Tag: hubballi

  • ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ (Jayamruthyunjaya Swamiji) ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡುವಾಗ ಗಂಭೀರ ಆರೋಪ ಮಾಡಿರುವ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ‌. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ. ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ.

    ಊಟದಲ್ಲಿ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ. ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಸಮಾಜ ನೋಡುತ್ತಿದೆ. ಅವರು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

  • ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ರಾಯಚೂರು: ಸಿಂಧನೂರಿನಿಂದ ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭಿಸಲಾಗಿದ್ದು, ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೆ ಖಾತೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

    ಸಿಂಧನೂರು ನಗರದಲ್ಲಿನ ರೈಲು ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ‌ ಪ್ರಧಾನಿಯಾದ ನಂತರ ರೈಲ್ವೆ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಕೆಲಸಗಳಾಗಿವೆ ಎಂದು ಬಣ್ಣಿಸಿದರು.

    ಹಲವು ವರ್ಷಗಳ ಕನಸಿನ ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ಮಧ್ಯಾಹ್ನ 1:30ಕ್ಕೆ ಸಿಂಧನೂರಿನಿಂದ ಹೊರಟು, ಹುಬ್ಬಳ್ಳಿ ಮೂಲಕ ಮುಂಜಾನೆ 3:55ಕ್ಕೆ ರೈಲು ಬೆಂಗಳೂರು ತಲುಪಲಿದೆ.

  • ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

    ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

    – ಇದೀಗ ಮಹಿಳೆಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

    ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಬಗೆಹರಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನ ಬಲೆ ಹಾಕಿಕೊಂಡ ಪೊಲೀಸ್ ಕಾನ್ಸಟೇಬಲ್ (Police Constable), ಬಳಿಕ ಆಕೆ ಜೊತೆಗೆ ಅಕ್ರಮ ಸಂಬಂಧವಿಟ್ಟುಕೊಂಡಿರುವ ಜೊತೆಗೆ ಮಹಿಳೆಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

    ಹುಬ್ಬಳ್ಳಿಯ (Hubballi) ಪೋಲಿ ಪೋಲಿಸಪ್ಪ ಮಾಡಿರುವ ಕೆಲಸಕ್ಕೆ ಪೊಲೀಸ್ ಇಲಾಖೆಗೆ ತಲೆನೋವಾಗಿದೆ. ಪೊಲೀಸ್ ಕಾನ್ಸ್‌ಟೇಬಲ್‌ ಕಾಮದಾಸೆಗೆ ಸುಂದರ ಕುಟುಂಬ (Beautiful Family) ಹೊಡೆದು ಬೀದಿಗೆ ಬಂದಿದೆ. ಇದನ್ನೂ ಓದಿ: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

    ಹುಬ್ಬಳ್ಳಿಯ ಘಂಟಿಕೇರಿ ಠಾಣೆಯ ಕಾನ್ಸ್‌ಟೇಬಲ್‌ ಹಜರತ್ ಮಿಟ್ಟೆಖಾನ್ ವಿರುದ್ಧ ಹುಬ್ಬಳ್ಳಿ ನಗರದ ಬೆಂಡಿಗೇರಿ ಠಾಣೆಯಲ್ಲಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪೊಲೀಸ್‌ ಸಹಾಯವಾಣಿ 112 ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್‌ ಹಜರತ್, ಗಂಡ-ಹೆಂಡತಿ ಜಗಳದ ಕರೆ ಆಧರಿಸಿ, ವಿವಾಹಿತಳ ಮನೆಗೆ ಹೋಗಿದ್ದ. ಜಗಳ ಬಗೆಹರಿಸುವ ನೆಪದಲ್ಲಿ ಮಹಿಳೆ ಜೊತೆಗೆ ಸ್ನೇಹ ಮಾಡಿ, ಆಕೆಯ ಜೊತೆಗೆ ಅಕ್ರಮ ಸಂಬಂಧ ಕೂಡ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಭಾಷೆ ಹೆಸರಲ್ಲಿ ಜನರನ್ನು ವಿಭಜಿಸಬಾರದು: ಮರಾಠಿ-ಹಿಂದಿ ಸಂಘರ್ಷ ಬಗ್ಗೆ ಕಂಗನಾ ಪ್ರತಿಕ್ರಿಯೆ

