Tag: Hyderabad

  • ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಮದುಮಗ ದುರ್ಮರಣ!

    ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಮದುಮಗ ದುರ್ಮರಣ!

    – ಏನಿದು ಸ್ಮೈಲ್‌ ಡಿಸೈನಿಂಗ್‌ ಶಸ್ತ್ರಚಿಕಿತ್ಸೆ?

    ಹೈದರಾಬಾದ್: ಎಲ್ಲರಿಗೂ ತಾನು ಚಂದ ಕಾಣಬೇಕು ಎಂಬ ಆಸೆ ಇದ್ದೇ ಇರುತ್ತದೆ. ಶ್ರೀಮಂತರು ಅದಕ್ಕೆ ಬೇಕಾದ ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಳ್ಳುತ್ತಾರೆ. ಅಂತೆಯೇ ಇಲ್ಲೊಬ್ಬ ಯುವಕ ತನ್ನ ನಗುವಿನ ಮೂಲಕ ಉತ್ತಮವಾಗಿ ಕಾಣಬೇಕು ಎಂಬ ಆಸೆಯಿಂದ ಆಸ್ಪತ್ರೆಗೆ ಹೋಗಿ ಹೆಣವಾಗಿದ್ದಾನೆ.

    ಹೌದು. ಮದುವೆಯ ದಿನ ಚೆನ್ನಾಗಿ ಕಾಣಿಸಬೇಕು ಎಂದು ಲಕ್ಷ್ಮಿ ನಾರಾಯಣ ವಿಂಜಮ್ (28) ಎಂಬಾತ ಸ್ಮೈಲ್‌ ಡಿಸೈನಿಂಗ್‌ (Smile Designing) ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮದುವೆಯ ದಿನ ತನ್ನ ನಗು ಮತ್ತು ನಗುವನ್ನು ಉತ್ತಮವಾಗಿ ಕಾಣುವಂತೆ ಸ್ಮೈ ಲ್ ಡಿಸೈನಿಂಗ್ ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ನ ಜುಬಿಲಿ ಹಿಲ್‌ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾ ಷನಲ್ ಡೆಂಟಲ್ ಕ್ಲಿನಿಕ್ ಗೆ ಹೋಗಿದ್ದನು. ಆದರೆ ಶಸ್ತ್ರ ಚಿಕಿತ್ಸೆಯ ಸಮಯದಲ್ಲಿಯೇ ಈತ ಸಾವನ್ನಪ್ಪಿ ದ್ದಾನೆ. ಪ್ರಜ್ಞೆ ತಪ್ಪಿಸುವ ಔಷಧ (ಅನಸ್ತೇಶಿಯಾ) ಹೆಚ್ಚು ಕೊಟ್ಟ ಕಾರಣ ಆತ ಸಾವನ್ನಪ್ಪಿದ್ದಾನೆ ಎಂದು ಲಕ್ಷ್ಮಿ ನಾರಾಯಣ್‌ ತಂದೆ ಗಂಭೀರ ಆರೋಪ ಮಾಡಿದ್ದಾರೆ.

    ಶಸ್ತ್ರಚಿಕಿತ್ಸೆ ವೇಳೆ ತನ್ನ ಮಗ ಪ್ರಜ್ಞಾ ಹೀನನಾಗಿದ್ದ. ಸರ್ಜರಿ ಬಳಿಕ ಅವನ ತಲೆಯಲ್ಲಿ ಯಾವುದೇ ಚಲನೆಯಿಲ್ಲದಿದ್ದಾಗ ಕ್ಲಿನಿಕ್ ಸಿಬ್ಬಂದಿ ನನ್ನನ್ನು ಕರೆದರು. ನಾನು ಹೋಗಿ ನೋಡಿದಾಗ ಆತನನ್ನು ನೋಡಿ ಗಾಬರಿಯಾಯಿತು. ಕೂಡಲೇ ನಾವು ಆತನನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಈ ವೇಳೆ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದರು. ಮಗನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ ಈ ಸಾವಿಗೆ ವೈದ್ಯರೇ ನೇರ ಕಾರಣ ಎಂದು ಲಕ್ಷ್ಮಿ ನಾರಾಯಣ ತಂದೆ ರಾಮುಲು ವಿಂಜಮ್‌ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ – ಯುಪಿ ಕೋರ್ಟ್‍ನಿಂದ ರಾಹುಲ್ ಗಾಂಧಿಗೆ ಜಾಮೀನು

    ಏನಿದು ಸ್ಮೈಲ್‌ ಡಿಸೈನಿಂಗ್‌?: ಜನರು ತಮ್ಮ ಹಲ್ಲುಗಳನ್ನು ಸರಿಪಡಿಸಲು, ಶುಚಿಗೊಳಿಸುವಿಕೆಗೆ ಆಸ್ಪತ್ರೆಗೆ ಹೋಗುತ್ತಾರೆ. ಇದರಿಂದ ಅವುಗಳು ಹೆಚ್ಚು ಹೊಳೆಯುವಂತೆ ಕಾಣುತ್ತವೆ. ಮಾನವನ ಹಲ್ಲುಗಳು ಕಾಲಾನಂತರದಲ್ಲಿ ಸಡಿಲಗೊಳ್ಳುತ್ತವೆ ಮತ್ತು ಅವುಗಳ ಬಣ್ಣವು ಮಸುಕಾಗಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಸ್ಮೈ ಲ್ ಡಿಸೈನ್ ಸರ್ಜರಿ ಮೂಲಕ ಅವುಗಳನ್ನು ಹೊಳೆಯುವಂತೆ ಮಾಡಲಾಗುತ್ತದೆ.

    ಸದ್ಯ ಈ ಘಟನೆ ಸಂಬಂಧ ಕ್ಲಿನಿಕ್ ವೈದ್ಯರ ನಿರ್ಲಕ್ಷ್ಯದಿಂದ ಸಾವು ಎಂದು ಪ್ರ ಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಕ್ಲಿನಿಕ್‌ನ ದಾಖಲೆಗಳು ಹಾಗೂ ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • 84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

    84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

    ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ (Telangana) ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ (Anti-Corruption Bureau) ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬುಡಕಟ್ಟು ಕಲ್ಯಾಣ ಇಲಾಖೆಯ (Telangana’s Tribal Welfare Engineering department) ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಲಂಚ ಅಧಿಕಾರಿ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಆದೇಶದ ಮೇರೆಗೆ ವಯನಾಡು ವ್ಯಕ್ತಿಗೆ 15 ಲಕ್ಷ ಪರಿಹಾರ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಜಗಜ್ಯೋತಿ ಅವರನ್ನು ಫಿನಾಲ್ಫ್ಥಲೀನ್ ಪರೀಕ್ಷೆಗೆ ಎಸಿಬಿ ಅಧಿಕಾರಿಗಳು ಒಳಪಡಿಸಿದಾಗ ಅವರು ಲಂಚ ಪಡೆದಿರುವುದು ಸಾಬೀತಾಗಿದೆ. ಅವರು ಕರ್ತವ್ಯ ನಿರ್ವಹಣೆಯಲ್ಲಿ ಅನುಚಿತವಾಗಿ ಮತ್ತು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ.

    ಅಧಿಕಾರಿಯ ಬಳಿ ಇದ್ದ 84,000 ರೂ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಹೈದರಾಬಾದ್‍ನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಸಿಬಿ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಡ್ರೈವರ್‌ಲೆಸ್ ಮೆಟ್ರೋದ ಫಸ್ಟ್ ಫೋಟೋ ರಿವೀಲ್

  • ವೆಬ್ ಸೀರಿಸ್‍ನಿಂದ ಪ್ರೇರಣೆ ಪಡೆದು ನಕಲಿ ನೋಟ್ ದಂಧೆ – ಇಬ್ಬರೂ ಆರೋಪಿಗಳು ಅರೆಸ್ಟ್

    ವೆಬ್ ಸೀರಿಸ್‍ನಿಂದ ಪ್ರೇರಣೆ ಪಡೆದು ನಕಲಿ ನೋಟ್ ದಂಧೆ – ಇಬ್ಬರೂ ಆರೋಪಿಗಳು ಅರೆಸ್ಟ್

    ಹೈದರಾಬಾದ್: ವೆಬ್ ಸೀರಿಸ್ ಒಂದರಿಂದ ಪ್ರೇರಣೆ ಪಡೆದು ನಕಲಿ ನೋಟ್ (Fake Currency) ಪ್ರಿಂಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರೂ ಆರೋಪಿಗಳನ್ನು ಹೈದರಾಬಾದ್ (Hyderabad) ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು, ವನಂ ಲಕ್ಷ್ಮೀನಾರಾಯಣ ಹಾಗೂ ಆತನ ಸಹಚರ ಎರುಕಳ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ವನಂ ಲಕ್ಷ್ಮೀನಾರಾಯಣ, ಕಂಪ್ಯೂಟರ್ ಪರಿಣತಿಯನ್ನು ಹೊಂದಿದ್ದು, ಕೃತ್ಯಕ್ಕಾಗಿ ಸ್ಕ್ರೀನ್ ಪ್ರಿಂಟರ್, ಗ್ರೀನ್ ಫಾಯಿಲ್ ಪೇಪರ್, ಜೆಕೆ ಎಕ್ಸೆಲ್ ಬಾಂಡ್ ಪೇಪರ್‌ಗಳು, ಕಟರ್‌ಗಳು ಮತ್ತು ಲ್ಯಾಮಿನೇಷನ್ ಯಂತ್ರವನ್ನು ಬಳಸುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಪ್ರಣಯ್ ಕುಮಾರ್, ಪ್ರಮುಖ ಆರೋಪಿ ತಯಾರಿಸಿದ ನಕಲಿ ನೋಟ್‍ಗಳನ್ನು, ಮಾರುಕಟ್ಟೆ ಹಾಗೂ ಇನ್ನಿತರ ಸ್ಥಳಗಳಲ್ಲಿ ಚಲಾವಣೆ ಮಾಡುತ್ತಿದ್ದ. ಇದೇ ರೀತಿ ಆತ ಅಂಗಡಿಯೊಂದರಲ್ಲಿ 20 ಸಾವಿರ ರೂ. ನಕಲಿ ನೋಟ್ ಚಲಾವಣೆ ಮಾಡುವ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆಸಿದಾಗ ಪ್ರಮುಖ ಆರೋಪಿಯ ಹೆಸರನ್ನು ಈತ ಹೇಳಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯಕ್ಕೆ `ಫರ್ಝಿ’ ವೆಬ್ ಸೀರಿಸ್ ಪ್ರೇರಣೆಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ ಸುಮಾರು 4 ಲಕ್ಷ ರೂ. ನಕಲಿ ನೋಟ್‍ಗಳನ್ನು, ಕೃತ್ಯಕ್ಕೆ ಬಳಸಿದ ಯಂತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಚುನಾವಣೆ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಡ್ರೋನ್ ‍ಪ್ರತಾಪ್: ದೂರು ದಾಖಲು

  • ಗುಡಿಸಲಿನಲ್ಲಿ ಮಲಗಿದ್ದ 1 ವರ್ಷದ ಮಗುವನ್ನ ಕೊಂದು ತಿಂದ ಬೀದಿ ನಾಯಿಗಳು

    ಗುಡಿಸಲಿನಲ್ಲಿ ಮಲಗಿದ್ದ 1 ವರ್ಷದ ಮಗುವನ್ನ ಕೊಂದು ತಿಂದ ಬೀದಿ ನಾಯಿಗಳು

    ಹೈದರಾಬಾದ್: ತಂದೆ ಜೊತೆ ಗುಡಿಸಲಿನಲ್ಲಿ (Hut)  ಮಲಗಿದ್ದ ಒಂದು ವರ್ಷ ಮಗು ಮೇಲೆ ಬೀದಿ ನಾಯಿಗಳು  (Street Dogs) ದಾಳಿ ಮಾಡಿ ತಿಂದಿರುವ ಘಟನೆ ತೆಲಂಗಾಣದ (Telangana)  ಶಂಶಾಬಾದ್‌ನಲ್ಲಿ ನಡೆದಿದೆ.

    ಕೆ. ನಾಗರಾಜು (1) ಮೃತಪಟ್ಟ ಮಗು. ಮಗುವಿನ ತಂದೆ ಸೂರ್ಯಕುಮಾರ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಶಂಶಾಬಾದ್‌ನ ರಾಜೀವ್ ಗೃಹಕಲ್ಪ ಸಂಕೀರ್ಣದ ಬಳಿ ಗುಡಿಸಲಿನಲ್ಲಿ ಹಿರಿಯ ಮಗನಾದ ನಾಗರಾಜು ಮತ್ತು 20 ದಿನದ ಮಗುವಿನ ಜೊತೆ ಮಲಗಿದ್ದ. ಈ ವೇಳೆ ಬೀದಿ ನಾಯಿಗಳ ಗುಂಪು ಗುಡಿಸಲಿಗೆ ನುಗ್ಗಿ ಮಕ್ಕಳ ಮೇಲೆ ದಾಳಿ ನಡೆಸಿವೆ. ಇದನ್ನೂ ಓದಿ: ಮೋದಿ ಜೊತೆ ಹೋದರೂ ನಾನು ಕೇಸರಿ ಶಾಲು ಹಾಕಲ್ಲ, ಕುಮಾರಸ್ವಾಮಿಯೂ ಹಾಕಬಾರದಿತ್ತು – ಹೆಚ್‌ಡಿಡಿ

    ತಡರಾತ್ರಿ 1:30 ರ ಹೊತ್ತಿಗೆ ಸೂರ್ಯಕುಮಾರ್‌ನನ್ನು ಸ್ಥಳೀಯರು ಎಬ್ಬಿಸಿ ಬೀದಿ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ನಡೆಸಿ ತಿನ್ನುತ್ತಿದ್ದವು ಎಂದು ತಿಳಿಸಿದ್ದಾರೆ. ವಿಷಯ ತಿಳಿದ ಸೂರ್ಯ ಹೋಗಿ ನೋಡಿದಾಗ ಮಗು ನಾಯಿಗಳ ಪಾಲಾಗಿತ್ತು. ಇದನ್ನೂ ಓದಿ: ಎರಡನೇ ಐಫೋನ್‌ ಘಟಕ ತೆರೆಯಲು ಮಾತುಕತೆ ಆರಂಭಿಸಿದ ಟಾಟಾ

    ಈವರೆಗೂ ಮಕ್ಕಳ ಮೇಲೆ ನಡೆದ ದಾಳಿಯಲ್ಲಿ ಇದು ಒಂಬತ್ತನೇ ಗಂಭೀರ ಪ್ರಕರಣವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 5 ದಿನ ಇಡಿ ಕಸ್ಟಡಿಗೆ ಹೇಮಂತ್ ಸೋರೆನ್

  • ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಯುವತಿಯಿಂದ ಹಲ್ಲೆ

    ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಯುವತಿಯಿಂದ ಹಲ್ಲೆ

    ಹೈದರಾಬಾದ್: ಕುಡಿದ (Alcohol) ಅಮಲಿನಲ್ಲಿ ಬಸ್ ನಿರ್ವಾಹನ ( Conductor) ಮೇಲೆ ಯುವತಿ (Woman) ಹಲ್ಲೆ ಮಾಡಿರುವ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದೆ.

    ಕುಡಿತ ಮತ್ತಿನಲ್ಲಿ ಬಸ್ ಹತ್ತಿದ್ದು, ಟಿಕೆಟ್‌ಗೆ ಸಂಬಂಧಿಸಿದಂತೆ ನಿರ್ವಾಹನ ಜೊತೆ ಯುವತಿ ಜಗಳ ಮಾಡಿದ್ದಾಳೆ. ಇದರಿಂದ ಮತ್ತಷ್ಟು ಕೋಪಗೊಂಡ ಯುವತಿ ಅವಾಚ್ಯ ಶಬ್ದಗಳಿಂದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್‌ಗೆ ನಿಂದಿಸಿ ಹಲ್ಲೆ ಮಾಡಿದ್ದಾಳೆ. ಯುವತಿ ಹಲ್ಲೆ ಮಾಡುತ್ತಿರುವ ದೃಶ್ಯಗಳನ್ನು ಬಸ್ ಪ್ರಯಾಣಿಕರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಇದನ್ನೂ ಓದಿ: ಅಡ್ಡಿಪಡಿಸುವವರನ್ನು ಯಾರೂ ನೆನಪಿಸಿಕೊಳ್ಳಲ್ಲ: ಅಧಿವೇಶನಕ್ಕೂ ಮುನ್ನ ಸಂಸದರಿಗೆ ಮೋದಿ ಸಲಹೆ

    ಬಸ್‌ನಲ್ಲಿ ಇತರ ಪ್ರಯಾಣಿಕರೊಂದಿಗೆ ಯುವತಿ ಅಸಭ್ಯವಾಗಿ ವರ್ತಿಸಿದ್ದಾಳೆ. ಈಕೆಯ ವರ್ತನೆಯನ್ನು ಸಹ ಪ್ರಯಾಣಿಕರು ಸೆರೆ ಹಿಡಿದಿದ್ದಾರೆ. ಯುವತಿ ವಿರುದ್ಧ ಟಿಎಸ್‌ಆರ್‌ಟಿಸಿ ದೂರು ದಾಖಲಿಸಿದೆ. ಯುವತಿ ರಂಪಾಟದ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಜಾರ್ಖಂಡ್ ಸಿಎಂ 30 ಗಂಟೆ ಬಳಿಕ ಪತ್ತೆ!

  • IND vs ENG, 1st Test:‌ ಎರಡನೇ ದಿನದಾಟದಲ್ಲಿ ಭಾರತಕ್ಕೆ 175 ರನ್ ಮುನ್ನಡೆ

    IND vs ENG, 1st Test:‌ ಎರಡನೇ ದಿನದಾಟದಲ್ಲಿ ಭಾರತಕ್ಕೆ 175 ರನ್ ಮುನ್ನಡೆ

    ಹೈದರಾಬಾದ್: ಟೀಂ ಇಂಡಿಯಾ (Team India) ಮತ್ತು ಇಂಗ್ಲೆಂಡ್ (England) ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮತ್ತೆ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಆಟಗಾರರು ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ 175 ರನ್‍ಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಲ್ಲದೇ ಮೂರನೇ ದಿನವೂ ಟೀಂ ಇಂಡಿಯಾ ಬ್ಯಾಟಿಂಗ್ ಮುಂದುವರಿಸಲಿದೆ.

    ಪಂದ್ಯದ ಮೊದಲ ದಿನ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, 64.3 ಓವರ್‌ಗಳಲ್ಲಿ 246 ರನ್‍ಗಳಿಗೆ ಆಲೌಟ್ ಆಗಿತ್ತು. ಬಳಿಕ ಬ್ಯಾಟ್ ಮಾಡಿದ ಭಾರತ, 1 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತ್ತು. ಆ ಮೂಲಕ ಕೇವಲ 127 ರನ್‍ಗಳ ಅಲ್ಪ ಹಿನ್ನಡೆಯೊಂದಿಗೆ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿತ್ತು. ಇಂದು (ಶುಕ್ರವಾರ) ಮತ್ತೆ ಬ್ಯಾಟಿಂಗ್ ಮುಂದುವರೆಸಿದ ಭಾರತ, ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 421 ರನ್ ಗಳಿಸಿದೆ. ಇದನ್ನೂ ಓದಿ: IND vs ENG, 1st Test:‌ ಟೆಸ್ಟ್ ಸರಣಿ ಮೊದಲ ದಿನದಾಟ ಅಂತ್ಯ – ಟೀಂ ಇಂಡಿಯಾ ಸ್ಪಿನ್ನರ್ಸ್ ಮಿಂಚು, ಜೈಸ್ವಾಲ್‌ ಫಿಫ್ಟಿ

    ಇಂದಿನ ಆಟದ ಆರಂಭದಲ್ಲೇ ಜೈಸ್ವಾಲ್ ಔಟಾದರು. 74 ಎಸೆತಗಳಲ್ಲಿ 80 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ರೂಟ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಅದಾದ ಕೆಲವೇ ಹೊತ್ತಿನಲ್ಲಿ ಶುಭಮನ್ ಗಿಲ್ ಕೂಡಾ 23 ರನ್ ಗಳಿಸಿ ವಿಕೆಟ್ ಒಪ್ಪಿಸಿ, ಪೆವಿಲಿಯನ್‍ಗೆ ಮರಳಿದರು. ಬಳಿಕ ಒಂದಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇಬ್ಬರೂ ಅರ್ಧಶತಕದ ಜೊತೆಯಾಟವಾಡಿದರು. ಒಂದು ಸಿಕ್ಸರ್ ಸಹಿತ 35 ರನ್ ಗಳಿಸಿದ್ದ ಅಯ್ಯರ್, ದೊಡ್ಡ ಹೊಡೆತಕ್ಕೆ ಕೈ ಹಾಕಿ ರೆಹಾನ್ ಅಹ್ಮದ್ ಎಸೆತದಲ್ಲಿ ಔಟಾದರು. ಈ ವೇಳೆ ಕೆಎಸ್ ಭರತ್ ಜೊತೆಗೂಡಿದ ರಾಹುಲ್, ಅರ್ಧಶತಕದ ಜೊತೆಯಾಟ ಪೂರ್ಣಗೊಂಡ ಬಳಿಕ, 86 ರನ್ ಗಳಿಸಿದ್ದ ರಾಹುಲ್ ಸಿಕ್ಸರ್ ಸಿಡಿಸಲು ಮುಂದಾಗಿ ಕ್ಯಾಚ್ ನೀಡಿ ಔಟಾದರು.

    ಬಳಿಕ ರವೀಂದ್ರ ಜಡೇಜಾ ಜೊತೆಗೂಡಿ ಉತ್ತಮ ಇನ್ನಿಂಗ್ಸ್ ಆಡಿದ ಭರತ್, 41 ರನ್ ಗಳಿಸಿದ್ದಾಗ ರೂಟ್ ಎಸೆತದಲ್ಲಿ ಎಲ್‍ಬಿಡಬ್ಲ್ಯೂ ಆದರೂ. ಅವರ ಬೆನ್ನಲ್ಲೇ ಆರ್.ಅಶ್ವಿನ್ ರನೌಟ್ ಆದರು. ಈ ವೇಳೆ ಒಂದಾದ ಜಡೇಜಾ ಮತ್ತು ಅಕ್ಷರ್ ಪಟೇಲ್ ಮತ್ತೆ ಜೊತೆಯಾಟ ಮುಂದುವರೆಸಿದರು. ಉತ್ತಮ ಇನ್ನಿಂಗ್ಸ್ ಆಡಿದ ಜಡೇಜಾ ಅರ್ಧಶತಕ ಸಿಡಿಸಿದರು.

    ದಿನದಾಟದ ಅಂತ್ಯದ ವೇಳೆಗೆ ಜಡೇಜಾ 155 ಎಸೆತಗಳಲ್ಲಿ ಅಜೇಯ 81 ರನ್ ಗಳಿಸಿದ್ದಾರೆ. ಅತ್ತ ಅಕ್ಷರ್ ಪಟೇಲ್ ಅಜೇಯ 35 ರನ್ ಗಳಿಸಿದ್ದಾರೆ. ಇಬ್ಬರೂ ಎಂಟನೇ ವಿಕೆಟ್‍ಗೆ ಅಜೇಯ 63 ರನ್ ಒಟ್ಟುಗೂಡಿಸಿದ್ದಾರೆ.

    ಮೊದಲ ದಿನದಾಟದ ಕೊನೆಯ ಸೆಷನ್‍ನಲ್ಲಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್, ಮೊದಲ ವಿಕೆಟ್‍ಗೆ 80 ರನ್‍ಗಳ ಜೊತೆಯಾಟವಾಡಿದರು. 27 ಎಸೆತಗಳಲ್ಲಿ 24 ರನ್ ಗಳಿಸಿದ ರೋಹಿತ್ ಶರ್ಮಾ, ಲೀಚ್ ಎಸೆತದಲ್ಲಿ ಸ್ಟೋಕ್ಸ್‍ಗೆ ಕ್ಯಾಚ್ ನೀಡಿ ಔಟಾದರು. ಇನ್ನೂ ಆಕ್ರಮಣಕಾರಿ ಆಟವಾಡಿದ ಜೈಸ್ವಾಲ್, ಕೇವಲ 70 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸ್ಫೋಟಕ ಸಿಕ್ಸರ್ ಸಹಿತ 76 ರನ್ ಸಿಡಿಸಿದ್ದರು. ಎರಡನೇ ದಿನ ಆಟ ಮುಂದುವರೆಸಿ 80 ರನ್‍ಗೆ ಔಟಾಗಿದ್ದಾರೆ.

    ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, 55 ರನ್ ಗಳಿಸಿದ್ದಾಗ ಮೊದಲ ವಿಕೆಟ್ ಕಳೆದುಕೊಂಡಿತು. 39 ಎಸೆತಗಳಲ್ಲಿ 35 ರನ್ ಗಳಿಸಿದ್ದ ಡಕೆಟ್, ಅಶ್ವಿನ್ ಬೌಲಿಂಗ್‍ನಲ್ಲಿ ಔಟಾದರು. ಓಲಿ ಪೋಪ್ 1 ರನ್ ಗಳಿಸಿದರು. 37 ರನ್ ಗಳಿಸಿದ್ದ ಬೈರ್‌ಸ್ಟೋವ್, ಅಕ್ಸರ್ ಎಸೆತದಲ್ಲಿ ಕ್ಲೀನ್ ಬೋಲ್ಡ್ ಆದರು. ಅವರ ಬೆನ್ನಲ್ಲೇ ರೂಟ್ ಆಟ 29 ರನ್‍ಗೆ ಅಂತ್ಯವಾಯ್ತು. ನಾಯಕ ಬೆನ್ ಸ್ಟೋಕ್ಸ್ ವೇಗದ ಬ್ಯಾಟಿಂಗ್ ನಡೆಸಿ 88 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸ್ಫೋಟಕ ಸಿಕ್ಸರ್ ಸಹಿತ 70 ರನ್ ಗಳಿಸಿದರು. ಅಂತಿಮವಾಗಿ 246 ರನ್ ಗಳಿಸಿ ಇಂಗ್ಲೆಂಡ್ ಆಲೌಟ್ ಆಗಿತ್ತು. ಇದನ್ನೂ ಓದಿ: ಇಂದಿನಿಂದ ಮೂರು ದಿನ ಬೆಂಗ್ಳೂರಲ್ಲಿ ಬಾಲಕರಿಗೆ IPL ಮಾದರಿ ಕ್ರಿಕೆಟ್

  • ಬೆಳ್ಳಿಹಬ್ಬ ಸಂಭ್ರಮದ ವೇಳೆ ಅವಘಡ – ಐರನ್‌ ಕೇಜ್‌ನಿಂದ ಕೆಳಗೆ ಬಿದ್ದು ವಿಸ್ಟೆಕ್ಸ್ CEO ಸಾವು

    ಬೆಳ್ಳಿಹಬ್ಬ ಸಂಭ್ರಮದ ವೇಳೆ ಅವಘಡ – ಐರನ್‌ ಕೇಜ್‌ನಿಂದ ಕೆಳಗೆ ಬಿದ್ದು ವಿಸ್ಟೆಕ್ಸ್ CEO ಸಾವು

    ಹೈದರಾಬಾದ್: ಇಲ್ಲಿನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅವಘಡದಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿದ್ದಾರೆ.

    ಗುರುವಾರ ಸಂಜೆ ಸಂಭ್ರಮಾಚರಣೆ ವೇಳೆ ವಿಸ್ಟೆಕ್ಸ್ ಸಿಇಒ (Vistex CEO) ಸಂಜಯ್ ಷಾ ಮತ್ತು ಅವರ ಸಹೋದ್ಯೋಗಿ ಇಬ್ಬರನ್ನೂ ಐರನ್‌ ಕೇಜ್‌ನಲ್ಲಿ ಇರಿಸಲಾಗಿತ್ತು. ಅದನ್ನು ವೇದಿಕೆಯಲ್ಲಿ ಎತ್ತರದಿಂದ ಕೆಳಕ್ಕೆ ಇಳಿಸಬೇಕಾಗಿತ್ತು. ಇಳಿಸುವಾಗ ಇಬ್ಬರೂ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದರು. ಈ ವೇಳೆ ಅಚಾನಕ್‌ ಐರನ್‌ ಕೇಜ್ ಮಗುಚಿದೆ. ಇಬ್ಬರೂ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ಡಿವೋರ್ಸ್‌ ವದಂತಿ ಬೆನ್ನಲ್ಲೇ ಸಾನಿಯಾಗೆ ಕೈಕೊಟ್ಟ ಶೋಯೆಬ್‌ ಮಲಿಕ್‌ – ನಟಿ ಸನಾ ಜಾವೇದ್‌ ಕೈಹಿಡಿದ ಪಾಕ್‌ ಕ್ರಿಕೆಟಿಗ!

    ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಸಿಇಒ ಸಂಜಯ್ ಷಾ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಹೋದ್ಯೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಂಪನಿಯ ಮತ್ತೊಬ್ಬ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಫಿಲ್ಮ್ ಸಿಟಿ ಈವೆಂಟ್ ಮ್ಯಾನೇಜ್‌ಮೆಂಟ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

  • ಪ್ರತಿದಿನ ಒಂದೊಂದು ಕೆಜಿ ಮೀಸಲು – ಶ್ರೀರಾಮನ ನೈವೇದ್ಯಕ್ಕೆ 1,265 KG ತೂಕದ ಲಡ್ಡು ಅರ್ಪಿಸಿದ ರಾಮಭಕ್ತ

    ಪ್ರತಿದಿನ ಒಂದೊಂದು ಕೆಜಿ ಮೀಸಲು – ಶ್ರೀರಾಮನ ನೈವೇದ್ಯಕ್ಕೆ 1,265 KG ತೂಕದ ಲಡ್ಡು ಅರ್ಪಿಸಿದ ರಾಮಭಕ್ತ

    ಹೈದರಾಬಾದ್‌: ಜನವರಿ 22ರಂದು ರಾಮಲಲ್ಲಾ (Ayodhya Ram Lalla) ಪ್ರಾಣಪ್ರತಿಷ್ಠೆಗಾಗಿ ದೇಶ ವಿದೇಶಗಳಿಂದ ಉಡುಗೊರೆಗಳ ಮಹಾಪೂರವೇ ಹರಿದುಬರುತ್ತಿದೆ. ಹಾಗೆಯೇ ಹೈದರಾಬಾದ್‌ ಮೂಲದ ವ್ಯಕ್ತಿಯೊಬ್ಬರು ಪ್ರತಿದಿನ ಒಂದೊಂದು ಕೆಜಿ ಲಡ್ಡುವನ್ನು ಮೀಸಲಿಟ್ಟು, ಶ್ರೀರಾಮನ ನೈವೇದ್ಯಕ್ಕಾಗಿ 1,265 ಕೆ.ಜಿ ತೂಕದ ವಿಶೇಷ ಲಡ್ಡು (Speical Laddu) ತಯಾರಿಸಿದ್ದಾರೆ.

    ಹೈದರಾಬಾದ್‌ ಮೂಲದ ವ್ಯಕ್ತಿ ನಾಗಭೂಷಣ ರೆಡ್ಡಿ ಎಂಬವರು ಜ.22ರಂದು ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ನೈವೇದ್ಯಕ್ಕಾಗಿ 1,265 ಕೆಜಿ ತೂಕದ ಲಡ್ಡು ತಯಾರಿಸಿದ್ದು, ಬುಧವಾರ (ಇಂದು) ರಾಮಮಂದಿರಕ್ಕೆ ಅರ್ಪಿಸಲಿದ್ದಾರೆ. ಇದರೊಂದಿಗೆ ಸಹೋದರ ಲಕ್ಷ್ಮಣ, ಪತ್ನಿ ಸೀತಾ, ಭಂಟ ಹನುಮಾನ್‌ ಹೆಸರಿನ ಲಡ್ಡುಗಳನ್ನೂ ತಯಾರಿಸಲಾಗಿದೆ  ಈ ಮೂಲಕ ಶ್ರೀರಾಮ ಕೃಪೆಗೆ ಪಾತ್ರರಾಗಲು ಬಯಸಿದ್ದಾರೆ. ಇದನ್ನೂ ಓದಿ: ಭಕ್ತರು ಚಳಿಯಿಂದ ರಕ್ಷಿಸಿಕೊಳ್ಳಲು ಅಯೋಧ್ಯೆಯಲ್ಲಿ ಮಾಡಲಾಗಿದೆ ವಿಶೇಷ ವ್ಯವಸ್ಥೆ

    ದುಶಾಸನ್‌ ಎಂಬ ಸ್ವೀಟ್‌ ಮಾಸ್ಟರ್‌ ಈ ಲಡ್ಡುವನ್ನು ತಯಾರಿಸಿದ್ದಾರೆ. ಜೊತೆಗೆ ಸುಮಾರು 30 ಜನರ 24 ಗಂಟೆಗಳ ಕಾಲ ನಿರಂತರವಾಗಿ ಶ್ರಮಿಸಿ ಈ ವಿಶೇಷ ಲಡ್ಡು ತಯಾರಿಸಿದ್ದಾರೆ, ಇದನ್ನ ಜೋಡಿಸಲು 4 ಗಂಟೆ ತೆಗೆದುಕೊಂಡಿದ್ದಾರೆ ಎಂದು ನಾಗಭೂಷಣರೆಡ್ಡಿ ತಿಳಿಸಿದರು.

    ಈ ಕುರಿತು ಮಾತನಾಡಿರುವ ನಾಗಭೂಷಣ್‌ ರೆಡ್ಡಿ, 2000ನೇ ಇಸವಿಯಿಂದ ನಾನು ಶ್ರೀ ರಾಮ ಕ್ಯಾಟರಿಂಗ್ ಎಂಬ ಕೆಲಸ ಪ್ರಾರಂಭಿಸಿದೆ. ರಾಮಜನ್ಮಭೂಮಿಯಲ್ಲಿ ದೇವಸ್ಥಾನದ ಭೂಮಿಪೂಜೆ ನಡೆಯುತ್ತಿದ್ದಾ ನಾವು ಶ್ರೀರಾಮನಿಗೆ ಏನು ನೈವೇದ್ಯ ನೀಡಬಹುದು ಎಂದು ಯೋಚಿಸಿದ್ದೆವು.‌ ಕೊನೆಗೆ ದೇವಸ್ಥಾನ ಭೂಮಿಪೂಜೆ ಆರಂಭವಾದ ದಿನದಿಂದ ದೇವಸ್ಥಾನ ತೆರೆಯುವ ದಿನದ ವರೆಗೆ ಪ್ರತಿದಿನ 1 ಕೆಜಿ ಲಡ್ಡು ಮೀಸಲಿಡಲು ನಿರ್ಧರಿಸಿದೆವು. ಅದರಂತೆ ಮಂದಿರಕ್ಕಾಗಿ 1,265 ಕೆಜಿ ಲಡ್ಡು ಸಿದ್ಧಪಡಿಸಿದ್ದು, ಇದನ್ನು ರೆಫ್ರಿಜರೇಟೆಡ್ ಬಾಕ್ಸ್‌ನಲ್ಲಿ ಇಟ್ಟಿದ್ದೇವೆ. ಇಂದೇ ಅಯೋಧ್ಯೆಗೆ ಕೊಂಡೊಯ್ದು ರಾಮನ ನೈವೇದ್ಯಕ್ಕೆ ಅರ್ಪಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ; ಇಂದಿನಿಂದ ಪೂಜಾಕಾರ್ಯ ಆರಂಭ – ಯಾವ ದಿನ ಏನು ಕಾರ್ಯಕ್ರಮ?

    ಒಟ್ಟಿನಲ್ಲಿ ನನಗೆ ತುಂಬಾ ಸಂತೋಷವಾಗಿದೆ. ನಾನು ಇದೇ ಮೊದಲಬಾರಿಗೆ ಶ್ರೀರಾಮನಿಗಾಗಿ ಇಂತಹ ದೊಡ್ಡ ಕೆಲಸ ಮಾಡಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಾಲರಾಮನಿಗೆ ಅರ್ಪಿಸಲು ಹಲ್ವಾ ತಯಾರಿಸುವ ಕಡಾಯಿ ರೆಡಿ- ಏನಿದರ ವಿಶೇಷ?

  • ಆಂಧ್ರದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆಯಾಗಿ ವೈಎಸ್ ಶರ್ಮಿಳಾ ಆಯ್ಕೆ?

    ಆಂಧ್ರದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆಯಾಗಿ ವೈಎಸ್ ಶರ್ಮಿಳಾ ಆಯ್ಕೆ?

    ಹೈದರಾಬಾದ್:‌ ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ವೈಎಸ್ ಶರ್ಮಿಳಾ (YS Sharmila) ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬುದಾಗಿ ವರದಿಯಾಗಿದೆ.

    ಮೂಲಗಳ ಪ್ರಕಾರ, ಆಂಧ್ರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಗಿಡುಗು ರುದ್ರರಾಜು  (Gidugu Rudra Raju) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ಸ್ಥಾನಕ್ಕೆ ವೈಎಸ್ ಶರ್ಮಿಳಾ ಅವರನ್ನು ನೇಮಕ ಮಾಡಿ ಶೀಘ್ರದಲ್ಲೇ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಲಿದೆ ಎನ್ನಲಾಗಿದೆ.

    ಈ ತಿಂಗಳ ಆರಂಭದಲ್ಲಿ ಆಂಧ್ರಪ್ರದೇಶದ (Andhpradesh) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದರು. ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗಲಾಗ್ತಿಲ್ಲ, ಇದು ನನ್ನ ದುರದೃಷ್ಟ: ಜಗ್ಗಿ ವಾಸುದೇವ್

    ಕಾಂಗ್ರೆಸ್ ಅನ್ನು ಶ್ಲಾಘಿಸಿದ ಶರ್ಮಿಳಾ, ಇದು ದೇಶದ ಅತಿದೊಡ್ಡ ಜಾತ್ಯತೀತ ಪಕ್ಷವಾಗಿದೆ ಯಾಕೆಂದರೆ ಅದು ಎಲ್ಲಾ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ. ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುತ್ತದೆ ಎಂದು ಹೇಳಿದರು.

    ಕಾಂಗ್ರೆಸ್ ಸೇರುವ ಮೊದಲು ವೈಎಸ್ ಶರ್ಮಿಳಾ ಅವರು ಪಕ್ಷಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದರು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಲಾಭವಾಗಬಹುದಾದ ಮತಗಳ ವಿಭಜನೆಯನ್ನು ತಡೆಯಲು ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದಿದ್ದರು.

  • ಮೈಸೂರು ಸ್ಯಾಂಡಲ್‌ ಸೋಪ್‌ ನಕಲಿ ಘಟಕದ ಮೇಲೆ ದಾಳಿ; 2 ಕೋಟಿ ಮೌಲ್ಯದ ಸಾಮಗ್ರಿ ವಶ

    ಮೈಸೂರು ಸ್ಯಾಂಡಲ್‌ ಸೋಪ್‌ ನಕಲಿ ಘಟಕದ ಮೇಲೆ ದಾಳಿ; 2 ಕೋಟಿ ಮೌಲ್ಯದ ಸಾಮಗ್ರಿ ವಶ

    – ಪ್ರಕರಣದಲ್ಲಿ ಇಬ್ಬರ ಬಂಧನ

    ಹೈದರಾಬಾದ್‌: ಇಲ್ಲಿನ ಮೈಸೂರು ಸ್ಯಾಂಡಲ್‌ ಸೋಪ್‌ (Mysore Sandal Soap) ನಕಲಿ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ 2 ಕೋಟಿ ರೂ. ಮೌಲ್ಯದ ನಕಲಿ ಸಾಮಗ್ರಿ ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಚಿವ ಎಂ.ಬಿ.ಪಾಟೀಲ್‌, ಹೈದರಾಬಾದ್ ಮಾರುಕಟ್ಟೆಗೆ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪೂರೈಕೆಯಾಗುತ್ತಿರುವ ಬಗೆಗೆ ಅನಾಮಧೇಯ ಕರೆ ಬಂತು. ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಸ್ಥೆಯ MDಯವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ ಸಿಕಂದರಾಬಾದಿನಲ್ಲಿರುವ ನಮ್ಮ ಸಂಸ್ಥೆಯ ಅಧಿಕೃತ ಮಾರಾಟದ ಸಿಬ್ಬಂದಿ, ನಕಲಿಗಳ ಜಾಲವನ್ನು ಬೇಧಿಸಲು ತಂತ್ರ ರೂಪಿಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನದ ಮೂಲಭೂತ ಹಕ್ಕುಗಳ ಭಾಗದಲ್ಲಿ ಶ್ರೀರಾಮ-ಲಕ್ಷ್ಮಣ, ಸೀತಾದೇವಿಯ ಚಿತ್ರಗಳಿವೆ: ಜಗದೀಪ್‌ ಧನಕರ್‌

    ಪೊಲೀಸರೊಂದಿಗೆ ಭೇಟೆಯಾಡಿ 2 ಕೋಟಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಅಪರಾಧಿಗಳಿಗೆ ಕಾನೂನು ರೀತಿಯಲ್ಲಿ ಉಗ್ರ ಶಿಕ್ಷೆಯಾಗಲಿ. ಮೈಸೂರು ಸ್ಯಾಂಡಲ್‌ನ ಅಸಲಿ ಪರಿಮಳ ಎಲ್ಲೆಡೆ ಪಸರಿಸಲಿ ಎಂದು ಸಚಿವರು ಹೇಳಿದ್ದಾರೆ.

    ಕರ್ನಾಟಕ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್)ನ ಮೈಸೂರು ಸ್ಯಾಂಡಲ್ ಸೋಪ್‌ನ ನಕಲಿ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶನಿವಾರ ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

    ಮಲಕಪೇಟೆ ಪೊಲೀಸರು ನಕಲಿ ಉತ್ಪನ್ನಗಳು ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳು ಸೇರಿದಂತೆ ಸುಮಾರು 2 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    150 ಗ್ರಾಂ ಸಾಬೂನು ಪ್ಯಾಕ್‌ಗಳ 1,800 ತುಂಡುಗಳನ್ನು ಹೊಂದಿರುವ 20 ಪೆಟ್ಟಿಗೆಗಳು, 75 ಗ್ರಾಂ ಸಾಬೂನಿನ 9,400 ತುಂಡುಗಳ 47 ರಟ್ಟಿನ ಪೆಟ್ಟಿಗೆಗಳು ಮತ್ತು 150 ಗ್ರಾಂ ಹಾಗೂ 75 ಗ್ರಾಂ ಸಾಬೂನುಗಳ 400 ಖಾಲಿ ಪ್ಯಾಕೇಜಿಂಗ್ ಬಾಕ್ಸ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: I.N.D.I.A ಮೈತ್ರಿಕೂಟದ ಜವಾಬ್ದಾರಿ ಮಲ್ಲಿಕಾರ್ಜುನ್‌ ಖರ್ಗೆ ಹೆಗಲಿಗೆ

    ಆರೋಪಿ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ವಿರುದ್ಧ ಹೈದರಾಬಾದ್‌ನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಎಸ್‌ಡಿಎಲ್‌ ಅಧ್ಯಕ್ಷ, ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ಅನಾಮಧೇಯ ಸುಳಿವು ದೊರೆತ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿತ್ತು. ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸಾಬೂನುಗಳು ಚಲಾವಣೆಯಾಗುತ್ತಿರುವ ಬಗ್ಗೆ ಕರೆ ಸ್ವೀಕರಿಸಿದ ಸಚಿವ ಪಾಟೀಲ್, ಈ ಬಗ್ಗೆ ಪರಿಶೀಲಿಸುವಂತೆ ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ಸೂಚಿಸಿದ್ದರು.

    ಕೆಎಸ್‌ಡಿಎಲ್ ತಂಡವು ಮಾರುಕಟ್ಟೆಯಲ್ಲಿ ನಕಲಿ ಸಾಬೂನು ಇರುವುದನ್ನು ದೃಢಪಡಿಸಿದ ನಂತರ, ಅದರ ಮೂಲವನ್ನು ಪತ್ತೆಹಚ್ಚಲು ಕಾರ್ಯಾಚರಣೆಯನ್ನು ನಡೆಸಿತು. ತಂಡವು ಮೊದಲು ಒಂದು ಲಕ್ಷ ರೂಪಾಯಿ ಮೌಲ್ಯದ ನಕಲಿ ಉತ್ಪನ್ನವನ್ನು ಖರೀದಿಸಿತು. ಅದನ್ನು ಪರಿಶೀಲಿಸಿದಾಗ ನಕಲಿ ಉತ್ಪನ್ನ ಎಂಬುದು ಗೊತ್ತಾಗಿ ಘಟಕದ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಯೋಧ್ಯೆ ಭೇಟಿಯಲ್ಲಿ ತಪ್ಪೇನಿದೆ?: ಸಿಎಂ ಹೇಳಿಕೆ ಸಮರ್ಥಿಸಿದ ಸಚಿವ ಕೆ.ಎನ್ ರಾಜಣ್ಣ