Tag: husbands

  • ಒಬ್ಬಳನ್ನೇ ಮದುವೆಯಾದ ಗಂಡಂದಿರಿಬ್ಬರ ಫೈಟ್ – ಪತ್ನಿಗಾಗಿ ಆಕೆಯ ಮೊದಲನೇ ಗಂಡನ ಹತ್ಯೆಗೆ ಸ್ಕೆಚ್ ಹಾಕ್ದ

    ಒಬ್ಬಳನ್ನೇ ಮದುವೆಯಾದ ಗಂಡಂದಿರಿಬ್ಬರ ಫೈಟ್ – ಪತ್ನಿಗಾಗಿ ಆಕೆಯ ಮೊದಲನೇ ಗಂಡನ ಹತ್ಯೆಗೆ ಸ್ಕೆಚ್ ಹಾಕ್ದ

    -ಹೆಂಡ್ತಿಗೆ ಮೇಸೇಜ್ ಮಾಡಿದ ಗಂಡ
    -ಕೊಲೆಗೈಯಲು 2ನೇ ಗಂಡನಿಂದ ಸಿನಿಮಾ ರೀತಿ ಕಿಡ್ನ್ಯಾಪ್
    -ಗಾಡಿ ಕೆಟ್ಟು ಲಾಕ್

    ಚಿಕ್ಕಮಗಳೂರು: ಪತ್ನಿಗೆ ಮೆಸೇಜ್ ಮಾಡಿದ ಮೊದಲ ಗಂಡನನ್ನು ಎರಡನೇ ಗಂಡ ಸಿನಿಮಾ ರೀತಿ ಕಿಡ್ನ್ಯಾಪ್ ಮಾಡಿ ಕೊಲೆಗೈಯಲು ಯತ್ನಿಸಿ ಮಾರ್ಗ ಮಧ್ಯೆ ಗಾಡಿ ಕೆಟ್ಟ ಪರಿಣಾಮ ಪೊಲೀಸರಿಗೆ ಲಾಕ್ ಆದ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

    ಕಳೆದ ಐದು ವರ್ಷಗಳ ಹಿಂದೆ ಕಡೂರಿನಲ್ಲಿ ವಾಸಿಸುತ್ತಿದ್ದ ರಾಜಸ್ಥಾನದ ಕುಠಾಣಿ ಮೂಲದ ಮಂಜುಳಾರನ್ನು ಮೋಹನ್ ರಾಮ್ ಎಂಬಾತ ಕಳೆದ ವರ್ಷ ಜೋಧ್‍ಪುರ್‌ನಲ್ಲಿ ಪ್ರೀತಿಸಿ ಮದುವೆಯಾಗಿದ್ದನು. ಮದುವೆ ಬಳಿಕ ಮೋಹನ್ ರಾಮ್ ತನ್ನ ಪತ್ನಿಯನ್ನು ಕಡೂರಿಗೆ ಕರೆದುಕೊಂಡು ಬಂದು ಸಂಸಾರ ನಡೆಸುತ್ತಿದ್ದನು. ಕಡೂರಿಗೆ ಬಂದ 2 ತಿಂಗಳ ನಂತರ ರಾಜಸ್ಥಾನಕ್ಕೆ ಹೋಗಿದ್ದ ಹೆಂಡತಿಯನ್ನು ಕಡೂರಿಗೆ ಕರೆದುಕೊಂಡು ಬರಲು ಹೋಗಿದ್ದ ಪತಿ ಮೋಹನ್ ರಾಮ್ ಜೊತೆ ಮಂಜುಳಾ ಬರಲಿಲ್ಲ. ಕಡೂರಿಗೆ ಬರಲು ಆಕೆ ಒಪ್ಪದ ಹಿನ್ನೆಲೆ ಬೇಸತ್ತು ಮೋಹನ್ ಸುಮ್ಮನಾಗಿದ್ದನು.

    ಹೆಂಡತಿಯ ಮೇಲಿನ ಪ್ರೀತಿಯಿಂದ ಮೋಹನ್ ಆಗಾಗ್ಗೆ ಅವಳ ಮೊಬೈಲ್‍ಗೆ ಮೆಸೇಜ್ ಮಾಡಿದರೂ ಆಕೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕಳೆದ ತಿಂಗಳು ಮತ್ತೆ ಆಕೆಯನ್ನ ಮಾತನಾಡಿಸಿ, ಬುದ್ಧಿ ಹೇಳಿ ಕರೆದುಕೊಂಡು ಬರಲು ಹೋಗಿದ್ದ ಮೋಹನ್‍ಗೆ ಆಕೆ ಹರಿಯಾಣದ ಪಿಪ್ಲಿವಾಲ ಗ್ರಾಮದ ಓಂ ಪ್ರಕಾಶ್ ಜೊತೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಆಜಾದ್ ಬೆಂಬಲಿಸಿ 51 ನಾಯಕರ ರಾಜೀನಾಮೆ – ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಆಘಾತ

    POLICE JEEP

    ಮೋಹನ್ ತನ್ನ ಪತ್ನಿಗೆ ಮೆಸೇಜ್ ಮಾಡುತ್ತಿರುವ ವಿಷಯ ತಿಳಿದ ಎರಡನೇ ಪತಿ ಓಂ ಪ್ರಕಾಶ್ ಮೊದಲ ಪತಿ ಮೋಹನ್ ನನ್ನ ಮುಗಿಸಲು ಸಂಚು ರೂಪಿಸಿದ್ದ. ಏಳು ಜನರ ತಂಡದೊಂದಿಗೆ ಆ.28ರ ಭಾನುವಾರ ರಾತ್ರಿ ಕಡೂರಿಗೆ ಬಂದ ಓಂ ಪ್ರಕಾಶ್ ಸಿಪಿಸಿ ಕಾಲೋನಿಯಲ್ಲಿರುವ ದಿನಸಿ ಅಂಗಡಿಯಲ್ಲಿದ್ದ ಮೋಹನ್ ರಾಮ್‍ನನ್ನು ಸಿನಿಮಿಯ ಶೈಲಿಯಲ್ಲಿ ಅಪಹರಿಸಿ ಆತನ ಬಾಯಿಗೆ ಬಟ್ಟೆ ಕಟ್ಟಿ ಥಳಿಸಿ, ಕಾರಿನಲ್ಲಿಯೇ ಕೊಲೆಗೆ ಸಂಚು ನಡೆಸಿದ್ದಾನೆ. ಕಾರಿನಲ್ಲಿ ಅಪಹರಿಸಿಕೊಂಡು ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಗಮನಿಸಿದ ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಕಡೂರು ಪೊಲೀಸರು ಹಂತಕರ ಕಾರನ್ನು ಚೇಸ್ ಮಾಡಿಕೊಂಡು ಹೋಗುವಾಗ ಕಡೂರು ತಾಲೂಕಿನ ಮತಿಘಟ್ಟ ಬಳಿ ಹಂತಕರ ಕಾರು ಕೈಕೊಟ್ಟ ಪರಿಣಾಮ ಎಂಟು ಜನ ಹಂತಕರು ಪೊಲೀಸರ ಬಂಧಿಸಿದ್ದಾರೆ.

    ಸಾವಿನ ದವಡೆಯಲ್ಲಿದ್ದ ಮೋಹನ್ ರಾಮ್ ಅದೃಷ್ಟವಶಾತ್ ಪಾರಾಗಿದ್ದಾರೆ. ಸಿನಿಮಿಯ ರೀತಿ ಗಾಡಿಯನ್ನು ಚೇಸ್ ಮಾಡಿದ ಪೊಲೀಸರು ಬೆಂಗಳೂರು ಮೂಲದ ಆರೋಪಿ 2ನೇ ಪತಿ ಓಂ ಪ್ರಕಾಶ್, ಶೈಲೇಂದ್ರ, ಪ್ರದೀಪ್, ದಲ್ಲಾರಾಮ್, ಜಿತೇಂದ್ರ, ಶಂಕರ್ ಪಾಟೀಲ್ ಹಾಗೂ ದಿನೇಶ್ ಎಂಬ ಆರೋಪಿಗಳ ಜೊತೆ ಕೊಲೆಗೈಯಲು ಬಳಸಿದ್ದ ವಿಕೆಟ್ ಹಾಗೂ ಕಾರನ್ನು ವಶಕ್ಕೆ ಪಡೆದ  ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? ಸಿದ್ದು ವಿರುದ್ಧ ರಾಮುಲು ಕಿಡಿ

    ಪೊಲೀಸರ ಈ ಕಾರ್ಯಾಚರಣೆಯಲ್ಲಿ ಸಿಪಿಐ ಶಿವುಕುಮಾರ್, ಪಿ.ಎಸ್.ಐ.ಎನ್.ಕೆ. ರಮ್ಯಾ, ಹರೀಶ್, ಸಿಬ್ಬಂದಿಗಳಾದ ಕೃಷ್ಣಮೂರ್ತಿ, ರಾಜಪ್ಪ, ರಮೇಶ್, ಕುಚೇಲ, ಚಂದ್ರಶೇಖರ್ ಹಾಗೂ ಓಂಕಾರ್ ಮತ್ತಿತರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿರುವ 8 ಮಂದಿ ಪುರುಷರಿಗೆ ಒಬ್ಬಳೇ ಪತ್ನಿ

    ಮನೆಯಲ್ಲಿರುವ 8 ಮಂದಿ ಪುರುಷರಿಗೆ ಒಬ್ಬಳೇ ಪತ್ನಿ

    ನವದೆಹಲಿ: ಮಹಾಭಾರತದ ದ್ರೌಪದಿಗೆ 5 ಮಂದಿ ಗಂಡಂದಿರು ಇದ್ದ ಕಥೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿದೆ. ಆದರೆ ರಾಜಸ್ಥಾನ ಹಾಗೂ ಮಧ್ಯೆ ಪ್ರದೇಶದ ಗಡಿ ಭಾಗದಲ್ಲಿ ಮಹಿಳೆಯರು ಹಲವು ಪುರುಷರನ್ನು ಮದುವೆಯಾಗುವ ವಿಚಿತ್ರ ಪದ್ಧತಿ ಇದೆ.

    ಹೌದು. ಕಲಿಯುಗದಲ್ಲೂ ಹೀಗೆ ಹಲವು ಪತಿಯರಿಗೆ ಒಬ್ಬಳೇ ಪತ್ನಿ ಇರಲು ಸಾಧ್ಯವಾ ಎಂಬ ಪ್ರಶ್ನೆ ಹಲವರಲ್ಲಿ ಇರುತ್ತೆ. ಆದರೆ ಇದಕ್ಕೆ ಉತ್ತರ ಎನ್ನುವಂತೆ ರಾಜಸ್ಥಾನ ಹಾಗೂ ಮಧ್ಯೆ ಪ್ರದೇಶದ ಗಡಿ ಭಾಗದಲ್ಲಿ ಬಹುಪತಿ ಹೊಂದುವ ಪದ್ಧತಿ ಜಾರಿಯಲ್ಲಿದೆ. ವಿಚಿತ್ರ ಎನಿಸಿದರೂ ಇದು ಸತ್ಯ. ಒಂದಕ್ಕಿಂತ ಹೆಚ್ಚು ಪತಿಯರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ.

    ರಾಜಸ್ಥಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಿದೆ. ಆದರೆ ಯುವಕರ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕೆ ಗ್ರಾಮದ ಮುಖಂಡರು ಈ ಪದ್ಧತಿಯನ್ನು ಶುರು ಮಾಡಿದ್ದಾರೆ.

    ಒಂದು ಮನೆಯಲ್ಲಿ ಒಬ್ಬನೇ ಹುಡುಗನಿದ್ದರೆ ಹುಡುಗಿ ಆತನೊಬ್ಬನನ್ನೇ ಮದುವೆಯಾಗಬೇಕು. ಆದರೆ ಮನೆಯಲ್ಲಿ 8 ಮಂದಿ ಹುಡುಗರಿದ್ದರೆ ಅವರೆಲ್ಲರನ್ನು ಆ ಮಹಿಳೆ ಮದುವೆಯಾಗಬೇಕು. ಹೀಗಾಗಿ ಈ ಗ್ರಾಮದಲ್ಲಿ ಒಬ್ಬ ಪತಿ ಇರುವ ಮಹಿಳೆಯರೂ ಇದ್ದಾರೆ. ಒಂದಕ್ಕಿಂತ ಹೆಚ್ಚು ಪತಿಯರನ್ನು ಹೊಂದಿರುವ ಮಹಿಳೆಯರು ಜೀವನ ನಡೆಸುತ್ತಿದ್ದಾರೆ.