Tag: Hubli-Dharwad Municipal Corporation

  • ಹುಬ್ಬಳ್ಳಿ-ಧಾರವಾಡ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

    ಹುಬ್ಬಳ್ಳಿ-ಧಾರವಾಡ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

    ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubli-Dharwad Municipal Corporation) 22ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಜೂನ್ 20ರಂದು ಚುನಾವಣೆ ನಡೆಯಲಿದೆ.

    ಧಾರವಾಡ (Dharwad) ಪಾಲಿಕೆಯ ಸ್ವಾತಂತ್ರ‍್ಯ ಅಮೃತಮಹೋತ್ಸವ ಸಭಾಭವನದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.

    22ನೇ ಅವಧಿಯ ಹು-ಧಾ ಪಾಲಿಕೆ ಚುನಾವಣೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿದೆ. ಇದನ್ನೂ ಓದಿ: ಬಸ್ ಸೀಟಿಗಾಗಿ ಕೈಕೈ ಮಿಲಾಯಿಸಿದ ಮೈಸೂರು ಮಹಿಳೆಯರು – ನಾರಿ ʻಶಕ್ತಿʼ ಪ್ರದರ್ಶನ

    82 ಸದಸ್ಯರ ಬಲಾಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಮಂದಿ ಬಿಜೆಪಿ (BJP) ಸದಸ್ಯರು, 33 ಮಂದಿ ಕಾಂಗ್ರೆಸ್ (Congress) ಸದಸ್ಯರು, AIMIM 3, ಜೆಡಿಎಸ್ 1 ಹಾಗೂ 6 ಪಕ್ಷೇತರ ಸದಸ್ಯರು ಇದ್ದಾರೆ. ಸಂಸದ, ಶಾಸಕರು, ಪರಿಷತ್ ಸದಸ್ಯರು ಸೇರಿ ಒಟ್ಟು ಸದಸ್ಯರ ಬಲ 91 ಇದೆ. ಅಡ್ಡಮತದಾನ ಮಾಡಬಹುದೆಂಬ ಕಾರಣಕ್ಕೆ ಉಭಯ ಪಕ್ಷದ ಅಧ್ಯಕ್ಷರಿಂದ ವಿಪ್ ಜಾರಿ ಮಾಡಲಾಗಿದೆ.

    ಬಿಜೆಪಿ ಅಧ್ಯಕ್ಷರಿಂದ ಕಳೆದ 10 ದಿನಗಳ ಹಿಂದೆಯೇ ವಿಪ್ ಜಾರಿ ಮಾಡಿದರೆ, ಕಾಂಗ್ರೆಸ್ ತಮ್ಮ ಪಕ್ಷದ ಸದದ್ಯರಿಗೆ ಸೋಮವಾರ ವಿಪ್ ಜಾರಿಗೊಳಿಸಿದೆ. ಇದನ್ನೂ ಓದಿ: ಹೆಂಡತಿ ನನ್ನ ಮಾತು ಕೇಳುತ್ತಿಲ್ಲ, ದಯಮಾಡಿ ಪರಿಹರಿಸಿ- ಶಾಸಕರಿಗೆ ವ್ಯಕ್ತಿ ದೂರು

  • ಪಕ್ಷೇತರ ಅಭ್ಯರ್ಥಿಗೆ ಉಪಮೇಯರ್ ಸ್ಥಾನ- ಶೆಟ್ಟರ್ ಘೋಷಣೆ

    ಪಕ್ಷೇತರ ಅಭ್ಯರ್ಥಿಗೆ ಉಪಮೇಯರ್ ಸ್ಥಾನ- ಶೆಟ್ಟರ್ ಘೋಷಣೆ

    ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಬಿಜೆಪಿಗೆ ಒಲಿಯುತ್ತಿದ್ದು, ಉಪಮೇಯರ್ ಸ್ಥಾನವನ್ನು ಪಕ್ಷೇತರ ಅಭ್ಯರ್ಥಿಗೆ ನೀಡುವುದಾಗಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

    ಇತ್ತೀಚೆಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗಳಿಸಿ ಮೇಯರ್ ಸ್ಥಾನದ ಗದ್ದುಗೆ ಎರುವಲ್ಲಿ ಯಶ್ವಸಿಯಾಗುತ್ತು. ಆದರೆ ಉಪಮೇಯರ್ ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗುತ್ತಿದೆ. ಬಿಜೆಪಿಯಿಂದ ಗೆಲುವು ಸಾಧಿಸಿದ ಸದಸ್ಯರ ಪೈಕಿ ಯಾರೂ ಪರಿಶಿಷ್ಟ ಜಾತಿಯ ಮಹಿಳಾ ಸದಸ್ಯರು ಇಲ್ಲದ ಪರಿಣಾಮ ಪಕ್ಷೇತರ ಅಭ್ಯರ್ಥಿಯನ್ನು ಉಪಮೇಯರ್ ಮಾಡುವುದಾಗಿ ಜಗದೀಶ್ ಶೆಟ್ಟರ್ ಘೋಷಿಸಿದ್ದಾರೆ.

    ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಆಕ್ಷಾಂಕಿಯಾಗಿದ್ದರು. ಆದರೆ ಪಕ್ಷದ ಟಿಕೆಟ್ ಸಿಗದ ಪರಿಣಾಮ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸಿದ 69ನೇ ವಾರ್ಡ್ ನ ದುರ್ಗಮ್ಮ ಬಿಜವಾಡ್ ಗೆ ಒಲಿದ ಅದೃಷ್ಟ ಒಲಿದಿದೆ. ಬಿಜೆಪಿ ನಾಯಕರ ಜೊತೆಗಿನ ಮಾತುಕತೆ ಸಕ್ಸಸ್ ಆಗಿದೆ. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

    ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪರಿಣಾಮ ದುರ್ಗಮ್ಮ ಬಿಜವಾಡರ ಪತಿ ಶಶಿಕಾಂತರನ್ನ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಹೊರಡಿಸಿದ್ದ ಆದೇಶವನ್ನು ಸಹ ಹಿಂಪಡೆಯುವುದಾಗಿ ಘೋಷಿಸಲಾಗಿದೆ. ಪರಿಣಾಮ ದುರ್ಗಮ್ಮ ಬಿಜವಾಡರ ಪತಿ ಶಶಿಕಾಂತ ಬಿಜವಾಡ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನೆರಡೂ ದಿನದಲ್ಲಿ ಪಕ್ಷೇತರ ಅಭ್ಯರ್ಥಿ ದುರ್ಗಮ್ಮ ಬಿಜವಾಡ್ ಸಹ ಬಿಜೆಪಿ ಸೇರ್ಪಡೆಯಾಗಲಿದ್ದು, ಇವರನ್ನು ಬಿಜೆಪಿ ನಾಯಕರು ಪಕ್ಷದ ಪರವಾಗಿ ಉಪಮೇಯರ್ ಮಾಡಲಿದ್ದಾರೆ.

    ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಜಗದೀಶ್ ಶೆಟ್ಟರ್, ಟಿಕೆಟ್ ಹಂಚಿಕೆಯಲ್ಲಿ ಕೆಲ ಗೊಂದಲ ಉಂಟಾಗಿತ್ತು. ಈಗ ಪಕ್ಷೇತರರು ಸಹ ನಮ್ಮ ಪರವಾಗಿದ್ದಾರೆ. 69ನೇ ವಾರ್ಡ್ ನ ಶಶಿ ಬಿಜವಾಡ ಅವರ ಪತ್ನಿಯನ್ನು ನಾವು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೆಳಗಾವಿ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರ ವಹಿಸಿಕೊಳ್ಳಲಿದೆ. ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಬೆಂಬಲಕ್ಕಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ಮೇಯರ್, ಉಪ ಮೇಯರ್ ನಾವೇ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಅನಧಿಕೃತವಾಗಿ ಹುಕ್ಕಾ ಮಾರಾಟ-ಐದು ಲಕ್ಷ ಮೌಲ್ಯದ ವಸ್ತು ಜಪ್ತಿ

    ಅನಧಿಕೃತವಾಗಿ ಹುಕ್ಕಾ ಮಾರಾಟ-ಐದು ಲಕ್ಷ ಮೌಲ್ಯದ ವಸ್ತು ಜಪ್ತಿ

    ಹುಬ್ಬಳ್ಳಿ: ಅನಧಿಕೃತವಾಗಿ ಹುಕ್ಕಾ ಮಾರಾಟ ಹಾಗೂ ಸೇವನೆಗೆ ಅವಕಾಶ ಕಲ್ಪಿಸಿದ್ದ ಅಂಗಡಿ ಮೇಲೆ ಪಾಲಿಕೆಯ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಐದು ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ಅರ್ಬನ್ ರೂಟ್ಸ್ ಅಂಗಡಿಯಲ್ಲಿ ಅನಧಿಕೃತವಾಗಿ ಹುಕ್ಕಾ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಅಂಗಡಿಯಲ್ಲೇ ಹುಕ್ಕಾ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು 5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 15 ಹುಕ್ಕಾ ಪೈಪ್, 20 ಹುಕ್ಕಾ ಸ್ಟ್ಯಾಂಡ್, ವಿವಿಧ ಫ್ಲೇವರ್ಸ್ ನ ವಿಸಲಾ ಪೈಪ್ ಗಳನ್ನು ವಶಪಡಿಸಿಕೊಂಡಿದ್ದಾರೆ.

    ಕೇಶ್ವಾಪುರದ ಜಯಶೀಲ ಬಾಲ್ಮಿ, ನರೇಂದ್ರ ತಿಕಂದರ ಮಾಲೀಕತ್ವದ ಅರ್ಬನ್ ರೂಟ್ಸ್ ಹೆಸರಿನಲ್ಲಿ ಅಂಗಡಿ ತೆರದು ಅನಧಿಕೃತವಾಗಿ ಹುಕ್ಕಾ ಮಾರಾಟ ಮಾಡುತ್ತಿದ್ದರು. ಈ ಹುಕ್ಕಾ ಶಾಪಿನಲ್ಲಿ ಪ್ರತಿನಿತ್ಯ ನೂರಾರು ಕಾಲೇಜು ವಿದ್ಯಾರ್ಥಿಗಳು ಹುಕ್ಕಾ ಸೇವೆನೆ ಮಾಡುತ್ತಿದ್ದರು.

    ಹುಕ್ಕಾ ಸೇವನೆ ಹಾಗೂ ಮಾರಾಟದ ಬಗ್ಗೆ ಸ್ಥಳೀಯರು ಪೊಲೀಸ್ ಇಲಾಖೆ ಹಾಗೂ ಪಾಲಿಕೆಯ ಆರೋಗ್ಯಾಧಿಕರಿಗಳಿಗೆ ದೂರು ನೀಡಿದ್ದರು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಅಂಗಡಿ ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರೆಸಿದ್ದಾರೆ.