Tag: Housewife

  • Bengaluru | ಪತಿಯೊಂದಿಗೆ ಗಲಾಟೆ – ಗೃಹಿಣಿ ನೇಣಿಗೆ ಶರಣು

    Bengaluru | ಪತಿಯೊಂದಿಗೆ ಗಲಾಟೆ – ಗೃಹಿಣಿ ನೇಣಿಗೆ ಶರಣು

    ಬೆಂಗಳೂರು: ಪತಿಯೊಂದಿಗೆ ಗಲಾಟೆ ಹಿನ್ನೆಲೆ ಮನನೊಂದು ಗೃಹಿಣಿ (Housewife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಲಗ್ಗೇರೆಯ (Laggere) ಮುನೇಶ್ವರ ಬ್ಲಾಕ್‌ನಲ್ಲಿ ನಡೆದಿದೆ.

    ರಕ್ಷಿತಾ (26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ರಕ್ಷಿತಾ ನಾಲ್ಕು ವರ್ಷದ ಹಿಂದೆ ರವೀಶ್‌ನನ್ನು ಮದುವೆಯಾಗಿದ್ದರು. ಕಳೆದ ಮೂರು ವರ್ಷದಿಂದ ರವೀಶ್ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ರವೀಶ್ ಜೊತೆ ಸಹೋದರ ಲೋಕೇಶ್ ಕೂಡ ರಕ್ಷಿತಾ ಜೊತೆ ಗಲಾಟೆ ಮಾಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಲೋಕೇಶ್ ರವೀಶ್ ಮನೆಯಲ್ಲೇ ವಾಸವಾಗಿದ್ದ. ಭಾನುವಾರ ರಾತ್ರಿ ಕೂಡ ರಕ್ಷಿತಾ ಜೊತೆ ರವೀಶ್ ಹಾಗೂ ಲೋಕೇಶ್ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದು ರಕ್ಷಿತಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್‌ಗೆ 2ನೇ ಸ್ಥಾನ

    ರವೀಶ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ. ಗಂಡನೇ ರಕ್ಷಿತಾಳನ್ನು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಮೂರು ವರ್ಷದ ಹೆಣ್ಣು ಮಗುವಿನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕ್ರಿಮಿನಾಶಕ ಸಿಂಪಡಿಸಿದ್ದ ಆಹಾರ ಸೇವನೆ ಶಂಕೆ – 60ಕ್ಕೂ ಹೆಚ್ಚು ಕುರಿಗಳು ಸಾವು

  • ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಚಿತ್ರದುರ್ಗ: ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್‌ (Micro Finance) ಕಿರುಕುಳ ಆರೋಪ ಕೇಳಿಬಂದಿದೆ.

    ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ. ಸಾಲ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

    ಸಾಂದರ್ಭಿಕ ಚಿತ್ರ

    ಹೀಗಾಗಿ ಮೃತಳ ಸಂಬಂಧಿಕರಿಂದ ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ (Chitradurga Rural Police Station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  ಇದನ್ನೂ ಓದಿ: ಹೈದ್ರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢ ಸಾವು

  • ಸಂಸಾರದಲ್ಲಿ ಹುಳಿ ಹಿಂಡಿದ ಬ್ಯೂಟಿ ಪಾರ್ಲರ್ ಆಂಟಿ – ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಆರೋಪ

    ಸಂಸಾರದಲ್ಲಿ ಹುಳಿ ಹಿಂಡಿದ ಬ್ಯೂಟಿ ಪಾರ್ಲರ್ ಆಂಟಿ – ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಆರೋಪ

    – ಪತಿಯೇ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿರುವ ಆರೋಪ

    ಆನೇಕಲ್: 12 ವರ್ಷಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ಆ ಜೋಡಿ ಮದ್ವೆಯಾಗಿತ್ತು (Marriage). ಮುದ್ದಾದ ಇಬ್ಬರು ಗಂಡು ಮಕ್ಕಳಿದ್ದರು. ಸಂಸಾರ ಸುಃಖವಾಗಿತ್ತು ಅನ್ನುವಾಗಲೇ ದುರಂತ ನಡೆದುಬಿಟ್ಟಿದೆ. ಅದೊಂದು ವಿಚಾರ ಆ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿ, ಒಬ್ಬರ ಸಾವಿಗೂ ಕಾರಣವಾಗಿದೆ.

    ದುರಂತದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ದೀಪು, ಹಲ್ಲೆ ಮಾಡಿದ ಪತಿ ಉದಯ್‌. ಮೂಲತಃ ಪಿರಿಯಾಪಟ್ಟಣದ (Piriyapatna) ನಿವಾಸಿಯಾದ ದೀಪು 12 ವರ್ಷಗಳ ಹಿಂದೆ ಗುರು ಹಿರಿಯರ ಸಮ್ಮುಖದಲ್ಲಿ ಉದಯ್‌ ಎಂಬಾತನನ್ನ ವಿವಾಹವಾಗಿದ್ದಳು. ದಂಪತಿಗೆ ಮುದ್ದಾದ ಇಬ್ಬರು ಗಂಡು ಮಕ್ಕಳಿದ್ದರು. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದ್ರೆ ಇತ್ತೀಚೆಗೆ ಉದಯ್-ದೀಪಾ ದಂಪತಿ ನಡುವೆ ಬ್ಯೂಟಿ ಪಾರ್ಲರ್ ಆಂಟಿ ಎಂಟ್ರಿ ಕೊಟ್ಟಿದ್ದು, ಸಂಸಾರಕ್ಕೆ ಹುಳಿ ಹಿಂಡಿತ್ತು. ಇದನ್ನೂ ಓದಿ: Ramanagara | ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ – ಇಬ್ಬರ ಮೇಲೆ ಪ್ರಕರಣ ದಾಖಲು

    ಚಾಮುಂಡಿಬೆಟ್ಟದಲ್ಲಿ ಮಾತುಕತೆ ನಡೆದು ಗಂಡ ಉದಯ್ ಬ್ಯೂಟಿ ಪಾರ್ಲರ್ ಆಂಟಿಗೆ (Beauty Parlour Aunty) ಕಟ್ಟಿದ ತಾಳಿ ತೆಗೆಸಿದ್ರು. ಆದರೂ ಸಂಸಾರದ ತಾಳ ಮೇಳ ಸರಿಯಾಗಲಿಲ್ಲ. ನಿತ್ಯ ಮನೆಯಲ್ಲಿ ಆಂಟಿ ವಿಚಾರವಾಗಿ ಗಂಡ-ಹೆಂಡತಿ ನಡುವೆ ಜಗಳ ಹೊಡೆದಾಟ ಕಾಮನ್ ಆಗಿತ್ತು. ಇದೇ ತಿಂಗಳು 6ನೇ ತಾರೀಖು ಆಂಟಿ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಗಂಡ ಉದಯ್ ಹಲ್ಲೆ ನಡೆಸಿ ನೀನು ಎಲ್ಲಾದರೂ ಹೋಗಿ ಸಾಯಿ ಎಂದು ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಪತ್ನಿ ದೀಪಾ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಚಿಕಿತ್ಸೆ ಫಲಕಾರಿಯಾಗದೇ 9ನೇ ತಾರೀಖು ನಗರದ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಗಂಡು ಹುಟ್ಟಲಿಲ್ಲ ಅಂತ ಬೇಸರಗೊಂಡು ಹೆಣ್ಣುಮಗಳಿಗೆ ವಿಷವಿಕ್ಕಿ ಕೊಂದ ಸೇನಾ ಸಿಬ್ಬಂದಿ

