Tag: Housing Scheme

  • ವಸತಿ ಮನೆ ಬಿಡುಗಡೆಗೆ ಲಂಚ ನೀಡದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ

    ವಸತಿ ಮನೆ ಬಿಡುಗಡೆಗೆ ಲಂಚ ನೀಡದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ

    ಕಲಬುರಗಿ: ವಸತಿ ಯೋಜನೆಯಲ್ಲಿ (Housing scheme) ಮಂಜೂರಾಗಿದ್ದ ಮನೆಯ ಲಂಚದ ವಿಚಾರದಲ್ಲಿ ವ್ಯಕ್ತಿಯೊಬ್ಬ ಕೊಲೆಯಾದ ಪ್ರಕರಣ ಜೇವರ್ಗಿ (Jevargi) ತಾಲೂಕಿನ ಆಂದೋಲ (Andola) ಗ್ರಾಮದಲ್ಲಿ ನಡೆದಿದೆ.

    ಬಸವರಾಜ್ (35) ಎಂಬಾತನಿಗೆ ವಸತಿ ಯೋಜನೆ ಅಡಿ ಮನೆ ಮಂಜೂರಾಗಿತ್ತು. ಮನೆಗೆ ಹಣ ಬಿಡುಗಡೆ ಮಾಡಲು ಗ್ರಾಮ ಪಂಚಾಯಿತಿ (Gram Panchayat) ಉಪಾಧ್ಯಕ್ಷೆ ಹಾಗೂ ಆಕೆಯ ಪತಿ 25 ಸಾವಿರ ರೂ. ಲಂಚ (Bribe) ನೀಡುವಂತೆ ಕೇಳಿದ್ದರು. ಇದನ್ನೂ ಓದಿ: ತಂದೆ ಮನೆಯಿಂದ ಕಾಸ್ಟ್ಲಿ ವಾಚ್ ತರದಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ!

    ಇದರಿಂದ ಬೇಸರಗೊಂಡಿದ್ದ ಬಸವರಾಜ್ ಲಂಚದ ವಿಚಾರವನ್ನು ಊರಿನವರ ಮುಂದೆ ಹೇಳಿಕೊಂಡಿದ್ದ. ಇದರಿಂದ ಕೋಪಗೊಂಡ ಗ್ರಾಮ ಪಂಚಾಯತಿ ಉಪಾಧ್ಯಕ್ಷೆಯ ಪತಿ ಸಿದ್ದಪ್ಪ ಹಾಗೂ ಮಗ ಗುರುರಾಜ್, ಬಸವರಾಜ್‍ನ ಎದೆ ಹಾಗೂ ಮರ್ಮಾಂಕ್ಕೆ ಒದ್ದು ಕೊಲೆ ಮಾಡಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ

  • ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತು – 7 ಜನ ಪಿಡಿಓಗಳು ಅಮಾನತು

    ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತು – 7 ಜನ ಪಿಡಿಓಗಳು ಅಮಾನತು

    ಬೀದರ್ : ಭಾಲ್ಕಿ ತಾಲೂಕಿನ ವಿವಿಧ ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತಾದ ಹಿನ್ನಲೆಯಲ್ಲಿ 7 ಜನ ಪಿಡಿಓಗಳನ್ನು ಅಮಾನತು ಮಾಡಲಾಗಿದೆ.

    ಬೀದರ್‍ನ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ 2015 ರಿಂದ 2019ರವರೆಗೆ ಅನುಷ್ಠಾನಗೊಂಡ ವಿವಿಧ ವಸತಿ ಯೋಜನೆಯಲ್ಲಿ ಅಕ್ರಮ ಸಾಬೀತಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಸಿಇಓ ಗ್ಯಾನೇಂದ್ರಕುಮಾರ್ ಈ ಆದೇಶ ಹೊರಡಿಸಿದ್ದಾರೆ.

    ಬಾಳೂರು ಗ್ರಾಮ ಪಂಚಾಯತಿ ಪಿಡಿಓ ಸಂಗಮೇಶ ಸಾವಳೆ, ಬೀರಿ ಗ್ರಾಮಪಂಚಾಯತಿ ಪಿಡಿಓ ಮಲ್ಲೇಶ್ ಮಾರುತಿ, ಜ್ಯಾಂತಿ ಗ್ರಾಮಪಂಚಾಯತಿ ಪಿಡಿಓ ರೇವಪ್ಪ, ಮೊರಂಬಿ ಗ್ರಾಮಪಂಚಾಯತಿ ಪಿಡಿಓ ರೇಖಾ, ತಳವಾಡ ಕೆ ಗ್ರಾಮಪಂಚಾಯತಿ ಪಿಡಿಓ ಚಂದ್ರಶೇಖರ, ವರವಟ್ಟಿ ಗ್ರಾಮಪಂಚಾಯತಿ ಪಿಡಿಓ ಸಂತೋಷ್, ಎಣಕೂರು ಗ್ರಾಮಪಂಚಾಯತಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

