Tag: house

  • ಬಡವರಿಗೆ 3 ಸಾವಿರ ಮನೆ ವಿತರಿಸಿದ ಪ್ರಧಾನಿ ಮೋದಿ

    ಬಡವರಿಗೆ 3 ಸಾವಿರ ಮನೆ ವಿತರಿಸಿದ ಪ್ರಧಾನಿ ಮೋದಿ

    ನವದೆಹಲಿ: ಕೊಳೆಗೇರಿ ಪುನರ್ವಸತಿ (Slum Rehabilitation) ಯೋಜನೆಯ ಭಾಗವಾಗಿ ದೆಹಲಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಬಡವರಿಗೆ ಹೊಸದಾಗಿ ನಿರ್ಮಿಸಲಾದ 3,024 ಮನೆಗಳನ್ನ ಫ್ಲಾಟ್‌ಗಳನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಹಸ್ತಾಂತರಿಸಿದ್ದಾರೆ.

    ಇಂದು ದೆಹಲಿಯಲ್ಲಿ (NewDelhi) ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಫಲಾನುಭವಿಗಳಿಗೆ ಮನೆ ಕೀಲಿಗಳನ್ನ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: 132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು

    ಈ ಬೆಳವಣಿಗೆಯು ಕೊಳೆಗೇರಿ ನಿವಾಸಿಗಳಿಗೆ (Slum People) ಮಾಲೀಕತ್ವ ಹಾಗೂ ಭದ್ರತೆಯ ಭಾವನೆ ತರುತ್ತದೆ ಎಂದು ಈ ಹಿಂದೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಹೇಳಿತ್ತು. ಇದನ್ನೂ ಓದಿ: 132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು

    ದೆಹಲಿ ಅಭಿವೃದ್ಧಿ ಪ್ರಾಧಿಕಾರವು (DDA) ಸಹ ಪ್ರತಿಯೊಬ್ಬರಿಗೂ ಕೊಳೆಗೇರಿ ಪುನರ್ವಸತಿ ಯೋಜನೆ ಅಡಿಯಲ್ಲಿ 376 ಜುಗ್ಗಿ-ಜೋಪ್ರಿ (Slum) ಕ್ಲಸ್ಟರ್‌ಗಳಲ್ಲಿ ವಸತಿ ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

    ಕಾರ್ಯಕ್ರಮದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ರೇಷ್ಮೆನಾಡು ರಾಮನಗರಕ್ಕೆ ಮತ್ತೆ ಜಲಕಂಟಕ – 50ಕ್ಕೂ ಹೆಚ್ಚು ಮನೆಗಳು, ಶಾಲೆ ಜಲಾವೃತ

    ರೇಷ್ಮೆನಾಡು ರಾಮನಗರಕ್ಕೆ ಮತ್ತೆ ಜಲಕಂಟಕ – 50ಕ್ಕೂ ಹೆಚ್ಚು ಮನೆಗಳು, ಶಾಲೆ ಜಲಾವೃತ

    ರಾಮನಗರ: ಕಳೆದ ಒಂದುವರೆ ತಿಂಗಳಿನಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ರಾಮನಗರದಲ್ಲಿ (Ramanagara) ಆರ್ಭಟಿಸಲು ಶುರು ಮಾಡಿದ್ದಾನೆ. ಕಳೆದ ಬಾರಿ ಆದ ನಷ್ಟದಿಂದ ಚೇತರಿಸಿಕೊಳ್ಳುವ ಮುನ್ನವೆ, ಮತ್ತೆ ಮಹಾಮಳೆಯಿಂದ ರೇಷ್ಮೆ ನಾಡಿದ ಜನತೆ ತತ್ತರಿಸಿಹೋಗಿದ್ದಾರೆ.

    ಅರ್ಕಾವತಿ ನದಿ (Arkavathi River) ಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಆತಂಕ ಹೆಚ್ಚಾಗಿದೆ. ಜಿಲ್ಲಾದ್ಯಂತ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯ ಭರ್ತಿಯಾಗಿದ್ದು, ಕಣ್ವ ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಅಕ್ಕ ಪಕ್ಕದ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ. ನೀರಿನ ರಭಸಕ್ಕೆ ತೆಂಗು, ಬಾಳೆ, ತುಳಸಿ ಸೇರಿ ಹಲವು ಬೆಳೆಗಳು ನಾಶವಾಗಿವೆ. ಕಳೆದ ಒಂದೂವರೆ ತಿಂಗಳಿನ ಹಿಂದೆ ಉಂಟಾಗಿದ್ದ ಪ್ರವಾಹ ಸುಧಾರಿಸಿಕೊಳ್ಳುವ ಮುನ್ನವೇ ಮತ್ತೆ ಮಳೆ ಸಂಕಷ್ಟ ಉಂಟಾಗಿರುವುದು ರೈತರನ್ನು ಕಂಗಾಲಾಗಿಸಿದೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು

    ಮತ್ತೊಂದೆಡೆ ರಾಮನಗರದ ಅರ್ಕೇಶ್ವರ ಬಡಾವಣೆಯಲ್ಲೂ ಮತ್ತೆ ಮಳೆ ಅವಾಂತರ ಸೃಷ್ಠಿಯಾಗಿದೆ. ಬಡಾವಣೆಯ 50ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿವೆ. ರೇಷ್ಮೆ ನೂಲು ತೆಗೆಯವ ಸಣ್ಣ ಕೈಗಾರಿಕಾ ಮಳಿಗೆಗಳಿಗೂ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ಯಂತ್ರಗಳು ಕೂಡಾ ನೀರಿಗಾಹುತಿಯಾಗಿವೆ. ಮನೆಯಿಂದ ನೀರು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದು ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಂದ ಆವಲಬೆಟ್ಟಕ್ಕೆ `ಗಂಧದಗುಡಿ ರೈಡ್’ – ಆಲದ ಗಿಡ ನೆಟ್ಟು ಪುನೀತ್‌ ನಾಮಕರಣ

    ಒಂದೇ ತಿಂಗಳ ಅಂತರದಲ್ಲಿ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆರೆ ಎರಡನೇ ಬಾರಿಗೆ ಕೋಡಿ ಬಿದ್ದಿದೆ. ಕೆರೆ ಕೋಡಿ ಪರಿಣಾಮ ಹಲಗೂರು-ಚನ್ನಪಟ್ಟಣ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಸಂಪರ್ಕ ಕಡಿತವಾಗಿದೆ. ರಸ್ತೆ ಮೇಲೆ ಕೆರೆ ಕೋಡಿ ನೀರು ರಭಸವಾಗಿ ಹರಿಯುತ್ತಿದ್ದು, ಲಾರಿ ಚಾಲಕನ ದುಸ್ಸಾಹಸಕ್ಕೆ ರಸ್ತೆಯಲ್ಲಿ ದಿನಸಿ ತುಂಬಿದ ಲಾರಿ ಸಿಲುಕಿದೆ. ಸದ್ಯ ಸ್ಥಳೀಯ ಆಡಳಿತ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಲಾರಿ ಹೊರತೆಗೆದಿದ್ದಾರೆ. ಅಲ್ಲದೇ ಚನ್ನಪಟ್ಟಣ ತಾಲೂಕಿನ ನೀಲಸಂದ್ರ ಸರ್ಕಾರಿ ಶಾಲೆಗೂ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಚನ್ನಪಟ್ಟಣದ ಬಿಡಿ ಕಾಲೋನಿಯಲ್ಲೂ ಮಳೆ ಆರ್ಭಟಕ್ಕೆ ಜನ ಹೈರಾಣಾಗಿದ್ದಾರೆ.

    ಒಟ್ಟಾರೆ ರಾಮನಗರ ಜಿಲ್ಲೆಯನ್ನು ಬಿಟ್ಟೂಬಿಡದೇ ಕಾಡುತ್ತಿರುವ ವರುಣರಾಯ ಇನ್ನೆಷ್ಟು ದಿನ ಆರ್ಭಟಿಸುತ್ತಾನೋ ಅನ್ನುವ ಭೀತಿ ಜನರನ್ನು ಆವರಿಸಿದೆ. ಬಯಲು ಸೀಮೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ರೈತ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದೆ. ನಿತ್ಯ ಸುರಿಯುತ್ತಿರುವ ರಣಮಳೆ ತಗ್ಗು ಪ್ರದೇಶದ ಜನರ ನಿದ್ದೆಯನ್ನು ಕಸಿದಿರುವುದು ದುರದೃಷ್ಟಕರ.

    Live Tv
    [brid partner=56869869 player=32851 video=960834 autoplay=true]

  • ರಾಯಚೂರಿನಲ್ಲಿ ಸತತ ಮಳೆಗೆ ಮನೆಗೋಡೆ ಕುಸಿತ – ಒಂದೇ ಕುಟುಂಬದ ಮೂವರು ಸಾವು

    ರಾಯಚೂರಿನಲ್ಲಿ ಸತತ ಮಳೆಗೆ ಮನೆಗೋಡೆ ಕುಸಿತ – ಒಂದೇ ಕುಟುಂಬದ ಮೂವರು ಸಾವು

    ರಾಯಚೂರು: ಜಿಲ್ಲೆಯಾದ್ಯಂತ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮೂವರನ್ನು ಬಲಿ ಪಡೆದಿದೆ. ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸತತ ಮಳೆಗೆ ಮನೆ ಗೋಡೆ ಕುಸಿದು ಒಂದೇ ಮೂವರು ಸಾವನ್ನಪ್ಪಿದ್ದಾರೆ.

