Tag: Hubei

  • ವುಹಾನ್‍ನಲ್ಲಿ 1,500 ವಿವಿಧ ವೈರಸ್ ರಕ್ಷಣೆ – ಬಿರುಗಾಳಿ ಎಬ್ಬಿಸಿದ ಚೀನಾ ಡೈಲಿ ಟ್ವೀಟ್

    ವುಹಾನ್‍ನಲ್ಲಿ 1,500 ವಿವಿಧ ವೈರಸ್ ರಕ್ಷಣೆ – ಬಿರುಗಾಳಿ ಎಬ್ಬಿಸಿದ ಚೀನಾ ಡೈಲಿ ಟ್ವೀಟ್

    – ವುಹಾನ್‍ನಲ್ಲಿದೆ ಏಷ್ಯಾದ ಅತಿ ದೊಡ್ಡ ವೈರಸ್ ಬ್ಯಾಂಕ್
    – ವೈರಾಲಾಜಿ ಕೇಂದ್ರದ ಫೋಟೋ ಪ್ರಕಟಿಸಿ ಟ್ವೀಟ್

    ಬೆಂಗಳೂರು: ಕೊರೊನಾ ವೈರಸ್ ಹಾವಳಿಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಇದು ಮನುಷ್ಯನಿಗೆ ಹರಡಿದ್ದು ಹೇಗೆ ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಚೀನಾ ಡೈಲಿ 2018ರಲ್ಲಿ ಮಾಡಿರುವ ಟ್ವೀಟ್ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಏಷ್ಯದ ಅತಿ ದೊಡ್ಡ ವೈರಸ್ ಬ್ಯಾಂಕಿನ ಚಿತ್ರವನ್ನು ವೀಕ್ಷಿಸಿ, ಮಧ್ಯ ಚೀನಾ ಹುಬೆ ಪ್ರಾಂತ್ಯದಲ್ಲಿರುವ ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಾಜಿ ಕೇಂದ್ರದಲ್ಲಿ 1,500 ವಿವಿಧ ವೈರಸ್ ಗಳನ್ನು ರಕ್ಷಿಸಲಾಗಿದೆ ಎಂದು ಚೀನಾ ಡೈಲಿ 2018ರ ಮೇ 29 ಬೆಳಗ್ಗೆ 5:45 ಕ್ಕೆ ಟ್ವೀಟ್ ಮಾಡಿತ್ತು.

    https://twitter.com/ChinaDaily/status/1001255579157979136

    ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಕೊರೊನಾ ವೈರಸ್ ವುಹಾನ್ ನಲ್ಲಿರುವ ಹಸಿ ಮಾಂಸಗಳ ಮಾರುಕಟ್ಟೆಯ ಪ್ರಾಣಿಯಿಂದ ಮನುಷ್ಯನಿಗೆ ಬಂದಿದೆ ಎಂಬ ವಾದವಿದ್ದರೆ ಇನ್ನೊಂದು ಚೀನಾದ ವೈರಾಲಾಜಿ ಲ್ಯಾಬ್‍ನಿಂದ ವೈರಸ್ ಸೋರಿಕೆಯಾಗಿದೆ ಎಂಬ ವಾದ ಕಳೆದ ಎರಡು ತಿಂಗಳಿನಿಂದ ಬರುತ್ತಿದೆ. ಈ ಮಧ್ಯೆ ಅಮೆರಿಕ ಚೈನಿಸ್ ವೈರಸ್ ಎಂದು ಕರೆದಿದ್ದಕ್ಕೆ ಚೀನಾ ಅಮೆರಿಕದ ಸೈನಿಕರು ವುಹಾನ್‍ನಲ್ಲಿ ವೈರಸ್ ಬಿಟ್ಟಿರಬಹುದು ಎಂದು ಹೇಳಿಕೆ ನೀಡಿತ್ತು.

    ವುಹಾನ್ ವಿಶೇಷತೆ ಏನು?
    ಮಧ್ಯ ಚೀನಾದ ದೊಡ್ಡ ನಗರ ವುಹಾನ್ ಆಗಿದ್ದು ಇಲ್ಲಿ ಬಂದರು, ವಿಮಾನ ನಿಲ್ದಾಣಗಳಿವೆ. 35 ಶಿಕ್ಷಣ ಸಂಸ್ಥೆಗಳಿದ್ದು ಚೀನಾದ ಶೈಕ್ಷಣಿಕ ಹಬ್ ಎಂದು ವುಹಾನ್ ನಗರವನ್ನು ಕರೆಯಲಾಗುತ್ತದೆ. ಈ ಕಾರಣಕ್ಕೆ ಹಲವು ರಾಷ್ಟ್ರಗಳ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಚೀನಾ ಸರ್ಕಾರವೇ ಇಲ್ಲಿ ಹಲವು ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ಒಟ್ಟು ಇಲ್ಲಿ 350 ಸಂಶೋಧನಾ ಕೇಂದ್ರಗಳಿವೆ.

    ಚೀನಾವೇ ಸೃಷ್ಟಿಸಿದ ವೈರಸ್?
    ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಗಮನಿಸಿ ಈಗ ಚೀನಾವೇ ಈ ವೈರಸ್ ಸೃಷ್ಟಿ ಮಾಡಿತೇ ಎನ್ನುವ ಶಂಕೆ ಎದ್ದಿದೆ. ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಾಜಿ ಎಂಬ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈಗ ಕೊರೋನಾ ವೈರಸ್ ಸೃಷ್ಟಿಯಾದ ಕೇಂದ್ರ ಸ್ಥಳ ವುಹಾನ್ ಆಗಿದೆ. ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪೀಡಿತರಾಗಿದ್ದಾರೆ.

    ವೈರಾಲಾಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಸಾರ್ಸ್ ಆರಂಭದಲ್ಲಿ ಕಂಡು ಬಂದಿದ್ದು ಇದೇ ವುಹಾನ್ ನಲ್ಲಿ. 2002ರಲ್ಲಿ ಕಾಣಿಸಿಕೊಂಡಾಗ ಚೀನಾ ಈ ವಿಚಾರವನ್ನು ಮುಚ್ಚಿಟ್ಟಿತ್ತು. ಆದರೆ ವಿದೇಶಗಳಿಗೆ ಹರಡಿದಾಗ ಕೊನೆಗೆ ಸತ್ಯವನ್ನು ಒಪ್ಪಿಕೊಂಡಿತ್ತು. ಈಗಲೂ ಕೆಲ ವಿಜ್ಞಾನಿಗಳು ಇದು ಯಾವುದೋ ಪ್ರಾಣಿಯಿಂದ, ಪಕ್ಷಿಯಿಂದ ಕೊರೋನಾ ವೈರಸ್ ಸೃಷ್ಟಿಯಾಗಿಲ್ಲ. ಜೈವಿಕ ಅಸ್ತ್ರವನ್ನು ಪರೀಕ್ಷೆ ಮಾಡುತ್ತಿದ್ದಾಗ ಹೇಗೋ ಸೋರಿಕೆಯಾಗಿ ಈಗ ಜಗತ್ತಿಗೆ ಹರಡುತ್ತಿದೆ ಎಂದು ವಾದವನ್ನು ಮುಂದಿಡುತ್ತಿದ್ದಾರೆ. ಭಾರತದಲ್ಲಿ ಮೊದಲು ಕೇರಳದ ಮೂರು ಮಂದಿ ವಿದ್ಯಾರ್ಥಿ ಕೊರೋನಾ ವೈರಸ್ ಪತ್ತೆಯಾಗಿತ್ತು. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿದ್ದರು ಎನ್ನುವುದು ವಿಶೇಷ.

  • ಚೀನಾದಲ್ಲಿ ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 564ಕ್ಕೆ ಏರಿಕೆ

    ಚೀನಾದಲ್ಲಿ ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 564ಕ್ಕೆ ಏರಿಕೆ

    ಬೀಜಿಂಗ್: ಮಾರಣಾಂತಿಕ ಕೊರೊನಾ ವೈರಸ್ ಸೋಂಕಿಗೆ ಚೀನಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು 28,018 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಚೀನಾದ ಆರೋಗ್ಯ ಸಮಿತಿ ಮಾಹಿತಿ ನೀಡಿದೆ.

    ಬುಧವಾರ ಒಂದೇ ದಿನ 73 ಮಂದಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದು, ಹುಬೇಯ ಪ್ರಾಂತ್ಯದಲ್ಲಿ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹುಬೇಯನಲ್ಲಿ ಬುಧವಾರ 2,987 ಸೋಂಕು ತಗುಲಿರುವ ಶಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ಹುಬೇಯದಲ್ಲಿ ಒಟ್ಟು 19,665 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಕೊರೊನಾ ವೈರಸ್‍ನಿಂದ ಆಸ್ಪತ್ರೆ ಸೇರಿದ ತಂದೆ – ಹಸಿವಿನಿಂದ ಬಳಲಿ ಶವವಾದ ವಿಶೇಷಚೇತನ ಮಗ

    ಹುಬೇಯ ಪ್ರಾಂತ್ಯದಲ್ಲಿ ಸೋಂಕು ತಗುಲಿರುವ 14,314 ಮಂದಿಯನ್ನು ಆಸ್ಪತ್ರೆಯ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರಲ್ಲಿ 756 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಜಪಾನ್ ದೇಶದ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ 10 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಈಗ ಸೋಂಕು ತಗಲಿರುವವರ ಸಂಖ್ಯೆ ಹೆಚ್ಚಾಗಿದ್ದು, ಒಟ್ಟು 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಡೈಮಂಡ್ ಪ್ರಿನ್ಸೆಸ್ ಹಡಗನ್ನು ಸದ್ಯ ಯಾಕೋಹಾಮಾ ಬಂದರಿನಲ್ಲಿ ನಿಲ್ಲಿಸಲಾಗಿದೆ. ಈ ಹಡಗಿನಲ್ಲಿ ಒಟ್ಟು 3,700 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

    ವಿಶ್ವಾದ್ಯಂತ ಕೊರೊನಾ ವೈರಸ್ ಹರಡುತ್ತಿದ್ದು, ಏಷ್ಯಾ, ಯುರೋಪ್, ಅಮೆರಿಕಾ, ಕೆನೆಡಾದಲ್ಲಿ ಸೋಂಕು ಹರಡಿದೆ. ಈವರೆಗೆ ಸುಮಾರು 20 ದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.