    ವಸತಿ ಯೋಜನೆಯ ಮನೆಗಳನ್ನು ನಿಜವಾದ ಫಲಾನುಭವಿಗಳಿಗೆ ಹಂಚಿಕೆ ಮಾಡದೇ, ತಮ್ಮ ಬೆಂಬಲಿಗರಿಗೆ ಖಂಡ್ರೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ಅಕ್ರಮ ಮಾಡಿದ್ದಾರೆ ಎಂದು ಸಂಸದ ಭಗವಂತ್ ಖೂಬಾ ಆರೋಪ ಮಾಡಿದ್ದರು.

    ಸಂಸದರ ಆರೋಪ ಹಿನ್ನೆಲೆ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಭಾಲ್ಕಿಗೆ ಬಂದು ತನಿಖೆ ಮಾಡಿತ್ತು. ಒಟ್ಟು 26 ಸಾವಿರ ವಸತಿಗಳಲ್ಲಿ 9 ಸಾವಿರ ವಸತಿಗಳಲ್ಲಿ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿತ್ತು. ರಾಜ್ಯ ತಂಡ ತನಿಖೆ ಮಾಡಿ 8 ತಿಂಗಳ ಬಳಿಕ ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಂಡಿದೆ.

  • ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

    ಬಡವರಿಗಾಗಿ ಈ ವರ್ಷದಲ್ಲಿ 50 ಸಾವಿರ ಮನೆಗಳ ನಿರ್ಮಾಣ – ಸೋಮಣ್ಣ ಭರವಸೆ

    ಬೆಂಗಳೂರು: ಬಡವರಿಗೆ ಸೂರು ಕಲ್ಪಿಸುವ ಸಲುವಾಗಿ ವರ್ಷಾಂತ್ಯದ ವೇಳೆಗೆ 50 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

    ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಅಗ್ರಹಾರಪಾಳ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರು ಈ ಬಗ್ಗೆ ಭರವಸೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯ ಕಾಮಗಾರಿಗೆ ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ 600 ಕೋಟಿ ರೂ. ಅನುದಾನ ನೀಡಿದ್ದರೂ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಚಾಲನೆ ಸಿಗದೆ, ಈ ಯೋಜನೆಯು ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ವಸತಿ ಯೋಜನೆಯ ಭಾಗವಾಗಿ ಇಂದು 843 ಬಹುಮಹಡಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಕನಿಷ್ಟ 50 ಸಾವಿರ ಮನೆ ನಿರ್ಮಾಣ ಮಾಡಿ ಬಡವರಿಗೆ ಹಸ್ತಾಂತರ ಮಾಡಲಾಗುವುದು. ಯಲಹಂಕ ಕ್ಷೇತ್ರದಲ್ಲಿ 3 ಸಾವಿರ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

    ಸರ್ಕಾರದಿಂದ ಕಟ್ಟುತ್ತಿರುವ ಆಸ್ಪತ್ರೆ, ಆಟದ ಮೈದಾನ, ಕೊಳಚೆ ನೀರು ಸಂಸ್ಕರಣಾ ಘಟಕ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸಮುಚ್ಚಯಗಳಲ್ಲಿ ಒದಗಿಸುವ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷಿ ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಲ್ಲಿ ಲಭ್ಯವಿರುವ ಸುಮಾರು 4 ಲಕ್ಷ ರೂ. ಅನುದಾನ ಹಾಗೂ ಬ್ಯಾಂಕ್‍ಗಳಲ್ಲಿ 2 ಲಕ್ಷ ರೂ. ಸಾಲ ಸೌಲಭ್ಯ ಒದಗಿಸುವ ಮೂಲಕ ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಬಡವರ ಕನಸನ್ನು ನನಸು ಮಾಡಲು ಬದ್ಧವಿರುವುದಾಗಿ ತಿಳಿಸಿದರು.

    ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮಾತನಾಡಿ, ಯಲಹಂಕವನ್ನು ಗುಡಿಸಲು ರಹಿತ ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ಕಾರಣಾಂತರಗಳಿಂದ ಮನೆ ಬಡವರಿಗೆ ನೀಡಲು ಸಾಧ್ಯವಾಗಿರಲಿಲ್ಲ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಕ್ಷೇತ್ರದ, ಕುಕ್ಕನಹಳ್ಳಿ, ತೋಟಗೆರೆ, ಪಿಳ್ಳಹಳ್ಳಿ, ಲಕ್ಷ್ಮಿಪುರ, ಬಿಳಿಜಾಜಿ, ದಾಸನಪುರ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಕ್ಷೇತ್ರಕ್ಕೆ ತರುವುದಾಗಿ ಭರವಸೆ ನೀಡಿದರು.

    ಜಿಲ್ಲಾಧಿಕಾರಿ ಶಿವಮೂರ್ತಿ, ರಾಜೀವ್ ಗಾಂಧಿ ವಸತಿ ನಿಗಮ ನಿ. ಎಂಡಿ ಡಾ.ರಾಮ ಪ್ರಸಾದ್ ಮನೋಹರ್, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ.ಮರಿಸ್ವಾಮಿ, ಜಿ.ಪಂ ಸದಸ್ಯ ರವಿಕುಮಾರ್, ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಶಿವರಾಜ್, ಗೋಪಾಲಪುರ ಗ್ರಾ.ಪಂ ಅಧ್ಯಕ್ಷ ಟಿ.ಎಂ ಬಸವೇಗೌಡ ಸೇರಿ ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷ ಹನುಮಯ್ಯ ಇನ್ನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಮನೆಗಳು ಹೇಗಿರಲಿವೆ?
    ಸುಮಾರು 5 ಎಕ್ರೆ ಜಮೀನಿನಲ್ಲಿ ಜಿ+3 ಮಾದರಿಯಲ್ಲಿ ನಿರ್ಮಿಸುತ್ತಿರುವ ವಸತಿ ಸಮುಚ್ಚಯದಲ್ಲಿ 836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ಮನೆಯನ್ನು 30 ಚ.ಮೀ ವಿಸ್ತೀರ್ಣದಲ್ಲಿ ಒಂದು ಹಾಲ್, ಬೆಡ್ ರೂಂ, ಅಡುಗೆಮನೆ ಸೇರಿದಂತೆ ಪ್ರತ್ಯೇಕ ಸ್ಥಾನದ ಮನೆ, ಶೌಚಾಲಯ, ಕಾಂಕ್ರೀಟ್ ಗೋಡೆಗಳು, ನೆಲಹಾಸಿಗೆಗೆ ವೆಟ್ರಿಫೈಡ್ ಟೈಲ್ಸ್, ಗ್ರಾನೈಟ್ ಬಳಸಿ ಸುಸಜ್ಜಿತವಾಗಿ ನಿರ್ಮಿಸಲಾಗುತ್ತಿದೆ. ಜೊತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಪಂಪ್ ರೂಂ, ಮಳೆ ನೀರು ಕೊಯ್ಲು ಮುಂತಾದ ವ್ಯವಸ್ಥೆಯನ್ನು ಕೂಡ ಒದಗಿಸಲಾಗುತ್ತಿದೆ.

  • ಕುಂಬಳಕಾಯಿ ಕಳ್ಳ ಅಂದ್ರೆ ಖಂಡ್ರೆ ಹೆಗಲು ಮುಟ್ಕೊಂಡು ನೋಡ್ತಾರೆ- ಖೂಬಾ

    ಕುಂಬಳಕಾಯಿ ಕಳ್ಳ ಅಂದ್ರೆ ಖಂಡ್ರೆ ಹೆಗಲು ಮುಟ್ಕೊಂಡು ನೋಡ್ತಾರೆ- ಖೂಬಾ

    ಬೀದರ್: ಕುಂಬಳಕಾಯಿ ಕಳ್ಳ ಎಂದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳುತ್ತಾರೆ ಎಂದು ಸಂಸದ ಭಗವಂತ್ ಖೂಬಾ ತಿರುಗೇಟು ನೀಡಿದ್ದಾರೆ.

    ಪಕ್ಷ ಕಚೇರಿಯಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡ್ರೆ ತಮ್ಮ ಕ್ಷೇತ್ರದಲ್ಲಿ ಉಳ್ಳವರಿಗೆ ಮಾತ್ರ ವಸತಿ ಮನೆಗಳನ್ನು ನೀಡಿದ್ದು, ಇನ್ನೂ ಕೆಲವರಿಗೆ ಮನೆ ನೀಡದೆ ಹಣ ಕೊಳ್ಳೆ ಹೊಡೆದಿದ್ದಾರೆ. ನಾನು ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೆನೆ ಎಂದು ಹೇಳುತ್ತಾರೆ. ತಾವು ಸಿಕ್ಕಿಹಾಕಿಕೊಳ್ಳುತ್ತಾರೆ ಎಂಬ ಭಯಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

    ಕಳೆದ ಬಾರಿ ವಸತಿ ಸಚಿವ ವಿ.ಸೋಮಣ್ಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಸಂಸದ ಖೂಬಾ ಭಾಲ್ಕಿ ಕ್ಷೇತ್ರದ ವಸತಿ ಯೋಜನೆಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಈಶ್ವರ್ ಖಂಡ್ರೆ, ವಸತಿ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಸಾಬೀತಾದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದರು.

