Tag: house

  • ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳಿಂದ ಬೆಂಕಿ

    ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳಿಂದ ಬೆಂಕಿ

    ಹಾಸನ: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ.

    ರವಿ ಅವರ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ದುಡಿದ ಹಣವನ್ನು ಕೂಡಿಟ್ಟು 2017 ರಲ್ಲಿ ರವಿ ಸ್ಕೂಟರ್ ಖರೀದಿಸಿದ್ದರು. ತಮ್ಮ ಸ್ಕೂಟರನ್ನು ರಾತ್ರಿ ವೇಳೆ ಮನೆಯ ಮುಂದೆಯೇ ನಿಲ್ಲಿಸುತ್ತಿದ್ದರು. ಇದನ್ನು ಗಮನಿಸಿದ್ದ ಯಾರೋ ಕಿಡಿಗೇಡಿಗಳು, ಮೊದಲು ಸ್ಕೂಟರ್‍ಗೆ ಪೆಟ್ರೋಲ್ ಸುರಿದು, ನಂತರ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

    ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರು ಎಂಬುದು ಗೊತ್ತಾಗಿಲ್ಲ. ಆದರೆ ಯಾರೋ ಸ್ಕೂಟರ್ ಮಾಲೀಕ ರವಿಗೆ ಆಗದವರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಶ್ರವಣಬೆಳಗೊಳದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ:  ಸಮಂತಾ, ನಾಗಚೈತನ್ಯ ವಿಚ್ಛೇದನ ಸ್ಟೋರಿಗೆ ಅಮೀರ್‌ ಖಾನ್‌ರನ್ನು ಎಳೆತಂದ ಕಂಗನಾ

  • ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು

    ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು

    ಹಾಸನ: ಮನೆಯ ಹಂಚು ತೆಗೆದು ಕೆಳಗಿಳಿದ ಕಳ್ಳರು ಚಿನ್ನ ಮತ್ತು ಟಿವಿ ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.  ಇದನ್ನೂ ಓದಿ: 100 ರೂ.ಗೆ ಉಗಾಂಡ ಪ್ರಜೆಗಳ ಕಿರಿಕ್ – ಕ್ಯಾಬ್ ಚಾಲಕನಿಗೆ ಅಂಗಾಂಗ ತೋರಿಸಿ ಯುವತಿಯರ ವಿಕೃತಿ

    ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಗ್ರಾಮದ ಶಿವಣ್ಣಗೌಡ ಅಂಗಡಿಯಲ್ಲಿ ಮಲಗಿದ್ದರು. ಇನ್ನೂ ಅಂಗಡಿಗೆ ಹೊಂದಿಕೊಂಡಿದ್ದ ಮನೆಯಲ್ಲಿ ಅವರ ಪತ್ನಿ ಪ್ರೇಮ(58) ಮಲಗಿಕೊಳ್ಳುತ್ತಾರೆ. ಈ ವೇಳೆ ಭಾನುವಾರ ಮಧ್ಯರಾತ್ರಿ ಸುಮಾರು 2 ಅಥವಾ 3 ಗಂಟೆಯ ಸಮಯದಲ್ಲಿ ಪ್ರೇಮ ಒಬ್ಬರೆ ಮಲಗಿದ್ದಾಗ, ಮನೆಯ ಮೇಲ್ಛಾವಣಿಯ ಹಂಚುಗಳನ್ನು ಇಳಿಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ನಂದಿನಿ ಹಾಲಿನ ಲಾರಿ, ಅಂಬುಲೆನ್ಸ್ ನಡುವೆ ಭೀಕರ ಅಪಘಾತ- ಉರುಳಿ ಬಿದ್ದ ಈಚರ್

    ನಂತರ ಮಲಗಿದ್ದ ಪ್ರೇಮರವರ ಕುತ್ತಿಗೆಯಲ್ಲಿದ್ದ 30 ಗ್ರಾಂ ತಾಳಿಯೊಂದಿಗಿದ್ದ ಚಿನ್ನದ ಸರ ಕಟ್ ಮಾಡಿಕೊಂಡು, ಮನೆಯಲ್ಲಿದ್ದ ಟಿವಿಯೊಂದನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಇದೀಗ ಸ್ಥಳಕ್ಕೆ ಬೇಲೂರು ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ.  ಇದನ್ನೂ ಓದಿ: ಬಾಳೆಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆನು ಗೊತ್ತಾ?

  • ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

    ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

    ಬೆಳಗಾವಿ: ಗೋಕಾಕ್ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈವರೆಗೆ ಸರ್ಕಾರ ಮನೆ ಕಟ್ಟಿ ಕೊಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ ಸಂತ್ರಸ್ತರು ಬುತ್ತಿ ಕಟ್ಟಿಕೊಂಡು ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ನಮಗೆ ಮನೆ ಕಟ್ಟಿಸಿಕೊಡುವ ಆದೇಶ ಬರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

    ಅರಭಾವಿ ಕ್ಷೇತ್ರದ ಅಡಿಬಟ್ಟಿ, ಚಿಗಡೊಳ್ಳಿ, ಮೇಳವಂಕಿ, ಹಡಗಿನಾಳ, ಉದಗಟ್ಟಿ, ತಿಗಡಿ, ಮಸಗುಪ್ಪಿ, ಕಲಾರಕೊಪ್ಪ, ಅಳ್ಳಿಮಟ್ಟಿ, ಸುಣಧೋಳಿ, ಢವಳೇಶ್ವರ, ಮುನ್ಯಾಳ, ಕಮಲದಿನ್ನಿ, ರಂಗಾಪುರ ಸೇರಿದಂತೆ ಘಟಪ್ರಭಾ ನದಿ ದಂಡೆಯ ಹಲವು ಹಳ್ಳಿಗಳ 200ಕ್ಕೂ ಹೆಚ್ಚು ಸಂತ್ರಸ್ತರು ಬುಧವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಿ, ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಮನೆ ಕಟ್ಟಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು

    ಈ ವೇಳೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಮಾತನಾಡಿ, 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಅರಭಾವಿ ಕ್ಷೇತ್ರದ ಜನತೆಗೆ ಮನೆ ಪರಿಹಾರ ಕೊಟ್ಟಿಲ್ಲ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲ ಮನೆಗಳಿಗೆ ಪರಿಹಾರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಪ್ರತ್ಯಕ್ಷವಾಗಿ ಪ್ರವಾಹಕ್ಕೆ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಸತ್ಯಾಸತ್ಯತೆ ಪರಿಶೀಲನೆ ನಡೆಸಬೇಕು. ಮನೆಗಳ ನಿರ್ಮಾಣದ ಆದೇಶ ಬರುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಿಟ್ಟು ಹೋಗುವುದಿಲ್ಲ. ಬುತ್ತಿ ಕಟ್ಟಿಕೊಂಡೇ ಬಂದಿದ್ದೇವೆ ಎಂದು ಹೇಳಿದರು.

  • ಅವರು ಹೃದಯವಂತರು, ಹೃದಯವಂತಿಕೆ ಇರೋರು ಒಳ್ಳೆಯ ಹಾರೈಕೆ ಮಾಡಿದ್ರೆ ಸಂತೋಷ: ಎಚ್‍ಡಿಕೆಗೆ ಸುಮಲತಾ ಟಾಂಗ್

    ಅವರು ಹೃದಯವಂತರು, ಹೃದಯವಂತಿಕೆ ಇರೋರು ಒಳ್ಳೆಯ ಹಾರೈಕೆ ಮಾಡಿದ್ರೆ ಸಂತೋಷ: ಎಚ್‍ಡಿಕೆಗೆ ಸುಮಲತಾ ಟಾಂಗ್

    ಮಂಡ್ಯ: ಅವರು ಏನು ಬೇಕಾದರು ಮಾತನಾಡಲಿ. ಅವರು ಹೃದಯವಂತರು ಹೃದಯವಂತಿಕೆ ಇರೋರು. ಮನೆ ಮಾಡುವ ಸಂದರ್ಭಗಳಲ್ಲಿ ಒಳ್ಳೆಯ ಹಾರೈಕೆ ಮಾಡಿದ್ರೆ ಸಂತೋಷ ಪಡುತ್ತಿದ್ದೆ. ಬೇರೆ ಮಾತನಾಡಿದ್ದರೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದಾರೆ.

    ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮನೆ ವಿಚಾರ ಎಚ್‍ಡಿಕೆ ಹೇಳಿಕೆಗೆ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸುಮಲತಾ ಅಂಬರೀಶ್, ಅವರು ಮಾತನಾಡಿರುವ ಅರ್ಥ ಏನು ಅಂತಾ ಗೊತ್ತಿಲ್ಲ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಅವರೇ ಹೇಳಬೇಕು. ನಾನು ಮಾತುಗಳಲ್ಲಿ ಮಾತ್ರ ಅಲ್ಲ ಕೆಲಸ ಮಾಡಿ ತೋರಿಸುತ್ತೇನೆ. ಅವರು ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ರೆ ಧನ್ಯವಾದ ಹೇಳುತ್ತೇನೆ. ನಾವು ಮಾತನಾಡಬಾರದು ನಮ್ಮ ಕೆಲಸ ಮಾತನಾಡಬೇಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ

    ಎಚ್‍ಡಿಕೆ ಪ್ರತಿಕ್ರಿಯೆ
    ಮಂಡ್ಯದಲ್ಲಿ ಸುಮಲತಾ ಅವರು ಮನೆ ಮಾಡಿದರೆ ಸಂತೋಷ. ಇದರಿಂದ ನಮ್ಮ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ಮಂಡ್ಯದ ಜನರ ಸಮಸ್ಯೆ ಕೇಳಿ ಅವರು ಬಗೆಹರಿಸಲಿ ಎಂದರು. ಬಳಿಕ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಮನೆ ಮಾಡುವ ವಿಚಾರವಾಗಿ ಪ್ರಶ್ನೆ ಮಾಡಿದಾಗ ಅದರ ಅಗತ್ಯವೇನೂ ಇಲ್ಲ. ಕ್ಷೇತ್ರದಲ್ಲಿ ಮನೆ ಮಾಡುವುದೇ ಮುಖ್ಯವಲ್ಲ. ಮನೆ ಮಾಡುವುದರಿಂದಲೇ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪರೋಕ್ಷವಾಗಿ ಕುಟುಕಿದರು.

    ಕ್ಷೇತ್ರದಲ್ಲಿ ಮನೆ ಮಾಡಿದ ಬಳಿಕ ಮನೆಯೊಳಗೆ ಕುಳಿತರೆ ಪ್ರಯೋಜನ ಆಗಲ್ಲ. ನಾನು ರಾಮನಗರ, ಚನ್ನಪಟ್ಟಣದಲ್ಲಿ ಮನೆ ಮಾಡಿದ್ದೀನಾ? ಸಾ.ರಾ.ಮಹೇಶ್ ಕೂಡ ಕೆ.ಆರ್.ನಗರದಲ್ಲಿ ಮನೆ ಮಾಡಿಲ್ಲ. ಆದರು ನಾವು ಜನರೊಂದಿಗೆ ಸಂಪರ್ಕದಲ್ಲಿದ್ದೇವೆ. ಜನರೊಂದಿಗೆ ಹೇಗೆ ಸಂಪರ್ಕದಲ್ಲಿ ಇರಬೇಕು ಎನ್ನುವುದು ನಮ್ಮ ಮೇಲೆಯೇ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

  • ಬೆಂಗಳೂರಿನ ಹಂಪಿನಗರ ಮನೆಯಲ್ಲಿ ನಿಗೂಢ ಸ್ಫೋಟ

    ಬೆಂಗಳೂರಿನ ಹಂಪಿನಗರ ಮನೆಯಲ್ಲಿ ನಿಗೂಢ ಸ್ಫೋಟ

    ಬೆಂಗಳೂರು: ವಿಜಯನಗರದ ಹಂಪಿನನಗರ ಮನೆಯಲ್ಲಿ ನಿಗೂಢ ಸ್ಫೋಟವೊಂದು ಸಂಭವಿಸಿದೆ.

