾಲಯ ರಸ್ತೆಯ ಹೋಟೆಲ್‌ಗಳ ಮೇಲೆ ರಾಯಚೂರು (Raichur) ಉಪವಿಭಾಗ ಸಹಾಯಕ ಆಯುಕ್ತ ಗಜಾನನ ಬಾಳೆ ನೇತೃತ್ವದಲ್ಲಿ ದಾಳಿ ನಡೆದಿದೆ. ರಾಯಚೂರು ತಹಶೀಲ್ದಾರ್ ಹಾಗೂ ಎಫ್‌ಎಸ್‌ಎಸ್‌ಎಐ ಅಧಿಕಾರಿಗಳ ತಂಡ ಸುಮಾರು 10 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದೆ. ಇದನ್ನೂ ಓದಿ: ಕೊಪ್ಪಳ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ – 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ
ಮಾಂಸಾಹಾರ ಹೋಟೆಲ್‌ಗಳಲ್ಲಿ ರಾಸಾಯನಿಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡಿರುವ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೇ 50 ಸಾವಿರ ರೂ. ದಂಡ ವಿಧಿಸಿ, ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
– ಯುಪಿ, ಉತ್ತರಾಖಂಡ ಸರ್ಕಾರದ ಆದೇಶಕ್ಕೆ ತಡೆ ನಿರಾಕರಿಸಿದ ಸುಪ್ರೀಂ
ನವದೆಹಲಿ: ಕನ್ವರ್ ಯಾತ್ರೆಯ (Kanwar Yatra) ಮಾರ್ಗದಲ್ಲಿರುವ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್‌ಗಳನ್ನು (QR Code) ಕಡ್ಡಾಯವಾಗಿ ಪ್ರದರ್ಶಿಸುವಂತೆ ಆದೇಶಿಸಿದ್ದ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಸರ್ಕಾರಗಳ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.
ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಯಾತ್ರಿಗಳಿಗೆ ಆಹಾರ ಸೇವೆಗಳ ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸಲು ಈ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ರಾಜ್ಯ ಸರ್ಕಾರಗಳು ವಾದಿಸಿವೆ. ಈ ಕೋಡ್‌ಗಳ ಮೂಲಕ ಗ್ರಾಹಕರು ಆಹಾರ ಮಳಿಗೆಗಳ ಗುಣಮಟ್ಟ, ಪರವಾನಗಿ ಮತ್ತು ಶುಚಿತ್ವದ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದನ್ನೂ ಓದಿ: ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ
ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರು ಈ ಆದೇಶವು ವ್ಯಾಪಾರಿಗಳ ಮೇಲೆ ಅನಗತ್ಯ ಒತ್ತಡವನ್ನುಂಟುಮಾಡುತ್ತದೆ ಮತ್ತು ಗೌಪ್ಯತೆಯ ಉಲ್ಲಂಘನೆಗೆ ಕಾರಣವಾಗಬಹುದು ಎಂದು ವಾದಿಸಿದರು. ಆದರೆ, ಸರ್ಕಾರದ ಪರ ವಕೀಲರು, ಈ ಯೋಜನೆಯು ಯಾತ್ರಿಗಳ ಸುರಕ್ಷತೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಜಾರಿಗೊಳಿಸಲಾಗಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ
ಬೆಂಗಳೂರು: ಬಸ್ ಟಿಕೆಟ್, ಮೆಟ್ರೋ, ಹಾಲು, ವಿದ್ಯುತ್ ಬಳಿಕ ಡಿಸೇಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆನ್ನಲ್ಲೇ ಈಗ ಕಾಫಿ, ಟೀ ದರ ಸಹ ಏರಿಕೆಯಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ನಂದಿನಿ ಹಾಲಿನ ದರ ಬೆಲೆ ಪ್ರತಿ ಲೀ.ಗೆ 4 ರೂ. ಏರಿಕೆ ಮಾಡಿದ ಬೆನ್ನಲ್ಲೇ ಈಗ ಹೋಟೆಲ್‌ಗಳಲ್ಲಿ ಕಾಫಿ(Coffee), ಟೀ(Tea) ಬೆಲೆಯೂ ಏರಿಕೆಯಾಗಿದೆ. ಒಂದು ಕಡೆ ವಿಪಕ್ಷಗಳು ದರ ಏರಿಕೆ ವಿರುದ್ಧ ಮಾತಿನ ಸಮರ ನಡೆಸಿದ್ರೇ ಇನ್ನೊಂದು ಕಡೆ ಸರ್ಕಾರ ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಕೊಲ್ಲೂರಲ್ಲಿ ಚಂಡಿಕಾ ಹೋಮದಿಂದ ಸಂಗ್ರಹವಾಯ್ತು 1.77 ಕೋಟಿ ರೂ.
