Tag: House wife

  • ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣು – ಪತಿ ಆತ್ಮಹತ್ಯೆಗೆ ಯತ್ನ

    ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣು – ಪತಿ ಆತ್ಮಹತ್ಯೆಗೆ ಯತ್ನ

    ಚಿತ್ರದುರ್ಗ: ಪತಿ ಕುಟುಂಬಸ್ಥರ ವರದಕ್ಷಿಣೆ (Dowry) ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಆಂಧ್ರಪ್ರದೇಶ ಮೂಲದ ಪ್ರವಲ್ಲಿಕ (25) ನೇಣಿಗೆ ಶರಣಾದ ಪತ್ನಿ. ಸುದರ್ಶನ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ. ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸುದರ್ಶನ್ ಅಸ್ವಸ್ಥಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರೆ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: 6 ತಿಂಗಳ ಬಳಿಕ ಮುಖಾಮುಖಿಯಾಗಲಿದ್ದಾರೆ ದರ್ಶನ್‌- ಪವಿತ್ರಾ ಗೌಡ

    ಸುದರ್ಶನ್ ರೆಡ್ಡಿ ಹಾಗೂ ಪ್ರವಲ್ಲಿಕ 1 ವರ್ಷದ ಹಿಂದೆ ಮದುವೆ ಆಗಿದ್ದರು. ಸುದರ್ಶನ್ ಮೊಳಕಾಲ್ಮೂರಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಗಿರಿಜಯ್ಯನಹಟ್ಟಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ, ಸಿಪಿಐ ವಸಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ಬೀದರ್ ಬಂದ್‌ಗೆ ಕರೆ; ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

  • ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ

    ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ

    ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ (Hubballi) ವಿಶಾಲ ನಗರದಲ್ಲಿ ನಡೆದೆ.

    ಹೀನಾ ಕೌಸರ(28) ವರದಕ್ಷಿಣೆ (Dowry) ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಎರಡೂ ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿತ್ತು. ಮದುವೆಯ ಹೊಸತರಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ನಂತರ ಮಹಮ್ಮದ್ ಕುಟುಂಬಸ್ಥರು ಹೀನಾಗೆ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಈ ಹಿಂದೆ ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ಆದರೂ ಹೀನಾಳಿಗೆ ವರದಕ್ಷಿಣೆ ಕಿರುಕುಳ ಮಾತ್ರ ಮುಂದುವರೆದಿತ್ತು. ಇದನ್ನೂ ಓದಿ: ಮಾಜಿ ಸಿಎಂ ಲಾಲು ಪ್ರಸಾದ್, ಇಬ್ಬರು ಪುತ್ರರಿಗೆ ಜಾಮೀನು

    ಭಾನುವಾರವೂ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್‌ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

  • ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್

    ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಬುಧವಾರ ಸಂಜೆ ಬಿಎಂಟಿಸಿಗೆ ಗೃಹಿಣಿಯೊಬ್ಬರು ಬಲಿಯಾದ ಘಟನೆ ಸಿಲ್ಕ್‌ಬೋರ್ಡ್‌  (Sikboard) ಸಮೀಪದ ಮಡಿವಾಳ ಫ್ಲೈಓವರ್ (Madiwala Flyover) ಮೇಲೆ ನಡೆದಿದೆ.

    ಸೀಮಾ ಬಿಎಂಟಿಸಿಗೆ ಬಲಿಯಾದ ಗೃಹಿಣಿ. ಬುಧವಾರ ಸಂಜೆ 6:30ರ ವೇಳೆಗೆ ಘಟನೆ ನಡೆದಿದ್ದು, ಗೃಹಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತವಾಗಿದೆ ಎಂದು ಆರೋಪಿಸಲಾಗಿದೆ. ಬಸ್ ಪಕ್ಕದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿದ್ದರಿಂದ ಸವಾರರು ಆಯತಪ್ಪಿ ಬಿದ್ದಿದ್ದಾರೆ. ಘಟನೆಯಲ್ಲಿ ಗೃಹಿಣಿ ಸಾವನ್ನಪ್ಪಿದರೆ ಒಂದೂವರೆ ವರ್ಷದ ಮಗು ಗಾನವಿ ಹಾಗೂ ಆಕೆಯ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ರೀತಿ ಬಿಂಬಿಸಿ ನಾಪತ್ತೆಯಾಗಿದ್ದ ಪೇದೆ ಅಯ್ಯಪ್ಪ ಮಾಲೆ ಧರಿಸಿ ಪತ್ತೆ

    ತಮ್ಮ ಮಗುವಿನೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು, ಕಳೆದ 8 ವರ್ಷದಿಂದ ಬೆಸ್ಕಾಂನಲ್ಲಿ ಲೈನ್‌ಮೆನ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆ, ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

  • ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಶಂಕೆ

    ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಶಂಕೆ

    ಚಿಕ್ಕಮಗಳೂರು: ಮನೆಯಲ್ಲಿದ್ದ ಗೃಹಿಣಿ (House Wife) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಗೃಹಿಣಿಯ ಪೋಷಕರು ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ದೇವವೃಂದದಲ್ಲಿ ನಡೆದಿದೆ.

    ಶ್ವೇತಾ (31) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಮೂರು ವರ್ಷದ ಹಿಂದೆ ಶ್ವೇತಾ ದರ್ಶನ್ ಎಂಬವರನ್ನು ವಿವಾಹವಾಗಿದ್ದರು. ದರ್ಶನ್ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಶ್ವೇತಾಳ ಪೋಷಕರು ಆರೋಪಿಸಿದ್ದಾರೆ. ವಇದನ್ನೂ ಓದಿ: ರಾಡ್‌ನಿಂದ ಹೊಡೆದು ವೃದ್ಧ ದಂಪತಿಯ ಕೊಲೆ – ಆಸ್ತಿ ವಿಚಾರಕ್ಕೆ ಮಗನಿಂದ ಹತ್ಯೆ ಶಂಕೆ

    4 ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ದರ್ಶನ್ ಮತ್ತು ಶ್ವೇತಾ ಆಗಮಿಸಿದ್ದು, ಹೃದಯಾಘಾತವಾಗಿ ಶ್ವೇತಾ ಸಾವನ್ನಪ್ಪಿದ್ದಾಳೆ ಎಂದು ದರ್ಶನ್ ಪತ್ನಿಯ ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಇದನ್ನೂ ಓದಿ: ಮನೆಗೆ ಬರಲು ನಿರಾಕರಿಸಿದ ಪತ್ನಿ – ಮನನೊಂದು ಪತಿ ಆತ್ಮಹತ್ಯೆ

    ದರ್ಶನ್ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದು, ಮೃತಳ ಪೋಷಕರು ಅಂತ್ಯಕ್ರಿಯೆ ತಡೆದು ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪವಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

    ಈಗ ಶ್ವೇತಾ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೈಕ್ ಬೆಲೆ 25 ಸಾವಿರ – ಗಾಡಿ ಮೇಲಿದೆ 225 ಕೇಸ್!

  • ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ

    ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ

    ರಾಯಚೂರು: ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿಯೊಬ್ಬಳು (House Wife) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಬದ್ರಿನಾಥ ಕಾಲೋನಿಯಲ್ಲಿ ನಡೆದಿದೆ.

    ಶಿಲ್ಪಾ (28) ಮೃತ ಮಹಿಳೆ. ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತಳ ಪತಿ ಶರತ್ ಹಾಗೂ ಅತ್ತೆ-ಮಾವ ಸೇರಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೂದಲು ವ್ಯಾಪಾರಕ್ಕೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ

    ಘಟನೆ ಹಿನ್ನೆಲೆ ಆಕ್ರೋಶದಲ್ಲಿ ಶರತ್ ತಂದೆಗೆ ಶಿಲ್ಪಾ ಸಂಬಂಧಿಕರು ಥಳಿಸಿದ್ದಾರೆ. ಮಂಗಳವಾರ ರಾತ್ರಿ ಜಗಳ ಮಾಡಿ ಎರಡನೇ ಮಹಡಿಯಿಂದ ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ. 2022ರ ಜೂನ್‌ನಲ್ಲಿ ಆಂಧ್ರಪ್ರದೇಶ ಆದೋನಿಯಲ್ಲಿ ಶಿಲ್ಪಾ ಹಾಗೂ ಶರತ್ ಮದುವೆಯಾಗಿತ್ತು. ಮದುವೆಯಾದಾಗಿನಿಂದಲೂ ಪತಿ-ಪತ್ನಿ ನಡುವೆ ಹೊಂದಾಣಿಕೆಯಾಗದೇ ಆಗಾಗ ಜಗಳಗಳು ನಡೆಯುತ್ತಿದ್ದವು. ಈ ಕುರಿತು ಕುಟುಂಬದ ಹಿರಿಯರು ಸಂಧಾನ ಮಾಡಿದ್ದರು. ಆದರೂ ಕೂಡ ಸಮಸ್ಯೆಗಳು ಬಗೆಹರಿದಿರಲಿಲ್ಲ ಎಂದು ಆಂಧ್ರ ಮೂಲದ ಶಿಲ್ಪಾ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಂತರಗಂಗೆ ಬೆಟ್ಟದಲ್ಲಿ ಪಾಕ್ ಬಾವುಟ ಹೋಲುವ ಪೇಂಟಿಂಗ್ – ಆರೋಪಿ ಅರೆಸ್ಟ್

    ಘಟನೆಯ ಬಳಿಕ ಶಿಲ್ಪಾ ಪತಿ ಶರತ್ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಪತಿ ಬರುವವರೆಗೂ ಆಕೆಯ ಮೃತದೇಹ ಎತ್ತಲು ಬಿಡಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ನೇತಾಜಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರದಕ್ಷಿಣೆ ಕಿರುಕುಳ – ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ವರದಕ್ಷಿಣೆ ಕಿರುಕುಳ – ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಶಿವಮೊಗ್ಗ : ಪತಿ ಹಾಗೂ ಪತಿಯ ಕುಟುಂಬಸ್ಥರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯನ್ನು ಸವಿತಾ (31) ಎಂದು ಗುರುತಿಸಲಾಗಿದೆ. ಕಳೆದ 11 ವರ್ಷದ ಹಿಂದೆ ಶಿವಮೊಗ್ಗ ಸಮೀಪದ ಜಾವಳ್ಳಿಯ ಸವಿತಾಳಿಗೆ ಹೇಮಂತ್ ಜೊತೆ ವಿವಾಹವಾಗಿತ್ತು. ಸವಿತಾಳ ಪತಿ ಹೇಮಂತ್ ಆಟೋ ಓಡಿಸುತ್ತಿದ್ದು, ಅದರಿಂದ ಬರುವ ಆದಾಯದಲ್ಲಿ ಜೀವನ ಸಾಗಿಸುತ್ತಿದ್ದರು.

     

    ಆಟೋ ಓಡಿಸಿ ಬರುತ್ತಿದ್ದ ಸಂಪಾದನೆ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತಿ ಹೇಮಂತ್ ಪತ್ನಿ ಸವಿತಾಳಿಗೆ ಆಗಾಗ ಕಿರುಕುಳ ನೀಡುತ್ತಿದ್ದ. ಪತಿಯ ಕಿರುಕುಳ ತಾಳಲಾರದೇ ಸವಿತಾ ತನ್ನ ಹೆತ್ತವರಿಂದ ಹಲವು ಬಾರಿ ಹಣವನ್ನು ತಂದು ಕೊಟ್ಟಿದ್ದಳು. ಆದರೂ ಕೂಡ ಆರೋಪಿ ಪತಿ ಹೇಮಂತ್ ಹಾಗೂ ಆತನ ಕುಟುಂಬಸ್ಥರು ಮೃತ ಸವಿತಾಳಿಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳ ತಾಳಲಾರದೇ ಸವಿತಾ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸವಿತಾ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

    ಆತ್ಮಹತ್ಯೆ ಕುರಿತು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವರದಕ್ಷಿಣೆ ಕಿರುಕುಳ ಆರೋಪ- ಗೃಹಿಣಿ ನೇಣಿಗೆ ಶರಣು

    ವರದಕ್ಷಿಣೆ ಕಿರುಕುಳ ಆರೋಪ- ಗೃಹಿಣಿ ನೇಣಿಗೆ ಶರಣು

    ತುಮಕೂರು: ವರದಕ್ಷಿಣೆ ಕಿರುಕುಳ ಆರೋಪದಿಂದ ಗೃಹಿಣಿ ನೇಣಿಗೆ ಶರಣಾದ ಘಟನೆ ತುಮಕೂರು ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

    ಕಾವ್ಯ(23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಗುಬ್ಬಿ ಮೂಲದವಳಾಗಿರುವ ಕಾವ್ಯ ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬವನ ಜೊತೆ ಮದುವೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳಕ್ಕೆ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿ ಬರುತ್ತಿದೆ.

