Tag: Hyderabad Police

  • ಹೈದರಾಬಾದ್‌ | ಬೃಹತ್‌ ಮಾದಕ ವಸ್ತು ಜಾಲ ಪತ್ತೆ – ಬೆಂಗ್ಳೂರಲ್ಲಿ ಖರೀದಿಸಿ ಡೇಟಿಂಗ್‌ ಆ್ಯಪ್‌ನಲ್ಲಿ ಸೇಲ್‌ ಮಾಡ್ತಿದ್ದ ಆರೋಪಿ

    ಹೈದರಾಬಾದ್‌ | ಬೃಹತ್‌ ಮಾದಕ ವಸ್ತು ಜಾಲ ಪತ್ತೆ – ಬೆಂಗ್ಳೂರಲ್ಲಿ ಖರೀದಿಸಿ ಡೇಟಿಂಗ್‌ ಆ್ಯಪ್‌ನಲ್ಲಿ ಸೇಲ್‌ ಮಾಡ್ತಿದ್ದ ಆರೋಪಿ

    – ʻರಾಕೆಟ್‌, ಪಾರಿವಾಳʼ ಕೋಡ್‌ ವರ್ಡ್‌ ಬಳಸಿ ಸೇಲ್‌; 7 ಮಂದಿ ಅರೆಸ್ಟ್‌
    – ಬಂಧಿತರಲ್ಲಿ ಒಬ್ಬನಿಗೆ ಹೆಚ್‌ಐವಿ

    ಹೈದರಾಬಾದ್‌: ಡೇಟಿಂಗ್‌ ಆ್ಯಪ್ (Dating App) ಮೂಲಕ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್‌ ಡ್ರಗ್ಸ್‌ ಮಾರಾಟ ಜಾಲವೊಂದನ್ನ (Huge Drug Racket) ಹೈದರಾಬಾದ್‌ನಲ್ಲಿ ಪತ್ತೆಹಚ್ಚಲಾಗಿದೆ. ಈ ಜಾಲ ನಡೆಸುತ್ತಿದ್ದ ಇಬ್ಬರು ಮಾರಾಟಗಾರರು ಹಾಗೂ 7 ಗ್ರಾಹಕರು ಸೇರಿ 9 ಮಂದಿಯನ್ನ ಹೈದರಾಬಾದ್‌ನ ವಿಶೇಷ ಕಾರ್ಯಪಡೆ ಬಂಧಿಸಿದೆ.

    ಎಂ. ರಮಾಕಾಂತ್ ಅಲಿಯಾಸ್ ಕಿರಣ್ (44) ಮತ್ತು ಮುದವತ್ ಪ್ರಸಾದ್ (30) ಬಂಧಿತ ಡ್ರಗ್ಸ್‌ ಮಾರಾಟಗಾರರು. ರಮಾಕಾಂತ್‌ ಖಾಸಗಿ ಉದ್ಯೋಗಿಯಾಗಿದ್ದರೇ, ಮುದವತ್‌ ವ್ಯಾಕ್ಯೂಮ್ ಕ್ಲೀನರ್ ತಂತ್ರಜ್ಞನಾಗಿದ್ದ. ಇಬ್ಬರೂ ಕಳೆದ ವರ್ಷ ಜುಲೈನಲ್ಲಿ ಡ್ರಗ್ಸ್‌ ಮಾರಾಟ ಕೇಸ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಹಳೇ ಚಾಳಿ ಶುರು ಮಾಡಿಕೊಂಡಿದ್ದರು.

    ಬಂಧಿತರು ಡೇಟಿಂಗ್‌ ಆ್ಯಪ್‌ಗಳ ಮೂಲಕ ತಮ್ಮ ಪ್ರೊಫೈಲ್‌ಗಳಲ್ಲಿ ʻರಾಕೆಟ್‌ʼ & ʻಪಾರಿವಾಳʼ ಎಂಬ ಕೋಡ್‌ ವರ್ಡ್‌ ಬಳಸಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದರು. ಬೆಂಗಳೂರಿನ ನೈಜೀರಿಯಾ ಮೂಲದವರಿಂದ ಪ್ರತಿ ಗ್ರಾಂ MDMAಗೆ 10,000 ರೂ. ಗಳಿಗೆ ಖರೀದಿಸಿ, ಹೈದರಾಬಾದ್‌ನಲ್ಲಿ ಪ್ರತಿ ಗ್ರಾಂಗೆ 15,000 ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಲವರ್‌ ಜೊತೆ ಮೂರು ಮಕ್ಕಳ ತಾಯಿ ಜೂಟ್‌ – ಇತ್ತ ಹೆಂಡ್ತಿ ಬೇಕೆಂದು ಗಂಡ ಕಣ್ಣೀರು 

    ಹೈದರಾಬಾದ್‌ ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಕಾರ್ಯಾಚರಣೆ ಸಂದರ್ಭದಲ್ಲಿ ಪತ್ತೆಹಚ್ಚಿದ್ದಾರೆ. ಬಂಧಿತರಿಂದ 100 ಗ್ರಾಂ ಎಂಡಿಎಂಎ, 10 ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕದ ಯಂತ್ರವನ್ನ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಒಟ್ಟು 15 ಲಕ್ಷ ರೂ. ಇದೆ.

    ಇದರೊಂದಿಗೆ 7 ಗ್ರಾಹಕರನ್ನೂ ಬಂಧಿಸಲಾಗಿದೆ. ಬಂಧಿತರಲ್ಲಿ ಓರ್ವ ಹೆಚ್‌ಐವಿ ಸೋಂಕಿತನಾಗಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆಗಾಗಿ ಎಲ್ಲಾ ಆರೋಪಿಗಳನ್ನು ಚಿಲ್ಕಲ್ಗುಡ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಒಂದಲ್ಲ ಎರಡಲ್ಲ ಮೂವರೊಟ್ಟಿಗೆ ಕಾಂಟ್ಯಾಕ್ಟ್‌ನಲ್ಲಿದ್ದ ಬ್ಯೂಟಿ – ಸ್ಟೇಷನ್‌ನಲ್ಲೇ ತಾಳಿ ಕಿತ್ತು ಗಂಡನ ಕೈಗಿಟ್ಟು ಹೋದ ಪತ್ನಿ

  • ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    – ವಿಚ್ಛೇದನ ಕೊಟ್ಟು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ ಮಹಿಳೆ

    ಹೈದರಾಬಾದ್‌: ಬಲವಂತದ ಮತಾಂತರ (Forced Conversion), ಮೋಸದ ಮದ್ವೆ, ದ್ರೋಹ ಬಗೆದಿರುವ ಆರೋಪದ ಮೇಲೆ 1998ರಲ್ಲಿ ಭಾರತಕ್ಕೆ ವಲಸೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನ ಹೈದರಾಬಾದ್‌ನ (Hyderabad) ಲಂಗರ್‌ಹೌಸ್ ಪೊಲೀಸರು ಬಂಧಿಸಿದ್ದಾರೆ.

    ಹೈದರಾಬಾದ್‌ನ ಬಂಜಾರ ಹಿಲ್ಸ್‌ನ ಮೌಂಟ್ ಬಂಜಾರ ಕಾಲೋನಿಲ್ಲಿ (Mount Banjara Colony) ನೆಲೆಸಿದ್ದ ಪಾಕ್‌ ವ್ಯಕ್ತಿ 2016ರಲ್ಲಿ ಕೀರ್ತಿ ಎಂಬಾಕೆಯನ್ನ ಬಲವಂತದಿಂದ ಮತಾಂತರಗೊಳಿಸಿ ಮದ್ವೆಯಾಗಿದ್ದಾನೆಂದು ಖುದ್ದು ಪತ್ನಿಯೇ ದೂರು ನೀಡಿದ್ದಾಳೆ. ಇದನ್ನೂ ಓದಿ: 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    ಯೆಸ್‌… ಸಂತ್ರಸ್ತೆ ಹೇಳುವಂತೆ ಫಹಾದ್‌ 1998ರಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ. 2016ರಲ್ಲಿ ತನ್ನನ್ನ ಮದ್ವೆಯಾಗಲು ತನ್ನನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಮೊದಲ ವಿಚ್ಛೇದನದ ಬಳಿಕ ನಾನು ದೌರ್ಬಲ್ಯ ಸ್ಥಿತಿಯಲ್ಲಿದ್ದೆ, ಇದರ ಲಾಭ ಪಡೆದು ನನ್ನನ್ನ ಮತಾಂತರಕ್ಕೆ ಒತ್ತಾಯಿಸಿದ್ದ. ಅದರಂತೆ ನನ್ನ ಹೆಸರನ್ನ ದೋಹಾ ಫಾತಿಮಾ ಅಂತ ಬದಲಾಯಿಸಿಕೊಂಡಿದ್ದೆ. ಮದ್ವೆ ಆಗೋವರ್ಗೂ ಅವನು ಪಾಕಿಸ್ತಾನದವನು ಅಂತ ಗೊತ್ತಿರಲಿಲ್ಲ. ಆದ್ರೆ ಪ್ರತಿವರ್ಷ ನಿಯಮಿತವಾಗಿ ಪಾಸ್‌ಪೋರ್ಟ್ ರಿನಿವಲ್‌ಗಾಗಿ ಆಯುಕ್ತರ ಕಚೇರಿಗೆ ಭೇಟಿ ಕೊಡ್ತಿದ್ದ. ಇದನ್ನ ಪರಿಶೀಲನೆ ಮಾಡಿದಾಗ ಅವನು ಪಾಕ್‌ನಿಂದ ವಲಸೆ ಬಂದಿರೋದು ಗೊತ್ತಾಯ್ತು. ಅಲ್ದೇ ಫಹಾದ್‌ ತನ್ನ ಕಂಪನಿಯಲ್ಲೇ ಬೇರೊಬ್ಬಳೊಂದಿಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದ. ಇದು ತಿಳಿದ ಬಳಿಕವೇ ನಾನು ಮೋಸ ಹೋಗಿದ್ದೇನೆ ಅನ್ನೋದು ಗೊತ್ತಾಯ್ತು ಅಂತ ಕೀರ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇನ್ನೂ ಫಹಾದ್‌ ಪಾಕಿಸ್ತಾನದ ವ್ಯಕ್ತಿ ಅಂತ ಗೊತ್ತಾದ್ಮೇಲೆ ನಾನು ವಿಚ್ಛೇದನ ಪಡೆದು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳ್ಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    ಒಟ್ನಲ್ಲಿ ಮಹಿಳೆ ನೀಡಿದ ದೂರಿನ ಅನ್ವಯ ಕೇಸ್‌ ದಾಖಲಿಸಿಕೊಂಡಿರುವ ಲಂಗರ್‌ ಹೌಸ್‌ನ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ – ಗಣ್ಯರಿಂದ ಗೌರವ ಸಮರ್ಪಣೆ 

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    – ಇತ್ತ ಆಸ್ಪತ್ರೆ ಚಿಕಿತ್ಸೆಗೂ ಹಣವಿಲ್ಲದ ಸ್ಥಿತಿ

    ಹೈದರಾಬಾದ್: 2,000 ರೂ.ಗೆ ಸೆಕ್ಸ್ ಲೈವ್ ಸ್ಟ್ರೀಮ್ ಮಾಡ್ತಿದ್ದ ದಂಪತಿಯನ್ನು (Hyderabad Couple) ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದ್ರೆ ದಂಪತಿಯ ಬಗ್ಗೆ ಅಚ್ಚರಿ ಸಂಗತಿಯೊಂದು ಬೆಳಕಿಗೆ ಬಂದಿದೆ.

    ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ (Two Daughters). ಪತಿ ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದ ಕಾರಣ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಪತಿ-ಪತ್ನಿ ಇಬ್ಬರು ಕೃತ್ಯಕ್ಕೆ ಇಳಿದಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೃತ್ಯದಲ್ಲಿ ಭಾಗಿ
    ಆರ್ಥಿಕ ಕೊರತೆಯಿಂದ ಮಕ್ಕಳಿಬ್ಬರ ಕಾಲೇಜು ಶುಲ್ಕ (college fees) ಪಾವತಿಸಿರಲಿಲ್ಲ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಆಗಿದ್ದರು. ಒಬ್ಬ ಮಗಳು ಬಿ.ಟೆಕ್‌ ವ್ಯಾಸಂಗ ಮಾಡುತ್ತಿದ್ದರು, ಮತ್ತೊಬ್ಬಳು ಮಗಳು ಇತ್ತೀಚಿಗೆ ನಡೆದ intermediate ಪರೀಕ್ಷೆಯಲ್ಲಿ 470ಕ್ಕೆ 468 ಅಂಕ ಗಳಿಸಿ, ಕಾಲೇಜು ಪ್ರವೇಶಕ್ಕೆ ತಯಾರಿ ನಡೆಸಿದ್ದಳು. ಈ ನಡುವೆ ಆಟೋ ಚಾಲಕನಾಗಿದ್ದ ಪತಿ ಅನಾರೋಗ್ಯದಿಂದ ಬಳಲುತ್ತಿದ್ದ, ಚಿಕಿತ್ಸೆ ಪಡೆಯೋದಕ್ಕೂ ಹಣ ಇರಲಿಲ್ಲ. ಹೀಗಾಗಿ ಸುಲಭವಾಗಿ ಹಣಗಳಿಸಲು ತಮ್ಮ ಲೈಂಗಿಕ ಕೃತ್ಯವನ್ನು ಲೈವ್‌ಸ್ಟ್ರೀಮ್‌ ಮಾಡುವ ಕೆಲಸಕ್ಕೆ ಮುಂದಾದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಹಣ ಗಳಿಸುತ್ತಿದ್ದದ್ದು ಹೇಗೆ?
    ಪರಸ್ಪರ ಒಪ್ಪಿಗೆಯೊಂದಿಗೆ ಕೃತ್ಯಕ್ಕೆ ಇಳಿದಿದ್ದ ದಂಪತಿ ಲೈವ್ ಸ್ಟ್ರೀಮ್‌ಗೆ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್ ಮಾಡಿದ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ಯುವಕರಿಗೆ ಈ ವಿಡಿಯೋಗಳನ್ನು ಸೇಲ್‌ ಮಾಡ್ತಿದ್ದರು. ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ಸಾಂದರ್ಭಿಕ ಚಿತ್ರ

    ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅಂಬರ್‌ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಯನ್ನ ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದಂಪತಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯದ ಬಗ್ಗೆ ತಿಳಿದಿರಲಿಲ್ಲ. ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    – ರೆಕಾರ್ಡ್‌ ವಿಡಿಯೋವನ್ನ 500 ರೂ.ಗೆ ಸೇಲ್‌ ಮಾಡ್ತಿದ್ದ ದಂಪತಿ

    ಹೈದರಾಬಾದ್‌: 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ (Live Stream) ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು (Hyderabad couple) ಪೊಲೀಸರು ಬಂಧಿಸಿದ್ದಾರೆ.

    ಸೋಷಿಯಲ್‌ ಮೀಡಿಯಾ (Social Media) ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ (ಲೈಂಗಿಕ ಕ್ರಿಯೆ) ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

    ಜೂನ್ 17 ರಂದು ಮಧ್ಯಾಹ್ನ ಅವರ ಮನೆಯ ಟೆರೇಸ್‌ ಮೇಲಿದ್ದಾಗ ಇಬ್ಬರನ್ನೂ ಬಂಧಿಸಲಾಗಿದ್ದು, ಹೈ ಡೆಫಿನಿಷನ್ ಕ್ಯಾಮೆರಾ ಸೇರಿ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

    ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಕೃತ್ಯ
    ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ (Cab Driver) ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: 3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

    ಸಾಂದರ್ಭಿಕ ಚಿತ್ರ

    ಪತ್ನಿ ಗೃಹಿಣಿಯಾಗಿದ್ದು, ದಂಪತಿಗೆ ಇಬ್ಬರು ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳಿದ್ದಾರೆ. ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯ ತಿಳಿದಿರಲಿಲ್ಲ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದಲೇ ಈ ಕೃತ್ಯಕ್ಕಿಳಿದಿದ್ದ ದಂಪತಿ ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್‌ ಧರಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

    ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

    ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್‌ (Telugu choreographer) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

    ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

    ಯುವತಿ ದೂರಿನಲ್ಲಿ ಹೇಳಿದ್ದೇನು?
    ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳಲ್ಲಿ ಬ್ಯುಸಿಯಾದ ರಶ್ಮಿಕಾ ಮಂದಣ್ಣ

    ಡ್ಯಾನ್ಸ್‌ ಶೋ ಮೂಲಕ ಪರಿಚಯವಾಗಿದ್ದ ಜಾನಿ ಮಾಸ್ಟರ್‌:
    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರ ಈ ಸುದ್ದಿ ಟಾಲಿವುಡ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ನೃತ್ಯ ನಿರ್ದೇಶಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಯದುರ್ಗಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.

    ಜಾನಿ ವಿರುದ್ಧ ಕ್ರಮಕ್ಕೆ ವಾಣಿಜ್ಯ ಮಂಡಳಿ ನಿರ್ಧಾರ:
    ಜಾನಿ ಮಾಸ್ಟರ್‌ ಪೂರ್ತಿ ಹೆಸರು ಶಾಯಿಕ್‌ ಜಾನಿ ಭಾಷಾ. ಇತ್ತೀಚೆಗೆ ನಡೆದ ಎಪಿ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜಾನಿ ಕೆಲಸ ಮಾಡಿದ್ದರು. ಆದರೆ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜನಸೇನಾ ಹೇಳಿಕೆ ಬಿಡುಗಡೆ ಮಾಡಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿಕ್ಕಿ ಯಾವಾಗಲೂ ಕೂಲ್ ಆಗಿ ಇರುತ್ತಾರೆ: ದಾಂಪತ್ಯದ ಸೀಕ್ರೆಟ್ ಬಿಚ್ಚಿಟ್ಟ ಕತ್ರಿನಾ ಕೈಫ್

  • ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

    ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

    ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ 

  • ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ ಸಿದ್ಧಾರ್ಥ್ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಬಿಜೆಪಿ ನಾಯಕರಾದ ನೀಲಂ ಭಾರ್ಗವ ರಾಮ್ ಮತ್ತು ಪ್ರೇರಣಾ ಟಿ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ನಟ ಸಿದ್ಧಾರ್ಥ್ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಜನವರಿ 5ರಂದು ಪಂಜಾಬ್‍ನ ಫಿರೋಜ್‍ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಸಿದ್ದಾರ್ಥ್ ಅವರು ಅವಹೇಳಕಾರಿ ಕಾಮೆಂಟ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ಈ ಹಿನ್ನೆಲೆ ಸಿದ್ಧಾರ್ಥ್ ಅವರು, ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ.

    ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

  • ಹೈದ್ರಾಬಾದ್ ರೇಪಿಸ್ಟ್‌ಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ: ಉನ್ನಾವೋ ಸಂತ್ರಸ್ತೆಯ ತಂದೆ

    ಹೈದ್ರಾಬಾದ್ ರೇಪಿಸ್ಟ್‌ಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ: ಉನ್ನಾವೋ ಸಂತ್ರಸ್ತೆಯ ತಂದೆ

    ನವದೆಹಲಿ: ಎರಡು ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ಈ ನಡುವೆ ಸಂತ್ರಸ್ತೆಯ ತಂದೆ ಹೈದರಾಬಾದ್ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಂತ್ರಸ್ತೆ ತಂದೆ, ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಹೇಗೆ ಎನ್‍ಕೌಂಟರ್ ಮಾಡಿದ್ದಾರೋ ಹಾಗೆಯೇ ನನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಶಿಕ್ಷೆಯಾಗಲಿ. ಆರೋಪಿಗಳಿಗೆ ಎನ್‍ಕೌಂಟರ್ ಮಾಡಿ ಅಥವಾ ಗಲ್ಲಿಗೇರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನನಗೆ ಹಣದ ಅಮೀಷವಿಲ್ಲ. ನಾನು ಕೇಳುವುದು ಒಂದೇ ವಿಷಯ. ನನ್ನ ಮಗಳ ಸಾವಿಗೆ ನ್ಯಾಯ ಸಿಗಲಿ ಎಂದು ಹೇಳಿದರು.

    ಸಂತ್ರಸ್ತೆಗೆ ಚಿಕಿತ್ಸೆ ನೀಡುವಾಗ ಸೋಂಕು ಎಲ್ಲಿ ಹರಡುತ್ತದೆಯೋ ಎಂದು ಭಯಗೊಂಡಿದ್ದೆವು. ಆದರೆ ಆ ಭಯ ನಿಜವಾಯಿತು. ಸಂತ್ರಸ್ತೆ ದೇಹ ತುಂಬಾ ಸೋಂಕು ಹರಡಿತ್ತು. ಅದನ್ನು ತಡೆಯಲು ನಮಗೆ ಸಾಧ್ಯವಾಗಲಿಲ್ಲ. ಸಂತ್ರಸ್ತೆಯ ದೇಹ ತುಂಬಾ ಸೋಂಕು ಹರಡಿದರೆ ಅದನ್ನು ತಡೆಯುವುದು ತುಂಬಾ ಕಷ್ಟ ಎಂದು ನಾವು ಈ ಮೊದಲೇ ಹೇಳಿದ್ದೆವು ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಆಕೆಯ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ನಡೆದಿದ್ದೇನು?
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ. 90ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ `ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

  • ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು: ಸಿದ್ದರಾಮಯ್ಯ

    ರಾಯಚೂರು: ರಕ್ಷಣೆ ಬೇಕಾದಾಗ ಎನ್‍ಕೌಂಟರ್ ಮಾಡಬಹುದು, ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಸಿದ್ದರಾಮಯ್ಯನವರು ಹೈದರಾಬಾದ್ ಎನ್‍ಕೌಂಟರ್ ವಿಚಾರವಾಗಿ ಮಾತನಾಡಿ, ಪೊಲೀಸರಿಗೆ ರಕ್ಷಣೆ ಬೇಕಾದಾಗ, ಆರೋಪಿಗಳು ತಪ್ಪಿಸಿಕೊಂಡು ಹೋದಾಗ ಎನ್‍ಕೌಂಟರ್ ಮಾಡಬಹುದು. ಡೆಲಿಬರೇಟ್ ಆಗಿ ಎನ್‍ಕೌಂಟರ್ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಲಾಯರ್ ಆಗಿ ನಾನು ಹೇಳುತ್ತಿದ್ದೇನೆ ಸುಮ್ಮನೆ ಹೇಳಲ್ಲ. ಇಂತಹ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು. ನಮ್ಮ ದೇಶದಲ್ಲಿ ಮರಣದಂಡನೆ ಶಿಕ್ಷೆಯಿಲ್ಲ, ಅದನ್ನು ಜಾರಿಗೆ ತರಬೇಕು ಎಂದು ಹೇಳಿದರು.

    ಇದೇ ವೇಳೆ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ಉಪಚುನಾವಣೆಯಲ್ಲಿ 12 ಸ್ಥಾನ ಗೆಲ್ಲುತ್ತೇವೆ 15 ಸ್ಥಾನ ಗೆದ್ದರೂ ಅಚ್ಚರಿಯಿಲ್ಲ ಎಂದರು. ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷಾಂತರಿಗಳಿಗೆ ವಿರೋಧ ಅಲೆಯಿದೆ. ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ. 12 ಸೀಟ್ ಗೆದ್ದರೆ ನಮಗೆ ಅವಕಾಶ ಇದೆ. ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದರು.

    ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಫಲಿತಾಂಶ ಮೇಲೆ ಅವಲಂಬಿಸಿದೆ. ದೇವೇಗೌಡರು ಒಮ್ಮೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಹೇಳುತ್ತಾರೆ. ಇನ್ನೊಮ್ಮೆ ಸೋನಿಯಾ ಗಾಂಧಿ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ ಎಂದು ತಿಳಿಸಿದರು.

    ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬಾರದು ಎಂದು ನಾವು ಎಲ್ಲಿಯೂ ಹೇಳಿಲ್ಲ. ಪಕ್ಷದಲ್ಲಿ ಯಾರನ್ನು ಐಸೋಲೆಟ್ ಮಾಡುವ ಕೆಲಸ ನಡೆದಿಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

  • ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಲಕ್ನೋ: ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಮಾಯಾವತಿ ಅವರು ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಆದರೆ ದುರಾದೃಷ್ಟವಶಾತ್ ಇಲ್ಲಿ ಕ್ರಿಮಿನಲ್‍ನಳನ್ನು ರಾಜ್ಯದ ಅತಿಥಿಗಳ ರೀತಿ ಸತ್ಕರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

    ಈಗ ಉತ್ತರ ಪ್ರದೇಶದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ. ಮುಂದೆ ಈ ಮನೋಭಾವ ಬದಲಾಗುತ್ತದೆಂದು ಆಶಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರೆ ರಾಜ್ಯ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಕಿಡಿಕಾಡಿದರು. ಇದನ್ನೂ ಓದಿ: ‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

    ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈಬರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ.

    ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಸೈಬರಾಬಾದ್ ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಸಿನಿಮಾ ಕಲಾವಿದರು, ರಾಜಕಾರಣಿಗಳು, ಸಾರ್ವಜನಿಕರು ಪೊಲೀಸರಿಗೆ ಸಲಾಂ ಎಂದಿದ್ದಾರೆ. ಬೆಳ್ಳಂಬೆಳಗ್ಗೆ ಒಳ್ಳೆ ಸುದ್ದಿ ಕೊಟ್ಟಿದ್ದೀರಿ, ಅತ್ಯಾಚಾರಿಗಳನ್ನು ಹತ್ಯೆಗೈದಿದ್ದು ಸರಿಯಾಗಿದೆ. ಇದು ಬೇರೆಯವರಿಗೆ ಪಾಠವಾಗಲಿದೆ ಎಂದು ಪೊಲೀಸರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು.

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.