Tag: house

  • ಶಟರ್ ಮುರಿದು ಕಳ್ಳತನ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಶಟರ್ ಮುರಿದು ಕಳ್ಳತನ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಬಳ್ಳಾರಿ: ಮನೆ ಹಾಗೂ ಅಂಗಡಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದ 31 ವರ್ಷದ ಗಂಗಾಧರ್ ಹಾಗೂ 33 ವರ್ಷದ ಗಜೇಂದ್ರ ಬಂಧಿತ ಆರೋಪಿಗಳು. ಕಳೆದ ಮೂರು ದಿನಗಳ ಹಿಂದೆ ಬಳ್ಳಾರಿ ನಗರದ ಕೌಲ್‍ಬಜಾರ್‍ನ ಅಮ್ಮ ಸೂಪರ್ ಬಜಾರ್‌ನ ಶೆಟರ್ ಮುರಿದು ಕಳ್ಳತನ ಮಾಡಿದ್ದರು. ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಐನಾತಿ ಕಳ್ಳರು, ಕಳ್ಳತನ ಮಾಡಿದ ಬಳಿಕ ಸಿಸಿಟಿವಿಯ ಡಿವಿಆರ್ ಕದ್ದು ಪರಾರಿಯಾಗಿದ್ದರು. ಇದನ್ನೂ ಓದಿ: ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: ಪೊನ್ಮುಡಿ

    ಈ ಸಂಬಂಧ ಸೂಪರ್ ಮಾರ್ಕೆಟ್ ಮಾಲೀಕರಾದ ಡ್ಯಾನಿಯಲ್ ಅವರು ಕೌಲ್‍ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇಬ್ಬರು ಆರೋಪಗಳನ್ನು ಬಂಧಸಿದ್ದಾರೆ. ಬಳಿಕ ಈ ಇಬ್ಬರು ಕಳ್ಳರನ್ನು ವಿಚಾರಣೆ ನಡೆಸಿದಾಗ ಬಳ್ಳಾರಿ ನಗರದಲ್ಲಿ ಎರಡು ಕಳ್ಳತನ ಮಾಡಿದ್ದು, ಬೆಂಗಳೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಇವರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಇದೀಗ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

  • ಮದರ್ಸ್ ಡೇ ಪ್ರಯುಕ್ತ ಇಡ್ಲಿ ಅಮ್ಮನಿಗೆ ಹೊಸ ಮನೆ ಗಿಫ್ಟ್ ಕೊಟ್ಟ ಆನಂದ್ ಮಹೀಂದ್ರಾ

    ಮದರ್ಸ್ ಡೇ ಪ್ರಯುಕ್ತ ಇಡ್ಲಿ ಅಮ್ಮನಿಗೆ ಹೊಸ ಮನೆ ಗಿಫ್ಟ್ ಕೊಟ್ಟ ಆನಂದ್ ಮಹೀಂದ್ರಾ

    ಚೆನ್ನೈ: ಖ್ಯಾತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆಯನ್ನು ಉಡುಗೊರೆಯಾಗಿ ಕೊಡುವ ಮೂಲಕ ನೀಡಿದ್ದ ಭರವಸೆಯನ್ನು ಈಡೇರಿದ್ದಾರೆ.

    ಈ ಕುರಿತ ಪುಟ್ಟ ವೀಡಿಯೋವನ್ನು ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಇಡ್ಲಿ ಅಮ್ಮ ತನ್ನ ಹೊಸ ಮನೆಗೆ ಪ್ರವೇಶಿಸುತ್ತಿರುವುದನ್ನು ಕಾಣಬಹುದಾಗಿದೆ. ತಾಯಂದಿರ ದಿನದಂದೇ ಉಡುಗೊರೆ ನೀಡುವ ಸಲುವಾಗಿ ಸರಿಯಾದ ಸಮಯಕ್ಕೆ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಿ ನಮ್ಮ ತಂಡ ಇಡ್ಲಿ ಅಮ್ಮನಿಗೆ ಮನೆಯನ್ನು ನೀಡಿದಕ್ಕೆ ಧನ್ಯವಾದಗಳು. ಅವರು ತಾಯಿಯ ಸದ್ಗುಣಗಳ ಸಾಕಾರ. ಪೋಷಣೆ, ಕಾಳಜಿ ಮತ್ತು ನಿಸ್ವಾರ್ಥತೆ ಅವರಲ್ಲಿದೆ. ಅವರನ್ನು ಮತ್ತು ಅವರ ಕೆಲಸವನ್ನು ಸಾಧ್ಯವಾದಷ್ಟು ಬೆಂಬಲಿಸೋಣ. ನಿಮ್ಮೆಲ್ಲರಿಗೂ ತಾಯಂದಿರ ದಿನದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

