Tag: hubali

  • ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ: ಲಕ್ಷ್ಮಣ್ ಸವದಿ

    ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ: ಲಕ್ಷ್ಮಣ್ ಸವದಿ

    -ಸರ್ಕಾರದಿಂದ ನೌಕರರ ಸಂಬಳಕ್ಕಾಗಿ 1,746 ಕೋಟಿ ನೆರವು

    ಹುಬ್ಬಳ್ಳಿ : ಕೊರೊನಾ ಲಾಕ್ ಡೌನ್‍ನಿಂದಾಗಿ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಿಂದ 3700 ಕೋಟಿ ನಷ್ಟ ಸಂಭವಿಸಿದೆ. ಇಂತಹ ಸಂದರ್ಭದಲ್ಲಿ ಸಂಸ್ಥೆಯ 1.30 ಲಕ್ಷ ನೌಕರಿಗೆ ತೊಂದರೆಯಾಗಬಾರದು ಎಂದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರ ಸಂಬಳಕ್ಕಾಗಿ 1,746 ಕೋಟಿ ನೆರವು ನೀಡಲಾಗಿದೆ. ನೌಕರರ ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

    ಕಲಘಟಗಿ ನೂತನ ಬಸ್ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾರಿಗೆ ಸಚಿವನಾಗಿ ಅಧಿಕಾರಿ ಸ್ವೀಕರಿಸದ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ನಷ್ಟದ ಪ್ರಮಾಣ 3000 ಕೋಟಿ ಇತ್ತು. ಸರ್ಕಾರದಿಂದ 2980 ಕೋಟಿ ಬರುವುದು ಬಾಕಿ ಇತ್ತು. ಇದರೊಂದಿಗೆ ಅನೀರಿಕ್ಷಿತ ಕೊರೊನಾ ಲಾಕ್ ಡೌನ್‍ನಿಂದಾಗಿ ನಷ್ಟದ ಪ್ರಮಾಣ ಹೆಚ್ಚಾಗಿದೆ. ಲಾಕ್ ಡೌನ್ ನಂತರ ಸಾರಿಗೆ ಸಂಚಾರ ಪುನಃ ಪ್ರಾರಂಭಿಸಲಾಗಿದೆ. ಪ್ರತಿದಿನ 1 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಲಾಕ್ ಡೌನ್ ಪ್ರಾರಂಭಕ್ಕೂ ಮುನ್ನ 4.20 ಕೋಟಿ ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಸಂಖ್ಯೆ ಇಳಿಕೆಯಿಂದಾಗಿ ಸಾರಿಗೆ ಆದಾಯ ಕುಂಠಿತವಾಗಿದೆ ಎಂದರು.

     

    ಇನ್ನೂ ಸಂಸ್ಥೆಯ 2,000 ಬಸ್‍ಗಳು 9 ಲಕ್ಷಕ್ಕೂ ಹೆಚ್ಚು ದೂರ ಕ್ರಮಿಸಿದ್ದು, ಅವುಗಳನ್ನು ನಿಷ್ಕ್ರಿಯ ಗೊಳಿಸಲಾಗುವುದು. ಹಳೆ ಬಸ್ ಗಳನ್ನು ಗುಜರಿಯವರಿಗೆ ಹರಾಜು ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಬಸ್ ಗಳನ್ನು ಬಳಸಿ ಸುಸಜ್ಜಿತ ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಲಾಗುವುದು. ನೌಕರರು ಯಾರದೋ ಮಾತು ಕೇಳಿ ಪ್ರತಿಭಟನೆಗೆ ಇಳಿಯಬಾರದು. ಇಲಾಖೆ ಕಾರ್ಮಿಕರ ಹಿತರಕ್ಷಣೆಗೆ ಬದ್ದವಾಗಿದೆ. ಅಧಿಕಾರಿಗಳಿಂದ ಕೆಳ ಹಂತದ ನೌಕರರಿಗೆ ಉಂಟಾಗುವ ಕಿರುಕುಳ ತಪ್ಪಿಸಬೇಕು. ವರ್ಗಾವಣೆ ನಿಯಮಗಳನ್ನು ಬದಲಿಸಲಾಗುವುದು. ವಾ.ಕ.ರ.ಸಾ.ಸಂಸ್ಥೆ ನಿವೃತ್ತಿ ನೌಕರರ ಉಪದಾನ ನಗದೀಕರಣ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲು ಅಲ್ಪಾವಧಿ ಸಾಲ ಪಡೆಯುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಸೂಚಿಸಿದರು.

    ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಅಂತರ ನಿಗಮ ವರ್ಗಾವಣೆ ಬಗ್ಗೆ ಸರಳ ನಿಯಮ ರೂಪಿಸಬೇಕು. ಪತಿ ಪತ್ನಿ ಪ್ರಕರಣಗಳಲ್ಲಿ ಆದ್ಯತೆ ಮೇರೆಗೆ ವರ್ಗಾವಣೆ ಮಾಡಬೇಕು. ಸುರಕ್ಷಿತ ಪ್ರಯಾಣ ಕೇಂದ್ರ ಸರ್ಕಾರದ ಗುರಿಯಾಗಿದೆ. ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ 80 ಸಾವಿರ ಕೋಟಿ ರೂಪಾಯಿಗಳ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 1.25 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದರಲ್ಲಿ 3200 ಕಿ.ಮೀ.ಗ್ರಾಮೀಣ ರಸ್ತೆ ನಿರ್ಮಿಸಲಾಗುವುದು. ಎಂದರು.

    ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಅವಳಿ ನಗರದಲ್ಲಿ ಬೇಂದ್ರೆ ಬಸ್ ಗಳ ಹಾವಳಿ ಹೆಚ್ಚಾಗಿರುವುದರಿಂದ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು 20 ಕೋಟಿ ರೂ. ನಷ್ಟವಾಗುತ್ತಿದೆ. ಸಾರಿಗೆ ಸಚಿವರು ಖಾಸಗಿ ಬಸ್ ಗಳ ಹಾವಳಿಯನ್ನು ತಡೆಯಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಬಸ್ ಓಡಾಟ ಹೆಚ್ಚಿಸಬೇಕು ಎಂದರು.

    ವಾಯುವ್ಯ ಕಾರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್ ಪಾಟೀಲ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಶಂಕರ ಪಾಟೀಲ ಮುನೇನಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಕೆ. ಸವದಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

  • ರಸ್ತೆಯಲ್ಲಿ ಹೋಗೋ ವೃದ್ಧರೇ ಇವರ ಟಾರ್ಗೆಟ್- ನಕಲಿ ಔಷಧಿ ಕೊಡಿಸಿ ಯಾಮಾರಿಸ್ತಿದ್ದ ಗ್ಯಾಂಗ್ ಅರೆಸ್ಟ್

    ರಸ್ತೆಯಲ್ಲಿ ಹೋಗೋ ವೃದ್ಧರೇ ಇವರ ಟಾರ್ಗೆಟ್- ನಕಲಿ ಔಷಧಿ ಕೊಡಿಸಿ ಯಾಮಾರಿಸ್ತಿದ್ದ ಗ್ಯಾಂಗ್ ಅರೆಸ್ಟ್

    ಹುಬ್ಬಳಿ: ಹುಬ್ಬಳ್ಳಿ ಧಾರವಾಡ ಜನರೇ ನೀವು ಔಷಧಿ ತೆಗೆದುಕೊಳ್ಳುವ ಮುನ್ನ ಸ್ವಲ್ಪ ಎಚ್ಚರವಿರಲಿ. ಯಾವುದು ನಕಲಿ, ಯಾವುದು ಅಸಲಿ ಎಂಬುದನ್ನು ಖಾತರಿ ಮಾಡಿಕೊಳ್ಳಿ. ಯಾಕೆಂದರೆ ವೃದ್ಧಾಪ್ಯವನ್ನೇ ಬಂಡವಾಳ ಮಾಡಿಕೊಂಡ ಕೆಲವರು ನಕಲಿ ಔಷಧಿ ಕೊಟ್ಟು ಯಾಮಾರಿಸುತ್ತಿದ್ದಾರೆ.

    ಹೌದು. ಇಂಥದೊಂದು ನಕಲಿ ಔಷಧಿ ಮಾರಾಟ ಮಾಡುವ ತಂಡ ನಿಮ್ಮನ್ನ ರಸ್ತೆಯಲ್ಲಿ ಮಾತನಾಡಿಸಿ ಯಾಮಾರಿಸುತ್ತಾರೆ. ಆದರೆ ಸದ್ಯ ಇವರನ್ನು ಧಾರವಾಡದಲ್ಲಿ ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ. ರಾಘವೇಂದ್ರ ಆಯುರ್ವೇದಿಕ್ ಎಂಬ ಹೆಸರಿಟ್ಟುಕೊಂಡಿರುವ ಈ ತಂಡ ನಕಲಿ ಔಷಧಿ ಮಾರಾಟ ಮಾಡುತ್ತಿತ್ತು. ವೃದ್ಧ ಜನರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅವರನ್ನು ಮಾತನಾಡಿಸಿ, ನಿಮಗೆ ಒಳ್ಳೆ ಔಷಧಿ ಕೊಡಿಸುತ್ತೇವೆ ಎಂದು ಹೇಳಿ ಲಕ್ಷ ಲಕ್ಷ ಹಣ ಪಡೆದು ಪಾರಾರಿಯಾಗುತ್ತಿದ್ದರು.

    ಇವರು ನೀಡಿದ ಔಷಧಿಯಿಂದ ವೃದ್ಧರಿಗೆ ಯಾವುದೇ ಪರಿಣಾಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಹಲವು ಜನರು ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು. ಈ ನಿಖರ ಮಾಹಿತಿ ಪಡೆದ ಪೊಲೀಸರು ಧಾರವಾಡದ ಅಂಗಡಿ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ವೆಂಕಟೇಶ ಹಾಗೂ ಎಲ್ಲಪ್ಪ ಎನ್ನುವವರನ್ನು ನಗರದ ದಾಸನಕೊಪ್ಪ ಕ್ರಾಸ್ ಬಳಿಯ ಅಂಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6 ಲಕ್ಷ ರೂ. ನಗದು ಹಾಗೂ ಚೆಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

  • ಮಗನ ಮೇಲೆ ಹಲ್ಲೆ ತಡೆಯಲು ಬಂದು ಅಪ್ಪನೇ ಹೆಣವಾದ್ರು- ಹುಬ್ಬಳ್ಳಿಯಲ್ಲೊಂದು ಘೋರ ಘಟನೆ

    ಮಗನ ಮೇಲೆ ಹಲ್ಲೆ ತಡೆಯಲು ಬಂದು ಅಪ್ಪನೇ ಹೆಣವಾದ್ರು- ಹುಬ್ಬಳ್ಳಿಯಲ್ಲೊಂದು ಘೋರ ಘಟನೆ

    ಹುಬ್ಬಳ್ಳಿ: ಬೈಕ್ ಕಳ್ಳತನ ಮಾಡಿದ್ದ ಮಗನ ಮೇಲೆ ಹಲ್ಲೆ ಮಾಡುವಾಗ ಅಡ್ಡ ಬಂದ ತಂದೆಯ ಕೊಲೆಯಾಗಿರುವ ಘಟನೆ ಹುಬ್ಬಳ್ಳಿಯ ಕೆಬಿ ನಗರದಲ್ಲಿ ನಡೆದಿದೆ.

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾರ್ ಚಾಲಕನಾಗಿ ಕೆಲಸ ಮಾಡುತಿದ್ದ 45 ವರ್ಷದ ತಿರುಪತಿ ಅವರ ಮಗ ಶ್ರೀನಿವಾಸ ಬೈಕ್‍ವೊಂದನ್ನು ಕಳ್ಳತನ ಮಾಡಿದ್ದ. ಇದೇ ಕಾರಣಕ್ಕೆ ಬೈಕ್ ಮಾಲೀಕ ಮತ್ತು ಆತನ ಸ್ನೇಹಿತರು ಸೇರಿ ಶ್ರೀನಿವಾಸನ ಮನೆಗೆ ಬಂದು ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

    ಈ ವೇಳೆ ಅಲ್ಲೆ ಇದ್ದ ತಂದೆ ಮಗನನ್ನು ಬಿಡಿಸಲು ಬಂದಾಗ ದುಷ್ಕರ್ಮಿಗಳು ಶ್ರೀನಿವಾಸನ ತಂದೆ ತಿರುಪತಿ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ತಿರುಪತಿ ಅವರನ್ನು ಕಿಮ್ಸ್ ಗೆ ದಾಖಲು ಮಾಡಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ತಿರುಪತಿ ಸಾವಿಗೀಡಾಗಿದ್ದಾರೆ.

    ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.