Tag: Hunsur

  • Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    ಮೈಸೂರು: ವಿದ್ಯುತ್ ತಂತಿ ತಗುಲಿ ತಾಯಿ-ಮಗ (Mother-Son) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು (Hunsur) ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ. ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ (Electric Shock) ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಇದನ್ನೂ ಓದಿ: ಕ್ರಿಮಿನಲ್‌ ಕೇಸ್‌ಗಳಲ್ಲಿ ಆರೋಪಪಟ್ಟಿ ರೂಪಿಸಲು ವಿಳಂಬ – ಸುಪ್ರೀಂ ಕಳವಳ

    ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯುತ್ ಇಲಾಖೆ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

  • ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ – ತಿಪ್ಪೆ ಗುಂಡಿಯಲ್ಲಿ ಗಂಡನ ಶವ ಪತ್ತೆ

    ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ – ತಿಪ್ಪೆ ಗುಂಡಿಯಲ್ಲಿ ಗಂಡನ ಶವ ಪತ್ತೆ

    – ಹುಲಿ ಕೊಂದಿದೆ ಅಂತ ನಂಬಿಸಲು ಹೋಗಿ ತಗ್ಲಾಕೊಂಡ ಹೈನಾತಿ

    ಮೈಸೂರು: ಪರಿಹಾರ ಹಣದ (Compensation money) ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

    ವೆಂಕಟಸ್ವಾಮಿ ಕೊಲೆಯಾದ ವ್ಯಕ್ತಿ. ಈತನ ಪತ್ನಿ ಸಲ್ಲಾಪುರಿ ಪತಿಯನ್ನು ಕೊಲೆ ಮಾಡಿ ಹುಲಿ (Tiger) ಕೊಂದಿದೆ ಎಂದು ನಾಟಕವಾಡಿದ್ದ ಹೈನಾತಿ. ಇದನ್ನೂ ಓದಿ: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

    ಈ ದಂಪತಿ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸ ಇದ್ದರು. ಒಂದು ವಾರದ ಹಿಂದೆ ಪತಿ ನಾಪತ್ತೆಯಾಗಿದ್ದಾರೆ ಅಂತ ಪತ್ನಿ ದೂರು ನೀಡಿದ್ದರು. ಹುಲಿ ಆತನನ್ನು ಕೊಂದು ಎಳೆದುಕೊಂಡು ಹೋಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಳು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಪ್ರಾಣಿ ಬಂದ ಕುರುಹು ಇರಲಿಲ್ಲ. ಅನುಮಾನಗೊಂಡು ಮನೆಯಲ್ಲಿ ಹುಡುಕಾಟ ವೇಳೆ ಮನೆಯ ಹಿಂದೆ ತಿಪ್ಪೆಗುಂಡಿಯಲ್ಲಿ ವೆಂಕಟಸ್ವಾಮಿ ಶವ ಪತ್ತೆಯಾಗಿದೆ.

    ವಿಷ ಹಾಕಿ ಪತಿ ಕೊಲೆ ಮಾಡಿದ್ದ ಪತ್ನಿ ನಂತರ ತಿಪ್ಪೆಗುಂಡಿಗೆ ಎಳೆದುಕೊಂಡು ಹಾಕಿ ಕಥೆ ಕಟ್ಟಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಪರಿಹಾರದ ಹಣಕ್ಕಾಗಿ ಕೃತ್ಯವೆಸಗಿರುವ ಬಗ್ಗೆ ಹೇಳಿಕೆ ನೀಡಿದ್ದಾಳೆ. ಕಾಡು ಪ್ರಾಣಿಯಿಂದ ಹತ್ಯೆಗೊಳಗಾದ ಕುಟುಂಬಕ್ಕೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಅಂತಾ ಕೊಲೆ ಮಾಡಿದ್ದಾಳೆ. ಪತ್ನಿ ಸಲ್ಲಾಪುರಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

  • Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಮೈಸೂರು: ಸಿಡಿಮದ್ದು (Explosive) ಸ್ಫೋಟಗೊಂಡು ಮಹಿಳೆ ಗಾಯಗೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಹುಣಸೂರು (Hunsur) ತಾಲೂಕು ಹುಳಿಯಾಳು ಗ್ರಾಮದಲ್ಲಿ ನಡೆದಿದೆ.