ಈಗ ಹಾಲಿನ ದರ ಲೀಟರ್‌ಗೆ 4 ರೂ. ಏರಿಕೆಯಾದ ಬೆನ್ನಲ್ಲೇ ಈಗ ಹೋಟೆಲ್‌ಗಳಲ್ಲಿ ಕಾಫಿ, ಟೀ ಬೆಲೆಯೂ ಏರಿಕೆಯಾಗಿದೆ. 2-3 ರೂ. ಏರಿಕೆ ಕಂಡಿದೆ. ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ ಟೀ ದರದ ಜೊತೆಗೆ ಶೀಘ್ರವೇ ಬೆಣ್ಣೆ, ತುಪ್ಪದ ದೋಸೆ ದರವೂ ಏರಿಕೆಯಾಗಲಿದೆ ಎಂದು ಹೋಟೆಲ್ ಅಸೋಸಿಯೇಷನ್(Hotel Association) ಹೇಳಿದೆ. ಇದನ್ನೂ ಓದಿ: ನನಗೆ ಶುಗರ್ ಇದೆ, ಅನ್ನ ಬಿಟ್ಟು ಚಪಾತಿ ತಿಂತಾ ಇದೀನಿ: ಸಿದ್ದರಾಮಯ್ಯ
ಇನ್ನೂ ದರ ಏರಿಕೆ ವಿಚಾರದಲ್ಲಿ ಸರ್ಕಾರವನ್ನು ಕಟುವಾಗಿ ಟೀಕಿಸಿರುವ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಹಾಲಿನ ದುಡ್ಡು ರೈತರಿಗೆ ಮೊಸರಿನ ದುಡ್ಡು ಏನು ಮಾಡ್ತೀರಾ ಎಂದು ಕಿಡಿಕಾರಿದ್ದಾರೆ. ಆದರೆ ಸಚಿವ ಡಿ.ಕೆ.ಶಿವಕುಮಾರ್(D K Shivakumar) ದರ ಏರಿಕೆಯನ್ನು ಸಮರ್ಥಿಸಿದ್ದಾರೆ. ರಾಜಕೀಯ ಪಕ್ಷಗಳ ಕೆಸೆರೆರೆಚಾಟದ ಮಧ್ಯೆ ಜನರು ನಿತ್ಯ ದರ ಏರಿಕೆ ಬರೆಯಿಂದ ಹೈರಾಣಾಗಿದ್ದಾರೆ.
– ಗ್ರಾಹಕರೇ ಸ್ವಇಚ್ಛೆಯಿಂದ ನೀಡಿದರೆ ಮಾತ್ರ ತೆಗೆದುಕೊಳ್ಳಬಹುದು – ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೂಚನೆ
ನವದೆಹಲಿ: ದೇಶದಾದ್ಯಂತ ಯಾವುದೇ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂಬ ಮಹತ್ತರ ತೀರ್ಪನ್ನು ದೆಹಲಿ ಹೈಕೋರ್ಟ್ (Delhi High Court) ಶುಕ್ರವಾರ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎತ್ತಿ ಹಿಡಿದಿದೆ.