    ಇತ್ತ ದೀಪಾಳ ಪೋಷಕರು ಕ್ರಿಮಿ ನಾಶಕ ಕುಡಿಸಿ ಮಗಳನ್ನ ಉದಯ್ ಕೊಂದಿರುವುದಾಗಿ ಆರೋಪಿಸಿದ್ದಾತೆ. ಮಹಿಳೆಯೊಬ್ಬಳ ಅಕ್ರಮ ಸಂಬಂಧ ವಿಚಾರಕ್ಕೆ ಪದೇ ಪದೇ ಹಲ್ಲೆ ನಡೆಸುತ್ತಿದ್ದ ಉದಯ್‌. ಕಿವಿ ಓಲೆ ಕೂಡ ಹಲ್ಲೆ ವೇಳೆ ಮುರಿದು ಹೋಗಿತ್ತು. ಬದುಕಲು ಸಾಧ್ಯವಿಲ್ಲ ಎಂದಾಗ ಬುದ್ಧಿ ಮಾತು ಹೇಳಿದ್ದೆವು. ಆದರೂ ಮನೆಯ ವಿಚಾರ ನಿಮ್ಮ ಕುಟುಂಬದವರಿಗೆ ತಿಳಿಸುತ್ತಿಯಾ ಎಂದು ಹಲ್ಲೆ ನಡೆಸಿದ್ದಾನೆ. ಹಣಕ್ಕಾಗಿಯು ಸಾಕಷ್ಟು ಪೀಡಿಸಿದ್ದಾನೆ. ಕೊನೆಗೆ ಕ್ರಿಮಿನಾಶಕ ಕುಡಿದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಕೊನೆ ಕ್ಷಣದಲ್ಲಿ ನಮಗೆ ತಿಳಿಸಿದ್ರು ಮಗಳ ಗಂಡ ಉದಯ್ ವಿಶ ಕುಡಿಸಿ ಕೊಂದಿರುವ ಸಾಧ್ಯತೆ ಇದೆ. ಪೊಲೀಸರು ನ್ಯಾಯ ಕೊಡಿಸಬೇಕು ಎಂದು ಮೃತ ದೀಪಾ ಕುಟುಂಬದವರು ಆಗ್ರಹಿಸಿದ್ದಾರೆ.

    ಸದ್ಯ ಮೃತ ದೀಪಾ ತಾಯಿ ಸುಗುಣಮ್ಮ ದೂರು ಆಧರಿಸಿ ಆತ್ಮಹತ್ಯೆ ಪ್ರಚೋದನೆ ಸೇರಿದಂತೆ ಜಾಮೀಜು ರಹಿತ ಸೆಕ್ಷನ್ ಅಡಿಯಲ್ಲಿ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ರು. ಆರೋಪಿ ಉದಯ್‌ನನ್ನ ವಶಕ್ಕೆ ಪಡೆದು ಬಳಿಕ ಬಿಟ್ಟು ಕಳುಹಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ನಾಗ್ಪುರ | ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹವನ್ನ ಬೈಕ್‌ನಲ್ಲೇ ಸಾಗಿಸಿದ ಪತಿ

  • ದೆಹಲಿಯಲ್ಲಿ ದಂಪತಿ, ಮನೆಗೆಲಸದಾಕೆಯ ಬರ್ಬರ ಹತ್ಯೆ – ಮಗು ಮಾತ್ರ ಸೇಫ್

    ದೆಹಲಿಯಲ್ಲಿ ದಂಪತಿ, ಮನೆಗೆಲಸದಾಕೆಯ ಬರ್ಬರ ಹತ್ಯೆ – ಮಗು ಮಾತ್ರ ಸೇಫ್

    ನವದೆಹಲಿ: ದಂಪತಿ ಮತ್ತು ಅವರ ಮನೆಗೆಲಸದಾಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ (Ashok Vihar) ಮನೆಯಲ್ಲಿ ಸಮೀರ್ ಅಹುಜಾ, ಅವರ ಪತ್ನಿ ಶಾಲು ಮತ್ತು ಮನೆಗೆಲಸದಾಕೆ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆದರೆ ದಂಪತಿಯ ಎರಡು ವರ್ಷದ ಮಗಳು ಸುರಕ್ಷಿವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭವಾನಿ ಅಕ್ಕ, ಪ್ರಜ್ವಲ್ ರೇವಣ್ಣ ನಶೆಯಲ್ಲಿರ್ತಾರೆ; ಥರ್ಟಿ, ಸಿಕ್ಸ್ಟಿ ಅಲ್ಲ 2 ಬಾಟ್ಲಿ ಕುಡಿತಾರೆ – ಪ್ರೀತಂ ಗೌಡ

    ಮನೆಗೆಲಸದಾಕೆ ಸಪ್ನಾ ಇಂದು ಬೆಳಗ್ಗೆ 7.30ರ ಸುಮಾರಿಗೆ ಕೆಲಸಕ್ಕೆ ಬಂದ ಬಳಿಕ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೂ ಮುನ್ನ ಇಂದು ಬೆಳಗ್ಗೆ ಐವರು ಮೋಟಾರ್ ಬೈಕ್‍ನಲ್ಲಿ ಮನೆಗೆ ಬಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಪ್ರವಾಸಿಗರು

    Live Tv
    [brid partner=56869869 player=32851 video=960834 autoplay=true]

  • ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ?

    ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ?