    ಕಮಲಾತಾಲ್ (ಇಡ್ಲಿ ಅಮ್ಮ) ಅವರು ತಮಿಳುನಾಡಿನ ಪೆರು ಬಳಿಯ ವಡಿವೇಲಂಪಾಳ್ಯಂ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಅವರು ಸುಮಾರು 37 ವರ್ಷಗಳಿಂದ ಕೇವಲ 1 ರೂಪಾಯಿಗೆ ಸಾಂಬಾರ್ ಮತ್ತು ಚಟ್ನಿಯೊಂದಿಗೆ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    2019ರಲ್ಲಿ ಆಕೆಯ ಕಥೆ ವೈರಲ್ ಆಗಿತ್ತು. ಈ ಕುರಿತಂತೆ ಮಾಹಿತಿ ಪಡೆದ ಮಹೀಂದ್ರಾ ಅವರು ಆಕೆಯ ಮೇಲೆ ಬಂಡವಾಳ ಹೂಡಿಕೆ ಮಡಲು ಸಂತೋಷಪಡುತ್ತೇನೆ ಎಂದು ತಿಳಿಸಿದ್ದರು. ಇದೀಗ ನೀಡಿದ ಭರವಸೆಯಂತೆ ತಾಯಂದಿರ ದಿನದಂದು ಮಹೀಂದ್ರಾ ಅವರು ಹೊಸ ಮನೆಯನ್ನು ನೀಡಿದ್ದು, ಇದೀಗ ಆನಂದ್ ಮಹೀಂದ್ರಾ ಅವರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆ ಹಾನಿ – `ಆಶಾ’ಗೆ ಬೇಕಿದೆ ಆಸರೆ

    ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆ ಹಾನಿ – `ಆಶಾ’ಗೆ ಬೇಕಿದೆ ಆಸರೆ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸಮೀಪದ ಕಸುವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆ ಹಾಗೂ ಕೊಟ್ಟಿಗೆಗಳ ಶೀಟ್‍ಗಳು ಹಾರಿ ಹೋಗಿದ್ದು, ಅಪಾರ ನಷ್ಟ ಉಂಟಾಗಿದೆ.

    ಕಸುವನಹಳ್ಳಿ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಗ್ರಾಮದಲ್ಲಿ ಹಲವು ಮನೆ, ಕೊಟ್ಟಿಗೆಗಳಿಗೆ ಹೊದಿಸಿದ್ದ ಸಿಮೆಂಟ್ ಶೀಟ್‍ಗಳು ಹಾರಿಹೋಗಿವೆ. ಆಶಾ ಕಾರ್ಯಕರ್ತೆ ಜಯಶ್ರೀಯವರು ಇದೇ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಶೀಟ್ ಕೂಡ ಗಾಳಿಗೆ ಹಾರಿ ಹೋದ ಕಾರಣ ಕುಟುಂಬ ಮಳೆಯಲ್ಲಿಯೇ ನಿಲ್ಲುವಂತಾಗಿದೆ. ಇದನ್ನೂ ಓದಿ: ರೇಪ್ ಕೇಸ್ ದಾಖಲಿಸಲು ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ನಿಂದಲೂ ಅತ್ಯಾಚಾರ!