  • ವಿಫಲವಾದ ಕೆಐಎಡಿಬಿ ವಸತಿ ಯೋಜನೆಗೆ ಸರ್ಕಾರರಿಂದ ಮರುಜೀವ?

    ವಿಫಲವಾದ ಕೆಐಎಡಿಬಿ ವಸತಿ ಯೋಜನೆಗೆ ಸರ್ಕಾರರಿಂದ ಮರುಜೀವ?

    ರಾಯಚೂರು: ನಗರದ ಯರಮರಸ್ ಬಳಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಕೆಐಎಡಿಬಿ ವತಿಯಿಂದ ನಿರ್ಮಿಸಲಾಗಿರುವ ನೂರಾರು ಮನೆಗಳು ಉದ್ಘಾಟನೆಗೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿವೆ. ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಕೈಗಾರಿಕೆಗಳ ಕಾರ್ಮಿಕರು, ಉದ್ಯೋಗಸ್ಥರಿಗಾಗಿ ನಿರ್ಮಿಸಿದ ವಿವಿಧ ಹಂತದ ನೂರಾರು ಮನೆಗಳು ಹಂಚಿಕೆಯಾಗದೆ ಹಾಗೇ ಉಳಿದಿವೆ. ಮನೆಗಳಲ್ಲಿ ಯಾರೂ ವಾಸಮಾಡದೇ ಅನೈತಿಕ ಚಟುವಟಿಕೆಗಳಿಗೆ ಪ್ರದೇಶ ಆಸರೆಯಾಗಿದೆ.

    ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಡಿ ಬರುವ ಕೆಐಎಡಿಬಿ ವತಿಯಿಂದ ಜಿಲ್ಲಾ ಕೈಗಾರಿಕಾ ಅಭಿವೃದ್ಧಿ ಕಾರ್ಯ ಮತ್ತು ರಾಯಚೂರಿನಲ್ಲಿ ವಿವಿಧ ಅಳತೆಯ ಹೌಸಿಂಗ್ ಪ್ಲಾಟ್‍ಗಳನ್ನು ನಿರ್ಮಾಣ ಮಾಡಿ ಈಗಾಗಲೇ 10 ವರ್ಷಗಳು ಕಳೆದಿದ್ದು, ಒಂದು ಮನೆಯನ್ನು ಹಂಚಿಕೆ ಮಾಡದೆ ವಿಳಂಬ ಮಾಡುತ್ತಿರುವುದರಿಂದ ವಸತಿ ಯೋಜನೆ ಸಂಪೂರ್ಣ ವಿಫಲವಾಗಿದೆ. ಮನೆಗಳು ಹಂಚಿಕೆಯಾಗದೆ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ. ಓಪನ್ ಫ್ಲ್ಯಾಟ್ ಹಾಗೂ ಮನೆಗಳಿಗೆ ಮನಸೋಇಚ್ಚೆ ಅವೈಜ್ಞಾನಿಕ ದರ ನಿಗದಿ ಮಾಡಿದ್ದರಿಂದ ಖರೀದಿಗೆ ಯಾರೂ ಮುಂದೆ ಬಂದಿರಲಿಲ್ಲ. ದರ ಇಳಿಕೆಗೆ ಸಾಕಷ್ಟು ಬಾರಿ ವಿವಿಧ ಕಾರ್ಮಿಕ, ವಾಣಿಜ್ಯೋದ್ಯಮ ಸಂಘಗಳು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