    ಪ್ರತಿದಿನ ಅಂಜನ್ ವರದಕ್ಷಿಣೆಗಾಗಿ ಕಾವ್ಯಗೆ ಕಾಟ ನೀಡುತ್ತಿದ್ದನು. ಇದಕ್ಕೆ ಬೇಸತ್ತು ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾವ್ಯ ಕುಟುಂಬಸ್ಥರು ಪತಿ ಅಂಜನ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡುತ್ತಿದ್ದಾರೆ.

    ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಸ್ಥಳಕ್ಕೆ ಜಯನಗರ ಪೋಲೀಸರು ಭೇಟಿ ನೀಡಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ಮದ್ವೆಯಾದ ಒಂದೇ ವರ್ಷಕ್ಕೆ 6 ತಿಂಗ್ಳ ಗರ್ಭಿಣಿ ಸಾವು

    ಮದ್ವೆಯಾದ ಒಂದೇ ವರ್ಷಕ್ಕೆ 6 ತಿಂಗ್ಳ ಗರ್ಭಿಣಿ ಸಾವು

    ಹಾಸನ: ಮದುವೆ ಆದ ಒಂದೇ ವರ್ಷಕ್ಕೆ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ನಡೆದಿದೆ.

    ಅಜ್ಮಯ್(21) ಮೃತ ಗೃಹಿಣಿ. ಅಜ್ಮಯ್‍ಗೆ ಕಳೆದ ವರ್ಷ ಮೊಹಮ್ಮದ್ ಯಾಸಿನ್ ಜೊತೆ ವಿವಾಹವಾಗಿತ್ತು. ಮೊಹಮ್ಮದ್ ಯಾಸಿನ್ ಇದೀಗ ವರದಕ್ಷಿಣೆ ಕಿರುಕುಳ ನೀಡಿ ಅಜ್ಮಯ್‍ಳನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

    ಮೊಹಮ್ಮದ್ ಯಾಸಿನ್ ಪ್ರಾರಂಭದಿಂದಲೂ ವರದಕ್ಷಿಣೆಗಾಗಿ ಪತ್ನಿ ಅಜ್ಮಯ್‍ನನ್ನು ಪೀಡಿಸುತ್ತಿದ್ದನು. ಯಾಸಿನ್ ಗುರುವಾರ ಅಜ್ಮಯ್ ಮೇಲೆ ಹಲ್ಲೆ ಮಾಡಿ ಕೊಂದು ನೇಣು ಹಾಕಿದ್ದಾನೆ ಎಂದು ಗೃಹಿಣಿಯ ಪೋಷಕರು ಆರೋಪಿಸುತ್ತಿದ್ದಾರೆ.

    ಅಜ್ಮಯ್ ಆರು ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಬಯಕೆಯಂತೆ ಹೋಳಿಗೆ ನೀಡಲು ಪೋಷಕರು ಯಾಸಿನ್ ಮನೆಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಪತಿ ಮೊಹಮ್ಮದ್ ಯಾಸಿನ್ ನನ್ನು ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಹಾಸನದ ಕೆ.ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಗು ಆಗದ್ದಕ್ಕೆ ಮನನೊಂದು ಗೃಹಿಣಿ ನೇಣಿಗೆ ಶರಣು!

    ಮಗು ಆಗದ್ದಕ್ಕೆ ಮನನೊಂದು ಗೃಹಿಣಿ ನೇಣಿಗೆ ಶರಣು!

    ಬೆಂಗಳೂರು: ಮಗು ಆಗಲಿಲ್ಲ ಎನ್ನುವ ಒಂದೇ ಕಾರಣಕ್ಕೆ ಮನನೊಂದು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಲಸೂರು ಬಳಿ ನಡೆದಿದೆ.

