Tag: howrah

  • ಹೌರಾ ಬಳಿ ಹಳಿ ತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು

    ಹೌರಾ ಬಳಿ ಹಳಿ ತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಬಳಿ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ನಡೆದಿದೆ.

    ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ನಲ್ಪುರದಲ್ಲಿ ಸಾಪ್ತಾಹಿಕ ವಿಶೇಷ ರೈಲು ಹಳಿತಪ್ಪಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳ ಬಗ್ಗೆ ವರದಿಯಾಗಿಲ್ಲ.

    ಇಂದು ಮುಂಜಾನೆ 5:31 ಕ್ಕೆ ಖರಗ್‌ಪುರ ವಿಭಾಗದ ನಲ್ಪುರ್ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದಾಗ 22850 ಸಿಕಂದರಾಬಾದ್-ಶಾಲಿಮಾರ್ ವೀಕ್ಲಿ ಎಕ್ಸ್‌ಪ್ರೆಸ್‌ನ ಪಾರ್ಸೆಲ್ ವ್ಯಾನ್ ಮತ್ತು ಎರಡು ಕೋಚ್‌ಗಳು ಹಳಿತಪ್ಪಿವೆ. ಅವಘಡದಲ್ಲಿ ಅದೃಷ್ಟವಶಾತ್‌ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಆಗ್ನೇಯ ರೈಲ್ವೆ ತಿಳಿಸಿದೆ.

    ರೈಲು ಹಳಿ ತಪ್ಪಿದ ಸ್ಥಳಕ್ಕೆ ಸಂತ್ರಗಚ್ಚಿ ಮತ್ತು ಖರಗ್‌ಪುರದಿಂದ ವೈದ್ಯಕೀಯ ನೆರವು ಒದಗಿಸಲಾಗಿದೆ. ಅವಘಡದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

  • ಕಾಳಿ ಪೂಜೆ ವೇಳೆ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಬಲಿ

    ಕಾಳಿ ಪೂಜೆ ವೇಳೆ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಬಲಿ

    ಕೋಲ್ಕತ್ತಾ (ಹೌರಾ): ಪಶ್ಚಿಮ ಬಂಗಾಳದ (West Bengal) ಹೌರಾದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಹೌರಾದ (Howrah) ಉಲುಬೇರಿಯಾ ಪಟ್ಟಣದಲ್ಲಿ ಕಾಳಿ ಪೂಜೆ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9, 14 ಮತ್ತು 2.5 ವರ್ಷದ ಮೂವರು ಮಕ್ಕಳು ಸಾವನ್ನಪ್ಪಿರುವುದಾಗಿ ಅಗ್ನಿಶಾಮಕ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ

    ಬೆಂಕಿ ಅವಘಡ ಸಂಭವಿಸಿದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿದವು. ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಜೀವ ತೆತ್ತಿದ್ದರು. ಬೆಂಕಿ ನಂದಿಸಿದ ಬಳಿಕ ಸಿಬ್ಬಂದಿ ಹೌರಾದ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಘೋಷ್ ಅವರು ಮೂರು ಮಕ್ಕಳ ಸುಟ್ಟ ದೇಹಗಳನ್ನು ಹೊರಕ್ಕೆ ತಂದರು. ಸದ್ಯ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

    ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ:
    ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ ಹೊರತಾಗಿಯೂ ಆ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಬಗ್ಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದವರು ತಮ್ಮ ಕೆಲಸವನ್ನ ಪರಿಣಾಮಕಾರಿಯಾಗಿ ಮಾಡದೇ ಇದ್ದಿದ್ದರೆ ಘಟನೆಯಲ್ಲಿ ಹೆಚ್ಚಿನ ಮನೆಗಳು ಸುಟ್ಟುಹೋಗುವ ಸಾಧ್ಯತೆಯಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಮೆರಿಕಾ ಚುನಾವಣೆಯಲ್ಲೂ ಹಿಂದೂ ಅಸ್ತ್ರ ಪ್ರಯೋಗ – ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಟ್ರಂಪ್

  • ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಹಳಿ ತಪ್ಪಿದ ರೈಲಿಗೆ ಯಶವಂತಪುರದಿಂದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ (Yeshwantpur) ಹೌರಾದೆಡೆಗೆ (Howrah) ಸಾಗುತ್ತಿದ್ದ ಮತ್ತೊಂದು ರೈಲು (Train) ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೇ ವಕ್ತಾರ ಅಮಿತಾಬ್ ಶರ್ಮಾ, ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ

    ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 50 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾದ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

    ಸಹಾಯವಾಣಿ ಸಂಖ್ಯೆಗಳು:
    ಹೌರಾ: 033-26382217
    ಖರಗ್‌ಪುರ: 8972073925 & 9332392339
    ಬಾಲಸೋರ್: 8249591559 & 7978418322
    ಶಾಲಿಮಾರ್: 9903370746

