Tag: Hubblli

  • ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

    ರಾಜ್ಯದಲ್ಲಿ ನಡೆಯುತ್ತಿರುವ ವಿವಾದಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ. ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು. ಕರ್ನಾಟಕ ಏಕೀಕರಣದಲ್ಲಿ ನಡೆದ ಹೋರಾಟ ನೆನಪಿಸಿಕೊಳ್ಳಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಡಿಜೆ ಹಳ್ಳಿಯ ದರ್ಗಾದಲ್ಲಿ ಬೆಂಕಿ ಅವಘಡ

    ಬಿಜೆಪಿಯಲ್ಲಿ ಯಾರು ಖಂಡಿಸುತ್ತಾರೋ, ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ. ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ. ಉಮೇಶ್ ಕತ್ತಿ 2009ರಲ್ಲಿ ಹೀಗೆಯೇ ಹೇಳಿದ್ದರು. ನನ್ನ ಮಗ ಮುಖ್ಯಮಂತ್ರಿ ಆಗ್ತಾನೆ ಅಂತ ಹೇಳಿದ್ದರು. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ, ಅನ್ಯಾಯ ಸರಿಪಡಿಸಲು ಕೇಳೋಣ ಎಂದರು.

    ಪಠ್ಯಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ. ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯಪುಸ್ತಕ ಪರಿಷ್ಕರಣ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಹಾಗೂ ರಾಜಕಾರಣಿಗಳು ಭಾಗವಹಿಸುವುದು ಸರಿಯಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು. ಆ ದೃಷ್ಠಿಯಿಂದ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ಕೊಟ್ಟರು. ಇದನ್ನೂ ಓದಿ: ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್

    Live Tv 

  • ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ – 5 ಕೆಜಿ ಗಾಂಜಾ ವಶ

    ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ – 5 ಕೆಜಿ ಗಾಂಜಾ ವಶ

    ಹುಬ್ಬಳ್ಳಿ: ಗೋವಾ ಮತ್ತು ಗೋಕರ್ಣಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ 5 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ನಿವಾಸಿ ತೌಫಿಕ್ ಸಲೀಂ ಸುದರ್ಜಿ ಎಂಬಾತ ಬಂಧಿತ ಆರೋಪಿಯಾಗಿದ್ದು, ಬೈಕ್ ನಲ್ಲಿ  ಗಾಂಜಾ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತೌಫಿಕ್ ಆಂಧ್ರಪ್ರದೇಶದದಿಂದ ಗಾಂಜಾ ತರಿಸಿಕೊಂಡು ಅದನ್ನು ಗೋವಾ ಮತ್ತು ಗೋಕರ್ಣಕ್ಕೆ ಸಾಗಾಟ ಮಾಡುತ್ತಿದ್ದ.

    ತೌಫಿಕ್ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಈ ಮೊದಲು 2018ರಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 18 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ತೌಫಿಕ್‍ನನ್ನು ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

    ಆ ಬಳಿಕ ತೌಫಿಕ್ ಮತ್ತೆ ದಂಧೆಯಲ್ಲಿ ತೊಡಗಿಕೊಂಡಿದ್ದ. ಈ ಕುರಿತು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಹುಬ್ಬಳ್ಳಿಯ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಠಾಣೆ ಪೊಲೀಸರು ತೌಫಿಕ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಬಂಧಿತನ ಬಳಿಯಿಂದ ಪೊಲೀಸರು 5 ಕೆಜಿ 200 ಗ್ರಾಂ ಗಾಂಜಾ ಹಾಗೂ ಬೈಕ್ ಒಂದನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಕುರಿತು ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ.

    ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೊಂಕಿತರು ಹಾಗೂ ಪ್ರಾಥಮಿಕ ಹಂತದಕ್ಕೆ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೋರದು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ಕೋವಿಡ್-19 ರೋಗಿಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ ಪೌರಕಾರ್ಮಿಕರು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಇತರೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದಾರೆ. ಮಾಧ್ಯಮದವರು ಕೊರೊನಾ ವಿರುದ್ದ ಹೋರಾಟದಲ್ಲಿ ಸಕ್ರಿಯವಾಗಿವ ಭಾಗವಹಿಸಿ ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ
    ಕೇಂದ್ರ ಸರ್ಕಾರದ ನಿಯಮಗಳಂತೆ ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಹಾಗೂ ಅಗತ್ಯ ವಸ್ತುಗಳು ನಿರ್ಮಿಸುವ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರಿಣಾಮಗಳನ್ನು ಅವಲೋಕಿಸಿ ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದರು.

    ಹುಬ್ಬಳ್ಳಿ ಕಂಟ್ಯಾಮಿನೇಟೆಡ್ ಜೋನ್ ಹೊರತು ಪಡಿಸಿ ಬೇರೆ ಸ್ಥಳ ಹಾಗೂ ಧಾರವಾಡ ಬೇಲೂರಿನಲ್ಲಿ ಕೈಗಾರಿಕೆಗಳನ್ನು ತೆರೆದು ಆರ್ಥಿಕ ಚಟುವಟಿಕೆಗಳು ಪಾರಂಭವಾಗಲಿ ಎಂಬ ಆಶಯ ಸರ್ಕಾರಕ್ಕೆ ಇದೆ. ಕಂಟ್ಯಾಮಿನೇಟೆಡ್ ಜೋನ್‍ನ ಕೊವೀಡ್-19 ರೋಗಿಯ ವರದಿ ನೆಗೆಟಿವ್ ಬಂದರೆ ಅಲ್ಲಿಯೂ ಉದ್ಯಮೆಗಳನ್ನು ತೆರೆಯಬಹುದು ಎಂಬ ಆಶಯ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಅಬ್ಬಯ್ಯ ಪ್ರಸಾದ್, ಶ್ರೀನಿವಾಸ ಮಾನೆ, ಎಸ್.ವಿ ಸಂಕನೂರ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ಟಿಬೇಟಿಯನ್ ಧರ್ಮಗುರು ದಲೈಲಾಮಾಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ

    ಟಿಬೇಟಿಯನ್ ಧರ್ಮಗುರು ದಲೈಲಾಮಾಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ

    ಹುಬ್ಬಳ್ಳಿ: ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾಗತ ಕೋರಿ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ಬೀಳ್ಕೊಡಲಾಯಿತು.

    ಇಂದಿನಿಂದ ಡಿ. 24ರವರೆಗೆ ಮಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ಅವರು ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ. ಆದ್ದರಿಂದ ಇಂದು ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಿದ್ದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಧರ್ಮಗುರುಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.

  • ನಕಲಿ ವೈದ್ಯರ ಹಾವಳಿ- ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್

    ನಕಲಿ ವೈದ್ಯರ ಹಾವಳಿ- ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್

    ಹುಬ್ಬಳ್ಳಿ: ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಈ ಅಕ್ರಮಕ್ಕೆ ಬ್ರೇಕ್ ಹಾಕಲು ಮುಂದಾದ ಅಧಿಕಾರಿಗಳು ಕ್ಲಿನಿಕ್ ಒಂದನ್ನು ಸೀಜ್ ಮಾಡಿದ್ದಾರೆ.

    ಕುಂದಗೋಳ ತಾಲೂಕಿನಾದ್ಯಂತ ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ತಹಶೀಲ್ದಾರ್ ಹಾಗೂ ಇನ್ಸ್‌ಪೆಕ್ಟರ್ ದಾಳಿ ನಡೆಸಿದ್ದಾರೆ. ಕುಂದಗೋಳದ ಹಲವು ಗ್ರಾಮಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಹಶೀಲ್ದಾರ್ ಬಸವರಾಜ ಮೆಳವಂಕಿ ಹಾಗೂ ಕುಂದಗೋಳ ಇನ್ಸ್‌ಪೆಕ್ಟರ್ ನವೀನ್ ಜಕ್ಕಲಿ ನೇತೃತ್ವದಲ್ಲಿ ದಾಳಿ ಮಾಡಲಾಯಿತು.

    ಈ ವೇಳೆ ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ ಅಬ್ದುಲ್ ನಜೀಮ್ ಮುಲ್ಲಾ ಎಂಬಾತನ ಕ್ಲಿನಿಕ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ದಾಳಿ ನಡೆಸಿದಾಗ ನಜೀಮ್ ಮುಲ್ಲಾ ನಕಲಿ ವೈದ್ಯ ಎಂದು ಪತ್ತೆಯಾಗಿದ್ದು, ಆತನ ಬಳಿ ಯಾವುದೇ ವೈದ್ಯಕೀಯ ದಾಖಲೆಗಳಿಲ್ಲ ಹಾಗೂ ಕ್ಲಿನಿಕ್‍ಗೆ ಸಂಬಂಧಿಸಿದಂತೆಯೂ ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ.

  • ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಸಾವು

    ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಸಾವು

    ಹುಬ್ಬಳ್ಳಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

    ಛಾಯಾ ನಾಗರಾಜ್ ಚಂದ್ರಶೇಖರಮಠ (49) ಮೃತಪಟ್ಟ ಮಹಿಳೆ ಆಗಿದ್ದು, ಕಳೆದ 1 ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬೆಂಕಿಯ ಕೆನ್ನಾಲಿಗೆಗೆ ಅವರ ದೇಹ ಶೇ.60 ರಷ್ಟು  ಸುಟ್ಟು ಹೋಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

    ಹುಬ್ಬಳ್ಳಿ ಆದರ್ಶ ನಗರ ನಿವಾಸಿಯಾಗಿದ್ದ ಛಾಯಾ ಅವರು ಜೂನ್ 17 ರಂದು ವಿಶ್ವೇಶ್ವರ ನಗರದ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೇವಾಲಯದ ಅವರಣದಲ್ಲಿದ್ದ ದೇವರ ಕಟ್ಟೆಯಲ್ಲಿ ದೀಪ ಬೆಳಗಲು ಮುಂದಾದಾಗ ಬೆಂಕಿ ಏಕಾಏಕಿ ಅವರ ಸೀರೆಗೆ ಹೊತ್ತಿಕೊಂಡಿತ್ತು. ಆಗ ಬೆಂಕಿಯಿಂದ ತಪ್ಪಿಸಿಕೊಳ್ಳಲು ಮಹಿಳೆ ದೇವಸ್ಥಾನದ ಒಳಗೆ ಓಡಿ ಹೋಗಿದ್ದರು. ಘಟನೆಯ ಸಂದರ್ಭದಲ್ಲಿ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದರು ಆ ವೇಳೆಗಾಗಲೇ ಅವರು ಸುಟ್ಟು ಹೋಗಿದ್ದರು.

    ಘಟನೆ ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದ್ದರು. ಆ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಘಟನೆಯ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ವಿಡಿಯೋದಲ್ಲೇನಿದೆ?
    ಮಹಿಳೆ ದೇವರಿಗೆ ಕೈ ಮುಗಿದು ಹಿಂದಿರುಗುತ್ತಿದ್ದರು. ಈ ವೇಳೆ ಏಕಾಏಕಿ ಅವರ ಸೀರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಮಹಿಳೆ ಕಿರುಚಾಡುತ್ತಾ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದರು. ಮಹಿಳೆಯ ಚೀರಾಟ ಕೇಳಿದ ಸ್ಥಳದಲ್ಲಿರುವ ತಕ್ಷಣವೇ ಮಹಿಳೆಯ ಬಳಿ ಓಡಿ ಬಂದು, ಕಷ್ಟಪಟ್ಟು ಬೆಂಕಿ ನಂದಿಸಿದ್ದರು. ಬಳಿಕ ಮಹಿಳೆಯನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದರು.

  • ಕರ್ನಾಟಕ ಸಿಎಂ ಪ್ರತಿನಿತ್ಯ ಅಳ್ತಾರೆ: ಸುಷ್ಮಾ ಸ್ವರಾಜ್

    ಕರ್ನಾಟಕ ಸಿಎಂ ಪ್ರತಿನಿತ್ಯ ಅಳ್ತಾರೆ: ಸುಷ್ಮಾ ಸ್ವರಾಜ್

    ಹುಬ್ಬಳ್ಳಿ: ಬಹುಮತದ ಸರ್ಕಾರವಿದ್ದರೆ ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. ಬಹುಮತದ ಸರ್ಕಾರ ಇಲ್ಲದಿದ್ದರೆ ಏನಾಗುತ್ತೆ ಅಂತಾ ರಾಜ್ಯದ ಮೈತ್ರಿ ಸರ್ಕಾರ ನೋಡಿದರೆ ಗೊತ್ತಾಗುತ್ತೆ. 37 ಶಾಸಕರು ಹೊಂದಿದ್ದವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿದೆ. ಆದರೆ ಪ್ರತಿ ದಿನ ಸಿಎಂ ಕುರ್ಚಿ ಎಳೆದಾಡುತ್ತಾರೆ. ಪರಿಣಾಮ ಇಲ್ಲಿನ ಮುಖ್ಯಮಂತ್ರಿಗಳು ಪ್ರತಿದಿನ ಅಳುತ್ತಾರೆ, ದೂರುತ್ತಾರೆ. ಆ ಬಳಿಕ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಅವರನ್ನೇ ಅಪ್ಪಿಕೊಳ್ಳುತ್ತಾರೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವ್ಯಂಗ್ಯ ಮಾಡಿದರು.

    ನಗರದಲ್ಲಿ ನಡೆದ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಜ್ ಯಾತ್ರೆಗೆ ಪ್ರತಿವರ್ಷ ತೆರಳುತ್ತಿದ್ದ ಮುಸ್ಲಿಮರ ಸಂಖ್ಯೆಯನ್ನು ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮಹಿಳೆಯರು ಪುರುಷರ ಜೊತೆಗೆ ಹಜ್‍ಗೆ ತೆರಳಬೇಕು ಎನ್ನುವ ನಿರ್ಬಂಧವನ್ನು ಸಡಿಲಿಸಲಾಗಿದೆ. ಈ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಮೋದಿಯವರ ಸರ್ಕಾರ ಕೆಲಸ ಮಾಡಿದೆ. ಪೂರ್ಣ ಬಹುಮತದ ಕಾರಣ ಮೋದಿ ಸರ್ಕಾರ ಇಷ್ಟೆಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎಂದರು.

    ಆಡಳಿತ ಪಕ್ಷ ಸ್ಥಿರವಾಗಿ ಇಲ್ಲದಿದ್ದರೆ ಏನೆಲ್ಲಾ ಆಗಲಿದೆ ಎಂಬುವುದಕ್ಕೆ ರಾಜ್ಯ ಮೈತ್ರಿ ಸರ್ಕಾರವನ್ನು ನೋಡಿದ್ದು, ದೇಶದ ಸುರಕ್ಷರತೆಗೆ, ಸುಸ್ಥಿರತೆ ಹಾಗೂ ಅಭಿವೃದ್ಧಿಗೆ ಮತ ನೀಡಿ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಮನವಿ ಮಾಡಿದ್ದಾರೆ.

    ದೇಶದ ಸುರಕ್ಷತೆಗೆ, ಸುಸ್ಥಿರತೆಗೆ, ಅಭಿವೃದ್ಧಿಗೆ ಈ ಬಾರಿ ಮತಹಾಕಿ. ನರೇಂದ್ರ ಮೋದಿ ಅವರ ಕೈಯಲ್ಲಿ ದೇಶ ಸದ್ಯ ಸುರಕ್ಷಿತವಾಗಿದೆ. ಎಲ್ಲರೂ ಕಮಲದ ಗುರುತಿಗೆ ಮತಹಾಕಿ ಪೇಡೆ ತಿನ್ನಿರಿ ಎಂದು ಕರೆ ನೀಡಿದರು.

  • ಮೂರು ದಿನ ಇಲ್ಲೇ ಉಳಿಯಲು ನೀತಿ ಸಂಹಿತೆ ಅಡ್ಡಿ – ಅನ್ಯಥಾ ಭಾವಿಸದಂತೆ ಸಿಎಂ ಮನವಿ

    ಮೂರು ದಿನ ಇಲ್ಲೇ ಉಳಿಯಲು ನೀತಿ ಸಂಹಿತೆ ಅಡ್ಡಿ – ಅನ್ಯಥಾ ಭಾವಿಸದಂತೆ ಸಿಎಂ ಮನವಿ

    – ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರವಾಸ

    ಹುಬ್ಬಳ್ಳಿ: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರವಾಸ ಮಾಡಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವ ಕಡೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.

    ಇಂದು ಹುಬ್ಬಳ್ಳಿ ನಗರದಲ್ಲಿ ನಡೆಯಲಿರುವ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದ ಜನರಿಗೆ ಮನವಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇಲ್ಲೇ ಇದ್ದು ಅಭಿವೃದ್ಧಿ ಮಾಡುತ್ತೆನೆ. ಈಗಲೂ ಮೂರು ದಿನ ಇಲ್ಲೇ ಇರಬೇಕು ಎಂಬ ಉದ್ದೇಶವಿತ್ತು. ಆದರೆ ಹಲವು ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಸಂಹಿತೆ ಜಾರಿಗೆ ಇರುವ ಕಾರಣ, ನಾನು ಮುಂದಿನ ದಿನಗಳಲ್ಲಿ ಬಂದು ಹೆಚ್ಚಿನ ಸಮಯ ಇಲ್ಲೇ ಕೆಲಸ ಮಾಡುತ್ತೆನೆ ಎಂದು ಹೇಳಿದರು.

    ಮುಂದಿನ ಪ್ರವಾಸದ ವೇಳೆ ಈ ಭಾಗದ ಹಳ್ಳಿಗಳಿಗೆ ಹಾಗೂ ನಗರಗಳಿಗೆ ಭೇಟಿ ಮಾಡುವ ಕುರಿತು ಹೇಳಿದ ಸಿಎಂ, ಯಾವುದೇ ಸಮಸ್ಯೆ ಇದ್ದರೂ ಅವುಗಳಿಗೆ ಸೂಕ್ತ ನಿರ್ಧಾರ ಮಾಡಲಾಗುತ್ತದೆ. ಅಲ್ಲದೇ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ. ರಾಜ್ಯ ನಾಯಕತ್ವ ವಹಿಸಿದ ಮೇಲೆ ಇದೇ ಮೊದಲ ಭೇಟಿಯಾಗಿದ್ದು, ಜನರು ನನ್ನ ಮನವಿಯನ್ನು ಅನ್ಯಥಾ ಭಾವಿಸದಂತೆ ಮನವಿ ಮಾಡಿದರು.

    ಇದೇ ವೇಳೆ ಬೆಂಗಳೂರು ಏರ್ ಶೋ ಶಿಫ್ಟ್ ಮಾಡುವ ಕೇಂದ್ರ ಸರ್ಕಾರ ನೀತಿಯ ಕುರಿತು ಪ್ರಶ್ನೆಗೆ ಉತ್ತರಿಸಿ, ಲೋಕಸಭೆ ಚುನಾವಣೆ ಇಟ್ಟುಕೊಂಡು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ. ಏರ್ ಶೋ ಬೆಂಗಳೂರಿನಿಂದ ಶಿಫ್ಟ್ ಮಾಡಲು ಉತ್ತರ ಪ್ರದೇಶದಲ್ಲಿ ಲೋಕಸಭೆ ಸ್ಥಾನಗಳು ಹೆಚ್ಚಾಗಿರುವುದು ಕಾರಣ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನನಗೆ ಬಂದಿಲ್ಲ. ಆದರೆ ಮಾಧ್ಯಮಗಳ ವರದಿ ಅನ್ವಯ ಈ ನಿರ್ಧಾರ ಮಾಡುವುದು ಸರಿಯಲ್ಲ ಎಂದರು. ಇದನ್ನು ಓದಿ: ಏಷ್ಯಾದ ವಿಶಿಷ್ಟ ನ್ಯಾಯಾಲಯ ಸಂಕೀರ್ಣ ಭಾನುವಾರ ಹುಬ್ಬಳ್ಳಿಯಲ್ಲಿ ಲೋಕಾರ್ಪಣೆ 

    ಕೆಶಿಪ್ ಸ್ಥಳಾಂತರ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಎಚ್‍ಡಿಕೆ, ಈ ಕುರಿತು ಮಾಹಿತಿಯನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ಕೇಳಿ. ಕೆಲವು ಇಲಾಖೆಗಳ ಕಾಮಗಾರಿ ಮುಗಿದ ಬಳಿಕ ಆಯಾ ಇಲಾಖೆಗಳ ಕಚೇರಿಗಳನ್ನು ಅವುಗಳ ವ್ಯಾಪ್ತಿಯಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುತ್ತದೆ. ಈ ಕುರಿತು ನನ್ನ ಬಳಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಉದ್ಯಮಿ ಪುತ್ರನ ಅಪಹರಿಸಿ 1 ಕೋಟಿ ರೂ.ಗೆ ಡಿಮಾಂಡ್ ಮಾಡಿದವ್ರು ಜೈಲು ಸೇರಿದ್ರು!

    ಉದ್ಯಮಿ ಪುತ್ರನ ಅಪಹರಿಸಿ 1 ಕೋಟಿ ರೂ.ಗೆ ಡಿಮಾಂಡ್ ಮಾಡಿದವ್ರು ಜೈಲು ಸೇರಿದ್ರು!

    ಹುಬ್ಬಳ್ಳಿ: 7ನೇ ತರಗತಿ ಬಾಲಕನ್ನು ಅಪಹರಿಸಿ 1 ಕೋಟಿ ರೂ. ಬೇಡಿಕೆಯಿಟ್ಟಿದ್ದ ಘಟನೆ ರಾಜ್ಯ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.

    ನಗರದ ಪ್ರತಿಷ್ಠಿತ ಉದ್ಯಮಿ ಹಾಗೂ ರಿಯಲ್ ಎಸ್ಟೇಟ್ ವ್ಯಾಪಾರಿ ಅಹ್ಮದ್ ಅತ್ತರ್ ಅವರ ಪುತ್ರನನ್ನು ಜುಲೈ 30ರಂದು ದುಷ್ಕರ್ಮಿಗಳು ಅಪಹರಿಸಿ 1 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು. ಬಳಿಕ ನಡೆದ ಮಾತುಕತೆಯಲ್ಲಿ 40 ಲಕ್ಷ ರೂ. ಪಡೆಯಲು ಒಪ್ಪಿಗೆ ನೀಡಿದ್ದರು. ಇದರಂತೆ ಅಹ್ಮದ್ 40 ಲಕ್ಷ ರೂ. ನೀಡಿ ತಮ್ಮ ಮಗನನ್ನು ದುಷ್ಕರ್ಮಿಗಳಿಂದ ಬಿಡಿಸಿಕೊಂಡು ಬಂದಿದ್ದರು.

    ಏನಿದು ಪ್ರಕರಣ?: ಹುಬ್ಬಳ್ಳಿಯ ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಅಹ್ಮದ್ ಅವರ ಪುತ್ರ 7ನೇ ತರಗತಿ ಓದುತ್ತಿದ್ದ. ಇದನ್ನು ಗಮನಿಸಿದ್ದ ಆರೋಪಿಗಳು ಶಾಲೆಯ ಬಳಿಯಿಂದ ಬಾಲಕನನ್ನು ಅಪಹರಣ ಮಾಡಿದ್ದರು. ಬಳಿಕ ಅಹ್ಮದ್ ಅವರಿಂದ ಹಣ ಪಡೆದು ಮರುದಿನ ಅಂದರೆ ಜುಲೈ 31 ಸಂಜೆ ಬಾಲಕನನ್ನು ಗದಗ ಜಿಲ್ಲೆಯ ಕದಂಪೂರ ಗ್ರಾಮದಲ್ಲಿ ಬಿಡುಗಡೆ ಮಾಡಿದ್ದರು. ಪುತ್ರನನ್ನು ಅಪಹರಣ ಮಾಡಿದ್ದ ಆರೋಪಿಗಳಿಂದ ಅಹ್ಮದ್ ತಮ್ಮ ಮಗನನ್ನು ಬಿಡಿಸಿಕೊಂಡು ಬಂದ ಬಳಿಕ ಜುಲೈ 31ರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು.

    ಬಾಲಕನ ಸುಳಿವು: ಪ್ರಕರಣದ ಕುರಿತು ಅಹ್ಮದ್ ರಿಂದ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅಪಹರಣಕ್ಕೆ ಒಳಗಾಗಿದ್ದ ಬಾಲಕ ನೀಡಿದ ಸುಳಿವು ಆರೋಪಿಗಳ ಪತ್ತೆಗೆ ಸಹಾಯವಾಗಿತ್ತು.

    ಅಂದಹಾಗೇ ಹುಬ್ಬಳ್ಳಿ ನಗರದ ಶಾಲೆಯಿಂದ ಬಾಲಕನ್ನು ಅಪಹರಣ ಮಾಡಿದ್ದ ಆರೋಪಿಗಳು ಅಂದು ಆಟೋವೊಂದರಲ್ಲಿ ನಗರವನ್ನು ಸುತ್ತಿದ್ದರು. ಈ ವೇಳೆ ಅಹ್ಮದ್ ಅವರೊಂದಿಗೆ ಫೋನ್ ಮೂಲಕ ಸಂಪರ್ಕಿಸಿ ಹಣದ ವ್ಯವಹಾರ ನಡೆಸಿದ್ದರು. ಈ ವೇಳೆ ಬಾಲಕ ತಾನು ಪ್ರಯಾಣಿಸಿದ್ದ ಆಟೋ ಸಂಖ್ಯೆಯನ್ನು ಗಮನಿಸಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದ.

    ಬಾಲಕನಿಂದ ಪಡೆದ ಮಾಹಿತಿ ಆಧರಿಸಿ ಆರೋಪಿಗಳ ಪತ್ತೆ ನಡೆಸಿದ್ದರು. ಹುಬ್ಬಳ್ಳಿ ನಗರದಲ್ಲಿ ಸಂಚಾರಿಸುವ ಎಲ್ಲಾ ಆಟೋಗಳ ಮಾಹಿತಿ ಪೊಲೀಸರ ಬಳಿ ಇದ್ದು, ಈ ದಾಖಲೆ ಅನ್ವಯ ಆಟೋ ಚಾಲಕನ್ನು ಅಬ್ದುಲ್ ಶಿರೂರ ಹಾಗೂ ಅಹ್ಮದ ಆಜಾದ್‍ರನ್ನು ಬಂಧಿಸಿದ್ದರು. ಬಳಿಕ ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಪ್ರಕರಣ ಇತರೇ 8 ಆರೋಪಿಗಳು ಸಿಕ್ಕಿಬಿದ್ದರು. ಆದರೆ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ಶಾಕಿಂಗ್ ಸಂಗತಿ ತಿಳಿದು ಬಂದಿದ್ದು, ಅಹ್ಮದ್ ಅವರ ಮನೆಯಲ್ಲಿ ಪ್ಲಂಬರ್ ಕೆಲಸ ಮಾಡುತ್ತಿದ್ದ ಅಜಾದ್ ಅಪಹರಣಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯಾಗಿದ್ದ.

    ಬಾಲಕನನ್ನು ಅಪಹರಣ ಮಾಡಿದ ಬಳಿಕ 11 ಮಂದಿಯೂ ಅಹ್ಮದ್ ಚಲನವಲನವನ್ನು ಗಮನಿಸಿದ್ದರು. ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡಿದ್ದ ವೇಳೆಯೂ ಫೋನ್ ಮಾಡಿ ಪೊಲೀಸರಿಗೆ ದೂರು ನೀಡಿದರೆ ಬಾಲಕನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು.

    ಸದ್ಯ ಕೃತ್ಯದಲ್ಲಿ ಭಾಗಿಯಾಗಿದ್ದ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಬಂಧಿತರ ಕೈಯಲ್ಲಿದ್ದ 26 ಲಕ್ಷ ರೂ. ಹಣ, ಕೃತ್ಯಕ್ಕೆ ಬಳಸಿದ್ದ ಆಟೋ, ಬೈಕ್ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಅಜಾದ್‍ನನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

  • ಹುಬ್ಬಳ್ಳಿ ಶನಿದೇವಾಲಯಕ್ಕೆ ಪ್ರಧಾನಿ ಮೋದಿ ಸಹೋದರ ಭೇಟಿ

    ಹುಬ್ಬಳ್ಳಿ ಶನಿದೇವಾಲಯಕ್ಕೆ ಪ್ರಧಾನಿ ಮೋದಿ ಸಹೋದರ ಭೇಟಿ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಪ್ರಮೋದ್ ಮೋದಿ ಅವರು ವಾಣಿಜ್ಯ ನಗರಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ನಗರದ ಶನಿ ದೇವಸ್ಥಾನಕ್ಕೆ ಭೇಟಿ ದರ್ಶನ ಪಡೆದಿದ್ದಾರೆ.

    ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಪ್ರಮೋದ್ ಮೋದಿ, ಕರ್ನಾಟಕದ ಜನರು ಗುಜರಾತ್ ಜನರಿಗಿಂತ ಹೆಚ್ಚು ಪ್ರೀತಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಇಲ್ಲಿ ಆಗಮಿಸಿದ್ದೇನೆ. ಇಲ್ಲಿನ ಜನರ ಆತ್ಮೀಯತೆ ಅದ್ಭುತ. ಈ ಹಿಂದೆ ಚುನಾವಣೆಯಲ್ಲೂ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಮತ ನೀಡಿದ್ದಾರೆ. ಇಲ್ಲಿಗೆ ಭೇಟಿ ನೀಡಿಲು ಬಹಳ ಸಂತಸವಾಗುತ್ತದೆ ಎಂದರು.

    ಇದೇ ವೇಳೆ ಚಂದ್ರಗ್ರಹಣ ದಿನದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅದಕ್ಕೂ ನನಗೂ ಸಂಬಂಧವಿಲ್ಲ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಕಾರಣ ದೇವಾಲಯಕ್ಕೂ ಭೇಟಿ ನೀಡಿದ್ದೇನೆ ಎಂದರು.

    ಧಾರವಾಡದ ಗಾಣಿಗಾರ ಸಮಾವೇಶದಲ್ಲಿ ಭಾಗಿಯಾಗಲು ಪ್ರಮೋದ್ ಮೋದಿ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಶನಿದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನ ಟ್ರಸ್ಟ್ ಕಮಿಟಿ ಸದಸ್ಯರು ಪ್ರಮೋದ್ ಅವರಿಗೆ ಸನ್ಮಾನ ಮಾಡಿ ಸ್ವಾಗತಿಸಿದರು. ಸನ್ಮಾನ ಸ್ವೀಕರಿಸಿ ಅಲ್ಲಿಂದ ಧಾರವಾಡಕ್ಕೆ ತೆರಳಿದರು.

    ಗ್ರಹಣದ ಸಂಬಂಧ ದೇವಾಲಯಕ್ಕೆ ವಿಶೇಷ ಪೂಜೆ ಮಾಡಲಾಗಿತ್ತು. ತಮ್ಮ ವಿಶೇಷ ಆಹ್ವಾನದ ಮೇರೆಗೆ ದೇವಾಲಯಕ್ಕೆ ಭೇಟಿ ನೀಡಿದ್ದರು ಅಷ್ಟೇ. ಭೇಟಿ ವೇಳೆ ದೇವಾಲಯದ ವಿಶೇಷತೆಗಳ ಕುರಿತು ಮಾಹಿತಿ ಕೇಳಿ ಪಡೆದರು ಅಂತ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.