    ಆಶಾ ಕಾರ್ಯಕರ್ತೆ ಬಡ ಕುಟುಂಬದವರಾಗಿದ್ದು, ತಾಲೂಕು ಆಡಳಿತ ಅವರಿಗೆ ಪರಿಹಾರ ನೀಡಿ ಮನೆಯ ದುರಸ್ತಿ ಮಾಡಿಸಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

  • ಮೇಘಾಲಯದಲ್ಲಿ ಚಂಡಮಾರುತ – 1,000ಕ್ಕೂ ಹೆಚ್ಚು ಮನೆಗಳಿಗೆ ಹಾನಿ

    ಮೇಘಾಲಯದಲ್ಲಿ ಚಂಡಮಾರುತ – 1,000ಕ್ಕೂ ಹೆಚ್ಚು ಮನೆಗಳಿಗೆ ಹಾನಿ

    ಶಿಲ್ಲಾಂಗ್: ಮೇಘಾಲಯದ ರಿ-ಭೋಯ್ ಜಿಲ್ಲೆಯಲ್ಲಿ ಗುರುವಾರ ಚಂಡಮಾರುತವು ಭಾರೀ ಹಾನಿಯನ್ನುಂಟು ಮಾಡಿದೆ. ಚಂಡಮಾರುತದ ಪರಿಣಾಮ ಸುಮಾರು 1000ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದೆ.

    ಜಿಲ್ಲೆಯ 47 ಗ್ರಾಮಗಳು ಚಂಡಮಾರುತದಿಂದ ಹಾನಿಗೊಳಗಾಗಿದೆ. ಅನೇಕ ಮನೆಗಳಿಗೆ ಹಾನಿ ಉಂಟಾಗಿದೆ. ಜೊತೆಗೆ ಬಿಡಿಒ ಕಚೇರಿ, ಶಾಲೆ, ಲೋಕೋಪಯೋಗಿ ಇಲಾಖೆ ಕಚೇರಿ, ಪಶುವೈದ್ಯಕೀಯ ಕಚೇರಿಗಳು ಸೇರಿದಂತೆ ಸರ್ಕಾರಿ ಆಸ್ತಿ, ಪಾಸ್ತಿಗಳು ಚಂಡಮಾರುತದಿಂದ ನಾಶಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ

    ಅದೃಷ್ಟವಶಾತ್ ಚಂಡಮಾರುತದಿಂದ ಯಾವುದೇ ಸಾವು, ನೋವುಗಳು ಸಂಭವಿಸಿಲ್ಲ. ಇದೀಗ ಹಾನಿಗೊಳಗಾದ ಗ್ರಾಮಗಳಲ್ಲಿ ಜನರ ತೆರವು ಕಾರ್ಯ ಮತ್ತು ಜನರನ್ನು ಬೇರೆಡೆ ವರ್ಗಾಯಿಸುವ ಕಾರ್ಯಗಳನ್ನು ನಡೆಸಲಾಗುತ್ತಿಗುತ್ತಿದೆ. ಇನ್ನೂ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಆಯಾ ಬಿಡಿಒಗಳೊಂದಿಗೆ ತುರ್ತು ಸಭೆ ನಡೆಸಲಗುತ್ತಿದೆ. ಪರಿಸ್ಥಿತಿಯ ನಿಭಾಯಿಸ ಅವಲೋಕನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

  • ಬಿರುಗಾಳಿ ಸಮೇತ ಮಳೆ- ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

    ಬಿರುಗಾಳಿ ಸಮೇತ ಮಳೆ- ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

    ಹಾವೇರಿ: ಬಿರುಗಾಳಿ ಸಮೇತ ಸುರಿದ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿ ಓಣಿಯಲ್ಲಿ ನಡೆದಿದೆ.

    ಮಮ್ತಾಜ್ ಬಾಲೇಬಾಯಿ (42) ಮೃತ ಮಹಿಳೆ. ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದ ಈ ದುರ್ಘಟನೆ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಮೇಲಿನ ಸಿಮೆಂಟ್ ಇಟ್ಟಿಗೆ ಮಹಿಳೆ ತಲೆ ಮೇಲೆ ಬಿದ್ದಿದ್ದರಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ಹಾವೇರಿ ನಗರ, ಸೇರಿದಂತೆ ಹಾವೇರಿ ತಾಲ್ಲೂಕಿನಲ್ಲಿ ಬಿರುಗಾಳಿ ಸಮೇತ ಮಳೆಗೆ ವಿದ್ಯುತ್ ಸಂಪರ್ಕ ವನ್ನ ಕಡಿತ ಮಾಡಲಾಗಿದೆ. ಸ್ಥಳಕ್ಕೆ ಗುತ್ತಲ ಠಾಣೆ ಪಿಎಸ್‍ಐ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಗುತ್ತಲ ಪಟ್ಟಣದ ಹಲವೆಡೆ ಮಳೆ ಗಾಳಿಗೆ ವಿದ್ಯುತ್ ಕಂಬ ಉರುಳಿವೆ. ಕೆಲವು ವಿದ್ಯುತ್ ಕಂಬಗಳು ಮನೆಯ ಮೇಲೆ ಬಿದ್ದು, ಮನೆ ಹಾನಿಯಾಗಿವೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಇದೆ ಮೊದಲ ಬಾರಿ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ

    ಇದೆ ಮೊದಲ ಬಾರಿ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ

    ಬೆಂಗಳೂರು: ಬಿಡಿಎ ಬ್ರಹ್ಮಾಂಡ ಭ್ರಷ್ಟಾಚಾರದ ದಾಳಿಯ ಬಳಿಕ ಮೊದಲ ಬಾರಿಗೆ, ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಬೆಳ್ಳಂಬೆಳ್ಳಗ್ಗೆ 100ಕ್ಕೂ ಹೆಚ್ಚು ಅಧಿಕಾರಿಗಳು ಬೆಂಗಳೂರಿನ 9 ಕಡೆ ದಾಳಿ ಮಾಡಿದ್ದಾರೆ.

    ಇತ್ತೀಚೆಗೆ ಬಿಬಿಎಂಪಿ, ಬಿಡಿಎಗೆ ಸಂಬಂಧಿಸಿದ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಧ್ಯವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆ ಸೇರಿ ಅವ್ಯವಾಹರದಲ್ಲಿ ತೊಡಗಿದ್ದ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ದಾಳಿ ನಡದದಿದೆ.

    ರಘು ಬಿ ಎನ್.ಚಾಮರಾಜಪೇಟೆ, ಮೋಹನ್ ಮನೋರಾಯನಪಾಳ್ಯ, ಮನೋಜ್ ದೊಮ್ಮಲೂರು, ಮುನಿರತ್ನ ರತ್ನವೇಲು ಮಲ್ಲತ್ತಹಳ್ಳಿ, ತೇಜುತೇಜಸ್ವಿ ಆರ್‍ಆರ್ ನಗರ, ಅಶ್ವತ್ ಮುದ್ದಿನಪಾಳ್ಯ, ಲಕ್ಷ್ಮಣ ಚಾಮುಂಡೇಶ್ವರಿ ನಗರ, ಚಿಕ್ಕಹನುಮ್ಮಯ್ಯ ಮುದ್ದಿನಪಾಳ್ಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

  • ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆ ಸಾಧಿಸುತ್ತಿದೆ.

    ಭಗವಂತ್ ಮಾನ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ ಅವರಿಗಿಂತ ಮುಂದಿದ್ದಾರೆ. ಇದೀಗ ಸಂಗ್ರೂರ್‍ನಲ್ಲಿರುವ ಭಗವಂತ್ ಮಾನ್ ಅವರ ನಿವಾಸದಲ್ಲಿ ಎಎಪಿ ಕಾರ್ಯಕರ್ತರು ನೃತ್ಯ ಮಾಡುವ ಮೂಲಕ ಪಕ್ಷದ ಮುನ್ನಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಈ ಮುನ್ನ ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಅವರು, ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆಯಿಂದ ಪಂಜಾಬ್‍ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. 66 ಸ್ಥಳಗಳಲ್ಲಿ 117 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, 93 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಕಣಕ್ಕಿಳಿದ್ದಿದ್ದರು. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಜಿಲ್ಲಾಧಿಕಾರಿ ಮನೆ ಆವರಣದಲ್ಲಿನ ಶ್ರೀಗಂಧ ಮರ ಕಳ್ಳತನ

    ಜಿಲ್ಲಾಧಿಕಾರಿ ಮನೆ ಆವರಣದಲ್ಲಿನ ಶ್ರೀಗಂಧ ಮರ ಕಳ್ಳತನ

    ಧಾರವಾಡ: ನಿನ್ನೆ ತಡರಾತ್ರಿ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದೆ.

    ಬೆಳಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

    ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳವನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ : ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

    ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್‍ಐಆರ್ ದಾಖಲಿಸಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್ ಎಸ್ ಉಪ್ಪಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

  • ಮದುವೆ ಮನೆಯಲ್ಲಿ ಕನ್ನಡ ಧ್ವಜ- ಕನ್ನಡಾಭಿಮಾನ ಮೆರೆದ ನವ ದಂಪತಿ

    ಮದುವೆ ಮನೆಯಲ್ಲಿ ಕನ್ನಡ ಧ್ವಜ- ಕನ್ನಡಾಭಿಮಾನ ಮೆರೆದ ನವ ದಂಪತಿ

    ಚಿಕ್ಕೋಡಿ : ಮದುವೆ ಸಮಾರಂಭದಲ್ಲಿ ಸಾಮಾನ್ಯವಾಗಿ ಆಡಂಬರದ ಅಲಂಕಾರ ಮಾಡುವುದು ಸರ್ವೆ ಸಾಮಾನ್ಯ. ಆದರೆ ಇಲ್ಲೊಂದು ಮದುವೆಯಲ್ಲಿ ಕನ್ನಡದ ಕಂಪು ಸೂಸುವ ವಾತವರಣ ನಿರ್ಮಾಣವಾಗಿತ್ತು.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ನಾಗಯ್ಯಾ ತೇರಣಿಮಠ ಅವರು ಮದುವೆ ಸಮಾರಂಭದಲ್ಲಿ ಎಲ್ಲಿ ನೋಡಿದರಲ್ಲಿ ಕನ್ನಡದ ಧ್ವಜಗಳು, ಕನ್ನಡದ ಶಾಲುಗಳು ಕಂಡು ಬಂದವು.

    ನಾಗಯ್ಯಾ ತೇರಣಿಮಠ ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ರೂಪಾ ಹಿರೇಮಠ ಅವರನ್ನು ಮದುವೆಯಾಗಿದ್ದಾರೆ. ಈ ಮದುವೆಯಲ್ಲಿ ಖಾನಾಪುರ ಗ್ರಾಮದ ಬ್ರಹ್ಮ ಮಠದ ಸಿದ್ದೇಶ್ವರ ಸ್ವಾಮಿಜಿ ಸೇರಿದಂತೆ ಹಲವಾರು ಮಠದ ಶ್ರಿಗಳು ಈ ಕನ್ನಡದ ಮದುವೆಗೆ ಸಾಕ್ಷಿಯಾಗಿದ್ದರು. ಇದನ್ನೂ ಓದಿ: ಲತಾ ಮಂಗೇಶ್ಕರ್‌ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್‌ಲಾಲ್‌ ನೆಹರೂ

    ಮದುವೆಯ ಗಂಡು ಹೆಣ್ಣು ಹೂಮಾಲೆ ಜೊತೆಗೆ ಕನ್ನಡದ ಶಾಲು ಹಾಕಿಕೊಂಡು ಕನ್ನಡತನವನ್ನ ಪ್ರದರ್ಶನ ಮಾಡಿದರು. ಗಡಿಭಾಗದಲ್ಲಿ ಕನ್ನಡತನ ಮೆರೆಯುವ ಮೂಲಕ ಈ ಜೋಡಿ ಹೊಸತನಕ್ಕೆ ನಾಂದಿ ಹಾಡಿದೆ. ಇದನ್ನೂ ಓದಿ: ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್

  • 800 ವರ್ಷಗಳ ಪರಂಪರೆಯ ಮನೆ ಫೋಟೋ ಶೇರ್ ಮಾಡಿದ ಶುಭಾ

    800 ವರ್ಷಗಳ ಪರಂಪರೆಯ ಮನೆ ಫೋಟೋ ಶೇರ್ ಮಾಡಿದ ಶುಭಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶುಭಾ ಪೂಂಜಾ 800 ವರ್ಷ ಪರಂಪರೆ ಹೊಂದಿರುವ ತಮ್ಮ ಮನೆಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಶುಭಾಪೂಂಜಾ ತಮ್ಮ ಬಹುಕಾಲದ ಗೆಳೆಯ ಸುಮಂತ್ ಜೊತೆ ತಮ್ಮ ಪ್ರೀತಿಯ ಊರು ಮಜಲಬೆಟ್ಟುಬೀಡುವಿನಲ್ಲಿರುವ ಮನೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸದ್ಯ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮದುವೆಯ ಕೆಲವೊಂದಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಾ ಸಿಹಿ ಕ್ಷಣಗಳನ್ನು ಮೆಲುಕುಹಾಕುತ್ತಿರುತ್ತಾರೆ. ಇದನ್ನೂ ಓದಿ: ಒಂಟಿಯಾಗಿರುವುದನ್ನು ನಿಜಕ್ಕೂ ನಾನು ದ್ವೇಷಿಸುತ್ತೇನೆ: ಖುಷ್ಬೂ

     

    ಈ ಮಧ್ಯೆ ಶುಭಾ ಪೂಂಜಾ ತಾವು ವಿವಾಹವಾದ ಮನೆಯ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ತಮ್ಮ ಮನೆಯ ಕುರಿತ ಮಾಹಿತಿಯನ್ನು ನೀಡಿದ್ದಾರೆ. ನನ್ನ ಮನೆ ಮಜಲಬೆಟ್ಟುಬೀಡು. ನಾನು ಮದುವೆಯಾದ ಮನೆಯನ್ನು ತೋರಿಸುವಂತೆ ಸಾಕಷ್ಟು ಜನ ಕೇಳಿದ್ದರು. ಇದು ನನ್ನ ಅಜ್ಜಿಯ ಮನೆ. ಇದು 800 ವರ್ಷಗಳ ಪರಂಪರೆ ಹೊಂದಿರುವ ಮನೆಯಾಗಿದೆ. ಈ ಮನೆಯಲ್ಲಿಯೇ ನಾನು ಬೆಳೆದಿದ್ದು, ನಾನು ಯಾವಾಗಲೂ ಈ ಮನೆಯಲ್ಲಿಯೇ ಮದುವೆಯಾಗಬೇಕೆಂದು ಅಂದುಕೊಂಡಿದ್ದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ಶುಭಾ ಪೂಂಜಾ

     

    View this post on Instagram

     

    A post shared by shubha Poonja . (@shubhapoonja)

    ಹಲವು ವರ್ಷಗಳಿಂದ ಸಮಾಜ ಸೇವಕ ಸುಮಂತ್ ಅವರನ್ನು ಪ್ರೀತಿಸುತ್ತಿದ್ದ ಶುಭಾ, 2021 ಡಿಸೆಂಬರ್ ಅಥವಾ 2022ರ ಜನವರಿ ಮೊದಲ ವಾರದಲ್ಲಿ ಮದುವೆ ಆಗುವುದಾಗಿ ಹೇಳಿಕೊಂಡಿದ್ದರು. ಸುಮಂತ್ ಅವರು ಉಡುಪಿಯಲ್ಲಿರುವುದು ಹಾಗೂ ನನ್ನ ಕುಟುಂಬಸ್ಥರು ಮಂಗಳೂರಿನಲ್ಲಿರುವ ಕಾರಣ ನಾವು ಅಲ್ಲಿಯೇ ಮದುವೆ ಆಗುತ್ತೇವೆ ಎಂದು ಈ ಹಿಂದೆ ಶುಭಾ ಹೇಳಿದ್ದರು. ಅದರಂತೆ ಜನವರಿ 5 ರಂದು ಶುಭಾ ಪೂಂಜಾ ಸುಮಂತ್ ಕೈಹಿಡಿದಿದ್ದು, ಮದುವೆಯ ಕೆಲವೊಂದಷ್ಟು ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.