Tag: Housing

  • ದುರಂತ ಸಂಭವಿಸಿ 10 ದಿನಗಳಾದರು ಸಂತ್ರಸ್ತರ ಕೇಂದ್ರದಲ್ಲೇ ಇರುವ ಸಾವಿರಾರು ನಿವಾಸಿಗಳು

    ದುರಂತ ಸಂಭವಿಸಿ 10 ದಿನಗಳಾದರು ಸಂತ್ರಸ್ತರ ಕೇಂದ್ರದಲ್ಲೇ ಇರುವ ಸಾವಿರಾರು ನಿವಾಸಿಗಳು

    ಮಂಗಳೂರು: ಕೊಡಗಿನ ಜೋಡುಪಾಲ, ಮದೆನಾಡಿನಲ್ಲಿ ದುರಂತ ಎದುರಾಗಿ ಹತ್ತು ದಿನ ಕಳೆದಿವೆ. ಆದರೂ ಅಲ್ಲಿನ ಮೂರು ಗ್ರಾಮಗಳ ಸಾವಿರಾರು ನಿವಾಸಿಗಳು ಇನ್ನು ಕಲ್ಲುಗುಂಡಿ, ಸಂಪಾಜೆಯಲ್ಲಿರುವ ಕೇಂದ್ರದಲ್ಲೇ ತಂಗಿದ್ದಾರೆ.

    ಈ ನಡುವೆ ತಮ್ಮ ತಮ್ಮ ಮನೆಗಳನ್ನು ನೋಡಿ ಹೋಗಲು ಬರುವ ಬಹುತೇಕ ನಿವಾಸಿಗಳು ಅಲ್ಲಿಂದ ಸಾಮಾಗ್ರಿಗಳನ್ನು ಹೊತ್ತು ಒಯ್ಯುತ್ತಿದ್ದಾರೆ. ಕೆಲವು ಮನೆಗಳಿಗೆ ಹಾನಿ ಆಗದಿದ್ದರೂ, ಇಲ್ಲಿ ಮತ್ತೆ ಮಳೆಯಾಗಿ ಭೂಕುಸಿತವಾದರೆ ಅಪಾಯ ಅನ್ನುವ ಭಾವನೆ ನಿವಾಸಿಗಳಲ್ಲಿದೆ. ಹೀಗಾಗಿ ಸರ್ಕಾರದಿಂದ ಸೂಕ್ತ ಜಾಗದಲ್ಲಿ ಪುನರ್ವಸತಿ ಮಾಡಿಕೊಟ್ಟರೆ ತಮ್ಮ ಮನೆಗಳನ್ನು ಬಿಟ್ಟು ಅಲ್ಲಿಗೆ ತೆರಳಲು ರೆಡಿಯಾಗಿದ್ದಾರೆ. ಅದಕ್ಕಾಗಿ ಸ್ವಯಂಸೇವಕರ ಜೊತೆಗೆ ಮನೆಗೆ ತೆರಳಿ, ಅಗತ್ಯ ವಸ್ತುಗಳನ್ನು ಮೂಟೆ ಕಟ್ಟಿ ಸಂತ್ರಸ್ತರ ಕೇಂದ್ರಕ್ಕೆ ಹೊತ್ತು ತರುತ್ತಿದ್ದಾರೆ.

    ಇತ್ತೀಚೆಗೆ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ತಜ್ಞರು ಸ್ಥಳ ಪರಿಶೀಲಿಸಿದ ಸಂದರ್ಭದಲ್ಲಿ ಜೋಡುಪಾಲ, ಮದೆನಾಡು, ಮಣ್ಣಂಗೇರಿ ಪ್ರದೇಶಗಳು ವಾಸಕ್ಕೆ ಯೋಗ್ಯವಲ್ಲ ಎಂದಿದ್ದರು. ಹೀಗಾಗಿ ದುರಂತದ ಭಯ ಸಂತ್ರಸ್ತರಲ್ಲಿ ಆವರಿಸಿದ್ದು, ಮತ್ತೆ ಬೆಟ್ಟಗಳ ಮಧ್ಯೆ ವಾಸ ಇರುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

    ಇನ್ನೊಂದೆಡೆ ಘಟ್ಟಗಳ ವ್ಯಾಪ್ತಿಯಲ್ಲಿ ಈಗಾಗಲೇ ಬಿರುಕು ಬಿಟ್ಟು ನಿಂತಿರುವ ಕಾರಣ, ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮಾನವ ವಾಸ ತಕ್ಕುದಾಗಿಲ್ಲವಾದರೆ, ಬಡವರಿಗೆ ಪ್ರತ್ಯೇಕ ವಸತಿ ನಿರ್ಮಿಸಿ, ಅಲ್ಲಿರುವ ಕಾಫಿ ಎಸ್ಟೇಟ್‍ಗಳನ್ನು ವಶಕ್ಕೆ ತೆಗೆದುಕೊಳ್ಳುವ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಮುಖ್ಯಮಂತ್ರಿಗೆ ಬಾದಾಮಿಯಲ್ಲಿ ರೆಡಿಯಾಗ್ತಿದೆ ವಸತಿಗೃಹ

    ಮಾಜಿ ಮುಖ್ಯಮಂತ್ರಿಗೆ ಬಾದಾಮಿಯಲ್ಲಿ ರೆಡಿಯಾಗ್ತಿದೆ ವಸತಿಗೃಹ

    ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಸತಿ ಗೃಹದ ನವೀಕರಣ ಕಾರ್ಯ ನಡೆಯುತ್ತಿದೆ. ವಸತಿಗೃಹದ ಸಹಾಯಕ ಎಂಜಿನಿಯರ್ ವಸತಿಗೃಹವನ್ನು ಸಿದ್ದರಾಮಯ್ಯ ಹೇಳಿದಂತೆ ನವೀಕರಣ ಮಾಡುತ್ತಿದ್ದಾರೆ.

    ಇಂಡಿಯನ್ ಶೌಚಾಲಯ ಬದಲಾಯಿಸಿ ವೆಸ್ಟರ್ನ್ ಶೌಚಾಲಯ ನಿರ್ಮಿಸಲಾಗುತ್ತಿದೆ. ಜೊತೆಗೆ ಮನೆಯಲ್ಲಿ ಹೈಟೆಕ್ ಬೆಡ್‍ರೂಂ ವಿತ್ ಅಟ್ಯಾಚ್ ಬಾತ್‍ರೂಂ ನಿರ್ಮಾಣವಾಗ್ತಿದ್ದು, ಎಲ್ಲಾ ಸೇರಿ ಒಟ್ಟು ಮನೆಗಾಗಿ 20 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಮನೆ ನವೀಕರಣ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬಳಿಕ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

    ರಾಜಕೀಯ ಮರುಜನ್ಮ ಕೊಟ್ಟ ಬಾದಾಮಿಯಲ್ಲಿ ಮನೆ ಮಾಡಿ ಜನರ ಋಣ ತೀರಿಸೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದ್ರೆ ಸಿದ್ದರಾಮಯ್ಯಗೆ ಬಾದಾಮಿಯಲ್ಲಿ ಬಾಡಿಗೆ ಮನೆಯೇ ಸಿಗಲಿಲ್ಲ. ಸ್ಥಳೀಯ ಕಾಂಗ್ರೆಸ್ ನಾಯಕರು ಮೂರು ಮನೆ ತೋರಿಸಿದರಾದರೂ ಸಿದ್ದರಾಮಯ್ಯ ಅದಕ್ಕೆ ಓಕೆ ಅಂದಿಲ್ಲ. ಶಂಕರಗೌಡ ಕೆಳಗಿನಮನಿ ಮತ್ತು ಮಹೇಶ್ ಹೊಸಗೌಡ್ರ ಉಚಿತ ಮನೆ ನೀಡಲು ಮುಂದಾದ್ರೂ ಸಿದ್ದರಾಮಯ್ಯ ಒಪ್ಪಿಕೊಂಡಿಲ್ಲ. ಕೊನೆಗೆ ಬಾಗಲಕೋಟೆ ಪಟ್ಟಣದಲ್ಲಿರುವ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಇರಲು ಸಿದ್ದರಾಮಯ್ಯ ಓಕೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ನವೀಕರಣ ಕಾರ್ಯ ನಡೆಯುತ್ತಿದೆ.