ಹೋಟೆಲ್‌ಗಳಲ್ಲಿ ಮತ್ತು ರೆಸ್ಟೋರೆಂಟ್‌ಗಳಲ್ಲಿ ವಿಧಿಸಲಾಗುತ್ತಿದ್ದ ಸೇವಾ ಶುಲ್ಕ ನಿಷೇಧಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(ಸಿಸಿಪಿಎ) 2019ರ ಕಾನೂನಿನ ಅನ್ವಯ ಈ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು. ಆದರೆ, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಆರ್‌ಆಐ) ಮತ್ತು ಫೆಡರೇಶನ್ ಆಫ್ ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಘಟನೆಗಳು ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದವು. ಇದನ್ನೂ ಓದಿ: 50 ಲಕ್ಷ ಹಾಕಿದ್ರೂ ಮತ್ತಷ್ಟು ಬೇಡಿಕೆ – ಸೈಬರ್ ವಂಚಕರ ಕಾಟ, ವೃದ್ಧ ದಂಪತಿ ಆತ್ಮಹತ್ಯೆ
ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್, ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಹೊರಡಿಸಿದ್ದ ಸೇವಾ ಶುಲ್ಕ ನಿಷೇಧ ಮಾರ್ಗಸೂಚಿ ಮತ್ತು ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ವಾದವನ್ನು ಆಲಿಸಿ ಅಂತಿಮವಾಗಿ ಸಿಸಿಪಿಎ (CCPA) ಹೊರಡಿಸಿದ ಮಾರ್ಗಸೂಚಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ. ಅಲ್ಲದೇ, ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್‌ಗೆ ದಂಡ ಸಹ ವಿಧಿಸಿದೆ. ಇದನ್ನೂ ಓದಿ: ಅಂಬೇಡ್ಕರ್ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ
ಸ್ವಯಂ ಪ್ರೇರಣೆಯಿಂದ ಕೊಟ್ಟರಷ್ಟೇ ತೆಗೆದುಕೊಳ್ಳಿ:
ಹೈಕೋರ್ಟ್ ತೀರ್ಪಿನ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಹೈಕೋರ್ಟ್ ತೀರ್ಪಿನ ಅನ್ವಯ ಇನ್ನು ಮುಂದೆ ದೇಶದ ಯಾವುದೇ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಕಡ್ಡಾಯವಾಗಿ ಅಥವಾ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ. ಗ್ರಾಹಕರೇ ಸ್ವಯಂ ಪ್ರೇರಣೆಯಿಂದ ನೀಡಿದರೆ ಮಾತ್ರ ತೆಗೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಗ್ರಾಹಕರ ಹಿತರಕ್ಷಣೆಗೆ ಬದ್ಧವಾಗಿದೆ. ಕೇಂದ್ರ ಗ್ರಾಹಕ ಸಚಿವಾಲಯ ಗ್ರಾಹಕರ ಹಿತರಕ್ಷಣೆಗಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಂತೆ 2019ರ ಕಾನೂನಿನ ಅನ್ವಯ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಸೇವಾ ಶುಲ್ಕ ವಿಧಿಸುವುದನ್ನು ನಿಷೇಧಿಸಿ ಮಾರ್ಗಸೂಚಿ ಹೊರಡಿಸಿತ್ತು. ಹೋಟೆಲ್, ರೆಸ್ಟೋರೆಂಟ್ ಸಂಘಟನೆಗಳು ದೆಹಲಿ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಗ್ರಾಹಕರ ಪರ ತೀರ್ಪು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್ ಕೇಸ್ ಬಗ್ಗೆ ಧನ್ವೀರ್ ಮಾತು
ದೆಹಲಿ ಹೈಕೋರ್ಟ್ ಆದೇಶದಂತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಇನ್ನು ಮುಂದೆ ಗ್ರಾಹಕ ರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಗ್ರಾಹಕರಿಗೆ ಕಡ್ಡಾಯವಾಗಿ ಅಥವಾ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ. ಗ್ರಾಹಕರೇ ಸ್ವ ಇಚ್ಛೆಯಿಂದ ನೀಡಿದರೆ ಮಾತ್ರ ತೆಗೆದುಕೊಳ್ಳಬಹುದು ಎಂದು ಸೂಚಿಸಿದರು.
ಬೆಂಗಳೂರು: ಬೆಂಗಳೂರಿನ (Bengaluru) ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಲಿದೆ. ಇದೇ ತಿಂಗಳಿನ ಅಂತ್ಯಕ್ಕೆ ಹೋಟೆಲ್‌ಗಳಲ್ಲಿ (Hotel) ಕಾಫಿ (Coffee) ದರ ಬರೋಬ್ಬರಿ 15% ಏರಿಕೆಯಾಗಲಿದೆ.
ಪ್ರತಿ ಕೆಜಿ ಕಾಫಿಗೆ 800 ರಿಂದ 850 ರೂ. ಇದೆ. ಶೀಘ್ರದಲ್ಲಿಯೇ ಇದರ ಬೆಲೆ 1000 ದಿಂದ 1100ಕ್ಕೆ ಏರಿಕೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ರೋಸ್ಟರ್ಸ್ ಅಸೋಸಿಯೇಷನ್ ಮತ್ತು ಕಾಫಿ ಮಂಡಳಿಯ ಅಧಿಕಾರಿಗಳು ಸಭೆ ನಡೆಸಿದ್ದು, ಕಾಫಿ ರೇಟ್ ಕೂಡ 5 ರೂ. ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ರೋಸ್ಟರ್ ಮಾರಾಟ ಮಾಡುವ ಹುರಿದ ಕಾಫಿ ಪುಡಿ ಬೆಲೆ 100 ಹೆಚ್ಚಾಗಲಿದ್ದು, ಮಾರ್ಚ್ ಅಂತ್ಯಕ್ಕೆ ಕೆಜಿಗೆ 100 ರೂ. ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ ಸುಮಾರು 500 ರೋಸ್ಟರ್‌ಗಳಿದ್ದು, ಅವುಗಳಲ್ಲಿ 300 ಬೆಂಗಳೂರಿನಲ್ಲಿವೆ. ಕಾಫಿ ಪುಡಿ ಬೆಲೆ ಹೆಚ್ಚಾದರೆ ಹೋಟೆಲ್‌ಗಳಲ್ಲಿ ಕಾಫಿ ದರ ಹೆಚ್ಚಳ ಅನಿರ್ವಾಯ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ಇದನ್ನೂ ಓದಿ : ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಸರ್ಕಾರ ಚೆಲ್ಲಾಟ ಸಲ್ಲದು: ವಿಜಯೇಂದ್ರ ಟೀಕೆ
ಹೋಟೆಲ್‌ಗಳಲ್ಲಿ ಕಾಫಿ ದರ ಎಷ್ಟು ಏರಿಕೆ ಆಗುತ್ತೆ?
*ಸೆಲ್ಫ್ ಸರ್ವಿಸ್ ಹೋಟೆಲ್‌ಗಳಲ್ಲಿ 15 ರಿಂದ 20 ರೂ.
*ಸಿಟಿಂಗ್ ಸರ್ವಿಸ್ ಹೋಟೆಲ್‌ಗಳಲ್ಲಿ 25 ರಿಂದ 30 ರೂ.
*ಎಸಿ ಹೋಟೆಲ್‌ಗಳಲ್ಲಿ 40 ರಿಂದ 50 ರೂ.
*ಸ್ಟಾರ್ ಹೋಟೆಲ್‌ಗಳಲ್ಲಿ 100 ರಿಂದ 150 ರೂ.
ಇದೇ ತಿಂಗಳ ಅಂತ್ಯದಲ್ಲಿ ಹೊಸ ದರ ಪರಿಷ್ಕರಣೆ ಸಾಧ್ಯತೆ ಇದೆ. ಇದನ್ನೂ ಓದಿ : ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ
ಗುವಾಹಟಿ: ಅಸ್ಸಾಂನಲ್ಲಿ ಹೋಟೆಲ್ (Hotels), ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಘೋಷಿಸಿದ್ದಾರೆ.
