ಹೈದರಾಬಾದ್: ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆ, ರಾಷ್ಟ್ರ ನಾಯಕರ ಅಬ್ಬರದ ಪ್ರಚಾರ ಇಷ್ಟೆಲ್ಲಾ ಸವಾಲುಗಳ ನಡುವೆಯೂ ಗೆದ್ದು ಬೀಗಿದ ಕೆ. ಚಂದ್ರಶೇಖರ್ ರಾವ್ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಗಾದಿಗೇರುವ ತಯಾರಿಯಲ್ಲಿದ್ದಾರೆ.
ಜ್ಯೋತಿಷಿಗಳ ಸಲಹೆ ನೀಡಿರುವ ಮುಹೂರ್ತದಲ್ಲಿ, ಅಂದರೆ ಇಂದು ಮಧ್ಯಾಹ್ನದ ಹೊತ್ತಿಗೆ ಕೆಸಿಆರ್ ಪಟ್ಟಾಭಿಷೇಕ ನಡೆಯಲಿದೆ. ಇವರ ಜೊತೆ ಇಬ್ಬರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಐದಾರು ದಿನಗಳ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುತ್ತಿದ್ದು, ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಪಕ್ಷ 88 ಸ್ಥಾನ, ಕಾಂಗ್ರೆಸ್ 19 ಹಾಗೂ ತೆಲುಗುದೇಶಂ ಪಕ್ಷ 2, ಇತರೆ 1 ಸ್ಥಾನ ಪಡೆದಿವೆ. ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ತಿಳಿಸಿದಂತೆ ಟಿಆರ್ ಎಸ್ ಸುಲಭವಾಗಿ ಮ್ಯಾಜಿಕ್ ನಂಬರ್ ಪಡೆದಿತ್ತು.
2013ರಲ್ಲಿ ಏನಾಗಿತ್ತು?
2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಆರ್ ಎಸ್ 63 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21, ಟಿಡಿಪಿ 15, ಬಿಜೆಪಿ 5 ಹಾಗೂ ಇತರೆ 7 ಸ್ಥಾನಗಳು ಬಂದಿದ್ದವು. ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಬಹುಮತಕ್ಕೆ 60 ಸ್ಥಾನಗಳು ಅಗತ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv


