    ಎರಡಂತಸ್ತಿನ ಕಟ್ಟಡದ ಮೊದಲನೇ ಮಹಡಿ ಮನೆಯಲ್ಲಿ ಬ್ಲಾಸ್ಟ್ ಸಂಭವಿಸಿದ್ದು, ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಮನೆಯಲ್ಲಿದ್ದ ಸೂರ್ಯನಾರಾಯಣ ಶೆಟ್ಟಿ (74), ಪುಷ್ಪಾವಮ್ಮ (70) ಗಾಯಗೊಂಡಿದ್ದಾರೆ. ಗಾಯಾಳು ಪುಷ್ಪಾವತಮ್ಮಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ ಸೂರ್ಯನಾರಾಯಣ ಶೆಟ್ಟಿ ವಿಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಧ್ಯರಾತ್ರಿ 12:45 ಸುಮಾರಿಗೆ ಸ್ಫೋಟ ಸಂಭವಿಸಿದೆ. ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ನಿಂದ  ಸ್ಫೋಟ ಸಂಭವಿಸರಬಹುದು ಎಂಬ ಶಂಕೆ ಮೂಡಿತ್ತು. ಆದರೆ ಗ್ಯಾಸ್ ಸಿಲಿಂಡರ್ ನಿಂದ ಸ್ಫೋಟ ಸಂಭವಿಸಿಲ್ಲ. ಸ್ಫೋಟಕ್ಕೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಮುನಿಸು ಶಮನವಾದರೂ ಜಮೀರ್ ಆಹ್ವಾನ ಒಪ್ಪದ ಸಿದ್ದರಾಮಯ್ಯ

    ವಾರದ ಹಿಂದೆ ಹೊಸ ಫ್ರಿಡ್ಜ್ ಅನ್ನು ಮನೆಗೆ ತರಲಾಗಿತ್ತು. ಮನೆಯ ಮುಖ್ಯ ದ್ವಾರದ ಬಳಿ ನಿಲ್ಲಿಸಲಾಗಿದ್ದ ಫ್ರಿಡ್ಜ್ ಸಂಪೂರ್ಣ ಬ್ಲಾಸ್ಟ್ ಆಗಿದೆ. ಸ್ಫೋಟದ ರಭಸಕ್ಕೆ ಮನೆಯ ಬಾಗಿಲು ಛಿದ್ರಗೊಂಡಿದೆ. ಬಾಗಿಲು ಹಾರಿ ಹೋಗಿ ಬೀಳುವಾಗ ಮುಂದೆ ಇದ್ದ ತಂತಿಗೆ ತಗುಲಿದೆ. ಈ ವೇಳೆ ವಿದ್ಯುತ್ ತಂತಿಯಲ್ಲಿ ಸ್ಪಾರ್ಕ್ ಆಗಿ ತಕ್ಷಣ ಹಂಪಿ ನಗರ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲೆ ಆವರಿಸಿತ್ತು.