  • ಅಗಂತುಕರ ಗುಂಡಿಗೆ ಖ್ಯಾತ ನಟಿ ರಿಯಾ ಕುಮಾರಿ ಬಲಿ

    ಅಗಂತುಕರ ಗುಂಡಿಗೆ ಖ್ಯಾತ ನಟಿ ರಿಯಾ ಕುಮಾರಿ ಬಲಿ

    ಟಿಯರ ಸಾವಿನ ಸರದಿ ಮುಂದುವರಿದಿದೆ. ಮೊನ್ನೆಯಷ್ಟೇ ಹಿಂದಿ ಕಿರುತೆರೆಯ ನಟಿ ತುನಿಷಾ ಶೂಟಿಂಗ್ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಯೂಟ್ಯೂಬ್ ಕಲಾವಿದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಜಾರ್ಖಂಡ್ ರಾಜ್ಯದ ಹೆಸರಾಂತ ನಟಿ ರಿಯಾ ಕುಮಾರಿಯನ್ನು ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಸುದ್ದಿ ಜಾರ್ಖಂಡ್ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

    ಈ ಕುರಿತು ಸ್ವತಃ ನಟಿಯ ಪತಿಯೇ ಹೇಳಿಕೆ ನೀಡಿದ್ದು, ತಮ್ಮ ಪುತ್ರಿ ಮತ್ತು ಪತ್ನಿ ಜೊತೆ ರಾಂಚಿಯಿಂದ ಕೊಲ್ಕತ್ತಾಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಪಶ್ಚಿಮ ಬಂಗಾಳದ ಹೌರಾದಲ್ಲಿ ವಿಶ್ರಾಂತಿಗಾಗಿ ಮಹಿಷ್ರೇಕಾ ಬ್ರಿಡ್ಜ್‌ ಬಳಿ ಕಾರು ನಿಲ್ಲಿಸಿದ್ದಾರೆ. ಆಗ ಬೈಕಿನಲ್ಲಿ ಬಂದ ಮೂವರು ದರೋಡೆಗೆ ಯತ್ನಿಸಿದ್ದಾರೆ. ದರೋಡೆಕೋರರನ್ನು ತಡೆಯಲು ಬಂದಿದ್ದ ರಿಯಾ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ

    ಕೂಡಲೇ ರಿಯಾ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿಲ್ಲ. ಕಿವಿಯೊಳಗೆ ಬುಲೆಟ್ ಹೊಕ್ಕಿದ್ದು, ತೀವ್ರ ಗಾಯವಾದ ಹಿನ್ನೆಲೆಯಲ್ಲಿ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪತಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ.

    ಇದೇ ವೇಳೆ ಗಲಭೆ ಪೀಡಿತ ಪ್ರದೇಶವಾದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ನನ್ನು ಪೊಲೀಸರು ಬಂಧಿಸಿ, ಸುಮಾರು ನಾಲ್ಕು ಗಂಟೆಗಳ ಬಳಿಕ ಬಿಡುಗಡೆಗೊಳಿಸಿದ್ದಾರೆ. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪತ್ರಿಭಟನೆ ನಡೆಯುತ್ತಿದ್ದರಿಂದ ಮಜುಂದಾರ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ಬಿಡುಗಡೆಯಾದ ಬಳಿಕ ಮಜುಂದಾರ್ ಇತರ ಬಿಜೆಪಿ ನಾಯಕರೊಂದಿಗೆ ಸೇರಿ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಹೌರಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಬಂಗಾಳ ರಾಜ್ಯದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿದ್ದಾರೆ.

    ಜೆ.ಪಿ.ನಡ್ಡಾ ಖಂಡನೆ: ಮಜುಂದಾರ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಖಂಡಿಸಿದ್ದಾರೆ. ಬಂಗಾಳ ಸರ್ಕಾರವು ಅಪರಾಧಿಗಳ ಉತ್ಸಾಹವನ್ನು ಹೆಚ್ಚಿಸುತ್ತಿದೆ. ಸಮಾಜ ವಿರೋಧಿಗಳಿಗೆ ಆಶ್ರಯ ನೀಡುತ್ತಿದೆ. ಮತ್ತೊಂದೆಡೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರ ಹಕ್ಕುಗಳ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಹೌರಾ ಜಿಲ್ಲೆಯ ಪಾಂಚ್ಲಾದಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

    ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೌರಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆಲ ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಿವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

  • ಕ್ರಿಕೆಟ್‍ನಲ್ಲಿ 250 ರೂ. ಬೆಟ್ ಗೆದ್ದು ಪ್ರಾಣವನ್ನೇ ಕಳ್ಕೊಂಡ 12ರ ಬಾಲಕ

    ಕ್ರಿಕೆಟ್‍ನಲ್ಲಿ 250 ರೂ. ಬೆಟ್ ಗೆದ್ದು ಪ್ರಾಣವನ್ನೇ ಕಳ್ಕೊಂಡ 12ರ ಬಾಲಕ

    ಕೋಲ್ಕತ್ತಾ: 12 ವರ್ಷ ವಯಸ್ಸಿನ ಬಾಲಕನೊಬ್ಬ ತನ್ನ ಸ್ನೇಹಿತನ ಜೊತೆ ಕ್ರಿಕೆಟ್ ಆಟವಾಡಿ ಪಂದ್ಯ ಕಟ್ಟಲಾಗಿದ್ದ 250 ರೂ. ಗೆದ್ದು ಕೊನೆಗೆ ತನ್ನ ಸ್ನೇಹಿತನಿಂದಲೇ ಹತ್ಯೆಗೀಡಾದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಇಲ್ಲಿನ ಹೌರಾ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಟ್ಟಿದ್ದ ಬೆಟ್ಟಿಂಗ್ ಹಣ ನೀಡಲು ನಿರಾಕರಿಸಿ ಬಾಲಕ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಸದ್ಯಕ್ಕೆ ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದು, ಹತ್ಯೆಗೀಡಾದ ಬಾಲಕನ ಮೃತದೇಹ ಶನಿವಾರದಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಹಾಗೂ ಮೃತ ಬಾಲಕ ಇಲ್ಲಿನ ದಸ್ಪಾರಾದ ನಿವಾಸಿಗಳಾಗಿದ್ದು ಕ್ರಿಕೆಟ್ ಆಟವಾಡುವಾಗ 250 ರೂ. ಪಂದ್ಯ ಕಟ್ಟಿದ್ದರು. 12 ವರ್ಷದ ಬಾಲಕ ಪಂದ್ಯ ಗೆದ್ದಿದ್ದು, ಹಣ ಕೊಡುವಂತೆ ಕೇಳಿದ್ದ. ಆದ್ರೆ ಆರೋಪಿ ಬಾಲಕ ಹಣ ಕೊಡಲು ನಿರಾಕರಿಸಿದ್ದು, ಇಬ್ಬರ ಮಧ್ಯೆ ಜಗಳವಾಗಿತ್ತು.

    ಅವರು 250 ರೂ. ಬೆಟ್ ಕಟ್ಟಿದ್ದರು. ನನ್ನ ಮಗ ಪಂದ್ಯ ಗೆದ್ದು ಹಣಕ್ಕೆ ಒತ್ತಾಯಿಸಿದ. ಆದ್ರೆ ಆತ ಹಣ ಕೊಡಲು ನಿರಾಕರಿಸಿದ. ನಂತರ ನನ್ನ ಮಗನನ್ನು ಹತ್ತಿರದ ತೋಟವೊಂದಕ್ಕೆ ಕರೆದುಕೊಂಡು ಹೋಗಿ ಅಮಾನವೀಯವಾಗಿ ಥಳಿಸಿದ. ಇಟ್ಟಿಗೆಯಿಂದ ನನ್ನ ಮಗನ ತಲೆಗೆ ಹೊಡೆದ. ಆಗ ಆತನಿಗೆ ಪ್ರಜ್ಞೆ ತಪ್ಪಿತು. ನಂತರ ನನ್ನ ಮಗನನ್ನು ಕೊಂದ ಎಂದು ಮೃತ ಬಾಲಕನ ತಂದೆ ಕನ್ಹೈಯ್ಯ ಪಾಸ್ವಾನ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಆರೋಪಿಯು ಬಾಲಕನನ್ನು ಕೊಂದ ನಂತರ ಮೃತದೇಹವನ್ನು ಗುರುತು ಸಿಗದಂತೆ ಮಾಡಲು ಯತ್ನಿಸಿದ್ದ. ದೇಹವನ್ನು ಎಳೆದುಕೊಂಡು ಹೋಗಿ ಕಾಡು ಪ್ರದೇಶದಲ್ಲಿ ಗಿಡ ಮತ್ತು ಇಟ್ಟಿಗೆಯಿಂದ ಮುಚ್ಚಿಟ್ಟಿದ್ದ ಎಂದು ವರದಿಯಾಗಿದೆ.

    ಆರೋಪಿ ಹಾಗೂ ಆತನ ಸ್ನೇಹಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಅವರಲ್ಲಿ ಒಬ್ಬ ಕೊಲೆ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ನನ್ನ ಮಗ ವಾಪಸ್ ಸಿಗುವುದಿಲ್ಲ. ಆದ್ರೆ ಕೊಲೆಗಾರನಿಗೆ ಶಿಕ್ಷೆಯಾಗಬೇಕು ಎಂದು ಪಾಸ್ವಾನ್ ಹೇಳಿದ್ದಾರೆ.