Tag: Hyderabad Man Stabs Woman

  • ವಿವಾಹವಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ 18 ಬಾರಿ ಇರಿದ ಪ್ರಿಯಕರ!

    ವಿವಾಹವಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ 18 ಬಾರಿ ಇರಿದ ಪ್ರಿಯಕರ!

    ಹೈದರಾಬಾದ್: ವಿವಾಹವಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ 18 ಬಾರಿ ಇರಿದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

    ಕೃತ್ಯ ಎಸಗಿದಾತ ಬಸವರಾಜ್‌ ಎಂದು ಗುರುತಿಸಲಾಗಿದೆ. ಈತ ಹಲ್ಲೆಗೊಳಗಾದ ಮಹಿಳೆಯ ಪ್ರಿಯಕರ ಎನ್ನಲಾಗಿದ್ದು, ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆಕೆಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಚಾರಣೆ ವೇಳೆ ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಕೊಲೆ ಆರೋಪಿ!

    ಎಲ್‌ಬಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಹಸ್ತಿನಾಪುರದ ಕೊಠಡಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆ ಕೊಠಡಿಯೊಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಸವರಾಜು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

    ಸಂತ್ರಸ್ತೆ ಸಿರಿಷಾ ಎಂಬಾಕೆ ಕಳೆದ ಎರಡು ತಿಂಗಳ ಹಿಂದೆ ಶ್ರೀಧರ್‌ ಎಂಬಾತನೊಂದಿಗೆ ಎಂಗೇಜ್‌ಮೆಂಟ್‌ ಆಗಿದ್ದಾರೆ. ಇದರಿಂದ ಕುಪಿತಗೊಂಡ ಪ್ರಿಯಕರ ಈ ಕೃತ್ಯ ಎಸಗಿದ್ದಾನೆ. ಹಲ್ಲೆಯಿಂದ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.