  • ಐವರು ಮುಸುಕುದಾರಿಗಳಿಂದ ಒಂಟಿ ಮನೆಗೆ ನುಗ್ಗಿ ದರೋಡೆ

    ಐವರು ಮುಸುಕುದಾರಿಗಳಿಂದ ಒಂಟಿ ಮನೆಗೆ ನುಗ್ಗಿ ದರೋಡೆ

    ಬೆಂಗಳೂರು/ನೆಲಮಂಗಲ: ಅವರೆಲ್ಲ ಊಟ ಮುಗಿಸಿ ಗಾಡ ನಿದ್ರೆಗೆ ಜಾರಿದ್ರು, ಈ ವೇಳೆ ಏಕಾಏಕಿ ಮಾರಕಾಸ್ತ್ರಗಳ ಜೊತೆಗೆ ಒಂಟಿ ಮನೆಗೆ ನುಗ್ಗಿದ ಐವರು ಮುಸುಕು ದಾರಿಗಳು ದರೋಡೆ ಮಾಡಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ನಗರೂರು ಗ್ರಾಮದಲ್ಲಿ ನಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ನಗರೂರು ಗ್ರಾಮದ ಈಶ್ವರಪ್ಪ ಎಂಬವರ ಮನೆಗೆ ನುಗ್ಗಿದ ಐವರು ದರೋಡೆಕಾರರು, ಮನೆಯವರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನಾಭರಣ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಯುವಕನನ್ನು ಮದುವೆಯಾಗಲು ಆಂಟಿ ಪ್ಲ್ಯಾನ್- ಪೊಲೀಸ್ ಮೊರೆ ಹೋದ ಯುವಕ

    ಮನೆಗೆ ನುಗ್ಗಿದ ವೇಳೆ ಮನೆಯಲ್ಲಿದ್ದವರಿಗೆ ಜೋರಾಗಿ ಚೀರಾಡದಂತೆ ಬೆದರಿಸಿ, ಬಾಯಿ ಕಟ್ಟಿ 30 ಗ್ರಾಂ ಚಿನ್ನ ಹಾಗೂ ಒಂದು ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರೆ. ಐವರು ಮುಸುಕುದಾರಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ತಕ್ಷಣವೇ ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

  • ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

    ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

    ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ.

    ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಮನೆಯ ಸದಸ್ಯರು ಪಾರಾಗಿದ್ದಾರೆ.

    ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:ಸಿಲಿಂಡರ್ ಹೊತ್ತ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡು ಹೊತ್ತಿ ಉರಿಯಿತು

  • ಉಡುಪಿಯಲ್ಲಿ ಸರಣಿ ಕಳ್ಳತನ – ಮೂರು ಮನೆಗೆ ಕನ್ನ ಹಾಕಿದ ಖದೀಮರು

    ಉಡುಪಿಯಲ್ಲಿ ಸರಣಿ ಕಳ್ಳತನ – ಮೂರು ಮನೆಗೆ ಕನ್ನ ಹಾಕಿದ ಖದೀಮರು

    ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮೂಳೂರಿನಲ್ಲಿ ಸರಣಿ ಕಳ್ಳತನವಾಗಿದೆ. ಮೂಳೂರು ಪರಿಸರದ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.

    ಕಾಪು ಸಮೀಪದ ಮೂಳೂರು ಗ್ರಾಮದ ಈಸ್ಟ್ ವೆಸ್ಟ್ ನರ್ಸರಿ ಬಳಿಯ ಮಹಮ್ಮದ್ ರಫೀಕ್, ಮಧುರಾ ಕಾಂಪೌಂಡ್ ನ ಇಬ್ರಾಹಿಂ ಮತ್ತು ಶೆಹನಾಜ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಅಪಾರ ಪ್ರಮಾಣದ ನಗ-ನಗದನ್ನು ದೋಚಿದ್ದಾರೆ. ಬಾಗಿಲು ಒಡೆದು ಮನೆಗೆ ನುಗ್ಗಿ ಸಿಕ್ಕ ಎಲ್ಲಾ ವಸ್ತುಗಳನ್ನು ಕದ್ದಿದ್ದಾರೆ. ಅಲ್ಲದೇ ಬೀರೂ ಒಡೆದು, ಚಿನ್ನಾಭರಣ ಲೂಟಿ ಮಾಡಿದ್ದಾರೆ.

    ಮೂರು ಮನೆಗಳಲ್ಲೂ ಯಾರೂ ಇಲ್ಲದ್ದನ್ನು ತಿಳಿದು ಒಂದೇ ತಂಡದವರು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗಿದೆ. ಕಾಪು ಸರ್ಕಲ್ ಪ್ರಕಾಶ್, ಎಸ್.ಐ ರಾಘವೇಂದ್ರ .ಸಿ, ಕ್ರೈಂ ಎಸ್‍ಐ ತಿಮ್ಮೇಶ್ ಬಂದು ತನಿಖೆ ಮಾಡಿದ್ದಾರೆ. ಬೆರಳಚ್ಚು ಮತ್ತು ಶ್ವಾನದಳ ಪಡೆ ಹಾಗೂ ಪೊಲೀಸ್ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ:ಬೆಳ್ಳಿ ಪದಕ ಗೆದ್ದ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಪಿಜ್ಜಾ

  • ಕೋಟೆನಾಡಿನಲ್ಲಿ ಸತತ ಮೂರು ದಿನಗಳಿಂದ ಜಿಟಿ ಜಿಟಿ ಮಳೆ – ನಾಲ್ಕು ಮನೆಗಳ ಗೋಡೆ ಕುಸಿತ

    ಕೋಟೆನಾಡಿನಲ್ಲಿ ಸತತ ಮೂರು ದಿನಗಳಿಂದ ಜಿಟಿ ಜಿಟಿ ಮಳೆ – ನಾಲ್ಕು ಮನೆಗಳ ಗೋಡೆ ಕುಸಿತ

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತೇಕಲವಟ್ಟಿ, ಕಂಚಿಪುರ, ದುಗ್ಗಾವರ ಗ್ರಾಮಗಳಲ್ಲಿ ಮನೆಗಳ ಗೋಡೆ ಕುಸಿದಿವೆ.

    ಕಮಲಮ್ಮ, ನಾಗಮ್ಮ, ಅನಿತ ಹಾಗೂ ಓಂಕಾರಪ್ಪ ಮನೆ ಕಳೆದುಕೊಂಡವರು. ಜಿಟಜಿಟಿ ಮಳೆಯಿಂದಾಗಿ ನಿರಂತರವಾಗಿ ನೆನೆದು ನಾಲ್ಕು ಮನೆಗಳ ಗೋಡೆಗಳು ಕುಸಿದಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಈ ವಿಷಯ ತಿಳಿದ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆನಾಡಲ್ಲಿ ಕಳೆದ ಮೂರು ದಿನಗಳಿಂದ ಸೂರ್ಯನ ದರ್ಶನವಾಗಿಲ್ಲ. ಹೀಗಾಗಿ ಚಳಿಗಾಳಿ ಮಿಶ್ರಿತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ನಿರಂತರ ಮಳೆಗೆ ವರದಾ ನದಿಯ ಬ್ಯಾರೇಜ್ ಬಂದ್

  • ಧಾರಾಕಾರ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಅಣ್ಣ-ತಂಗಿ ಬಲಿ

    ಧಾರಾಕಾರ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಅಣ್ಣ-ತಂಗಿ ಬಲಿ

    ನೆಲಮಂಗಲ: ತಾಲೂಕಿನಾದ್ಯಂತ ತಡರಾತ್ರಿವರೆಗೂ ಧಾರಾಕಾರ ಸುರಿದ ಮಳೆಗೆ ಅಣ್ಣ-ತಂಗಿ ಬಲಿಯಾಗಿದ್ದಾರೆ.

    ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ರಾತ್ರಿ ಸುರಿದ ಮಳೆಗೆ ಬಿನ್ನಮಂಗಲದಲ್ಲಿ ಖಾಲಿ ನಿವೇಶನದ ಗೋಡೆ ಮನೆಯ ಮೇಲೆ ಕುಸಿದು ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

    ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಗಂಭೀರ ಗಾಯಗೊಂಡ ಸಂಪ್ರಥ್ (22) ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜಮೀನು ಮಾಲೀಕನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.