    ಪರಮೇಶ (45) ,‌ ಪರಮೇಶ್ ಪತ್ನಿ ಜಯಮ್ಮ (39) ಹಾಗೂ ಪರಮೇಶನ ತಮ್ಮನ ಮಗ ನಾಲ್ಕು ವರ್ಷದ ಭರತ್ ಮೃತ ದುರ್ದೈವಿಗಳು. ಮನೆಯಲ್ಲಿ ಮಲಗಿದ್ದಾಗ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಮನೆ ಗೋಡೆ ಕುಸಿದು ಅವಘಡ ನಡೆದಿದೆ. ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಾಲಕ ಭರತ್ ಮಾನ್ವಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ

    ಘಟನೆ ಹಿನ್ನೆಲೆ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಮೂಲಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ 60 ವರ್ಷದ ವೃದ್ಧ ಮರಿಯಪ್ಪ ಚಿನಿವಾಲ್ ಮನೆ ಕುಸಿತದಿಂದ ಸಾವನ್ನಪ್ಪಿದ್ದರು. ಇದನ್ನೂ ಓದಿ: ಕಲ್ಲು ತುಂಬಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ – ಬಸ್‌ನಲ್ಲಿದ್ದ ದಂಪತಿ ದುರ್ಮರಣ, 20 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಮನೆ ಬಿದ್ದು 9 ತಿಂಗಳಾದ್ರೂ ಪರಿಹಾರ ನೀಡಿಲ್ಲ – ಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

    ಮನೆ ಬಿದ್ದು 9 ತಿಂಗಳಾದ್ರೂ ಪರಿಹಾರ ನೀಡಿಲ್ಲ – ಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

    ಬೆಳಗಾವಿ: ಅತಿವೃಷ್ಟಿಯಿಂದ ಮನೆ (House) ಬಿದ್ದು 9 ತಿಂಗಳು ಕಳೆದರೂ ಪರಿಹಾರ ನೀಡದ ಆರೋಪ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಸಂದರ್ಭ ಬರುತ್ತದೆ ಎಂದು ನೆರೆ ಸಂತ್ರಸ್ತ ವ್ಯಕ್ತಿಯೊಬ್ಬರು ವೀಡಿಯೋ (Video) ಮಾಡಿ ಅಳಲು ತೋಡಿಕೊಂಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬಾತ ಮೊಬೈಲ್ ಸೆಲ್ಫಿ ವೀಡಿಯೋ ಮಾಡಿ ಶಾಸಕಿ ಅಂಜಲಿ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಾಂಸದ ಉತ್ಪನ್ನಗಳ ಜಾಹೀರಾತುಗಳ ನಿಷೇಧ ಕೋರಿದ ಅರ್ಜಿದಾರರಿಗೆ ಬಾಂಬೆ ಹೈಕೋರ್ಟ್ ತರಾಟೆ

    ನಿರಂತರ ಮಳೆಗೆ ಕಳೆದ ನವೆಂಬರ್‍ನಲ್ಲಿ ಯಲ್ಲಪ್ಪ ನಾಡಗೌಡ್ರ ಅವರ ಮನೆ ನೆಲಸಮವಾಗಿತ್ತು. ಮನೆ ಬಿದ್ದರೂ ಪರಿಹಾರ ನೀಡಿಲ್ಲ. ಅಂಜಲಿ ನಿಂಬಾಳ್ಕರ್, ಖಾನಾಪುರ ತಹಶಿಲ್ದಾರ್, ಬೆಳಗಾವಿ ಡಿಸಿ, ಲೋಕಾಯುಕ್ತ, ಸಿಎಂಗೆ ಪತ್ರ ಬರೆದರೂ ಪ್ರಯೋಜನ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಸಿ ಹೋಗಿರುವ ನೆರೆ ಸಂತ್ರಸ್ತ ಯಲ್ಲಪ್ಪ ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅಳಲನ್ನು ತೋಡಿಕೊಂಡಿದ್ದು, ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಾಸಕರಿಗೆ ಕರೆ ಮಾಡಿದರೆ ಸರ್ಕಾರದಿಂದ ಪರಿಹಾರ ಬಂದಿಲ್ಲ ಅಂತಾ ಫೋನ್ ಕಟ್ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಟ್ರೈನ್‌ನಲ್ಲೂ ಸವಿಯಬಹುದು ಹಬ್ಬದೂಟ – ನವರಾತ್ರಿ ಹಿನ್ನೆಲೆ ರೈಲ್ವೆಯಿಂದ ಸ್ಪೆಷಲ್ ಮೆನು