    ಸಂಗೀತಾ(23) ಮೃತ ಗೃಹಿಣಿ. ಹಲಸೂರು ಗೇಟ್ ಬಳಿ ಇರುವ ಸಂಗಲ್ ಪೇಟೆಯ ಮನೆಯಲ್ಲಿ ಬುಧವಾರ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಐದು ವರ್ಷಗಳ ಹಿಂದೆ ಕೊಲ್ಕತ್ತಾದಲ್ಲಿ ಸಂಗೀತ ನಬೀತ್ ಎಂಬಾತನನ್ನು ವಿವಾಹವಾಗಿದ್ದರು. ಬಳಿಕ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ದಂಪತಿ ವಾಸಿಸುತ್ತಿದ್ದರು. ವಿವಾಹವಾಗಿ ಐದು ವರ್ಷ ಕಳೆದರೂ ನಬೀತ್ ದಂಪತಿಗೆ ಮಕ್ಕಳಾಗಿರಲಿಲ್ಲ. ಇದರಿಂದ ಸಂಗೀತಾ ಬಹಳ ನೊಂದಿದ್ದರು.

    ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನೆಯ ಅಕ್ಕಪಕ್ಕದವರು ಹಾಗೂ ಸಂಬಂಧಿಕರು ಸಂಗೀತಾ ಅವರನ್ನು ಪ್ರಶ್ನೆ ಮಾಡುತ್ತಿದ್ದರು. ಮೊದಲೇ ಮಕ್ಕಳಿಲ್ಲದ ಕೊರಗಿನಲ್ಲಿದ್ದ ಸಂಗೀತಾ ನೆರೆಹೊರೆಯವರ ಪ್ರಶ್ನೆಗಳಿಂದ ಬೇಸತ್ತುಹೋಗಿದ್ದರು. ಹೀಗಾಗಿ ಪತಿ ಮನೆಯಲ್ಲಿರದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಘಟನೆ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿಯನ್ನು ವಿಚಾರಿಸಿದಾಗ ನಮ್ಮ ನಡುವೆ ಯಾವುದೇ ಗಲಾಟೆ ಇರಲಿಲ್ಲ. ಪತ್ನಿ ಮಗು ಆಗದೇ ವಿಚಾರಕ್ಕೆ ನೊಂದಿದ್ದಳು. ನೆರೆ ಹೊರೆಯವರು ಪದೇ ಪದೇ ಪ್ರಶ್ನಿಸುತ್ತಿದ್ದರಿಂದ ಸಂಗೀತಾ ನೊಂದು ಹೋಗಿದ್ದಳು. ಈ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೃಹಿಣಿ ನೇಣಿಗೆ ಶರಣು- ಪತಿ ಪರಾರಿ..!

    ಗೃಹಿಣಿ ನೇಣಿಗೆ ಶರಣು- ಪತಿ ಪರಾರಿ..!

    ಬೆಳಗಾವಿ (ಚಿಕ್ಕೋಡಿ): ದೈಹಿಕ ಮತ್ತು ಮಾನಸಿಕ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.

    ಪ್ರತೀಕ್ಷಾ ಸುನೀಲ್ ಖೋತ (20) ನೇಣಿಗೆ ಶರಣಾದ ಗೃಹಿಣಿ. ಪ್ರತೀಕ್ಷಾಗೆ ಗಂಡ ಹಾಗೂ ಅತ್ತೆ ಮಾವ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು. ಹೀಗಾಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೇಸತ್ತಿದ್ದ ಪ್ರತೀಕ್ಷಾ, ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮೃತಪಟ್ಟ ನಂತರ ಪತಿ ಸುನೀಲ್ ಪರಾರಿಯಾಗಿದ್ದಾನೆ.

    ಈ ಕುರಿತು ಪ್ರತೀಕ್ಷಾ ತಂದೆ ಯಲ್ಲಪ್ಪ ಉಪ್ಪಾರ ಅಥಣಿ ಪೊಲೀಸ್‌ ಠಾಣೆಯಲ್ಲಿ ಸುನೀಲ್ ಹಾಗೂ ಅವನ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ದೂರಿನನ್ವಯ ಪ್ರತೀಕ್ಷಾ ಅತ್ತೆ ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಗಂಡ ಸುನೀಲ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಘಟನೆ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv