Tag: Hyderabad

  • ವರ್ಮಾ ಆಫೀಸಿಗೆ ಮುತ್ತಿಗೆ: ವ್ಯೂಹಂ ಪೋಸ್ಟರ್ ಗೆ ಬೆಂಕಿ

    ವರ್ಮಾ ಆಫೀಸಿಗೆ ಮುತ್ತಿಗೆ: ವ್ಯೂಹಂ ಪೋಸ್ಟರ್ ಗೆ ಬೆಂಕಿ

    ಕ್ಷಿಣ ಭಾರತದ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ ಸಿನಿಮಾ ಮಾಡಿದ್ದು, ಈ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ.

    ಆಂಧ್ರ ಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದಾಗಿ ಚಿತ್ರಕ್ಕೆ ವಿರೋಧವನ್ನು ವ್ಯಕ್ತ ಪಡಿಸುತ್ತಿದ್ದಾರೆ.

    ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು (Chandra Babu Naidu) ಜೈಲಿಗೆ ಹೋಗಿ ಬಂದಿದ್ದಾರಲ್ಲ, ಆ ದೃಶ್ಯವನ್ನೂ ಸೇರಿಸಲಾಗಿದೆಯಂತೆ. ಇವೆಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎನ್ನುವ ಕಾರಣದಿಂದಾಗಿ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್, ಕೇಂದ್ರ ಸೆನ್ಸಾರ್ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಈ ರಾಜಕೀಯ ಕಿತ್ತಾಟಗಳು ಏನೇ ಇದ್ದರೂ, ಈ ಸಿನಿಮಾವನ್ನು ತಾವು ಬಿಡುಗಡೆ ಮಾಡುವುದಾಗಿ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಒಬ್ಬ ಸಿನಿಮಾ ಮೇಕರ್ ಆಗಿ ನನ್ನ ಕೆಲಸ ಮಾಡಿದ್ದೇನೆ. ಜನರು ಎಲ್ಲವನ್ನೂ ತೀರ್ಮಾನ ಮಾಡಲಿ ಎಂದಿದ್ದಾರೆ.

  • ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣ ವಚನ

    ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣ ವಚನ

    ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲು ರೇವಂತ್ ರೆಡ್ಡಿಯವರು (Revanth Reddy) ಸಜ್ಜಾಗಿದ್ದು, ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

    ರೇವಂತ್ ರೆಡ್ಡಿಯವರ ಜೊತೆ ಇತರ ಕೆಲವು ಸಚಿವರುಗಳು ಕೂಡ ಪ್ರಮಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್‍ ಕೈಗೊಂಡಿದೆ.

    ಈ ಹಿಂದೆ ಡಿಸೆಂಬರ್‌ 9 ರಂದು ಸೋನಿಯಾ ಗಾಂಧಿಯವರ ಜನ್ಮದಿನವಿದ್ದು, ಇದೇ ದಿನ ರೇವಂತ್‌ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results) ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.

    ಯಾರು ಈ ರೇವಂತ್‌ ರೆಡ್ಡಿ?: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ 56 ವರ್ಷದ ಅನುಮುಲಾ ರೇವಂತ್ ರೆಡ್ಡಿ ಪಕ್ಷದ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಆದರೆ ಇದಕ್ಕೂ ಮೊದಲು ರೇವಂತ್‌ ರೆಡ್ಡಿ ಆರ್‌ಎಸ್‌ಎಸ್‌ ಮತ್ತು ಎಬಿವಿಪಿಯಿಂದ ಗುರುತಿಸಿಕೊಂಡಿದ್ದವರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಅವರು ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಪರ ಅವರು ಕ್ಯಾಂಪೇನ್‌ ನಡೆಸುತ್ತಿದ್ದಾಗ, ಅವರ ಹಿನ್ನೆಲೆ ಹೆಚ್ಚು ಚರ್ಚೆಯಾಗಿತ್ತು.

    ರೇವಂತ್‌ ರೆಡ್ಡಿ ಆರ್‌ಎಸ್‌ಎಸ್‌ (RSS) ಕೈಗೊಂಬೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಅನೇಕ ಬಾರಿ ಟೀಕಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಕೆಲವು ಕ್ಷೇತ್ರಗಳಲ್ಲಿ ಒಂದಾಗಿ ಕೆಲಸ ಮಾಡುತ್ತಿವೆ ಎಂದೂ ಸಹ ಓವೈಸಿ ಹಿಂದಿನ ದಿನಗಳಲ್ಲಿ ಆರೋಪಿಸಿದ್ದರು.

    ರೇವಂತ್ ರೆಡ್ಡಿ ಅವರು ಎಬಿವಿಪಿಯಿಂದ (ABVP) ರಾಜಕೀಯ ಜೀವನ ಆರಂಭಿಸಿದರು. ನಂತರ ಟಿಡಿಪಿಗೆ (TDP) ಹೋದರು. 2009 ಮತ್ತು 2014 ರ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಲಂಚ ಹಗರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ನಂತರ ಅವರು ಟಿಡಿಪಿ ತೊರೆದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ ಸೇರಿದರು. 2018 ರ ಚುನಾವಣೆಯಲ್ಲಿ ಬಿಆರ್‌ಎಸ್‌ (BRS) ವಿರುದ್ಧ ಸ್ಪರ್ಧಿಸಿ ಕೊಡಂಗಲ್‌ನಿಂದ ಸೋತರು. ಆದರೆ ಮತ್ತೆ ಪುಟಿದೆದ್ದು 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಜೂನ್ 2021 ರಲ್ಲಿ ಅವರನ್ನು TPCC ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.

    ಯಾವುದೇ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಆ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರೇ ಸಿಎಂ ಸ್ಥಾನ ಅಲಂಕರಿಸುವುದು (ಕರ್ನಾಟಕ ಹೊರತುಪಡಿಸಿ) ಸಾಮಾನ್ಯ. ಅಂತೆಯೇ 4 ರಾಜ್ಯ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವುದು ನಿಚ್ಚಳವಾಗಿದೆ. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ರೇವಂತ್‌ ರೆಡ್ಡಿಯೇ ಸಿಎಂ ಆಗಬಹುದು ಎಂದು ಮೂಲಗಳು ತಿಳಿಸಿವೆ.

  • ಮೋದಿಯ ಮಾಜಿ ಸ್ನೇಹಿತ ಎಂದಿರೋ ರಾಹುಲ್‍ಗೆ ಓವೈಸಿ ತಿರುಗೇಟು

    ಮೋದಿಯ ಮಾಜಿ ಸ್ನೇಹಿತ ಎಂದಿರೋ ರಾಹುಲ್‍ಗೆ ಓವೈಸಿ ತಿರುಗೇಟು

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿಯ (Narendra Modi) ಮಾಜಿ ಸ್ನೇಹಿತ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯು ಇಂದು ತಿರುಗೇಟು ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಜೀವನದಲ್ಲಿ ಇಬ್ಬರು ಪ್ರೀತಿಪಾತ್ರರಿದ್ದಾರೆ. ಅದರಲ್ಲಿ ಒಂದು ಇಟಲಿ, ಎರಡನೆಯದ್ದು ನರೇಂದ್ರ ಮೋದಿ. ಇಟಲಿ ಯಾಕೆಂದರೆ ಅವರ ತಾಯಿ ಅಲ್ಲಿಂದ ಬಂದವರಾಗಿದ್ದಾರೆ. ಅಧಿಕಾರವನ್ನು ನೀಡುವುದರಿಂದ ಮೋದಿ ಎರಡನೇ ಪ್ರೀತಿ ಪಾತ್ರರಾಗಿದ್ದಾರೆ ಎಂದು ಓವೈಸಿ (Asaduddin Owaisi) ತಿಳಿಸಿದ್ದಾರೆ.

    2019 ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ (Amethi Constituency) ಇರಾನಿ ವಿರುದ್ಧದ ರಾಹುಲ್ ಸೋಲನ್ನು ಇದೇ ವೇಳೆ ಓವೈಸಿ ಕೆಣಕಿದರು. ಕಾಂಗ್ರೆಸ್ ನಾಯಕ ಕೇರಳದ ವಯನಾಡ್ ನಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ರಾಹುಲ್ ಗಾಂಧಿಯವರೇ ನಾನು ನಿಮಗೆ ಮನವಿ ಮಾಡುತ್ತೇನೆ, ದಯವಿಟ್ಟು ಇನ್ನು ಮುಂದೆ ಏಕಾಂಗಿ ಇರಬೇಡಿ. ನಿಮಗೆ ಈಗ 50 ವರ್ಷ ವಯಸ್ಸಾಗಿದೆ. ಕಾಂಗ್ರೆಸ್ ಸಂಸದರಿಗೆ ಮನೆಯಲ್ಲಿ ಪಾಲುದಾರರಿಲ್ಲದ ಕಾರಣ, ಅವರು ಯಾವಾಗಲೂ ಸ್ನೇಹಿತರ ಬಗ್ಗೆ ಯೋಚಿಸುತ್ತಾರೆ ಮತ್ತು ಮಾತನಾಡುತ್ತಾರೆ. ಇನ್ನು ಮುಂದೆ ಇಂತಹ ಹುಚ್ಚುತನದಲ್ಲಿ ತೊಡಗಬೇಡಿ. ಯಾಕೆಂದರೆ ಅದಕ್ಕೆ ಇದು ಸರಿಯಾದ ವಯಸ್ಸಲ್ಲಿ ಎಂದು ರಾಹುಲ್ ವಯಸ್ಸಿನ ಬಗ್ಗೆ ಕೆದಕಿದರು.

    ತೆಲಂಗಾಣದಲ್ಲಿ (Telangana) ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ಸರ್ಕಾರವನ್ನು ಭ್ರಷ್ಟ. ಬಿಜೆಪಿ ಮತ್ತು ಎಐಎಂಐಎಂ (AIMIM) ಎರಡೂ ಒಂದೇ ಆಗಿವೆ. ನರೇಂದ್ರ ಮೋದಿಯವರಿಗೆ ಇಬ್ಬರು ಗೆಳೆಯರಿದ್ದಾರೆ. ಒಂದು ಓವೈಸಿ ಇನ್ನೊಂದು ಬಿಆರ್ ಎಸ್ ನಾಯಕ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್ ರಾವ್ (KC Chandrashekhar Rao). ಕೆಸಿಆರ್ ಅವರು ಮೋದಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ, ಇತ್ತ ಮೋದಿಯವರು ಕೆಸಿಆರ್ ಮುಖ್ಯಮಂತ್ರಿಯಾಗಬೇಕು ಎಂಬುದಾಗಿ ಬಯಸುತ್ತಾರೆ ಎಂದು ಹೇಳಿಕೆ ನೀಡಿದ್ದರು.

    ಕಾಂಗ್ರೆಸ್ ಪಕ್ಷವು ಮೊದಲು ತೆಲಂಗಾಣದಲ್ಲಿ ಬಿಆರ್ ಎಸ್ ಮತ್ತು ನಂತರ ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಸೋಲಿಸುವ ಗುರಿ ಹೊಂದಿದೆ. ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಹಳೆಯ ಪಕ್ಷವು ಪ್ರಚಂಡ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಅವರು ಹೇಳಿದ್ದರು.

    ತೆಲಂಗಾಣ ತನ್ನ 119 ಸದಸ್ಯರ ರಾಜ್ಯ ವಿಧಾನಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನವೆಂಬರ್ 30 ರಂದು ಮತದಾನ ನಡೆಯಲಿದೆ. ಛತ್ತೀಸ್‍ಗಢ, ಮಿಜೋರಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದೊಂದಿಗೆ ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

  • ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು.

    ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು ಒಳಗೊಂಡ ಘಟನೆಯನ್ನು ಉಲ್ಲೇಖಿಸಿ ಹಳಿದರು. ಇದನ್ನೂ ಓದಿ: 4 ತಿಂಗಳ ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

    ಬಿಜೆಪಿ ಸರ್ಕಾರ ರಚನೆಯಾದ ನಂತರ 30 ನಿಮಿಷಗಳಲ್ಲಿ ಈ ಕೆಲಸಗಳನ್ನು ಮಾಡಲಾಗುವುದು ಎಂದರು. ಶರ್ಮಾ ಅವರು ಕೋಮುವಾದದ ಧ್ವನಿಯೊಂದಿಗೆ ಹಲವಾರು ಕಾಮೆಂಟ್‍ಗಳನ್ನು ಮಾಡಿದ್ದಾರೆ. ಈ ದೇಶದಲ್ಲಿ ಬಹುಪತ್ನಿತ್ವದ ಜೊತೆಗೆ ತುಷ್ಟೀಕರಣ ರಾಜಕಾರಣವೂ ಕೊನೆಗೊಳ್ಳಬೇಕು ಎಂದರು. ತ್ರಿವಳಿ ತಲಾಖ್ ನಿಷೇಧ, ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆಯೂ ಅವರು ಮನವಿ ಮಾಡಿದರು. ಇದನ್ನೂ ಓದಿ: ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

  • ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಅಕ್ರಮ ಹಣ ಸಾಗಾಟ ಆರೋಪ – ಸಚಿವ ಜಮೀರ್‌ ಇದ್ದ ಹೋಟೆಲ್ ಮೇಲೆ ಹೈದರಾಬಾದ್‌ ಪೊಲೀಸ್‌ ದಾಳಿ!

    ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan )ಇದ್ದ ಹೋಟೆಲ್‌ ಮೇಲೆ ಹೈದರಾಬಾದ್‌ ಪೊಲೀಸರು (Hyderabad Police) ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.

    ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ (Park Hyatt Hotel) ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

    ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ (BJP) ಮತ್ತು ರಾಜ್ಯದ ಬಿಆರ್‌ಎಸ್‌ (BRS) ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ 

  • ಬ್ಯಾಟಿಂಗ್, ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ: ಪ್ರಿಯಾಂಕಾ ಗಾಂಧಿ

    ಬ್ಯಾಟಿಂಗ್, ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ: ಪ್ರಿಯಾಂಕಾ ಗಾಂಧಿ

    – ನಿರ್ಭೀತಿಯಿಂದ ಆಟವಾಡಿ ಅಂದ್ರು ರಾಗಾ

    ಹೈದರಾಬಾದ್: ಇಂದು ವಿಶ್ವಕಪ್ (World Cup 2023) ಫೈನಲ್ ಪಂದ್ಯ ನಡೆಯಲಿದ್ದು, ಬ್ಯಾಟಿಂಗ್ (Batting) ಹಾಗೂ ಬೌಲಿಂಗ್‍ನಲ್ಲಿ (Bowling) ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ತೆಲಂಗಾಣದಲ್ಲಿ ವಿಶ್ವಕಪ್ ಫೈನಲ್ ಮ್ಯಾಚ್ ಕುರಿತು ಮಾತನಾಡಿದ ಅವರು, ಇಂದು ವರ್ಲ್ಡ್ ಕಪ್ ಫೈನಲ್ ಮ್ಯಾಚ್ ಇದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಮ್ಮ ಟೀಂ ದಾಖಲೆ ಬರೆಯುತ್ತದೆ. ಇದು ಒಗ್ಗಟ್ಟಿನ ಸಂಕೇತವಾಗಿದೆ. ಟೀಂ ಇಂಡಿಯಾಗೆ ‌(Team India) ಶುಭಾಶಯ ಎಂದು ಹೇಳಿದ್ದಾರೆ.

    ಇತ್ತ ಕೈ ನಾಯಕ ರಾಹುಲ್ ಗಾಂಧಿ (Rahul Gandhi) ಕೂಡ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಬ್ಲೂ ಬಾಯ್ಸ್ (Bkue Boys) ಗೆ ಶುಭಾಶಯಗಳು. ಒಂದು ಬಿಲಿಯನ್‍ಗಿಂತಲೂ ಹೆಚ್ಚು ಹೃದಯಗಳು ನಿಮಗಾಗಿ ಮಿಡಿಯುತ್ತಿವೆ. ಹೀಗಾಗಿ ನಿರ್ಭೀತಿಯಿಂದ ಆಟವಾಡಿ ಗೆದ್ದು ಬನ್ನಿ. ವಿಶ್ವಕಪ್ ಮನೆಗೆ ತನ್ನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್‍ನೊಂದಿಗೆ ಮಗ ಮನೆಗೆ ಮರಳುತ್ತಾನೆ: ಶಮಿ ತಾಯಿ ವಿಶ್ವಾಸ

    ಭಾರತ ಹಾಗೂ ಆಸ್ಟ್ರೇಲಿಯಾ (IND Vs AUS) ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಅಹ್ಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium Ahemadabad) ಹಣಾಹಣಿ ನಡೆಯಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸೆ ಸೇರಿದಂತೆ ಭಾರತದ ಕ್ರಿಕೆಟ್ ದಿಗ್ಗಜರು, ಟೀಮ್ ಇಂಡಿಯಾ ಆಟಗಾರರ ಕುಟುಂಬದವರು, ಬಾಲಿವುಡ್, ಸ್ಯಾಂಡಲ್‍ವುಡ್ ನಟ-ನಟಿಯರು ಭಾರತ ಗೆಲ್ಲಲಿ ಎಂದು ಶುಭಕೋರಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ಗೆಲುವಿಗೆ ದೇಶಾದ್ಯಂತ ಹೋಮ-ಹವನಗಳು ನಡೆಯುತ್ತಿದೆ.

  • ‘ಸಲಾರ್’ ಚಿತ್ರಕ್ಕೆ ಕಿರಿಕಿರಿ ಮಾಡಿದವರ ಅರೆಸ್ಟ್

    ‘ಸಲಾರ್’ ಚಿತ್ರಕ್ಕೆ ಕಿರಿಕಿರಿ ಮಾಡಿದವರ ಅರೆಸ್ಟ್

    ಪ್ರಭಾಸ್ ನಟನೆಯ ಸಲಾರ್ ಸಿನಿಮಾದ ಟ್ರೈಲರ್ ಮತ್ತು ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಈ ಸಮಯದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಂಟೆಂಟ್ ಸೋರಿಕೆ ಮಾಡಲಾಗಿದೆ. ಚಿತ್ರದ ಅನುಮತಿ ಇಲ್ಲದೇ ಕಂಟೆಂಟ್ ಹಂಚಿಕೊಂಡಿದ್ದಕ್ಕಾಗಿ ಹೈದರಾಬಾದ್ (Hyderabad) ಪೊಲೀಸರು ಇಬ್ಬರನ್ನು ಬಂಧಿಸಿರುವುದು ವರದಿಯಾಗಿದೆ. ಈ ಮೂಲಕ ಇತರರಿಗೆ ಚಿತ್ರತಂಡ ಎಚ್ಚರಿಕೆ ನೀಡಿದೆ.

    ಯಾವುದು ಕಂಟೆಂಟ್, ಏನ್ ವಿಷಯ ಎನ್ನುವ ಕುರಿತಂತೆ ಸಾಕಷ್ಟು ಮಾಹಿತಿ ಇಲ್ಲ. ಆದರೆ, ಬಂಧಿಸಿದವರನ್ನು ವಿಚಾರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮಾಹಿತಿಯನ್ನು ಸ್ವತಃ ಪೊಲೀಸರೇ ನೀಡಬಹುದು.

    ಈ ನಡುವೆ ಹಾಟ್ ತಾರೆ ಸಿಮ್ರನ್ ಕೌರ್ ಸಲಾರ್ ಸಿನಿಮಾದ ಮಾದಕ ಗೀತೆಗೆ ಹೆಜ್ಜೆ ಹಾಕಿದ್ದಾರೆ ಎನ್ನುವ ಮಾಹಿತಿ ತೆಲುಗು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಅದ್ಧೂರಿ ಸೆಟ್ ನಲ್ಲಿ ಸಿಮ್ರನ್ ಮತ್ತು ಪ್ರಭಾಸ್ ಹಾಟ್ ಹಾಡಿಗೆ ಹೆಜ್ಜೆ ಹಾಕಿದ್ದಾರಂತೆ. ಸಲಾರ್ ಸಿನಿಮಾದ ಹುಕ್ ಸಾಂಗ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ತೆಲುಗಿನಲ್ಲಂತೂ ಭಾರೀ ಸುದ್ದಿ ಆಗಿದೆ.

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

     

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

  • ರಾಸಾಯನಿಕ ಸಂಗ್ರಹದ ಗೋಡೌನ್‍ನಲ್ಲಿ ಅಗ್ನಿ ಅವಘಡ – ಆರು ಮಂದಿ ಸಜೀವ ದಹನ

    ರಾಸಾಯನಿಕ ಸಂಗ್ರಹದ ಗೋಡೌನ್‍ನಲ್ಲಿ ಅಗ್ನಿ ಅವಘಡ – ಆರು ಮಂದಿ ಸಜೀವ ದಹನ

    ಹೈದರಾಬಾದ್: ರಾಸಾಯನಿಕ ಸಂಗ್ರಹಿಸಿದ್ದ ಗೋಡೌನ್‍ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ (Fire Accident) ಆರು ಮಂದಿ ಸಾವಿಗೀಡಾದ ಘಟನೆ ತೆಲಂಗಾಣದ (Telangana) ನಾಂಪಲ್ಲಿಯಲ್ಲಿ ನಡೆದಿದೆ.

    ನಾಲ್ಕು ಅಂತಸ್ತಿನ ಕಟ್ಟಡದ ಮೊದಲನೇ ಮಹಡಿಯಲ್ಲಿ ರಾಸಾಯನಿಕಗಳನ್ನು ಸಂಗ್ರಹಿಸಲಾಗಿತ್ತು. ಅದೇ ಕಟ್ಟಡದ ನೆಲ ಮಾಳಿಗೆಯಲ್ಲಿ ಕಾರನ್ನು ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಕಿಡಿಗಳಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗಂಗೊಳ್ಳಿಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ 7 ಬೋಟ್‍ಗಳು

    ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಯಾವ ಕೆಮಿಕಲ್ಸ್‍ಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು ಎಂಬುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹೈದರಾಬಾದ್‍ನ ಕೇಂದ್ರ ವಲಯದ ಡಿಸಿಪಿ ವೆಂಕಟೇಶ್ವರ್ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ

  • ‘ಪುಷ್ಪ 2’ ಬಗ್ಗೆ ಅಲ್ಲು ಅರ್ಜುನ್ ಕೊಟ್ಟ ಮತ್ತೊಂದು ಅಪ್ ಡೇಟ್

    ‘ಪುಷ್ಪ 2’ ಬಗ್ಗೆ ಅಲ್ಲು ಅರ್ಜುನ್ ಕೊಟ್ಟ ಮತ್ತೊಂದು ಅಪ್ ಡೇಟ್

    ಲ್ಲುಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾದ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಪದೇ ಪದೇ ಸಿನಿಮಾದ ಬಗ್ಗೆ ಅಭಿಮಾನಿಗಳು ಕೇಳುತ್ತಲೇ ಇರುತ್ತಾರೆ. ಇದೀಗ ಸ್ವತಃ ಅಲ್ಲು ಅರ್ಜುನ್ ಅವರೇ ಹೊಸದೊಂದು ಅಪ್ ಡೇಟ್ ನೀಡಿದ್ದು, ಹಾಡಿನ ಚಿತ್ರೀಕರಣವನ್ನು (Shooting) ರಾಮೋಜಿರಾವ್ ಸ್ಟುಡಿಯೋದಲ್ಲಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮುಂದಿನ ವರ್ಷ ಆಗಸ್ಟ್ 15ರಂದು ಸಿನಿಮಾ ರಿಲೀಸ್ ಮಾಡುವ ಕುರಿತು ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

    ಐಟಂ ಹಾಡಿನಲ್ಲಿ ಸಮಂತಾ

    ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ.

    ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ನೀಡಿದೆ.

    ‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು.

     

    ಬಾಲಿವುಡ್ (Bollywood) ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.

  • ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಅವರು ಇಟಲಿಗೆ (Italy) ಹಾರಿದ್ದರು. ಇದೀಗ ಯಶಸ್ವಿ ಶಸ್ತ್ರ ಚಿಕಿತ್ಸೆ (Surgery) ನೆರವೇರಿದ್ದು, ಚಿಕಿತ್ಸೆ ನಂತರ ಹೈದರಾಬಾದ್ (Hyderabad) ಗೆ ವಾಪಸ್ಸು ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳು ನೆಚ್ಚಿನ ನಟ ಕಂಡು ಸಂಭ್ರಮಿಸಿದ್ದಾರೆ.

    ಕನಸಿನ ಸಿನಿಮಾ ರಿಲೀಸ್

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

     

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.