ಗೋಮಾಂಸ (Beef )ಸೇವನೆಯ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಸೂದೆಯ ನಿಬಂಧನೆಗಳನ್ನು ಉಲ್ಲಂಘಿಸಿದರೆ 3 ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಸರ್ಕಾರದ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು ವಿಸ್ತೃತ ಚರ್ಚೆಗಾಗಿ ಕಾನೂನನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಆಗ್ರಹಿಸಿ ಕಲಾಪ ಬಹಿಷ್ಕರಿಸಿದವು. ಇದನ್ನೂ ಓದಿ: ವಿಜಯೇಂದ್ರ ಗುಂಪುಗಾರಿಕೆ ಮಾಡುತ್ತಿದ್ದಾರೆ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದೇನೆ: ಯತ್ನಾಳ್ ಚಾರ್ಜ್
ಸಂಪುಟದ ನಿರ್ಣಯ ಸಮರ್ಥಿಸಿಕೊಂಡ ಸಿಎಂ ಶರ್ಮಾ, ಅಸ್ಸಾಂನಲ್ಲಿ ಗೋಮಾಂಸ ಸೇವನೆಯು ಕಾನೂನುಬಾಹಿರವಲ್ಲ. ಆದ್ರೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯು ರಾಜ್ಯದಲ್ಲಿ ಎಲ್ಲಾ ಜಾನುವಾರುಗಳ ಸಾಗಣೆ, ಹತ್ಯೆ, ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ನಾವು ಈ ಹಿಂದೆ ಅಸ್ಸಾಂನಲ್ಲಿ ಗೋವುಗಳನ್ನು ರಕ್ಷಿಸುವ ಮಸೂದೆ ಪರಿಚಯಿಸಿದ್ದೇವೆ, ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು
ಮುಂದೆ ರಾಜ್ಯದ ಯಾವುದೇ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಗೋಮಾಂಸ ನೀಡದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಅಲ್ಲದೇ ಸಾರ್ವಜನಿಕ ಸಮಾರಂಭಗಳಲ್ಲೂ ದನದ ಮಾಂಸ ಕೊಡಬಾರದು. ಜೊತೆಗೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯ ಅನ್ವಯ ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಸ್ಥಾನ ಅಥವಾ ಸತ್ರ (ವೈಷ್ಣವ ಮಠ)ದ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
ಸರ್ಕಾರದ ಈ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರತಿಪಕ್ಷ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ಪ್ರಮುಖ ವಿಷಯಗಳಿಂದ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಿಡಿ ಕಾರಿತು. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್. ಅಶೋಕ್ ಬಾಂಬ್
ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ, ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಆದ್ರೆ ಈ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಹೇಳಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ಮುಂದೆ ಮಧ್ಯರಾತ್ರಿ ವರೆಗೂ ಬಾರ್, ಹೋಟೆಲ್‌ಗಳ ಓಪನ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಾರ್, ಹೋಟೆಲ್ ಮಾಲೀಕರ ಅನೇಕ ವರ್ಷಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಹೊಟೇಲ್, ಬಾರ್ ತೆರೆಯುವ ಸಮಯದ ಅವಧಿ ವಿಸ್ತರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮಿ ಸಾಗರ್ ಆದೇಶ ಹೊರಡಿಸಿದ್ದಾರೆ.
ಎಷ್ಟು ಗಂಟೆ ತೆರೆಯಲು ಅವಕಾಶ?
ಸಿಎಲ್ 4: ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 6(ಎ): ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 7: ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 7ಡಿ – ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆ
ಸಿಎಲ್ 9 – ಬೆಳಗ್ಗೆ 10 ರಿಂದ ಮಧ್ಯರಾತ್ರಿ 1 ಗಂಟೆ
ಬೆಂಗಳೂರು: ಕೇತುಗ್ರಸ್ಥ ಸೂರ್ಯಗ್ರಹಣದ (Solar eclipse) ಎಫೆಕ್ಟ್ ಕೇವಲ ರಾಶಿಗಳ ಮೇಲೆ ಮಾತ್ರ ಅಲ್ಲ, ಇತ್ತ ಹಲವು ವಲಯಗಳ ಮೇಲೂ ಕೂಡ ಪರಿಣಾಮ ಬೀರಿದೆ. ಪ್ರತಿನಿತ್ಯ ಜನರಿಂದ ತುಂಬಿ ತುಳುಕುತ್ತಿದ್ದ ಜಾಗಗಳು ಗ್ರಹಣದ ಎಫೆಕ್ಟ್‌ನಿಂದ ಬಿಕೋ ಅಂತಿವೆ.
ಹೌದು ಕೇತುಗ್ರಸ್ಥ ಸೂರ್ಯಗ್ರಹಣ ಎಫೆಕ್ಟ್ ರಾಶಿಗಳ ಮೇಲೆ ಸಾಕಷ್ಟು ಪರಿಣಾಮ ಬೀರವು ಬಗ್ಗೆ ಹಲವು ಶಾಸ್ತ್ರ ತಜ್ಞರು ಅಭಿಪ್ರಾಯ ಪಟ್ಟಿದ್ದರು. ಆದರೆ ಗ್ರಹಣದ ಎಫೆಕ್ಟ್ ಕೇವಲ ರಾಶಿಗಳಿಗಷ್ಟೇ ಸೀಮಿತವಾಗದೇ, ಬದಲಾಗಿ ಪ್ರತಿನಿತ್ಯ ಚಟುವಟಿಕೆಯಿಂದ ಕೂಡಿರುತ್ತಿದ್ದ ಅನೇಕ ಕಡೆಗೂ ತಟ್ಟಿದೆ. ಗ್ರಹಣದ ಹಿನ್ನೆಲೆ ನಗರದಲ್ಲಿ ಜನರ ಓಡಾಟ ಹಲವೆಡೆ ವಿರಳವಾಗಿದ್ದ ಕಾರಣ ಬಹುತೇಕ ಜನನಿಬಿಡ ಪ್ರದೇಶಗಳು ನಿಶ್ಯಬ್ದವಾಗಿದೆ ಇದನ್ನೂ ಓದಿ: ಅಪಾರ್ಟ್‍ಮೆಂಟ್ ಕಿಟಕಿಗಳಿಗೆ ರಾಕೆಟ್ ಬಿಟ್ಟ ಕಿಡಿಗೇಡಿ – ವೀಡಿಯೋ ವೈರಲ್
ಬೆಂಗಳೂರಿನ ಸಂಚಾರ ನಾಡಿಗೂ ಗ್ರಹಣದ ಎಫೆಕ್ಟ್ ಜೋರಾಗಿಯೇ ತಟ್ಟಿದೆ. ಪ್ರತಿನಿತ್ಯ ಲಕ್ಷಾಂತರ ಜನ ಬಳಸುವ ಬಿಎಂಟಿಸಿ ಇಂದು ಖಾಲಿ, ಖಾಲಿ ಓಡಾಡುತ್ತಿದ್ದ ದೃಶ್ಯಗಳಂತು ಸಾಮಾನ್ಯವಾಗಿತ್ತು. ಹೋಟೆಲ್‍ಗಳ ಕಥೆಯು ಇದಕ್ಕೇನು ಹೊರತಾಗಿಲ್ಲ. ಗ್ರಹಣದ ನಡುವೆಯೂ ಹಲವರು ಬೆಳಗ್ಗೆಯೇ ಹೋಟೆಲ್‍ಗಳನ್ನ ತೆರೆದಿದ್ದರೂ, ಜನ ಮಾತ್ರ ಹೊಟೇಲ್ ನತ್ತ ಮುಖ ಮಾಡಿಲ್ಲ. ಗ್ರಹಣದ ಎಫೆಕ್ಟ್ ಬಗ್ಗೆ ಮುಂಚೆಯೇ ಯೋಚಿಸಿದ್ದ ಕೆಲ ಹೊಟೇಲ್‍ನವರು ಇತರೆ ದಿನಕ್ಕಿಂತ ಕಡಿಮೆ ಆಹಾರ ಸಿದ್ದತೆ ಮಾಡಿಸಿದರು. ವ್ಯಾಪಾರವಾಗದ ಕಾರಣ ಹೊಟೇಲ್ ಅನ್ನು ಬಂದ್ ಮಾಡಿ ಮನೆಗೆ ಹೋಗುವಂತಾಯಿತು.
ಈ ಗ್ರಹಣದ ಎಫೆಕ್ಟ್ ಈ ಹೋಟೆಲ್, ಬಸ್ ಸೇರಿದಂತೆ ಕೇವಲ ವ್ಯಾಪಾರ ಸ್ಥಳಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಬದಲಾಗಿ, ಸರ್ಕಾರಿ ಕಚೇರಿಗಳಿಗೂ ತಟ್ಟಿತ್ತು. ನೌಕರರಿಂದ ತುಂಬಿ ತುಳುಕುತ್ತಿದ್ದ ವಿಧಾನಸೌಧ ಕೂಡು ಇಂದು ಖಾಲಿ, ಖಾಲಿ. ಸಾಲು, ಸಾಲು ರಜೆ ಹಿನ್ನೆಲೆ ಇಂದು ಕೂಡ ನೌಕರರು ರಜೆ ಹಾಕಿಕೊಂಡಿದ್ದ ಕಾರಣ ವಿಧಾನಸೌಧ ಬಿಕೋ ಎನ್ನುತ್ತಿದೆ.
ನವದೆಹಲಿ: ಹೋಟೆಲ್, ರೆಸ್ಟೋರೆಂಟ್‌ಗಳು ಆಹಾರ ಬಿಲ್‌ನಲ್ಲಿ ಸ್ವಯಂಚಾಲಿತವಾಗಿ ಇಲ್ಲವೇ ಪೂರ್ವನಿಯೋಜಿತವಾಗಿ ಸೇವಾ ಶುಲ್ಕ ಸೇರಿಸುವಂತಿಲ್ಲ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಆದೇಶಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಅನ್ಯಾಯ ವ್ಯಾಪಾರ ವಿಧಾನ ಹಾಗೂ ಗ್ರಾಹಕ ಹಕ್ಕುಗಳ ಉಲ್ಲಂಘನೆ ತಡೆಗಟ್ಟುವ ಸಲುವಾಗಿ ಹೊರಡಿಸಲಾದ ಸಿಸಿಪಿಎ ಮಾರ್ಗಸೂಚಿಯಲ್ಲಿ ದೂರುಗಳನ್ನು ಸಲ್ಲಿಸಲು ಅನುವಾಗುವಂತೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (ಎನ್‌ಸಿಎಚ್) ಸಂಖ್ಯೆಯನ್ನು ಕೂಡ ಒದಗಿಸಿದೆ. 1915 ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಇ- ದಾಖಿಲ್ ಜಾಲತಾಣ: www.e-daakhil.nic.in. ಮತ್ತು ಸಿಸಿಪಿಎ ಇಮೇಲ್ ವಿಳಾಸ: com-ccpa@nic.in.ಕ್ಕೆ ದೂರು ಸಲ್ಲಿಸುವ ಮೂಲಕ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದೆ.
ಮಾರ್ಗಸೂಚಿಯಲ್ಲಿ ಏನಿದೆ?
ಹೋಟೆಲ್, ರೆಸ್ಟೋರೆಂಟ್‌ಗಳು, ಆಹಾರ ಬಿಲ್‌ನಲ್ಲಿ ಸ್ವಯಂಚಾಲಿತವಾಗಿ ಇಲ್ಲವೇ ಪೂರ್ವನಿಯೋಜಿತವಾಗಿ ಸೇವಾ ಶುಲ್ಕ ಸೇರಿಸುವಂತಿಲ್ಲ.
ಯಾವುದೇ ಇತರೆ ಹೆಸರಿನಿಂದಲೂ ಸೇವಾ ಶುಲ್ಕ ಸಂಗ್ರಹಿಸಬಾರದು.
ಗ್ರಾಹಕರು ಸೇವಾ ಶುಲ್ಕ ಪಾವತಿಸಬೇಕು ಎಂದು ಹೋಟೆಲ್ ಅಥವಾ ರೆಸ್ಟೋರೆಂಟ್ ಒತ್ತಾಯಿಸುವಂತಿಲ್ಲ.
ಸೇವಾ ಶುಲ್ಕ ಎಂಬುದು ಸ್ವಯಂಪ್ರೇರಿತ, ಐಚ್ಛಿಕ ಹಾಗೂ ಗ್ರಾಹಕರ ವಿವೇಚನೆಗೆ ಬಿಟ್ಟಿರುತ್ತದೆ ಎಂಬ ವಿಚಾರವನ್ನು ಸ್ಪಷ್ಟವಾಗಿ ಗ್ರಾಹಕರಿಗೆ ತಿಳಿಸಿಬೇಕು.
ಸೇವಾ ಶುಲ್ಕ ಸಂಗ್ರಹ ಆಧರಿಸಿ ಪ್ರವೇಶ ನಿರ್ಬಂಧ ಇಲ್ಲವೇ ಸೇವೆಗಳನ್ನು ಆಧರಿಸಿ ನಿಯಮಗಳನ್ನು ಗ್ರಾಹಕರ ಮೇಲೆ ವಿಧಿಸುವಂತಿಲ್ಲ.
ಸೇವಾ ಶುಲ್ಕ ಆಹಾರದ ಬಿಲ್‌ನೊಂದಿಗೇ ಸೇರಿಸಿ ಒಟ್ಟು ಮೊತ್ತದ ಮೇಲೆ ಜಿಎಸ್‌ಟಿ ವಿಧಿಸುವ ಮೂಲಕ ಸಂಗ್ರಹಿಸುವಂತಿಲ್ಲ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಟೆಲ್, ಮಾಲ್, ಶಾಪ್ ಮಾಲೀಕರಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಅಂಗಡಿ, ಮಾಲ್, ಬ್ಯಾಂಕ್, ಹೋಟೆಲ್, ಕಚೇರಿ ಹಾಗೂ ಸಂಸ್ಥೆಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ನೀವು ಮಾಸ್ಕ್ ಧರಿಸುವುದನ್ನು ಕಾರ್ಯಗತಗೊಳಿಸದಿದ್ದರೆ ಮತ್ತು ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳದಿದ್ದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದು ಈಗಾಗಲೇ ಕಾರ್ಯಗತಕ್ಕೆ ಬಂದಿದ್ದು, ಸಾರ್ವಜನಿಕರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ತಿಳಿಸಿದ್ದಾರೆ.
Shops,Malls,Banks,Hotels,Offices,and Establishments.All of you are already aware of precautions to be taken.If you do not implement mask wearing and ensure safe distance,CityPolice will raid and initiate legal action, this has already started,it’s is in Public Interest.
ನಗರದ ಅಂಗಡಿ, ಮಾಲ್, ಬ್ಯಾಂಕ್, ಹೋಟಲ್ ಸೇರಿದಂತೆ ವಿವಿಧ ಕಡೆಯ ಸಿಬ್ಬಂದಿ ಹಾಗೂ ಗ್ರಾಹಕರು ಮಾಸ್ಕ್ ಧರಿಸುತ್ತಿಲ್ಲ. ಅಷ್ಟೇ ಅಲ್ಲದೆ ಗ್ರಾಹಕರಿಗೆ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸಿಲ್ಲ. ಸಾಕಷ್ಟು ಕಡೆ ಅಂಗಡಿ ಮಾಲೀಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜೂನ್ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ಕೊರೊನಾ ಸ್ವಲ್ಪ ನಿಯಂತ್ರಣಕ್ಕೆ ಸಿಕ್ಕಿತ್ತು. ಆದರೆ ಕಳೆದ ಕೆಲ ದಿನಗಳಿಂದ ಸೋಂಕಿತರು ಹಾಗೂ ಮೃತರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.