ಬಹು ನಿರೀಕ್ಷಿತ ಲಿಯೋ (Leo) ಸಿನಿಮಾ ಅಕ್ಟೋಬರ್ 19ರಂದು ವಿಶ್ವದಾದ್ಯಂತ ರಿಲೀಸ್ ಗೆ ಸಿದ್ಧತೆ ಮಾಡಿಕೊಂಡಿದೆ. ಆದರೆ, ತೆಲುಗಿನಲ್ಲಿ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಕನ್ನಡ, ಮಲಯಾಳಂ, ಹಿಂದಿ, ತಮಿಳಿನಲ್ಲಿ ಈ ಸಿನಿಮಾ ಏಕಕಾಲದಲ್ಲಿ ಬಿಡುಗಡೆಯಾದರೆ, ತೆಲುಗಿನಲ್ಲಿ ಅಕ್ಟೋಬರ್ 20ರವರೆಗೂ ಕಾಯುವುದು ಅನಿವಾರ್ಯವಾಗಿದೆ.
ಲಿಯೋ ಸಿನಿಮಾದ ಶೀರ್ಷಿಕೆಯ ಕುರಿತಂತೆ ಸಿತಾರಾ ಎಂಟರ್ ಟೈನ್ಮೆಂಟ್ ನಿರ್ಮಾಪಕ ನಾಗ ವಂಶಿ ಕೋರ್ಟು ಮೆಟ್ಟಿಲು ಏರಿದ್ದರು. ಈ ಟೈಟಲ್ ನಾಗ ವಂಶಿ ಅವರಿಗೆ ಸೇರಿದ್ದು ಆಗಿದ್ದು. ಹಾಗಾಗಿ ಈ ಟೈಟಲ್ ನಲ್ಲಿ ಸಿನಿಮಾ ರಿಲೀಸ್ ಮಾಡದಂತೆ ಮನವಿ ಮಾಡಿಕೊಂಡಿದ್ದರು. ನಿನ್ನೆ ಹೈದರಾಬಾದ್ ನ ಸಿಟಿ ಸಿವಿಲ್ ನ್ಯಾಯಾಲಯವು ತೆಲುಗಿನಲ್ಲಿ ಲಿಯೋ ಶೀರ್ಷಿಕೆ ಬಳಕೆ ಕುರಿತಂತೆ ತಡೆಯಾಜ್ಞೆ (Injunction) ನೀಡಿದೆ.
ಅಕ್ಟೋಬರ್ 20ನೇ ತಾರೀಖಿನವರೆಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡದಂತೆ ಮಾನ್ಯ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಹೀಗಾಗಿ ಸಹಜವಾಗಿಯೇ ದಳಪತಿ ವಿಜಯ್ (Dalpati Vijay) ಅಭಿಮಾನಿಗಳಿಗೆ ನಿರಾಸೆ ಆಗಿದೆ. ಅಕ್ಟೋಬರ್ 20ರಂದು ನ್ಯಾಯಾಲಯ ಏನು ಹೇಳಲಿದೆ ಎಂದು ಅಭಿಮಾನಿಗಳು ಕಾದಿದ್ದಾರೆ.
ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ಹೈದರಾಬಾದ್ (Hyderabad) ಮದುವೆ ಸಂಭ್ರಮದಲ್ಲಿ ಮೋಜು-ಮಸ್ತಿ ಮಾಡಿದ್ದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿದೆ.
ಕಳೆದ 3 ದಿನದ ಹಿಂದೆ ಹೈದರಾಬಾದ್‍ನಲ್ಲಿ ಮದುವೆ ಸಂಭ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಚಿವರು ಕೂಡ ಭಾಗಿಯಾಗಿದ್ದರು. ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಬರ, ಹನಿ ನೀರಿಗೂ ಪರದಾಡುವ ಮೂಲಕ ಜನ ಸಂಕಷ್ಟದಲ್ಲಿದ್ದರೆ ಸಚಿವರು ಮಾತ್ರ ಕಾಲ ಕೆಳಗೆ ರಾಶಿ ರಾಶಿ ಹಣ ಹಾಕಿ ಕೂತು ರಾಜರೋಷವಾಗಿ ಮೆರೆಯುತ್ತಿದ್ದಾರೆ. ಸಚಿವರ ಕಾಲಡಿಯಲ್ಲಿ ರಾಶಿ ಹಣ ಬಿದ್ದಿದ್ದರೂ ಕುಂತಲ್ಲೇ ಕುಳಿತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್
ಒಟ್ಟಿನಲ್ಲಿ ಹೈದರಾಬಾದ್‍ನಲ್ಲೆ ನಡೆದ ಸ್ನೇಹಿತನ ಮಗನ ಮದುವೆ ಸಂಭ್ರಮದಲ್ಲಿ ಸಚಿವರ ಕಾರುಬಾರಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಹಿಂದೆ ರೈತರ ಬಗ್ಗೆ ಹೇಳಿಕೆ ನೀಡಿ ಸಚಿವರು ವಿವಾದಕ್ಕೀಡಾಗಿದ್ದರು. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರದ ಹಣಕ್ಕಾಗಿ ಎಂದು ಹೇಳಿ ಭಾರೀ ಚರ್ಚೆಗೆ ಗುರಿಯಾಗಿದ್ದರು. ಇದೀಗ ಇದೇ ಸಚಿವರು ರಾಶಿ ರಾಶಿ ಹಣದೊಂದಿಗೆ ಆಟವಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಪಾಕಿಸ್ತಾನ (Pakistan) ಹಾಗೂ ಶ್ರೀಲಂಕಾ (Sri Lanka) ವಿಶ್ವಕಪ್ ಪಂದ್ಯದ (World Cup 2023) ವೇಳೆ ಪಾಕ್ ತಂಡ ಅಭಿಮಾನಿಗಳಿಂದ ಭಾರೀ ಬೆಂಬಲವನ್ನು ಪಡೆದುಕೊಂಡಿತು. ಆಟಗಾರರು ಈ ವೇಳೆ ತಾಯ್ನಾಡಿನಲ್ಲೇ ಆಡಿದಷ್ಟು ಸಂಭ್ರಮಿಸಿದ್ದಾರೆ. ಪ್ರೇಕ್ಷಕರ ಪ್ರೀತಿಯಿಂದ ನನಗೆ ರಾವಲ್ಪಿಂಡಿಯಲ್ಲಿಯೇ ಪಂದ್ಯವನ್ನು ಆಡುತ್ತಿರುವಂತೆ ಭಾಸವಾಯಿತು. ಇಡೀ ತಂಡಕ್ಕೂ ಈ ಪ್ರೀತಿ ಸಿಕ್ಕಿದೆ ಎಂದು ಪಾಕ್ ಆಟಗಾರ ರಿಜ್ವಾನ್ ಹೇಳಿದ್ದಾರೆ.
ಆಟದ ವೇಳೆ `ಜೀತೇಗಾ ಭಾಯಿ ಜೀತೇಗಾ ಪಾಕಿಸ್ತಾನ್ ಜೀತೇಗಾ’ ಎಂಬ ಘೋಷಣೆಗಳು ಆಟಗಾರರನ್ನು ಹುರಿದುಂಬಿಸಿದವು. ಮೊಹಮ್ಮದ್ ರಿಜ್ವಾನ್ ಮತ್ತು ಸೌದ್ ಶಕೀಲ್ ಅವರು ಶ್ರೀಲಂಕಾ ವಿರುದ್ಧದ ವಿಶ್ವಕಪ್ 2023 ಪಂದ್ಯದಲ್ಲಿ ತಮ್ಮ ದಾಖಲೆಯ 345 ರನ್ ಚೇಸ್‍ನಲ್ಲಿ 34 ನೇ ಓವರ್‍ನ ಅಂತ್ಯದ ನಂತರ ಈ ಧ್ವನಿ ಕೇಳಿ ಬಂದಿದೆ. ಈ ಬೆಂಬಲ ಆಟಗಾರರಿಗೆ ತಾವು ಪಾಕ್‍ನ ಹೊರಗಿದ್ದೇವೆ ಎಂಬ ಭಾವವನ್ನು ಅಳಿಸಿ ಹಾಕಿದೆ ಎಂದು ಆಟಗಾರರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶತಕ ಸಿಡಿಸಿ ಎರಡು ದಾಖಲೆ ಬರೆದ ಮಲಾನ್ – ಇಂಗ್ಲೆಂಡ್‌ಗೆ 137ರನ್‌ಗಳ ಭರ್ಜರಿ ಜಯ
ಶ್ರೀಲಂಕಾ ಕೂಡ ಸಾಕಷ್ಟು ಬೆಂಬಲವನ್ನು ಪಡೆದುಕೊಂಡಿದೆ. ವಿಶೇಷವಾಗಿ ಕುಸಾಲ್ ಮೆಂಡಿಸ್ ಮತ್ತು ಸಮರವಿಕ್ರಮ ಅವರ ಬ್ಯಾಟಿಂಗ್ ವೇಳೆ ಅಭಿಮಾನಿಗಳಿಂದ ಭಾರೀ ಬೆಂಬಲ ಪಡೆದುಕೊಂಡರು.
ಟೂರ್ನಿಯಲ್ಲಿ ವಿಶ್ವದಾಖಲೆಯ ರನ್ ಚೇಸ್ ಮಾಡಿದ ಪಾಕಿಸ್ತಾನ ಶ್ರೀಲಂಕಾ ವಿರುದ್ಧ 6 ವಿಕೆಟ್‍ಗಳ ಜಯ ಸಾಧಿಸಿತು. ಗೆಲ್ಲಲು 345 ರನ್‍ಗಳ ಕಠಿಣ ಸವಾಲು ಪಡೆದ ಪಾಕಿಸ್ತಾನ ಮೊಹಮ್ಮದ್ ರಿಜ್ವಾನ್ ಅಜೇಯ ಶತಕ ಮತ್ತು ಅಬ್ದುಲ್ಲಾ ಶಫೀಕ್ ಅವರ ಶತಕದ ಆಟದಿಂದ 48.2 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 345 ರನ್ ದಾಖಲಿಸುವ ಮೂಲಕ ಸತತ ಎರಡನೇ ಜಯ ಸಾಧಿಸಿತು.
7.2 ಓವರ್‌ಗಳಿಗೆ 2 ವಿಕೆಟ್ ನಷ್ಟಕ್ಕೆ 37 ರನ್ ಗಳಿಸಿ ಸಂಕಷ್ಟದಲ್ಲಿದ್ದಾಗ ಅಬ್ದುಲ್ಲಾ ಶಫಿಕ್ ಮತ್ತು ರಿಜ್ವಾನ್ ಮೂರನೇ ವಿಕೆಟಿಗೆ 156 ಎಸೆತಗಳಲ್ಲಿ 176 ಜೊತೆಯಾಟವಾಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.
ಅಬ್ದುಲ್ಲಾ ಶಫಿಕ್ 113 ರನ್ (103 ಎಸೆತ, 10 ಬೌಂಡರಿ, 3 ಸಿಕ್ಸರ್) ಹೊಡೆದು ಔಟಾದರೆ ಸೌದ್ ಶಕೀಲ್ 31 ರನ್ ಕೊನೆಯಲ್ಲಿ ಇಫ್ತಿಕಾರ್ ಅಹ್ಮದ್ ಔಟಾಗದೇ 22 ರನ್ (10 ಎಸೆತ, 4 ಬೌಂಡರಿ) ಹೊಡೆದರು. ಔಟಾಗದೇ 131 ರನ್ (121 ಎಸೆತ, 8 ಬೌಂಡರಿ, 3 ಸಿಕ್ಸರ್) ಹೊಡೆದ ಮೊಹ್ಮದ್ ರಿಜ್ವಾನ್ ಅವರಿಗೆ ಪಂದ್ಯಶ್ರೇಷ್ಠ ಗೌರವ ಸಿಕ್ಕಿತು.
ಟಾಸ್ ಗೆದ್ದು ಬ್ಯಾಟ್ ಮಾಡಿದ ಲಂಕಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಪಾತುಮ್ ನಿಸ್ಸಾಂಕ 51 ರನ್ (61 ಎಸೆತ, 7 ಬೌಂಡರಿ, 1 ಸಿಕ್ಸರ್), ಕುಶಲ್ ಪಿರೇರಾ 122 ರನ್ (77 ಎಸೆತ, 14 ಬೌಂಡರಿ, 6 ಸಿಕ್ಸರ್) ಕುಸಾಲ್ ಮೆಂಡಿಸ್ 108 ರನ್ (89 ಎಸೆತ, 11 ಬೌಂಡರಿ, 2 ಸಿಕ್ಸರ್) ಹೊಡೆದ ಬಳಿಕ ತಂಡದ ಮೊತ್ತ 9 ವಿಕೆಟ್ ನಷ್ಟಕ್ಕೆ 344 ರನ್ ಗಳಿಸಿತು. ಅದರಲ್ಲೂ ಮೆಂಡಿಸ್ 40 ಎಸೆತಗಳಲ್ಲಿ ಅರ್ಧಶತಕ ಹೊಡೆದರೆ 67 ಎಸೆತಗಳಲ್ಲಿ ಶತಕ ಸಿಡಿಸಿದರು. ಇದನ್ನೂ ಓದಿ: World Cup 2023: ಇಂದು ಇಂಡೋ-ಅಫ್ಘಾನ್ ಕದನ – ಕೊಹ್ಲಿ ಅಬ್ಬರ ನೋಡಲು ಅಭಿಮಾನಿಗಳ ಕಾತರ
ಹೈದರಾಬಾದ್ ನ ಮಾದಾಪುರ ಪೊಲೀಸರು ನಡೆಸಿದ್ದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಹಲವರ ಬಂಧನವಾಗಿತ್ತು. ಇದರಲ್ಲಿ ಬೆಂಗಳೂರಿನ ಮೂವರು ವ್ಯಕ್ತಿಗಳೂ ಇದ್ದರು. ಈ ಪ್ರಕರಣದಲ್ಲಿ ನಟ ನವದೀಪ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ನವದೀಪ್ ಗೆ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಆಧರಿಸಿದ ಇದೀಗ ಜಾರಿ ನಿರ್ದೇಶನಾಲಯ (ED) ಕೂಡ ಅಕ್ಟೋಬರ್ 10ರಂದು ವಿಚಾರಣೆಗೆ ಬರುವಂತೆ ಸೂಚಿಸಿದೆ.
ಈ ಹಿಂದೆ ನವದೀಪ್ ಅವರನ್ನು ಬಂಧಿಸಲು ತೆಲಂಗಾಣ ಪೊಲೀಸರು ಸಿದ್ಧತೆ ನಡೆಸಿದ್ದರು. ಮಾದಾಪುರ (Madapur) ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿದ್ದ ಇವರ ಬಂಧನಕ್ಕೆ (Arrest) ಅಧಿಕಾರಿಗಳು ಬಲೆ ಬೀಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್ ತಲೆಮರೆಸಿಕೊಂಡಿದ್ದರು. ಜೊತೆಗೆ ತೆಲಂಗಾಣ ಹೈಕೋರ್ಟಿಗೆ (High Court) ನಿರೀಕ್ಷಣಾ ಜಾಮೀನಿಗೆ ಅರ್ಜಿ ಕೂಡ ಸಲ್ಲಿದ್ದರು.
ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಮಾನ್ಯ ತೆಲಂಗಾಣ ಉಚ್ಛ ನ್ಯಾಯಾಲಯವು ಬಲವಂತವಾಗಿ ನವದೀಪ್ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದೆ. ಜೊತೆಗೆ ಅವರನ್ನು ವಿಚಾರಣೆಗೆ ಕರೆಯಬಹುದು ಮತ್ತು ಪರೀಕ್ಷೆಗೂ ಒಳಪಡಿಸಬಹುದು. ಆದರೆ, ಈ ನೆಪದಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದೆ.
ಮೊನ್ನೆಯಷ್ಟೇ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ (Drugs) ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ನವದೀಪ್ ಕೂಡ ಇದ್ದಾರೆ ಎಂದು ಹೇಳಲಾಗಿತ್ತು.
ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು
ಹೈದರಾಬಾದ್: ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ (ICC WorldCup) ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್ ತಂಡ ಹೈದರಾಬಾದ್‌ನಲ್ಲಿ (Hyderabad) ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ ಆಟಗಾರರಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ್ದು, ಇದೀಗ ಅದ್ಧೂರಿ ಔತಣವನ್ನೂ ನೀಡಲಾಗಿದೆ. ಈ ಕುರಿತ ವೀಡಿಯೋ ತುಣುಕನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ಟ್ವಿಟ್ಟರ್ (X) ಖಾತೆಯಲ್ಲಿ ಹಂಚಿಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧ ಮೊದಲ ಅಭ್ಯಾಸ ಪಂದ್ಯದ ಬಳಿಕ ಪಾಕಿಸ್ತಾನ ತಂಡ ಹೈದರಾಬಾದ್‌ನ ಪ್ರತಿಷ್ಠಿತ ಹೋಟೆಲ್‌ನಲ್ಲಿ (Hotel) ವಾಸ್ತವ್ಯ ಹೂಡಿದ್ದು, ವಿವಿಧ ಮಾಂಸಾಹಾರ (Nonveg) ಖಾದ್ಯಗಳ ಔತಣ ನೀಡಲಾಗಿದೆ. ಪಾಕ್ ತಂಡದ ನಾಯಕ ಬಾಬರ್ ಆಜಂ (Babar Azam), ಮೊಹಮ್ಮದ್ ರಿಜ್ವಾನ್, ಶಾಹೀನ್ ಶಾ ಅಫ್ರಿದಿ ಮೊದಲಾದವರು ಈ ಖುಷಿಯನ್ನ ತಮ್ಮ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ
ಏನೆಲ್ಲಾ ಸ್ಪೆಷಲ್ ಫುಡ್ ಇದೆ ಗೊತ್ತಾ?
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ ಕ್ರಿಕೆಟ್ ತಂಡಗಳಿಗೆ ಗೋಮಾಂಸ (ಬೀಫ್) ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರವಾಗಿ ಚಿಕನ್, ಮಟನ್ ಹಾಗೂ ಫಿಶ್ ಮಾಂಸಾಹಾರ ಖಾದ್ಯಗಳನ್ನು ನೀಡಲಾಗುತ್ತಿದೆ. ಡಯಟ್ ಚಾರ್ಟ್‌ನಲ್ಲಿ ಗ್ರಿಲ್ಡ್ ಲ್ಯಾಂಬ್ ಚಾಪ್ಸ್, ಮಟನ್ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್ ಚಿಕನ್ ಮತ್ತು ಗ್ರಿಲ್ಡ್ ಫಿಶ್ ನೀಡಲಾಗುತ್ತಿದೆ. ಇದನ್ನೂ ಓದಿ: ವಿಶ್ವಕಪ್ ಕ್ರಿಕೆಟ್ ಅಲ್ಲ, ವಿಶ್ವ ಟೆರರ್ ಕಪ್ ಮಾಡ್ತೀವಿ – ಖಲಿಸ್ತಾನ್ ಉಗ್ರನಿಂದ ಬೆದರಿಕೆ
ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್ ಬಾಸುಮತಿ ರೈಸ್ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್ ಚಿಕನ್ ಹಾಗೂ ವೆಜ್ ಪಲಾವ್ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್ ಬಿರಿಯಾನಿ ಕಡ್ಡಾಯವಾಗಿದೆ. ಒಟ್ಟಿನಲ್ಲಿ ಭಾರತದಲ್ಲಿ ನೀಡುತ್ತಿರುವ ಆತಿಥ್ಯಕ್ಕೆ ಪಾಕ್ ಆಟಗಾರರು ಫಿದಾ ಆಗಿದ್ದಾರೆ. ಇದನ್ನೂ ಓದಿ: Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್ ಮಿಂಚು
ನ್ಯೂಜಿಲೆಂಡ್ ವಿರುದ್ಧ ಶುಕ್ರವಾರ ಪಾಕಿಸ್ತಾನ ಅಭ್ಯಾಸ ಪಂದ್ಯದಲ್ಲಿ ಉತ್ತಮ ರನ್ ಕಲೆಹಾಕಿದರೂ ಸೋಲನ್ನು ಅನುಭವಿಸಿತು. ಈ ಪಂದ್ಯದ ಕುರಿತು ಮಾತನಾಡಿರುವ ಮೊಹಮ್ಮದ್ ರಿಜ್ವಾನ್, ಅಭ್ಯಾಸ ಪಂದ್ಯದಲ್ಲಿ ಸೆಂಚುರಿ ಬಾರಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದೆ. ಏಕದಿನ ಕ್ರಿಕೆಟ್‌ನಲ್ಲಿ 4ನೇ ಕ್ರಮಾಂಕದಲ್ಲಿ ಆಡುತ್ತೇನೆ. ಅವಶ್ಯಕತೆಗಳಿಗೆ ಅನುಗುಣವಾಗಿ ಬ್ಯಾಟ್ ಬೀಸುತ್ತೇನೆ ಎಂದು ತಿಳಿಸಿದ್ದಾರೆ.
ಮೊದಲ ಅಭ್ಯಾಸ ಪಂದ್ಯದ ಬಳಿಕ ಹೈದರಾಬಾದ್ ಪಿಚ್ ಬಗ್ಗೆ ಅರಿತಿರುವ ಪಾಕ್ ತಂಡ ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯವನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ಅ ಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.
ಹೈದರಾಬಾದ್: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯನ್ನಾಡಲು ಬಾಬರ್ ಆಜಂ (Babar Azam) ಪಾಕಿಸ್ತಾನ ಕ್ರಿಕೆಟ್ ತಂಡ ಹೈದರಾಬಾದ್‌ನಲ್ಲಿ ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ (Pakistan Team) ಆಟಗಾರರು ಬರುತ್ತಿದ್ದಂತೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ. ಇದರೊಂದಿಗೆ ಊಟೋಪಚಾರ ವಿಷಯಗಳಲ್ಲೂ ಅಷ್ಟೇ ಕಾಳಜಿ ವಹಿಸಲಾಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ 10 ತಂಡಗಳಿಗಳಿಗೆ ಗೋಮಾಂಸ ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರಕ್ಕಾಗಿ ಕೋಳಿ (Chicken), ಕುರಿ ಹಾಗೂ ಮೀನು ಆಹಾರ ಪದಾರ್ಥಗಳ ಮೆನು ನೀಡಲಾಗಿದೆ. ಡಯಟ್ ಚಾರ್ಚ್‌ನಲ್ಲಿ ಗ್ರಿಲ್ಡ್ ಲ್ಯಾಂಬ್ ಚಾಪ್ಸ್ (Grilled Lamb Chops), ಮಟನ್ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್ ಚಿಕನ್ ಮತ್ತು ಗ್ರಿಲ್ಡ್ ಫಿಶ್ (Grilled Fish) ನೀಡಲಾಗುತ್ತಿದೆ.
ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್ ಬಾಸುಮತಿ ರೈಸ್ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್ ಚಿಕನ್ ಹಾಗೂ ವೆಜ್ ಪಲಾವ್ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್ ಬಿರಿಯಾನಿ ಮೆನುವನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.
ಹೈದರಾಬಾದ್: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್ ತಂಡ ಬುಧವಾರ ತಡರಾತ್ರಿ ಹೈದರಾಬಾದ್‌ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.
ಈ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್ನಲ್ಲಿ ಸಖತ್ ಟ್ರೆಂಡ್ ಆಗಿದೆ. ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ ಕೇಸರಿ ಸಾಲು ಹಾಕಿ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಭಾರೀ ಬಿಗಿ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ
ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅದಕ್ಕಾಗಿ ಪಾಕ್ ತಂಡ ಸೆ.27ರ ತಡರಾತ್ರಿ ಹೈದರಾಬಾದ್‌ಗೆ ಬಂದಿಳಿದಿದೆ.
ಪಾಕಿಸ್ತಾನ ತಂಡ ಕೆಲವು ದಿನಗಳ ಹಿಂದೆಯೇ ಭಾರತಕ್ಕೆ ಬರಬೇಕಿತ್ತು. ಆದರೆ ವೀಸಾ ಸಮಸ್ಯೆಯಿಂದ ಪ್ರಯಾಣ ಅಸಾಧ್ಯವಾಗಿತ್ತು. ಇದೇ ವಿಚಾರವಾಗಿ ಪಾಕ್ ಕ್ರಿಕೆಟ್ ಮಂಡಳಿ ವಿಶ್ವಕಪ್ಗೆ ಪೂರ್ವ ತಯಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲವೆಂದು ಜಾಗತಿಕ ಸಂಸ್ಥೆಯೊಂದಿಗೆ ಕಳವಳ ವ್ಯಕ್ತಪಡಿಸಿತ್ತು. ಕೊನೆಗೆ ಐಸಿಸಿ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಿಗೆ ಭಾರತೀಯ ವೀಸಾಗಳನ್ನು ನೀಡುವ ವ್ಯವಸ್ಥೆ ಮಾಡಿತ್ತು.
7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್:
ಪಾಕಿಸ್ತಾನ ಕ್ರಿಕೆಟ್ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟಿದೆ. 2008ರಲ್ಲಿ ನಡೆದ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನೇ ನಿಲ್ಲಿಸಿದೆ. ಆದ್ರೆ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿ ಆಡಲು ಕೊನೆಯ ಬಾರಿ ಪಾಕ್ ತಂಡ ಭಾರತಕ್ಕೆ ಬಂದಿತ್ತು. ಅದಾದ ನಂತರ ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿದ್ದವು. ಇದೀಗ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿದೆ.
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ:
ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.
ಹೈದರಾಬಾದ್: ಈ ಬಾರಿ ವಯನಾಡ್ (Wayanad) ಅಲ್ಲ, ಈ ಬಾರಿ ಹೈದರಾಬಾದ್‌ನಿಂದ (Hyderabad) ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸವಾಲೆಸೆದಿದ್ದಾರೆ.
ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಅಬ್‌ಕಿ ಬಾರ್ ವಯನಾಡ್ ನಹಿ, ಅಬ್‌ಕಿ ಬಾದ್ ಹೈದರಾಬಾದ್ (ಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್). ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತಲೇ ಇರುತ್ತೀರಿ. ಕಾಂಗ್ರೆಸ್‌ನವರು ಸಾಕಷ್ಟು ವಿಷಯಗಳನ್ನು ಹೇಳುತ್ತಾರೆ. ಈಗ ಮೈದಾನಕ್ಕೆ ಬಂದು ನನ್ನ ವಿರುದ್ಧ ಹೋರಾಡಿ. ನಾನು ಇದಕ್ಕೆ ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿಗೆ ಚಾಲೆಂಜ್ ನೀಡಿದ್ದಾರೆ.
4 ಬಾರಿ ಹೈದರಾಬಾದ್‌ನ ಸಂಸದರಾಗಿರುವ ಅಸಾದುದ್ದೀನ್ ಓವೈಸಿ ವಿರುದ್ಧ ರಾಹುಲ್ ಗಾಂಧಿ ಕೆಲ ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ತನ್ನನ್ನು ತನಿಖೆ ಮಾಡುತ್ತಿಲ್ಲ ಎಂಬ ಅಂಶವನ್ನು ಎತ್ತಿ ತೋರಿಸುವ ಮೂಲಕ ಅವರು ಬಿಜೆಪಿಯ ಜೇಬಿನಲ್ಲಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ
ಎಐಎಂಐಎಂ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಪ್ರತಿಪಕ್ಷಗಳ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ಮೋದಿಯವರು ಎಂದಿಗೂ ತಮ್ಮ ಜನರ ಮೇಲೆ ದಾಳಿ ಮಾಡುವುದಿಲ್ಲ. ಅವರು ನಿಮ್ಮ ಸಿಎಂ ಮತ್ತು ಎಐಎಂಐಎಂ ನಾಯಕರನ್ನು ತಮ್ಮವರು ಎಂದು ಪರಿಗಣಿಸುತ್ತಾರೆ. ಆದ್ದರಿಂದ ಅವರ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂದು ತೆಲಂಗಾಣದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಕೇವಲ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿರುದ್ಧ ಹೋರಾಡುತ್ತಿಲ್ಲ. ಬಿಜೆಪಿ ಮತ್ತು ಎಐಎಂಐಎಂ ವಿರುದ್ಧವೂ ಹೋರಾಡುತ್ತಿದೆ. ಅವರೆಲ್ಲರೂ ಪರಸ್ಪರ ಪ್ರತ್ಯೇಕ ಪಕ್ಷಗಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ರಹಸ್ಯವಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು
ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express Train) ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು (ಗುರುವಾರ) ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.
ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿ
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ (Chaitra Kundapur) ಗ್ಯಾಂಗ್‍ನ ತಲೆಮರೆಸಿಕೊಂಡಿರುವ ಆರೋಪಿ ಅಭಿನವ ಹಾಲಶ್ರೀ (Halashree) ಬಂಧನಕ್ಕೆ ಸಿಸಿಬಿ ತೀವ್ರ ಹುಡುಕಾಟ ಆರಂಭಿಸಿದೆ. ಆರೋಪಿ ಹೈದರಾಬಾದ್‍ನಲ್ಲಿ (Hyderabad) ಅಡಗಿರುವ ಶಂಕೆ ಇದ್ದು ಬಂಧನಕ್ಕೆ ಸಿಸಿಬಿ (CCB) ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ.
ತಲೆಮರೆಸಿಕೊಂಡಿರುವ ಹಾಲಶ್ರೀ ಪ್ರಕರಣದ ಮೂರನೇ ಆರೋಪಿ ಆಗಿದ್ದು, ಚೈತ್ರಾ ಬಂಧನದ ಬಳಿಕ ಯಾವುದೇ ಸುಳಿವಿಲ್ಲದಂತೆ ನಾಪತ್ತೆಯಾಗಿದ್ದರು. ಪ್ರಕರಣದಲ್ಲಿ ಸ್ವಾಮೀಜಿಯ ಕಾರು ಚಾಲಕ ನಿಂಗರಾಜ್‍ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹಾಲಶ್ರೀ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿ ಅಡಗಿರುವ ಸುಳಿವಿಗಾಗಿ ಚಾಲಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!
ಇನ್ನೂ ಸ್ವಾಮೀಜಿ ಮೈಸೂರಿನಲ್ಲಿ ಕಾರು ಬಿಟ್ಟು ಬಳಿಕ ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ ಸ್ವಾಮೀಜಿಗಳ ಬಳಿ ನಾಲ್ಕು ಸಿಮ್‍ಗಳಿವೆ ಎನ್ನಲಾಗಿದೆ.