    ರಾಂಚಿ: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಂಚಿಯಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಚಂದಾ ದೇವಿ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಕಾರಣವೆನೆಂಬುವುದನ್ನು ಲಿಪ್‍ಸ್ಟಿಕ್‍ನಿಂದ ಮನೆಯ ವಾಲ್ ಮೇಲೆ ಬರೆದಿದ್ದಾರೆ. 2019ರಲ್ಲಿ ಚಂದಾ ದೇವಿ ಅವರು, ದಿಲೀಪ್ ಚೌಹಾಣ್ ಅವರನ್ನು ವಿವಾಹವಾಗಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ದಂಪತಿ ದೂರವಾಗಿದ್ದರು. ನಿತ್ಯವೂ ಇಬ್ಬರು ಜಗಳವಾಡುತ್ತಿದ್ದರು. ತನ್ನ ಸಾವಿಗೆ ಅತ್ತೆಯಂದಿರು ಮತ್ತು ಪತಿ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆತ್ಮಹತ್ಯೆ ಬರಹದಲ್ಲಿ ಗೃಹಿಣಿ ಬಹಿರಂಗಪಡಿಸಿದ್ದಾರೆ.

    ಮಂಗಳವಾರ ರಾತ್ರಿ ದಿಲೀಪ್ ಮನೆಯಲ್ಲಿ ಇಲ್ಲದ ವೇಳೆ ಚಂದಾ ರಾತ್ರಿ ರೂಮ್ ಬೀಗ ಹಾಕಿಕೊಂಡು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಈ ವೇಳೆ ಚಂದಾ ದೇವಿಯ ಇಬ್ಬರು ಹೆಣ್ಣುಮಕ್ಕಳು ಅಳುತ್ತಿರುವುದನ್ನು ಗಮನಿಸಿದ ಅತ್ತೆ ಕಿಟಕಿಯ ಕೋಣೆಯನ್ನು ಇಣುಕಿ ನೋಡಿದಾಗ ಸೀಲಿಂಗ್‍ನಲ್ಲಿ ಚಂದಾ ದೇವಿ ಶವ ನೇತಾಡುತ್ತಿರುವ ನೋಡಿದ್ದಾರೆ. ಇದನ್ನೂ ಓದಿ: ಪತ್ನಿ ಮೇಲೆ ಮೂತ್ರವಿಸರ್ಜನೆ ಮಾಡಿ ವಿಕೃತಿ ಮೆರೆದ ಪತಿ ವಿರುದ್ಧ ದೂರು

    ವರದಕ್ಷಿಣೆಗಾಗಿ ಚಂದಾಗೆ ಕಿರುಕುಳ ನೀಡುತ್ತಿದ್ದರು ಎಂದು ದಿಲೀಪ್ ಕುಟುಂಬ ಸದಸ್ಯರ ವಿರುದ್ಧ ಆಕೆಯ ಸಂಬಂಧಿಕರು ಪ್ರಕರಣ ದಾಖಲಿಸಿದ್ದಾರೆ. ಸಾಯುವ ಮುನ್ನ ಚಂದಾ ತನ್ನ ದುಪಟ್ಟಾ ಸಹಾಯದಿಂದ ತನ್ನ ಪುಟ್ಟ ಮಕ್ಕಳನ್ನು ಕಿಟಕಿಗೆ ಕಟ್ಟಿ ಹಾಕಿದ್ದಳು. ಮಕ್ಕಳು ಅಳುವ ಶಬ್ಧವನ್ನು ಕೇಳಿ ನಂತರ ನೆರೆಹೊರೆಯವರು ಕೋಣೆಗೆ ನುಗ್ಗಿ ಬಾಲಕಿಯರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೈದ ಆರೋಪಿಗಳ ಬಂಧನ- ಪೊಲೀಸ್ ಇಲಾಖೆಗೆ ಕುಟುಂಬಸ್ಥರು ಧನ್ಯವಾದ

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಸುವಂತೆ ವಿವಾಹಿತೆಗೆ ಬ್ಲಾಕ್ ಮೇಲ್ – ಮನನೊಂದ ಗೃಹಿಣಿ ನೇಣಿಗೆ ಶರಣು

    ಪ್ರೀತಿಸುವಂತೆ ವಿವಾಹಿತೆಗೆ ಬ್ಲಾಕ್ ಮೇಲ್ – ಮನನೊಂದ ಗೃಹಿಣಿ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ವಿವಾಹಿತೆಯ ಹಿಂದೆ ಬಿದ್ದ ಮತ್ತೊಬ್ಬ ವಿವಾಹಿತ, ತನ್ನನ್ನು ಪ್ರೀತಿಸುವಂತೆ ವಿವಾಹಿತೆಗೆ ದುಂಬಾಲು ಬಿದ್ದಿದ್ದ. ಇದರಿಂದ ಮನನೊಂದ ಗೃಹಿಣಿ ಚಿಕ್ಕಬಳ್ಳಾಪುರ ಜಿಲ್ಲೆಯ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಯುವಕನೊಬ್ಬ ವಿವಾಹಿತೆಯನ್ನು ಪ್ರೀತಿಸುತ್ತಿರುವುದನ್ನು ಅರಿತ ಆಕೆಯ ಮನೆಯವರು, ಆತನಿಗೆ ಬುದ್ಧಿ ಹೇಳಿದ್ರು. ಇದರಿಂದಲೂ ಸುಮ್ಮನಾಗದ ಆತ ವಿವಾಹಿತೆಗೆ ಬ್ಲಾಕ್ ಮೇಲ್ ಮಾಡಲು ಆಕೆಯ ಫೋಟೋ ಜೊತೆ ತನ್ನ ಫೋಟೋ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ. ಇದ್ರಿಂದ ಮಹಿಳೆ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಚೌಡರೆಡ್ಡಿಪಾಳ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆಗೆ ಶಿಕ್ಷಣ ಇಲಾಖೆಯಿಂದ ವಿಶೇಷ ಅಭಿಯಾನ 

    ನಡೆದಿದ್ದೇನು?
    ಆಲ್ಫೀಯಾ ತಾಜ್ ಮೃತ ವಿವಾಹಿತೆ. ಈಕೆಗೆ ಇನ್ನೂ ಹದಿನೇಳು ವರ್ಷ ವಯಸ್ಸು. ಅಲ್ಪೀಯಾ ತಾಜ್‍ಗೆ ಹೈಸ್ಕೂಲ್‍ನಲ್ಲಿ ಓದುತ್ತಿದ್ದಾಗಲೇ ಆಕೆಯ ಪೋಷಕರು ಬಲವಂತವಾಗಿ ಮದುವೆ ಮಾಡಿ ಕೈ ತೊಳೆದುಕೊಂಡಿದ್ರು. ಆದ್ರೆ ಗಂಡನ ಮನೆಯಲ್ಲಿ ಇರಲಾಗದ ಆಲ್ಫೀಯಾ ತಾಜ್ ವಾಪಸ್ ಆಗಮಿಸಿ ತವರು ಮನೆಯಲ್ಲಿ ಇದ್ದಳು.

    ಚೌಡರೆಡ್ಡಿ ಪಾಳ್ಯಾ ನಿವಾಸಿ ಹಾಗೂ ಪರಿಚಯಸ್ಥ ಯುವಕ ಸಯ್ಯದ್ ನಾಸೀರ್ ಆಲ್ಫೀಯಾ ಮೇಲೆ ಕಣ್ಣು ಹಾಕಿದ್ದ. ಆಲ್ಫೀಯಾಳನ್ನು ಪ್ರೀತಿಸುವುದಾಗಿ ಹೇಳಿ ಆಕೆಯ ಹಿಂದೆ ಬಿದ್ದಿದ್ದ. ಇದ್ರಿಂದ ಆಲ್ಫೀಯಾ ಸಹೋದರರು ಸಯ್ಯದ್ ನಾಸೀರ್‌ಗೆ ಬೈಯ್ದು ಬುದ್ಧಿ ಹೇಳಿ ಎಚ್ಚರಿಕೆ ನೀಡಿದ್ರು. ಆದ್ರು ಸುಮ್ಮನಾಗದ ನಾಸೀರ್, ಆಲ್ಫೀಯಾಳ ಫೋಟೋ ಜೊತೆ ತನ್ನ ಫೋಟೋ ಜೋಡಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದ್ರಿಂದ ನೊಂದು ಆಲ್ಫೀಯಾ ತಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆ ಸಹೋದರ ಆರೋಪಿಸಿದ್ದಾನೆ.

    ನಾಸೀರ್‍ನ ಕಿರುಕುಳ, ಬ್ಲಾಕ್ ಮೇಲ್ ಹಾಗೂ ಫೋಟೋ ಪೋಸ್ಟ್‌ನಿಂದಲೇ ಆಲ್ಫೀಯಾ ತಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕ್ರೋಶಗೊಂಡ ಆಲ್ಫೀಯಾ ತಾಜ್ ಸಹೋದರರು ಹಾಗೂ ಸಂಬಂಧಿಗಳು, ನಾಸೀರ್ ಮನೆಗೆ ನುಗ್ಗಿದ್ದಾರೆ. ಈ ವೇಳೆ ನಾಸೀರ್‌ಗೆ ಥಳಿಸಿ ದಾಂಧಲೆ ಮಾಡಿದ್ದಾರೆ. ಆಗ ನಾಸೀರ್ ಮತ್ತು ಕುಟುಂಬ ಮನೆಗೆ ಬೀಗ ಜಡಿದು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ:  ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

    ಆಲ್ಫೀಯಾಳ ನೋವಿನ ಹಿಂದೆ ಆಕೆಯ ಬಾಲ್ಯ ವಿವಾಹದ ಮತ್ತೊಂದು ಸ್ಟೋರಿ ತೆರೆದುಕೊಳ್ಳುತ್ತೆ. ಆಲ್ಫೀಯಾಗೆ ಬಂದ ಗತಿ ರಾಜ್ಯದಲ್ಲಿ ಯಾವುದೇ ಹೆಣ್ಣು ಮಗಳಿಗೂ ಆಗಬಾರದು ಅಂತ ಸಂಬಂಧಿಗಳು ಒತ್ತಾಯ ಮಾಡಿದ್ದಾರೆ.

    ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    ಮೈಸೂರು: ಮಕ್ಕಳ ಜೊತೆ ಮಹಿಳೆಯು ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

    ಸರೋಜ (32) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಗೀತಾ (6), ಕುಸುಮ (4) ಮೃತ ಮಕ್ಕಳು. ಕುಟುಂಬ ಕಲಹದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಸರೋಜ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರೋಜ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಜೊತೆ ವಿವಾಹವಾಗಿದ್ದರು. ಆದರೆ ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ಆಗುತ್ತಿತ್ತು. ಇದನ್ನೂ ಓದಿ: ಮುಂಬೈನಲ್ಲಿ ಕಟ್ಟಡ ಕುಸಿತ – ಓರ್ವ ಸಾವು, 11 ಮಂದಿಗೆ ಗಾಯ

    POLICE JEEP

    ಕೆಲ ದಿನಗಳ ಹಿಂದೆ ಸರೋಜ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತ ದೇಹಗಳನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧಿಸಿ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉದ್ಧವ್ ರಾಜೀನಾಮೆ ನೀಡದಂತೆ ಶರದ್ ಪವಾರ್ ಅಡ್ಡಿ

    Live Tv

  • ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್

    ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್

    ಚಿಕ್ಕಬಳ್ಳಾಪುರ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮೇ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ಭಾಗ್ಯಶ್ರೀ(35) ಅವರನ್ನು ಪ್ರಿಯಕರ ರಿಯಾಝ್ ಪಾಷಾ ಮನೆಯಿಂದ ಹೊರಗೆಳೆದು, ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ನಂತರ ಅಲ್ಲಿಂದ ಪರಾರಿಯಾಗಿದ್ದನು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ!

    KILLING CRIME

    ನಡೆದಿದ್ದೇನು?
    ಮೃತ ಭಾಗ್ಯಶ್ರೀ ಪತಿ ಚನ್ನಬಸವರಾಜು ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳಿದ್ದರು. ಈ ವೇಳೆ ಭಾಗ್ಯಶ್ರೀ ಮತ್ತು ಮಕ್ಕಳು ಮನೆಯಲ್ಲಿಯೇ ಇದ್ದರು. ಸಮಯ ನೋಡಿಕೊಂಡು ರಿಯಾಝ್ ಪಾಷಾ, ಭಾಗ್ಯಶ್ರೀ ಮನೆಗೆ ನುಗ್ಗಿ, ಅವಳನ್ನು ಹೊರಗೆಳೆದಿದ್ದನು. ನಂತರ ಮಕ್ಕಳ ಮುಂದೆಯೇ ಭಾಗ್ಯಶ್ರೀಯನ್ನು ನಿರ್ದಯವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ.

    crime

    ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂ.ಗ್ರಾ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಡಿವೈಎಸ್‍ಪಿ ನಾಗಾರಾಜ್, ಸರ್ಕಲ್ ಇನ್‍ಸ್ಪೆಕ್ಟರ್ ಹರೀಶ್ ಅವರ ಮಾರ್ಗದರ್ಶನದಲ್ಲಿ ದೊಡ್ಡಬೆಳವಂಗಲ ಸಬ್ ಇನ್‍ಸ್ಪೆಕ್ಟರ್ ಜ್ಞಾನಮೂರ್ತಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ:  ಮುಸ್ಲಿಂ ಸಮುದಾಯ ಹಠ ಮಾಡದೇ ದೇವಸ್ಥಾನ ಬಿಟ್ಟು ಕೊಡಬೇಕು: ಮುತಾಲಿಕ್ 

    ಈ ವೇಳೆ ಆರೋಪಿ ರಾಯಚೂರಿನ ಲಿಂಗಸೂಗೂರು ಗ್ರಾಮದಲ್ಲಿ ತಲೆ ಮರೆಸಿಕೊಂಡಿದ್ದ ಎಂದು ತಿಳಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಪತಿ ಸಾವಿನ ಸುದ್ದಿ ಕೇಳಿ ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆ

    ಪತಿ ಸಾವಿನ ಸುದ್ದಿ ಕೇಳಿ ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆ

    ರಾಯಚೂರು: ಅಪಘಾತದಲ್ಲಿ ಗಾಯಗೊಂಡು ಪತಿ ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿ ಐದು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.

    ಮೃತರನ್ನು ಶೃತಿ(30) ಮತ್ತು 5 ತಿಂಗಳ ಮಗು ಅಭಿರಾಮ್ ಎಂದು ಗುರುತಿಸಲಾಗಿದೆ. ಮಂಗಳೂರು ಜಿಲ್ಲೆಯ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಗಂಗಾಧರ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪಿದ್ದರು. ಈ ಸುದ್ದಿ ತಿಳಿದು ಪತ್ನಿ ಶೃತಿ ದಿಕ್ಕು ಕಾಣದಂತೆ ಆಗಿ ಮನನೊಂದು ಮನೆಯ ಕಿಟಕಿಗೆ ಐದು ತಿಂಗಳ ಮಗುವಿಗೆ ನೇಣು ಹಾಕಿ ಕೊಂದು ಆ ಬಳಿಕ ಮನೆಯಲ್ಲಿನ ಫ್ಯಾನ್‍ಗೆ ತಾನು ಕೂಡ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ

    ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸೂಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಡಿವೈಎಸ್‍ಪಿ ಎಸ್.ಎಸ್. ಹೂಲ್ಲೂರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗಳು ಮತ್ತು ಮೊಮ್ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತರ ಶವಗಳನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.  ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

  • ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ – ಕಾರಣ ನಿಗೂಢ

    ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ – ಕಾರಣ ನಿಗೂಢ

    ಚಿಕ್ಕಬಳ್ಳಾಪುರ: ಮನೆಯಲ್ಲಿ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಇಂದಿರಾನಗರದಲ್ಲಿ ನಡೆದಿದೆ.

    Chikkaballapura

    ಆರತಿ ಹಿರೇಮಠ್(35) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಅಂದಹಾಗೆ ನ್ಯಾಯಾಲಯದಲ್ಲಿ ಎಫ್‍ಡಿಎ ಆಗಿದ್ದ ಆರತಿ ಹಿರೇಮಠ್ ಕೆಲಸ ಮಾಡುತ್ತಿದ್ದರು. ಗಂಡ ರಾಮಕೃಷ್ಣಯ್ಯ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

    ಮೂಲತಃ ಬೆಂಗಳೂರಿನ ನಾಗಸಂದ್ರ ಬಳಿಯ ತಿಪ್ಪೇನಹಳ್ಳಿಯಲ್ಲಿ ಪತಿ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರೆ, ಪತ್ನಿ ಚಿಕ್ಕಬಳ್ಳಾಪುರ ನಗರದ ಇಂದಿರಾ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಯಲ್ಲಿ ಆರತಿ ಆತ್ಮಹತ್ಯೆಗೆ ಶರಣಾಗಿದ್ದು ಕಾರಣ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರತಿ ಅವರ ಗಂಡ ಬಂದ ನಂತರ ಬಾಗಿಲು ತೆರೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್