    ಗ್ರಾಮಲೆಕ್ಕಾಧಿಕಾರಿ ಎರಡು ಸಾವಿರ ರೂಪಾಯಿ ಹಣ ಪಡೆದಿದರು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ನೀಡದಿದ್ದಾಗ ನನ್ನ ಮನೆಯ ವರದಿ ಮಾಡಿಲ್ಲ. ಗ್ರಾಮಲೆಕ್ಕಾಧಿಕಾರಿ ಕರ್ತವ್ಯಲೋಪ ಎಸೆಗಿದ್ದಾರೆ. ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂದು ತಹಶಿಲ್ದಾರ್ ಪತ್ರ ಬರೆದಿದ್ದಾರೆ. ಅವರನ್ನು ವರ್ಗಾವಣೆ ಮಾಡಿದ್ದರೆ ನಮಗೆ ಪರಿಹಾರ ಸಿಗುವುದಿಲ್ಲ. ಆದರೆ ನನಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಅಂಜಲಿ ನಿಂಬಾಳ್ಕರ್‌ಗೆ ಎಲ್ಲಾ ದಾಖಲೆ ವಾಟ್ಸಪ್ ಮಾಡಿದ್ದು ನೋಡಿದ್ದಾರೆ. ಆದರೆ ಪರಿಹಾರ ಕೊಡಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ತನಗೆ ಚಿಕ್ಕಚಿಕ್ಕ ಮಕ್ಕಳು ವೃದ್ಧ ತಂದೆ ಇದ್ದು ಬೀದಿಯಲ್ಲಿ ಕಳೆಯುವ ಪರಿಸ್ಥಿತಿ ಬಂದಿದೆ. ನನ್ನ ಮಕ್ಕಳ ಸ್ಥಿತಿ ಹೇಗಿದೆ ನೋಡಿ ಎಂದು ವೀಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8ರ ಬಾಲಕಿ ಮೇಲೆ ಬಾಡಿಗೆದಾರನಿಂದ ಅತ್ಯಾಚಾರ

    8ರ ಬಾಲಕಿ ಮೇಲೆ ಬಾಡಿಗೆದಾರನಿಂದ ಅತ್ಯಾಚಾರ

    ಲಕ್ನೋ: 8 ವರ್ಷದ ಬಾಲಕಿಯ (Girl) ಮೇಲೆ ಆಕೆಯ ಮನೆಯಲ್ಲಿ ಬಾಡಿಗೆಗೆ ಇದ್ದ ವ್ಯಕ್ತಿಯೇ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow) ನಡೆದಿದೆ.

    ಆರೋಪಿಯನ್ನು ವಿನೋದ್(24) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಲಕ್ನೋದ ಗುಡಂಬಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಈತನನ್ನು ಬಂಧಿಸಿ, (Arrest) ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಬಾಡಿಗೆದಾರನು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ 2 ದಿನಗಳ ಬಳಿಕ ಆಕೆ ತನ್ನ ಪೋಷಕರಿಗೆ ಖಾಸಗಿ ಅಂಗಗಳಲ್ಲಿ ನೋವಿನ ಕುರಿತು ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯ ಮೇಲೆ ಅತ್ಯಾಚಾರದ ಕುರಿತು ತಿಳಿದಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ- ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು

    POLICE JEEP

    ಕುಟುಂಬದವರು ಬಾಲಕಿಯ ಹೇಳಿಕೆ ಆಧಾರದ ಮೇರೆಗೆ ಘಟನೆಗೆ ಸಂಬಂಧಿಸಿ ದೂರು ನೀಡಿದ್ದಾರೆ. ಬಾಲಕಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು

    Live Tv
    [brid partner=56869869 player=32851 video=960834 autoplay=true]

  • ಮನೆ ಕಾಯಲೆಂದು ಎರಡು ನಾಯಿ ಸಾಕಿದ್ರೂ ಹಾಡಹಗಲೇ ಕಳ್ಳತನ

    ಮನೆ ಕಾಯಲೆಂದು ಎರಡು ನಾಯಿ ಸಾಕಿದ್ರೂ ಹಾಡಹಗಲೇ ಕಳ್ಳತನ

    ಚಿಕ್ಕೋಡಿ: ಮನೆ ಕಾಯಲೆಂದು ಎರಡು ನಾಯಿ ಸಾಕಿದ್ದರೂ ಸಹ ಹಾಡಹಗಲೇ ಮನೆ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಪಟ್ಟಣದಲ್ಲಿ ನಡೆದಿದೆ.