    ಇದರ ಜೊತೆಗೆ ಮಹಿಳೆಯ 6 ವರ್ಷದ ಬಾಲಕಿಗೆ ಸಹ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಮಹಿಳೆ ಗಂಡ ಹಾಗೂ ಸಂತ್ರಸ್ತೆ ಬಾಲಕಿ ತಂದೆ, ಕಾನ್ಸ್‌ಟೇಬಲ್‌ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟಕ್ಕಿಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಆರಂಭಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ, ಗೇಟ್‌ ಪಾಸ್‌ ನೀಡೋದು ಪಕ್ಕಾ: ಆರ್‌. ಅಶೋಕ್‌ ಭವಿಷ್ಯ

  • 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    ವಿಜಯಪುರ/ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಕೇಸ್‌ಗೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದ್ದು, ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇಲ್ಲದೇ ಇರೋದು ಗೊತ್ತಾಗಿದೆ.

    ಮೇ 25 ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ದರೋಡೆ ನಡೆದಿತ್ತು. ತನಿಖೆ ವೇಳೆ ಈ ಕೇಸ್‌ಗೆ ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇರುವುದು ಗೊತ್ತಾಗಿದ್ದು, ಶಾಲೆಯ ಚೇರಮನ್ ಆಗಿರುವ ಆರೋಪಿ ಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೇಶ್ವಾಪುರದಲ್ಲಿರುವ ಮನೆ ಹಾಗೂ ಗದಗ ರಸ್ತೆಯಲ್ಲಿನ ತನ್ನ ಶಾಲೆಯೊಂದರಲ್ಲಿ ಚಿನ್ನ ಕರಗಿಸಿರುವುದು ತಿಳಿದುಬಂದಿದೆ.ಇದನ್ನೂ ಓದಿ: ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಸದ್ಯ ಪೊಲೀಸರು ಶಾಲೆ ಸೇರಿದಂತೆ ಕೆಲವು ಸ್ಥಳಗಳಲ್ಲಿ ಮಹಜರು ಮಾಡಿದ್ದು, ಚಿನ್ನ ಕರಗಿಸಲು ಬಳಸಿದ ಕೆಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.

    ಘಟನೆ ಏನು?
    ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿ, ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಪರಾರಿಯಾಗಿದ್ದ ಮೂವರನ್ನು ಬಂಧಿಸಿದ್ದರು.ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

  • ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

    ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

    ಹುಬ್ಬಳ್ಳಿ: ಅಪಘಾತ ಮಾಡಿದ ಬಸ್ ಚಾಲಕರಿಗೆ ಡಿಪೋ ಮ್ಯಾನೇಜರ್ ಮತ್ತು ಅಧಿಕಾರಿಗಳು, ಸನ್ಮಾನ ಮಾಡಿ ಅಪಹಾಸ್ಯ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಚಿಗರಿ ಬಸ್‌ಗಳ ನಡುವೆ ಬುಧವಾರ ಧಾರವಾಡದಲ್ಲಿ (Dharwad) ಅಪಘಾತ ನಡೆದಿತ್ತು. ಮುಂದೆ ಹೋಗುತ್ತಿದ್ದ ಬಸ್ ಬ್ರೇಕ್ ಹಾಕಿದಾಗ ಹಿಂಬದಿಯ ಬಸ್ ಚಾಲಕ ಬ್ರೇಕ್ ಹಾಕಿದರೂ, ಬ್ರೇಕ್ ಹತ್ತದೇ ಮುಂದಿನ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಅಪಘಾತದಲ್ಲಿ ಎರಡು ಬಸ್‌ಗಳ ಗಾಜುಗಳು ಪುಡಿಪುಡಿಯಾಗಿದ್ದವು. ಚಾಲಕರಿಗೆ ಬುದ್ಧಿವಾದ ಹೇಳುವ ನೆಪದಲ್ಲಿ ಎರಡು ಬಸ್‌ಗಳ ಚಾಲಕರನ್ನು ಡಿಪೋಗೆ ಕರೆಸಿದ ಅಧಿಕಾರಿಗಳು ಸನ್ಮಾನ ಮಾಡಿ ಅಪಮಾನ ಮಾಡಿದ್ದಾರೆ. ಬಸ್‌ಗಳ ಮುಂದೆ ಚಾಲಕರನ್ನು ನಿಲ್ಲಿಸಿ, ಮಾಲೆ ಹಾಕಿ ಸನ್ಮಾನ ಮಾಡಿದ ಫೋಟೋವನ್ನು ಶೇರ್ ಮಾಡಿ, ಅಪಹಾಸ್ಯ ಮಾಡಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಅಧಿಕಾರಿಗಳ ನಡೆಗೆ ಇತರೇ ಚಾಲಕರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ಎಂಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಎಂಡಿ ಪ್ರಿಯಾಂಗ್ ಅವರು ಡಿಪೋ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  • ಕೆಲ ಬಿಜೆಪಿಯವರು ಸಿಎಂ ಮಾತ್ರ ಅಲ್ಲ, ಪ್ರಧಾನಿಯನ್ನು ಬದಲಾವಣೆ ಮಾಡಬೇಕೆಂದು ಕೇಳ್ತಿದ್ದಾರೆ: ಸಂತೋಷ್ ಲಾಡ್

    ಕೆಲ ಬಿಜೆಪಿಯವರು ಸಿಎಂ ಮಾತ್ರ ಅಲ್ಲ, ಪ್ರಧಾನಿಯನ್ನು ಬದಲಾವಣೆ ಮಾಡಬೇಕೆಂದು ಕೇಳ್ತಿದ್ದಾರೆ: ಸಂತೋಷ್ ಲಾಡ್

    ಹುಬ್ಬಳ್ಳಿ: ರಾಜ್ಯದ ಸಿಎಂ ಬದಲಾವಣೆ ಮಾತು ಅಷ್ಟೇ ಅಲ್ಲಾ, ದೇಶದ ಪ್ರಧಾನಿ ಬದಲಾವಣೆ ಮಾಡಬೇಕೆಂದು ಕೆಲ ಬಿಜೆಪಿಯವರು ಕೇಳ್ತಿದ್ದಾರೆ ಎಂಬ ನನಗೆ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ, 140 ಶಾಸಕರು ಇರುವ ಪಕ್ಷ. ಹೀಗಾಗಿ ಅಸಮಾಧಾನ ಸಹಜ, ಅವರ ಅಸಮಾಧಾನ ಪಕ್ಷದ ವಿರುದ್ಧ ಅಲ್ಲ. ಸುರ್ಜೇವಾಲ ಅವರು ಅವರ ಜೊತೆ ಮಾತನಾಡುತ್ತಿದ್ದಾರೆ. ಅವರ ಅಸಮಾಧಾನ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

    ಕಲ್ಲಿದ್ದಲು ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲಾ ಅಂತ ಬಿಜೆಪಿ ಸರ್ಕಾರವೇ ಹೇಳಿದೆ. ಯುಪಿಎ ಸರ್ಕಾರದಲ್ಲಿ ಯಾವುದೇ ಹಗರಣ ಆಗಿಲ್ಲ ಎಂದು ಇದೇ ಬಿಜೆಪಿ ಸರ್ಕಾರ ರಿಪೋರ್ಟ್ ಹೇಳಿದೆ. ಇವರ 11 ವರ್ಷದ ಅವಧಿಯಲ್ಲಿ ಯಾರಿಗೆಲ್ಲಾ ಟೆಂಡರ್ ಕೊಟ್ಟಿದ್ದಾರೆ ಅಂತ ಬಿಜೆಪಿ ಹೇಳಲಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

    ವಿಶ್ವಗುರು ಪವರಫುಲ್ ಅಂತ ಬರೀ ಹೇಳಿಕೊಂಡು ಅಡ್ಡಾಡಿದ್ರೆ ಸಾಲದು. ಪೆಹಲ್ಗಾಮ್ ಘಟನೆ ಬಗ್ಗೆ ಕೇಳಬಾರದಾ? ಸಮಸ್ಯೆಗಳ ಬಗ್ಗೆ ಮೊದಲು ಚರ್ಚೆ ಮಾಡಬೇಕು. ಚೀನಾ ಮತ್ತು ಭಾರತವನ್ನು ಹೋಲಿಸಿಕೊಂಡು ಮಾತನಾಡಿದರೆ, ಚೀನಾದ ವಸ್ತುಗಳನ್ನು ಬಳಸಬೇಡಿ ಅಂತ ಮೋದಿ ಹೇಳ್ತಾರೆ. ಆದರೆ ಅಲ್ಲಿನ ವಸ್ತುಗಳನ್ನು ಆಮದು ಮಾಡ್ತಿರೋದು ಯಾರು? ದೇಶದ ವಿಚಾರದಲ್ಲಿ ಪ್ರಶ್ನೆ ಕೇಳುವ ಅಧಿಕಾರವಿದೆ. ಬಿಜೆಪಿಯವರ ಫಾರಿನ್ ಪಾಲಿಸಿ ಫೇಲ್ ಆಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | CAT ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ

    ಪೆಟ್ರೋಲ್, ಡೀಸೆಲ್, ಸಿನಿಮಾ ಟಿಕೆಟ್ ಮೇಲೆ ಸೆಸ್ ಹಾಕೋ ವಿಚಾರವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಸ್ವಲ್ಪ ಪ್ರಮಾಣದಲ್ಲಿ ಸೆಸ್ ಹೆಚ್ಚು ಮಾಡುವುದರಿಂದ ಜನರಿಗೆ ಹೆಚ್ಚಿನ ಹೊರೆ ಆಗುವುದಿಲ್ಲ ಎಂದಿದ್ದಾರೆ.

  • ಪ್ರಾಧ್ಯಾಪಕಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಮದುವೆಯಾಗುವಂತೆ ಟಾರ್ಚರ್‌!

    ಪ್ರಾಧ್ಯಾಪಕಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಮದುವೆಯಾಗುವಂತೆ ಟಾರ್ಚರ್‌!

    – ಸಹೋದರನಿಗೆ ವಿಡಿಯೋ ಕಳುಹಿಸಿ ಕಿರುಕುಳ

    ಹುಬ್ಬಳ್ಳಿ: ಯುವಕನೊಬ್ಬ ಪ್ರಾಧ್ಯಾಪಕಿಯೊಬ್ಬರ ಅಶ್ಲೀಲ ವಿಡಿಯೋ, ಫೋಟೋ ಹಾಗೂ ವಿಡಿಯೋ ಕಾಲ್ ಸ್ಕ್ರೀನ್ ರೆಕಾರ್ಡ್ ಇಟ್ಟುಕೊಂಡು ಮಾನಸಿಕ ಹಿಂಸೆ ನೀಡಿರುವುದು ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ನಗರದ ಶಶಿ (25) ಎಂಬಾತ ಪ್ರಾಧ್ಯಾಪಕಿಯ ಅಶ್ಲೀಲ ವಿಡಿಯೋ, ಪೋಟೊ ಇಟ್ಟುಕೊಂಡು ಮದುವೆ ಆಗುವಂತೆ ಪೀಡಿಸಿದ್ದಾನೆ. ಪ್ರಾಧ್ಯಾಪಕಿಯ ಸಹೋದರನಿಗೆ ಇವುಗಳನ್ನು ಕಳಹಿಸಿದ್ದಾನೆ. ಸಹದ್ಯೋಗಿಗಳು ಹಾಗೂ ಕುಟುಂಬಸ್ಥರಿಗೆ ವಾಟ್ಸಾಪ್ ಮೂಲಕ ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಈ ಸಂಬಂಧ ಸಿಇಎನ್ ಕ್ರೈಂ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

  • ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    – ಆಗ್ರಾದ ಸಿಂಗ್ನಾದಲ್ಲಿ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಅನುಮೋದನೆ

    ಹುಬ್ಬಳ್ಳಿ: ಕೇಂದ್ರ ಸರ್ಕಾರ, ಉತ್ತರ ಪ್ರದೇಶದಲ್ಲಿ (Uttar Pradesh) ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಸಜ್ಜಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಆಗ್ರಾದ (Agra) ಸಿಂಗ್ನಾದಲ್ಲಿ ಈ ಕೇಂದ್ರ ತೆರೆಯಲು ನಿರ್ಣಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಅನುಮೋದನೆ ನೀಡಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಕುರಿತು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.ಇದನ್ನೂ ಓದಿ: Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

    ಆಲೂಗಡ್ಡೆ, ಸಿಹಿಗೆಣಸು ಉತ್ಪಾದನೆ ಹಾಗೂ ಸುಗ್ಗಿ ನಂತರದಲ್ಲೂ ಇವುಗಳ ಆಹಾರೋತ್ಪನ್ನ, ಮೌಲ್ಯವರ್ಧಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ ನೆರವಾಗಲಿದೆ.

    ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೆಚ್ಚು ಹೂಡಿಕೆಯನ್ನೂ ಆಕರ್ಷಿಸಲಿದೆ. ಭಾರತದಲ್ಲಿ ಆಲೂಗಡ್ಡೆ ವಲಯವು ಉತ್ಪಾದನೆ, ಆಹಾರ ಸಂಸ್ಕರಣೆ, ಪ್ಯಾಕೇಜಿಂಗ್, ಸಾರಿಗೆ, ಮಾರುಕಟ್ಟೆ ಇತ್ಯಾದಿಗಳಲ್ಲಿ ಗಮನಾರ್ಹ ಉದ್ಯೋಗಾವಕಾಶ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಇದನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದಿದ್ದಾರೆ.

    ಅSAಖಅ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ ನೀಡುವ, ಪೋಷಕಾಂಶ ಮತ್ತು ಹವಾಮಾನ ಆಧಾರಿತ ತಳಿಗಳ ಆಲೂಗಡ್ಡೆ ಮತ್ತು ಸಿಹಿಗೆಣಸು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿಯೂ ಹೆಚ್ಚು ಉತ್ಪಾದನೆ ಮತ್ತು ಬಳಕೆಯಲ್ಲಿದ್ದು, ವಿಶ್ವದರ್ಜೆ ಮಾರುಕಟ್ಟೆ ಕಲ್ಪಿಸುವಲ್ಲಿ ಈ ಕೇಂದ್ರ ನೆರವಾಗಲಿದೆ.

    ಆಲೂಗಡ್ಡೆ, ಸಿಹಿಗೆಣಸು ಅನ್ವೇಷಣೆ ಮತ್ತು ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ಉತ್ತರ ಪ್ರದೇಶದ ಆಗ್ರಾದ ಸಿಂಗ್ನಾದಲ್ಲಿ ಸ್ಥಾಪಿಸುವುದರಿಂದ ಭಾರತದಲ್ಲಿ ಆಲೂಗಡ್ಡೆ ಮತ್ತು ಸಿಹಿಗೆಣಸು ವಲಯಗಳ ಸುಸ್ಥಿರ ಅಭಿವೃದ್ಧಿಗೂ ಗಮನಾರ್ಹ ಕೊಡುಗೆ ನೀಡಲಿದೆ ಎಂದರು.ಇದನ್ನೂ ಓದಿ: ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

  • ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಹುಬ್ಬಳ್ಳಿ/ಹಾವೇರಿ: ಕುದಿಯುವ ಸಾಂಬಾರ್ (Sambar) ಮೈಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತ ಬಾಲಕಿ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ (Haveri) ಜಿಲ್ಲೆಯ ಶಿಗ್ಗಾವಿ (Shiggaon) ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೋಗಿದ್ದ ಸಂದರ್ಭ ಬಾಲಕಿ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು. ಇದನ್ನೂ ಓದಿ: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಪಕ್ಷಕ್ಕೆ ಮರಳಬಹುದು: ವಿಜಯೇಂದ್ರ ಮುಕ್ತ ಆಹ್ವಾನ

    ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಎರಡು ದಿನದ ಹಿಂದಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇಂದು ಮತ್ತೆ ಮೈಮೇಲೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಕಿಮ್ಸ್ಗೆ ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಬಾಲಕಿ ಸಾವಿನಿಂದ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡು ಹೆತ್ತಮ್ಮ ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

  • ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    – ಯುವತಿ ತಂಟೆಗೆ ಬಾರದಂತೆ ಪತಿಗೆ ಧಮ್ಕಿ

    ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಬಲವಂತವಾಗಿ ಪೋಷಕರು ಎತ್ತೊಯ್ದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿಯ ಬೈರಿಕೊಪ್ಪ (Barikoppa) ಗ್ರಾಮದ ನಿರಂಜನ್ ಹಾಗೂ ಸುಷ್ಮಾರ ಪರಸ್ಪರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಕಳೆದ ಎಂಟು ವರ್ಷದಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ ಈ ಜೋಡಿ 2 ವರ್ಷದ ಹಿಂದೆಯೇ ಗದಗನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿ ಬಂದಿದ್ದರು. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    ಬಳಿಕ ಪೋಷಕರ ವಿರೋಧಕ್ಕೆ ಮಣಿದು, ಇಬ್ಬರು ದೂರವಾಗಿ ವೇದನೆ ಪಡುತ್ತಿದ್ದರು. ಇದೀಗ ಪ್ರೀತಿಸಿ ಮದುವೆಯಾದ ಪತಿಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ನಿರಂಜನ್ ಮನೆಗೆ ಸುಷ್ಮಾ ಬಂದಿದ್ದರು. ಈ ವೇಳೆ ಯುವತಿ ತಂದೆ ಪರಶುರಾಮ, ಮಾವಂದಿರಾದ ಮಹಾಂತೇಶ್, ಮಂಜು ಸೇರಿ ನಿರಂಜನ್‌ಗೆ ಧಮ್ಕಿ ಹಾಕಿ ಗಂಡನ ಮನೆಯಲ್ಲಿ ಕುಳಿತಿದ್ದ ಸುಷ್ಮಾಳನ್ನು ಗೋಣಿ ಚೀಲದಲ್ಲಿ ಎತ್ತೊಯ್ದಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

    ಸುಷ್ಮಾ ತಂಟೆಗೆ ಬಂದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪತಿ ನಿರಂಜನ್‌ಗೆ ಆಕೆ ಕುಟುಂಬಸ್ಥರು ಧಮ್ಕಿ ಹಾಕಿದ್ದಾರೆ. ಸದ್ಯ ಈ ಜೋಡಿ ರಕ್ಷಣೆಗಾಗಿ ಹುಬ್ಬಳ್ಳಿಯ ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: Bengaluru | ಪಾರ್ಟಿ ಮಾಡಲು ಪಬ್‌ಗೆ ಕರೆಸಿ, ಸುಪಾರಿ ನೀಡಿ ಗೆಳೆಯನ ಸುಲಿಗೆ

    ಮದುವೆಯಾಗಿ ನಾವು ಒಂದು ತಿಂಗಳು ಜೊತೆಗೆ ಇದ್ದೆವು. ನಮ್ಮ ಮನೆಗೆ ಬಂದು ಒತ್ತಾಯ ಪೂರ್ವಕವಾಗಿ ನನ್ನ ಪತ್ನಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಅಲ್ಲದೆ ನನಗೂ ಬೆದರಿಕೆ ಹಾಕಿದ್ದಾರೆ. ನಮ್ಮಿಬ್ಬರಿಗೂ ರಕ್ಷಣೆ ನೀಡಬೇಕೆಂದು ನಿರಂಜನ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾರೆ.