ಹುಬ್ಬಳ್ಳಿ: ಜಿಲ್ಲೆಯ ನಂದಗೋಕುಲ ಬಡಾವಣೆಯಲ್ಲಿ (Nandagokula) ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನೇಣಿಗೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮದುವೆಗೂ ಮುಂಚೆ ಪತಿ ಶಿವಾನಂದ ಬೇರೆ ಯುವತಿಯನ್ನು ಪ್ರೀತಿಸುತ್ತಿದ್ದ. ತನ್ನ ಹದಿಮೂರು ವರ್ಷಗಳ ಪ್ರೀತಿಯನ್ನು ಮುಚ್ಚಿಟ್ಟು ಶಿವಾನಂದ ಮದುವೆಯಾಗಿದ್ದ. ಈ ಕುರಿತು ಮದುವೆಯಾದ ಬಳಿಕ ಮೃತ ಜಯಶ್ರೀಗೆ ಮಾಹಿತಿ ನೀಡಿದ್ದ. ಈ ವಿಷಯವಾಗಿ ಇಬ್ಬರ ನಡುವೆ ಗಲಾಟೆಯಾಗಿತ್ತು. ಆದರೂ ಕೂಡ ಜಯಶ್ರೀ ಪತಿಯ ಜೊತೆಗೆ ಇರಲು ನಿರ್ಧರಿಸಿದ್ದಳು. ಸಾಯುವ ಮುನ್ನ ರಾತ್ರಿಯೂ ಕೂಡ ಇಬ್ಬರ ನಡುವೆ ಜಗಳವಾಗಿತ್ತು ಎಂದು ತಿಳಿದುಬಂದಿದೆ.
– ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ ಹಿಂದಿದೆ; ವಿಪಕ್ಷ ನಾಯಕ
ಹುಬ್ಬಳ್ಳಿ: ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸವಾಲ್ ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ನಕ್ಸಲರು ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ದಂಡುಪಾಳ್ಯ ರೀತಿ ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ (Dharmasthala Case) ಹಿಂದಿದೆ. ಕಾಂಗ್ರೆಸ್‌ನಲ್ಲಿ ಹಿಂದೂ ವಿರೋಧಿ ಮತ್ತು ಹಿಂದೂ ಪರ ಎಂಬ ಎರಡು ಗ್ಯಾಂಗ್ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್ ಕಾರ್ನರ್
ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ. ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್‌ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ. ಸಮೀರ್, ಪಿಎಫ್‌ಐ, ಎಸ್‌ಡಿಪಿ ಕಾರ್ಯಕರ್ತರಿಂದಲೇ ಸಿಎಂ ಆಫೀಸ್ ಸುತ್ತುವರಿದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ – ಅಭಿಮಾನಿಗಳೊಂದಿಗೆ ನಿಂತ ನಟ ಅನಿರುದ್ಧ
ಷಡ್ಯಂತ್ರ ಇದೆ ಅಂತ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಆದ್ರೆ ಸಿದ್ದರಾಮಯ್ಯನವರ ಬಾಯಲ್ಲಿ ಒಂದು ಮಾತು ಬಂದಿದ್ಯಾ? ಡಿ.ಕೆ ಶಿವಕುಮಾರ್ (DK Shivakumar) ಮ್ಯಾನೇಜ್ ಮಾಡ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಈ ಬಗ್ಗೆ ಒಡಕಿದೆ. ಪೊಲೀಸರೇ ಕೋರ್ಟ್ಗೆ ಅರ್ಜಿ ಹಾಕಿದ್ದಾರೆ. ಎಲ್ಲಾ ಕೇಸ್‌ಗೂ ಇದೇ ರೀತಿ ಮಾಡ್ತಾರಾ? ಒಂದೇ ಸಲ ನೂರು ಅಡಿ ಹೋಗಿ ತನಿಖೆ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗರ ರ‍್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ – ಡಿಕೆಶಿ
ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಇದರ ಹಿಂದೆ ದೊಡ್ಡ ಖತರ್ನಾಕ್ ಗ್ಯಾಂಗ್ ಇದೆ. ಯೂಟ್ಯೂಬ್ ಚಾನಲ್ ಮಾಡಲು ಎಲ್ಲಿಂದ ದುಡ್ಡು ಬಂದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂ ಧರ್ಮ ಬಿಜೆಪಿ ಸ್ವತ್ತಲ್ಲ ಅನ್ನೋ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಫಸ್ಟ್ ನಿಮ್ಮ ಸ್ವತ್ತು ಅಂತ ಡಿಕೆಶಿ ಹೇಳಲಿ. ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸವಾಲ್ ಹಾಕಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi Dharwad Municipal Corporation) ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಂದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪಸ್ಥಿತರಿದ್ದ ಶಾಸಕ ಮಹೇಶ ಟೆಂಗಿನಕಾಯಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ
ಇದಾದ ಬಳಿಕ ಸಂಗೊಳ್ಳಿ ರಾಯಣ್ಣ ಜನ್ಮದಿನದ ಹಿನ್ನೆಲೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಹೇಶ್ ಟೆಂಗಿನಕಾಯಿ ಗೌರವ ಅರ್ಪಿಪಿಸಿದರು. ಈ ಸಂರ್ಭದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಶಾಸಕರಿಗೆ ಸಾಥ್ ನೀಡಿದರು. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ
ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್ ಸೂಚನೆ
ಏನಿದು ಪ್ರಕರಣ?
ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳಾಗಿದ್ದವು.
* ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಮನವಿ * ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ
ನವದೆಹಲಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಲ್ಲಿ ಪ್ರಹ್ಲಾದ್ ಜೋಶಿ (Pralhad Joshi) ಮನವಿ ಮಾಡಿದರು.
ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿ ಆಗಿದ್ದು, ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಿರುತ್ತಾರೆ. ಹಾಗಾಗಿ, ಇಲ್ಲಿ ಹೊಸ ಮೆಮು (ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಮಾನ್ಯ ಶ್ರೀ ಅಶ್ವಿನಿ ವೈಷ್ಣವ @AshwiniVaishnaw ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ @VSOMANNA_BJP ಅವರೊಂದಿಗೆ ಭೇಟಿಯಾಗಿ
– ಹುಬ್ಬಳ್ಳಿಯ ರೈಲ್ವೆ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣದ ಮಟ್ಟಕ್ಕೆ ಪರಿವರ್ತಿಸುವ ಕುರಿತು
– ಗದಗ… pic.twitter.com/pa3nFPLCBB
ಪ್ಯಾಸೆಂಜರ್ ರೈಲು ಸಹ ಓಡಿಸಲು ಮನವಿ: ಹುಬ್ಬಳ್ಳಿ ನಗರಕ್ಕೆ ಶಿಕ್ಷಣ, ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಅಸಂಖ್ಯಾತ ಜನ ಸಂಚರಿಸುತ್ತಾರೆ. ದಿನನಿತ್ಯದ ರೈಲುಗಳು ಭರ್ತಿಯಾಗಿರುತ್ತವೆ. ಹಾಗಾಗಿ, ಜನ ಸಂಚಾರ ಅನುಕೂಲಕ್ಕೆ ಮೆಮು ರೈಲುಗಳು ಅಗತ್ಯತೆಯಿದೆ. ಈ ಭಾಗದಲ್ಲಿ ರಸ್ತೆ ಸಾರಿಗೆಗಿಂತ ರೈಲು ಸಂಚಾರ ಅನುಕೂಲಕರವಾಗಿ ಪರಿಣಮಿಸಿದ್ದು, ಕೋವಿಡ್ ವೇಳೆ ಸ್ಥಗಿತಗೊಳಿಸಿದ್ದ ಅನೇಕ ಪ್ಯಾಸೆಂಜರ್ ರೈಲು ಸಂಚಾರ ಸಹ ಆರಂಭಿಸುವಂತೆ ಸಚಿವ ಜೋಶಿ ಮನವಿ ಮಾಡಿದರು.
ಬೆಂಗಳೂರು ರೈಲು ನಿಲ್ದಾಣ ಬಿಟ್ಟರೆ ಹುಬ್ಬಳ್ಳಿಯೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದ್ದು, ನಿತ್ಯ ಕಡಿಮೆ ಎಂದರೂ 50 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ ತುಂಬಿರುತ್ತದೆ. ನೈರುತ್ಯ ರೈಲ್ವೆ ವಲಯದ ಮುಖ್ಯ ಕಚೇರಿ ಹೊಂದಿರುವ ಹುಬ್ಬಳ್ಳಿ ನಿಲ್ದಾಣ ಭಾರತೀಯ ರೈಲ್ವೆಯಲ್ಲಿ ಮಹತ್ತರವಾಗಿದ್ದು, ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿವರ್ತಿಸುವುದು ಅತ್ಯಗತ್ಯವಾಗಿದೆ ಎಂದು ಅಶ್ವಿನಿ ವೈಷ್ಣವ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 8,280 ಎಕರೆ ಭೂಸ್ವಾಧೀನ ಬಾಕಿ – ಅಶ್ವಿನಿ ವೈಷ್ಣವ್
ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಬೇಡಿಕೆ: ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣವಾಗಿ ಪರಿವರ್ತಿಸುವ ಬಗ್ಗೆ ಸಹ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ, ನಗರದ ಗದಗ ರಸ್ತೆ ಮೇಲಿರುವ ಡಬಲ್ ಲೈನ್ ರೈಲ್ವೆ ಬ್ರಿಡ್ಜ್‌ನ್ನು 4 ಲೈನ್‌ಗೆ ವಿಸ್ತರಿಸುವ ಸಲುವಾಗಿ ಇನ್ನೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಮುಂದಿಟ್ಟರು ಸಚಿವ ಪ್ರಹ್ಲಾದ್ ಜೋಶಿ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಹ ಈ ಬಗ್ಗೆ ಗಮನ ಸೆಳೆದರು.
ಉತ್ತರ ಕರ್ನಾಟಕದ ರೈಲ್ವೆ ಪ್ರತಿಯೊಂದು ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ ಆಧಾರ್ ಸೇವಾ ಕೇಂದ್ರ ಸ್ಥಾಪನೆಗೆ ಮನವಿ: ಇದೇ ವೇಳೆ ಕೇಂದ್ರ ಸಚಿವ ಜೋಶಿ ಅವರು, ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ʼಆಧಾರ್ ಸೇವಾ ಕೇಂದ್ರʼವಾಗಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದರು. ವಾಣಿಜ್ಯ ನಗರಿ ಹುಬ್ಬಳ್ಳಿ ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿದ್ದು, ಇಲ್ಲೀಗ ಆಧಾರ್ ಸೇವಾ ಕೇಂದ್ರ ಅತ್ಯಂತ ಅವಶ್ಯಕವಾಗಿದೆ. ದೇಶಾದ್ಯಂತ ಪ್ರತಿ ಜಿಲ್ಲಾವಾರು ಕೇಂದ್ರದ ಜೊತೆಗೆ ಪ್ರಮುಖ ನಗರಗಳಲ್ಲಿ ಸಹ ಈ ಕೇಂದ್ರಗಳನ್ನು ಮುಂದುವರಿಸುವಂತೆ ಕೋರಿದರು. ಜಿಲ್ಲಾ ಕೇಂದ್ರದ ಜತೆ ಹುಬ್ಬಳ್ಳಿ ಮತ್ತಿತರ ಪ್ರಮುಖ ನಗರಗಳಲ್ಲಿ ಆಧಾರ್ ಸೇವಾ ಕೇಂದ್ರಗಳನ್ನು ಮುಂದುವರಿಸುವಂತೆ ಟೆಂಡರ್ ಕರೆಯಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
– ಸೆಪ್ಟೆಂಬರ್ ಕ್ರಾಂತಿ ಗೊತ್ತಿಲ್ಲ, 3ನೇ ಕ್ರಾಂತಿ ಆಗಬಹುದು!
ಹುಬ್ಬಳ್ಳಿ: ನಾನು ಸಿಎಂ ಆಗೋಕೆ ಗುರು ಬಲ, ತಾರಾ ಬಲ ಬೇಕು, ಜೊತೆಗೆ ಶನಿಕಾಟ ಕಡಿಮೆ ಆಗ್ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿ, ನಾನು ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು. ಶನಿಕಾಟ ಕಡಿಮೆಯಾಗಬೇಕು. ಒಬ್ಬೊಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ. ನನಗೆ ಶನಿಕಾಟ ಇದೆ ಎಂದಿದ್ದಾರೆ.
ಸಿಎಂ ದೆಹಲಿ ಭೇಟಿ ವಿಚಾರವಾಗಿ, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್ ಮಾಡುವುದಾದರೂ ರಾಹುಲ್ ಗಾಂಧಿಯವರಿಗೆ ಹೇಳಿ ಮಾಡ್ತಾರೆ. ವಾರಕ್ಕೊಮ್ಮೆ ದೆಹಲಿಗೆ ಹೋದರೂ ಕಡಿಮೆ. ನಿಗಮ ಮಂಡಳಿ ಚರ್ಚೆಗೆ ಹೋಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ.
ರಾಜ್ಯಾಧ್ಯಕ್ಷ ಬದಲಾವಣೆ ಅಜೆರ್ಂಟ್ ಇಲ್ಲ. ನಮ್ಮ ಅಭಿಪ್ರಾಯ ನಾವು ಹೇಳಿರಬಹುದು. ಆದರೆ ಯಾವುದು ಸೂಕ್ತ ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಎರಡು ಹುದ್ದೆ ಇವೆ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ.
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ನಾನು ರಾಜಣ್ಣ ಅವರನ್ನು ಭೇಟಿಯಾಗಿ ಕೇಳ್ತೇನೆ. ಅಧ್ಯಕ್ಷ ಮತ್ತು ಡಿಸಿಎಂ ಬದಲಾವಣೆ ಬಿಟ್ಟು ಬೇರೆ ಕ್ರಾಂತಿ ಆಗಬಹುದು. ಸಿಎಂ ಮತ್ತು ಕೆಪಿಸಿಸಿ ವಿಚಾರ ಬಿಟ್ಟು ಮೂರನೇ ಕ್ರಾಂತಿ ಆಗಬಹುದು ಎಂದಿದ್ದಾರೆ.
ಯತೀಂದ್ರ ಹೇಳಿಕೆ ವಿಚಾರವಾಗಿ, ಮಹಾರಾಜರು ಸಮಾಜ ಸುಧಾರಕರು. ಸಿದ್ದರಾಮಯ್ಯ ಕೂಡಾ ಸಮಾಜ ಸುಧಾರಕರು. ಕಳೆದ ಮೂವತ್ತು ವರ್ಷದಲ್ಲಿ ಸಿದ್ದರಾಮಯ್ಯ ಅನೇಕ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಹೋಲಿಕೆ ಮಾಡಿರಬಹುದು. ಅವರ ವ್ಯಕ್ತಿತ್ವ ಅವರಿಗೆ ಇರುತ್ತೆ. ಇವರ ವ್ಯಕ್ತಿತ್ವ ಇವರಿಗೆ ಇರುತ್ತದೆ. ಇದನ್ನು ದೊಡ್ಡದು ಮಾಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹುಬ್ಬಳ್ಳಿ: ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ರಾತ್ರಿ ಹತ್ತು ಗಂಟೆಯಾದರೂ ಆರಂಭವಾಗದೇ ಎಸ್‌ಎಸ್‌ಸಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ.
ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ಆಗರವೇ ಕಂಡುಬಂದಿದೆ. ಈ ಮೂಲಕ ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ಆಗಮಿಸಿದ್ದರು. ಆದರೆ ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ರಾತ್ರಿ ಹತ್ತು ಗಂಟೆಯಾದರೂ ಆರಂಭವಾಗಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಆನ್‌ಲೈನ್ ಪರೀಕ್ಷೆಗೆ ಯಾವುದೇ ವ್ಯವಸ್ಥೆ ಇಲ್ಲ. ಜೊತೆಗೆ ವಿದ್ಯುತ್ ಮತ್ತು ಸರ್ವರ್‌ಗೆ ಸರಿಯಾದ ವ್ಯವಸ್ಥೆಯಿಲ್ಲ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಡದೇ ನೂರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ.
ಇನ್ನೂ ಅಭ್ಯರ್ಥಿಗಳ ಸಮಸ್ಯೆಗಳನ್ನು ಕೇಳಲು ಯಾವುದೇ ಅಧಿಕಾರಿಗಳು ಸಹ ಇಲ್ಲ. ಇದರಿಂದ ರೊಚ್ಚಿಗೆದ್ದು ಪರೀಕ್ಷಾ ಕೇಂದ್ರದ ಎದುರೇ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ.
ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ಹಣ ಎಣಿಕೆ ಯಂತ್ರ ತಂದಿದ್ದಾರೆ. ಸ್ಥಳೀಯ ಅಧಿಕಾರಿಗಳ ಸಹಾಯದಿಂದ ಹಣ ಎಣಿಕೆ ಯಂತ್ರದ ವ್ಯವಸ್ಥೆ ಮಾಡಿದ್ದು, ಇದರೊಂದಿಗೆ ಮತ್ತೊಂದು ಪ್ರಿಂಟಿಂಗ್ ಯಂತ್ರ ಕೂಡ ತರಲಾಗಿದೆ. ಹಣ ತೆಗೆದುಕೊಂಡು ಹೋಗಲು ಟ್ರಂಕ್ ಸಹ ತರಲಾಗಿದೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕ್ಯಾಲಿಕಟ್‌ಗೆ ವಾಪಸ್
ಇನ್ನು ಲೋಕಾ ಸಿಬ್ಬಂದಿ ಸೈಟ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಬೆಳ್ಳಿ ದೇವರ ಮಂಟಪ, ಬಂಗಾರದ ಗಣೇಶ ಮೂರ್ತಿ ಸಹ ಪತ್ತೆಯಾಗಿದೆ. ಡಿವೈಎಸ್‌ಪಿ ಆರ್ ವಸಂತ್ ಕುಮಾರ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೂ ಮನೆಯ ಎರಡು ಕೊಠಡಿಗಳನ್ನು ಮಾತ್ರ ತಪಾಸಣೆ ಮಾಡಲಾಗಿದೆ. ಇನ್ನೂ ಒಂದು ಕೊಠಡಿಯ ಪರಿಶೀಲನೆ ಬಾಕಿ ಉಳಿದಿದೆ. ಹಲವಾರು ಪ್ರಮಾಣದ ಆಸ್ತಿ ಪತ್ತೆ ಹಿನ್ನೆಲೆ ಹುಬ್ಬಳ್ಳಿ ನಿವಾಸಕ್ಕೆ ಲೋಕಾಯುಕ್ತ ಎಸ್‌ಪಿ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ – ರಾಮನಗರದಲ್ಲಿ ವಾಟಾಳ್ ಪ್ರತಿಭಟನೆ
ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಹಿನ್ನೆಲೆ, ಇಲ್ಲಿಯವರೆಗೆ 52 ಲಕ್ಷ ಹಣವನ್ನು ಅಧಿಕಾರಿಗಳು ಎಣಿಸಿದ್ದಾರೆ. ಎಣಿಕೆ ಕಾರ್ಯ ಇನ್ನೂ ಮುಂದುವರಿದಿದೆ. ಇಲ್ಲಿಯವರೆಗೂ 1 ಕೆಜಿ ಚಿನ್ನ, 3 ಕೆಜಿ ಬೆಳ್ಳಿ, 13 ಸೈಟ್, ಆರೂವರೆ ಎಕರೆ ಜಮೀನು ಹಾಗೂ ಮೂರು ಮನೆಗಳ ದಾಖಲೆಗಳು ಪತ್ತೆಯಾಗಿವೆ. ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ – ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ
– ವಿಪಕ್ಷ, ಕ.ಕರ್ನಾಟಕ ಶಾಸಕರಿಗೆ ತಲಾ 25 ಕೋಟಿ, `ಕೈ’ ಶಾಸಕರಿಗೆ ತಲಾ 50 ಕೋಟಿ ಅನುದಾನ
ಹುಬ್ಬಳ್ಳಿ: ಎಲ್ಲಾ ಚುನಾಯಿತ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಲು ನಿರ್ಧರಿಸಲಾಗಿದೆ. ಒಟ್ಟು 7,450 ಕೋಟಿ ರೂ. ಅನುದಾನ (Grant) ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy) ಮಾಹಿತಿ ನೀಡಿದರು.
ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು 224 ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ನೀಡಲು ಸಿಎಂ ತೀರ್ಮಾನ ಮಾಡಿದ್ದರು, ಆದರೆ ಇದಕ್ಕೆ 11.5 ಸಾವಿರ ಕೋಟಿ ರೂ. ಬೇಕಿತ್ತು. ಹೀಗಾಗಿ ಇದರಲ್ಲಿ ಕೆಲವೊಂದು ಬದಲಾವಣೆ ಮಾಡಿ 8 ಸಾವಿರ ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದ್ದಾರೆ. ಈ ಕುರಿತು ವಿಪಕ್ಷದವರು ಅನುದಾನಕ್ಕಾಗಿ ರಣದೀಪ್ ಸುರ್ಜೆವಾಲಾ ಅವರು ಹಣ ಕೊಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ನಾನು ಹಾಗೂ ಮುಖ್ಯಮಂತ್ರಿಗಳು ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಅನುದಾನದ ಕೊರತೆ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಆದರೆ ವಿಜಯೇಂದ್ರ, ಆರ್.ಅಶೋಕ್, ನಾರಾಯಣಸ್ವಾಮಿ ಚಿಲ್ಲರೆ ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಪ್ರತೀಕ್ ಬೇರೆ ಹುಡ್ಗೀರ ಜೊತೆ ವಿಡಿಯೋ ಕಾಲ್, ಚಾಟ್ ಮಾಡಿದ್ದಾನೆ: ಸಂತ್ರಸ್ತೆ ಸಹೋದರ ಆರೋಪ
ಸದ್ಯ 224 ಶಾಸಕರುಗಳ ಪೈಕಿ ವಿಪಕ್ಷ ಹಾಗೂ ಕಲ್ಯಾಣ ಕರ್ನಾಟಕ ಶಾಸಕರುಗಳಿಗೆ ತಲಾ 25 ಕೋಟಿ ರೂ., ಇನ್ನುಳಿದ ಕಾಂಗ್ರೆಸ್ ಶಾಸಕರುಗಳಿಗೆ ತಲಾ 50 ಕೋಟಿ ರೂ. ಅನುದಾನ ಸಿಗಲಿದೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯ ಶಾಸಕರುಗಳಿಗೆ ಬಿಬಿಎಂಪಿಯಿಂದ ಸಿಗುವ ವಿಶೇಷ ಅನುದಾನದಲ್ಲಿಯೇ ಮತ್ತೊಂದು ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.
ವಿರೋಧ ಪಕ್ಷಕ್ಕೆ ಕೇಂದ್ರದಿಂದ ಆಗಬೇಕಾದ ಸಾಕಷ್ಟು ವಿಚಾರಗಳಿವೆ. 15ನೇ ಹಣಕಾಸು ಆಯೋಗದ ಪ್ರಕಾರ 5,443 ಕೋಟಿ ರೂ. ಕೇಂದ್ರದಿಂದ ಬರಬೇಕಿತ್ತು. ನಾನು ಭಿಕ್ಷೆ ಬೇಡುತ್ತಿಲ್ಲ. ಈ ಬಗ್ಗೆ ಒಂದೇ ಒಂದು ಮಾತು ಆಡಲ್ಲ. ಒಂದು ರಾಜ್ಯದ ಕೆಲಸವನ್ನ ಕೇವಲ ಸರ್ಕಾರ ಮಾಡೋದಿಲ್ಲ. ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ, ನಮ್ಮ ಮುಖ್ಯಮಂತ್ರಿಗಳಿಂದ ಸನ್ಮಾನ ಮಾಡಿಸುತ್ತೇನೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್