    ನಾಲ್ಕು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ (Robbery) ಮಾಡಲಾಗಿದೆ. ಕೋರೆ ನಗರದ ರಂಜಿತ್ ಶಿಂಧೆ (Ranjit Shinde) ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದ್ದು, ಮನೆಯಲ್ಲಿದ್ದ 12 ತೊಲೆ ಬಂಗಾರ, 60 ಸಾವಿರ ನಗದು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಸ್ಟೇಟಸ್‍ನಲ್ಲಿ ಹಾಕಿದ್ದ ತಾಯಿ ಫೋಟೋ ದುರ್ಬಳಕೆ – ಕ್ಲಾಸ್‍ರೂಂನಲ್ಲಿ ಲೆಕ್ಚರರ್ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

    ಮನೆ ಬಾಗಿಲಿಗೆ ಒಂದು ನಾಯಿ ಕಟ್ಟಿದ್ದ ಮಾಲೀಕ ರಂಜಿತ್ ಮನೆಯೊಳಗಿದ್ದ ಮತ್ತೊಂದು ನಾಯಿಯನ್ನು ಬಲೆಯಲ್ಲಿ ಹಾಕಿಕಟ್ಟಿದ್ದ. ಮನೆ ಕಾಯಲೆಂದೇ ಎರಡು ನಾಯಿ ಸಾಕಿದ್ದರೂ ಸಹ ಕಳ್ಳತನವಾಗಿದ್ದರ ಬಗ್ಗೆ ಮಾಲೀಕ ನೋವು ವ್ಯಕ್ತಪಡಿಸಿದ್ದಾರೆ. ಇದೀಗ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ನವದೆಹಲಿ: ಸರಿಯಾದ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್‌ನ ಕರ್ತವ್ಯ. ಮಳೆ ನೀರು ಮನೆಗೆ ನುಗ್ಗಿ, ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ ಬೀಸಿ 9 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

    2010 ರಲ್ಲಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಚರಂಡಿ ನೀರು ಮನೆಗೆ ನುಗ್ಗಿ ಅಪಾರ ನಷ್ಟವಾಗಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಕರ್ತವ್ಯ ಲೋಪ ಪ್ರಶ್ನಿಸಿ ಲೀಲಾ ಮಾಥುರ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಪಶ್ಚಿಮ ದೆಹಲಿಯಲ್ಲಿ ತಮ್ಮ ಮನೆ ನಿರ್ಮಿಸಿದಾಗ ಅದು ರಸ್ತೆಯ ಮಟ್ಟದಲ್ಲಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹಲವು ಬಾರಿ ರಸ್ತೆ ಪುನರ್‌ನಿರ್ಮಾಣದ ನಂತರ ರಸ್ತೆಯ ಮಟ್ಟವು ಏರಿ, ಮನೆ ತಗ್ಗು ಪ್ರದೇಶದಲ್ಲಿ ಉಳಿಯುವಂತೆ ಅಧಿಕಾರಿಗಳು ಮಾಡಿದ್ದಾರೆ. ಇದರಿಂದ ಮಾನ್ಸೂನ್ ಮಳೆಯ ವೇಳೆ ಮನೆಗೆ ನೀರು ನುಗ್ಗಿದೆ. ಸಮಸ್ಯೆಯನ್ನು ಪರಿಹರಿಸಲು ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    ಇದಕ್ಕೆ ಪ್ರತಿವಾದ ಮಂಡಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ನೀರಿನ ಚರಂಡಿಗಳು ಮುಚ್ಚಿಹೋಗಿರುವುದರಿಂದ ಎಂಸಿಡಿಯಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕರ್ತವ್ಯ ನಿರ್ವಹಿಸುವಲ್ಲಿ ಶೋಚನೀಯವಾಗಿ ಸಂಸ್ಥೆ ವಿಫಲವಾಗಿದೆ. ಒಂದರ ಮೇಲೊಂದರಂತೆ ರಸ್ತೆಗಳನ್ನು ಹಾಕಿದ್ದು, ಇದು ರಸ್ತೆಗಳ ಎತ್ತರವನ್ನು ಹೆಚ್ಚಿಸಿದೆ. ಎಂಸಿಡಿಯು ಈ ಪ್ರದೇಶದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಮಳೆ ನೀರಿನ ಚರಂಡಿಗಳಿವೆ ಎಂದು ಖಚಿತಪಡಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದೆ.

    ಪ್ರಕರಣ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿ ಸದಸ್ಯ ಪೀಠ, ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಖರ ಉದ್ದೇಶಕ್ಕಾಗಿ ರಚಿತವಾದ ಮುನ್ಸಿಪಲ್ ಕಾರ್ಪೊರೇಷನ್ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಎಂಸಿಡಿ ತನ್ನ ಕಾರ್ಯವೈಖರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದರಿಂದ, ಮೇಲ್ಮನವಿದಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು. ಹೀಗಾಗಿ ಪರಿಹಾರ ಹಣವನ್ನು 3 ಲಕ್ಷದಿಂದ 9 ಲಕ್ಷ ರೂ.ಗೆ ಏರಿಸಬೇಕು ಎಂದು ಕೋರ್ಟ್ ಆದೇಶ ನೀಡಿತು. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    Live Tv
    [brid partner=56869869 player=32851 video=960834 autoplay=true]

  • ಚೆನ್ನೈನಲ್ಲಿ ದುಬಾರಿ ಬೆಲೆಯ ಮನೆ ಖರೀದಿಸಿದ ನಟ ವಿಜಯ್

    ಚೆನ್ನೈನಲ್ಲಿ ದುಬಾರಿ ಬೆಲೆಯ ಮನೆ ಖರೀದಿಸಿದ ನಟ ವಿಜಯ್

    ಕಾಲಿವುಡ್ ಸೂಪರ್ ಸ್ಟಾರ್ ವಿಜಯ್, ಇದೀಗ ಮತ್ತೊಂದು ಮನೆ ಖರೀದಿಸಿದ್ದಾರೆ ಎನ್ನುವ ಸುದ್ದಿ ತಮಿಳು ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ. ಈಗಾಗಲೇ ಕಾಸ್ಟ್ಲಿ ಮನೆಯಲ್ಲೇ ವಾಸವಿರುವ ವಿಜಯ್, ಮತ್ತೊಂದು ದುಬಾರಿ ಮನೆಗೆ ಶಿಫ್ಟ್ ಆಗಲು ಬಯಸಿದ್ದಾರಂತೆ. ಕಾರಣ, ಈಗಿರುವ ಮನೆಯಲ್ಲಿ ಅವರಿಗೆ ಹಲವು ತೊಂದರೆಗಳು ಆಗುತ್ತಿವೆಯಂತೆ.

    ವಿಜಯ್ ಅವರು ಸದ್ಯ ಚೆನ್ನೈನ ಈಸ್ಟ್ ಕೋಸ್ಟ್ ರಸ್ತೆಯಲ್ಲಿರುವ ಸ್ವಂತ ಮನೆಯಲ್ಲಿ ನೆಲೆಸಿದ್ದರು. ಅವರ ಇಡೀ ಕುಟುಂಬ ಅದೇ ಮನೆಯಲ್ಲೇ ವಾಸ ಮಾಡುತ್ತಿದೆ. ಈ ರಸ್ತೆಯಲ್ಲಿ ಸಂಚಾರ ದಟ್ಟನೆಯ ಕಾರಣದಿಂದಾಗಿ ಮನೆ ಬದಲಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ದುಬಾರಿ ಅಪಾರ್ಟ್ಮೆಂಟ್ ವೊಂದನ್ನು ವಿಜಯ್ ಖರೀದಿಸಿದ್ದು ಆ ಮನೆಗೆ 35 ಕೋಟಿಗೂ ಅಧಿಕ ಎನ್ನಲಾಗುತ್ತಿದೆ. ಇದನ್ನೂ ಓದಿ:ಬಾಲಿವುಡ್‌ಗೆ ಎಂಟ್ರಿ ಕೊಟ್ಟ `ಮಾಸ್ಟರ್ ಪೀಸ್’ ನಟಿ ಶಾನ್ವಿ ಶ್ರೀವಾಸ್ತವ್

    ಸದ್ಯ ವಾರಿಸು ಸಿನಿಮಾದಲ್ಲಿ ಬ್ಯುಸಿಯಾಗಿರುವ ವಿಜಯ್, ಸದಾ ಶಾಂತವಾಗಿಯೇ ವರ್ತಿಸುವಂತಹ ನಟ ಕೂಡ. ಅಂದಹಾಗೆ ಇವರ ನಟನೆಯ ವಾರಿಸು ಸಿನಿಮಾ ಸದ್ಯ ಶೂಟಿಂಗ್ ನಡೆಯುತ್ತಿದ್ದು, ಈ ಚಿತ್ರದಲ್ಲಿ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಡಿಗೆ ಮನೆಯಲ್ಲಿ ಸುರಂಗ ನೋಡಿ ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ

    ಬಾಡಿಗೆ ಮನೆಯಲ್ಲಿ ಸುರಂಗ ನೋಡಿ ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ

    ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದ ಮನೆಯೊಂದರ ಮಾಲೀಕ ಬಾಡಿಗೆದಾರರಿಗೆ ಮನೆ ಖಾಲಿ ಮಾಡಿ ಎಂದು ಎಷ್ಟೇ ಹೇಳಿದರೂ ಸಹ ಮನೆ ಖಾಲಿ ಮಾಡಿರಲಿಲ್ಲ. ಆ ಮಾಲೀಕನಿಗೆ ಮಳೆ ವರದಾನವಾಗಿ ಬಂದು ಮನೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಮನೆ ಒಳಭಾಗಕ್ಕೆ ಹೋಗಿ ನೋಡಿದಾಗ ಮನೆ ಮಾಲೀಕನಿಗೆ ಕಾದಿತ್ತು ಒಂದು ಶಾಕ್.

    ಮನೆಯನ್ನು ಬಾಡಿಗೆ ಕೊಡುವ ಮುನ್ನ ಬಾಡಿಗೆದಾರನ ಹಿನ್ನೆಲೆಯನ್ನು ಮಾಲೀಕನಾದವನು ವಿಚಾರಿಸಿಕೊಳ್ಳುತ್ತಾನೆ. ಒಂದು ವೇಳೆ ಹಿನ್ನೆಲೆ ವಿಚಾರಿಸಿಕೊಳ್ಳದೇ ಇದ್ರೆ ಆಗಬಾರದ್ದು ಆಗುತ್ತೆ ಎನ್ನುವುದಕ್ಕೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ.

    ಮಳವಳ್ಳಿ ಪಟ್ಟಣದ ಕೋಟೆ ಬೀದಿಯ ಪವಿತ್ರರಾಜ್ ತಮ್ಮ ಪಿತ್ರಾರ್ಜಿತ ಆಸ್ತಿಯಾಗಿ ಬಂದಿದ್ದ ಮನೆಯನ್ನು ತಸ್ಲೀಮ್ ಹಾಗೂ ಆಕೆಯ 5 ಗಂಡು ಮಕ್ಕಳಿಗೆ ಬಾಡಿಗೆ ನೀಡಿದ್ದರು. ಅದ್ಯಾಕೋ ಏನು ಅನ್ನಿಸಿತೋ ಗೊತ್ತಿಲ್ಲ, ಬಾಡಿಗೆ ಕೊಟ್ಟು 1 ವರ್ಷವಾದ ಬಳಿಕ ಪವಿತ್ರರಾಜ್ ಮನೆ ಖಾಲಿ ಮಾಡುವಂತೆ ತಸ್ಲೀಮ್ ಹಾಗೂ ಆಕೆಯ ಮಕ್ಕಳಿಗೆ 2 ತಿಂಗಳಿನಿಂದ ಒತ್ತಾಯ ಮಾಡಿದ್ದಾರೆ. ಆದರೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಮನೆ ಖಾಲಿ ಮಾಡಿರಲಿಲ್ಲ. ಆದರೆ ಕಳೆದ 3 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಆ ಮನೆಯ ಗೋಡೆ ಕುಸಿದು ಬಿದ್ದಿದೆ. ಹೀಗಾಗಿ ಮನೆಯ ಒಳಭಾಗಕ್ಕೆ ಹೋಗಿ ನೋಡಿದ ಪವಿತ್ರರಾಜ್‌ಗೆ ಕಂಡಿರುವುದು 12 ಅಡಿಯ ಸುರಂಗ, ಮಾರಕಾಸ್ತ್ರ ಹಾಗೂ ಮಾದಕ ವಸ್ತುಗಳು.

    ಪವಿತ್ರರಾಜ್ ಬಾಡಿಗೆ ನೀಡಿದ್ದ ಮನೆಯ ಸ್ನಾನಗೃಹದ ಬಳಿ 12 ಅಡಿಯ ಸುರಂಗ, ಮಾರಕಾಸ್ತ್ರ ಹಾಗೂ ಮಾದಕ ವಸ್ತುಗಳನ್ನು ನೋಡಿ ಒಂದು ಕ್ಷಣ ಗಾಬರಿಗೊಂಡಿದ್ದಾರೆ. ಬಳಿಕ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದಾಗ ಮನೆಯಲ್ಲಿ ಇದ್ದ ಮಾದಕ ವಸ್ತು, ಮಾರಕಾಸ್ತ್ರಗಳೊಂದಿಗೆ ಮನೆಯಲ್ಲಿ ಇದ್ದ ನಾಲ್ವರು ಪುರುಷರು ತಮ್ಮ ತಾಯಿ ತಸ್ಲೀಮ್‌ರನ್ನು ಬಿಟ್ಟು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವಕ್ಕೂ ಮೊದಲೇ ಶುರುವಾಯ್ತು ಕಲ್ಲುತೂರಾಟ – ವಡೋದರಾದಲ್ಲಿ 13 ಮಂದಿ ಬಂಧನ

    ಮನೆಯಲ್ಲಿ 12 ಅಡಿ ಸುರಂಗ ಮಾಡಿ, ಅದರಲ್ಲಿ ಮಾದಕ ವಸ್ತುಗಳು ಹಾಗೂ ಮಾರಕಾಸ್ತ್ರಗಳ ಶೇಖರಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ಪರಾರಿಯಾಗಿರುವವರು ಮನೆಯ ಬಳಿ ಸರಿಯಾಗಿ ನಡೆದುಕೊಳ್ಳುತ್ತಿರಲಿಲ್ಲ. ಆಗ್ಗಾಗ್ಗೆ ಗಲಾಟೆಗಳನ್ನು ಮಾಡುತ್ತಿದ್ದರು. ನಮಗೆ ಅವರು ಇರುವವರೆಗೆ ಭಯದ ವಾತಾವರಣ ಇಲ್ಲಿ ನಿರ್ಮಾಣವಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

    ಒಟ್ಟಾರೆ ಬಾಡಿಗೆ ಮನೆಯೊಂದರಲ್ಲಿ ಈ ರೀತಿ ಸುರಂಗ ಕೊರೆದು ಮಾದಕ ವಸ್ತುಗಳು ಹಾಗೂ ಮಾರಕಾಸ್ತ್ರಗಳನ್ನು ಶೇಖರಣೆ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಇದೀಗ ಪರಾರಿಯಾಗಿರುವ ನಾಲ್ವರ ಶೋಧ ಕಾರ್ಯಕ್ಕೆ ಮಳವಳ್ಳಿ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI

    Live Tv
    [brid partner=56869869 player=32851 video=960834 autoplay=true]

  • ಕಿರಿಯ ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ಮನೆ ಖರೀದಿಸಿದ ಮುಖೇಶ್ ಅಂಬಾನಿ

    ಕಿರಿಯ ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ಮನೆ ಖರೀದಿಸಿದ ಮುಖೇಶ್ ಅಂಬಾನಿ

    ಅಬುಧಾಬಿ: ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು ತಮ್ಮ ಕಿರಿಯ ಪುತ್ರನಿಗಾಗಿ ದುಬೈನಲ್ಲಿರುವ ಅತ್ಯಂತ ದುಬಾರಿ ಮನೆಯನ್ನು ಖರೀದಿ ಮಾಡಿರುವುದಾಗಿ ವರದಿಯಾಗಿದೆ.

    ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ದುಬೈನಲ್ಲಿ 80 ಮಿಲಿಯನ್ ಡಾಲರ್‌ನ(ಸುಮಾರು 640 ಕೋಟಿ ರೂ.) ಸಮುದ್ರ ಬದಿಯ ವಿಲ್ಲಾವನ್ನು ಗುಪ್ತವಾದಿ ಖರೀದಿಸಿದೆ ಎನ್ನಲಾಗಿದೆ. ಇದು ನಗರದಲ್ಲೇ ಅತಿ ದೊಡ್ಡ ಆಸ್ತಿ ವ್ಯವಹಾರವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

    ಪಾಮ್ ಜುಮೆರಾದಲ್ಲಿರುವ ಮನೆಯನ್ನು ಈ ವರ್ಷದ ಆರಂಭದಲ್ಲಿಯೇ ಮುಖೇಶ್ ಅವರು ತಮ್ಮ ಕಿರಿಯ ಪುತ್ರ ಅನಂತ್‌ಗಾಗಿ ಖಾಸಗಿಯಾಗಿ ಖರೀದಿ ಮಾಡಿದ್ದಾರೆ. ವಿಲ್ಲಾ ಸಮುದ್ರ ತೀರದಲ್ಲಿದ್ದು, ಅದರಲ್ಲಿ 10 ಮಲಗುವ ಕೋಣೆಗಳು, ಖಾಸಗಿ ಸ್ಪಾ, ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಿಮ್ಮಿಂಗ್ ಪೂಲ್‌ಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

    ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಮೂವರು ಮಕ್ಕಳಿರುವ ಅಂಬಾನಿ 93.3 ಬಿಲಿಯನ್ ಡಾಲರ್ ಸಂಪತ್ತಿನ ಒಡೆಯರಾಗಿದ್ದಾರೆ. 65 ವರ್ಷದ ಅಂಬಾನಿ ವಿಶ್ವದ 11 ನೇ ಶ್ರೀಮಂತ ವ್ಯಕ್ತಿ. ಹಸಿರು ಶಕ್ತಿ, ತಂತ್ರಜ್ಞಾನ ಮತ್ತು ಇ-ಕಾಮರ್ಸ್‌ಗಳಲ್ಲಿ ಕಾರ್ಯ ನಿರ್ವಹಿಸಿ, ಸಂಪತ್ತು ವೃದ್ಧಿಸಿರುವ ಇವರು ಇದೀಗ ನಿಧಾನವಾಗಿ ತಮ್ಮ ಮಕ್ಕಳಿಗೆ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]