Tag: Hubballi Cylinder Blast

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ.

    ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸಕಾಲದಲ್ಲಿ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮ್ಸ್ ನಿರ್ದೇಶಕ ಎಸ್.ಎಫ್. ಕಮ್ಮಾರ ನೇತೃತ್ವದ ತಂಡ ಗಾಯಾಳುಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಡಿ.23ರಿಂದ 31 ರ ನಡುವೆ, ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ.

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    – ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರ

    ಹುಬ್ಬಳ್ಳಿ: ಕಳೆದ ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣ (Hubballi Cylinder Blast Case) ಇಡೀ ಹುಬ್ಬಳ್ಳಿ-ಧಾರವಾಡ ಜನರನ್ನು ಬೆಚ್ಚಿ ಬಿಳಿಸಿತ್ತು.

    ಈಶ್ವರ ದೇವಸ್ಥಾನದಲ್ಲಿ ಮಲಗಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಬೆಂಕಿಗೆ ಬೆಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಮೂವರು ಮೃತಪಟ್ಟಿದ್ರು. ಉಳಿದವರಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದು, ಸಾವಿನ ಸಂಖ್ಯೆ 6ಕ್ಕೇರಿದೆ. ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್

    30 ವರ್ಷದ ಶಂಕರ್, 22 ವರ್ಷದ ಮಂಜುನಾಥ ವಾಗ್ಮೋಡೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಶಂಕರ್ ಕಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ರು. ಬಾಲ್ಯದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥವಾಗಿದ್ದ ಶಂಕರ್ ದೊಡ್ಡಮ್ಮನ ಮನೆಯಲ್ಲಿ ವಾಸವಿದ್ದ. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

    ಇನ್ನೂ ಮಂಜುನಾಥ ವಾಗ್ಮೋಡೆಯ ದೇಹ ಶೇ.70ರಷ್ಟು ಸುಟ್ಟಿತ್ತು. 2ನೇ ವರ್ಷ ಡಿಪ್ಲೊಮಾ ಕೋರ್ಸ್ ವಿದ್ಯಾರ್ಥಿಯಾಗಿದ್ದ ಮಂಜುನಾಥ್. ಅಯ್ಯಪ್ಪ ಮಾಲೆ ಧರಿಸಿದ್ರು. ಒಂದು ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ರೂ ಇಂದು ಮೃತಪಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ಕೂಡ ತಮ್ಮ ಸಹೋದ್ಯೋಗಿಯ ಅಂತಿಮ ದರ್ಶನ ಪಡೆದು ಕಣ್ಣಿರು ಹಾಕಿದ್ದಾರೆ. ಪ್ರಕಾಶ್ ಬಾರಕೇರ್ ದೇಹ ಶೇ.91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ.74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ.25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

  • ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಹುಬ್ಬಳ್ಳಿ: ಸಿಲಿಂಡರ್‌ ಸೋರಿಕೆಯಿಂದ (Hubballi Cylinder Blast) ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ (Ayyappa Devotee) ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

    ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇವರು ಕಳೆದ ಏಳು ದಿನಗಳಿಂದ ಹುಬ್ಬಳ್ಳಿಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

    ಬಾಲ್ಯದಲ್ಲೇ ತಂದೆ-ತಾಯಿಯನ್ನ ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಶಂಕರ್‌ ಬೆಳೆದಿದ್ದ. ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದ. ಕಳೆದ ಭಾನುವಾರ ರಾತ್ರಿ ಸಿಲಿಂಡರ್‌ ಸೋರಿಕೆ ಅವಘಡ ನಡೆದಿತ್ತು.

    ಸಾಯಿನಗರದ ಅಚ್ಚವ್ವಳ ಕಾಲೊನಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಗ್ಯಾಸ್‌ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದಲ್ಲಿ 9 ಮಾಲಾಧಾರಿಗಳಿಗೆ ತೀವ್ರ ಗಾಯವಾಗಿತ್ತು. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ಇದುವರೆಗೆ 5 ಮಂದಿ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.