    ಕಮಲಮ್ಮ (54) ಸ್ಫೋಟದಿಂದ ಗಾಯಗೊಂಡ ಮಹಿಳೆ. ಮನೆ ಬಳಿ ಕಮಲಮ್ಮಗೆ ಒಂದು ಕವರ್ ಸಿಕ್ಕಿತ್ತು. ಕವರ್ ತೆರೆದಾಗ ಸಿಡಿಮದ್ದು ಸ್ಫೋಟಗೊಂಡಿದೆ. ಇದನ್ನೂ ಓದಿ: ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    ಸದ್ಯ ಗಾಯಾಳು ಕಮಲಮ್ಮನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

  • Mysuru | ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ – ಐವರಿಗೆ ಗಾಯ

    Mysuru | ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ – ಐವರಿಗೆ ಗಾಯ

    ಮೈಸೂರು: ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರಿಗೆ ಗಾಯಗಳಾದ ಘಟನೆ ಮೈಸೂರಿನ (Mysuru) ಹುಣಸೂರು (Hunsuru) ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ.

    ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

    ನಿಂಗರಾಜುರವರ ಮನೆಯಲ್ಲಿ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತ್ಸ್ಯ 6000 – ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಭಾರತ ಸಜ್ಜು

    ಆಸ್ಪತ್ರೆಗೆ ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

  • ಮೈಸೂರು| ಹೊಸ ವರ್ಷದಂದು ಕಟ್‌ ಮಾಡಿ ಉಳಿದಿದ್ದ ಕೇಕ್ ತಿಂದು 30 ಮಕ್ಕಳು ಅಸ್ವಸ್ಥ

    ಮೈಸೂರು| ಹೊಸ ವರ್ಷದಂದು ಕಟ್‌ ಮಾಡಿ ಉಳಿದಿದ್ದ ಕೇಕ್ ತಿಂದು 30 ಮಕ್ಕಳು ಅಸ್ವಸ್ಥ

    ಮೈಸೂರು: ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥವಾದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರಿನ ಬೋಳನಹಳ್ಳಿಯ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.

    ಹೊಸ ವರ್ಷದ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು ದಿನದ ನಂತರ ಮಕ್ಕಳು ತಿಂದಿದ್ದಾರೆಂದು ಹೇಳಲಾಗಿದೆ. ಕೇಕ್ ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬೋಳನಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರಿನ ಕೋಟೆ ದರ್ಗಾ ಜಾಗದಲ್ಲಿ ಕಾಮಗಾರಿಗೆ ಸ್ಥಳೀಯರ ವಿರೋಧ – ನಗರದಲ್ಲಿ ಬೂದಿ ಮುಚ್ಚಿದ ಕೆಂಡ

    ಚಿಕಿತ್ಸೆ ನಂತರ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಕೇಕ್ ತಿಂದು ಅಸ್ವಸ್ಥರಾಗಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ನಿರ್ಲಕ್ಷ್ಯತೆ ವಹಿಸಿದ ಶಾಲಾ ಮುಖ್ಯೋಪಾದ್ಯಾಯ ಅಶ್ವತ್ಥ್‌ರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೆಚ್‌ಡಿಕೆ ಅಪ್ಪಟ ಅಭಿಮಾನಿ, ಜೆಡಿಎಸ್ ಮುಖಂಡನ ಭೀಕರ ಹತ್ಯೆ

  • ಚಲುವರಾಯಸ್ವಾಮಿ ಮೇಲೆ ಹಲ್ಲೆ ಆಗಿದ್ಯಾ? ಕುಮಾರಸ್ವಾಮಿ ಆರೋಪ ಅಲ್ಲಗಳೆದ ಕೃಷಿ ಸಚಿವ

    ಚಲುವರಾಯಸ್ವಾಮಿ ಮೇಲೆ ಹಲ್ಲೆ ಆಗಿದ್ಯಾ? ಕುಮಾರಸ್ವಾಮಿ ಆರೋಪ ಅಲ್ಲಗಳೆದ ಕೃಷಿ ಸಚಿವ

    ರಾಮನಗರ: ಸಚಿವ ಚಲುವರಾಯಸ್ವಾಮಿಗೆ (Chaluvarayaswamy) ಕಪಾಳಮೋಕ್ಷ ಆಗಿದ್ಯಾ? ಮಾಜಿ ಎಂಎಲ್‌ಸಿ ಕೀಲಾರ ಜಯರಾಂ ಹಲ್ಲೆ ಮಾಡಿದ್ರಾ? ಟ್ರಾನ್ಸ್‌ಫರ್ ವಿಚಾರದಲ್ಲಿ ಗಲಾಟೆ ಆಯ್ತಾ? ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮಾಡಿದ ಆರೋಪ ಇಂತಹ ಅನುಮಾನಗಳಿಗೆ ಕಾರಣ ಆಗಿದೆ.

    ಹುಣಸೂರಿನ (Hunsur) ಹೋಟೆಲ್‌ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಎಂಎಲ್‌ಸಿ ಕಿಲಾರ ಜಯರಾಮ್ ನಡುವೆ ವರ್ಗಾವಣೆ ಹಣಕಾಸಿನ ವಿಚಾರದಲ್ಲಿ ಕಿತ್ತಾಟ ನಡೆದಿತ್ತು. ಈ ವೇಳೆ ಕೃಷಿ ಸಚಿವರ ಮೇಲೆ ಮಾಜಿ ಎಂಎಲ್‌ಸಿ ಹಲ್ಲೆ ಮಾಡಿದ್ದರು ಎಂಬ ವಿಚಾರವನ್ನು ಕುಮಾರಸ್ವಾಮಿ ಬಹಿರಂಗ ಮಾಡಿದ್ದರು. ಸಚಿವರ ಮೇಲೆ ಹಲ್ಲೆ ನಡೆಯುವಂತಹ ಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿದೆ ಎಂದು ಲೇವಡಿ ಮಾಡಿದ್ದರು. ಇದನ್ನೂ ಓದಿ: Tumakuru| ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ: ಹೆತ್ತ ತಾಯಿ ಅಳಲು

    ಆದರೆ ಈ ಆರೋಪವನ್ನು ಸಚಿವ ಚಲುವರಾಯಸ್ವಾಮಿ ಅಲ್ಲಗಳೆದಿದ್ದಾರೆ. ಅವರು ಚಪಲಕ್ಕೆ ಏನೇನು ಹೇಳುತ್ತಾರೋ ಗೊತ್ತಿಲ್ಲ. ಹೆಚ್‌ಡಿಕೆಗೆ ಮಗನ ಚುನಾವಣೆಗಿಂತ ಚಲುವರಾಯಸ್ವಾಮಿ ವಿಚಾರ ಮುಖ್ಯವಾಗಿದೆ. ನನಗೂ, ಜಯರಾಂಗೂ ಯಾವುದೇ ವರ್ಗಾವಣೆ, ಹಣದ ವ್ಯವಹಾರ ನಡೆದಿಲ್ಲ. ನಮ್ಮ ಸರ್ಕಾರ ಬಂದಾಗಿಂದ ಅವರು ಯಾವುದೇ ಸಹಕಾರ ನಮಗೆ ಕೊಟ್ಟಿಲ್ಲ. ಎಲ್ಲರದ್ದು ನನ್ನ ಜೇಬಲ್ಲಿ ಇದೆ ಎನ್ನುತ್ತಾರೆ. ಒಂದೂವರೆ ವರ್ಷದಿಂದ ಇನ್ನೂ ಬಿಡುಗಡೆ ಮಾಡಿಲ್ಲ. ಬರೀ ಈ ರೀತಿಯ ಹೇಳಿಕೆಯಲ್ಲೇ ಹೆಚ್‌ಡಿಕೆ ಕಾಲಹರಣ ಮಾಡುತ್ತಿದ್ದಾರೆ. ನಮ್ಮ ಹೆಸರು ಹೇಳದಿದ್ದರೆ ಅವರಿಗೆ ನಿದ್ದೆ ಬರಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

  • Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

    Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

    – ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು
    – ಆಕೆ ಕ್ಷಣಕ್ಕೊಂದು ಮಾತನಾಡುತ್ತಿದ್ದಳು, ಸಾಲದ ಕಥೆ ಹೇಳ್ತಿದ್ದಳು

    ಮೈಸೂರು: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಮೇಲಿನ ಅಪಹರಣ ಪ್ರಕರಣದ (HD Revanna Kidnap Case) ಸಂತ್ರಸ್ತ ಮಹಿಳೆ ಕಳೆದ 5 ದಿನಗಳಿಂದ ರೇವಣ್ಣನ ಆಪ್ತ ಸಹಾಯಕನ ತೋಟದ ಮನೆಯಲ್ಲಿ ಇದ್ದರು.

    ಈ ತೋಟದ ಮನೆ ಇರೋದು ಮೈಸೂರು ಜಿಲ್ಲೆಯ ಹುಣಸೂರು (Hunsur) ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ. ಈ ತೋಟದ ಮನೆಯಲ್ಲಿ (Farmhouse) ಆಕೆ ಏನು ಮಾಡುತ್ತಿದ್ದರು? ನಿಜವಾಗಿಯೂ ಆಕೆಗೆ ತೊಂದರೆ ಕೊಡುತ್ತಿದ್ರಾ ಅನ್ನೋ? ಬಗ್ಗೆ ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

    ಕೂಲಿ ಕೆಲಸಕ್ಕೆ ಬಂದಿರೋ ಮಹಿಳೆ ಅಂತಾ ಹೇಳಿದ್ರು:
    ಸಂತ್ರಸ್ತ ಮಹಿಳೆಯನ್ನು ಇಟ್ಟಿದ್ದ ತೋಟದ ಮನೆಯಲ್ಲಿ ಬೇರೆ ಯಾರಿಗೂ ಅನುಮಾನ ಬಾರದಂತೆ ಇರಲು ಸಂತ್ರಸ್ತೆ ಮಹಿಳೆಯನ್ನು ಕೂಲಿಗೆ ಬಂದ ಮಹಿಳೆ ಅಂತಾ ಬಿಂಬಿಸಲಾಗಿತ್ತು. ತೋಟದ ಮನೆಯಲ್ಲಿನ ಕೆಲಸಗಾರರಿಗೆ ಆ ಮಹಿಳೆಯನ್ನು ಹೊಸ ಕೂಲಿಯವಳು ಅಂತಾ ಪರಿಚಯಿಸಲಾಗಿತ್ತು. ಆಕೆ ಕ್ಷಣಕ್ಕೊಂದು ಮಾತಾಡುತ್ತಿದ್ದಳು, ಮಹಿಳೆಯನ್ನು ವಾಪಾಸ್ ಕಳಿಸಿ ಅಂತಾ ಕಾರ್ಮಿಕರು ತೋಟದ ಮಾಲೀಕರಿಗೆ ಹೇಳಿದ್ದರು. ಆದರೆ ಇದಕ್ಕೆ ಮಾಲೀಕ ಒಪ್ಪದೇ ನಿಮಗೆ ಯಾಕೆ ಅಂತ ಸುಮ್ಮನಿರಿಸಿದ್ದರು ಎಂದು ಕಾರ್ಮಿಕರು ಹೇಳಿದ್ದಾರೆ.

    ಅಲ್ಲದೇ ನಾವು ಆಕೆಯನ್ನು ಯಾವ ಊರಿನವರು ಎಂದು ಹೇಳಿದಾಗ ಆಕೆ ಹೆಚ್‌.ಡಿ ಕೋಟೆ ತಾಲೂಕಿನ ಮಹಿಳೆ ಎಂದು ಹೇಳಿಕೊಂಡಿದ್ದಳು. ಅಲ್ಲದೇ 25 ಸಾವಿರ ಸಂಘಕ್ಕೆ ಸಾಲ ಕಟ್ಟಬೇಕು ಅಂತಾ ನಮ್ಮನ್ನೇ ಯಾಮಾರಿಸಿದ್ದಳು. ಇಲ್ಲಿಗೆ ಯಾರು ಕರೆದುಕೊಂಡುಬಂದು ಬಿಟ್ಟರು ಅಂತಾನೂ ಗೊತ್ತಿಲ್ಲ. ಶನಿವಾರ ರಾತ್ರಿ ನೋಡುವಷ್ಟರಲ್ಲಿ ಆಕೆ ಇರಲೇ ಇಲ್ಲ, ಭಾನುವಾರ ಬೆಳಗ್ಗೆ 9:30ರ ವೇಳೆಗೆ ಪೊಲೀಸರೇ ಕರೆತಂದಿದ್ದರು. ಆದ್ರೆ ಇಲ್ಲಿಂದ ಯಾರನ್ನ ಕರೆದುಕೊಂಡು ಹೋಗಿಲ್ಲ. ನಮಗೆ ಮುಂಚೆನೇ ಆಕೆ ಬಗ್ಗೆ ಗೊತ್ತಿದ್ದರೆ ನಾವೇ ಪೊಲೀಸರಿಗೆ ಹಿಡಿದುಕೊಡುತ್ತಿದ್ದೆವು ಎಂದು ಅಲ್ಲಿನ ಕೂಲಿ ಕಾರ್ಮಿಕರು ಮಾಹಿತಿ ನೀಡಿದ್ದಾರೆ.

    ತೋಟದ ಮನೆಗೆ ರೇವಣ್ಣ ಬಂದಿದ್ರಾ?
    ಈ ತೋಟ ರಾಜ್‌ಗೋಪಾಲ್‌ ಅವರದ್ದು, ರೇವಣ್ಣ ಅವರು ಇಲ್ಲಿಗೆ ಬಂದಿಲ್ಲ, ಈವರೆಗೂ ನಾನು ಅವರನ್ನು ಇಲ್ಲಿ ನೋಡಿಲ್ಲ, ನಾವು ಯಾಕೆ ಸುಳ್ಳು ಹೇಳಬೇಕು ಎಂದು ಕಾರ್ಮಿಕರು ಹೇಳಿದ್ದಾರೆ. ಮತ್ತೊಬ್ಬರು ಕಾರ್ಮಿಕರು ಇಲ್ಲಿ ಮಹಿಳೆ ಇದ್ದುದ್ದನ್ನೇ ನಾವು ನೋಡಿಲ್ಲ ಎಂದಿದ್ದಾರೆ.

  • ಹುಣಸೂರಿನಲ್ಲಿ KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ

    ಹುಣಸೂರಿನಲ್ಲಿ KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ

    ಮೈಸೂರು: ಕೆಎಸ್‌ಆರ್‌ಟಿಸಿ (KSRTC) ಹಾಗೂ ಜೀಪ್ (Jeep) ನಡುವೆ ಭೀಕರ ಅಪಘಾತ (Accident) ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆಯ ಹುಣಸೂರು (Hunsur) ನಗರದಲ್ಲಿ ನಡೆದಿದೆ.

    ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಘಟನೆ ಸಂಭವಿಸಿದ್ದು, ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀಪ್ ಹೆಚ್‌ಡಿ ಕೋಟೆಯಿಂದ ಬರುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಲ್ಯಾಣಮಂಟಪದಲ್ಲೇ ಹೈಡ್ರಾಮಾ – ಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

    ಅದೇ ರೀತಿ ಮೈಸೂರಿನಲ್ಲಿ ಮತ್ತೊಂದು ಅಪಘಾತ ನಡೆದಿದೆ. ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ ನಡೆದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಮೈಸೂರಿನ ಜಲದರ್ಶಿನಿ ಪ್ರವಾಸ ಮಂದಿರದ ಬಳಿ ಘಟನೆ ನಡೆದಿದೆ. ಹುಣಸೂರಿನಿಂದ ಮೈಸೂರಿಗೆ ಬರುತಿದ್ದ ಸಂದರ್ಭ ಎರಡು ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ತಪ್ಪಿಸುವ ಸಲುವಾಗಿ ಒಂದು ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದು, ಹಿಂಬದಿಯಿಂದ ಬಂದ ಮತ್ತೊಂದು ಬಸ್ ಈ ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಮುಖ, ಕೈಕಾಲುಗಳಿಗೆ ಗಾಯವಾಗಿದೆ. ಘಟನೆಯಿಂದ ಹುಣಸೂರು-ಮೈಸೂರು ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

  • ಸೆರೆ ಹಿಡಿದಿದ್ದ ಆನೆ ಜೊತೆ ಕಾದಾಟ – ದಸರಾ ಆನೆ ಗೋಪಾಲಸ್ವಾಮಿ ಸಾವು

    ಸೆರೆ ಹಿಡಿದಿದ್ದ ಆನೆ ಜೊತೆ ಕಾದಾಟ – ದಸರಾ ಆನೆ ಗೋಪಾಲಸ್ವಾಮಿ ಸಾವು

    ಮೈಸೂರು: ದಸರಾ ಮಹೋತ್ಸವದಲ್ಲಿ (Mysuru Dasara) ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ದಾಳಿಯಿಂದ ಸಾವನ್ನಪ್ಪಿದೆ.

    ಹುಣಸೂರು (Hunsur) ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ (Elephant Gopalaswamy) ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ. ಇದನ್ನೂ ಓದಿ: ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

    ಈಚೆಗಷ್ಟೇ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ತನ್ನ ಶಾಂತ ಸ್ವಭಾವಕ್ಕೆ ಈ ಆನೆ ಜನರ ಪ್ರೀತಿ ಗಳಿಸಿತ್ತು. ಈ ಬಾರಿ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.

    ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಒಮ್ಮೆ ಜನದಟ್ಟಣೆ ಹಾಗೂ ಪಟಾಕಿ ಶಬ್ದದಿಂದ ಗೋಪಾಲಸ್ವಾಮಿ ವಿಚಲಿತ ಆಗಿತ್ತು. 14 ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜೆಡಿಎಸ್‌ನಲ್ಲೇ ಉಳಿಯುತ್ತಾರಾ ಜಿಟಿಡಿ?

    ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜೆಡಿಎಸ್‌ನಲ್ಲೇ ಉಳಿಯುತ್ತಾರಾ ಜಿಟಿಡಿ?

    ಮೈಸೂರು: ನಾನು ಕುಮಾರಸ್ವಾಮಿ ಅವರ ಜೊತೆ ಮಾತಾಡಿರಲಿಲ್ಲ. ಹುಣಸೂರಿನ ಜನ ನಮ್ಮನ್ನು ಒಂದು ಮಾಡಿದ್ದಾರೆ ಎನ್ನುವ ಮೂಲಕ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ನಲ್ಲೇ ಉಳಿಯುವ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ.

    ಹುಣಸೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿದರು. ಅಲ್ಲದೇ ಹೆಚ್‌ಡಿಕೆ, ಜಿಟಿಡಿ ಹಾಗೂ ಸಾ.ರಾ.ಮಹೇಶ್‌ ಮೂವರು ಪರಸ್ಪರರ ಕೈ ಹಿಡಿದು ಕಾರ್ಯಕ್ರಮದ ದೀಪ ಬೆಳಗಿದರು. ಜಿ.ಟಿ.ದೇವೇಗೌಡರ ನಂತರ ಅವರ ಪುತ್ರ ಜಿ.ಡಿ.ಹರೀಶ್‌ ಗೌಡ ಜೊತೆ ಹೆಚ್‌ಡಿಕೆ ಮಾತುಕತೆ ನಡೆಸಿ ಗಮನ ಸೆಳೆದರು. ಇದನ್ನೂ ಓದಿ: ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

    ಈ ವೇಳೆ ಸಮಾರಂಭದಲ್ಲಿ ಮಾತನಾಡಿದ ಜಿಟಿಡಿ, ನೀವು ಗಟ್ಟಿಯಾಗಿ ಜೊತೆಯಾಗಿ ಇರಿ. ಜಯಶಾಲಿಯಾಗಿ ಬನ್ನಿ ಅಂತಾ ಸ್ವಾಮೀಜಿ ಹೇಳಿದ್ದಾರೆ. ನನ್ನ ಮಗನಿಗೆ ಟಿಕೆಟ್ ಕೊಡಿ ಅಂತಾ ನಾನು ಎಂದೂ ಕುಮಾರಣ್ಣನ ಕೇಳಿಲ್ಲ ಎಂದು ತಿಳಿಸಿದರು.

    ಜನತಾ ಪರಿವಾರ ಜಯಪ್ರಕಾಶ ನಾರಾಯಣ್ ಕಟ್ಟಿದ ಆಸ್ತಿ. ಈ ಪಕ್ಷ ಉಳಿಸುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ. ಹೆಚ್‌.ಡಿ.ದೇವೇಗೌಡರು ಶ್ರಮದಿಂದ ಕಟ್ಟಿರುವ ಪಕ್ಷವನ್ನು ಬೆಳೆಸುವ ಜವಾಬ್ದಾರಿ ಕುಮಾರಸ್ವಾಮಿ ಅವರ ಮೇಲಿದೆ. ಜನರು ಮತ್ತು ಸ್ವಾಮೀಜಿಗಳ ಆಶೀರ್ವಾದ ನಿಮ್ಮ ಮೇಲಿದೆ ಎಂದು ಹೆಚ್‌ಡಿಕೆ ಅವರನ್ನು ಹಾರೈಸಿದರು. ಇದನ್ನೂ ಓದಿ: ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

    ಪಕ್ಷದ ಆಂತರಿಕ ವಿಚಾರವಾಗಿ ಸಾ.ರಾ.ಮಹೇಶ್‌ ಹಾಗೂ ಕುಮಾರಸ್ವಾಮಿ ಅವರೊಂದಿಗೆ ಜಿ.ಟಿ.ದೇವೇಗೌಡ ಅವರು ಮುನಿಸಿಕೊಂಡಿದ್ದರು. ಅನೇಕ ಬಾರಿ ಹೆಚ್‌ಡಿಕೆ ಭಾಗವಹಿಸುತ್ತಿದ್ದ ಕಾರ್ಯಕ್ರಮಗಳಿಗೆ ಗೈರಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪುತ್ರನಿಗೂ ಟಿಕೆಟ್‌ ಕೊಡಿಸಬೇಕು ಎಂದು ಜಿ.ಟಿ.ದೇವೇಗೌಡ ಯತ್ನಿಸಿದ್ದರು. ಈ ಸಂಬಂಧ ಕಾಂಗ್ರೆಸ್‌ ಜೊತೆಗೂ ಮಾತುಕತೆ ನಡೆಸಿದ್ದರು. ಆದರೆ ಕಾಂಗ್ರೆಸ್‌ನಲ್ಲಿ 2 ಟಿಕೆಟ್‌ ಕೊಡುವ ಭರವಸೆ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿಡಿ ಕಾಂಗ್ರೆಸ್‌ ಸೇರುವ ನಿರ್ಧಾರದಿಂದ ದೂರ ಉಳಿದಿದ್ದಾರೆಯೇ ಎಂಬುದು ಪ್ರಶ್ನೆಯಾಗಿದೆ. ಇಂತಹ ಸನ್ನಿವೇಶದಲ್ಲಿ ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]