    ರಸ್ತೆ, ವಿದ್ಯುತ್ ದೀಪ ಸೇರಿದಂತೆ ಕೆಲವಾರು ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಬಳಿಕವೂ ಫ್ಲ್ಯಾಟ್, ಮನೆಗಳನ್ನ ಹಂಚಿಕೆ ಮಾಡಿಲ್ಲ. 10 ವರ್ಷಗಳಾದ್ರೂ ಇನ್ನೂ ಕೆಲಸಗಳು ಅಪೂರ್ಣವಾಗಿರುವ ಹಿನ್ನೆಲೆ ಸರ್ಕಾರ ಈಗ ಎಚ್ಚೆತ್ತಿದೆ. ರಾಜ್ಯ ವಿಧಾನಸಭೆಯ ಅಂದಾಜುಗಳ ಸಮಿತಿ ರಾಯಚೂರಿಗೆ ಭೇಟಿ ನೀಡಲಿದ್ದು ಡಿಸೆಂಬರ್ 18 ರಂದು ಪರಿಶೀಲನೆ ನಡೆಸಲಿದೆ. ಮೂಲಭೂತ ಸೌಕರ್ಯಗಳು ಹಾಗೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಬಗ್ಗೆ ವೀಕ್ಷಣೆ ನಡೆಸಿ, ಸುರಾನಾ ಕೈಗಾರಿಕೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಿದೆ.

    ಸಮಿತಿಯ ಅಧ್ಯಕ್ಷ ಸಿ.ಎಂ. ಉದಾಸಿ. ಸಮಿತಿಯ ಸದಸ್ಯರಾದ ರಾಮಲಿಂಗಾರೆಡ್ಡಿ, ಅಮರೇಶಗೌಡ ಲಿಂಗನಗೌಡ ಪಾಟೀಲ ಬಯ್ಯಾಪುರ, ಸತೀಶ್ ಎಲ್.ಜಾರಕಿಹೊಳಿ, ಕೌಜಲಗಿ ಮಹಾಂತೇಶ ಶಿವಾನಂದ, ಶರಣಬಸಪ್ಪಗೌಡ ದರ್ಶನಾಪುರ, ಅಭಯ್ ಪಾಟೀಲ್ ಸೇರಿ ಇತರರು ಪರಿಶೀಲನೆ ನಡೆಸಿ ಚರ್ಚೆ ಮಾಡಲಿದ್ದಾರೆ.

  • ಪಿತೃಪಕ್ಷ ಇತ್ತು, ಮನೆ ಕಟ್ಟಿಸಿಕೊಡೋಕೆ ಆಗ್ಲಿಲ್ಲ- ಡಿಸಿಎಂ ಮುಂದೆ ಪುಂಗಿದ ಅಧಿಕಾರಿ

    ಪಿತೃಪಕ್ಷ ಇತ್ತು, ಮನೆ ಕಟ್ಟಿಸಿಕೊಡೋಕೆ ಆಗ್ಲಿಲ್ಲ- ಡಿಸಿಎಂ ಮುಂದೆ ಪುಂಗಿದ ಅಧಿಕಾರಿ

    ತುಮಕೂರು: ವಸತಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ಪಿತೃಪಕ್ಷ ಅಡ್ಡಿಯಾಗಿದೆ ಅಂತ ಕೆಡಿಪಿ ಸಭೆಯಲ್ಲಿ ಅಧಿಕಾರಿಯೊಬ್ಬರು ಹೇಳಿರುವುದು ಹಾಸ್ಯಾಸ್ಪದವಾಗಿತ್ತು.


    ಮಧುಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಮೋಹನಕುಮಾರ್ ಅವರು ಶುಕ್ರವಾರ ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಹೇಳಿಕೆ ನಿಡಿದ್ದರು, ಅಧಿಕಾರಿಯ ಹೇಳಿಕೆಯಿಂದ ಡಿಸಿಎಂ ಪರಮೇಶ್ವರ್ ಅವರು ಕೆಂಡಾಮಂಡಲರಾಗಿದ್ದಾರೆ.

    ವಿವಿಧ ವಸತಿ ಯೋಜನೆಯಡಿ 35,410 ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿತ್ತು. ಆದ್ರೆ ಇಲ್ಲಿಯವರೆಗೂ 3118 ಮನೆಯಷ್ಟನ್ನೇ ನಿರ್ಮಿಸಲಾಗಿದೆ. 12240 ಮನೆಗಳು ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಡಿಸಿಎಂ ಜಿ.ಪರಮೇಶ್ವರ್ ಅವರು ಮನೆ ನಿರ್ಮಾಣ ವಿಳಂಬಕ್ಕೆ ಕಾರಣ ಕೇಳಿದ್ದಾರೆ. ಡಿಸಿಎಂ ಪ್ರಶ್ನೆಗೆ ಪಿತೃಪಕ್ಷ ಅಂತ ಅಧಿಕಾರಿ ಉತ್ತರ ಕೊಟ್ಟಿದ್ದಾರೆ. ಅಧಿಕಾರಿ ಮಾತು ಕೇಳಿ ಸಭೆ ನಗೆ ಗಡಲಿನಲ್ಲಿ ತೇಲಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv