ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ವ್ಯಕ್ತಿಯೊಬ್ಬರು ಆಯತಪ್ಪಿ ಚರಂಡಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ (Belagali) ರಸ್ತೆಯಲ್ಲಿ ನಡೆದಿದೆ.
ಬೀರಬಂದ ಓಣಿಯ ಹುಸೇನ ಕಳಸ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿ. ಹುಸೇನ ಅವರು ಬೆಳಗಲಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಯತಪ್ಪಿ ಚರಂಡಿಗೆ ಬಿದ್ದಿದ್ದರು. ಧಾರಕಾರ ಮಳೆಯಿಂದಾಗಿ ಚರಂಡಿಯಲ್ಲಿ ಭಾರೀ ನೀರು ಹರಿಯುತ್ತಿದ್ದ ಕಾರಣ ಹುಸೇನ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ
ಹುಬ್ಬಳ್ಳಿ: ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ಖಂಡಿಸಿ ಪೋಸ್ಟ್ ಹಾಕಿದ್ದ ಹಿಂದೂ ಕಾರ್ಯಕರ್ತನ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಈ ಕುರಿತು ಹಿಂದೂ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆ ಸರಿಯಿಲ್ಲ. ರಾಜ್ಯದಲ್ಲಿರುವ ಹಿಂದೂ ಕಾರ್ಯಕರ್ತರ ಮೇಲೆ ಕೇಸ್‌ಗಳ ಸುರಿಮಳೆ ಸುರಿಸುತ್ತಿದ್ದಾರೆ. ಈ ಮೂಲಕ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್
ಸಿದ್ದರಾಮಯ್ಯನವರ ಪ್ರಚೋದನಕಾರಿ ಹೇಳಿಕೆ ವಿರುದ್ಧ ಪೋಸ್ಟ್ ಮಾಡಿದ್ದೆ. ಡಿಲೀಟ್ ಆದ ಒಂದು ತಿಂಗಳ ನಂತರ ಇದೀಗ ಪ್ರಕರಣ ದಾಖಲಾಗಿದೆ. ಈ ರೀತಿ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಈ ಬಗ್ಗೆ ನಾನು ಕಾನೂನು ಹೋರಾಟ ನಡೆಸುತ್ತೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾನೆ.
ಕಳೆದ ಏ.28 ರಂದು ಬಜರಂಗದಳ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಪೋಸ್ಟ್ನಲ್ಲಿ ಸಿಎಂ ಅವರಿಗೆ ಗೋಡ್ಸೆ ಬೇಕಾಗಿದ್ದಾರೆ ಎಂದು ಉಲ್ಲೇಖಿಸಿದ್ದರು. ಬಳಿಕ ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿಸಿದ್ದರು.ಇದನ್ನೂ ಓದಿ: Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್
– ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದಿರಿ – ದಿನೇಶ್ ಗುಂಡೂರಾವ್
ಹುಬ್ಬಳ್ಳಿ/ಧಾರವಾಡ/ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು (Corona Virus) ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ. ಅಲ್ಲದೇ ಮಂಡ್ಯದಲ್ಲೂ (Mandya) ಈ ಬಾರಿ ಮೊದಲ ಸೋಂಕು ಪತ್ತೆಯಾಗಿದೆ.
ಹುಬ್ಬಳ್ಳಿಯ (Hubballi) ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್ ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಅಂತ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ:
ಇನ್ನೂ ಈ ವರ್ಷ ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ಕಲ್ಯಾಣಮ್ಮ ಎಂಬ ವೃದ್ಧೆಗೆ ಸೋಂಕು ಕಾಣಿಸಿಕೊಂಡಿದೆ. ಗ್ರಾಮದ ನಿವಾಸದಲ್ಲೇ ಇದ್ದ ಕಲ್ಯಾಣಮ್ಮ, ಕಳೆದ 2 ದಿನಗಳಿಂದ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೇರೆ ಬೇರೆ ಕಾಯಿಲೆ ಇದ್ದವರು ಎಚ್ಚರದಿಂದಿರಿ
ಕೊರೊನಾ ಸೋಂಕು ಉಲ್ಬಣದ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಈ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ. ಸದ್ಯಕ್ಕೆ ವಿಶೆಷವಾಗಿ ಹೇಳುಂತದ್ದು ಏನೂ ಇಲ್ಲ. ಕೇಂದ್ರ ಸರ್ಕಾರ ಸಹ ಇದು ಅಪಾಯಕಾರಿ ಏನಲ್ಲ ಅಂತ ಮೆಸೇಜ್ ಕೊಟ್ಟಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಹಾಗಾಗಿ ಜನ ಆತಂಕಪಡುವ ಅಗತ್ಯವಿಲ್ಲ. ರೋಗನಿರೋಧಕ ಶಕ್ತಿ ಕಡಿಮೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಬೇರೆ ಬೇರೆ ಕಾಯಿಲೆ ಇದ್ದಾಗ ಇದು ಸಮಸ್ಯೆ ಆಗಬಹುದು, ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಅಷ್ಟೆ ಅಂತ ಸಲಹೆ ನೀಡಿದ್ದಾರೆ.
ಹುಬ್ಬಳ್ಳಿ: ಟಾಯ್ಲೆಟ್ ಕಿಟಕಿ ಮುರಿದು 6 ಲಕ್ಷ ಮೌಲ್ಯದ 62 ಗ್ರಾಂ ಚಿನ್ನ ಕಳ್ಳತನ ಮಾಡಿದ್ದ ಖದೀಮನನ್ನು ಹುಬ್ಬಳ್ಳಿಯ (Hubballi) ಬೆಂಡಿಗೇರಿ ಪೊಲೀಸರು (Bendigeri Police) ಬಂಧಿಸಿದ್ದಾರೆ.
ಆರೋಪಿ ಜಾಫರ್, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ, ಟಾಯ್ಲೆಟ್ ಕಿಟಕಿ ಮುರಿದು ಮನೆ ಕಳ್ಳತನ ಮಾಡುತ್ತಿದ್ದ. ಅದೇ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಬೆಂಡಿಗೇರಿ ಪೊಲೀಸರು ಆರೋಪಿ ಜಾಫರ್‌ನನ್ನು ಬಂಧಿಸಿ, ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ
ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ 62 ಗ್ರಾಂ ತೂಕದ ಚಿನ್ನ ಹಾಗೂ 27 ಸಾವಿರ ಮೌಲ್ಯದ ಬೆಳ್ಳಿ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ: ಹುಬ್ಬಳ್ಳಿಯ (Hubballi) ವಿವಿಧ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ಹೇಳಿದ್ದಾರೆ.
ಹುಬ್ಬಳ್ಳಿಯ ವಿವಿಧ ಮಸೀದಿಗಳಲ್ಲಿ (Mosque) ಇರುವವರು ನಮ್ಮ ದೇಶದ ವ್ಯಕ್ತಿಗಳಂತೆ ಕಾಣುತ್ತಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಮುಸ್ಲಿಂ ಮುಖಂಡರೇ ನನ್ನ ಬಳಿ ಹೇಳಿ ಏನಾದರೂ ಆಗಬಹುದು ಎಂಬ ಅಂತಂಕವನ್ನು ಹೊರಹಾಕಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮ್ಯಾನೇಜರ್ ಕಿರುಕುಳ – ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ
ಈ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿ ಬಹಳಷ್ಟು ಸೂಕ್ಷ್ಮ ಪ್ರದೇಶದ ಮುಂದೆ ಏನಾದರೂ ಅನಾಹುತ ಆದರೆ ಅದಕ್ಕೆ ಗೃಹ ಇಲಾಖೆಯೇ ಕಾರಣ ಎಂದರು.
ಹುಬ್ಬಳ್ಳಿ/ಧಾರವಾಡ: ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಪತ್ರ ಬರೆದಿದ್ದಾರೆ.
ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್ ಅಖ್ತರ್
ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ (ಜನ್ನತ್ ನಗರ ಧಾರವಾಡ ಸೇರಿದಂತೆ) ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 8 ಮಂದಿ ಸಜೀವ ದಹನ
– ಸಮಯ ಬಂದಾಗ ಸಿದ್ದರಾಮಯ್ಯರನ್ನ ಇಳಿಸಿ, ಡಿಕೆಶಿ ಸಿಎಂ ಆಗ್ತಾರೆ – ಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಹಳಷ್ಟು ಆಕಾಂಕ್ಷಿಗಳಿದ್ದಾರೆ
ಹುಬ್ಬಳ್ಳಿ: ಮೋದಿ ಅವಧಿಯಲ್ಲಿ ಬ್ರಹ್ಮೋಸ್ ದಾಳಿಯಾಗಿದೆ, ಕಾಂಗ್ರೆಸ್ ಕಾಲದಲ್ಲಿ ಯಾಕೆ ಆಗಿಲ್ಲ ಎಂದು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್(Jagadish Shettar) ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ(Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ(Narendra Modi) ನಾಯಕತ್ವ ಗುರಿ ಇಟ್ಟರೆ ಗುರಿ ಮುಟ್ಟುವವರೆಗೆ ಬಿಡೋದಿಲ್ಲ. ಅವರು ಗುಜರಾತ್ ಸಿಎಂ ಇದ್ದಾಗಿನಿಂದಲೂ ಹಾಗೆಯೇ ಇದ್ದಾರೆ. ಪಹಲ್ಗಾಮ್‌ನಲ್ಲಿ(Pahalgam) ಉಗ್ರರು 26 ಅಮಾಯಕರನ್ನ ಕೊಂದು ಹಾಕಿದ್ರು. ಅದಾದ ಮೇಲೆ ಮೋದಿ ಅವರನ್ನ ಕೊಲ್ಲೋದಾಗಿ ಹೇಳಿದ್ರು, ಅದೇ ರೀತಿಯ ಮಾಡಿದ್ದಾರೆ. ಸೈನಿಕರಿಂದ ಉಗ್ರರ ಸಂಹಾರ ಮಾಡಿಸಿದ್ದಾರೆ. ಇದು ನರೇಂದ್ರ ಮೋದಿ ಅವರ ಪರಿಶ್ರಮ. ಸ್ವದೇಶಿ ಡ್ರೋನ್, ಬ್ರಹ್ಮೋಸ್ ಮೂಲಕ ಅಟ್ಯಾಕ್ ಮಾಡಿದರು. ಇವತ್ತು ಅದರ ಶಕ್ತಿ ಏನು ಅನ್ನೋದು ಗೊತ್ತಾಗಿದೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ -ಆರ್‌ಸಿಬಿ-ಕೆಕೆಆರ್ ಪಂದ್ಯಕ್ಕೆ ಅಡ್ಡಿ
ಈಗ ಅದರ ಬೇಡಿಕೆ ವಿದೇಶದಲ್ಲೂ ಹೆಚ್ಚಾಗಿದೆ. ಇದು ಮೋದಿ ಕಾಲದಲ್ಲಿ ಆಗಿದೆ. ಕಾಂಗ್ರೆಸ್(Congress) ಕಾಲದಲ್ಲಿ ಯಾಕೆ ಆಗಿಲ್ಲ. ಮೊದಲು ಹೊರ ದೇಶದಿಂದ ಶಸ್ತ್ರಾಸ್ತ್ರಗಳನ್ನು ತರುತ್ತಿದ್ದರು. ಪಾಕಿಸ್ತಾನ ಉಗ್ರರಿಗೆ ಉತ್ತೇಜನ ಕೊಡ್ತಾ ಇದೆ. ಹೀಗಾಗಿ ಸರ್ವ ಪಕ್ಷಗಳ ರಾಜಕಾರಣಿಗಳ ತಂಡವನ್ನ ಹಲವು ದೇಶಗಳಿಗೆ ಕಳುಹಿಸಲು ನಿರ್ಧಾರ ಮಾಡಿದ್ದಾರೆ. ಮೋದಿ ಅವರ ರಾಜತಾಂತ್ರಿಕ ನಡೆಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತಾ? – ಎಂ.ಸಿ ಸುಧಾಕರ್ ವಿರುದ್ಧ ರೇವಣ್ಣ ಗರಂ
ಕಾಂಗ್ರೆಸ್ ನಾಯಕರ ಟೀಕೆ ವಿಚಾರವಾಗಿ ಮಾತನಾಡಿ, ಮೋದಿ ಅವರ ಪ್ರತಿ ಹೆಜ್ಜೆಗೂ ಅವರು ಟೀಕೆ ಮಾಡ್ತಾರೆ. ಮೋದಿ ಗಡಿವರೆಗೆ ಹೋಗಿ ಜನರಿಗೆ ಸಮಾಧಾನ ಮಾಡುವ ಕೆಲಸ ಮಾಡ್ತಾರೆ. ರಾಹುಲ್ ಗಾಂಧಿ(Rahul Gandhi) ಅವರು ಗಡಿ ಭಾಗಕ್ಕೆ ಹೋಗಲಿ ನೋಡೋಣ. ಸಂತೋಷ ಲಾಡ್, ಕೊತ್ತೂರ ಮಂಜುನಾಥ್ ಹೇಳಿಕೆ ಸರಿಯಲ್ಲ. ಟೀಕೆ ಮಾಡುವವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ರೆ ಈ ರೀತಿ ಹೇಳಿಕೆ ನೀಡಲ್ಲ. ಕೆಲವು ಚಿಲ್ಲರೆ ನಾಯಕರ ಹೇಳಿಕೆಯಿಂದ ಯಾವುದೇ ವ್ಯತ್ಯಾಸ ಆಗೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Operation Sindoor – 1 ಬ್ರಹ್ಮೋಸ್ ಕ್ಷಿಪಣಿಯ ದರ ಎಷ್ಟು? ಸ್ಪೀಡ್ ಎಷ್ಟಿರುತ್ತೆ?
ರಾಜ್ಯ ಸರ್ಕಾರ ಪತನ ಕುರಿತು ಪ್ರತಿಕ್ರಿಯಿಸಿ, ಸಿಎಂ, ಡಿಸಿಎಂ ನಡುವೆ ಮಾತುಕತೆ ಆಗಿದೆ. ಸಮಯ ಬಂದಾಗ ಸಿದ್ದರಾಮಯ್ಯರನ್ನ ಇಳಿಸಿ, ಡಿ.ಕೆ ಶಿವಕುಮಾರ್(D K Shivakumar) ಆಗ್ತಾರೆ. ಸಿದ್ದರಾಮಯ್ಯ ಇಳಿಸಿದ್ರೆ, ಡಿ.ಕೆ ಶಿವಕುಮಾರ್ ಸಿಎಂ ಆಗಲ್ಲ. ಬದಲಾಗಿ ಕಾಂಗ್ರೆಸ್ ಛಿದ್ರ ಛಿದ್ರ ಆಗುತ್ತೆ. ಸಿಎಂ ಸ್ಥಾನಕ್ಕೆ ಸರ್ಕಾರದಲ್ಲಿ ಬಹಳಷ್ಟು ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿಗೆ ಮಾನ, ಮರ್ಯಾದೆ ಇದ್ರೆ ಕೂಡ್ಲೇ ಮಂಜುನಾಥ್ ಉಚ್ಚಾಟಿಸಿ: ಶರಣು ಸಲಗರ್
ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ. ಈಗಾಗಲೇ ಜನರ ವಿಶ್ವಾಸ ಕಳೆದುಕೊಂಡಿದ್ದೀರಿ. ಸಾಕಷ್ಟು ಭ್ರಷ್ಟಾಚಾರ ನಡೀತಾ ಇದೆ. ಗುತ್ತಿಗೆದಾರರು ಎಷ್ಟೋ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರೇ ಹೇಳ್ತಾರೆ ನಮ್ಮ ಪರಿಸ್ಥಿತಿ ಗಂಭೀರ ಇದೆ. ನಾವು ದುಂಬಾಲು ಬಿದ್ರು ಯಾವುದೇ ಅಭಿವೃದ್ಧಿಗೆ ಹಣ ಸಿಗ್ತಿಲ್ಲ ಎಂದು ಹೇಳ್ತಿದ್ದಾರೆ ಎಂದರು.
ಹುಬ್ಬಳ್ಳಿ: ಕಾಂಗ್ರೆಸ್ (Congress) ಅಧಿಕಾರದಲ್ಲಿದ್ದಾಗ ದೇಶದ ರಕ್ಷಣಾ ಕ್ಷೇತ್ರವನ್ನು ಬಲಪಡಿಸಿಲ್ಲ. ರಕ್ಷಣಾ ಸಾಮಾಗ್ರಿಗಳನ್ನು ತಯಾರು ಮಾಡುವ ಸಂಸ್ಥೆಗಳಿಗೂ ಸಹ ಹಣಕಾಸಿನ ನೆರವು ನೀಡಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.
ಇಂದು ಭಾರತೀಯ ಸೇನೆ ಸ್ವಾವಲಂಬಿಯಾಗಿ, ಆತ್ಮನಿರ್ಭರವಾಗಿದೆ. ಇದನ್ನು ಕಾಂಗ್ರೆಸ್‍ಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಅನಾವಶ್ಯಕ ಆರೋಪಗಳನ್ನು ಮಾಡುತ್ತಿದೆ. ಈ ಹಿಂದೆ ಸಿಎಂ ಯುದ್ಧ ಯಾಕೆ ಬೇಕು ಎಂದಿದ್ರು. ಜಮೀರ್ ನಾನೇ ಬಾಂಬ್ ಕಟ್ಟಿಕೊಂಡು ಹೋಗ್ತೇನೆ ಎಂದಿದ್ರು. ಒಬ್ಬೊಬ್ಬ ಸಚಿವ, ಶಾಸಕ ಒಂದು ಮಾತನಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಯಾಕೆ ಹೀಗೆ ಹೇಳಿಕೆ ನೀಡುತ್ತಿದೆ. ಹೀಗೆ ಮಾತನಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಏನಾದರೂ ಹೇಳಿಕೊಟ್ಟಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಯಾವತ್ತೂ ದೇಶದ ಪರವಾಗಿಲ್ಲ. ಜನ ಎಲ್ಲವನ್ನೂ ನೋಡುತ್ತಿದ್ದಾರೆ. ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆಯಿದೆ, ತಂತ್ರಜ್ಞಾನದ ಬಗ್ಗೆ ಹೆಮ್ಮೆಯಿದೆ. ಭಾರತ ಇಂದು ಯುದ್ಧ ಸಾಮಾಗ್ರಿಗಳನ್ನು ಬೇರೆ ದೇಶಕ್ಕೆ ರಫ್ತು ಮಾಡುತ್ತಿದೆ ಎಂದಿದ್ದಾರೆ.
ಚೀನಾ ವಸ್ತುಗಳ ನಿಷೇಧ ವಿಚಾರವಾಗಿ, ಚೀನಾದಿಂದ ಹೆಚ್ಚಾಗಿ ಫೋನ್, ಗೊಂಬೆಗಳು ಬರುತ್ತಿವೆ. ಹಂತ ಹಂತವಾಗಿ ಕಡಿವಾಣ ಹಾಕಲಾಗುತ್ತಿದೆ. ಎಲ್ಲವನ್ನೂ ಒಂದೇ ಸಲ ನಿಲ್ಲಿಸಲು ಆಗಿಲ್ಲ. ಈ ಹಿಂದೆ ಸಾಕಷ್ಟು ಒಪ್ಪಂದಗಳು ಆಗಿದೆ. ಸ್ನೇಹಯುತವಾಗಿ ನಾವು ಹೋಗಬೇಕಿದೆ. ವಿಶ್ವಸಂಸ್ಥೆ ನಿಯಮಗಳನ್ನು ಪಾಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ
– 10.575 ಕಿಮೀ ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ – ಶೀಘ್ರವೇ ಟೆಂಡರ್ ಪ್ರತಿಕ್ರಿಯೆ ಶುರು
ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆ (Navalgund Bypass Road) ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ರಾಜ್ಯ ಸರ್ಕಾರ ಟೆಂಡರ್ ಕರೆದು ಕಾರ್ಯಾರಂಭ ಮಾಡುವ ಹಂತ ತಲುಪಿದೆ ಎಂದು ತಿಳಿಸಿದ್ದಾರೆ.
ಈ ಬೈಪಾಸ್ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (Alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಅಪಾರ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದನ್ನೆಲ್ಲ ಗಮನಿಸಿ ಶಾಶ್ವತ ಪರಿಹಾರ ಎನ್ನುವಂತೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ಸಿಕ್ಕಿದೆ. ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ ಅನುಮತಿ ನೀಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ಪಟ್ಟಣಿಗರು ರೋಸಿ ಹೋಗಿದ್ದರು. ಹೀಗಾಗಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬಹು ವರ್ಷಗಳಿಂದಲೂ ಇದ್ದ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸ್ಪಂದಿಸಿದ್ದಾರೆ. ಈ ಮೂಲಕ ಜನರ ಆಶಯ ಸಾಕಾರಗೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಐತಿಹಾಸಿಕ, ಧಾರ್ಮಿಕ ನಗರಗಳಿಗೆ ಸಂಪರ್ಕ ಜೋಡಿಸುತ್ತದೆ ನವಲಗುಂದ ಪಟ್ಟಣ. ಹೀಗಾಗಿ ಈ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಬೈಪಾಸ್ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದಿದ್ದಾರೆ.
ಕಳೆದ 10 ವರ್ಷಗಳ ಅವಧಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಆ ಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿಗಳ ಅಭಿವೃದ್ಧಿಗೆ ಸದಾ ಅಗತ್ಯ ನೆರವು ನೀಡುತ್ತಿದ್ದಾರೆಂದು ಈರ್ವರಿಗೂ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.
ಶೀಘ್ರ ಕಾಮಗಾರಿಗೆ ಒತ್ತಾಯ:
ನವಲಗುಂದ ಬೈಪಾಸ್ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಜೋಶಿ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ: ಇನ್ನು ಮುಂದೆ ಪಾಕಿಸ್ತಾನ ಕೆಮ್ಮಿದ್ರೆ ಸಾಕು, ಭಾರತೀಯ ಸೇನೆ(Indian Army) ಪಾಕ್ ಬಾರ್ಡರಿಗೆ ನುಗ್ಗುತ್ತದೆ ಎಂದು ದೊಡ್ಡ ಸಂದೇಶವನ್ನು ಜಗತ್ತಿಗೆ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹೇಳಿದರು.
ಹುಬ್ಬಳ್ಳಿಯಲ್ಲಿ(Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವದ ನಾಲ್ಕನೇ ಅತಿ ದೊಡ್ಡ ಮಿಲಿಟರಿ ಹೊಂದಿರುವುದು ಭಾರತ ವಿಶ್ವಸಂಸ್ಥೆಯ ನಿಯಮಗಳನ್ನು ಧಿಕ್ಕರಿಸಿ ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದ್ದೇವೆ. ಬಹಳಷ್ಟು ಸಂಖ್ಯೆ ಹೇಳಲ್ಲ. ಆದ್ರೆ ಭಾರತಕ್ಕೆ ಬೇಕಾದ ಉಗ್ರರಲ್ಲಿ ಒಂದಿಬ್ಬರನ್ನು ಬಿಟ್ರೆ ಎಲ್ಲಾ ಉಗ್ರರನ್ನು ಹೊಡೆದಿದ್ದೇವೆ ಎಂದರು. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಾಕ್ ಡ್ರಿಲ್‌ನಲ್ಲಿ ಸ್ವದೇಶಿ ನಿರ್ಮಿತ ಫೈರ್ ಬೋಟ್ ಬಳಕೆ
ಭಾರತ ಅಭಿವೃದ್ಧಿಯನ್ನು ಹೊಂದುತ್ತಿದೆ. ಆದರೆ ಇದು ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಮೀಸಲಾತಿ, ಸಂವಿಧಾನದ ಬದಲಾವಣೆ ಮಾಡುತ್ತದೆ ಎಂದು ದೇಶದೊಳಗೆ ಆಂತರಿಕ ಸಮಸ್ಯೆ ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
ಸದ್ಯಕ್ಕೆ ಕದನ ವಿರಾಮ ಆಗಿದೆ. ಈಗಾಗಲೇ ನಾವು ಭಯೋತ್ಪಾದನೆಯ ವಿರುದ್ಧ ಯುದ್ಧ(War on Terror) ಎಂದು ಪರಿಗಣಿಸಿದ್ದೇವೆ. ಉಗ್ರರು ಶುದ್ಧರಾಗಿಲ್ಲ. ಮೂರ್ನಾಲ್ಕು ದಿನಗಳ ಆಪರೇಷನ್‌ನಲ್ಲಿ ಉಗ್ರರ ಅಡಗುತಾಣ, ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಅಮೆರಿಕ ಮಧ್ಯಸ್ಥಿಕೆ ಕುರಿತು ಈಗಾಗಲೇ ಹೇಳಿಕೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ದೇಶ ಒಂದಾಗಿರಬೇಕು ಎಂದು ವಿಪಕ್ಷಗಳಿಗೆ ಮನವಿ ಮಾಡುತ್ತೇನೆ. ಎಲ್ಲಿ ಏನಾಗಿದೆ ಎನ್ನುವುದನ್ನು ತಿಳಿದು ಶಿವಸೇನಾ ಮುಖಂಡರು ಮಾತನಾಡಬೇಕು. ಭಾರತ ಮತ್ತು ಪಾಕಿಸ್ತಾನದ(Pakistan) ಡಿಜಿಎಂ ಮಾತುಕತೆ ಮೇಲೆ ಈ ಪ್ರಕ್ರಿಯೆಯಾಗಿದೆ. ಬಹಳ ಸ್ಪಷ್ಟವಾಗಿ ಕೆಲವು ಶರತ್ತುಗಳ ಮೇಲೆ ಈ ಪ್ರಕ್ರಿಯೆಯಾಗಿದೆ ಎಂದರು. ಇದನ್ನೂ ಓದಿ: ನಿಮ್ಮ ನ್ಯೂಕ್ಲಿಯರ್ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ
ಇನ್ನೂ ಆಹಾರ ಸಂಸ್ಕರಣೆ ಬೆಲೆ ಏರಿಕೆ ಮಾಡುವ ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, ನಮ್ಮ ದೇಶದಲ್ಲಿ ಅಕ್ಕಿ ಗೋಧಿ ಸೇರಿದಂತೆ ದವಸ ಧಾನ್ಯಗಳು ಒಂದೂವರೆ ವರ್ಷಕ್ಕೆ ಆಗುವಷ್ಟು ಇದೆ. ಸಂಗ್ರಹಣೆ ಹಾಗೂ ಸಾಗಾಟ ಮಾಡುವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ನಮ್ಮ ಇಲಾಖೆಯಿಂದ ಅಧಿಸೂಚನೆ ಸಹ ನೀಡಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಬಹಳ ದೊಡ್ಡ ಪ್ರಮಾಣದಲ್ಲಿ ನಮ್ಮ ಬಳಿ ಆಹಾರ ಸಂಗ್ರಹಣೆ ಇದೆ ಎಂದು ಹೇಳಿದರು.